Tag: Sivakumar

  • ಉರಿ-ನಂಜೇಗೌಡ ಟ್ವೀಟ್ ಪ್ರಕರಣ : 14 ದಿನಗಳ ನ್ಯಾಯಾಂಗ ಬಂಧನಕ್ಕೆ ನಟ ಚೇತನ್

    ಉರಿ-ನಂಜೇಗೌಡ ಟ್ವೀಟ್ ಪ್ರಕರಣ : 14 ದಿನಗಳ ನ್ಯಾಯಾಂಗ ಬಂಧನಕ್ಕೆ ನಟ ಚೇತನ್

    ಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಇಂದು ಬೆಳಗ್ಗೆ ನಟ ಚೇತನ್ ನನ್ನು (Chetan) ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಅವರನ್ನು ಕೋರ್ಟಿಗೂ ಹಾಜರುಪಡಿಸಿದ್ದರು. ಪೊಲೀಸರು ಹಾಕಿರುವ ಎಫ್‍ ಐಆರ್ ಆಧರಿಸಿ ನ್ಯಾಯಾಲಯವು  ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಈ ಸಂದರ್ಭದಲ್ಲಿ ಚೇತನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಮಾನ್ಯ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

    ಚೇತನ್ ಅವರು ಉರಿಗೌಡ (Urigowda), ನಂಜೇಗೌಡ (Nanjegowda) ವಿಚಾರವಾಗಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ (Shivakumar) ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

    ಚೇತನ್ ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ಅಲ್ಲಿ ಉರಿಗೌಡ ನಂಜೇಗೌಡ ಬಗ್ಗೆ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

    ಈ ಪೋಸ್ಟ್ ಅನ್ನು ಆಧರಿಸಿಯೇ ಶಿವಕುಮಾರ್ ಎಂಬುವರು ದೂರು ನೀಡಿದ್ದಾರೆ. ದೂರಿನಲ್ಲಿ ಚೇತನ್ ಅವರು ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ ಶಿವಕುಮಾರ್. ಈ ದೂರನ್ನು ಆಧರಿಸಿ ಎಫ್ ಐ ಆರ್ ದಾಖಲಿಸಿದ್ದ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ನನ್ನು ಕೋರ್ಟಿಗೆ ಹಾಜರುಪಡಿಸಿದ್ದರು.

  • Breaking- ಉರಿಗೌಡ ನಂಜೇಗೌಡ ಬಗ್ಗೆ ಟ್ವೀಟ್:  ನಟ ಚೇತನ್ ಬಂಧನ

    Breaking- ಉರಿಗೌಡ ನಂಜೇಗೌಡ ಬಗ್ಗೆ ಟ್ವೀಟ್: ನಟ ಚೇತನ್ ಬಂಧನ

    ಟ, ಸಾಮಾಜಿಕ ಹೋರಾಟಗಾರ ಚೇತನ್ (Chetan) ಬಂಧನವಾಗಿದೆ. ಉರಿಗೌಡ (Urigowda) ನಂಜೇಗೌಡ (Nanjegowda) ವಿಚಾರವಾಗಿ ಅವರು ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ (Shivakumar) ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಚೇತನ್ ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ಅಲ್ಲಿ ಉರೀಗೌಡ ನಂಜೇಗೌಡ ಬಗ್ಗೆ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯಗೆ ಹಿಂದಿರುಗಿದಾ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ತೆಲುಗು ನಟ ನಾಗಬಾಬು ಪುತ್ರಿ ನಿಹಾರಿಕಾ ದಾಂಪತ್ಯದಲ್ಲಿ ಬಿರುಕು

    ಈ ಪೋಸ್ಟ್ ಅನ್ನು ಆಧರಿಸಿಯೇ ಶಿವಕುಮಾರ್ ಎಂಬುವರು ದೂರು ನೀಡಿದ್ದಾರೆ. ದೂರಿನಲ್ಲಿ ಚೇತನ್ ಅವರು ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ ಶಿವಕುಮಾರ್. ಈ ದೂರನ್ನು ಆಧರಿಸಿ ಎಫ್ ಐ ಆರ್ ದಾಖಲಿಸಿದ್ದ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ನನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

  • ಜೊತೆ ಜೊತೆಯಲಿ ಟೀಮ್ ನನ್ನ ಹೊರ ಹಾಕಿದರೆ, ಪ್ರೆಸ್ ಮೀಟ್ ಮಾಡಿ ಉತ್ತರ ಕೊಡುವೆ : ನಟ ಅನಿರುದ್ಧ

