Tag: sit

  • ಧರ್ಮಸ್ಥಳ ಕೇಸ್‌ ಕ್ಲೈಮ್ಯಾಕ್ಸ್‌ ಹಂತಕ್ಕೆ – ಅಂತಿಮ ವರದಿ ಸಲ್ಲಿಸಲು SIT ತಯಾರಿ

    ಧರ್ಮಸ್ಥಳ ಕೇಸ್‌ ಕ್ಲೈಮ್ಯಾಕ್ಸ್‌ ಹಂತಕ್ಕೆ – ಅಂತಿಮ ವರದಿ ಸಲ್ಲಿಸಲು SIT ತಯಾರಿ

    ಮಂಗಳೂರು: ಧರ್ಮಸ್ಥಳ (Dharmasthala Case) ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆ ಕ್ಲೈಮ್ಯಾಕ್ಸ್ ಹಂತಕ್ಕೆ‌ ತಲುಪಿದ್ದು, ಅಂತಿಮ ವರದಿ ಸಲ್ಲಿಸಲು ಬೇಕಾದ ತಯಾರಿಯನ್ನ ಎಸ್ಐಟಿ (SIT) ಅಧಿಕಾರಿಗಳು ಮಾಡುತ್ತಿದ್ದಾರೆ.

    ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಬುಧವಾರ ದಿಢೀರ್ ಭೇಟಿ ನೀಡಿದ್ದಾರೆ.‌ SIT ಪೊಲೀಸ್ ಠಾಣೆಗೆ ಆಗಮಿಸಿದ ಮೊಹಾಂತಿ, ತನಿಖಾಧಿಕಾರಿ ಎಸ್ಪಿ ಜಿತೇಂದ್ರ ದಯಾಮಾ ಸೇರಿದಂತೆ ಇತರೆ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಪ್ರಕರಣದ ಇಂದಿನವರೆಗಿನ ಪ್ರಗತಿ ವರದಿ ಬಗ್ಗೆ ಪರಿಶೀಲನೆ ನಡೆದಿದೆ. ಮುಂದಿನ ಕಾರ್ಯಾಚರಣೆಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಮಂಜುನಾಥ ಸ್ವಾಮಿ, ವೀರೇಂದ್ರ ಹೆಗ್ಗಡೆಯವರಲ್ಲಿ ಕ್ಷಮೆ ಕೇಳ್ತೀನಿ – ನನ್ನಿಂದ ತಪ್ಪಾಗಿದೆ ಎಂದ ಸುಜಾತ ಭಟ್‌

    ಅಧಿಕಾರಿಗಳು ಈಗಾಗಲೇ ಒಂದು ಪ್ರಾಥಮಿಕ ವರದಿಯನ್ನು ಸಿದ್ಧಪಡಿಸಿದ್ದಾರೆ. ಈ ವರದಿಯನ್ನು ಮೊಹಾಂತಿ ಪರಿಶೀಲನೆ ಮಾಡಿದ್ದಾರೆ. SIT ಮುಖ್ಯಸ್ಥ ಮೊಹಾಂತಿ ಎರಡು ದಿನಗಳ ಕಾಲ ಮಂಗಳೂರಿನಲ್ಲೇ ಇರುವ ಸಾಧ್ಯತೆಯಿದ್ದು, ತನಿಖೆಯನ್ನು ಸ್ವತಃ ಮೇಲ್ವಿಚಾರಣೆ ಮಾಡಲಿದ್ದಾರೆ. ಸದ್ಯ ಎಲ್ಲರ ಕಣ್ಣು ಎಸ್ಐಟಿ ಅಧಿಕಾರಿಗಳು ಸಿದ್ಧಪಡಿಸುತ್ತಿರುವ ವರದಿಯ ಮೇಲಿದೆ.

    ಧರ್ಮಸ್ಥಳ ಪ್ರಕರಣದಲ್ಲಿ ಶೀಘ್ರವೇ ತನಿಖೆ ಪೂರ್ಣಗೊಳಿಸಲು ಎಸ್‌ಐಟಿಗೆ ಗೃಹ ಸಚಿವ ಜಿ.ಪರಮೇಶ್ವರ್‌ ಸೂಚನೆ ನೀಡಿದ್ದರು. ಬಂದವರೆಲ್ಲ ದೂರು ಕೊಡೋದು, ಅರ್ಜಿ ಕೊಡೋದು ಆಗ್ತಿದೆ. ಅಲ್ಲದೇ, ಹೇಳಿಕೆಗಳನ್ನು ಕೊಡಲಾಗುತ್ತಿದೆ. ಇದಕ್ಕೆಲ್ಲ ಅಂತ್ಯ ಹಾಡಲು ಹೇಳಿದ್ದೇವೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಅನನ್ಯಾ ಭಟ್ ಕೇಸ್ – ಖ್ಯಾತ ಬಹುಭಾಷಾ ನಟನ ಸಹೋದರನಿಗೆ SIT ನೋಟಿಸ್ ಸಾಧ್ಯತೆ

  • ಅನನ್ಯಾ ಭಟ್ ಕೇಸ್ – ಖ್ಯಾತ ಬಹುಭಾಷಾ ನಟನ ಸಹೋದರನಿಗೆ SIT ನೋಟಿಸ್ ಸಾಧ್ಯತೆ

    ಅನನ್ಯಾ ಭಟ್ ಕೇಸ್ – ಖ್ಯಾತ ಬಹುಭಾಷಾ ನಟನ ಸಹೋದರನಿಗೆ SIT ನೋಟಿಸ್ ಸಾಧ್ಯತೆ

    ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ಮುಂದುವರಿಸಿದೆ. ಇದೀಗ ಬಹುಭಾಷಾ ನಟ, ನಿರ್ದೇಶಕನ ಸಹೋದರನಿಗೆ ಎಸ್‌ಐಟಿ (SIT) ನೋಟಿಸ್ ನೀಡಲು ಮುಂದಾಗಿದೆ.

