Tag: sit

  • ಸೌಜನ್ಯ ಮಾವ ವಿಠಲ ಗೌಡ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರಿಂದ ಎಸ್‌ಐಟಿಗೆ ದೂರು

    ಸೌಜನ್ಯ ಮಾವ ವಿಠಲ ಗೌಡ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರಿಂದ ಎಸ್‌ಐಟಿಗೆ ದೂರು

    ಮಂಗಳೂರು: ಸೌಜನ್ಯ ಮಾವ ವಿಠಲ ಗೌಡ (Vittal Gowda) ವಿರುದ್ಧ ಧರ್ಮಸ್ಥಳ ಗ್ರಾಮಸ್ಥರು ಎಸ್‌ಐಟಿಗೆ ದೂರು ನೀಡಿದ್ದಾರೆ.

    ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಧರ್ಮಸ್ಥಳ ಗ್ರಾಮಸ್ಥ ಸಂದೀಪ್ ರೈ ದೂರು ಕೊಟ್ಟಿದ್ದಾರೆ. ತನಿಖಾ ಹಂತದಲ್ಲಿ ವಿಠಲ ಗೌಡನಿಂದ ಎಸ್ಐಟಿ ತನಿಖೆ ದಾರಿ ತಪ್ಪಿಸುತ್ತಿದ್ದಾರೆಂದು ಆರೋಪ ಹೊರಿಸಲಾಗಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ

    ವಿಚಾರಣೆ ಮುಗಿಸಿ ಹೊರಬಂದು ವಿಡಿಯೋ ಹರಿಬಿಟ್ಟಿದ್ದಾರೆ. ಎಸ್ಐಟಿ ಯಾವುದೇ ಮಾಹಿತಿ ನೀಡದೇ ಇದ್ದರೂ ವಿಡಿಯೋ ಹರಿಬಿಟ್ಟು ತನಿಖೆ ಹಾದಿ ತಪ್ಪಿಸುತ್ತಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

    ವಿಠಲ ಗೌಡನ ಹಿಂದೆ ಕೆಲ ವ್ಯಕ್ತಿಗಳು ಸೇರಿಕೊಂಡು ಷಡ್ಯಂತ್ರ ನಡೆಸುತ್ತಿದ್ದಾರೆ. ವಿಚಾರಣೆ ಮುಗಿಸಿ ಹೊರಗೆ ಬಂದ ಬಳಿಕ ಯೂಟ್ಯೂಬ್‌ಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ಮೂಲಕ ತನಿಖೆಯ ಹಾದಿ ತಪ್ಪಿಸಲು ವಿಠಲ ಗೌಡ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಮತ್ತೆ ಅಸ್ಥಿಪಂಜರ ಸದ್ದು – ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ

    ಸಾಕ್ಷ್ಯ ನಾಶ ಮಾಡಲು ಸಾರ್ವಜನಿಕವಾಗಿ ಹೇಳಿಕೆ ನೀಡಿದ ಬಗ್ಗೆಯೂ ದೂರು ನೀಡಲಾಗಿದೆ. ವಿಠಲ ಗೌಡ ವಿರುದ್ಧ ತನಿಖೆ ನಡೆಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ಸ್ವೀಕರಿಸಿರುವ ಎಸ್‌ಐಟಿ ಅಧಿಕಾರಿಗಳು ಸ್ವೀಕೃತಿ ನೀಡಿದ್ದಾರೆ.

  • ಧರ್ಮಸ್ಥಳದಲ್ಲಿ ಮತ್ತೆ ಅಸ್ಥಿಪಂಜರ ಸದ್ದು – ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ

    ಧರ್ಮಸ್ಥಳದಲ್ಲಿ ಮತ್ತೆ ಅಸ್ಥಿಪಂಜರ ಸದ್ದು – ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ

    ಮಂಗಳೂರು: ಧರ್ಮಸ್ಥಳದ ಬುರುಡೆ ಕೇಸ್‌ನಲ್ಲಿ (Dharmasthala Case) ಸೌಜನ್ಯ ಮಾವ ವಿಠಲಗೌಡ ಬಂಗ್ಲೆಗುಡ್ಡದಲ್ಲಿ (Banglegudde) ರಾಶಿರಾಶಿ ಕಳೇಬರ ಸಿಗುತ್ತವೆ ಎಂಬ ವೀಡಿಯೋ ಹೇಳಿಕೆ ಬೆನ್ನಲ್ಲೇ ಎಸ್‌ಐಟಿ (SIT) ತನಿಖೆಗೆ ಟ್ವಿಸ್ಟ್ ಸಿಕ್ಕಿದೆ.

    ನೇತ್ರಾವತಿ ನದಿ (Nethravathi River) ದಡದ ಬಂಗ್ಲೆಗುಡ್ಡಕ್ಕೆ ಎಸ್‌ಐಟಿ ಎಂಟ್ರಿ ಕೊಟ್ಟಿದೆ. ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವದಲ್ಲಿ ಸುಮಾರು 7 ಗಂಟೆಗಳ ಕಾಲ ಮಹಜರು ನಡೆಯಿತು. ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ಟೀಮ್, ಕಂದಾಯ ಇಲಾಖೆ, ಪಂಚಾಯತ್ ಸಿಬ್ಬಂದಿ ಮಹಜರಿನಲ್ಲಿ ಭಾಗಿಯಾಗಿದ್ದರು. 13 ಎಕರೆ ವಿಸ್ತೀರ್ಣದ ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ ಎನ್ನಲಾಗಿದೆ. ಇದನ್ನೂ ಓದಿ: ತಿಮರೋಡಿ ವಿರುದ್ಧ ಎಸ್‌ಐಟಿಯಿಂದ ಆರ್ಮ್ಸ್ ಆಕ್ಟ್ ಅಡಿ ಕೇಸ್‌ ದಾಖಲು