    ಜೊತೆ ಜೊತೆಯಲಿ ಟೀಮ್ ನನ್ನ ಹೊರ ಹಾಕಿದರೆ, ಪ್ರೆಸ್ ಮೀಟ್ ಮಾಡಿ ಉತ್ತರ ಕೊಡುವೆ : ನಟ ಅನಿರುದ್ಧ

    ಟ ಅನಿರುದ್ಧ ಜನಪ್ರಿಯ ಧಾರಾವಾಹಿಯಿಂದ ಹೊರ ನಡೆದ ಸುದ್ದಿ ನಿನ್ನೆಯಿಂದಲೂ ಸಖತ್ ಸದ್ದು ಮಾಡುತ್ತಿದೆ. ಧಾರಾವಾಹಿಯಿಂದ ಅನಿರುದ್ಧ ಅವರೇ ಹೊರ ನಡೆದಿದ್ದಾರೆ ಎಂದು ಒಂದು ಕಡೆ ಸುದ್ದಿ ಆಗುತ್ತಿದ್ದರೆ, ಧಾರಾವಾಹಿ ತಂಡವೇ ಅವರನ್ನು ಹೊರ ಕಳುಹಿಸುತ್ತಿದೆ ಎಂದೂ ಹೇಳಲಾಗುತ್ತಿದೆ. ಆದರೆ, ಎರಡೂ ಕಡೆ ಈ ಕುರಿತು ಸ್ಪಷ್ಟತೆ ಇಲ್ಲ. ಧಾರಾವಾಹಿ ತಂಡದ ಸದಸ್ಯರು ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ, ಅನಿರುದ್ಧ ಈ ಬೆಳವಣಿಗೆ ಕುರಿತು ಮಾತನಾಡಿದ್ದಾರೆ.

    ಮನೆಯಲ್ಲೇ ಸಣ್ಣ ಪುಟ್ಟ ಮನಸ್ತಾಪಗಳು ಆಗುತ್ತವೆ. ಹಾಗೆಯೇ ಶೂಟಿಂಗ್ ಸೆಟ್ ನಲ್ಲೂ ಆಗಿವೆ ಎಂದು ಹೇಳುವ ಮೂಲಕ ಸದ್ಯ ಯಾವುದೂ ಸರಿಯಿಲ್ಲ ಎನ್ನುವುದನ್ನು ಪರೋಕ್ಷವಾಗಿಯೇ ಒಪ್ಪಿಕೊಂಡಿದ್ದಾರೆ. ಧಾರಾವಾಹಿಯಿಂದ ತಮ್ಮನ್ನು ಹೊರ ಹಾಕುತ್ತಿದ್ದಾರೆ ಎನ್ನುವ ವಿಷಯ ಗೊತ್ತಿಲ್ಲವೆಂದು ಸ್ಪಷ್ಟ ಪಡಿಸಿದ್ದಾರೆ. ವಾಹಿನಿಯಾಗಲಿ ಅಥವಾ ಧಾರಾವಾಹಿ ತಂಡವಾಗಲಿ, ಈ ಕುರಿತು ಮಾತನಾಡಲು ತಮ್ಮನ್ನು ಸಂಪರ್ಕಿಸಿಲ್ಲ ಎಂದಿರುವ ಅವರು, ಈ ಸುದ್ದಿಯ ಕುರಿತಾಗಿ ಮಾತನಾಡಲು ಚಾನೆಲ್ ಗೆ ಹೋಗುತ್ತಿರುವುದಾಗಿಯೂ ತಿಳಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ಶಿವಣ್ಣ, ಅನುಶ್ರೀ ಭೇಟಿಯಾಗಿ ಆಸೆ ಈಡೇರಿಸಿಕೊಂಡ ಕಾಫಿನಾಡು ಚಂದು