    ಧರ್ಮಸ್ಥಳ (Dharmasthala) ಬುರುಡೆ ಫೈಲ್ಸ್ ವಿಚಾರದಲ್ಲಿ ದಿನೇ ದಿನೇ ಹೊಸ ಬೆಳವಣಿಗೆಗಳಾಗುತ್ತಲೇ ಇದೆ. ಈ ಮೊದಲು ಅನನ್ಯಾ ಭಟ್ ಬಗ್ಗೆ ಕಟ್ಟುಕತೆ ಕಟ್ಟಿ ಸುಜಾತಾ ಭಟ್ ಎಲ್ಲರನ್ನು ನಂಬಿಸುವ ಕೆಲಸ ಮಾಡಿದ್ದರು. ಬಳಿಕ ಇದೆಲ್ಲವನ್ನು ಜಮೀನು ವಿಚಾರವಾಗಿ ಮಾಡಿರುವುದಾಗಿ ಒಪ್ಪಿಕೊಂಡಿದ್ದರು. ಇದೀಗ ಅನನ್ಯಾ ಭಟ್ ಕೇಸ್ ಮತ್ತೆ ಮುನ್ನೆಲೆಗೆ ಬಂದಿದ್ದು, ಪ್ರಕರಣದ ತನಿಖೆಯನ್ನು ಎಸ್‌ಐಟಿ ಮುಂದುವರಿಸಿದೆ.ಇದನ್ನೂ ಓದಿ: Koalr | ಸೇತುವೆ ಮೇಲಿಂದ ಕಾರು ಬಿದ್ದು ಓರ್ವ ಸಾವು, ನಾಲ್ವರಿಗೆ ಗಾಯ

    ವಾಸಂತಿ ಕೇಸ್ ಬಗ್ಗೆ ತನಿಖೆಗಿಳಿದಾಗ ಎಸ್‌ಐಟಿಗೆ ಬಹುಭಾಷಾ ನಟನ ಸಹೋದರನ ಹೆಸರು ಕೇಳಿಬಂದಿದೆ. ನಟನ ಸಹೋದರ ಕೂಡ ಕಾಲಿವುಡ್ ನಟನಾಗಿದ್ದು, ವಾಸಂತಿ ಗಂಡನ ಗೆಳೆಯ ಎಂದು ತಿಳಿದುಬಂದಿದೆ. ಸದ್ಯ ಕಾಲಿವುಡ್ ನಟ ಚೆನ್ನೈನಲ್ಲಿರುವುದಾಗಿ ಮಾಹಿತಿಯಿದ್ದು, ಆತನ ವಿಳಾಸ ಪತ್ತೆ ಮಾಡುವಲ್ಲಿ ಎಸ್‌ಐಟಿ ಕಾರ್ಯನಿರತವಾಗಿದೆ. ವಿಳಾಸ ಸಿಗದ ಹಿನ್ನೆಲೆ ನೋಟಿಸ್ ನೀಡಲು ವಿಳಂಬವಾಗಿದೆ.

    ಇನ್ನೂ ಬುರುಡೆ ಫೈಲ್ಸ್ ಪ್ರಕರಣದಲ್ಲಿ ಏಳು ಅಸ್ಥಿಪಂಜರ ಸಿಕ್ಕ ಬಂಗ್ಲೆಗುಡ್ಡ ಜಾಗದ ಸರ್ವೇಗಾಗಿ ಅರಣ್ಯಾಧಿಕಾರಿಗಳ ತಂಡವೊಂದು ಆಗಮಿಸಿದೆ. ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಏಳು ಅಸ್ಥಿಪಂಜರ ಸಿಕ್ಕಿದೆ ಎಂದು ದೃಢಪಡಿಸಲು ಸರ್ವೇ ಕಾರ್ಯನಡೆಸಿದೆ.ಇದನ್ನೂ ಓದಿ: ಬುರುಡೆ ಕೇಸ್‌ಗೆ ಟ್ವಿಸ್ಟ್; ಎಸ್‌ಐಟಿ ತಂಡದಿಂದ ಇಬ್ಬರು ಅಂಬುಲೆನ್ಸ್ ಡ್ರೈವರ್‌ಗಳ ವಿಚಾರಣೆ

     

     

  • ಬುರುಡೆ ಕೇಸ್‌ಗೆ ಟ್ವಿಸ್ಟ್; ಎಸ್‌ಐಟಿ ತಂಡದಿಂದ ಇಬ್ಬರು ಅಂಬುಲೆನ್ಸ್ ಡ್ರೈವರ್‌ಗಳ ವಿಚಾರಣೆ

    ಬುರುಡೆ ಕೇಸ್‌ಗೆ ಟ್ವಿಸ್ಟ್; ಎಸ್‌ಐಟಿ ತಂಡದಿಂದ ಇಬ್ಬರು ಅಂಬುಲೆನ್ಸ್ ಡ್ರೈವರ್‌ಗಳ ವಿಚಾರಣೆ

    ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಆರೋಪ (Dharmasthala Mass Burials) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (SIT) ತನಿಖೆ ಚುರುಕುಗೊಂಡಿದೆ. ತನಿಖೆಯ ಭಾಗವಾಗಿ ಇಬ್ಬರು ಅಂಬುಲೆನ್ಸ್ ಚಾಲಕರನ್ನು ಕರೆಸಿ ಎಸ್‌ಐಟಿ ವಿಚಾರಣೆ ನಡೆಸಿದೆ. ಕಳೆದ 23 ವರ್ಷಗಳಿಂದ ಶವ ಸಾಗಾಟ ಮಾಡಿದ್ದ ಇಬ್ಬರನ್ನೂ ವಿಚಾರಣೆ ನಡೆಸಿದ ಎಸ್‌ಐಟಿ ಮಹತ್ವದ ಮಾಹಿತಿ ಸಂಗ್ರಹಿಸಿ ಹೇಳಿಕೆ ದಾಖಲಿಸಿಕೊಂಡಿದೆ.

    ಹೌದು, ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದ ಆರೋಪಿ ಚಿನ್ನಯ್ಯನ 183 ಹೇಳಿಕೆ ನಂತರ ಶವ ಹೂತಿಟ್ಟ ಆರೋಪದಲ್ಲಿ ಬೆಳ್ತಂಗಡಿಯ ಇಬ್ಬರು ಅಂಬುಲೆನ್ಸ್ ಚಾಲಕರಿಗೆ (Ambulence Drivers) ಎಸ್‌ಐಟಿ ನೋಟಿಸ್ ಕೊಟ್ಟು ವಿಚಾರಣೆ ನಡೆಸಿದೆ. ಸಮಾಜಸೇವಕ ಅಂಬುಲೆನ್ಸ್ ಚಾಲಕರಾದ ಬೆಳ್ತಂಗಡಿಯ ಜಲೀಲ್ ಬಾಬಾ ಮತ್ತು ಹಮೀದ್ ಯುಡಿಆರ್ ಪ್ರಕರಣದ ಶವಗಳನ್ನು ಶವಗಾರಕ್ಕೆ ಸಾಗಿಸಿದ ಬಗ್ಗೆ ಎಸ್‌ಐಟಿ ತಂಡ ವಿಚಾರಣೆ ನಡೆಸಿತು. ಇದನ್ನೂ ಓದಿ: ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿ ಕಾರ್ಯ – 7 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ

    ಇನ್ನು ಧರ್ಮಸ್ಥಳ ಗ್ರಾಮದಲ್ಲಿ ಯುಡಿಆರ್ ಪ್ರಕರಣದ ಶವಗಳನ್ನ ಶವಗಾರಕ್ಕೆ ಸಾಗಿಸಿದ ಬಗ್ಗೆ ಎಸ್‌ಐಟಿ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿ ಮಾಹಿತಿಯನ್ನು ಕಲೆ ಹಾಕಿತು. ಶವಗಳನ್ನು ಪೊಲೀಸರ ಸಮ್ಮುಖದಲ್ಲಿ ಶವಗಾರಕ್ಕೆ ಸಾಗಿಸಲಾಗಿತ್ತಾ ಅನ್ನೋದರ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ. ಈ ವೇಳೆ ಸಾಕಷ್ಟು ಮಹತ್ವದ ಮಾಹಿತಿಗಳನ್ನು ಇಬ್ಬರೂ ನೀಡಿದ್ದು, ಎಲ್ಲವೂ ಸ್ಥಳೀಯ ಪೊಲೀಸರ ನಿರ್ದೇಶನದಂತೆ ಶವ ಸಾಗಾಟ ಮಾಡಿದ್ದೇವೆ ಅನ್ನೋ ವಿಚಾರವನ್ನ ವಿಚಾರಣೆ ವೇಳೆ ಹೇಳಿದ್ದಾರೆ. ಇದರ ಜೊತೆಗೆ ತಮಗೆ ಗೊತ್ತಿರೋ ವಿಚಾರಗಳನ್ನೂ ಇಬ್ಬರೂ ಹೇಳಿದ್ದು, ಎಲ್ಲಾ ಹೇಳಿಕೆಗಳನ್ನ ಎಸ್‌ಐಟಿ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬಂಟ್ವಾಳದ ಅಬ್ದುಲ್‌ ರಹಿಮಾನ್‌ ಕೊಲೆ ಕೇಸ್‌ – 13 ಆರೋಪಿಗಳ ಬಂಧನ

    ಇನ್ನು ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೇಲ್‌ಗೆ ಅರ್ಜಿ ಹಾಕಿದ್ದು, ಮಂಗಳೂರಿನ ಸೆಷನ್ಸ್ ಕೋರ್ಟ್ ಆದೇಶವನ್ನು ಅಕ್ಟೋಬರ್ 9ಕ್ಕೆ ಕಾಯ್ದಿರಿಸಿದೆ. ಈ ಕೇಸ್ ದಾಖಲಾದ ನಂತರ ಬುರುಡೆ ಗ್ಯಾಂಗ್ ಸೂತ್ರಧಾರ ಮಹೇಶ್ ಶೆಟ್ಟಿ ತಿಮರೋಡಿ ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: ಅಮೆಜಾನ್‌ ಕಾಡಿನ ಮರಗಳು ದಪ್ಪ ಆಗ್ತಿವೆಯಂತೆ – ಇದು ಗುಡ್‌ ನ್ಯೂಸ್‌ or ಬ್ಯಾಡ್‌ ನ್ಯೂಸ್?

    ಒಟ್ಟಿನಲ್ಲಿ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಎಲ್ಲಾ ಆಯಾಮದ ವಿಚಾರಣೆ ಮುಂದುವರಿಸಿದೆ. ಶೀಘ್ರದಲ್ಲೇ ಫೈನಲ್ ರಿಪೋರ್ಟ್ ನೀಡಲಿರುವ ಎಸ್‌ಐಟಿ ಅದಕ್ಕೆ ಬೇಕಾದ ಎಲ್ಲಾ ತನಿಖೆಗಳನ್ನ ಮುಗಿಸುವ ಹಂತಕ್ಕೆ ತಲುಪಿದೆ. ಕೆಲವೇ ದಿನಗಳಲ್ಲಿ ಬರುಡೆ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಆಗಮನ ಹಿನ್ನೆಲೆ ಕೇಸರಿ ಧ್ವಜ ತೆರವಿಗೆ ಪೊಲೀಸರು ಸೂಚನೆ; ದಿಢೀರ್​ ಪ್ರತಿಭಟನೆ

  • ಧರ್ಮಸ್ಥಳ ಕೇಸ್;‌ ಹಲವರಿಗೆ SIT ಬುಲಾವ್‌ – ಯೂಟ್ಯೂಬರ್‌ಗಳಿಗೂ ನೋಟಿಸ್‌ ನೀಡಿ ವಿಚಾರಣೆ

    ಧರ್ಮಸ್ಥಳ ಕೇಸ್;‌ ಹಲವರಿಗೆ SIT ಬುಲಾವ್‌ – ಯೂಟ್ಯೂಬರ್‌ಗಳಿಗೂ ನೋಟಿಸ್‌ ನೀಡಿ ವಿಚಾರಣೆ

    ಮಂಗಳೂರು: ಧರ್ಮಸ್ಥಳದ (Dharmasthala Case) ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆ‌ ಮುಂದುವರಿದೆ. ಪ್ರಕರಣದ ಸೂತ್ರಧಾರಿಗಳು ಎನ್ನಲಾದ ಹಲವರನ್ನ ಇಂದು ಮತ್ತೆ ವಿಚಾರಣೆಗೆ ಎಸ್ಐಟಿ (SIT) ಬೆಳ್ತಂಗಡಿ ಕಚೇರಿಗೆ ಕರೆಸಿಕೊಂಡಿದೆ. ಜಯಂತ್.ಟಿ. ಅವರ ಪತ್ನಿ‌ ಮಕ್ಕಳು ಹಾಗೂ‌ ಯೂಟ್ಯೂಬರ್‌ಗಳನ್ನ ಎಸ್ಐಟಿ ಮತ್ತೆ ವಿಚಾರಣೆ ನಡೆಸಿದೆ.

    ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಮುಂದುವರಿಸಿದ ಎಸ್ಐಟಿ ಇಂದು‌ ಹಲವರನ್ನು ವಿಚಾರಣೆ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ವ್ಯಕ್ತಿ ಎಂದು ಹೇಳಲಾಗುತ್ತಿರುವ ಜಯಂತ್ ಟಿ ಅವರ ಪತ್ನಿ, ಮಗ ಮತ್ತು ಮಗಳಿಗೆ ವಿಚಾರಣೆಗೆ ಹಾಜರಾಗುವಂತೆ SIT ಬುಲಾವ್ ನೀಡಿತ್ತು. ಹೀಗಾಗಿ, ಜಯಂತ್ ಟಿ ಪತ್ನಿ ಸೈಮಾ, ಮಗ ಜೀವನ್, ಮಗಳು ಜಿಷ್ಣಾ ಬೆಳ್ತಂಗಡಿ SIT ಕಚೇರಿಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾದ ಕುಟುಂಬದವರ ಜೊತೆ ಯೂಟ್ಯೂಬರ್ ಸಂಚಾರಿ ಸ್ಟುಡಿಯೋ ಸಂತೋಷ್ ಕೂಡ ಆಗಮಿಸಿದ್ದಾರೆ. ಜಯಂತ್ ಟಿ ಅವರ ಕುಟುಂಬ ಸದಸ್ಯರಿಂದ SIT ಅಧಿಕಾರಿಗಳು ಮಹತ್ವದ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದು, ಮೊಬೈಲ್ ಪರಿಶೀಲನೆ ನಡೆಸಿದ್ದಾರೆ. ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬುರುಡೆ ಗ್ಯಾಂಗ್‌ನ ಅಸಲಿಯತ್ತು ಬಯಲು – ಚಿನ್ನಯ್ಯ ಕೋರ್ಟ್‌ಗೆ ತಂದಿದ್ದ ಬುರುಡೆ ಪುರುಷನದ್ದು!

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಮಾಡಿ ವೈರಲ್ ಮಾಡಿದ್ದ ಯೂಟ್ಯೂಬರ್‌ಗಳ ಸುತ್ತ SIT ತನಿಖೆಯ ಬಲೆ ಬಿಗಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಮತ್ತು ಪ್ರಚೋದನಕಾರಿ ವೀಡಿಯೋಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳಿಗೆ SIT ನೋಟಿಸ್ ಜಾರಿ ಮಾಡಿದೆ. ವಿವಾದಾತ್ಮಕ ಯೂಟ್ಯೂಬರ್ ಸಮೀರ್ ಎಂ.ಡಿ. ಸೇರಿದಂತೆ ಹಲವು ಯೂಟ್ಯೂಬರ್‌ಗಳು SIT ಕಚೇರಿಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಸದ್ಯ ಯೂಟ್ಯೂಬರ್ ಸಂಚಾರಿ ಸ್ಟುಡಿಯೋ ಸಂತೋಷ್ SIT ವಿಚಾರಣೆಗೆ ಹಾಜರಾಗಿದ್ದು, ಅವರ ಹೇಳಿಕೆಗಳನ್ನು ಅಧಿಕಾರಿಗಳು ಪಡೆದಿದ್ದಾರೆ. ಯೂಟ್ಯೂಬರ್‌ಗಳಿಗೆ ಅವರ ವಿಡಿಯೋಗಳ ಹಿಂದಿನ ಉದ್ದೇಶ, ಚಿನ್ನಯ್ಯನ ಸಂದರ್ಶನದ ಸತ್ಯಾಸತ್ಯತೆ. ಹಣಕಾಸಿನ ಮೂಲ ಮತ್ತು ಪ್ರಕರಣದ ಬಗ್ಗೆ ಮಾಹಿತಿ ನೀಡಿದವರಾರು ಎಂಬ ಕುರಿತು SIT ಅಧಿಕಾರಿಗಳು ಪ್ರಶ್ನೆಗಳನ್ನ ಕೇಳಿದ್ದಾರೆ.

    ಬಂಧಿತ ಆರೋಪಿ ಚೆನ್ನಯ್ಯನ ಹೇಳಿಕೆ ಆಧಾರದ ಮೇಲೆಯೇ SIT ತನಿಖೆ ನಡೆಯುತ್ತಿದೆ. ಆತನ ಹೇಳಿಕೆಯನ್ನು ದೃಢಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಹಿಂದೆ ಶವ ಹೂಳುವ ವಿಚಾರದಲ್ಲಿ ಅಕ್ರಮ ನಡೆದಿದೆಯೇ ಎಂಬ ಅನುಮಾನದ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್‌ನ ಪಿಡಿಒ ಹಾಗೂ ಸಿಬ್ಬಂದಿ ಕೂಡ SIT ಕಚೇರಿಗೆ ಸಾಕಷ್ಟು ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಪಂಚಾಯತ್ ದಾಖಲೆಗಳ ಮೂಲಕ ಶವ ದಫನ ಪ್ರಕ್ರಿಯೆಯಲ್ಲಿ ಅಕ್ರಮವಾಗಿದೆಯೇ ಎಂದು SIT ತಂಡ ಕೂಲಂಕಷವಾಗಿ ಪರಿಶೀಲಿಸಲಿದೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಗಳ ತನಿಖೆ ಆದಷ್ಟು ಬೇಗ ಮುಕ್ತಾಯ: ಪರಮೇಶ್ವರ್

  • ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡಿದೆ: ನಿಖಿಲ್ ಕುಮಾರಸ್ವಾಮಿ

    ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡಿದೆ: ನಿಖಿಲ್ ಕುಮಾರಸ್ವಾಮಿ

    ಬೆಂಗಳೂರು: ಧರ್ಮಸ್ಥಳ ಕೇಸ್‌ನಲ್ಲಿ (Dharmasthala Case) ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ (SIT) ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಧರ್ಮಸ್ಥಳ ಕೇಸ್‌ನಲ್ಲಿ ಬುರುಡೆ ಗ್ಯಾಂಗ್ ಮೋಸ ಮಾಡಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಎಂಬ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಈ ಸರ್ಕಾರ (Congress) ಮಾಡಿದೆ. ಎಸ್‌ಐಟಿಯನ್ನ ತರಾತುರಿಯಲ್ಲಿ ಈ ಸರ್ಕಾರ ಮಾಡಿತು. ಎಸ್‌ಐಟಿ ತನಿಖೆ ಮಾಡಿದ್ರು. ಇವರಿಗೆ ಏನು ಸಿಕ್ತು? ಏನು ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬುರುಡೆ ದೆಹಲಿಗೆ ಎತ್ತಿಕೊಂಡು ಹೋಗಿದ್ದು, ಸುಪ್ರೀಂ ಕೋರ್ಟ್‌ಗೆ ಹೋಗಿದ್ದು ಎಲ್ಲಾ ಗೊತ್ತು: ಡಿಕೆಶಿ ಬಾಂಬ್‌