    ಪಾಯಿಂಟ್ 11ರ ಆಸುಪಾಸಿನಲ್ಲಿ ಭೂಮಿಯ ಮೇಲ್ಭಾಗದಲ್ಲೇ ಮಾನವನ ಮೂಳೆಗಳು ಪತ್ತೆಯಾಗಿವೆ. ಮೂಳೆ ಪತ್ತೆಯಾದ ಸ್ಥಳದಲ್ಲೇ ಬಟ್ಟೆಯ ತುಂಡುಗಳೂ ಪತ್ತೆಯಾಗಿವೆ. ಮೂಳೆಗಳನ್ನು ಪೈಪ್‌ಗಳಲ್ಲಿ ಸಂಗ್ರಹಿಸಿ, ಮಣ್ಣಿನ ಸ್ಯಾಂಪಲ್ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಅಟ್ರಾಸಿಟಿ ಕೇಸ್‌| ಯತ್ನಾಳ್‌ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌

  • ತಿಮರೋಡಿ ವಿರುದ್ಧ ಎಸ್‌ಐಟಿಯಿಂದ ಆರ್ಮ್ಸ್ ಆಕ್ಟ್ ಅಡಿ ಕೇಸ್‌ ದಾಖಲು

    ತಿಮರೋಡಿ ವಿರುದ್ಧ ಎಸ್‌ಐಟಿಯಿಂದ ಆರ್ಮ್ಸ್ ಆಕ್ಟ್ ಅಡಿ ಕೇಸ್‌ ದಾಖಲು

    ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Timarodi )ವಿರುದ್ದ ವಿಶೇಷ ತನಿಖಾ ತಂಡ (SIT) ಪ್ರಕರಣ ದಾಖಲಿಸಿದೆ. ಎಸ್‌ಪಿ ಸೈಮನ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರ್ಮ್ಸ್ ಆಕ್ಟ್ (Arms Act )ಅಡಿ ಪ್ರಕರಣ ದಾಖಲಿಸಿದ್ದಾರೆ.

    ಆಗಸ್ಟ್ 26 ರಂದು ಚಿನ್ನಯ್ಯನನ್ನು ತಿಮರೋಡಿಯ ನಿವಾಸಕ್ಕೆ ಕರೆದುಕೊಂಡು ಬಂದು ಎಸ್‌ಐಟಿ ಶೋಧಕಾರ್ಯ ನಡೆಸಿತ್ತು. ತಿಮರೋಡಿ ಮನೆಯಲ್ಲಿ ಎಸ್ಐಟಿ ಶೋಧ ಕಾರ್ಯ ನಡೆಸುವ ಸಂದರ್ಭ ಬಂದೂಕು ಸೇರಿದಂತೆ ಮಾರಕಾಸ್ತ್ರಗಳು ಪತ್ತೆಯಾಗಿತ್ತು.  ಇದನ್ನೂ ಓದಿ:  ಬಂಗ್ಲೆಗುಡ್ಡೆ ಅರಣ್ಯದಲ್ಲಿ ಎಸ್‌ಐಟಿಯಿಂದ ಅಸ್ಥಿಪಂಜರದ ಶೋಧ ಕಾರ್ಯ

    25.5 ಇಂಚು ಉದ್ದದ ಮರದ ಹಿಡಿಕೆಯುಳ್ಳ 2 ತಲವಾರು, ಒಂದು ಬಂದೂಕು ಸೇರಿದಂತೆ 44 ಸ್ವತ್ತುಗಳನ್ನ ಎಸ್‌ಐಟಿ ವಶಪಡಿಸಿಕೊಂಡಿತ್ತು. ಈಗ ಆರ್ಮ್ಸ್ ಆಕ್ಟ್ 1959 ಸೆಕ್ಷನ್ 25(1),25 (1-A) ,24(1-B)(A)) ಅಡಿಯಲ್ಲಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿದೆ.
  • ಬಂಗ್ಲೆಗುಡ್ಡೆ ಅರಣ್ಯದಲ್ಲಿ ಎಸ್‌ಐಟಿಯಿಂದ ಅಸ್ಥಿಪಂಜರದ ಶೋಧ ಕಾರ್ಯ

    ಬಂಗ್ಲೆಗುಡ್ಡೆ ಅರಣ್ಯದಲ್ಲಿ ಎಸ್‌ಐಟಿಯಿಂದ ಅಸ್ಥಿಪಂಜರದ ಶೋಧ ಕಾರ್ಯ

    – ಕಾಡಿನಿಂದ ಬುರುಡೆ ತಂದಿರುವ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಗೆ ಹೇಳಿದ್ದ ವಿಠಲ್ ಗೌಡ

    ಮಂಗಳೂರು: ಧರ್ಮಸ್ಥಳ (Dharmasthala) ಗ್ರಾಮದ ಬಂಗ್ಲೆಗುಡ್ಡೆ (Banglegudde) ರಹಸ್ಯ ಭೇದಿಸಲು ಎಸ್‌ಐಟಿ ಮುಂದಾಗಿದೆ. ಬಂಗ್ಲೆಗುಡ್ಡೆದ ದಟ್ಟಾರಣ್ಯದಲ್ಲಿ ಇಂದು ಮಹಜರಿಗೆ ಎಸ್‌ಐಟಿ ಹೋಗಿದೆ.

    ಅರಣ್ಯ ಇಲಾಖೆ ಲೋಕೋಪಯೋಗಿ ಇಲಾಖೆ, ಸೋಕೋ ಟೀಮ್, ಕಂದಾಯ ಇಲಾಖೆ, ಪಂಚಾಯತ್ ಸಿಬ್ಬಂದಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಮಹಜರಿಗೆ ಹಾಜರಿರಲು ಸೂಚನೆ ನೀಡಲಾಗಿದೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದಲ್ಲಿ ಮಹಜರು ಪ್ರಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಬಂಗ್ಲೆಗುಡ್ಡೆಯಲ್ಲಿ ಉತ್ಖನನ ಮಾಡುವಂತೆ ರಿಟ್ ಅರ್ಜಿ – ಅರಣ್ಯ ಇಲಾಖೆಯಿಂದಲೂ ಮಾಹಿತಿ ಪಡೆದ ಎಸ್‌ಐಟಿ

    ಭೂಮಿಯ ಮೇಲ್ಭಾಗದಲ್ಲಿರುವ ಅಸ್ಥಿಪಂಜರಗಳನ್ನ ಮಹಜರು ನಡೆಸಿ ತೆಗೆಯುವ ಸಾಧ್ಯತೆ ಇದೆ. ಬಂಗ್ಲೆಗುಡ್ಡೆಯಲ್ಲಿ ಭೂಮಿ ಅಗೆದು ಸ್ಥಳ ಪರಿಶೋಧನೆ ನಡೆಸೋದಿಲ್ಲ. ವಿಠಲ್ ಗೌಡ ಬುರುಡೆ ತಂದ ಹಾಗೂ ಅಡಗಿಸಿಟ್ಟಿದ್ದ ಸ್ಥಳದ ಸುತ್ತ ಎಸ್‌ಐಡಿ ಮಹಜರು ಮಾಡಲಿದೆ.

