ಶ್ರೀಲೀಲಾ (Sreeleela) ಅಭಿಮಾನಿಗಳು ಕಂಗಾಲಾಗಿದ್ಧಾರೆ. ಇದೇನಾಗುತ್ತಿದೆ ನಮ್ಮ ದೇವತೆ ಬದುಕಿನಲ್ಲಿ? ನಾಯಕಿ ಪಟ್ಟ ಕಳೆದುಕೊಳ್ಳುತ್ತಾರಾ ಲೀಲಾ. ಅವಸರಕ್ಕೆ ಬಿದ್ದು ಅವಲಕ್ಷಣ ಮಾಡಿಸಿಕೊಂಡರಾ, ಪ್ರಿನ್ಸ್ ಹಾಗೂ ಪವನ್ ಕಲ್ಯಾಣ್ (Pawan Kalyan) ಸಿನಿಮಾ ಕೈ ಹಿಡಿಯದಿದ್ದರೆ ಭವಿಷ್ಯದ ಗತಿ ಏನು? ಇದು ಖುದ್ದು ಶ್ರೀಲೀಲಾಗೂ ಕಂಗಾಲು ಮಾಡಿದೆ. ಏನದು ಸೀಕ್ರೆಟ್.
ಶ್ರೀಲೀಲಾ ಅಭಿನಯದ ಮೂರು ಸಿನಿಮಾ ಬ್ಯಾಕ್ ಟು ಬ್ಯಾಕ್ ಬಿಡುಗಡೆಯಾದವು. ಅದರಲ್ಲಿ ಬಾಲಕೃಷ್ಣ (Balayya) ಜೊತೆ ನಟಿಸಿದ, ಅಂದರೆ ಮಗಳಾಗಿ ಕಾಣಿಸಿದ್ದ ಭಗವಂತ ಕೇಸರಿ ಹಿಟ್ ಆಯಿತು. ಆದರೆ ಕ್ರೆಡಿಟ್ ಪೂರ್ತಿ ಬಾಲಯ್ಯ ನುಂಗಿ ನೀರು ಕುಡಿದರು. ಶ್ರೀಲೀಲಾ ಗೆದ್ದೂ ಸೋತರು. ಈ ನಡುವೆ ‘ಸ್ಕಂದ’ (Skanda) ಹಾಗೂ ‘ಆದಿಕೇಶವ’ ಬಂತು ನೋಡಿ. ‘ಸ್ಕಂದ’ ಚಿತ್ರದಲ್ಲಿ ಹಾಡು ಕೆಲವು ದೃಶ್ಯ ಅಷ್ಟೇ ಪಾಲಿಗೆ ಬಂದ ಪಂಚಾಮೃತ. ಇದನ್ನೂ ಓದಿ:ಕಾರ್ತಿಕ್‌ಗೆ ಗುನ್ನ ಕೊಟ್ಟ ಡ್ರೋನ್‌ಗೆ ‘ಬಿಗ್ ಬಾಸ್’ ತಿರುಮಂತ್ರ
ಹತ್ತತ್ತು ಸಿನಿಮಾ ಕೈಯಲ್ಲಿವೆ. ಹ್ಯಾಪ್‌ನಿಂಗ್ ಸ್ಟಾರ್ ಶ್ರೀಲೀಲಾಗೆ ಪ್ರಿನ್ಸ್ ಹಾಗೂ ಪವನ್ ಜೊತೆ ಅವಕಾಶ ಸಿಕ್ಕಿದೆ. ಈಗಾಗಲೇ ಶ್ರೀಲೀಲಾ ಫ್ಯಾನ್ಸ್ ದಿಕ್ಕೆಟ್ಟಿದ್ದಾರೆ. ‘ಗುಂಟೂರು ಖಾರಂ’ ಹಾಗೂ ‘ಉಸ್ತಾದ್ ಭಗತ್‌ಸಿಂಗ್’ ಎರಡರಲ್ಲೂ ಶ್ರೀಲೀಲಾಗೆ ಹಾಡು ಮತ್ತು ಕುಣಿತಕ್ಕಷ್ಟೇ ಜಾಗ ಕೊಟ್ಟರೆ ಬದುಕು ಕಷ್ಟ ಕಷ್ಟ.