    ಡಿಕೆ ಶಿವಕುಮಾರ್ ಅವರು ಸದನದಲ್ಲಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಎಂದು ಹೇಳಿದ್ದರು. ಆದರೆ ಷಡ್ಯಂತ್ರ ಮಾಡಿದವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಧಾರ್ಮಿಕ ಕ್ಷೇತ್ರಕ್ಕೆ ಅಪಮಾನ ಮಾಡೋ ಕೆಲಸ ಮಾತ್ರ ಈ ಸರ್ಕಾರ ಮಾಡಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಗಡಿ ಜಿಲ್ಲೆ ಬೀದರ್‌ನಲ್ಲಿ ಧಾರಾಕಾರ ಮಳೆಗೆ ಭಾರೀ ಅವಾಂತರ – ರಸ್ತೆ ಸಂಚಾರ ಬಂದ್‌

  • ‘ಹಣದ ಆಸೆಗೆ ಬಲಿಯಾಗಿದ್ದೇನೆ, ದಯಾಮಾಡಿ ಬಚಾವ್ ಮಾಡಿ’ – ಸುಂದರ ಗೌಡರ ಕಾಲಿಗೆ ಬಿದ್ದು ಗೋಗರೆದಿದ್ದ ಚಿನ್ನಯ್ಯ

    ‘ಹಣದ ಆಸೆಗೆ ಬಲಿಯಾಗಿದ್ದೇನೆ, ದಯಾಮಾಡಿ ಬಚಾವ್ ಮಾಡಿ’ – ಸುಂದರ ಗೌಡರ ಕಾಲಿಗೆ ಬಿದ್ದು ಗೋಗರೆದಿದ್ದ ಚಿನ್ನಯ್ಯ

    ಮಂಗಳೂರು: ಹಣದ ಆಸೆಗಾಗಿ ಷಡ್ಯಂತ್ರಕ್ಕೆ ಒಳಗಾದೆ ಎಂದು ಚಿನ್ನಯ್ಯ (Chinnaiah) ಎಸ್‌ಐಟಿ (SIT) ಕಚೇರಿಯಲ್ಲೇ ನನ್ನ ಕಾಲಿಗೆ ಬಿದ್ದಿದ್ದ ಎಂದು ನೇತ್ರಾವತಿ ಸ್ನಾನಘಟ್ಟದ ಮಾಹಿತಿ ಕೇಂದ್ರದಲ್ಲಿ ಮೇಲ್ವಿಚಾರಕರಾಗಿದ್ದ ಸುಂದರ ಗೌಡ (Sundar Gowda) ಬಜಿಲ ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನಾನು 1996ರಿಂದ 2000ದ ತನಕ ನೇತ್ರಾವತಿ ಸ್ನಾನ ಘಟ್ಟದ ಮಾಹಿತಿ ಕೇಂದ್ರದಲ್ಲಿ ಮೇಲ್ವಿಚಾರಕನಾಗಿದ್ದೆ. ಆ ಸಂದರ್ಭದಲ್ಲಿ ಚಿನ್ನಯ್ಯ, ಅಕ್ಕ, ಅಣ್ಣ, ಬಾವ, ಅತ್ತಿಗೆ ಎಲ್ಲರೂ ಶುಚಿತ್ವದ ಕೆಲಸ ಮಾಡುತ್ತಿದ್ದರು. ಶುಚಿತ್ವ ಕೆಲಸಕ್ಕೆಂದೇ ಆತನನ್ನು ನೇಮಕ ಮಾಡಿದ್ದು, ಅದನ್ನೇ ಮಾಡುತ್ತಿದ್ದ. ಚಿನ್ನಯ್ಯ ಹೇಳಿದ್ದು ಎಲ್ಲವೂ ಸತ್ಯಕ್ಕೆ ದೂರವಾದ ವಿಚಾರ. ಕ್ಷೇತ್ರದ ಹೆಸರು ಹಾಳು ಮಾಡಬೇಕು, ಷಡ್ಯಂತ್ರ ಮಾಡಬೇಕು ಎಂಬುದೇ ಆತನ ಉದ್ದೇಶವಾಗಿತ್ತು ಎಂದು ಕಿಡಿಕಾರಿದರು. ಇದನ್ನೂ ಓದಿ: ಎಸ್‌ಐಟಿ ತನಿಖೆಗೆ ವೀರೇಂದ್ರ ಹೆಗಡೆ ಸ್ವಾಗತ: ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು ಎಂದ ಸಿಎಂ

    ನೇತ್ರಾವತಿ ನದಿಯಲ್ಲಿ ಶವ ತೇಲುತ್ತಾ ಬಂದರೆ ನಾವು ಅದನ್ನ ಹೂತು ಹಾಕುವ ಕೆಲಸ ಮಾಡೋದಿಲ್ಲ. ಏನಿದ್ರೂ ಪೊಲೀಸರಿಗೆ ತಿಳಿಸಿ ಆಸ್ಪತ್ರೆಗೆ ಸಾಗಿಸುತ್ತಿದ್ದೆವು. ಆತ ಮೃತದೇಹವನ್ನ ಕಾರಿಗೆ ಶಿಫ್ಟ್ ಮಾಡುವ, ಪೊಲೀಸರ ಜೊತೆ ಆಸ್ಪತ್ರೆಗೆ ಹೋಗುವ ಕೆಲಸ ಮಾಡುತ್ತಿದ್ದ. ಒಂದೇ ಒಂದು ಶವ ಹೂತಾಕುವ ಕೆಲಸ ಆತ ಮಾಡಿಲ್ಲ. ಎಸ್‌ಐಟಿ ಅಧಿಕಾರಿಗಳು ನನ್ನನ್ನು ಕರೆದಿದ್ದರು. ನಿಮ್ಮ ಮೇಲೆ ಆರೋಪಿ ಚಿನ್ನಯ್ಯ ಅಪವಾದ ಹಾಕಿದ್ದಾನೆ ಎಂದಿದ್ದರು. ಆತ ಶವ ಹೂತಿಟ್ಟ ವಿಚಾರದಲ್ಲಿ ನನ್ನ ಮೇಲೆ ಅಪವಾದ ಹಾಕಿದ್ದ. ಎರಡನೇ ಬಾರಿ ವಿಚಾರಣೆಗೆ ಚಿನ್ನಯ್ಯ ಹಾಗೂ ನನ್ನನ್ನು ಒಟ್ಟಿಗೆ ವಿಚಾರಣೆ ಮಾಡಿದ್ದರು. ವಿಚಾರಣೆ ವೇಳೆ ನಾನು ಷಡ್ಯಂತ್ರಕ್ಕೆ ಬಲಿಯಾಗಿದ್ದೇನೆ, ನಾನು ದುಡ್ಡಿನ ಆಸೆಗೆ ಇದೆಲ್ಲವನ್ನೂ ಮಾಡಿದ್ದು, ನನ್ನದು ತಪ್ಪಾಯ್ತು, ನನ್ನನ್ನು ಬಚಾವ್ ಮಾಡಿ ಎಂದು ಕಾಲಿಗೆ ಬಿದ್ದಿದ್ದ ಎಂದರು. ಇದನ್ನೂ ಓದಿ: ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