    ಬಂಗ್ಲೆಗುಡ್ಡೆ ಕಾಡಿನಿಂದ ಬುರುಡೆ ತಂದಿರುವ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಗೆ ವಿಠಲ್ ಗೌಡ ಹೇಳಿಕೆ ನೀಡಿದ್ದ. ಬುರುಡೆ ತಂದ ಹಾಗೂ ಅಡಗಿಸಿಟ್ಟ ಜಾಗದಲ್ಲಿ ಎರಡು ಬಾರಿ ಮಹಜರು ನಡೆಸಲಿದೆ. ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಮಾನವನ ಕಳೇಬರ ಇದೆ ಎಂದು ಹೇಳಿದ್ದ. ಮಹಜರು ವೇಳೆ ಸಾಕಷ್ಟು ಅಸ್ಥಿಪಂಜರ ಕಾಣಸಿಕ್ಕಿದೆ ಎಂದಿದ್ದ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ – ಬಂಗ್ಲೆ ಗುಡ್ಡ ಕಾಡಿನಲ್ಲಿ 3 ಅಸ್ಥಿಪಂಜರ ಪತ್ತೆ

    ನೇತ್ರಾವತಿ ಸ್ನಾನಘಟ್ಟದ ಬಳಿಯಿಂದ ಬಂಗ್ಲೆಗುಡ್ಡೆಗೆ ತಂಡ ತೆರಳಿದೆ. ಸೋಕೊ ತಂಡ, ಅರಣ್ಯ ಇಲಾಖೆ ಅಧಿಕಾರಿ-ಸಿಬ್ಬಂದಿ, ಮೆಟಲ್ ಡಿಟೆಕ್ಟರ್ ತಂಡ ಸಾಥ್ ನೀಡಿದೆ. ನೇತ್ರಾವತಿ ಸ್ನಾನಘಟ್ಟದ ಬಳಿಯ ಅರಣ್ಯ ಪ್ರವೇಶದಿಂದಲೇ ಶೋಧ ಆರಂಭವಾಗಲಿದೆ. 13 ಎಕರೆ ವಿಸ್ತೀರ್ಣದಲ್ಲಿರೋ ಬಂಗ್ಲೆಗುಡ್ಡೆ ಪೂರ್ತಿ ಎಸ್‌ಐಟಿ ಶೋಧ ನಡೆಸಲಿದೆ.

  • ಬಂಗ್ಲೆಗುಡ್ಡೆಯಲ್ಲಿ ಉತ್ಖನನ ಮಾಡುವಂತೆ ರಿಟ್ ಅರ್ಜಿ – ಅರಣ್ಯ ಇಲಾಖೆಯಿಂದಲೂ ಮಾಹಿತಿ ಪಡೆದ ಎಸ್‌ಐಟಿ

    ಬಂಗ್ಲೆಗುಡ್ಡೆಯಲ್ಲಿ ಉತ್ಖನನ ಮಾಡುವಂತೆ ರಿಟ್ ಅರ್ಜಿ – ಅರಣ್ಯ ಇಲಾಖೆಯಿಂದಲೂ ಮಾಹಿತಿ ಪಡೆದ ಎಸ್‌ಐಟಿ

    ಮಂಗಳೂರು: ಧರ್ಮಸ್ಥಳದ ಶವ ಹೂತಿಟ್ಟ (Dharmasthala Mass Burials) ಪ್ರಕರಣದ ತನಿಖೆ ಮುಂದುವರಿದಿದೆ. ಒಂದೆಡೆ ವಿಠಲ್ ಗೌಡ ಹತ್ತಾರು ಶವ ನೋಡಿದ್ದೇನೆ ಎಂದಿದ್ದು, ಇನ್ನೊಂದೆಡೆ ಇಬ್ಬರು ಹೈಕೋರ್ಟ್‌ಗೆ ರಿಟ್ ಅರ್ಜಿ (Writ Petition) ಹಾಕಿ ಬಂಗ್ಲೆಗುಡ್ಡೆಯಲ್ಲಿ (Banglegudde) ಉತ್ಖನನ ಮಾಡುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಬಂಗ್ಲೆಗುಡ್ಡೆಯ ವಿಚಾರದಲ್ಲಿ ಗೊಂದಲದಲ್ಲಿರುವ ಎಸ್‌ಐಟಿ (SIT) ರಹಸ್ಯ ಭೇದಿಸಲು ಮುಂದಾಗಿದೆ. ಕಾನೂನು ತಜ್ಞರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ತನಿಖೆಗೆ ಪ್ಲಾನ್ ಮಾಡಿದೆ.

    ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣದ ತನಿಖೆ ಮುಂದುವರಿದಿದೆ. ಸದ್ಯ ತನಿಖೆ ನಡೆಸುತ್ತಿರುವ ಎಸ್‌ಐಟಿ ಹಲವಾರು ಗೊಂದಲದಲ್ಲಿದೆ. ಒಂದೆಡೆ ತಲೆ ಬುರುಡೆಯ ಮಹಜರು ನಡೆಸಲು ಬಂಗ್ಲೆಗುಡ್ಡೆಗೆ ತೆರಳಿದ ವೇಳೆ ರಾಶಿ ರಾಶಿ ಅಸ್ಥಿಪಂಜರ ನೋಡಿದ್ದೇನೆ ಎಂದು ಸೌಜನ್ಯಳ ಓರ್ವ ಮಾವ ವಿಠಲಗೌಡ ಹೇಳಿದ್ದ. ಇನ್ನೊಂದೆಡೆ ಸೌಜನ್ಯಳ ಇನ್ನೋರ್ವ ಮಾವ ವಿಠಲ ಗೌಡರ ತಮ್ಮ ಪುರಂದರ ಗೌಡ ಹಾಗೂ ಸಂಬಂಧಿ ತುಕರಾಮ ಗೌಡ ಹೈಕೋರ್ಟ್‌ಗೆ ರಿಟ್ ಅರ್ಜಿ ಹಾಕಿ ಬಂಗ್ಲೆಗುಡ್ಡೆಯಲ್ಲಿ ಶವ ಹೂತಿಟ್ಟಿರೋದನ್ನ ನಾವು ತೋರಿಸುತ್ತೇವೆ, ಅದನ್ನ ಉತ್ಖನನ ಮಾಡಲು ಎಸ್‌ಐಟಿಗೆ ಸೂಚನೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಈ ಕುರಿತು ಉತ್ತರಿಸಲು ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಇದನ್ನೂ ಓದಿ: ಈ ಸರ್ಕಾರ 47 ಹೊಸ ಜಾತಿಗಳನ್ನು ಸೃಷ್ಟಿ ಮಾಡಿದೆ: ಸುನಿಲ್ ಕುಮಾರ್ ಕಿಡಿ

    ತಲೆ ಬುರುಡೆಯ ಮಹಜರು ನಡೆಸುತ್ತಿದ್ದ ಎಸ್‌ಐಟಿಗೆ ಇದೀಗ ಈ ವಿಚಾರ ಗೊಂದಲವನ್ನ ಸೃಷ್ಟಿಸಿದೆ. ಅರಣ್ಯ ಪ್ರದೇಶದೊಳಗೆ ಮತ್ತೆ ಉತ್ಖನನ ಮಾಡಬೇಕಾದರೆ ಸಾಕಷ್ಟು ಸವಾಲುಗಳು ಎದುರಾಗೋ ಹಿನ್ನಲೆಯಲ್ಲಿ ಸದ್ಯ ಅರಣ್ಯ ಇಲಾಖೆಯಿಂದ ಬಂಗ್ಲೆಗುಡ್ಡೆಯ ಸರ್ವೆ ದಾಖಲೆಗಳನ್ನ ಪಡೆದುಕೊಂಡಿದೆ. ಈ ಹಿಂದೆ ಅರಣ್ಯದ ಅಂಚಿನಲ್ಲಿ ಉತ್ಖನನ ನಡೆದಿರುವುದರಿಂದ ಯಾವುದೇ ಸವಾಲು ಇರಲಿಲ್ಲ. ಇದೀಗ ಅರಣ್ಯದೊಳಗಿನ ಉತ್ಖನನ ಆಗಬೇಕಾಗಿರುವುದರಿಂದ, ಕಾನೂನು ಅಡ್ಡಿಯಾಗುವುದರಿಂದ ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ಎಸ್‌ಐಟಿ ತೀರ್ಮಾನಿಸಿದೆ. ಅರಣ್ಯದ ಸಮಗ್ರ ವರದಿ ಪಡೆದು ಅನುಮತಿ ಪಡೆಯುವ ಸಾಧ್ಯತೆ ಇದೆ. ಇದನ್ನೂ ಓದಿ: ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ

    ಬಂಗ್ಲೆಗುಡ್ಡೆಯ ಮಹಜರು ಅಥವಾ ಉತ್ಖನನ ಮಾಡೋ ಬಗ್ಗೆ ಎಸ್‌ಐಟಿ ಇನ್ನೂ ಸರಿಯಾದ ನಿರ್ಧಾರ ಮಾಡಿಲ್ಲ. ಬಂಗ್ಲೆಗುಡ್ಡೆಯಲ್ಲಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡವರ ಅಸ್ಥಿಪಂಜರಗಳು ಇರುವ ಸಾಧ್ಯತೆ ಇದ್ದು, ಅದನ್ನ ಸ್ಥಳೀಯ ಪೊಲೀಸರು ಮಹಜರು ಮಾಡಬೇಕ, ಎಸ್‌ಐಟಿ ಮಾಡಬೇಕಾ ಅನ್ನೋ ಗೊಂದಲದಲ್ಲಿದ್ದಾರೆ. ಹೀಗಾಗಿ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಮಾಡಲು ಎಸ್‌ಐಟಿ ನಿರ್ಧರಿಸಿದೆ. ಇದನ್ನೂ ಓದಿ: ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಕೇಸ್ – ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್

  • ಕೇರಳ | 16ರ ಬಾಲಕನ ಮೇಲೆ LGBTQ ಆ್ಯಪ್‌ನಲ್ಲಿ ಪರಿಚಯವಾದ 14 ಮಂದಿಯಿಂದ ಲೈಂಗಿಕ ದೌರ್ಜನ್ಯ

    ಕೇರಳ | 16ರ ಬಾಲಕನ ಮೇಲೆ LGBTQ ಆ್ಯಪ್‌ನಲ್ಲಿ ಪರಿಚಯವಾದ 14 ಮಂದಿಯಿಂದ ಲೈಂಗಿಕ ದೌರ್ಜನ್ಯ

    ತಿರುವನಂತಪುರಂ: 16 ವರ್ಷದ ಆಪ್ರಾಪ್ತನ ಮೇಲೆ 2 ವರ್ಷಗಳ ಕಾಲ 14 ಮಂದಿ ಲೈಂಗಿಕ ದೌರ್ಜನ್ಯ ಎಸಗಿರುವುದು ಕೇರಳದ (Kerala) ಕಾಸರಗೋಡು (Kasaragod) ಜಿಲ್ಲೆಯಲ್ಲಿ ನಡೆದಿದೆ. ಬಾಲಕನಿಗೆ 14 ಮಂದಿ LGBTQ ಮೊಬೈಲ್ ಆ್ಯಪ್‌ನಲ್ಲಿ ಪರಿಚಯವಾಗಿದ್ದರು ಎಂದು ತಿಳಿದುಬಂದಿದೆ.