ಅಕಸ್ಮಾತ್ ಅಲಾ ವೈಕುಂಠಪುರಂಲೋದಲ್ಲಿ ಪೂಜಾ ಹೆಗ್ಡೆಗೆ (Pooja Hegde) ಸಿಕ್ಕಂಥ ಅವಕಾಶ ಈಕೆಗೂ ದಕ್ಕಿದರೆ ಮಾತ್ರ ಬದುಕು ಬೆಳ್ಳಿ ರಥದಲ್ಲಿ ಸೂರ್ಯ ತಂದ ಕಿರಣ. ಮುಂಬರುವ ಅವಕಾಶಗಳಲ್ಲಿ ಶ್ರೀಲೀಲಾ ಗೆದ್ದು ಬೀಗುತ್ತಾರಾ ಕಾದುನೋಡಬೇಕಿದೆ.
ಕನ್ನಡ ಚಿತ್ರರಂಗದಲ್ಲಿ ‘ಬೆಂಕಿ ಕಂಗಳ ನಟ’ ಎಂದೇ ಜನಪ್ರಿಯರಾಗಿರುವ ಡ್ಯಾನಿ ಕುಟ್ಟಪ್ಪ (Danny Kuttappa) ಈಗ ತೆಲುಗಿನಲ್ಲಿ (Telugu) ಅಬ್ಬರಿಸುವುದಕ್ಕೆ ಸಜ್ಜಾಗಿದ್ದಾರೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ತೆಲುಗಿನ ಮಾಸ್ ನಿರ್ದೇಶಕ ಬೋಯಾಪಾಟಿ ಶ್ರೀನು ನಿರ್ದೇಶನದ, ರಾಮ್ ಪೋತಿನೇನಿ ಅಭಿನಯದ ‘ಸ್ಕಂದ’ (Skanda) ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಡ್ಯಾನಿಗೆ ಟಾಲಿವುಡ್ ಹೊಸದೇನಲ್ಲ. ‘ಬಾಹುಬಲಿ’ ಚಿತ್ರದ ಮೂಲಕ ತೆಲುಗಿಗೆ ಹೊರಟ ಅವರು, ನಂತರ ‘ಗದ್ದಲಕೊಂಡ ಗಣೇಶ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ಈಗ ‘ಸ್ಕಂದ’ ಚಿತ್ರದಲ್ಲಿ ಅತೀ ಮುಖ್ಯವಾದ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್‍ನಲ್ಲಿ ಡ್ಯಾನಿ ಕುಟ್ಟಪ್ಪ ಅವರ ಪಾತ್ರದ ಪರಿಚಯವೂ ಇದೆ.
ಅದರ ಜೊತೆಗೆ, ಇತ್ತೀಚೆಗೆ ನಡೆದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ನಿರ್ದೇಶಕ ಬೋಯಾಪಾಟಿ ಶ್ರೀನು, ಡ್ಯಾನಿ ಕುಟ್ಟಪ್ಪ ಅವರನ್ನು ಆಂಧ್ರದ ಜನತೆಗೆ ಪರಿಚಯಿಸಿಕೊಡುವ ಜೊತೆಗೆ, ಅವರ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಡ್ಯಾನಿ ಬಹಳ ಚೆನ್ನಾಗಿ ತಮ್ಮ ಪಾತ್ರವನ್ನು ನಿರ್ವಹಿಸಿದ್ದಾರೆ ಎಂದು ಸಾವಿರಾರು ಜನರ ಮುಂದೆ ಹೊಗಳಿದ್ದಾರೆ. ತೆಲುಗಿನಲ್ಲಿ ‘ಅಖಂಡ’, ‘ಲೆಜೆಂಡ್’, ‘ಸಿಂಹ’ ಮುಂತಾದ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಬೋಯಾಪಾಟಿ ಶ್ರೀನು ಅವರಿಂದ ಮೆಚ್ಚುಗೆಯ ಮಾತುಗಳು ಕೇಳುವುದು ಅಷ್ಟು ಸುಲಭದ ಮಾತಲ್ಲ. ಅಂತಹ ಮಾತುಗಳನ್ನು ಕೇಳಿ ಡ್ಯಾನಿ ಖುಷಿಯಾಗಿದ್ದಾರೆ.