    ಎಲ್ಲ ಕೆಲಸ ಚೆನ್ನಾಗಿ ಮಾಡುತ್ತಿದ್ದ, ಆತನಿಗೆ ಎಲ್ಲವೂ ಕ್ಷೇತ್ರದಿಂದ ಕೊಡಲಾಗಿತ್ತು. ಊಟ, ವಸತಿ, ಸಂಬಳ ಎಲ್ಲವೂ ಆತನಿಗೆ ನೀಡಲಾಗುತ್ತಿತ್ತು. ಊರಿಗೆ ಹೋಗುವ ಖರ್ಚನ್ನು ಕೂಡ ಕ್ಷೇತ್ರ ನೀಡುತ್ತಿತ್ತು. ಕ್ಷೇತ್ರವನ್ನು ಮಲಿನ ಮಾಡಬೇಕು, ಪೂಜ್ಯರಿಗೆ ಕಳಂಕ ತರುವ ಉದ್ದೇಶದಿಂದ ಗ್ಯಾಂಗ್ ಮಾಡಿದ ಷಡ್ಯಂತ್ರಕ್ಕೆ ಆತ ಬಲಿಯಾಗಿದ್ದಾನೆ. ಈಗ ಸತ್ಯ ದರ್ಶನ ಹೊರಗೆ ಬರುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: Andhra Pradesh | ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

  • ಎಸ್‌ಐಟಿ ತನಿಖೆಗೆ ವೀರೇಂದ್ರ ಹೆಗಡೆ ಸ್ವಾಗತ: ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು ಎಂದ ಸಿಎಂ

    ಎಸ್‌ಐಟಿ ತನಿಖೆಗೆ ವೀರೇಂದ್ರ ಹೆಗಡೆ ಸ್ವಾಗತ: ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು ಎಂದ ಸಿಎಂ

    ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ (Dharmasthala Case) ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(SIT) ತನಿಖೆ ಬಗ್ಗೆ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಸ್ವಾಗತ ಮತ್ತು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆಶಿವಕುಮಾರ್‌ (DK Shivakumar) ಪ್ರತಿಕ್ರಿಯಿಸಿದ್ದಾರೆ.

    ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  ಇದನ್ನೂ ಓದಿ:  ಸರ್ಕಾರಕ್ಕೆ ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ: ವೀರೇಂದ್ರ ಹೆಗ್ಗಡೆ

     

    ಇನ್ನೊಂದೆಡೆ ಡಿಸಿಎಂ ಡಿಕೆಶಿ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸರ್ಕಾರ ಯಾವತ್ತಿಗೂ ಯಾರಿಗೂ ತೊಂದರೆ ಬಯಸುವುದಿಲ್ಲ.ಕಾನೂನಿನ ಚೌಕಟ್ಟಿನೊಳಗೆ ಏನು ನ್ಯಾಯ ಒದಗಿಸಬೇಕೋ ಅದನ್ನು ಮಾಡುತ್ತೇವೆ ಎಂದರು. ಇದನ್ನೂ ಓದಿ:  ಧರ್ಮಸ್ಥಳ ಕೇಸ್‌ | ರಾಜ್ಯ ಸರ್ಕಾರವನ್ನೇ ಯಾಮಾರಿಸಿದ ʻಬುರುಡೆʼ ಗ್ಯಾಂಗ್ – ಸುಪ್ರೀಂ ಆದೇಶ ಮುಚ್ಚಿಟ್ಟು ಮಹಾ ಮೋಸ

    ತಪ್ಪು ಮಾಡಿದವರಿಗೂ ಕಾನೂನು ರೀತಿಯಲ್ಲಿ ಕ್ರಮ ವಹಿಸಲಾಗುತ್ತದೆ. ಇವತ್ತಿನವರೆಗೂ ನಾವು ಧರ್ಮಸ್ಥಳ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಿಲ್ಲ.ನಾವು ಕೂಡ ಅಧಿಕಾರಿಗಳ ಬಳಿ ಏನು ಅಂತಾ ಕೇಳಿಲ್ಲ. ಇಷ್ಟು ದಿನಗಳ ಕಾಲ ಮಾಧ್ಯಮಗಳಲ್ಲಿ ಬಂದ ವರದಿ ಬಗ್ಗೆ ನಾವು ಮಾತಾಡಿದ್ದೇವೆ. ಮುಂದೆ ಅಂತಿಮವಾದ ವರದಿ ಬರಲಿ, ಆ ನಂತರ ಮಾತಾಡೋಣ ಎಂದು ಡಿಕೆಶಿ ಹೇಳಿದರು.

  • ಧರ್ಮಸ್ಥಳ ಕೇಸ್‌ನಲ್ಲಿ ರಾಜ್ಯ ಸರ್ಕಾರ ಜನರ ಕ್ಷಮೆಯಾಚಿಸಬೇಕು: ರವಿಕುಮಾರ್

    ಧರ್ಮಸ್ಥಳ ಕೇಸ್‌ನಲ್ಲಿ ರಾಜ್ಯ ಸರ್ಕಾರ ಜನರ ಕ್ಷಮೆಯಾಚಿಸಬೇಕು: ರವಿಕುಮಾರ್

    ಬೆಂಗಳೂರು: ಧರ್ಮಸ್ಥಳ ಕೇಸ್‌ನಲ್ಲಿ (Dharmasthala Case) ರಾಜ್ಯ ಸರ್ಕಾರ (Congress) ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ನಾಯಕ, ಎಂಎಲ್‌ಸಿ ರವಿಕುಮಾರ್ (N Ravikumar) ಆಗ್ರಹ ಮಾಡಿದ್ದಾರೆ.