    ಇಲ್ಲಿಯವರೆಗೂ ದೌರ್ಜನ್ಯ ಎಸಗಿದ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಇಬ್ಬರು ಸರ್ಕಾರಿ ನೌಕರರು ಸೇರಿದ್ದಾರೆ. ಬಾಲಕನ ಮನೆಯಲ್ಲಿ, ಕಣ್ಣೂರು ಮತ್ತು ಕೋಝಿಕ್ಕೋಡ್ ಜಿಲ್ಲೆಗಳ ಇತರ ಸ್ಥಳಗಳಲ್ಲಿ 14 ಪುರುಷರು ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿದ ಆರೋಪ – RCB ಸ್ಟಾರ್‌ ಯಶ್‌ ದಯಾಳ್‌ ವಿರುದ್ಧ ಪೋಕ್ಸೊ ಕೇಸ್‌

    ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
    ಬಾಲಕನ ತಾಯಿ ಅವರ ಮನೆಯಲ್ಲಿ ಒಬ್ಬ ವ್ಯಕ್ತಿಯನ್ನು ನೋಡಿದ್ದರು. ಅವರು ನೋಡುತ್ತಿದ್ದಂತೆ ಆತ ಅಲ್ಲಿಂದ ಓಡಿಹೋಗಿದ್ದ. ಈ ಬಗ್ಗೆ ಮಗನನ್ನು ಕೇಳಿದಾಗ ಆತ ವಿಚಾರವನ್ನು ಅಮ್ಮನ ಮುಂದೆ ಹೇಳಿಕೊಂಡಿದ್ದ. ಬಳಿಕ ಬಾಲಕನ ತಾಯಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಅಲ್ಲಿಂದ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು.

    ತನಿಖೆಗೆ ಎಸ್‌ಐಟಿ ರಚನೆ 
    ಬಾಲಕ ನೀಡಿದ ಹೇಳಿಕೆಯ ಆಧಾರದ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆ ಅಡಿಯಲ್ಲಿ 14 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಸಂಬಂಧ ಡಿವೈಎಸ್ಪಿ ಮತ್ತು ನಾಲ್ವರು ಇನ್ಸ್‌ಪೆಕ್ಟರ್‌ಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ.

    ಆರು ಪ್ರಕರಣಗಳನ್ನು ಕೋಝಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಿಗೆ ವರ್ಗಾಯಿಸಲಾಗಿದೆ. ಈ ಪ್ರಕರಣದಲ್ಲಿ 14 ಆರೋಪಿಗಳು 25 ರಿಂದ 51 ವರ್ಷ ವಯಸ್ಸಿನವರಾಗಿದ್ದು, ಅದರಲ್ಲಿ ಒಬ್ಬ ರೈಲ್ವೆ ಉದ್ಯೋಗಿ ಎಂದು ಪೊಲೀಸರು ತಿಳಿಸಿದ್ದಾರೆ.  ಇದನ್ನೂ ಓದಿ: 7 ವರ್ಷದ ಬಾಲಕಿ ಮೇಲೆ ಅಪ್ರಾಪ್ತರಿಂದಲೇ ಅತ್ಯಾಚಾರ – ಇಬ್ಬರು ಬಾಲಕರು ಅರೆಸ್ಟ್‌

  • ರಿಲಯನ್ಸ್‌ ಫೌಂಡೇಶನ್‌ಗೆ ಬಿಗ್‌ ರಿಲೀಫ್‌ – ವನತಾರಾಗೆ ಸುಪ್ರೀಂನಿಂದ ಕ್ಲೀನ್‌ ಚಿಟ್‌

    ರಿಲಯನ್ಸ್‌ ಫೌಂಡೇಶನ್‌ಗೆ ಬಿಗ್‌ ರಿಲೀಫ್‌ – ವನತಾರಾಗೆ ಸುಪ್ರೀಂನಿಂದ ಕ್ಲೀನ್‌ ಚಿಟ್‌

    ನವದೆಹಲಿ: ರಿಲಯನ್ಸ್ ಫೌಂಡೇಶನ್ ನಡೆಸುತ್ತಿರುವ ಪ್ರಾಣಿಗಳ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ವನತಾರಾ (Vantara) ಮೇಲಿನ ಆರೋಪಗಳ ಬಗ್ಗೆ ಎಸ್‌ಐಟಿ (SIT) ಸಲ್ಲಿಸಿದ್ದ ವರದಿಯನ್ನು ಸುಪ್ರೀಂ ಕೋರ್ಟ್‌ (Supreme Court) ಅಂಗೀಕರಿಸಿ ಕ್ಲೀನ್‌ ಚಿಟ್‌ ನೀಡಿದೆ.

    ವನತಾರಾದಲ್ಲಿ ಕಾಡು ಪ್ರಾಣಿಗಳ ಸ್ವಾಧೀನ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಆನೆಗಳು ಸೇರಿದಂತೆ ಪ್ರಾಣಿಗಳ ಸ್ವಾಧೀನ ಕಾನೂನು ಪ್ರಕ್ರಿಯೆಗಳ ಅನುಗುಣವಾಗಿಯೇ ನಡೆದಿದೆ ಎಂದು ಎಸ್‌ಐಟಿ ವರದಿ ಸಲ್ಲಿಸಿತ್ತು. ಈ ವರದಿಯನ್ನು ಸುಪ್ರೀಂ ಕೋರ್ಟ್‌ ಅಂಗೀಕರಿಸುವ ಮೂಲಕ ಪ್ರಾಣಿ ರಕ್ಷಣಾ ಮತ್ತು ಪುನರ್ವಸತಿ ಕೇಂದ್ರಕ್ಕೆ ಕ್ಲೀನ್ ಚಿಟ್ ನೀಡಿದೆ. ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಯಿಂದ ಗುಜರಾತ್ ವಂತಾರದಲ್ಲಿ ವನ್ಯಜೀವಿ ಪುನವರ್ಸತಿ ಸಂರಕ್ಷಣಾ ಕೇಂದ್ರ ಉದ್ಘಾಟನೆ

    ಆನೆಗಳನ್ನು ದೇವಾಲಯಗಳಿಗೆ ಹಿಂತಿರುಗಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಸಹ ನ್ಯಾಯಾಲಯವು ತಿರಸ್ಕರಿಸಿತು. ಎಸ್‌ಐಟಿಯ ವರದಿ ಅಂಗೀಕರಿಸಲ್ಪಟ್ಟಿರುವುದರಿಂದ, ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪೀಠ ಹೇಳಿದೆ.