‘ಬೋಯಾಪಾಟಿ ಶ್ರೀನು ಅವರು ಪ್ರತಿ ಪಾತ್ರಕ್ಕೂ ಸಾಕಷ್ಟು ಪ್ರಾಮುಖ್ಯತೆ ಕೊಡುತ್ತಾರೆ. ಆ ಪಾತ್ರವನ್ನು ಯಾರು ಮಾಡುತ್ತಾರೆ ಎನ್ನುವುದರಿಂದ ಹಿಡಿದು, ಆ ಪಾತ್ರ ಹೇಗಿರಬೇಕು, ಏನು ಮಾಡಬೇಕು ಎಂಬ ಸಣ್ಣಸಣ್ಣ ವಿವರಗಳಿಗೂ ಮಹತ್ವ ಕೊಡುತ್ತಾರೆ. ಯಾರಾದರೂ ಹಾಗೆ ಸೂಕ್ಷ್ಮವಾಗಿ ಗಮನಿಸಿದರೆ, ನಮ್ಮ ಜವಾಬ್ದಾರಿಯೂ ಇನ್ನಷ್ಟು ಹೆಚ್ಚುತ್ತದೆ. ಪಾತ್ರಕ್ಕೆ ಇನ್ನಷ್ಟು ಸಮರ್ಪಿಸಿಕೊಳ್ಳಬೇಕು ಎಂದು ಸ್ಫೂರ್ತಿ ಬರುತ್ತದೆ’ ಎನ್ನುತ್ತಾರೆ ಡ್ಯಾನಿ. ‘ಸ್ಕಂದ’ ಚಿತ್ರಕ್ಕಾಗಿ 20 ದಿನಗಳ ಕಾಲ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರಂತೆ ಡ್ಯಾನಿ ಕುಟ್ಟಪ್ಪ. ರಾಮೋಜಿ ಫಿಲಂ ಸಿಟಿ, ಅನ್ನಪೂರ್ಣ ಸ್ಟುಡಿಯೋಸ್ ಮುಂತಾದ ಕಡೆ ಚಿತ್ರೀಕರಣ ನಡೆದಿದ್ದು, ಹಲವು ಸಾಹಸಮಯ ಸನ್ನಿವೇಶಗಳಲ್ಲಿ ಭಾಗವಹಿಸಿದ್ದಾರೆ. ತಮ್ಮ ಪಾತ್ರವನ್ನು Rude and Rough ಎಂದು ಬಣ್ಣಿಸುವ ಅವರು, ಈ ಚಿತ್ರವು ತಮ್ಮ ವೃತ್ತಿಜೀವನಕ್ಕೆ ದೊಡ್ಡ ತಿರುವು ನೀಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ.
ಇನ್ನು, ಮುಂಬರುವ ದಿನಗಳಲ್ಲಿ ಕನ್ನಡದಲ್ಲೂ ಹೊಸಬರು, ಹಳಬರು ಎನ್ನದೇ ಎಲ್ಲರೊಂದಿಗೂ ಕೆಲಸ ಮಾಡಲು ಎದುರು ನೋಡುತ್ತಿರುವ ಡ್ಯಾನಿ ಕುಟ್ಟಪ್ಪ, ‘ಇಂಥವರು ಇಂಥ ಪಾತ್ರ ಮಾಡಬೇಕು ಎನ್ನುವುದಕ್ಕಿಂತ ಆ ಪಾತ್ರದ ಕುರಿತು ಆರೋಗ್ಯಕರ ಚರ್ಚೆಗಳಾಗಬೇಕು. ಒಬ್ಬ ನಿರ್ದೇಶಕ ಮತ್ತು ನಟನ ನಡುವೆ ಚರ್ಚೆಗಳಾದಾಗ, ಒಂದೊಳ್ಳೆಯ ಪಾತ್ರ ಮತ್ತು ಚಿತ್ರವನ್ನು ಮಾಡಬಹುದು’ ಎನ್ನುತ್ತಾರೆ.