    ಧರ್ಮಸ್ಥಳ ಕೇಸ್‌ನಲ್ಲಿ ಬುರುಡೆ ಗ್ಯಾಂಗ್ ಸುಳ್ಳು ಹೇಳಿದ ವಿಚಾರಕ್ಕೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ ಮಾಡಿರುವ ಎಲ್ಲರೂ ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕಿದ್ದರು. ಸುಪ್ರೀಂಕೋರ್ಟ್ ಅವರ ಅರ್ಜಿ ವಜಾ ಮಾಡಿತ್ತು. ಕೋರ್ಟ್‌ಗೆ ಅರ್ಜಿ ಹಾಕಿರೋರಿಗೆ ಸುಪ್ರೀಂಕೋರ್ಟ್ ಖಾರವಾಗಿ ಪ್ರತಿಕ್ರಿಯೆ ನೀಡಿದೆ. ಬುರುಡೆ ಗ್ಯಾಂಗ್ ಅರ್ಜಿ ವಜಾ ಮಾಡಿದ್ರೂ ರಾಜ್ಯ ಸರ್ಕಾರ ಇಲ್ಲಿ ಎಸ್‌ಐಟಿ ರಚನೆ ಮಾಡಿತ್ತು. ಸುಪ್ರೀಂಕೋರ್ಟ್ ತೀರ್ಪಿಗೆ ಸರ್ಕಾರ ಹೀಗೆ ಮಾಡೋದಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸರ್ಕಾರಕ್ಕೆ ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ: ವೀರೇಂದ್ರ ಹೆಗ್ಗಡೆ

    ಎಸ್‌ಐಟಿ ತನಿಖೆ ಮಾಡಿದರೂ ಏನೂ ಸಿಕ್ಕಿಲ್ಲ. ಸುಪ್ರೀಂಕೋರ್ಟ್ ಆದೇಶವೇ ಗೊತ್ತಿಲ್ಲ ಅಂತ ಜಾಣ ನಡೆ ಸರ್ಕಾರ ತೋರಿಸಿದೆ. ಸರ್ಕಾರ ಜನರ ಮುಂದೆ ಬೆತ್ತಲೆ ಆಗಿದೆ. ಸರ್ಕಾರ ಕೂಡಲೇ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ಕೊಡಬೇಕು. ಸುಪ್ರೀಂಕೋರ್ಟ್ ತೀರ್ಪು ಇದ್ದರೂ ಹೇಗೆ ತನಿಖೆ ಮಾಡಿದ್ರಿ ಅಂತ ಸರ್ಕಾರ ಉತ್ತರ ಕೊಡಬೇಕು. ಸಿದ್ದರಾಮಯ್ಯ ಸರ್ಕಾರಕ್ಕೆ ಬುದ್ಧಿ ಭ್ರಮಣೆ ಆಗಿದೆ. ಸಿದ್ದರಾಮಯ್ಯ ಸರ್ಕಾರ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.  ಇದನ್ನೂ ಓದಿ: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ – ಮಹೇಶ್ ಶೆಟ್ಟಿ ತಿಮರೋಡಿಗೆ ಅಂತಿಮ ನೋಟಿಸ್ ಜಾರಿ

  • ಸರ್ಕಾರಕ್ಕೆ ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ: ವೀರೇಂದ್ರ ಹೆಗ್ಗಡೆ

    ಸರ್ಕಾರಕ್ಕೆ ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ: ವೀರೇಂದ್ರ ಹೆಗ್ಗಡೆ

    – ಸತ್ಯದಿಂದ ಇದ್ದೇವೆ, ಮುಂದೆಯೂ ಇರುತ್ತೇವೆ ಎಂದ ಧರ್ಮಾಧಿಕಾರಿ

    ಮಂಗಳೂರು: ಸರ್ಕಾರಕ್ಕೆ ನಾನು ಆಭಾರಿ, ಎಸ್‌ಐಟಿ (SIT) ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ (Veerendra Heggade) ಹೇಳಿದ್ದಾರೆ.

    ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಕೋವಿಡ್ ಹಾಗೂ ಈಗ ಅನೇಕ ಪುಸ್ತಕಗಳನ್ನು ನಾನು ಓದುತ್ತಿದ್ದೇನೆ. ಸಿದ್ದಗಂಗಾ ಶ್ರೀಗಳ ಹಲವು ಪುಸ್ತಕ ನಾನು ಓದಿದ್ದೇನೆ. ನಮ್ಮನ್ನ ಹೊಗಳಿದ್ದೀರಿ, ಆದರೆ ನಮ್ಮ ಸೇವೆ ಧರ್ಮ ನಮಗೆ ಮುಖ್ಯ ಅಂತ ಇದೆ. ಸಿದ್ದಗಂಗಾ ಶ್ರೀಗಳು 108 ವರ್ಷ ಬದುಕಿದವರು ಹೇಳಿದ ಮಾತು. ಶತ್ರುತ್ವ ಯಾಕೆ ಬಂತು ಅಂತ ನಮಗೆ ಗೊತ್ತಿಲ್ಲ. ಇಷ್ಟು ಹಗೆತನ, ಅಪವಾದ ಯಾಕೆ ಬಂತು ಅಂತ ಗೊತ್ತಿಲ್ಲ. ನಾವು ಸೇವೆ ಮಾಡುತ್ತೇವೆ, ಆದರೆ ಸೇವೆ ಪ್ರಚಾರದ ವಸ್ತುವಲ್ಲ. ಇಷ್ಟು ವರ್ಷ ನಾವು ಆರೋಗ್ಯವಾಗಿರಲು ನಮ್ಮ ನಿಸ್ವಾರ್ಥ ಸೇವೆಯೇ ಕಾರಣ. ನಮ್ಮ ಎಲ್ಲಾ ಕಾರ್ಯಕ್ರಮಗಳನ್ನು ನೀವು ಎಲ್ಲರೂ ಗಮನಿಸಿದ್ದೀರಿ. ನಾವು ಇಲ್ಲಿ ನಿಮಿತ್ತ ಮಾತ್ರ, ಆದರೆ ಮುಂದುವರೆಸಿಕೊಂಡು ಹೋಗಿದ್ದು ಅದಕ್ಕೆ ಸಂಬಂಧಪಟ್ಟ ಇಲಾಖೆಯವರು. ಕೆಲವರು ಪ್ರೀತಿಯಲ್ಲಿ ಟೀಕೆ ಮಾಡಿದ್ರು, ಇವರು ಹಾಗೆ ಟೀಕೆ ಮಾಡಿಲ್ಲ. ನಿಮಗೆ ನಾನು ಎಷ್ಟು ಕೃತಜ್ಞತೆ ಸಲ್ಲಿಸಿದರೂ ಕಡಿಮೆಯೇ ಎಂದರು. ಇದನ್ನೂ ಓದಿ: MiG-21 Retires | 6 ದಶಗಳ ಸೇವೆಗೆ ವಿದಾಯ – ʻಹಾರುವ ಶವಪೆಟ್ಟಿಗೆʼ ಮಿಗ್‌-21ಗೆ ಗುಡ್‌ಬೈ ಹೇಳಿದ ಭಾರತ

