Tag: SIT police

  • ತಿಮರೋಡಿ ಮನೆಯಿಂದ ಸಿಸಿಟಿವಿ ಹಾರ್ಡ್‌ ಡಿಸ್ಕ್‌, ಚಿನ್ನಯ್ಯ ಬಳಸುತ್ತಿದ್ದ ಮೊಬೈಲ್‌ ವಶ

    ತಿಮರೋಡಿ ಮನೆಯಿಂದ ಸಿಸಿಟಿವಿ ಹಾರ್ಡ್‌ ಡಿಸ್ಕ್‌, ಚಿನ್ನಯ್ಯ ಬಳಸುತ್ತಿದ್ದ ಮೊಬೈಲ್‌ ವಶ

    – ಇಂದು ಬೆಳಗ್ಗೆ ಎಸ್‌ಐಟಿಯಿಂದ ದಾಳಿ
    – ತಿಮರೋಡಿ ಮನೆಗೆ ಬಂದವರಿಗೆ ನಡುಕ ಶುರು

    ಮಂಗಳೂರು: ಸರ್ಚ್‌ ವಾರಂಟ್‌ ಪಡೆದು ವಿಶೇಷ ತನಿಖಾ ತಂಡದ ಪೊಲೀಸರು (SIT Police) ಮಹೇಶ್‌ ಶೆಟ್ಟಿ ತಿಮರೋಡಿ (Mahesh Shetty Thimarody) ಅವರ ಉಜಿರೆ ನಿವಾಸದ ಮೇಲೆ ದಾಳಿ ನಡೆಸಿ ಸಿಸಿಟಿವಿ (CCTV) ಮತ್ತು ಚಿನ್ನಯ್ಯ ಬಳಸುತ್ತಿದ್ದ ಫೋನನ್ನು ವಶಕ್ಕೆ ಪಡೆದಿದೆ.

    ದಾಳಿಯ ವೇಳೆ ಬುರುಡೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿನ್ನಯ್ಯನ್ನು (Chinnayya) ಎಸ್‌ಐಟಿ ಪೊಲೀಸರು ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದ್ದಾರೆ.

    ಎಸ್‌ಐಟಿ ಉತ್ಕನನ ನಡೆಸಿದ ಬಳಿಕ ತಾನು ತಿಮರೋಡಿಯ ನಿವಾಸಕ್ಕೆ ಹೋಗುತ್ತಿದ್ದೆ. ಅಲ್ಲಿ ನನಗೆ ಒಂದು ಕೊಠಡಿಯನ್ನು ನೀಡಲಾಗಿತ್ತು. ಅಲ್ಲಿ ನಾನು ಬಟ್ಟೆ, ಬ್ಯಾಗ್ ಇಟ್ಟಿದ್ದೇನೆ. ನಾನು ಮೊಬೈಲ್‌ ಬಳಸುತ್ತಿರಲಿಲ್ಲ. ನನ್ನ ಮೊಬೈಲ್‌ ತಿಮರೋಡಿ ಕಡೆಯವರ ಜೊತೆ ಇತ್ತು ಎಂದು ಚಿನ್ನಯ್ಯ ಹೇಳಿದ್ದ. ಈ ಕಾರಣಕ್ಕೆ ಕೊಠಡಿಯ ಮಹಜರು ನಡೆಸಿ ಮೊಬೈಲ್‌ ಮತ್ತು ಬಟ್ಟೆಗಳನ್ನು ವಶಕ್ಕೆ ಪಡೆದಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್‌ಐಟಿ ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಸುಜಾತ ಭಟ್‌!

    ಧರ್ಮಸ್ಥಳದಲ್ಲಿ ಶೋಧ ನಡೆಯುತ್ತಿದ್ದಾಗ ಬುರುಡೆ ಗ್ಯಾಂಗ್‌ನ ಎಲ್ಲಾ ಸದಸ್ಯರು ತಿಮರೋಡಿ ಮನೆಯಲ್ಲೇ ತಂಗಿದ್ದರು. ಎಲ್ಲಾ ಪ್ಲ್ಯಾನ್‌ಗಳು ಇಲ್ಲೇ ಸಿದ್ಧವಾಗುತ್ತಿತ್ತು. ಹೀಗಾಗಿ ತಿಮರೋಡಿ ಮನೆಗೆ ಯಾರೆಲ್ಲ ಬಂದಿದ್ದರು ಎಲ್ಲಾ ವಿವರಗಳನ್ನು ಪತ್ತೆ ಹಚ್ಚಲು ಪೊಲೀಸರು ಸಿಸಿಟಿವಿ ಹಾರ್ಡ್‌ ಡಿಸ್ಕ್‌ ಅನ್ನು ವಶಕ್ಕೆ ಪಡೆದಿದ್ದಾರೆ.