ಶ್ರೀಲೀಲಾ (Sreeleela) ಸಿನಿಮಾಗಾಗಿ ಎದುರು ನೋಡುತ್ತಿದ್ದ ಫ್ಯಾನ್ಸ್‌ಗೆ ಇದು ಸ್ಯಾಡ್ ನ್ಯೂಸ್. ರಾಮ್ ಪೋತಿನೇನಿ ಜೊತೆಗಿನ ಶ್ರೀಲೀಲಾ ನಟನೆಯ ‘ಸ್ಕಂದ’ (Skanda Film) ಸಿನಿಮಾ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ. ಹೊಸ ರಿಲೀಸ್ ಡೇಟ್ ಬಗ್ಗೆ ಚಿತ್ರತಂಡ ಅನೌನ್ಸ್ ಮಾಡಿದೆ. ಇದನ್ನೂ ಓದಿ:ಟ್ರೋಲ್‌ಗೆ ಡೋಂಟ್ ಕೇರ್- ಮತ್ತೆ ಬಿಕಿನಿ ಫೋಟೋ ಹಂಚಿಕೊಂಡ ಸೋನು
ರಾಮ್ ಪೋತಿನೇನಿ (Ram Pothineni)- ಶ್ರೀಲೀಲಾ ನಟನೆಯ ‘ಸ್ಕಂದ’ ಸಿನಿಮಾ ಸೆಪ್ಟೆಂಬರ್ 15ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ, ಈಗ ತಂಡ ಸಿನಿಮಾ ರಿಲೀಸ್ ದಿನಾಂಕವನ್ನು ಎರಡು ವಾರ ಮುಂದಕ್ಕೆ ಹಾಕಿದೆ. ಸೆ.28ರಂದು ಚಿತ್ರ ರಿಲೀಸ್ ಮಾಡಲು ಪ್ಲ್ಯಾನ್ ರೂಪಿಸಿಕೊಂಡಿದೆ.
ಬೋಯಪಾಟಿ ಶ್ರೀನು ಆಕ್ಷನ್ ಕಟ್ ಹೇಳಿರುವ ‘ಸ್ಕಂದ’ ಸಿನಿಮಾದ ಟ್ರೈಲರ್, ಹಾಡುಗಳು ಭಾರೀ ಸದ್ದು ಮಾಡಿವೆ. ಪ್ರೀ ರಿಲೀಸ್ ವ್ಯವಹಾರದಲ್ಲಿಯೂ ದಾಖಲೆ ಬರೆದಿರುವ ಈ ಚಿತ್ರವನ್ನು ಶ್ರೀನಿವಾಸ್ ಸಿಲ್ವರ್ ಸ್ಕ್ರೀನ್ ಬ್ಯಾನರ್ ಅಡಿ ಶ್ರೀನಿವಾಸ್ ಚಿತ್ತೂರಿ ನಿರ್ಮಾಣ ಮಾಡಿದ್ದಾರೆ.
ಇಷ್ಟು ದಿನಗಳ ಕಾಲ ಲವರ್ ಬಾಯ್ ಆಗಿ ಮಿಂಚಿದ್ದ ರಾಮ್ ಪೋತಿನೇನಿ ಮೊದಲ ಬಾರಿಗೆ ‘ಸ್ಕಂದ’ ಸಿನಿಮಾದಲ್ಲಿ ಮಾಸ್ ಅವತಾರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಕನ್ನಡತಿ ಶ್ರೀಲೀಲಾ, ರಾಮ್‌ಗೆ ಜೋಡಿಯಾಗಿ ನಟಿಸಿದ್ದಾರೆ. ಸಂತೋಷ್ ಡಿಟೇಕ್ ಕ್ಯಾಮೆರಾ ವರ್ಕ್, ತಮನ್ ಎಸ್‌ಎಸ್ ಮ್ಯೂಸಿಕ್ ಕಿಕ್ ಈ ಚಿತ್ರಕ್ಕಿದೆ. ಜೀ ಸ್ಟುಡಿಯೋಸ್ ಸೌತ್ ಹಾಗೂ ಪವನ್ ಕುಮಾರ್ ಅರ್ಪಿಸುತ್ತಿರುವ ಸ್ಕಂದ ಸಿನಿಮಾವನ್ನು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ. ಸೆ. 28ರಂದು ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ `ಸ್ಕಂದ’ ಸಿನಿಮಾ ತೆರೆ ಕಾಣುತ್ತಿದೆ.