    ಧರ್ಮಸ್ಥಳ (Dharmasthala) ಬೇರೆ, ಧರ್ಮಸ್ಥಳದ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ ಅಂತ ನೀವು ನೋಡಿದ್ದೀರಿ. ಯಾಕೆ ಇಷ್ಟು ದ್ವೇಷ ನನ್ನ ಮೇಲೆ ಇದೆ ಅಂತ ನನಗೆ ಗೊತ್ತಾಗಿಲ್ಲ. ಈಗ ಮನಸ್ಸು ಸ್ವಲ್ಪ ಹಗುರವಾಗಿದೆ, ಎತ್ತರದ ಬೆಟ್ಟದಿಂದ ನೀರು ಹರಿದಿದೆ. ನಮ್ಮ ಮೇಲೆ ದೃಢವಾದ ನಂಬಿಕೆ ಇಟ್ಟ ಎಲ್ಲರಿಗೂ ನಾನು ಆಭಾರಿ. ಈಗಾಗಲೇ ಲಕ್ಷಾಂತರ ಜನರು ಇಲ್ಲಿಗೆ ಬಂದು ಹೋಗಿದ್ದಾರೆ. ನಿಮ್ಮ ಧರ್ಮ ಸೋತರೆ, ನಮ್ಮ ಧರ್ಮ ಸೋತ ಹಾಗೆ ಅಂತ ಹೇಳಿದ್ದಾರೆ. ಈ ಶತ್ರುತ್ವ ಯಾಕೆ ಅಂತ ಕೇಳ್ತಾರೆ, ನನಗೂ ಈ ದ್ವೇಷ ಯಾಕೆ ಅಂತ ಬೇಕು. ನಾವು ಯಾರನ್ನೂ ಹೀಯಾಳಿಸಿಲ್ಲ, ದ್ವೇಷ ಕೂಡ ಮಾಡಿಲ್ಲ. ನಾವು ತಪ್ಪು ಮಾಡದ ಕಾರಣ ನಮಗೆ ಆತ್ಮವಿಶ್ವಾಸ ಇದೆ ಎಂದು ಹೇಳಿದರು. ಇದನ್ನೂ ಓದಿ: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ – ಮಹೇಶ್ ಶೆಟ್ಟಿ ತಿಮರೋಡಿಗೆ ಅಂತಿಮ ನೋಟಿಸ್ ಜಾರಿ

    ಬೆಂಗಳೂರು ಅಥವ ಎಲ್ಲೋ ಕೂತು ಟೀಕೆ ಮಾಡೋರು ನಮಗೆ ಬೇಡ. ನಮಗೆ ನಮ್ಮವರು ಬೇಕು, ನಮ್ಮ ಜೊತೆ ನಿಲ್ಲೋರು ಬೇಕು. ನಮ್ಮ ಮೇಲೆ ಪ್ರೀತಿ ತೋರಿದ ಎಲ್ಲಾ ಹೆಣ್ಣುಮಕ್ಕಳಿಗೂ ನಾನು ಆಭಾರಿ. ಎಸ್‌ಐಟಿ ವರದಿ ಅರ್ಧ ಬಂದ ಕಾರಣ ನಾನು ಇಷ್ಟು ಧೈರ್ಯವಾಗಿ ಮಾತನಾಡುತ್ತಿದ್ದೇನೆ. ನಮ್ಮ ಹೊಳಪು ಹಾಗೇ ಉಳಿದಿದೆ, ಇದಕ್ಕೆ ನಾನು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ ನೋಡಿಕೊಳ್ಳುತ್ತಾರೆ. ನಾವು ಸತ್ಯದಿಂದ ಇದ್ದೇವೆ, ಹಾಗೆಯೇ ಮುಂದೆಯೂ ಇರುತ್ತೇವೆ. ಮುಂದಿನ ದಿನಗಳು ಉತ್ತಮವಾಗಿರಲಿ, ಎಲ್ಲರಿಗೂ ಧನ್ಯವಾದಗಳು ಎಂದು ನುಡಿದರು. ಇದನ್ನೂ ಓದಿ: ಪಂಚಭೂತಗಳಲ್ಲಿ ಲೀನರಾದ ಎಸ್‌.ಎಲ್‌ ಭೈರಪ್ಪ – ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

  • ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ – ಮಹೇಶ್ ಶೆಟ್ಟಿ ತಿಮರೋಡಿಗೆ ಅಂತಿಮ ನೋಟಿಸ್ ಜಾರಿ

    ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ – ಮಹೇಶ್ ಶೆಟ್ಟಿ ತಿಮರೋಡಿಗೆ ಅಂತಿಮ ನೋಟಿಸ್ ಜಾರಿ

    ಮಂಗಳೂರು: ಎಸ್‌ಐಟಿ (SIT) ಶೋಧ ಸಂದರ್ಭ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆ (Illegal Arms Collection) ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ (MaheshShetty Thimarody) ಮೂರನೇ ಹಾಗೂ ಅಂತಿಮ ನೋಟಿಸ್ ಅನ್ನು ಜಾರಿ ಮಾಡಲಾಗಿದೆ.

    ಮನೆ ಶೋಧ ಸಂದರ್ಭ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು 2 ತಲವಾರು ಮತ್ತು ಒಂದು ಬಂದೂಕು ವಶಕ್ಕೆ ಪಡೆದಿದ್ದರು. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ಎರಡು ನೋಟಿಸ್ ಜಾರಿ ಮಾಡಿದ್ದರು. ಆದರೆ ಮಹೇಶ್ ಶೆಟ್ಟಿ ತಿಮರೋಡಿ ಎರಡು ಬಾರಿಯೂ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅಂತಿಮ ನೋಟಿಸ್ ಅನ್ನು ಜಾರಿ ಮಾಡಲಾಗಿದೆ. ಇದನ್ನೂ ಓದಿ: ಪಂಚಭೂತಗಳಲ್ಲಿ ಲೀನರಾದ ಎಸ್‌.ಎಲ್‌ ಭೈರಪ್ಪ – ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    ಇಂದು ಬೆಳ್ತಂಗಡಿ ಠಾಣೆಯ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ತೆರಳಿ ನೋಟಿಸ್ ಅಂಟಿಸಿದ್ದಾರೆ. ಸೆ.29ಕ್ಕೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಮನೆಯ ಗೋಡೆಗೆ ನೋಟೀಸ್ ಅಂಟಿಸಲಾಗಿದೆ. ಸೆ.29ಕ್ಕೆ ವಿಚಾರಣೆಗೆ ಹಾಜರಾಗದೇ ಇದ್ದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಕ್ರಮಕೈಗೊಳ್ಳುವ ಸಾಧ್ಯತೆಯಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಸರ್ಕಾರಿ ಬಸ್ ಪಲ್ಟಿ – ಪ್ರಯಾಣಿಕನ ಕಾಲು ಮುರಿತ, 15 ಮಂದಿಗೆ ಗಾಯ