Tag: Smart class

  • ಎಲ್ಲಿದೆಯಮ್ಮಾ ಕೋವಿಡ್? ಅದರ ಹೆಸರಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡ್ತಿಲ್ಲ: ಹಾಲಪ್ಪ ಆಚಾರ್

    ಎಲ್ಲಿದೆಯಮ್ಮಾ ಕೋವಿಡ್? ಅದರ ಹೆಸರಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡ್ತಿಲ್ಲ: ಹಾಲಪ್ಪ ಆಚಾರ್

    ರಾಮನಗರ: ಕೋವಿಡ್ ಎಂಬುವುದೇ ಇಲ್ಲ. ಎಲ್ಲಿದೆ ಕೋವಿಡ್? ಕೋವಿಡ್ ಹೆಸರಿನಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿಲ್ಲ. ಈ ಬಗ್ಗೆ ನೀವು ಪೊಷಕರಿಗೆ ತಿಳಿಸಿ ಮಕ್ಕಳನ್ನು ಶಾಲೆಗೆ ಕರೆಸಿಕೊಳ್ಳಬೇಕು ಎಂದು ಸಚಿವ ಹಾಲಪ್ಪ ಆಚಾರ್ ಅಂಗನಾಡಿ ಮುಖ್ಯ ಶಿಕ್ಷಕರಿಗೆ ಹೇಳಿದ್ದಾರೆ.

    ರಾಮನಗರ ಜಿಲ್ಲೆಯ ಬಿಡದಿ ಗ್ರಾಮದ ಅಂಗನವಾಡಿಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆಗೆ ಬಂದಿದ್ದ ಹಾಲಪ್ಪ ಹೆಚ್ಚಿನ ಮಕ್ಕಳು ಗೈರಾಗಿರುವುದನ್ನು ಕಂಡು ಶಿಕ್ಷಕಿಗೆ ಮಕ್ಕಳು ಏಕೆ ಬಂದಿಲ್ಲ ಎಂದು ಪ್ರಶ್ನಿಸಿದ್ದಾರೆ. ಕೋವಿಡ್ ಭೀತಿಗೆ ಹೆಚ್ಚಿನ ಮಕ್ಕಳು ಬಂದಿಲ್ಲ ಎಂದು ಅಂಗನವಾಡಿಯ ಮುಖ್ಯ ಶಿಕ್ಷಕಿ ಹಾಲಪ್ಪ ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ. ಇದನ್ನೂ ಓದಿ: ಹಿಜಬ್‌ ಧರಿಸುವುದು ಮೂಲಭೂತ ಹಕ್ಕು: ಸಿದ್ದರಾಮಯ್ಯ

    ಈ ಸಂದರ್ಭದಲ್ಲಿ ಸಚಿವ ಹಾಲಪ್ಪ ಎಲ್ಲಿದೆಯಮ್ಮಾ ಕೋವಿಡ್? 22 ಮಕ್ಕಳನ್ನು ಶಾಲೆಗೆ ಕರೆಸಿಕೊಳ್ಳುವುದು ಕಷ್ಟನಾ? ಇದರ ಬಗ್ಗೆ ನೀವು ಪೋಷಕರಿಗೆ ತಿಳಿಸಿ ಮಕ್ಕಳನ್ನು ಶಾಲೆಗೆ ಕರೆಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಮವಸ್ತ್ರದ ಆದೇಶ ಪಾಲಿಸದಿದ್ದರೆ ಕಾಲೇಜಿನಿಂದಲೇ ಡಿಬಾರ್

  • 1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆಗೆ ಚಾಲನೆ

    1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆಗೆ ಚಾಲನೆ

    ಬೆಂಗಳೂರು: ಕೋವಿಡ್ ಸಂಕಷ್ಟ ಕಾಲದಲ್ಲಿ ಉನ್ನತ ಶಿಕ್ಷಣ ಕಲಿಕೆಯನ್ನು ವಿದ್ಯಾರ್ಥಿಗಳು ಅತ್ಯಂತ ಸರಳ ಮತ್ತು ಸುಲಭಗೊಳಿಸುವ ನಿಟ್ಟಿನಲ್ಲಿ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ವಿತರಣೆ ಮಾಡುವ ರಾಜ್ಯದ ಮಹಾತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದರು.

    ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಕಲಿಕಾ ನಿರ್ವಹಣಾ ವ್ಯವಸ್ಥೆಯ ಮೂಲಕ ಬೋಧನೆ- ಕಲಿಕೆಗಾಗಿ ಟ್ಯಾಬ್ಲೆಟ್ ಪಿಸಿಗಳನ್ನು ನೀಡಲಾಗಿದ್ದು, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಇಂದು ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಈ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿದರು. ಹತ್ತು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸಿದರು.

    ಏಕಕಾಲದಲ್ಲೇ ರಾಜ್ಯದ ವಿವಿಧ ಜಿಲ್ಲೆಗಳ ಕಾಲೇಜುಗಳಲ್ಲಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಬ್ಲಾಂಕ್ವೆಟ್ ಹಾಲ್ ವೇದಿಕೆಗೆ ವರ್ಚುಯಲ್ ಮೂಲಕ ಲಿಂಕ್ ಆಗಿ ಟ್ಯಾಬ್‍ಗಳನ್ನು ವಿತರಣೆ ಮಾಡಿದರು. ಸಮಾಜ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು, ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರೂ ಆನ್‍ಲೈನ್ ವೇದಿಕೆ ಮೂಲಕ ಟ್ಯಾಬ್‍ಗಳನ್ನು ವಿತರಣೆ ಮಾಡಿದರು. ಇದನ್ನೂ ಓದಿ: 2 ಕೋಟಿ ಲಸಿಕೆ ನೀಡಿ ಇತಿಹಾಸ ನಿರ್ಮಿಸಿದ ಕರ್ನಾಟಕ: ಸುಧಾಕರ್

    ಸ್ಮಾರ್ಟ್ ಕ್ಲಾಸ್ ರೂಂ ಲೋಕಾರ್ಪಣೆ:
    ಬ್ಯಾಂಕ್ವೆಟ್ ಹಾಲ್‍ನಲ್ಲಿ ಸ್ಥಾಪಿಸಲಾಗಿದ್ದ ಮಾದರಿ ಸ್ಮಾಟ್‍ಕ್ಲಾಸ್ ರೂಂ ಅನ್ನು ಮುಖ್ಯಮಂತ್ರಿಗಳು ಉದ್ಘಾಟನೆ ಮಾಡಿ ಅದರ ವ್ಯವಸ್ಥೆ ವೀಕ್ಷಿಸಿದರು. ಅದರ ಮೂಲಕ ವಿದ್ಯಾರ್ಥಿಗಳು ಹೇಗೆ ಕಲಿಯುತ್ತಾರೆ ಎಂಬುದನ್ನು ಅವರು ಗಮನಿಸಿದರಲ್ಲದೆ ಈ ಕುರಿತ ಮಾಹಿತಿಯನ್ನು ಉನ್ನತ ಶಿಕ್ಷಣ ಸಚಿವರೂ ಆದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಂದ ಪಡೆದುಕೊಂಡರು. ಸ್ಮಾರ್ಟ್‍ಕ್ಲಾಸ್ ರೂಂನ ತಾಂತ್ರಿಕ ನೈಪುಣ್ಯತೆ ಹಾಗೂ ಬೋಧನೆ-ಕಲಿಕೆ ವಿಧಾನದ ಬಗ್ಗೆ ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

    ಕೋವಿಡ್ ಸಂಕಷ್ಟ ಕಾಲದಲ್ಲಿ ತಮ್ಮ ನೆರವಿಗೆ ಬಂದ ಕಲಿಕಾ ನಿರ್ವಹಣಾ ವ್ಯವಸ್ಥೆ, ಟ್ಯಾಬ್‍ಗಳು ಹಾಗೂ ಸ್ಮಾರ್ಟ್‍ಕ್ಲಾಸ್ ರೂಂಗಳ ಉಪಯೋಗದ ಬಗ್ಗೆ ಇಬ್ಬರು ವಿದ್ಯಾರ್ಥಿಗಳು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಸಮಕ್ಷಮದಲ್ಲಿ ಅಭಿಪ್ರಾಯ ಹಂಚಿಕೊಂಡರು.