    ತಿಮರೋಡಿ ಮನೆಯ ಕೊಠಡಿಯಲ್ಲಿ ಚಿನ್ನಯ್ಯ ಕೆಲ ರಾಷ್ಟ್ರೀಯ ಮಾಧ್ಯಮ ಮತ್ತು ಯೂಟ್ಯೂಬ್‌ ವಾಹಿನಿಗಳಿಗೆ ಸಂದರ್ಶನ ನೀಡಿದ್ದ. ಈ ಸಂದರ್ಶನದ ವಿಡಿಯೋಗಳು ಕೆಲ ದಿನಗಳಿಂದ ಪ್ರಸಾರವಾಗುತ್ತಿದೆ. ಹೀಗಾಗಿ ಸಂದರ್ಶನ ನೀಡಿದ ಜಾಗಗಳ ಮಹಜರು ಪ್ರಕ್ರಿಯೆಯನ್ನು ಎಸ್‌ಐಟಿ  ಪೊಲೀಸರು ನಡೆಸಿದ್ದಾರೆ. ಇದನ್ನೂ ಓದಿಮಟ್ಟಣ್ಣನವರ್‌ನಿಂದ ಹೋರಾಟ ಹಳ್ಳ ಹಿಡಿಯಿತು  ಸೌಜನ್ಯ ಪರ ಹೋರಾಟಗಾರರಲ್ಲೇ ಒಡಕು!

    ಸಿಸಿಟಿವಿ ಡಿವಿಆರ್‌ಗಳನ್ನು ಪೊಲೀಸರು ಪಡೆದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ತಿಮರೋಡಿ ನಿವಾಸಕ್ಕೆ ಆಗಮಿಸಿದ್ದ ವ್ಯಕ್ತಿಗಳ ವಿಚಾರಣೆಯನ್ನು ಪೊಲೀಸರು ನಡೆಸುವ ಸಾಧ್ಯತೆಯಿದೆ. ಇವರುಗಳನ್ನು ಪ್ರಕರಣದ ಸಾಕ್ಷಿಗಳಾಗುವ ಸಾಧ್ಯತೆಯಿದೆ.

     

    ಅಷ್ಟೇ ಅಲ್ಲದೇ ತಮ್ಮ ಪರವಾಗಿ ಸುದ್ದಿಗಳನ್ನು ಪ್ರಚಾರ ಮಾಡಲು ಕೆಲ ಯೂಟ್ಯೂಬರ್‌ಗಳಿಗೆ ಬುರುಡೆ ಗ್ಯಾಂಗ್‌ ಪ್ರೋತ್ಸಾಹ ನೀಡುತ್ತಿತ್ತು. ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳು ತಿಮರೋಡಿ ನಿವಾಸದಲ್ಲಿ ತಂಗಿದ್ದರು. ಈ ಯೂಟ್ಯೂಬರ್‌ಗಳನ್ನು ಪೊಲೀಸರು ತನಿಖೆಗೆ ಒಳಪಡಿಸುವ ಸಾಧ್ಯತೆಯಿದೆ.

    ದಾಳಿ ನಡೆಯುವ ಬಗ್ಗೆ ಖಚಿತ ಮಾಹಿತಿ ಇದ್ದ ಕಾರಣ ಪೊಲೀಸ್‌ ವಾಹನಗಳ ಜೊತೆ ಇಂದು ಬೆಳಗ್ಗೆ ಮಾಧ್ಯಮಗಳ ವಾಹನಗಳು ತಿಮರೋಡಿಗೆ ತೆರಳಿತ್ತು. ಆದರೆ ಪೊಲೀಸರು ತಿಮರೋಡಿಗೆ ಹೋಗುವ ಮಾರ್ಗ ಮಧ್ಯೆಯೇ ಎಲ್ಲಾ ಮಾಧ್ಯಮಗಳ ವಾಹನಗಳನ್ನು ತಡೆದು ನಿಲ್ಲಿಸಿದ್ದರು.