    ಧಾರಾವಾಹಿಯಿಂದ ಹೊರ ನಡೆಯುವ ವಿಚಾರದಲ್ಲಿ ಸ್ಪಷ್ಟತೆ ಇಲ್ಲದೇ ಇರುವ ಕಾರಣಕ್ಕಾಗಿ ತಂಡದೊಂದಿಗೆ ಮಾತನಾಡುವುದಾಗಿ ತಿಳಿಸಿರುವ ಅನಿರುದ್ಧ, ಒಂದು ವೇಳೆ ಆ ರೀತಿಯಲ್ಲಿ ಏನಾದರೂ ನಡೆದರೆ, ಪತ್ರಿಕಾಗೋಷ್ಠಿ ಮಾಡಿಯೇ ಎಲ್ಲ ವಿಷಯವನ್ನೂ ತಿಳಿಸುವುದಾಗಿ ಹೇಳಿಕೊಂಡಿದ್ದಾರೆ. ಈ ಎಲ್ಲ ನಿರ್ಧಾರವೂ ಧಾರಾವಾಹಿ ತಂಡದ ಮೇಲೆಯೇ ನಿಂತಿದೆ ಎಂದು ಅನಿರುದ್ಧ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಜೊತೆ ಜೊತೆಯಲಿ’ ಸೀರಿಯಲ್ ನಿಂದ ಅನಿರುದ್ಧ ಔಟ್ : ಕೆಟಿವಿಎಗೆ ಕಂಪ್ಲೆಂಟ್ ಬಂದಿಲ್ಲ ಎಂದ ಅಧ್ಯಕ್ಷ ಶಿವಕುಮಾರ್

    ‘ಜೊತೆ ಜೊತೆಯಲಿ’ ಸೀರಿಯಲ್ ನಿಂದ ಅನಿರುದ್ಧ ಔಟ್ : ಕೆಟಿವಿಎಗೆ ಕಂಪ್ಲೆಂಟ್ ಬಂದಿಲ್ಲ ಎಂದ ಅಧ್ಯಕ್ಷ ಶಿವಕುಮಾರ್

    ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಯಿಂದ ಆರ್ಯವರ್ಧನ್ ಪಾತ್ರಧಾರಿ, ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಅವರನ್ನು ಕೈ ಬಿಡಲಾಗಿದೆ ಎನ್ನುವ ಸುದ್ದಿ ಭಾರೀ ಸದ್ದು ಮಾಡುತ್ತಿದೆ. ಶೂಟಿಂಗ್ ಸ್ಪಾಟ್ ನಲ್ಲೇ ಅವರು ನಿರ್ಮಾಪಕ ಕಂ ನಿರ್ದೇಶಕರ ಜೊತೆ ಕಿರಿಕ್ ಮಾಡಿಕೊಂಡರು ಅನ್ನುವ ಕಾರಣಕ್ಕಾಗಿ ಈ ರೀತಿ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗುತ್ತಿದೆ. ಹಲವು ಬಾರಿ ಇದೇ ರೀತಿ ಅನಿರುದ್ಧ ಅವರು ತಂಡದೊಂದಿಗೆ ನಡೆದುಕೊಂಡಿದ್ದಾರೆ ಅನ್ನುವ ಕಾರಣಕ್ಕಾಗಿಯೇ ಕಿರುತೆರೆಯಿಂದಲೇ ಅವರನ್ನು ಬ್ಯಾನ್ ಮಾಡಲಾಗುತ್ತಿದೆ ಎನ್ನುವ ಸುದ್ದಿಯೂ ಹರಡಿದೆ.

    ಈ ಪ್ರಕರಣದ ಕುರಿತಂತೆ ಈಗಾಗಲೇ ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ಗೆ ಕಂಪ್ಲೆಂಟ್ ಕೂಡ ಮಾಡಿದ್ದು ಅನಿರುದ್ಧ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ ಎನ್ನುವ ಮಾತೂ ಕೇಳಿ ಬಂದಿತ್ತು. ಈ ಕುರಿತು ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ ಅಧ್ಯಕ್ಷ ಎಸ್.ವಿ. ಶಿವಕುಮಾರ್, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ಬಂದಿಲ್ಲ ಎಂದು ತಿಳಿಸಿದ್ದಾರೆ. ಈ ವಿಷಯದ ಕುರಿತು ಯಾವುದೇ ಮಾಹಿತಿ ಕೂಡ ತಮಗೆ ಗೊತ್ತಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಇದನ್ನೂ ಓದಿ:ರಾಜ್ಯಪಾಲರಾಗ್ತಾರಾ ಸೂಪರ್ ಸ್ಟಾರ್ ರಜನಿಕಾಂತ್?