    163 ಕೋಟಿ ರೂ. ವೆಚ್ಚ: ಸಿಎಂ
    ರಾಜ್ಯದಲ್ಲಿನ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 87 ಸರ್ಕಾರಿ ಪಾಲಿಟೆಕ್ನಿಕ್ ಹಾಗೂ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ಉಚಿತವಾಗಿ ನೀಡಲಾಗಿದೆ. ಈ ಯೋಜನೆಗೆ ಸರ್ಕಾರ 163 ಕೋಟಿ ರೂ. ವೆಚ್ಚ ಮಾಡಿದೆ ಎಂದು ಯಡಿಯೂರಪ್ಪ ಅವರು ಮಾಹಿತಿ ಹಂಚಿಕೊಂಡರು.

    ಸೋಂಕಿನ ಸಂಕಷ್ಟದ ಸಂದರ್ಭದಲ್ಲಿ ನಗರ- ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಿಸುವುದು, ಅವರ ನಡುವೆ ಡಿಜಿಟಲ್ ಅಂತರವನ್ನು ಅಳಿಸಿಹಾಕುವ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಇಂಥ ಉತ್ತಮ ಯೋಜನೆಯನ್ನು ಜಾರಿಗೆ ತರಲಾಗಿದೆ. ಅಲ್ಲದೆ 27.77 ಕೋಟಿ ರೂ. ವೆಚ್ಚದಲ್ಲಿ ಕಲಿಕಾ ನಿರ್ವಹಣೆ ವ್ಯವಸ್ಥೆ ವಿದ್ಯಾರ್ಥಿಗಳು ಕಲಿಯುವುದಕ್ಕೆ ಅನುವಾಗುವಂತೆ 2,500 ಸ್ಮಾರ್ಟ್‍ಕ್ಲಾಸ್ ರೂಂಗಳನ್ನು ರಾಜ್ಯಾದ್ಯಂತ ಸ್ಥಾಪಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಹೆಚ್ಚು ಪೂರಕವಾಗಲಿದೆ ಎಂದು ನುಡಿದರು.  ಇದನ್ನೂ ಓದಿ: ಇದನ್ನೂ ಓದಿ:ಹೋಟೆಲ್, ರೆಸಾರ್ಟ್, ವಸತಿ ಗೃಹಗಳ ವಿದ್ಯುತ್, ನೀರಿನ ಬಿಲ್ ಮನ್ನಾ ಮಾಡಿ: ಸಿದ್ದರಾಮಯ್ಯ ಪತ್ರ

    ದೇಶದಲ್ಲಿಯೇ ಮೊದಲ ಉಪಕ್ರಮ:
    ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‍ಗಳ ಮೂಲಕ ಕಲಿಕಾ ನಿರ್ವಹಣಾ ವ್ಯವಸ್ಥೆ ಮಾಡಿರುವ ರಾಜ್ಯದ ಕ್ರಮ ದೇಶದಲ್ಲೇ ಪ್ರಥಮ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು ಅಭಿಪ್ರಾಯಪಟ್ಟರು.