    ಸುಪ್ರೀಂ ಕೋರ್ಟ್‌ ಆದೇಶದಂತೆ ಎಸ್‌ಐಟಿ ತನ್ನ ವರದಿಯನ್ನು ಸಲ್ಲಿಸಿದೆ. ಈ ವರದಿಯನ್ನು ನ್ಯಾಯಾಲಯ ಒಪ್ಪಿಕೊಂಡಿದೆ. ಅಲ್ಲದೇ ಶೀಘ್ರವಾಗಿ ತನಿಖಾ ವರದಿಯನ್ನು ಸಲ್ಲಿಸಿದ್ದಕ್ಕೆ ಎಸ್‌ಐಟಿಗೆ ಪೀಠ ಮೆಚ್ಚುಗೆ ವ್ಯಕ್ತಪಡಿಸಿದೆ. ಇದನ್ನೂ ಓದಿ: ವನ್‍ತಾರಾ ಪ್ರಾಣಿ ಸಂರಕ್ಷಣಾ ಕೇಂದ್ರದ ವಿರುದ್ಧ ಎಸ್‍ಐಟಿ ತನಿಖೆಗೆ ಸುಪ್ರೀಂ ಆದೇಶ

     

    ವನತಾರಾ ಪ್ರಾಣಿಗಳನ್ನು ತರಿಸುವಾಗ ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಇತರ ಸಂಬಂಧಿತ ಕಾನೂನುಗಳನ್ನು ಗಾಳಿಗೆ ತೂರಿದೆ ಎಂದು ವಕೀಲ ಸಿಆರ್ ಜಯಾ ಸುಕಿನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಪಂಕಜ್ ಮಿಥಲ್ ಮತ್ತು ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ದ್ವಿಸದಸ್ಯ ಪೀಠ ಆ.25 ರಂದು ವಿಚಾರಣೆ ನಡೆಸಿತ್ತು. ಬಳಿಕ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಚೆಲಮೇಶ್ವರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿತ್ತು. ಈ ತಂಡದಲ್ಲಿ ಉತ್ತರಾಖಂಡ ಮತ್ತು ತೆಲಂಗಾಣ ಹೈಕೋರ್ಟ್‌ ಮಾಜಿ ಮುಖ್ಯ ನ್ಯಾಯಾಧೀಶ ರಾಘವೇಂದ್ರ ಚೌಹಾಣ್, ಮುಂಬೈನ ಮಾಜಿ ಪೊಲೀಸ್ ಆಯುಕ್ತ ಹೇಮಂತ್ ನಾಗ್ರಾಲೆ ಹಾಗೂ ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಅಧಿಕಾರಿ ಅನಿಶ್ ಗುಪ್ತಾ ಇದ್ದರು. ತನಿಖಾ ವರದಿಯನ್ನು ಸೆ.12ರ ಒಳಗೆ ಸಲ್ಲಿಸುವಂತೆ ಸೂಚಿಸಿತ್ತು. ಎಸ್‍ಐಟಿ ರಚನೆಯನ್ನು ಸ್ವಾಗತಿಸಿದ್ದ ವನ್‍ತಾರಾ, ಸುಪ್ರೀಂ ಕೋರ್ಟ್ ಆದೇಶವನ್ನು ನಾವು ಅತ್ಯಂತ ಗೌರವದಿಂದ ಸ್ವೀಕರಿಸುತ್ತೇವೆ ಎಂದಿತ್ತು.

     

    ಎಸ್‌ಐಟಿ ಅಧಿಕಾರಿಗಳು ಸುಪ್ರೀಂ ಆದೇಶದಂತೆ ವನತಾರ ಪ್ರಾಣಿಗಳ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರಕ್ಕೆ ತೆರಳಿ ತನಿಖೆ ನಡೆಸಿತ್ತು. ತನಿಖೆ ವೇಳೆ ವನ್ಯಜೀವಿ ತಜ್ಞರು ಹಾಗೂ ಪಶುವೈದ್ಯರ ಸಲಹೆ ಪಡೆದು ವರದಿ ಸಿದ್ಧಪಡಿಸಿತ್ತು.

    ಗುಜರಾತ್‌ನ ಜಾಮ್‌ನಗರದಲ್ಲಿರುವ ರಿಲಯನ್ಸ್‌ನ ವನತಾರ 3500 ಎಕರೆಗಳಷ್ಟು ವಿಸ್ತಾರವಾಗಿರುವ ವನ್‌ತಾರಾ, ವಿಶ್ವದ ಅತಿದೊಡ್ಡ ಖಾಸಗಿ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರಗಳಲ್ಲಿ ಒಂದಾಗಿದೆ. ಇಲ್ಲಿ ರಕ್ಷಿಸಲ್ಪಟ್ಟ ಆನೆಗಳಿಗೆ ಆಶ್ರಯ, ಆಧುನಿಕ ಪಶುವೈದ್ಯಕೀಯ ಸೌಲಭ್ಯಗಳು ಇದೆ. ಇದನ್ನೂ ಓದಿ: ಪ್ರಾಣಿ ರಕ್ಷಣೆಯಲ್ಲಿನ ಉತ್ಕೃಷ್ಟ ಸೇವೆಗೆ ಅನಂತ್ ಅಂಬಾನಿಯ `ವಂತಾರ’ಗೆ ರಾಷ್ಟ್ರೀಯ ಪ್ರಾಣಿ ಮಿತ್ರ ಪ್ರಶಸ್ತಿ

  • ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿ ಮೊಹಾಂತಿ ಪ್ರಗತಿ ಪರಿಶೀಲನೆ ಸಭೆ – ತನಿಖೆಯ ವೇಗ ಹೆಚ್ಚಿಸುವಂತೆ ಸೂಚನೆ

    ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿ ಮೊಹಾಂತಿ ಪ್ರಗತಿ ಪರಿಶೀಲನೆ ಸಭೆ – ತನಿಖೆಯ ವೇಗ ಹೆಚ್ಚಿಸುವಂತೆ ಸೂಚನೆ

    ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ (Dharmasthala Case) ಸಂಬಂಧ ಎಸ್‌ಐಟಿ (SIT) ತನಿಖೆ ಚುರುಕುಗೊಂಡಿದೆ. ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿ ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ (Pranav Mohanty) ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದಾರೆ.

    ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಕೂಡ ಸಭೆಯಲ್ಲಿ ಭಾಗಿಯಾಗಿದ್ದರು. ಮುಂದಿನ ತನಿಖೆಯ ಎಸ್‌ಐಟಿ ತಂಡ ಬ್ಲೂಪ್ರಿಂಟ್ ರೆಡಿ ಮಾಡಲಿದ್ದಾರೆ. ಈಗಾಗಲೇ ಎಸ್‌ಐಟಿ ತನಿಖೆ ಕುತೂಹಲ ಘಟ್ಟಕ್ಕೆ ತಲುಪಿದೆ. ಬುರುಡೆ ಹಿಂದೆ ಬಿದ್ದು ಎಸ್‌ಐಟಿ ಪೊಲೀಸರು ಕಳೆದ 55 ದಿನಗಳಿಂದ ಹೇಳಿಕೆಗಳ ದಾಖಲು, ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಬಂಗ್ಲೆಗುಡ್ಡೆ ಕಾಡಿನಿಂದ ಬುರುಡೆ ತಂದಿದ್ದ ವಿಠಲಗೌಡ, ಬುರುಡೆ ಬಂದ ನಂತರ ಗಿರೀಶ್ ಮಟ್ಟಣ್ಣ ಮಾಸ್ಟರ್ ಪ್ಲಾನ್, ಜಯಂತ್, ಯೂಟ್ಯೂಬರ್‌ಗಳಾದ ಅಭಿಷೇಕ್, ಕೇರಳದ ಮನಾಫ್ ವಿಚಾರಣೆ ಹೀಗೆ ಕಳೆದ ಹತ್ತು ದಿನಗಳಿಂದ ವಿಚಾರಣೆ ನಡೆಸಿರುವ ಎಸ್‌ಐಟಿ ತಂಡ ಎಲ್ಲರ ಹೇಳಿಕೆಗಳು ತಾಳೆಹಾಕಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ: ಅಪ್ಪ-ಅಮ್ಮನ ಜಗಳಕ್ಕೆ ಮಕ್ಕಳು ಬಲಿ; ತಂದೆ ನೇಣಿಗೆ ಶರಣು, ಪ್ರಾಣಪಾಯದಿಂದ ತಾಯಿ ಪಾರು

    ತನಿಖೆಯ ಅಂತಿಮ ವರದಿಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿದ್ದು, ತನಿಖೆಯ ವೇಗ ಹೆಚ್ಚಿಸಿ, ಎಲ್ಲಾ ಆಯಾಮದ ತನಿಖೆಯನ್ನೂ ಶೀಘ್ರದಲ್ಲೇ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಮೊಹಾಂತಿ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಥಾಯ್ಲೆಂಡ್‌ನಲ್ಲಿ ಝೂ ಸಿಬ್ಬಂದಿಯನ್ನೇ ಕೊಂದು ತಿಂದ ಸಿಂಹಪಡೆ

  • ಧರ್ಮಸ್ಥಳ ಕೇಸ್‍ | ಷಡ್ಯಂತ್ರ ಮಾಡಿದವ್ರನ್ನ ಮುಟ್ಟೋಕೆ ಎಸ್‍ಐಟಿಗೆ ಧೈರ್ಯ ಇಲ್ಲ: ಬೊಮ್ಮಾಯಿ

    ಧರ್ಮಸ್ಥಳ ಕೇಸ್‍ | ಷಡ್ಯಂತ್ರ ಮಾಡಿದವ್ರನ್ನ ಮುಟ್ಟೋಕೆ ಎಸ್‍ಐಟಿಗೆ ಧೈರ್ಯ ಇಲ್ಲ: ಬೊಮ್ಮಾಯಿ

    ಬೆಂಗಳೂರು: ಧರ್ಮಸ್ಥಳ ಕೇಸ್‍ಲ್ಲಿ (Dharmasthala Case) ಷಡ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನು ಎಸ್‍ಐಟಿ (SIT) ಇನ್ನೂ ಮುಟ್ಟಿಲ್ಲ. ಎಸ್‍ಐಟಿಗೆ ಷಡ್ಯಂತ್ರ ಮಾಡಿದ ದೊಡ್ಡ ವ್ಯಕ್ತಿಗಳನ್ನು ಮುಟ್ಟೋದಕ್ಕೆ ಧೈರ್ಯ ಇಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ದಕ್ಷತೆಯಿಂದ ಶೀಘ್ರದಲ್ಲಿ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲಿ ಎಂದು ಪ್ರಕರಣದ ತನಿಖೆಗೆ ಎಸ್‍ಐಟಿ ರಚನೆ ಮಾಡಲಾಗಿದೆ. ಆದರೆ ನಿರೀಕ್ಷೆಗೆ ತಕ್ಕಂತೆ ಎಸ್‍ಐಟಿ ತನಿಖೆ ನಡೆಯುತ್ತಿಲ್ಲ. ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ – ಬಂಗ್ಲೆ ಗುಡ್ಡ ಕಾಡಿನಲ್ಲಿ 3 ಅಸ್ಥಿಪಂಜರ ಪತ್ತೆ