  • ಸಿಮೆಂಟ್ ಬ್ಲಾಕ್ ಫ್ಯಾಕ್ಟರಿಯಲ್ಲಿ ಸಿಕ್ತು ನೂರಾರು ಕೋಟಿ – ಮನ್ಸೂರ್ ಆಪ್ತ ಅರೆಸ್ಟ್

    ಸಿಮೆಂಟ್ ಬ್ಲಾಕ್ ಫ್ಯಾಕ್ಟರಿಯಲ್ಲಿ ಸಿಕ್ತು ನೂರಾರು ಕೋಟಿ – ಮನ್ಸೂರ್ ಆಪ್ತ ಅರೆಸ್ಟ್

    ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಆರೋಪಿ ಮನ್ಸೂರ್ ಜನರಿಗೆ ಮೋಸ ಮಾಡಿದ್ದ ಹಣವನ್ನು ಎಲ್ಲೆಲ್ಲಿ ಬಚ್ಚಿಟ್ಟಿದ್ದ ಎಂದು ಕೇಳಿದರೆ ದಂಗಾಗುತ್ತೀರಿ. ಕೇವಲ ಬೆಂಗಳೂರು ಮಾತ್ರವಲ್ಲದೆ ಬೇರೆ ಜಿಲ್ಲೆಗಳಲ್ಲಿಯೂ ಚಿನ್ನ, ಹಣವನ್ನು ಮನ್ಸೂರ್ ಬಚ್ಚಿಟ್ಟಿದ್ದನು.

    ಹೌದು, ಸದ್ಯ ಇಡಿ ಅಧಿಕಾರಿಗಳ ಬಳಿಕ ಮನ್ಸೂರ್ ಖಾನ್ ಎಸ್‍ಐಟಿ ಪೊಲೀಸರ ವಶದಲ್ಲಿದ್ದು ವಿಚಾರಣೆ ನಡೆಯುತ್ತಿದೆ. ಈ ವೇಳೆ ಬೆಂಗಳೂರು ನಗರದಲ್ಲಷ್ಟೇ ಅಲ್ಲದೇ ಹೊರಗಿನ ಜಿಲ್ಲೆಗಳಲ್ಲಿ ಕೋಟಿಗಟ್ಟಲೆ ಹಣವನ್ನು ಬಚ್ಚಿಟ್ಟಿದ್ದ ವಿಚಾರ ಬೆಳಕಿಗೆ ಬಂದಿದೆ.

    ಎಸ್‍ಐಟಿ ಪೊಲೀಸರ ತನಿಖೆಯಲ್ಲಿ ಮನ್ಸೂರ್ ಮತ್ತೊಂದು ಅಡುಗುತಾಣ ಬಯಲಾಗಿದೆ. ಕೋಲಾರದ ಮಾಲೂರಿನ ಬಳಿ ಇರುವ ಸಿಮೆಂಟ್ ಬ್ಲಾಕ್ ತಯಾರಕ ಫ್ಯಾಕ್ಟರಿಯಲ್ಲಿ ಮನ್ಸೂರ್ ನೂರಾರು ಕೋಟಿ ಹಣ, ಚಿನ್ನಾಭರಣ ಪತ್ತೆಯಾಗಿದೆ.