    ಇದೊಂದು ಉದಾತ್ತ ಕಾರ್ಯಕ್ರಮ. ಇದರಲ್ಲಿ ಉನ್ನತ ಶಿಕ್ಷಣ ಇಲಾಖೆಯ ಜತೆಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ಕೈಜೋಡಿಸಿವೆ. ಮೂರು ಇಲಾಖೆಗಳ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಸಂತಸ ಉಂಟು ಮಾಡಿದೆ. ರಾಜ್ಯದ ಉನ್ನತ ಶಿಕ್ಷಣದಲ್ಲಿ ಸುಧಾರಣೆಗಳ ಪರ್ವವೇ ಆರಂಭವಾಗಿದೆ. ಈ ವರ್ಷವೇ ರಾಷ್ಟ್ರೀಯ ಶಿಕ್ಷಣ ನೀತಿಯೂ ಜಾರಿಗೆ ಬರುತ್ತದೆ. ಅದಕ್ಕೆ ಮೊದಲೇ ಕಲಿಕಾ ನಿರ್ವಹಣೆ ವ್ಯವಸ್ಥೆ ಜಾರಿಗೆ ಬಂದಿದ್ದು, ಅದನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ಕೋಡಲಾಗಿದೆ. ಜಾಗತಿಕ ಮಟ್ಟದ ಆಧುನಿಕ ಕಲಿಕಾ ಮಟ್ಟಕ್ಕೆ ತಕ್ಕಂತೆ ಕಲಿಕೆಯನ್ನು ನಿರಂತರವಾಗಿ ಮುಂದುವರಿಸುವುದು ಹಾಗೂ ಆನ್‍ಲೈನ್ ಮೂಲಕವೇ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‍ಗಳು ನೆರವಾಗುತ್ತವೆ ಎಂದು ಅವರು ಹೇಳಿದರು.

    ಈ ಸಂದರ್ಭದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಪ್ರಭಾಕರ್ ಟ್ಯಾಬ್ಲೆಟ್ ಪಿಸಿಗಳ ಬಗ್ಗೆ ಮಾಹಿತಿ ಹಾಗೂ ಅವುಗಳ ಮೂಲಕ ಸಮಗ್ರ ಕಲಿಕಾ ವ್ಯವಸ್ಥೆ ಕಲಿಕೆ-ಬೋಧನೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

    ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ನಾಗಲಾಂಬಿಕೆ ದೇವಿ, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಪಾಠ ಕೇಳಿದ ಡಿಸಿಎಂ
    ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಮಾರ್ಟ್‍ಕ್ಲಾಸ್ ರೂಂ ಉದ್ಘಾಟಿಸಿ ನಿರ್ಗಮಿಸಿದ ನಂತರ, ಮತ್ತೆ ಅಲ್ಲಿಗೆ ಆಗಮಿಸಿದ ಡಾ.ಅಶ್ವತ್ಥನಾರಾಯಣ, ಸ್ಮಾರ್ಟ್‍ಕ್ಲಾಸ್ ರೂಂನಲ್ಲಿ ಪಾಠ ಕೇಳಿದರು.

    ಈ ವೇಳೆಯಲ್ಲಿ ಕನ್ನಡ ಪ್ರಾಧ್ಯಾಪಕರೊಬ್ಬರು ಸ್ಮಾರ್ಟ್‍ಕ್ಲಾಸ್ ರೂಂನಿದಲೇ ಮೊದಲ ಪಾಠ ಆರಂಭಿಸಿದರು. ಹೈಸ್ಪೀಡ್ ಇಂಟರ್‍ ನೆಟ್, ಆಧುನಿಕ ಫಿಚರ್‍ ಗಳುಳ್ಳ ಟ್ಯಾಬ್ಲೆಟ್ ಪಿಸಿ ಮೂಲಕ ಕಲಿಕಾ ನಿರ್ವಹಣಾ ವ್ಯವಸ್ಥೆ ಅಡಿಯಲ್ಲಿ ನಡೆದ ಈ ಬೋಧನೆ- ಕಲಿಕೆಯ ಮಾದರಿಯನ್ನು ಅವರು ನೇರವಾಗಿ ವಿದ್ಯಾರ್ಥಿಯಂತೆಯೇ ವೀಕ್ಷಿಸಿದರು.