    ಮಾಸ್ಕ್ ಮ್ಯಾನ್ ನೀಡಿದ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗುತ್ತಿವೆ. ಇದ್ಕಕೆ ಎಸ್‍ಐಟಿಗೆ ಉತ್ತರದಾಯಿತ್ವ ಇದೆ, ಜವಾಬ್ದಾರಿ ಇದೆ. ಶೀಘ್ರದಲ್ಲೇ ವರದಿ ಕೊಡಲಿ, ಇದುವರೆಗೆ ಆಗಿರುವ ತನಿಖೆ ಬಗ್ಗೆ ವರದಿ ನೀಡಲಿ. ಈ ಪ್ರಕರಣದಲ್ಲಿ ಪ್ರಮುಖ ವ್ಯಕ್ತಿಗಳನ್ನು ಎಸ್‍ಐಟಿ ಮುಟ್ಟಿಲ್ಲ. ನಮ್ಮನ್ನು ಮುಟ್ಟಲ್ಲ ಎಂದು ಅವರಿಗೂ ಖಾತ್ರಿ ಆಗಿದೆ. ಅದಕ್ಕಾಗಿ ಅವರು ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಷಡ್ಯಂತ್ರ ಮಾಡಿದವರನ್ನು ಮುಟ್ಟಬೇಡಿ ಎಂದು ರಾಜಕೀಯ ಒತ್ತಡವಿದೆ. ಅದಕ್ಕೆ ಇನ್ನೂ ಯಾರನ್ನೂ ಬಂಧಿಸದೇ ವಿಚಾರಣೆ ಮಾತ್ರ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: 4 ಶಂಕಾಸ್ಪದ ಸಾವುಗಳ ತನಿಖೆಗೆ ತಿಮರೋಡಿ ದೂರು, ವಿಠಲಗೌಡ ಆರೋಪವನ್ನು ಎಸ್‌ಐಟಿ ಪರಿಶೀಲಿಸಿ ಕ್ರಮ: ಪರಮೇಶ್ವರ್

  • ಮೈಸೂರು | ಕೋರ್ಟ್ ಆವರಣದಿಂದ ಧರ್ಮಸ್ಥಳ ಯಾತ್ರೆ ಹೊರಟ ವಕೀಲರು

    ಮೈಸೂರು | ಕೋರ್ಟ್ ಆವರಣದಿಂದ ಧರ್ಮಸ್ಥಳ ಯಾತ್ರೆ ಹೊರಟ ವಕೀಲರು

    ಮೈಸೂರು: ನಗರದ (Mysuru) ವಕೀಲರು ಧರ್ಮಸ್ಥಳದ ಪರ ಧ್ವನಿ ಎತ್ತಿದ್ದಾರೆ. ಇಂದು (ಸೆ.13) 150 ವಕೀಲರನ್ನೊಳಗೊಂಡ ತಂಡ ಧರ್ಮಸ್ಥಳಕ್ಕೆ (Dharmasthala) ಯಾತ್ರೆ ಹೊರಟಿದೆ.

    ನಗರದ ಕೋರ್ಟ್ ಅವರಣದಿಂದ ಕಾರುಗಳು ಹಾಗೂ ಎರಡು ಬಸ್‍ಗಳ ಮೂಲಕ ವಕೀಲರ ತಂಡ ಹೊರಟಿದೆ. ವಕೀಲರು ಧರ್ಮಸ್ಥಳಕ್ಕೆ ತೆರಳಿ ಮಂಜುನಾಥನ ದರ್ಶನ ಪಡೆಯಲಿದ್ದಾರೆ. ಬಳಿಕ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿದ್ದಾರೆ. ನಿಮ್ಮ ಜೊತೆ ನಾವಿದ್ದೇವೆ ಎಂದು ಬೆಂಬಲ ಸೂಚಿಸಿ ಈ ಯಾತ್ರೆ ನಡೆಯುತ್ತಿದೆ. ಇದನ್ನೂ ಓದಿ: ಬಿಜೆಪಿಯಿಂದ ಧರ್ಮಸ್ಥಳ ಚಲೋ – ಸುಮಾರು 400 ಕಾರುಗಳಲ್ಲಿ ಧರ್ಮಸ್ಥಳ ಯಾತ್ರೆ

    ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ವಿರೋಧಿಸಿ ವಕೀಲರು ಈ ಯಾತ್ರೆ ಕೈಗೊಂಡಿದ್ದಾರೆ. ಯಾತ್ರೆ ಆರಂಭಕ್ಕೂ ಮುನ್ನ ಎಲ್ಲರೂ ಕೇಸರಿ ಶಾಲು ಧರಿಸಿ, ಕೇಸರಿ ಧ್ವಜ ಹಿಡಿದು ಒಗ್ಗಟ್ಟು ಪ್ರದರ್ಶಿಸಿದರು. ಮಧ್ಯಾಹ್ನದ ವೇಳೆಗೆ ವಕೀಲರ ತಂಡ ಧರ್ಮಸ್ಥಳ ತಲುಪಲಿದೆ.

    ಇತ್ತೀಚೆಗೆ ಕಾಂಗ್ರೆಸ್ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಮೈಸೂರಿನಿಂದ ಧರ್ಮಸ್ಥಳ ಯಾತ್ರೆ ನಡೆದಿತ್ತು. ಇನ್ನೂ ಬಿಜೆಪಿಯ ಹಲವು ನಾಯಕರು ಸಹ ಧರ್ಮಸ್ಥಳಕ್ಕೆ ಬೇಟಿ ನೀಡಿ, ಹೆಗ್ಗಡೆಯವರನ್ನು ಭೇಟಿಯಾಗಿ ನೈತಿಕ ಬೆಂಬಲ ಸೂಚಿಸಿದ್ದರು. ಇದನ್ನೂ ಓದಿ: ನಮ್ಮ ನಡಿಗೆ ಧರ್ಮಸ್ಥಳದ ಕಡೆಗೆ – ದಾವಣಗೆರೆಯಿಂದ ಯಾತ್ರೆ ಹೊರಟ ನೂರಾರು ಭಕ್ತರು