Tag: sister

  • ಪ್ರಥಮ್ ಆರ್ಡರ್ ಕೇಳಿದ ಆ್ಯಂಡಿಯ ಮನಸ್ಸು ವಿಲವಿಲ

    ಪ್ರಥಮ್ ಆರ್ಡರ್ ಕೇಳಿದ ಆ್ಯಂಡಿಯ ಮನಸ್ಸು ವಿಲವಿಲ

    ಬೆಂಗಳೂರು: ಬಿಗ್ ಬಾಸ್ ಸೀಸನ್-6 ಮುಗಿಯಲು ಕೆಲವು ದಿನಗಳು ಮಾತ್ರ ಬಾಕಿ ಇದೆ. ಇಷ್ಟು ದಿನ ಆ್ಯಂಡಿ, ಕವಿತಾ ಮೇಲೆ ಒಂದು ಫೀಲಿಂಗ್ ಇದೆ ಎಂದು ಹೇಳುತ್ತಿದ್ದರು. ಆದರೆ ಈಗ ಕವಿತಾ ಅವರನ್ನು ತಂಗಿ ಎಂದು ಕರೆಯಬೇಕೆಂದು ಹೇಳಿದಕ್ಕೆ ಎಸ್ ಬಾಸ್ ಎಂದು ಆ್ಯಂಡಿ ಹೇಳಿದ್ದಾರೆ.

    ಬಿಗ್ ಬಾಸ್ ಮನೆಗೆ ಈ ವಾರದಲ್ಲಿ ಅತಿಥಿಗಳಾಗಿ ಪ್ರಥಮ್, ಕೀರ್ತಿ, ಸಂಜನಾ, ಕೃಷಿ ಮತ್ತು ಸಮೀರ್ ಆಚಾರ್ಯ ಅವರು ಆಗಮಿಸಿದ್ದಾರೆ. ಈ ಹಳೆಯ ಸ್ಪರ್ಧಿಗಳನ್ನು ವಿಶೇಷವಾದ ಕೋಣೆಯಲ್ಲಿರಿಸಿದ್ದು, ಟಿವಿ ಹಾಗೂ ಫೋನ್ ಮೂಲಕ ಬಿಗ್ ಬಾಸ್ ಹೇಳಿದಂತೆ ಸ್ಪರ್ಧಿಗಳಿಗೆ ವಿಶೇಷ ಚಟುವಟಿಕೆಗಳನ್ನು ನೀಡುತ್ತಿದ್ದಾರೆ.

    ಇಂದಿನ ಸಂಚಿಕೆಯಲ್ಲೂ ಪ್ರಥಮ್ ಅವರು ಇನ್ನು ಮುಂದೆ ನೀವು ಕವಿತಾ ಅವರನ್ನು ತಂಗಿ ಕವಿತಾ ಎಂದೇ ಕರೆಯಬೇಕೆಂದು ಆ್ಯಂಡಿಗೆ ಹೇಳಿದ್ದಾರೆ. ಈ ವೇಳೆ ಆ್ಯಂಡಿ ‘ಬಾಸ್’ ಎಂದು ರಾಗಾ ಎಳೆದಾಗ ಪ್ರಥಮ್ ‘ಆರ್ಡರ್ ಇಸ್ ಪಾಸ್’ ಎಂದು ಹೇಳಿದ್ದಾರೆ. ಆಗ ಆ್ಯಂಡಿ ‘ಎಸ್ ಬಾಸ್’ ಎಂದು ದಿಂಬಿನಿಂದ ತಮ್ಮ ತಲೆಯನ್ನು ಚಚ್ಚಿಕೊಂಡಿದ್ದಾರೆ.

    ಸೋಮವಾರ ಗಾರ್ಡನ್ ಏರಿಯಾದಲ್ಲಿ ಶಶಿ ಮತ್ತು ಕವಿತಾ ಕ್ಯಾಂಡಲ್ ಲೈಟ್ ಡಿನ್ನರ್ ನಲ್ಲಿ ಭಾಗಿಯಾಗಿದ್ದರು. ಆ್ಯಂಡಿ ಹೊರತುಪಡಿಸಿ ಉಳಿದೆಲ್ಲ ಸ್ಪರ್ಧಿಗಳು ತಮ್ಮ ಕೆಲಸದಲ್ಲಿ ತೊಡಗಿಕೊಂಡಿದ್ದರು. ಆ್ಯಂಡಿ ಮಾತ್ರ ಬಾಗಿಲ ಬಳಿ ಬೆಡ್ ಶೀಟ್ ಹೊದ್ದುಕೊಂಡು ಇಬ್ಬರ ಮಾತುಗಳನ್ನು ಕೇಳಿಸಿಕೊಳ್ಳುವ ಪ್ರಯತ್ನದಲ್ಲಿದ್ದರು.

    ಕಳೆದ ವಾರ ಬಿಗ್ ಬಾಸ್ ಮನೆಗೆ ಆ್ಯಂಡಿ ಅವರ ತಂದೆ ಎಂಟ್ರಿ ನೀಡಿದ್ದರು. ಬಿಗ್ ಬಾಸ್ ಮನೆಗೆ ಬಂದು ಎಲ್ಲ ಸ್ಪರ್ಧಿಗಳು ಹಾಗೂ ತಮ್ಮ ಮಗ ಆ್ಯಂಡಿ ಜೊತೆ ಮಾತನಾಡಿ ಮನೆಯಿಂದ ಹೊರಡುವಾಗ ನಿನ್ನ ತಂಗಿ ಕವಿತಾರನ್ನು ಚೆನ್ನಾಗಿ ನೋಡಿಕೋ ಎಂದು ಹೇಳಿದ್ದಾರೆ.