ಉಸ್ತಾದ್ ರಾಮ್ ಪೋತಿನೇನಿ (Ustad Pothineni) ಹಾಗೂ ಬೋಯಾಪಾಟಿ ಶ್ರೀನು ಕಾಂಬಿನೇಷನ್ ಮಾಸ್ ಆಕ್ಷನ್ ಎಂಟರ್ ಟೈನರ್ ‘ಸ್ಕಂದ’ (Skanda) ಸಿನಿಮಾದ ಮೊದಲ ಹಾಡು (Song) ಬಿಡುಗಡೆಯಾಗಿದೆ. ‘ನಿನ್ ಸುತ್ತ ಸುತ್ತ ತಿರುಗಿದೆ’ ಎಂಬ ಗಾನಬಜಾನಕ್ಕೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ಸಂತೋಷ್ ವೆಂಕಿ ಹಾಗೂ ಶ್ರೀನಿಧಿ ತಿರುಮಲ ಕಂಠ ಕುಣಿಸಿದ್ದಾರೆ. ಎಸ್ ಎಸ್ ತಮನ್ ಟ್ಯೂನ್, ರಾಮ್ ಎನರ್ಜಿ, ಶ್ರೀಲೀಲಾ ಗ್ಲಾಮರ್ ರಂಗು, ಅದ್ಧೂರಿ ಸೆಟ್ ಹಾಡಿನ ಶ್ರೀಮಂತಿಕೆಯನ್ನು ಹೆಚ್ಚಿಸಿದೆ. ಐದು ಭಾಷೆಯಲ್ಲಿಯೂ ಸ್ಕಂದ ಹಾಡು ಬಿಡುಗಡೆಯಾಗಿದೆ.
ಲವರ್ ಬಾಯ್ ಆಗಿ ಮಿಂಚುತ್ತಿದ್ದ ರಾಮ್ ಪೋತಿನೇನಿ ಮೊದಲ ಬಾರಿಗೆ ಸ್ಕಂದ ಸಿನಿಮಾಗಾಗಿ ಮಾಸ್ ಅವತಾರ ತಾಳಿದ್ದಾರೆ. ಕನ್ನಡತಿ ಶ್ರೀಲೀಲಾ (sreeleela) ರಾಮ್ ಗೆ ಜೋಡಿಯಾಗಿ ನಟಿಸಿದ್ದಾರೆ. ಸಂತೋಷ್ ಡಿಟೇಕ್ ಕ್ಯಾಮೆರಾ ವರ್ಕ್, ತಮನ್ ಎಸ್ ಎಸ್ ಸಂಗೀತ ಚಿತ್ರಕ್ಕಿದೆ. ಸ್ಕಂದ ಚಿತ್ರವನ್ನು ಶ್ರೀನಿವಾಸ್ ಸಿಲ್ವರ್ ಸ್ಕ್ರೀನ್ ಬ್ಯಾನರ್ ನಡಿ ಶ್ರೀನಿವಾಸ್ ಚಿತ್ತೂರಿ ನಿರ್ಮಾಣ ಮಾಡಿದ್ದಾರೆ. ಜೀ ಸ್ಟುಡಿಯೋಸ್ ಸೌತ್ ಹಾಗೂ ಪವನ್ ಕುಮಾರ್ ಅರ್ಪಿಸುತ್ತಿರುವ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ.
ಸ್ಕಂದ ಸಿನಿಮಾವನ್ನು ದಸರಾ ಸ್ಪೆಷಲ್ ಆಗಿ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿತ್ತು. ಆದರೆ ದಸರಾಗೂ ಮೊದ್ಲೇ ಅಂದರೆ ಸೆಪ್ಟಂಬರ್ 15ರಂದು ರಾಮ್ ಪೋತಿನೇನಿ ಹಾಗೂ ಬೋಯಾಪಾಟಿ ಚಿತ್ರ ತೆರೆಕಾಣಲಿದೆ. ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿಯೂ ಸ್ಕಂದ ಬಿಡುಗಡೆಯಾಗಲಿದೆ.