    “ಒಂದು ಸೀರಿಯಲ್ ನಿಂದ ಕಲಾವಿದರು ಬದಲಾಗುವುದು ಕಾಮನ್. ಆದರೆ, ಜೊತೆ ಜೊತೆಯಲಿ ಸೀರಿಯಲ್ ನಲ್ಲಿ ಏನಾಗಿದೆ ಎನ್ನುವುದು ಗೊತ್ತಿಲ್ಲ. ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ ಗೂ ಯಾವುದೇ ದೂರು ಕೂಡ ಬಂದಿಲ್ಲ. ಹಾಗೇನಾದರೂ ಬಂದರೆ, ಕೂರಿಸಿ ಮಾತನಾಡುತ್ತೇವೆ. ಉದ್ಯಮದ ಉಳುವಿಗಾಗಿಯೇ ನಮ್ಮ ಸಂಘಟನೆ ಇರುವುದು. ವೈಯಕ್ತಿಕವಾಗಿ ಜೊತೆ ಜೊತೆಯಲಿ ಧಾರಾವಾಹಿಯ ನಿರ್ದೇಶಕರು, ನಿರ್ಮಾಪಕರು ಹಾಗೂ ನಟ ಅನಿರುದ್ಧ ಅವರು ಹಲವು ವರ್ಷಗಳಿಂದ ಪರಿಚಿತರು. ಹಾಗೆ ಆಗಿರಲಿಕ್ಕಿಲ್ಲ ಎಂದು ಭಾವಿಸುವೆ’ ಎಂದಿದ್ದಾರೆ ಎಸ್.ವಿ. ಶಿವಕುಮಾರ್.

    Live Tv
    [brid partner=56869869 player=32851 video=960834 autoplay=true]

  • ಮಾಜಿ ಸಚಿವ ರೇವಣ್ಣ ಆಪ್ತನಿಗೆ ಐಟಿ ಶಾಕ್

    ಮಾಜಿ ಸಚಿವ ರೇವಣ್ಣ ಆಪ್ತನಿಗೆ ಐಟಿ ಶಾಕ್

    ಹಾಸನ: ಮಾಜಿ ಸಚಿವ ಎಚ್.ಡಿ.ರೇವಣ್ಣ ಆಪ್ತ, ಗುತ್ತಿಗೆದಾರ ಶಿವಕುಮಾರ್ ಮನೆ ಮೇಲೆ ಮಂಗಳವಾರ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

    ಹಾಸನದ ಅಡ್ಲಿಮನೆ ರಸ್ತೆಯಲ್ಲಿರುವ ಶಿವಕುಮಾರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೇವಣ್ಣ ಆಪ್ತ ಶಿವಕುಮಾರ್, ನಾನು ರೇವಣ್ಣ ಜೊತೆ ಇದ್ದೇನೆ. ಒಂದು ಪಕ್ಷದಲ್ಲಿ ಗುರುತಿಸಿಕೊಂಡಿದ್ದೇನೆ. ಆದರೆ ಎಚ್.ಡಿ.ರೇವಣ್ಣ ಆಪ್ತ ಎಂದು ನನ್ನ ಮೇಲೆ ಐಟಿ ರೇಡ್ ಮಾಡಿಲ್ಲ ಎಂದರು.

    ಸುಮಾರು 8 ಜನ ಐಟಿ ಅಧಿಕಾರಿಗಳು ಮಂಗಳವಾರ ಮಧ್ಯಾಹ್ನ ಸುಮಾರು 12:30 ರಿಂದ ಮಧ್ಯರಾತ್ರಿ 1 ಗಂಟೆವರೆಗೆ ದಾಖಲೆ ಪರಿಶೀಲನೆ ಮಾಡಿದ್ದಾರೆ. ಕಾನೂನು ಬದ್ಧವಾಗಿ ಏನನ್ನು ಕೇಳಿದ್ದಾರೆ ಎಲ್ಲವನ್ನೂ ಕೊಟ್ಟಿದ್ದೇನೆ. ಇಂದು ನನ್ನನ್ನು ಐಟಿ ಕಚೇರಿಗೆ ಬರಲು ಹೇಳಿದ್ದಾರೆ. ಈ ವರ್ಷ ಮಾತ್ರ ನಾನು ಐಟಿ ರಿಟರ್ನ್ ಮಾಡಿರಲಿಲ್ಲ. ಹೀಗಾಗಿ ಪೆನಾಲ್ಟಿ ಹಾಕುತ್ತೇನೆ ಎಂದಿದ್ದಾರೆ. ನಮ್ಮ ಟರ್ನ್ ಓವರ್ ಮೇಲೆ ಎಷ್ಟು ಪೆನಾಲ್ಟಿ ಎಂದು ಇಂದು ಗೊತ್ತಾಗುತ್ತೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