    ಆ್ಯಂಡಿ ಅವರು ಪ್ರಥಮ್ ಅವರ ಆರ್ಡರ್ ರನ್ನು ಪಾಲಿಸುತ್ತಾರಾ? ಇಲ್ಲವಾ? ತಂಗಿ ಎಂದು ಕರೆದಾಗ ಕವಿತಾ ಹಾಗೂ ಮನೆಯ ಉಳಿದ ಸದಸ್ಯರ ಪ್ರತಿಕ್ರಿಯೆ ಹೇಗೆ ಇರಲಿದೆ ಎಂಬುದು ಇಂದಿನ (ಮಂಗಳವಾರ) ಸಂಚಿಕೆಯಲ್ಲಿ ತಿಳಿದು ಬರುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಂಗಿಯನ್ನು ಪ್ರೀತಿಸಿದ್ದಕ್ಕೆ ಪ್ರಿಯಕರನ ಕಡಿದು ಕೊಲೆ

    ತಂಗಿಯನ್ನು ಪ್ರೀತಿಸಿದ್ದಕ್ಕೆ ಪ್ರಿಯಕರನ ಕಡಿದು ಕೊಲೆ

    ಮಂಗಳೂರು: ತಂಗಿಯನ್ನು ಪ್ರೀತಿಸಿದ್ದಕ್ಕೆ ಪ್ರಿಯಕರನನ್ನು ಕಡಿದು ಕೊಲೆ ಮಾಡಿದ ಘಟನೆ ಮಂಗಳೂರಿನ ಕಾವೂರು ಬಳಿಯ ಪಂಜಿಮೊಗರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ.

    ರಾಕೇಶ್(26) ಕೊಲೆಯಾದ ಯುವಕ. ರಾಕೇಶ್ ಪಂಜಿಮೊಗರು ನಿವಾಸಿಯಾಗಿದ್ದು, ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ರಾಕೇಶ್ ತನ್ನ ಪ್ರೀತಿ ಬಗ್ಗೆ ಮಾತನಾಡಲು ಯುವತಿಯನ್ನು ಕರೆದಿದ್ದನು. ಈ ವಿಷಯ ಆಕೆಯ ಸಹೋದರ ಸುನೀಲ್(28) ಗೆ ಗೊತ್ತಾಗಿದೆ.

    ರಾಕೇಶ್ ಯುವತಿಯನ್ನು ಕರೆದ ಸ್ಥಳಕ್ಕೆ ಸುನೀಲ್ ತನ್ನ ತಂಡದ ಜೊತೆ ಹೋಗಿ ಆತನನ್ನು ಕೊಲೆ ಮಾಡಿದ್ದಾನೆ. ರಾಕೇಶ್ ಬರುತ್ತಿದ್ದಂತೆ ಸುನೀಲ್ ಹಾಗೂ ಆತನ ತಂಡ ಮಾರಕಾಸ್ತ್ರದಿಂದ ಕಡಿದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮೀಷನರ್ ಟಿ.ಆರ್ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪೊಲೀಸ್ರಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕರ ಮುಂದೆಯೇ ಸೋದರಿ ಬಟ್ಟೆ ಬಿಚ್ಚಿದ

    ಪೊಲೀಸ್ರಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕರ ಮುಂದೆಯೇ ಸೋದರಿ ಬಟ್ಟೆ ಬಿಚ್ಚಿದ

    ಲಕ್ನೋ: ಸಹೋದರನೇ ಪೊಲೀಸರಿಂದ ತಪ್ಪಿಸಿಕೊಳ್ಳಲು ತನ್ನ ಸಹೋದರಿಯ ಬಟ್ಟೆಯನ್ನು ಎಲ್ಲರ ಮುಂದು ಬಿಚ್ಚಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಲಖಿಮ್ಪುರ್ ಖೇರಿ ಜಿಲ್ಲೆಯಲ್ಲಿ ನಡೆದಿದೆ.

    ವ್ಯಕ್ತಿಯೊಬ್ಬ ಮೊಬೈಲ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ. ಆತನನ್ನು ವಿಚಾರಣೆ ಮಾಡಲು ಪೊಲೀಸರು ಮನೆಗೆ ಹೋಗಿದ್ದಾರೆ. ಈ ವೇಳೆ ಆತ ಪೊಲೀಸರಿಂದ ತಪ್ಪಿಸಿಕೊಳ್ಳಲು ಕುಟುಂಬದವರು ಮತ್ತು ಸಾರ್ವಜನಿಕರ ಮುಂದೆ ಸಹೋದರಿ ಬಟ್ಟೆ ಬಿಚ್ಚಿದ್ದಾನೆ. ಆದರೆ ತಾನೇ ಬಟ್ಟೆ ಬಿಚ್ಚಿ ಪೊಲೀಸರು ನನ್ನ ಸಹೋದರಿಗೆ ಕಿರುಕುಳ ನೀಡಿದ್ದಾರೆಂದು ಎಲ್ಲರ ಮುಂದೆ ಸಾಬೀತು ಮಾಡಲು ಪ್ರಯತ್ನ ಮಾಡಿದ್ದಾನೆ.

    ಪೊಲೀಸರು ವಿಚಾರಣೆ ಮಾಡುವಾಗ ನಡೆದ ಘಟನೆಯ ಎಲ್ಲಾ ದೃಶ್ಯವನ್ನು ತಮ್ಮ ಮೊಬೈಲಿನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದರು. ವಿಡಿಯೋದಲ್ಲಿ ವ್ಯಕ್ತಿಯೇ ಸಹೋದರಿ ಬಟ್ಟೆ ಬಿಚ್ಚಿರುವುದು ಸ್ಪಷ್ಟವಾಗಿದ್ದು, ಆರೋಪಿ ಸುಳ್ಳು ಆರೋಪ ಮಾಡಿರುವುದು ತಿಳಿದು ಬಂದಿದೆ. ಬಳಿಕ ಪೊಲೀಸರು ಈ ಕುರಿತು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.