    ವಿದ್ಯಾರ್ಥಿಗಳ ಜತೆಯಲ್ಲಿ ಪಾಠವನ್ನು ಆಸಕ್ತಿಯಿಂದ ಕೇಳಿದ ಡಿಸಿಎಂ, ತಂತ್ರಜ್ಞಾನದ ಮೂಲಕ ಕನ್ನಡ ಪಾಠ ಕೇಳಿ ಚಕಿತರಾದರು. ಅಲ್ಲದೆ, ಸ್ಮಾರ್ಟ್‍ಕ್ಲಾಸ್ ರೂಂನ ಪರಿಣಾಮಕಾರಿ ದಕ್ಷತೆಯನ್ನು ವೀಕ್ಷಿಸಿ ಸಂತಸಪಟ್ಟರು. ಬೋಧನೆಗೆ ಈ ವ್ಯವಸ್ಥೆ ಎಷ್ಟರಮಟ್ಟಿಗೆ ಪರಿಣಾಮಕಾರಿ ಎಂದು ಬೋಧಕರಿಂದಲೇ ಮಾಹಿತಿ ಪಡೆದರಲ್ಲದೆ, ತಮ್ಮ ಜೊತೆ ಕೂತು ಪಾಠ ಕೇಳಿದ ವಿದ್ಯಾರ್ಥಿಗಳ ಜೊತೆಗೂ ಸಂವಾದ ನಡೆಸಿದರು. ಇದನ್ನೂ ಓದಿ: ನೆರೆಯ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ವೈರಾಣು ಪತ್ತೆ – ಸರ್ಕಾರಕ್ಕೆ ತಜ್ಞರ ಎಚ್ಚರಿಕೆ

    ಕೋಲಾರ ಜಿಲ್ಲೆಯ ಮಾಲೂರಿನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕಿ ಶ್ವೇತಾ ಈ ವೇಳೆ ಪಾಠ ಮಾಡಿದರು. ನಂತರ ಮಹಾರಾಣಿ ಅಮ್ಮಣ್ಣಿ ಕಾಲೇಜಿನ ಪ್ರಾಧ್ಯಾಪಕಿ ಪ್ರೊ.ಶಾಲಿನಿ ಅವರು ರಾಸಾಯನ ಶಾಸ್ತ್ರ ಕ್ಲಾಸ್ ನಡೆಸಿಕೊಟ್ಟರು. ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್ ಅವರೂ ಪಾಠ ಕೇಳಿಸಿಕೊಂಡರು.

  • ಗ್ರಾಮಸ್ಥರ, ಶಿಕ್ಷಕರ ಪರಿಶ್ರಮದಿಂದ ಸರ್ಕಾರಿ ಶಾಲೆಗೆ ಸಿಕ್ತು ಹೈಟಕ್ ಟಚ್

    ಗ್ರಾಮಸ್ಥರ, ಶಿಕ್ಷಕರ ಪರಿಶ್ರಮದಿಂದ ಸರ್ಕಾರಿ ಶಾಲೆಗೆ ಸಿಕ್ತು ಹೈಟಕ್ ಟಚ್

    ಹಾವೇರಿ: ಖಾಸಗಿ ಶಾಲೆಗಳ ಪ್ರಭಾವದಿಂದ ವರ್ಷದಿಂದ ವರ್ಷಕ್ಕೆ  ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಶಾಲೆಯ ದಾಖಲಾತಿ ಹೆಚ್ಚಳ ಹಾಗೂ ಉತ್ತಮ ಶಿಕ್ಷಣ ನೀಡಲು ಶಿಕ್ಷಕರ ಬಳಗ ಹೊಸ ಪ್ಲಾನ್ ಮಾಡಿದ್ದಾರೆ. ಗ್ರಾಮದ ದಾನಿಗಳ ಸಹಾಯ ಪಡೆದು ಕಂಪ್ಯೂಟರ್, ಸ್ಮಾರ್ಟ ಕ್ಲಾಸ್, ಡೆಸ್ಕ್ ಸೇರಿದಂತೆ ಮೂಲಭೂತ ಸೌಕರ್ಯವನ್ನ ಶಾಲೆಗೆ ಪಡೆದುಕೊಂಡಿದ್ದಾರೆ. ಈ ಮೂಲಕ ಖಾಸಗಿ ಶಾಲೆಯನ್ನು ಮೀರಿಸುವಂತೆ ಸರ್ಕಾರಿ ಶಾಲೆಯನ್ನು ಅಭಿವೃದ್ದಿ ಮಾಡಿದ್ದಾರೆ.