    ಅಷ್ಟೇ ಅಲ್ಲದೆ, ಈ ಹಣ, ಒಡವೆ ಕಾಯಲೆಂದೇ ಫ್ಯಾಕ್ಟರಿಯಲ್ಲಿ ಗನ್‍ಮ್ಯಾನ್‍ಗಳನ್ನು ಕೂಡ ನೇಮಕ ಮಾಡಲಾಗಿತ್ತು. ಮನ್ಸೂರ್ ಖಾನ್ ಸ್ನೇಹಿತ ನಾಟಿ ವೈದ್ಯ ಖಮರುಲ್ಲಾ ಜಮಾಲ್ ಇದರ ಉಸ್ತುವಾರಿ ವಹಿಸಿಕೊಂಡಿದ್ದನು. ತಾನೇ ಜಮೀನು ತೆಗೆದುಕೊಂಡು, ಖಮರುಲ್ಲಾ ಜಮಾಲ್‍ಗೆ ಮನ್ಸೂರ್ ಫ್ಯಾಕ್ಟರಿ ಮಾಡಿಕೊಟ್ಟಿದ್ದನು. ಹಾಗೆಯೇ ನಾಟಿ ವೈದ್ಯದ ಜೊತೆ ಮಾಟ ಮಂತ್ರ ಮಾಡುತ್ತೇನೆ ಎಂದು ಖಮರುಲ್ಲಾ ಜನರನ್ನು ಹೆದರಿಸುತ್ತಿದ್ದನು. ಹೀಗೆ ಈ ಫ್ಯಾಕ್ಟರಿ ಬಳಿ ಜನರು ಬಾರದಂತೆ ನೋಡಿಕೊಂಡಿದ್ದನು.

    ಈ ಬಗ್ಗೆ ತಿಳಿದು ಸಿಮೆಂಟ್ ಫ್ಯಾಕ್ಟರಿ ಪರಿಶೀಲನೆ ನಡೆಸಿರುವ ಎಸ್‍ಐಟಿ ಪೊಲೀಸರು ಖಮರುಲ್ಲಾನನ್ನು ಬಂಧಿಸಿ, ನಗದು ಹಾಗೂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಹಾಗೆಯೇ ಶಾಂತಿನಗರದ ತನ್ನ ಅಪಾರ್ಟ್‌ಮೆಂಟಿನಲ್ಲಿ ಮನ್ಸೂರ್ ಸ್ವಿಮ್ಮಿಂಗ್ ಪೂಲ್‍ನಲ್ಲಿ 300 ನಕಲಿ ಚಿನ್ನದ ಬಿಸ್ಕತ್ ಬಚ್ಚಿಟ್ಟಿರುವುದು ಕೂಡ ಬೆಳಕಿಗೆ ಬಂದಿದ್ದು, ಅದನ್ನೂ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

  • ಗೌರಿ ಲಂಕೇಶ್ ಹತ್ಯೆಗೆ ಹಂತಕರು ಇಟ್ಟಿದ್ದ ಹೆಸರು `ಅಮ್ಮ’ – ಇನ್ನಿಬ್ಬರು ಹತ್ಯೆಗೂ ಎರಡಕ್ಷರದ ಕೋಡ್‍ವರ್ಡ್

    ಗೌರಿ ಲಂಕೇಶ್ ಹತ್ಯೆಗೆ ಹಂತಕರು ಇಟ್ಟಿದ್ದ ಹೆಸರು `ಅಮ್ಮ’ – ಇನ್ನಿಬ್ಬರು ಹತ್ಯೆಗೂ ಎರಡಕ್ಷರದ ಕೋಡ್‍ವರ್ಡ್

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಪರಶುರಾಮ ವಾಗ್ಮೋರೆ ಬಂಧನದ ಬಳಿಕ ಹಲವು ಮಹತ್ವದ ವಿಚಾರಗಳನ್ನು ಎಸ್‍ಐಟಿ ತಂಡ ಸಂಗ್ರಹಿಸಿದ್ದು, ಸದ್ಯ ಗೌರಿ ಲಂಕೇಶ್ ಅವರ ಹತ್ಯೆಗೆ `ಅಪರೇಷನ್ ಅಮ್ಮ’ ಎಂದು ಹೆಸರಿಟ್ಟಿದ್ದರು ಎಂದು ಮೂಲಗಳು ತಿಳಿಸಿದೆ.