    ವಿಡಿಯೋ ಆಧಾರದ ಮೇಲೆ ಆರೋಪಿ ಬಿಟ್ಟು ತನಿಖೆಯ ವೇಳೆ ತಡೆಯುಂಟು ಮಾಡಿದ್ದ ನಾಲ್ವರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಪೊಲೀಸರು ಎಲ್ಲರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಉಡುಗೆಯಿಂದಾದ ಜಗಳ ಸಹೋದರಿಯ ಆತ್ಮಹತ್ಯೆಯಲ್ಲಿ ಅಂತ್ಯ

    ಉಡುಗೆಯಿಂದಾದ ಜಗಳ ಸಹೋದರಿಯ ಆತ್ಮಹತ್ಯೆಯಲ್ಲಿ ಅಂತ್ಯ

    ಭುವನೇಶ್ವರ್: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳ ಸಹೋದರಿಯೊಬ್ಬಳ ಆತ್ಮಹತ್ಯೆಯಲ್ಲಿ ಅಂತ್ಯವಾದ ಘಟನೆಯೊಂದು ಒಡಿಶಾದ ಕೇಂದ್ರಪರ ಜಿಲ್ಲೆಯ ಬರೋ ಗ್ರಾಮದಲ್ಲಿ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಮೊನಾಲಿಸಾ ಎಂದು ಗುರುತಿಸಲಾಗಿದ್ದು, ಈಕೆ ಶಾಸ್ತ್ರೀಯ ಸಂಗೀತವನ್ನು ಕಲಿಯುತ್ತಿದ್ದಳು. ಅಲ್ಲದೇ ಜೈಪುರದ ಕೈಪಾಡದಲ್ಲಿರೋ ಕಾಶಿನಾಥ್ ಮಹಾವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

    ಮೊನಾಲಿಸಾ ಹಾಗು ಆಕೆಯ ಸಹೋದರಿ ಭಾಬಗ್ರಹಿ ಕಲಾನಿಕೇತನದಲ್ಲಿ ಶಾಸ್ತ್ರೀಯ ಸಂಗೀತವನ್ನು ಕಲಿಯುತ್ತಿದ್ದರು. ಇಬ್ಬರು ನಿನ್ನೆ ಬೆಳಗ್ಗೆ 11 ಗಂಟೆ ಸುಮಾರಿಗೆ ಶಿಕ್ಷಕಿಯೊಬ್ಬರ ಬಳಿ ಕಥಕ್ ಕಲಿಯಲೆಂದು ತೆರಳಿದ್ದರು. ಆ ಬಳಿಕದಿಂದ ಬಟ್ಟೆಗಾಗಿ ಇಬ್ಬರಲ್ಲೂ ಜಗಳ ಆರಂಭವಾಗಿದೆ.

    ಇದೇ ವಿಚಾರದಿಂದ ಮನನೊಂದ ಮೊನಾಲಿಸಾ ಮನೆಯ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೂಡಲೇ ಮೊನಲಿಸಾಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ ಆಕೆಯನ್ನು ಎಸ್‍ಸಿಬಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಆದ್ರೆ ಅದಾಗಲೇ ಆಕೆ ಮೃತಪಟ್ಟಿದ್ದಾಳೆಂದು ವೈದ್ಯರು ತಿಳಿಸಿದ್ದಾರೆ.

    ಮೊನಾಲಿಸಾ ಡಿ. 8ರಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಆಗಮಿಸಿದ್ದ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿದ್ದಳು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ತಾಯಿ, ತಂಗಿಯನ್ನ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ವೈದ್ಯ

    ತಾಯಿ, ತಂಗಿಯನ್ನ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ವೈದ್ಯ

    ಬೆಂಗಳೂರು: ತಾಯಿ ಮತ್ತು ತಂಗಿಗೆ ಇನ್ಸುಲಿನ್ ಇಂಜೆಕ್ಷನ್ ಚುಚ್ಚಿ ವೈದ್ಯನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಸವೇಶ್ವರ ದೇವಸ್ಥಾನದ ಬಳಿ ನಡೆದಿದೆ.

    ತಾಯಿ ಶ್ಯಾಮಲಾ ಮತ್ತು ತಂಗಿ ಮೂಕಾಂಬಿಕಾ ಸಾವನ್ನಪ್ಪಿದ ದುರ್ದೈವಿಗಳು. ತಾಯಿ ಮತ್ತು ತಂಗಿ ಓವರ್ ಡೋಸ್ ನಿಂದ ಸಾವನ್ನಪ್ಪಿದ್ದು, ವೈದ್ಯ ಗೋವಿಂದರಾಜು ಆಸ್ಪತ್ರೆಯಲ್ಲಿ ಜೀವನ್ಮರಣ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ. ಸ್ಥಳದಲ್ಲಿ ಡೆತ್ ನೋಟ್ ಲಭ್ಯವಾಗಿದ್ದು, ವೈಯಕ್ತಿಕ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆಯಲಾಗಿದೆ ಎಂದು ತಿಳಿದು ಬಂದಿದೆ.

    ತಾಯಿ ಬಿಪಿ ಮತ್ತು ಶುಗರ್ ನಿಂದ ಬಳಲುತ್ತಿದ್ದರು. ಇತ್ತ ತಂಗಿಗೆ ಮದುವೆ ಆಗಿಲ್ಲ ಎನ್ನುವ ಚಿಂತೆ ಗೋವಿಂದರಾಜುವನ್ನು ಕಾಡುತ್ತಿತ್ತು. ತಾನೋರ್ವ ವೈದ್ಯನಾಗಿದ್ದರೂ, ತಂಗಿಗೆ ಮದುವೆ ಮಾಡಲಿಲ್ಲ ಎಂದು ಜಿಗುಪ್ಸೆಗೆ ಒಳಗಾಗಿದ್ದರಂತೆ. ಇತ್ತ ಪತ್ನಿಯನ್ನು ಕಳೆದುಕೊಂಡಿದ್ದ ಗೋವಿಂದರಾಜುವಿಗೆ ಮಕ್ಕಳಿರಲಿಲ್ಲ. ಆರ್.ಆರ್.ನಗರದಲ್ಲಿ ಆಸ್ಪತ್ರೆ ತೆರೆದು ಜೀವನ ನಡೆಸುತ್ತಿದ್ದರೂ, ನಿರೀಕ್ಷಿತ ಆದಾಯ ಬರುತ್ತಿರಲಿಲ್ಲ ಎನ್ನುವ ಮಾಹಿತಿ ಸಿಕ್ಕಿದೆ.