    ಹೌದು, ಇದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹೊಸಕಟ್ಟಿ ಗ್ರಾಮದಲ್ಲಿ ಕಂಡು ಬಂದ ದೃಶ್ಯಗಳು. ಕಳೆದ ಒಂದು ವರ್ಷದಿಂದ ಸರ್ಕಾರಿ ಶಾಲೆಯ ಚಿತ್ರಣವೇ ಬದಲಾವಣೆಯಾಗಿದೆ. ಪುಟ್ಟಗ್ರಾಮ ಹೊಸಕಟ್ಟಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿ ವರೆಗೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

    ಕಳೆದ ಮೂರು ವರ್ಷಗಳಿಂದ ವರ್ಷದಿಂದ ವರ್ಷಕ್ಕೆ ಶಾಲೆಯ ದಾಖಲಾತಿ ಪ್ರಮಾಣ ಕಡಿಮೆಯಾಗಿತ್ತು. ಶಾಲೆಯ ಅಭಿವೃದ್ಧಿ ಪಡಿಸಲು ಶಿಕ್ಷಕರ ಬಳಗವು ಒಂದು ಹೊಸ ಪ್ಲಾನ್ ಮಾಡಿ, ಗ್ರಾಮದ ಮನೆ ಮನೆಗೆ ತೆರಳಿ ದಾನ ರೂಪದಲ್ಲಿ ಮೂಲಭೂತ ಸೌಕರ್ಯವನ್ನ ಕೇಳಿದ್ದಾರೆ. ಹೊಸಕಟ್ಟಿ ಗ್ರಾಮದ ಜನರಿಂದ 10 ರೂ. ನಿಂದ ಒಂದು ಸಾವಿರ ರೂ. ವರೆಗೂ ಹಣವನ್ನು ವಂತಿಕೆಯಾಗಿ ಸಂಗ್ರಹಿಸಿ ಸರ್ಕಾರಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಿದ್ದಾರೆ.

    ಗ್ರಾಮದ ಜನರು ಇದುವರೆಗೆ ಐದು ಕಂಪ್ಯೂಟರ್, ಒಂದೂವರೇ ಲಕ್ಷ ರುಪಾಯಿ ಖರ್ಚು ಮಾಡಿ ಡಿಜಿಟಲ್ ಕ್ಲಾಸ್ ರೂಂ ನಿರ್ಮಿಸಿ, ಖಾಸಗಿ ಶಾಲೆಗಳಿಗಿಂತ ನಾವು ಕಮ್ಮಿ ಇಲ್ಲ ಎಂದು ತಂತ್ರಜ್ಞಾನ ಬಳಿಸಿ ಮಕ್ಕಳಿಗೆ ಪಾಠಭೋಧನೆ ಮಾಡುತ್ತಿದ್ದಾರೆ. ಶಿಕ್ಷಕರು ಹಾಗೂ ಗ್ರಾಮಸ್ಥರ ಈ ಕಾರ್ಯದಿಂದ ಹೊಸಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆ ಹೆಚ್ಚಾಗಿದೆ.