    ಪ್ರಮುಖವಾಗಿ ಗೌರಿ ಅವರ ಹತ್ಯೆಗೂ ಮುನ್ನ ಆರೋಪಿಗಳಿಗೆ ಕುರಿತು ಸುಳಿವು ಸಿಗಬಾರದು ಎಂಬ ಉದ್ದೇಶದಿಂದ ಕೋರ್ಡ್ ವಾರ್ಡ್‍ಗಳನ್ನು ಬಳಕೆ ಮಾಡಲಾಗುತ್ತಿತ್ತು. ಅದ್ದರಿಂದಲೇ ಹತ್ಯೆಗೂ ಮುನ್ನ ಆರೋಪಿಗಳಿಗೆ ಗೌರಿ ಅವರ ಕುರಿತು ಮಾಹಿತಿ ನೀಡಿರಲಿಲ್ಲ. ಈ ಕುರಿತು ಎಸ್‍ಐಟಿ ಅಧಿಕಾರಿಗಳು ಆರೋಪಿಗಳಿಂದ ಜಪ್ತಿಯಾದ ಡೈರಿಯಲ್ಲಿ ಬಹುತೇಕ ಕೋಡ್‍ವರ್ಡ್ ಪತ್ತೆಯಾಗಿದೆ ಎಂಬ ಮಾಹಿತಿ ಲಭಿಸಿದೆ.

    ಸಂವಹನಕ್ಕೂ ಕೋಡ್‍ವರ್ಡ್: ಹತ್ಯೆ ಸಂಚು ರೂಪಿಸುವ ವೇಳೆಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳಿಗೂ ಸಂವಹನ ನಡೆಸಲು ಕೋಡ್ ವರ್ಡ್‍ಗಳನ್ನೇ ಬಳಕೆ ಮಾಡುತ್ತಿದ್ದರು. ಮೊಬೈಲ್ ನಂಬರ್, ಭೇಟಿಯಾಗುವ ಸ್ಥಳಕ್ಕೂ ಕೋಡ್‍ವರ್ಡ್ ನಿಗಧಿಯಾಗಿತ್ತು. ಎಲ್ಲಾ ಕೋಡ್‍ವರ್ಡ್‍ಗಳನ್ನು ಮರಾಠಿ ಮಿಶ್ರಿತ ಅಕ್ಷರಗಳಲ್ಲಿರುವ ಬಳಕೆ ಮಾಡಲಾಗುತ್ತಿತ್ತು. ಪ್ರಕರಣದಲ್ಲಿ ಯಾವುದೇ ಸುಳಿವು ಸಿಗಬಾರದು ಎಂಬ ಉದ್ದೇಶಕ್ಕೆ ಈ ಕೋಡ್‍ವರ್ಡ್ ಬಳಕೆ ಮಾಡಿದ್ದು, ಸದ್ಯ ಬಹುತೇಕ ಕೋಡ್‍ಗಳನ್ನು ಎಸ್‍ಐಟಿ ತಂಡ ಬಹುತೇಕ ಡಿಕೋಡ್ ಮಾಡಿದೆ ಎಂದು ತಿಳಿದು ಬಂದಿದೆ.

    ಮತ್ತಿಬ್ಬರು ಸಾಹಿತಿಗಳ ಹತ್ಯೆಗೆ ಸಂಚು: ಗೌರಿ ಲಂಕೇಶ್ ಹತ್ಯೆ ಮಾಡಿರುವ ರೀತಿಯಲ್ಲೇ ಆರೋಪಿಗಳು ಇನ್ನಿಬ್ಬರ ಸಾಹಿತಿಗಳ ಹತ್ಯೆಗೂ ಸಂಚು ರೂಪಿಸಿದ್ದರು. ವಿಶೇಷವಾಗಿ ಇನ್ನಿಬ್ಬರು ಸಾಹಿತಿಗಳ ಹತ್ಯೆಗೂ ಎರಡಕ್ಷರದ ಕೋಡ್‍ವರ್ಡ್ ಬಳಕೆ ಮಾಡಲಾಗಿದ್ದು, ಈ ಕುರಿತ ಪಟ್ಟಿ ಸಹ ತಯಾರು ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಇದನ್ನು ಓದಿ:  ಗೌರಿ ಲಂಕೇಶ್ ಹತ್ಯೆ ಕೇಸ್ – ಎಸ್‍ಐಟಿ ಮುಂದೆ ತಪ್ಪೊಪ್ಪಿಕೊಂಡು ಕಣ್ಣೀರಿಟ್ಟ ವಾಗ್ಮೋರೆ!

    https://www.youtube.com/watch?v=O-__JlcxgVc