    ಈ ಎಲ್ಲ ತೊಂದರೆಗಳಿಂದ ಬೇಸತ್ತ ಗೋವಿಂದರಾಜು ತಾಯಿ ಮತ್ತು ತಂಗಿಗೆ ಓವರ್ ಡೋಸ್ ಇನ್ಸುಲಿನ್ ಇಂಜೆಕ್ಷನ್ ಚುಚ್ಚಿ, ತಾನು ಅದೇ ರೀತಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗೋವಿಂದರಾಜು ಸಂಬಂಧಿಕರು ಫೋನ್ ಮಾಡಿದಾಗ ಯಾವುದೇ ಪ್ರತಿಕ್ರಿಯೆ ಸಿಗದೇ ಇದ್ದಾಗ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ಸಂಬಂಧಿಕರು ಬರುವಷ್ಟರಲ್ಲಿ ತಾಯಿ ಮತ್ತು ತಂಗಿಯ ಪ್ರಾಣಪಕ್ಷಿ ಹಾರಿಹೋಗಿತ್ತು. ತೀವ್ರ ಅಸ್ವಸ್ಥನಾಗಿದ್ದ ಗೋವಿಂದರಾಜುನನ್ನು ಆಸ್ಪತ್ರೆಗೆ ದಾಖಲಿಸಿ, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಎರಡು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    https://www.youtube.com/watch?v=Eqq6OdIyUYI

  • ತಮ್ಮ ತ್ರಿಲೋಕಿಯನ್ನ ಪರಲೋಕಕ್ಕೆ ಕಳಿಸಿದ ಖರ್ತನಾಕ್ ಅಕ್ಕ

    ತಮ್ಮ ತ್ರಿಲೋಕಿಯನ್ನ ಪರಲೋಕಕ್ಕೆ ಕಳಿಸಿದ ಖರ್ತನಾಕ್ ಅಕ್ಕ

    ಚಂಡೀಗಢ: ಸ್ವಂತ ಅಕ್ಕನೇ ಹಣಕ್ಕಾಗಿ ಮಲಗಿದ್ದ ತಮ್ಮನ ಕುತ್ತಿಗೆ ಹಗ್ಗ ಬಿಗಿದು ಕೊಲೆಗೈದಿರುವ ಅಮಾನವೀಯ ಘಟನೆ ಹರಿಯಾಣದ ಫರೀದಾಬಾದ್ ನಗರದಲ್ಲಿ ನಡೆದಿದೆ.

    30 ವರ್ಷದ ತ್ರಿಲೋಕಿ ಎಂಬಾತನೇ ಅಕ್ಕನಿಂದ ಕೊಲೆಯಾದ ದುರ್ದೈವಿ. ತ್ರಿಲೋಕಿ 2016 ನವೆಂಬರ್ ನಲ್ಲಿ ನೋಟ್ ಬ್ಯಾನ್ ಮೊದಲೇ ಅಕ್ಕನಿಗೆ 7.25 ಲಕ್ಷ ರೂ. ಇಟ್ಟುಕೊಳ್ಳುವಂತೆ ನೀಡಿದ್ದನು. ಹಣ ಹಿಂದಿರುಗಿ ಕೇಳಿದ ತಮ್ಮನನ್ನು ಅಕ್ಕ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದ್ದಳು.

    ತ್ರಿಲೋಕಿ ಸಂಬಂಧಿಯೊಬ್ಬರು ಇದು ಕೊಲೆ ಎಂದು ಅನುಮಾನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗೆ ಕಳಿಸಿದಾಗ ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂಬುವುದು ಬೆಳಕಿಗೆ ಬಂದಿದೆ. ಪೊಲೀಸರು ಪ್ರಕರಣದ ವಿಚಾರಣೆ ನಡೆಸಿದಾಗ ಅಕ್ಕ ತಪ್ಪೊಪ್ಪಿಕೊಂಡಿದ್ದಾಳೆ.

    ಏನಿದು ಪ್ರಕರಣ?
    ಮೂರು ವರ್ಷದ ಹಿಂದೆ ಪತಿ ತ್ರಿಲೋಕಿಯನ್ನು ತೊರೆದು ಪತ್ನಿ ತವರು ಮನೆ ಸೇರಿದ್ದಳು. ಪತ್ನಿ ದೂರವಾದ ಬಳಿಕ ಮಾನಸಿಕವಾಗಿ ಕುಗ್ಗಿದ ತ್ರಿಲೋಕಿ ಅಕ್ಕನ ಮನೆಯಲ್ಲಿಯೇ ವಾಸವಾಗಿದ್ದನು. 2016 ನವೆಂಬರ್ ನಲ್ಲಿ ನಗರದಲ್ಲಿರುವ ತನ್ನ ನಿವೇಶನವನ್ನು 7.25 ಲಕ್ಷ ರೂ.ಗೆ ಮಾರಾಟ ಮಾಡಿದ ತ್ರಿಲೋಕಿ ಹಣವನ್ನು ಅಕ್ಕನಿಗೆ ನೀಡಿದ್ದನು. ಅಂದೇ ನಾನು ಬೇಡಿದಾಗ ಹಣ ಹಿಂದಿರುಗಿ ಕೊಡುವಂತೆ ತ್ರಿಲೋಕಿ ಹೇಳಿದ್ದನು. ತಮ್ಮನ ಮಾತಿನಂತೆ ಎಲ್ಲ ಹಣವನ್ನು ಅಕ್ಕ ತನ್ನ ಬಳಿಯೇ ಇರಿಸಿಕೊಂಡಿದ್ದಳು.