  • ಹೊರ ರಾಜ್ಯದಿಂದ ಬಂದ ನಿರ್ಗತಿಕರಿಗೆ ವ್ಯಾಪಾರಿಯಿಂದ ಸ್ವೆಟರ್ ದಾನ

    ಹೊರ ರಾಜ್ಯದಿಂದ ಬಂದ ನಿರ್ಗತಿಕರಿಗೆ ವ್ಯಾಪಾರಿಯಿಂದ ಸ್ವೆಟರ್ ದಾನ

    ದಾವಣಗೆರೆ: ಚಳಿಯನ್ನು ಲೆಕ್ಕಿಸದೇ ಬೀದಿಯಲ್ಲಿ ಮಲಗಿಕೊಂಡು ಸಣ್ಣ ಪುಟ್ಟ ವ್ಯಾಪಾರ ನಡೆಸುತ್ತಿದ್ದ ಹೊರ ರಾಜ್ಯದಿಂದ ಬಂದ ನಿರ್ಗತಿಕರಿಗೆ ದಾವಣಗೆರೆಯ ವ್ಯಾಪಾರಿ ಸೋಗಿ ಆರ್ ಶಿವಯೋಗಿ ಎಂಬವರು ಸ್ವೆಟರ್ ನೀಡಿ ಮಾನವೀಯತೆ ಮೆರೆದಿದ್ದಾರೆ.

    ನಗರದ ಗುಂಡಿ ಸರ್ಕಲ್ ಬಳಿ ಅಸ್ಸಾಂ, ಬಿಹಾರದಿಂದ ಬಂದಂತಹ ಹತ್ತಾರು ಕುಟುಂಬಗಳು ಗೃಹ ಉಪಯೋಗಿ ವಸ್ತುಗಳನ್ನು ಮಾರಾಟ ಮಾಡುತ್ತ ಜೀವನ ಸಾಗಿಸುತ್ತಿದ್ದಾರೆ. ಅವರನ್ನೇ ನಂಬಿಕೊಂಡು ಬಂದಿರುವ ಮಕ್ಕಳ ಪ್ರತಿನಿತ್ಯ ಚಳಿಯಲ್ಲಿ ಬೀದಿ ಬದಿಯಲ್ಲಿ ಮಲಗಿಕೊಳ್ಳುವ ಪರಿಸ್ಥಿತಿ ಎದುರಾಗಿತ್ತು.

    ಇದನ್ನು ನೋಡಿದ ವ್ಯಾಪಾರಿ ಸೋಗಿ ಆರ್ ಶಿವಯೋಗಿ ಹಾಗೂ ಅವರ ಕುಟುಂಬದವರು ಮಕ್ಕಳಿಗೆ ಸೇರಿದಂತೆ ಬಡ ಕುಟುಂಬದವರಿಗೆ ಸ್ವೆಟರ್ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಸುಮಾರು 80ಕ್ಕೂ ಹೆಚ್ಚು ನಿರ್ಗತಿಕರಿಗೆ ಸ್ವೆಟರ್ ದಾನ ಮಾಡಿದ್ದಾರೆ.

    ಮನೆ ಇರುವವರು ಬೆಚ್ಚಗೆ ಮನೆಯಲ್ಲಿ ಮಲಗಿಕೊಳ್ಳುತ್ತಾರೆ. ಆದರೆ ಮನೆ ಇಲ್ಲದೇ ಬೀದಿ ಬದಿ ವ್ಯಾಪಾರವನ್ನೇ ನಂಬಿಕೊಂಡು ಹೊರ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಬಂದಿರುವ ಜನರು ಚಳಿಯಲ್ಲೇ ಮಲಗಿಕೊಳ್ಳುತ್ತಿದ್ದರು. ಅಂತಹವರಿಗೆ ನಮ್ಮದೊಂದು ಸಣ್ಣ ಕಾಣಿಕೆಯಾಗಿ ಈ ರೀತಿಯ ಸಹಾಯ ಮಾಡಿದ್ದೇವೆ. ಇದರಲ್ಲಿ ನಮಗೆ ತೃಪ್ತಿ ತಂದಿದೆ ಎಂದು ಆನಂದ ವ್ಯಕ್ತಪಡಿಸಿದ್ದಾರೆ.

     ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv