Tag: Smoking Zone

  • ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಶಾಕ್ – ಸ್ಮೋಕಿಂಗ್ ಝೋನ್ ಇರದಿದ್ರೆ ಲೈಸನ್ಸ್ ರದ್ದು

    ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಶಾಕ್ – ಸ್ಮೋಕಿಂಗ್ ಝೋನ್ ಇರದಿದ್ರೆ ಲೈಸನ್ಸ್ ರದ್ದು

    – ಮೊದಲು ನೋಟಿಸ್, ಆಮೇಲೆ ದಂಡಂ ದಶಗುಣಂ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪಬ್, ಕ್ಲಬ್, ಹೋಟೆಲ್, ಬಾರ್‌ಗಳಿಗೆ ಬಿಬಿಎಂಪಿ (BBMP) ಬಿಗ್‌ಶಾಕ್ ನೀಡಿದೆ. ಬಿಬಿಎಂಪಿ ನೋಟಿಸ್ ಜಾರಿ ಮಾಡಿದರೂ ಪ್ರತಿಕ್ರಿಯಿಸದ ಹೋಟೆಲ್‌ಗಳು, ಪಬ್, ಕ್ಲಬ್, ರೆಸ್ಟೋರೆಂಟ್ ಪರವಾನಗಿ (Licence) ರದ್ದು ಮಾಡಲು ಬಿಬಿಎಂಪಿ ಮುಂದಾಗಿದೆ.

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಳೆದ 15 ದಿನಗಳ ಹಿಂದೆ ಸುಮಾರು 300ಕ್ಕೂ ಹೆಚ್ಚು ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್‌ಗಳಿಗೆ ನೋಟಿಸ್ ಜಾರಿ ಮಾಡಿತ್ತು. ಸ್ಮೋಕಿಂಗ್ ಝೋನ್  (Smoking Zone) ನಿರ್ಮಾಣ ಮಾಡಿಲ್ಲ ಅಂತಾ ನೋಟಿಸ್ ನೀಡಿ ಎಚ್ಚರಿಸಿತ್ತು. ನೋಟಿಸ್ ಜಾರಿ ಮಾಡಿದರೂ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳು ಸರಿಪಡಿಸಿಕೊಂಡಿಲ್ಲ ಎಂಬ ಮಾಹಿತಿ ಬಿಬಿಎಂಪಿ ಪರಿಶೀಲನೆ ವೇಳೆ ಗೊತ್ತಾಗಿದೆ. ಹೀಗಾಗಿ ಅಂತಹ ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್‌ಗಳಿಗೆ ಬಿಸಿ ಮುಟ್ಟಿಸಲು ಪಾಲಿಕೆ ಮುಂದಾಗಿದೆ. ಇದನ್ನೂ ಓದಿ: ಪ್ರವಾಸಿಗರಿಗೆ ಹುಡುಗಿಯರು ಮತ್ತು ಮಹಿಳೆಯರು ಲಭ್ಯವಿದ್ದಾರೆ – ಸಾಮಾಜಿಕ ಜಾಲತಾಣದಲ್ಲಿ ಕೊಡಗಿನ ಬಗ್ಗೆ ಅಪಪ್ರಚಾರ

    ಇನ್ನೂ ಬಿಬಿಎಂಪಿ ಮುಂದಿನ ವಾರ ನೋಟಿಸ್ ನೀಡಿದ್ದ ಸ್ಥಳಗಳನ್ನು ಪರಿಶೀಲನೆ ನಡೆಸಲಿದೆ. ಪರಿಶೀಲನೆ ನಡೆಸಿ ನೋಟಿಸ್ ಕೊಟ್ಟ ಮೇಲೂ ಸ್ಮೋಕಿಂಗ್ ಝೋನ್ ಅಳವಡಿಸಿಕೊಂಡಿಲ್ಲ ಎಂಬುದು ಕಂಡು ಬಂದರೆ ಪರವಾನಗಿ ರದ್ದು ಮಾಡಲಿದ್ದಾರೆ. ಇದನ್ನೂ ಓದಿ:ಬುರುಡೆ ಗ್ಯಾಂಗ್‌ ಹೇಳಿದಂತೆ ನಾನು ಮಾಡಿದ್ದೇನೆ – ಎಸ್‌ಐಟಿ ಪ್ರಶ್ನೆಗಳಿಗೆ ಸುಜಾತ ಥಂಡಾ

    ಬೆಂಗಳೂರಿನಲ್ಲಿರುವ ಎಲ್ಲಾ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳು ನಿಯಮಾನುಸಾರ ಕ್ರಮವಹಿಸಬೇಕು. ಸ್ಮೋಕಿಂಗ್ ಝೋನ್ ಕಡ್ಡಾಯ ಇರಲೇಬೇಕು. ಇಲ್ಲದೇ ಹೋದರೆ ಕೇಸ್ ಹಾಕಿ ಪರವಾನಗಿ ರದ್ದು ಮಾಡಲು ಬಿಬಿಎಂಪಿ ಮುಂದಾಗಿದೆ. ಇದನ್ನೂ ಓದಿ: ಚಾಮುಂಡೇಶ್ವರಿ ದೇವಸ್ಥಾನ ಹಿಂದೂ ದೇಗುಲವಲ್ಲದೇ ಇದ್ದಿದ್ರೆ ಮುಜರಾಯಿ ವ್ಯಾಪ್ತಿಗೆ ತರುತ್ತಿರಲಿಲ್ಲ – ಪ್ರಮೋದಾ ದೇವಿ ಒಡೆಯರ್‌

  • ಪಬ್, ಹೋಟೆಲ್‌ಗಳಿಗೆ BBMP ಶಾಕ್ – 1 ವಾರದಲ್ಲಿ ಸ್ಮೋಕಿಂಗ್ ಝೋನ್ ನಿರ್ಮಿಸದಿದ್ರೆ ಲೈಸೆನ್ಸ್ ರದ್ದು!

    ಪಬ್, ಹೋಟೆಲ್‌ಗಳಿಗೆ BBMP ಶಾಕ್ – 1 ವಾರದಲ್ಲಿ ಸ್ಮೋಕಿಂಗ್ ಝೋನ್ ನಿರ್ಮಿಸದಿದ್ರೆ ಲೈಸೆನ್ಸ್ ರದ್ದು!

    – 200ಕ್ಕೂ ಹೆಚ್ಚು ಪಬ್‌ಗಳಿಗೆ ಬಿಬಿಎಂಪಿ ನೋಟಿಸ್

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ 200ಕ್ಕೂ ಅಧಿಕ ಬಾರ್, ಪಬ್ ಹಾಗೂ ಹೋಟೆಲ್‌ಗಳಿಗೆ ಬಿಬಿಎಂಪಿ (BBMP) ನೋಟಿಸ್ ಜಾರಿ ಮಾಡಿದೆ. ಒಂದು ವಾರದೊಳಗೆ ಸ್ಮೋಕಿಂಗ್ ಝೋನ್ ನಿರ್ಮಿಸದಿದ್ರೆ ಲೈಸೆನ್ಸ್ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ತಹಶೀಲ್ದಾರ್ ಕಚೇರಿಯಲ್ಲಿ ಅಗ್ನಿ ಅವಘಡ; ಮಹತ್ವದ ದಾಖಲೆಗಳು ಭಸ್ಮ

    ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿರುವ 200ಕ್ಕೂ ಅಧಿಕ ಬಾರ್, ಪಬ್ ಹಾಗೂ ಹೊಟೇಲ್‌ಗಳಿಗೆ ನೋಟಿಸ್ ನೀಡಿದೆ. ಈ ಮೂಲಕ ಎಲ್ಲಾ ಹೋಟೆಲ್‌ಗಳಲ್ಲಿ 20ಕ್ಕಿಂತ ಹೆಚ್ಚು ಆಸನಗಳಿರುವ ಸ್ಮೋಕಿಂಗ್ ಝೋನ್‌ನ್ನು ನಿರ್ಮಿಸಬೇಕು ಎಂದಿದೆ.

    ಸದ್ಯ ಸ್ಮೋಕಿಂಗ್ ಝೋನ್ ಇಲ್ಲ ಎಂಬ ಕಾರಣಕ್ಕೆ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ಬಂದ ಒಂದು ವಾರದೊಳಗೆ ಸ್ಮೋಕಿಂಗ್ ಝೋನ್ ನಿರ್ಮಾಣ ಮಾಡದಿದ್ದರೆ ಹೊಟೇಲ್‌ಗಳ ಲೈಸೆನ್ಸ್ ರದ್ದು ಮಾಡುತ್ತೇವೆ ಎಂದು ತಿಳಿಸಿದೆ.ಇದನ್ನೂ ಓದಿ: ಮಾಲೀಕನನ್ನ ಅರಸಿ 1,790 ಕಿಮೀ ಪ್ರಯಾಣ – ಚಿಕ್ಕ ವಯಸ್ಸಲ್ಲೇ ಮಂಡ್ಯದ ಪಾರಿವಾಳ ದಾಖಲೆ

  • ಬೆಂಗಳೂರಿನ ಹೋಟೆಲ್‌, ಪಬ್‌, ಬಾರ್‌ & ರೆಸ್ಟೋರೆಂಟ್‌ಗಳಿಗೆ ಹೊಸ ರೂಲ್ಸ್‌ – ಇಲ್ಲಿದೆ ಡೀಟೆಲ್ಸ್

    ಬೆಂಗಳೂರಿನ ಹೋಟೆಲ್‌, ಪಬ್‌, ಬಾರ್‌ & ರೆಸ್ಟೋರೆಂಟ್‌ಗಳಿಗೆ ಹೊಸ ರೂಲ್ಸ್‌ – ಇಲ್ಲಿದೆ ಡೀಟೆಲ್ಸ್

    ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ತನ್ನ ವ್ಯಾಪ್ತಿಯಲ್ಲಿರುವ ಹೋಟೆಲ್‌, ಪಬ್‌, ಬಾರ್‌, ರೆಸ್ಟೋರೆಂಟ್‌ (Bar And Restaurant) ಹಾಗೂ ಕಾಫಿ ಬಾರ್‌ಗಳಿಗೆ ಹೊಸ ನಿಯಮಗಳನ್ನ ಜಾರಿಗೊಳಿಸಿದೆ.

    ಬಿಬಿಎಂಪಿ ವ್ಯಾಪ್ತಿಯಲ್ಲಿನ ಹೋಟೆಲ್‌, ಬಾರ್‌ & ರೆಸ್ಟೋರೆಂಟ್‌ಗಳಲ್ಲಿ ಧೂಮಪಾನ ವಲಯ ಮಾಡದೇ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿತ್ತು. ಆಗಾಗ್ಗೆ ನಿಯಮ ಉಲ್ಲಂಘನೆ ಪ್ರಕರಣಗಳೂ ದಾಖಲಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಬಿಬಿಎಂಪಿ ಹೋಟೆಲ್, ಪಬ್, ಬಾರ್ ಗಳಿಗೆ ಹೊಸ ನಿಯಮ ಜಾರಿಗೊಳಿಸಿದೆ.

    ಬಿಬಿಎಂಪಿ ಹೊಸ ನಿಯಮ ಏನು?

    • 30 ಕೊಠಡಿಗಳಿಗಿಂತ ಮೇಲ್ಪಟ್ಟ ಹೋಟೆಲ್ (Bengaluru Hotels), ಬಾರ್ & ರೆಸ್ಟೋರೆಂಟ್, ಪಬ್ ಇದ್ರೆ 30 ಕುರ್ಚಿ ಇರುವ ಧೂಮಪಾನ ಪ್ರದೇಶ ನಿಗದಿ ಮಾಡಬೇಕು
    • ಧೂಮಪಾನ ವಲಯ (Smoking zone) ನಿರ್ಮಾಣ ಮಾಡಿ ಪೋಟೋ ಸಮೇತ ಸ್ಮೋಕಿಂಗ್ ಝೂನ್‌ಗೆ ಪರವಾನಗಿಗೆ ಅರ್ಜಿ ಹಾಕಬೇಕು
    • ಅಧಿಕಾರಿಗಳು ಸ್ಥಳಕ್ಕೆ ಭೇಟಿ ನಿಯಮಾನುಸಾರ ಸ್ಮೋಕಿಂಗ್ ಝೂನ್ ಇದೆಯೇ ಅಂತ ರಿಪೋರ್ಟ್ ಕೊಟ್ಟರೆ, ಆಮೇಲೆ ಎನ್‌ಒಸಿ ವಿತರಣೆಗೆ ಸೂಚನೆ ನೀಡಲಾಗುತ್ತದೆ.
    • ಸ್ಮೋಕಿಂಗ್ ಏರಿಯಾ ಕೊಠಡಿಗೆ ಎಂಟ್ರಿ ಆದಾಗ ಸ್ವಯಂಚಾಲಿತವಾಗಿ ಬಾಗಿಲು ಬಂದ್‌ ಆಗುವ ರೀತಿಯಲ್ಲಿ ಇರಬೇಕು
    • ಸ್ಮೋಕಿಂಗ್ ಏರಿಯಾ ಅಂತ ನಾಮಫಲಕ ದೊಡ್ಡದಾಗಿ ಇರಬೇಕು. 60-30ರ ನಿಯಮದಲ್ಲಿ ಅಕ್ಷರಗಳು ಇರಬೇಕು
    • ಸ್ಮೋಕಿಂಗ್‌ ಝೂನ್‌ಗಳಲ್ಲಿ ಏರ್‌ ಫ್ಲೋ ಸಿಸ್ಟಂ ಇರಬೇಕು. ಪಕ್ಕದ ಮನೆ ಅಥವಾ ಪಕ್ಕದ ಕಟ್ಟಡಗಳಿಗೆ ಹೊಗೆ ಹೋಗುವಂತೆ ಇರಬಾರದು
    • ಸ್ಮೋಕಿಂಗ್ ಝೂನ್ ನಿಯಮ ಉಲ್ಲಂಘನೆಯಾದ್ರೆ ಕಾನೂನು ಕ್ರಮ ಮತ್ತು ದಂಡ ವಿಧಿಸಲಾಗುತ್ತದೆ ಎಂದು ಬಿಬಿಎಂಪಿ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ.

  • ಬೆಂಗ್ಳೂರು ಪಬ್, ಹೋಟೆಲ್‌, ರೆಸ್ಟೋರೆಂಟ್, ಕ್ಲಬ್‌ಗಳಲ್ಲಿ ಅಕ್ರಮವಾಗಿ ನಿಗದಿಪಡಿಸಿದ ಧೂಮಪಾನ ಸ್ಥಳ ತೆರವಿಗೆ ಆದೇಶ

    ಬೆಂಗ್ಳೂರು ಪಬ್, ಹೋಟೆಲ್‌, ರೆಸ್ಟೋರೆಂಟ್, ಕ್ಲಬ್‌ಗಳಲ್ಲಿ ಅಕ್ರಮವಾಗಿ ನಿಗದಿಪಡಿಸಿದ ಧೂಮಪಾನ ಸ್ಥಳ ತೆರವಿಗೆ ಆದೇಶ

    ಬೆಂಗಳೂರು: ನಗರದ ಎಲ್ಲಾ ಹೋಟೆಲ್‌, ಬಾರ್‌ & ರೆಸ್ಟೋರೆಂಟ್‌, ಕ್ಲಬ್‌, ಪಬ್‌ಗಳಲ್ಲಿನ ಅಕ್ರಮವಾಗಿ ನಿಗದಿಪಡಿಸಿರುವ ಧೂಮಪಾನ ಸ್ಥಳಗಳು ಅಥವಾ ಕೊಠಡಿಗಳನ್ನು ತೆರವುಗೊಳಿಸಬೇಕು ಎಂದು ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ.

    ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಕೋಟ್ಪಾ ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ ನೀಡಲಾಗಿದೆ. ಬಿಬಿಎಂಪಿ ಎನ್ಒಸಿಯಲ್ಲಿ ತಿಳಿಸಿದ ಮಾನದಂಡಗಳಂತೆ ಸ್ಥಳ ನಿಗದಿ ಮಾಡಬೇಕು ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿಲ್ಲ- ಕೈ ಸಂಸದ ವಿವಾದಾತ್ಮಕ ಹೇಳಿಕೆ

    ಧೂಮಪಾನ ನಿಗದಿ ಸ್ಥಳಗಳಲ್ಲಿ ಆಹಾರ, ನೀರು ಪಾನೀಯ, ತಂಬಾಕು ಉತ್ಪನ್ನ ಒದಗಿಸುವುದನ್ನು ನಿಷೇಧಿಸಲಾಗಿದೆ. ಸೂಚನಾ ಫಲಕ ಅಳವಡಿಸಿ ಜಾಗೃತಿ ಮೂಡಿಸಬೇಕು ಎಂದು ಸೂಚಿಸಲಾಗಿದೆ. ಅಲ್ಲದೇ ನಿಗದಿತ ಧೂಮಪಾನ ಸ್ಥಳಗಳಲ್ಲಿ ಆಹಾರ ಮತ್ತು ಪಾನೀಯಗಳ ಸೇವನೆ ಲಭ್ಯವಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.

    ಧೂಮಪಾನಿಗಳಲ್ಲದವರನ್ನು ಹಾನಿಕಾರ ತಂಬಾಕು ಹೊಗೆಯಿಂದ ರಕ್ಷಿಸುವುದು ಮುಖ್ಯವಾಗಿದೆ. ಹೀಗಾಗಿ ಹಲವು ಕಟ್ಟುನಿಟ್ಟಿನ ಸೂಚನೆಗಳನ್ನು ಪೊಲೀಸ್‌ ಆಯುಕ್ತ ದಯಾನಂದ್‌ ನೀಡಿದ್ದಾರೆ. ಇದನ್ನೂ ಓದಿ: ಚುನಾವಣೆಗೆ ಖರ್ಚು ಮಾಡಲು ನಮ್ಮ ಪಕ್ಷದಲ್ಲಿ ಹಣವಿಲ್ಲ: ಖರ್ಗೆ

    ಮೇಲೆ ತಿಳಿಸಿದ ಮಾನದಂಡಗಳು ಸರಿಯಾಗಿ ಪಾಲನೆ ಆಗುತ್ತಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ನಿಯಮಿತವಾಗಿ ತಪಾಸಣೆ ನಡೆಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

  • ಸ್ಮೋಕಿಂಗ್ ಝೋನ್ ನಿರ್ಮಿಸದ ಬೆಂಗ್ಳೂರಿನ 378 ಹೋಟೆಲ್‌ಗಳಿಗೆ BBMP ನೋಟಿಸ್‌

    ಸ್ಮೋಕಿಂಗ್ ಝೋನ್ ನಿರ್ಮಿಸದ ಬೆಂಗ್ಳೂರಿನ 378 ಹೋಟೆಲ್‌ಗಳಿಗೆ BBMP ನೋಟಿಸ್‌

    ಬೆಂಗಳೂರು: 30ಕ್ಕೂ ಹೆಚ್ಚು ಹಾಸನಗಳಿರುವ ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್ (Smoking Zone) ನಿರ್ಮಿಸದೇ ನಿಯಮ ಉಲ್ಲಂಘನೆ ಮಾಡಿರುವ ನಗರದ 378 ಹೋಟೆಲ್‌ಗಳಿಗೆ ಬೃಹತ್ ಬೆಂಗಳೂರು ಮಹಾನಗರಪಾಲಿಕೆ (BBMP) ನೋಟಿಸ್ ಜಾರಿಗೊಳಿಸಿದೆ.

    ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಡೆಗಟ್ಟಲು ಅದರಲ್ಲೂ ಹೋಟೆಲ್ (Hotel) ಮತ್ತು ರೆಸ್ಟೋರೆಂಟ್ ಗಳಲ್ಲಿ ಧೂಮಪಾನ ನಿಯಂತ್ರಣಕ್ಕೆ ತರಲು ಬಿಬಿಎಂಪಿ ಸ್ಮೋಕಿಂಗ್ ಝೂನ್ ನಿಯಮ ಜಾರಿಗೆ ತಂದಿತು. ಇದನ್ನೂ ಓದಿ: ಸಿಲಿಂಡರ್‌ ಸ್ಫೋಟಿಸಿ 4 ಮಕ್ಕಳು ಸೇರಿ ಒಂದೇ ಕುಟುಂಬದ 6 ಮಂದಿ ಸಾವು

    ಈ ನಿಯಮದ ಅನ್ವಯ 30ಕ್ಕಿಂತ ಹೆಚ್ಚು ಹಾಸನಗಳಿರುವ ಹೋಟೆಲ್ ರೆಸ್ಟೋರೆಂಟ್‌ಗಳು ಕಡ್ಡಾಯವಾಗಿ ಸ್ಮೋಕಿಂಗ್ ಝೂನ್ ನಿರ್ಮಾಣ ಮಾಡಲೇಬೇಕು. ಗ್ರಾಹಕರು ಧೂಮಪಾನ ಮಾಡಬೇಕಿದ್ರೆ ಅಲ್ಲಿಯೇ ಮಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡಬಾರದು ಎಂಬ ನಿಯಮ ಜಾರಿ ಮಾಡಿತು. ಆದ್ರೆ ಹೋಟೆಲ್ ಗಳು ನಿಯಮವನ್ನು ಕಡೆಗಣಿಸಿವೆ. ಈ ಹಿನ್ನೆಲೆಯಲ್ಲಿ ನಿಯಮ ಪಾಲನೆ ಮಾಡದ 378 ಹೋಟೆಲ್‌ಗಳಿಗೆ ನೋಟೀಸ್ ಜಾರಿಗೊಳಿಸಿದೆ. ಇದನ್ನೂ ಓದಿ: ನಾನು ಆಡಿದ ಮಾತು ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತಿದೆ: ವಿವಾದಗಳ ಬಗ್ಗೆ ರಶ್ಮಿಕಾ ಪ್ರತಿಕ್ರಿಯೆ

    ನಿಯಮ ಉಲ್ಲಂಘಿಸಿದ 400ಕ್ಕೂ ಹೆಚ್ಚು ಹೋಟೆಲ್ ಗಳಿಗೆ ಈಗಾಗಲೇ 1,10,680 ರೂ. ದಂಡ ವಿಧಿಸಲಾಗಿದೆ. ಹುಕ್ಕಾ ಬಾರ್‌ಗಳು ಕೂಡ ಕಡ್ಡಾಯವಾಗಿ ನಿಯಮ ಪಾಲನೆ ಮಾಡಲೇಬೇಕು. ಅನಧಿಕೃತ ಚಟುವಟಿಕೆ ನಡೆಸಬಾರದು ಮತ್ತು ಹುಕ್ಕಾಬಾರ್ ಗಳನ್ನ ನಿಷೇಧ ಮಾಡೋದರ ಬಗ್ಗೆ ಚರ್ಚೆ ಆಗ್ತಾ ಇದ್ದು ಖ್ಯಾತ ವೈದ್ಯರು. ಪರಿಸರ ತಙ್ಞರ ಅಭಿಪ್ರಾಯ ಸಂಗ್ರಹ ಮಾಡ್ತಾ ಇದ್ದಾರೆ ಎಂದು ಬಿಬಿಎಂಪಿ ತಿಳಿಸಿದೆ.

    ಒಟ್ಟಾರೆ ಬಿಬಿಎಂಪಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಕ್ಕೆ ಸ್ಮೋಕಿಂಗ್ ಝೂನ್ ನಿಯಮ ಜಾರಿ ಮಾಡಿದೆ. ಸದ್ಯ ನಿಯಮ ಪಾಲನೆ ಮಾಡದ ಹೋಟೆಲ್‌ಗಳಿಗೆ ದಂಡ ವಿಧಿಸಲಾಗಿದೆ. ಇದು ಹೀಗೆ ಮುಂದುವರಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k