ಉಸ್ತಾದ್ ರಾಮ್ ಪೋತಿನೇನಿ (Ustad Ram Pothineni) ಹಾಗೂ ಬೋಯಾಪಾಟಿ ಶ್ರೀನು (Boyapati Srinu) ಕಾಂಬಿನೇಷನ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಈ ಚಿತ್ರಕ್ಕೆ ‘ಸ್ಕಂದ’ (Skanda) ಎಂದು ಹೆಸರಿಡಲಾಗಿದೆ. ಸ್ಕಂದನಾಗಿ ರಾಮ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಸಣ್ಣ ಗ್ಲಿಂಪ್ಸ್ ಮೂಲಕ ಚಿತ್ರತಂಡ ಪವರ್ ಫುಲ್ ಟೈಟಲ್ (Title) ರಿವೀಲ್ ಮಾಡಿದೆ.
ಕಾರ್ತಿಕೇಯ ಹಾಗೂ ಸುಬ್ರಹ್ಮಣ್ಯ ಸ್ವಾಮಿಯ ಇನ್ನೊಂದು ಹೆಸರೇ ಸ್ಕಂದ. ಪಂಚಿಂಗ್ ಡೈಲಾಗ್ ಮೂಲಕ ಮಾಸ್ ಅವತಾರದಲ್ಲಿ ರಾಮ್ ಪೋತಿನೇನಿ ಧಗಧಗಿಸಿದ್ದಾರೆ. ದಸರಾಗೆ ಸ್ಕಂದ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿತ್ತು. ಆದರೆ ನಿಗದಿತ ಸಮಯಕ್ಕಿಂತಲೂ ಒಂದು ತಿಂಗಳು ಮುಂಚಿತವಾಗಿಯೇ ಸಿನಿಮಾ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ:ಕೊನೆಗೂ ತನ್ನ ಮಗುವಿನ ತಂದೆ ಬಗ್ಗೆ ಗುಟ್ಟು ರಟ್ಟು ಮಾಡಿದ ಇಲಿಯಾನಾ
ಸೆಪ್ಟಂಬರ್ 15ರಂದು ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ಸ್ಕಂದ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಲವರ್ ಬಾಯ್ ಆಗಿ ಮಿಂಚುತ್ತಿದ್ದ ರಾಮ್ ಪೋತಿನೇನಿ ಮೊದಲ ಬಾರಿಗೆ ಸ್ಕಂದ ಸಿನಿಮಾದಲ್ಲಿ ಮಾಸ್ ಅವತಾರದಲ್ಲಿ ನಟಿಸಿದ್ದಾರೆ. ಕನ್ನಡತಿ ಶ್ರೀಲೀಲಾ (Srileela) ರಾಮ್ ಗೆ ಜೋಡಿಯಾಗಿ ನಟಿಸಿದ್ದಾರೆ.
ಸಂತೋಷ್ ಡಿಟೇಕ್ ಕ್ಯಾಮೆರಾ ವರ್ಕ್, ತಮನ್ ಎಸ್ ಎಸ್ ಮ್ಯೂಸಿಕ್ ಕಿಕ್ ಚಿತ್ರಕ್ಕಿದೆ. ಈ ಚಿತ್ರವನ್ನು ಶ್ರೀನಿವಾಸ್ ಸಿಲ್ವರ್ ಸ್ಕ್ರೀನ್ ಬ್ಯಾನರ್ ನಡಿ ಶ್ರೀನಿವಾಸ್ ಚಿತ್ತೂರಿ ನಿರ್ಮಾಣ ಮಾಡಿದ್ದಾರೆ. ಜೀ ಸ್ಟುಡಿಯೋಸ್ ಸೌತ್ ಹಾಗೂ ಪವನ್ ಕುಮಾರ್ ಅರ್ಪಿಸುತ್ತಿರುವ ಸ್ಕಂದ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ. ಮಾಸ್ ಅವತಾರ, ಪವರ್ ಫುಲ್ ಟೈಟಲ್ ಸ್ಕಂದ ಅಬ್ಬರ ಜೋರಾಗಿದೆ.