    ಕಳೆದ ಕೆಲವು ದಿನಗಳ ಹಿಂದೆ ತ್ರಿಲೋಕಿ ಹಣವನ್ನು ಹಿಂದಿರುಗಿ ಕೊಡುವಂತೆ ಅಕ್ಕನಿಗೆ ಕೇಳಿದ್ದಾನೆ. ಹಣ ನೀಡಲು ಒಪ್ಪದ ಅಕ್ಕ ಪ್ರತಿದಿನ ಸಬೂಬು ಹೇಳುತ್ತಾ ದಿನ ಮುಂದೂಡುತ್ತಿದ್ದಳು. ಹಣದ ವಿಷಯಕ್ಕಾಗಿ ಅಕ್ಕ, ತಮ್ಮನ ನಡುವೆ ಪ್ರತಿದಿನ ಗಲಾಟೆ ನಡೆಯುತ್ತಿತ್ತು.

    ಶುಕ್ರವಾರ ರಾತ್ರಿ ಮದ್ಯ ಸೇವಿಸಿ ಮನೆಗೆ ಬಂದ ತ್ರಿಲೋಕಿ ಹಣದ ವಿಚಾರಕ್ಕಾಗಿ ಅಕ್ಕನೊಂದಿಗೆ ಗಲಾಟೆ ಮಾಡಿಕೊಂಡಿದ್ದಾನೆ. ಕೋಣೆಯೊಳಗೆ ಹೋದ ತ್ರಿಲೋಕಿ ನಿದ್ದೆಗೆ ಜಾರಿದ್ದಾನೆ. ಈ ವೇಳೆ ನಶೆಯಲ್ಲಿ ನಿದ್ದೆಗೆ ಜಾರಿದ್ದ ತಮ್ಮನ ಕುತ್ತಿಗೆಯನ್ನು ಹಗ್ಗದಿಂದ ಬಿಗಿದು ಕೊಲೆಗೈದು ನಿದ್ದೆಗೆ ಜಾರಿದ್ದಾಳೆ. ಬೆಳಗ್ಗೆ ತಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿ ಅಂತ್ಯಕ್ರಿಯೆಗೂ ವ್ಯವಸ್ಥೆ ಮಾಡಿಕೊಂಡಿದ್ದಳು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಲುಗಳ ಸ್ವಾಧೀನ ಕಳೆದುಕೊಂಡಿರುವ ಯುವಕನಿಗೆ ಬೇಕಿದೆ ಸೂಕ್ತ ಚಿಕಿತ್ಸೆ

    ಕಾಲುಗಳ ಸ್ವಾಧೀನ ಕಳೆದುಕೊಂಡಿರುವ ಯುವಕನಿಗೆ ಬೇಕಿದೆ ಸೂಕ್ತ ಚಿಕಿತ್ಸೆ

    ಬೆಂಗಳೂರು: 25 ವರ್ಷದ ಯುವಕನಿಗೆ ಬದುಕಿನಲ್ಲಿ ಏನಾನದರೂ ಸಾಧಿಸಬೇಕು, ತಾಯಿ-ತಂಗಿಯನ್ನ ಚೆನ್ನಾಗಿ ನೋಡಿಕೊಳ್ಳಬೇಕು ಅಂತ ಡಿಗ್ರಿ ಮಾಡುತ್ತಿದ್ದನು. ಅದರೆ ವಿಧಿಯಾಟವೇ ಬೇರೆಯಾಗಿತ್ತು. ವಾಂತಿ, ಭೇದಿ ಅಂತಾ ಆಸ್ಪತ್ರೆ ಸೇರಿದ್ದ ಯುವಕ ಕಳೆದ 6 ವರ್ಷದಿಂದ ಕಾಲುಗಳ ಸ್ವಾಧೀನ ಕಳೆದುಕೊಂಡು ಮನೆಗೆ ಆಸರೆಯಾಗಬೇಕಿದ್ದವ ತಾಯಿ ತಂಗಿಯ ಆರೈಕೆಯಲ್ಲಿ ಜೀವನ ಸಾಗಿಸುತ್ತಿದ್ದಾನೆ.

    ಹೌದು. ಯುವಕ ಅಭಿಷೇಕ್ ಇದೀಗ ಅಮ್ಮ ಮತ್ತು ತಂಗಿಯ ಆರೈಕೆಯಲ್ಲಿ ಜೀವನ ಸಾಗಿಸುತ್ತಿದ್ದಾನೆ. ಬೆಂಗಳೂರಿನ ನಾಗರಬಾವಿ ಸಮೀಪ ಕೆಂಗೆಂಟೆ ನಿವಾಸಿಯಾಗಿರೋ ಈತ ತಾಯಿ ಮಂಗಳ, ತಂಗಿ ಲಕ್ಷ್ಮೀಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾನೆ. ಮಕ್ಕಳು ಸಣ್ಣವರಾಗಿದ್ದಾಗಲೇ ತಂದೆ ಕುಡಿತದ ಚಟಕ್ಕೆ ಬಿದ್ದು ಹೆಂಡತಿ ಮಕ್ಕಳನ್ನು ಬಿಟ್ಟು ಹೋಗಿದ್ದಾರೆ. ಕುಟುಂಬದ ಜವಾಬ್ದಾರಿಯನ್ನು ಹೊತ್ತ ತಾಯಿ ತನ್ನ ಇಬ್ಬರು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿ ಚೆನ್ನಾಗಿ ನೋಡಿಕೊಂಡಿದ್ದಾರೆ.