    ಪ್ರಸ್ತುತ ಗ್ರಾಮದ ಮಕ್ಕಳು ಖಾಸಗಿ ಶಾಲೆಗೆ ಹೋಗುವದನ್ನ ನಿಲ್ಲಿಸಿ, ಸರ್ಕಾರಿ ಶಾಲೆಯ ಕಡೆ ಬರುತ್ತಿದ್ದಾರೆ. 180 ಮಕ್ಕಳು ಇದ್ದ ಸಂಖ್ಯೆ ಈಗ 240 ಕ್ಕೆ ಏರಿಕೆಯಾಗಿದೆ. ಒಂಬತ್ತು ಜನ ಶಿಕ್ಷಕರು ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಿಕ್ಷಕರು ಶನಿವಾರ ಮತ್ತು ಭಾನುವಾರು ಮಕ್ಕಳಿಗೆ ರಜೆ ನೀಡಿದ ಪ್ರತಿವಾರ ಒಬ್ಬರು ಸ್ಪೇಷಲ್ ಕ್ಲಾಸ್ ನೀಡುತ್ತಾರೆ. ಇದರಿಂದ ಸುತ್ತಮುತ್ತಲಿನ ಗ್ರಾಮದ ಮಕ್ಕಳು ಸರ್ಕಾರಿ ಶಾಲೆಯ ಪ್ರವೇಶ ಪಡೆಯುತ್ತಿದ್ದಾರೆ.

    ಇನ್ನು ಗ್ರಾಮದ ಜನರಿಗೆ ತಮ್ಮ ಕಾರ್ಯದ ಬಗ್ಗೆ ಮೆಚ್ಚುಗೆ ಇದ್ದು, ಶಾಲೆಯನ್ನ ಇನ್ನು ಹೆಚ್ಚು ಅಭಿವೃದ್ದಿ ಮಾಡಿ ಮಕ್ಕಳಿಗೆ ಉತ್ತಮ ಶಿಕ್ಷಣವನ್ನ ಕೊಡಿಸುತ್ತೆವೆ ಎನ್ನುತ್ತಿದ್ದಾರೆ. ಶಾಲೆಯ ಶಿಕ್ಷಕರ ಬಳಗದ ಪರಿಶ್ರಮ ಹಾಗೂ ಗ್ರಾಮದ ದಾನಿಗಳಿಗೆ ಬಡಮಕ್ಕಳು ಡಿಜಿಟಲ್ ಶಿಕ್ಷಣ ಸೇರಿದಂತೆ ಕಂಪ್ಯೂಟರ್ ಶಿಕ್ಷಣವನ್ನ ಪಡೆದು ಜಿಲ್ಲೆಯಲ್ಲಿ ಮಾದರಿ ಶಾಲೆಯಲ್ಲಿಗೆ. ಗ್ರಾಮದ ಸರ್ಕಾರಿ ಶಾಲೆಯನ್ನ ಅಭಿವೃದ್ದಿ ಮಾಡಿದ ಹೊಸಕಟ್ಟಿ ಗ್ರಾಮಸ್ಥರಿಗೆ ನಮ್ಮದೊಂದು ಸಲಾಂ.

    https://www.youtube.com/watch?v=o0_5VconZHU

  • ಸರ್ಕಾರಿ ಶಾಲೆಗಾಗಿ ಒಂದೂವರೆ ಲಕ್ಷ ರೂ. ಖರ್ಚು ಮಾಡಿ ಸ್ಮಾರ್ಟ್ ಕ್ಲಾಸ್ ಮಾಡಿದ್ರು

    ಸರ್ಕಾರಿ ಶಾಲೆಗಾಗಿ ಒಂದೂವರೆ ಲಕ್ಷ ರೂ. ಖರ್ಚು ಮಾಡಿ ಸ್ಮಾರ್ಟ್ ಕ್ಲಾಸ್ ಮಾಡಿದ್ರು

    ಕೊಪ್ಪಳ: ನಾವು ಎಷ್ಟೋ ಜನ ಮೇಷ್ಟ್ರನ್ನ ಪಬ್ಲಿಕ್ ಹೀರೋ ಆಗಿ ತೋರಿಸಿದ್ದೇವೆ. ಆದರೆ ಇವತ್ತಿನ ಟೀಚರ್ ಫುಲ್ ಡಿಜಿಟಲ್. ಈ ಸರ್ಕಾರಿ ಮೇಷ್ಟ್ರು ತಮ್ಮ ಜೇಬಿನಿಂದಲೇ ಒಂದೂವರೆ ಲಕ್ಷ ರೂಪಾಯಿ ಖರ್ಚು ಮಾಡಿ ಸ್ಮಾರ್ಟ್ ಕ್ಲಾಸ್ ಮಾಡಿದ್ದಾರೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆ.

    ಸರ್ಕಾರಿ ಶಾಲಾ ಶಿಕ್ಷಕರು ಸರಿಯಾಗಿ ಶಾಲೆಗೇ ಬರಲ್ಲ, ಬಂದರು ಚೆನ್ನಾಗಿ ಪಾಠ ಮಾಡಲ್ಲ. ಒಳ್ಳೇ ರಿಸಲ್ಟ್ ಕೊಡಲ್ಲ ಮತ್ತು ಸುಮ್ಮನೆ ಟೈಂ ಪಾಸ್ ಮಾಡುತ್ತಾರೆ. ಮಕ್ಕಳಿಗೆ ಪಾಠ ಬಿಟ್ಟು ಬೇರೇ ಯಾವುದೇ ಚಟುವಟಿಕೆಗಳನ್ನು ಮಾಡಿಸಲ್ಲ. ಹೀಗೆ ಸರ್ಕಾರಿ ಶಾಲೆಗಳ ಬಗ್ಗೆ ಸಾಕಷ್ಟು ಆರೋಪಗಳಿವೆ. ಆದರೆ ನಮ್ಮ ಪಬ್ಲಿಕ್ ಹೀರೋ ತುಂಬಾನೇ ಡಿಫರೆಂಟ್. ತಮ್ಮ ಜೇಬಿನಿಂದಲೇ ಒಂದೂವರೆ ಲಕ್ಷ ರೂಪಾಯಿ ಖರ್ಚು ಮಾಡಿ ಸ್ಮಾರ್ಟ್ ಕ್ಲಾಸ್ ಮಾಡುತ್ತಿದ್ದಾರೆ.

    ಅಂದಹಾಗೇ ಮೇಷ್ಟ್ರ ಹೆಸರು ಮೊಹಮ್ಮದ್ ಅಬಿದ ಹುಸೇನ್ ಅತ್ತಾರ. ಕೊಪ್ಪಳದ ಹೃದಯ ಭಾಗದಲ್ಲಿರೋ ಸರ್ಕಾರಿ ಕೇಂದ್ರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದಾರೆ. ತಮ್ಮ ಸಂಬಳದ ಒಂದಿಷ್ಟು ಹಣವನ್ನು ಬಡ ಮಕ್ಕಳ ಶಿಕ್ಷಣಕ್ಕಾಗಿ ಬಳಸುತ್ತಿದ್ದಾರೆ.

    ಪ್ರೊಜೆಕ್ಟರ್ ಮೂಲಕ ಮಕ್ಕಳಿಗೆ ಚೆನ್ನಾಗಿ ಗಣಿತವನ್ನು ಅರ್ಥ ಮಾಡಿಸುತ್ತಾರೆ. ಮಕ್ಕಳು ಕೂಡಾ ಈ ಮೇಷ್ಟ್ರನ್ನ ಕಂಡರೆ ಅಷ್ಟೇ ಇಷ್ಟ ಪಡುತ್ತಾರೆ. ಕೇವಲ ಸಂಬಳಕ್ಕಾಗಿ ಕೆಲಸ ಮಾಡದೆ ಬಡ ವಿದ್ಯಾರ್ಥಿಗಳಿಗೂ ಗುಣಾತ್ಮಕ ಶಿಕ್ಷಣ ನೀಡುತ್ತಿರೋ ಅತ್ತಾರ ಮೇಷ್ಟ್ರಿಗೆ ನಮ್ಮದೊಂದು ಸಲಾಂ.