    6 ವರ್ಷಗಳ ಹಿಂದೆ ತಾಯಿಯ ಕಷ್ಟವನ್ನ ಅರಿತಿದ್ದ ಮಗ ಅಭಿಷೇಕ್, ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದ. ಇನ್ನೇನು ತಾಯಿ ಮತ್ತು ತಂಗಿಯನ್ನು ಸುಖವಾಗಿ ನೋಡಿಕೊಳ್ಳಲು ಉದ್ಯೋಗ ಮಾಡಬೇಕೆಂಬ ಖುಷಿಯಲ್ಲಿದ್ದನು. ಆದ್ರೆ ಅಭಿಷೇಕ್‍ಗೆ ವಾಂತಿ-ಭೇದಿ ಶುರುವಾಗಿ ಮೂರ್ಛೆ ರೋಗ ಆವರಿಸಿತ್ತು. ಮಗನ ಅವಸ್ಥೆಯನ್ನು ಕಂಡು ತಾಯಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ವೈದ್ಯರ ಎಡವಟ್ಟೋ ಏನೋ ಡಾಕ್ಟರ್ ನೀಡಿದ ಮಾತ್ರೆ ಸೇವಿಸಿದ ಬಳಿಕ ಹಂತ ಹಂತವಾಗಿ ಎರಡೂ ಕಾಲುಗಳ ಶಕ್ತಿ ಕುಂಠಿತಗೊಂಡಿದ್ದು, ಮಾತನಾಡಲು, ಓಡಾಡಲು ಹಾಗೂ ತನ್ನ ಕೆಲಸವನ್ನೂ ಕೂಡ ಮಾಡಿಕೊಳ್ಳಲು ಸಾಧ್ಯವಿಲ್ಲದಂತಾಗಿದೆ. ಕಾಲುಗಳು ಸ್ವಾಧೀನತೆ ಇಲ್ಲದೇ ಅಭಿಷೇಕ್ ಹಾಸಿಗೆ ಹಿಡಿದಿದ್ದಾನೆ.

    ಮಗನಿಗೆ ಊಟ ತಿನ್ನಿಸುವುದರಿಂದ ಹಿಡಿದು ದಿನನಿತ್ಯ ಕರ್ಮಾದಿಗಳಿಗೆ ತಾಯಿ ಮತ್ತು ತಂಗಿ ಆರೈಕೆ ಮಾಡುತ್ತಿದ್ದಾರೆ. ಈತನನ್ನು ನೋಡಿಕೊಳ್ಳಲು ಒಬ್ಬರಾದರೂ ಮನೆಯಲ್ಲಿ ಇರಲೇಬೇಕು. ತಂಗಿ ಓದು ಮುಗಿಸಿ ಮನೇಲಿದ್ರೆ ತಾಯಿ ಖಾಸಗಿ ಶಾಲೆಯಲ್ಲಿ ಆಯಾ ಕೆಲಸ ಮಾಡುತ್ತಿದ್ದಾರೆ. ಬರುವ ಹಣದಿಂದ ಮಗನ ಔಷಧಿ, ಬಾಡಿಗೆಗೆ ಸಾಕಾಗುತ್ತಿದೆ.

    ಗಂಡು ದಿಕ್ಕಿಲ್ಲದ ಮನೆಗೆ ಆಸರೆಯಾಗಬೇಕಿದ್ದ ಮಗ ಹಾಸಿಗೆ ಹಿಡಿದಿದ್ದು ಜೀವನ ಸಾಗಿಸಲು ಕಷ್ಟಕರವಾಗಿದೆ. ಕಷ್ಟಪಟ್ಟು ಮಾತನಾಡಲು ಯತ್ನಿಸಿದ ಅಭಿಷೇಕ್, ನನಗೆ ಸಹಾಯ ಮಾಡಿ, ನನ್ನ ಜೀವನಕ್ಕೆ ಆಧಾರವಾಗಿ ಎಂದು ಕೇಳಿಕೊಳ್ಳುತ್ತಿದ್ದಾನೆ. ಇತ್ತ ಮಗ ದುಡಿದು ಅವನ ಕಾಲ ಮೇಲೆ ನಿಂತು ಜೀವನ ಮಾಡಲು ಚಿಕಿತ್ಸೆ ಕೊಡಿಸಿ, ಪಿಂಚಣಿ ಸೌಲಭ್ಯ ಕೊಡಿಸಿ ಎಂದು ತಾಯಿ ಮತ್ತು ತಂಗಿ ಬೆಳಕು ಕಾರ್ಯಕ್ರಮದ ಮೂಲಕ ಸಹಾಯ ಬಯಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

    https://www.youtube.com/watch?v=b2g_gWGZ4iQ

  • ಪ್ರೇಮ ವಿವಾಹವಾದ ತಂಗಿಯ ಜೀವನ ಸರಿಪಡಿಸಲು ಆಗಮಿಸ್ತಿದ್ದ ಸಹೋದರರ ಕಾರು ಪಲ್ಟಿ

    ಪ್ರೇಮ ವಿವಾಹವಾದ ತಂಗಿಯ ಜೀವನ ಸರಿಪಡಿಸಲು ಆಗಮಿಸ್ತಿದ್ದ ಸಹೋದರರ ಕಾರು ಪಲ್ಟಿ

    ಚಿತ್ರದುರ್ಗ: ಅನ್ಯ ಧರ್ಮದೊಂದಿಗೆ ಪ್ರೇಮ ವಿವಾಹವಾದ ತಂಗಿಯ ಜೀವನ ಸರಿಪಡಿಸಲು ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದ ಸಹೋದರರ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಇಬ್ಬರು ಅಣ್ತಮ್ಮಂದಿರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಹೊರವಲಯದಲ್ಲಿ ನಡೆದಿದೆ.

    ಅಕ್ರಂ(27) ಹಾಗೂ ಇರ್ಫಾನ್(24) ಮೃತಪಟ್ಟ ಸಹೋದರರು. ಶಿವಮೊಗ್ಗದಿಂದ ತಂಗಿಯ ಭೇಟಿಗಾಗಿ ತಾಯಿ ಸಹಿತ ಇಬ್ಬರು ಮಕ್ಕಳು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದರು. ಆಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಅಕ್ರಂ ಸ್ಥಳದಲ್ಲಿಯೇ ಬುಧವಾರ ರಾತ್ರಿ ಅಸುನೀಗಿದ್ದನು.

    ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗು ಇನ್ನೊಬ್ಬ ಮಗನಾದ ಇರ್ಫಾನ್‍ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇರ್ಫಾನ್ ಕೂಡ ಕೊನೆಯುಸಿರೆಳೆದಿದ್ದಾನೆ. ತಾಯಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ದಾವಣಗೆರೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

    ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಲ್ಲದೇ ಸಹೋದರಿ ಬದುಕನ್ನು ಸರಿಮಾಡಲು ಬಂದ ಸೋದರರು ಸ್ಮಶಾನ ಸೇರುವಂತಾಗಿದ್ದು, ಹೊಸ ಬಾಳಿಗೆ ಕಾಲಿಟ್ಟ ಯುವತಿಗೆ ಶುಭ ಹಾರೈಸಬೇಕಿದ್ದ ಕುಟುಂಬಸ್ಥರು ಹಿಡಿಶಾಪ ಹಾಕುವಂತಾಗಿದೆ.

    ಸದ್ಯ ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೋದರಿಯನ್ನು ಪ್ರೀತಿಸ್ತಿದ್ದಾನೆಂದು ಹೊಡೆದು ಕೊಂದೇ ಬಿಟ್ಟ!

    ಸೋದರಿಯನ್ನು ಪ್ರೀತಿಸ್ತಿದ್ದಾನೆಂದು ಹೊಡೆದು ಕೊಂದೇ ಬಿಟ್ಟ!

    ಥಾಣೆ: ತನ್ನ ಸಹೋದರಿಯನ್ನು ಪ್ರೀತಿಸುತ್ತಿದ್ದಾನೆಂದು ವ್ಯಕ್ತಿಯೊಬ್ಬ 23 ವರ್ಷದ ಆಟೋ ಚಾಲಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಥಾಣೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಆರೋಪಿಯನ್ನು ರಾಹುಲ್ ನಾಮ್ಡಿಯೋ ಎಂದು ಗುರುತಿಸಲಾಗಿದ್ದು ಆರೋಪಿಯ ಬಂಧನದ ಬಳಿಕ ತನಿಖೆ ಮುಂದುವರಿದಿದೆ.

    ಆರೋಪಿಯು ಕಳೆದ ಭಾನುವಾರ ನಗರದ ದೇವಸ್ಥಾನವೊಂದರ ಹತ್ತಿರ ವ್ಯಕ್ತಿಯೊಬ್ಬ ಗಾಯಗೊಂಡು ಬಿದ್ದಿರುವುದಾಗಿ ಅಂಬೆರ್ ನಾಥ್ ನಲ್ಲಿರುವ ಶಿವಾಜಿನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದಾಗ ಗಾಯಾಳು ವ್ಯಕ್ತಿ ಮೃತಪಟ್ಟಿದ್ದನು. ಹೀಗಾಗಿ ಆಕಸ್ಮಿಕ ಸಾವು ಅಂತ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಲ್ಲಿಂದ ತೆರಳಿದ್ದರು. ಆ ಬಳಿಕ ಪೊಲೀಸರಿಗೆ ಪ್ರಕರಣ ಕುರಿತು ಶಂಕೆ ವ್ಯಕ್ತವಾಗಿದ್ದು, ವ್ಯಕ್ತಿಯ ಸಾವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿದ್ರು. ಈ ವೇಳೆ ನಾಮ್ಡಿಯೋಗೆ ಮೃತಪಟ್ಟ ವ್ಯಕ್ತಿಯ ಪರಿಚಯವಿರೋದಾಗಿ ಬೆಳಕಿಗೆ ಬಂದಿದೆ ಅಂತ ಪೊಲೀಸ್ ವಕ್ತಾರರೊಬ್ಬರು ತಿಳಿಸಿದ್ದಾರೆ.

    ಮೃತ ವ್ಯಕ್ತಿಯನ್ನು 25 ವರ್ಷದ ಬಬ್ಬು ಬಾಗ್ಡಿ ಎಂದು ಗುರುತಿಸಲಾಗಿದ್ದು, ಈತ ನಾಮ್ಡಿಯೋನ 21 ವರ್ಷದ ಸಹೋದರಿ ಜೊತೆ ಸಂಬಂಧ ಹೊಂದಿದ್ದನು. ಇವರಿಬ್ಬರ ಸಂಬಂಧಕ್ಕೆ ನಾಮ್ಡಿಯೋ ವಿರೋಧ ವ್ಯಕ್ತಪಡಿಸಿದ್ದನು. ಆದ್ರೂ ಬಬ್ಬು, ನಾಮ್ಡಿಯೋ ಸಹೋದರಿಯನ್ನು ಪ್ರೀತಿಸುತ್ತಿದ್ದನು. ಈ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಅಂತ ಅವರು ವಿವರಿಸಿದ್ದಾರೆ.

    ಒಟ್ಟಾರೆ ಘಟನೆಗೆ ಸಂಬಂಧಿಸಿದಂತೆ ನಾಮ್ಡಿಯೋ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆತ ತಾನೇ ಕೊಲೆ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾನೆ. ಬಬ್ಬುವನ್ನು ಪ್ರತ್ಯೇಕ ಸ್ಥಳವೊಂದಕ್ಕೆ ಕರೆದು ಆತನನ್ನು ಹೊಡೆದು ಕೊಲೆ ಮಾಡಿ ಬಳಿಕ ಗಾಯಗೊಂಡು ರಕ್ತದ ಮಡುವಿನಲ್ಲಿ ವ್ಯಕ್ತಿಯೊಬ್ಬ ಬಿದ್ದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ ಅಂತ ನಾಮ್ಡಿಯೋ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

    ನಂತರ ಆರೋಪಿಯನ್ನು ಪೊಲೀಸರು ಬಂಧಿಸಿ ಆತನ ವಿರುದ್ಧ ಐಪಿಸಿ ಸೆಕ್ಷನ್ 302(ಕೊಲೆ), 201(ಪುರಾವೆಗಳ ನಿರ್ಮೂಲನೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಅಂತ ವಕ್ತಾರ ಸುಖಾದ ನರ್ಕಾರ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಣ್ಣನ ಕಳುಹಿಸಲು ಹೋದ ಒಂದೂವರೆ ವರ್ಷದ ಕಂದಮ್ಮ ಶಾಲಾ ಬಸ್ಸಿಗೆ ಬಲಿ!

    ಅಣ್ಣನ ಕಳುಹಿಸಲು ಹೋದ ಒಂದೂವರೆ ವರ್ಷದ ಕಂದಮ್ಮ ಶಾಲಾ ಬಸ್ಸಿಗೆ ಬಲಿ!

    ಹೈದರಾಬಾದ್: ಅಣ್ಣನ ಶಾಲಾ ಬಸ್ಸಿನಡಿ ಸಿಲುಕಿ 18 ತಿಂಗ್ಳು(ಒಂದೂವರೆ ವರ್ಷದ) ಹೆಣ್ಣು ಮಗು ದಾರುಣವಾಗಿ ಮೃತಪಟ್ಟ ಘಟನೆ ಹೈದಾರಾಬಾದ್ ನ ಬೊಂಗ್ಳೂರು ಎಂಬಲ್ಲಿ ನಡೆದಿದೆ.

    ಈ ಘಟನೆ ಸೋಮವಾರ ಬೆಳಗ್ಗೆ ನಡೆದಿದ್ದು, ಮೃತ ದುರ್ದೈವಿ ಕಂದಮ್ಮನನ್ನು ಪ್ರತೀಕಾ ಎಂದು ಗುರುತಿಸಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕ ಸತ್ತಯ್ಯನನ್ನು ಆದಿಭಟ್ಲಾ ಪೊಲೀಸರು ಬಂಧಿಸಿದ್ದಾರೆ.

    ಘಟನೆ ವಿವರ:
    ಪ್ರತೀಕಾ, ಬೊಂಗ್ಳೂರು ಅಂತಪುರಂ ಕಾಲೊನಿಯ ವೆಂಕಟೇಶ್ ಹಾಗೂ ಚಂದನ ದಂಪತಿಯ ಪುತ್ರಿ. ಈಕೆಯ ಅಣ್ಣ ಪ್ರಜ್ವಲ್, ಬೊಂಗ್ಳೂರು ಸಾಹಿತಿ ವಿದ್ಯಾಲಯ ನರ್ಸರಿ ಶಾಲೆಗೆ ಹೋಗುತ್ತಿದ್ದಾನೆ ಅಂತ ಆದಿಭಟ್ಳಾ ಸಬ್ ಇನ್ಸ್ ಪೆಕ್ಟರ್ ಮೋಹನ್ ರೆಡ್ಡಿ ತಿಳಿಸಿದ್ದಾರೆ.

    ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಚಂದನ, ಪ್ರಜ್ವಲ್ ಹಾಗೂ ಪ್ರತೀಕಾ ಮನೆಯ ಹತ್ತಿರವೇ ಶಾಲಾ ಬಸ್ಸಿಗಾಗಿ ಕಾಯುತ್ತಿದ್ದರು. ಸ್ವಲ್ಪ ಸಮಯದಲ್ಲೇ ಬಸ್ ಬಂದಿದೆ. ಬಸ್ ಬಂದ ಕೂಡಲೇ ಅದರಲ್ಲಿದ್ದ ಆಯ ಕೆಳಗಿಳಿದು ಪ್ರಜ್ವಲ್ ನನ್ನು ಬಸ್ ಗೆ ಹತ್ತಿಸಿದ್ದಾರೆ. ಇತ್ತ ತಾಯಿ ಮಗನ ಬ್ಯಾಗ್ ಹಿಡಿದುಕೊಂಡಿದ್ದು, ಅದನ್ನು ಆತನಿಗೆ ಕೊಡುವಲ್ಲಿ ನಿರತರಾಗಿದ್ದರು. ಹೀಗಾಗಿ ಮಗಳು ಪ್ರತೀಕಾ ಕಡೆ ಅವರು ಗಮನಹರಿಸಿರಲಿಲ್ಲ. ಪರಿಣಾಮ ಪ್ರತೀಕಾ ಬಸ್ ನ ಮುಂದುಗಡೆ ತೆರಳಿದ್ದಾಳೆ. ಇದನ್ನು ಚಾಲಕ ಕೂಡ ಗಮನಿಸಿರಲಿಲ್ಲ. ಅಲ್ಲದೇ ಬಸ್ಸನ್ನು ಏಕಾಏಕಿ ಚಲಾಯಿಸಿದ್ದಾನೆ. ಈ ವೇಳೆ ಬಸ್ ಮುಂಬದಿಯಿದ್ದ ಪ್ರತೀಕಾ ಬಸ್ಸಿನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಅಂತ ಎಸ್‍ಐ ವಿವರಿಸಿದ್ದಾರೆ.

    ಮಗು ಸಾವನ್ನಪ್ಪಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಚಾಲಕ ಬಸ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಕೂಡಲೇ ಸ್ಥಳೀಯರು ಘಟನಾ ಸ್ಥಳದಲ್ಲಿ ಜಮಾಯಿಸಿದ್ದು, ಆರೋಪಿ ಚಾಲಕನನ್ನು ಶೀಘ್ರವೇ ಬಂಧಿಸುವಂತೆ ಆಗ್ರಹಿಸಿದ್ದರು.

    ತಲೆಮರೆಸಿಕೊಂಡಿದ್ದ ಚಾಲಕನನ್ನು ಕೊನೆಗೂ ಆದಿಭಟ್ಲಾ ಪೊಲೀಸರು ಬಂಧಿಸಿದ್ದಾರೆ. ಚಾಲಕ ಸತ್ತಯ್ಯನ ಜೊತೆ ಲೈಸನ್ಸ್ ಇದ್ದು, ಘಟನೆ ನಡೆದ ವೇಳೆ ಆತ ಮದ್ಯಪಾನ ಮಾಡಿರಲಿಲ್ಲ ಅಂತ ತಿಳಿಸಿದ್ದಾರೆ. ಸದ್ಯ ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ 304- ಎ(ವೇಗದ ಚಾಲನೆ ಅಥವಾ ಅಜಾಗರೂಕತೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv