ಕೇಂದ್ರ ಮಾಜಿ ಸಚಿವೆ ಸ್ಮೃತಿ ಇರಾನಿ (Smriti Irani) ಮತ್ತೆ ಅಭಿನಯಕ್ಕೆ ಮರಳಿದ್ದಾರೆ. ಎಲ್ಲರಿಗೂ ಗೊತ್ತಿರುವ ಹಾಗೆ ಅವರು ನಟಿಯಾಗಿದ್ದರು. 2014ರಿಂದ 2024ರ ವರೆಗೆ ಅನೇಕ ಖಾತೆಯಲ್ಲಿ ಸ್ಮೃತಿ ಇರಾನಿ ಕೇಂದ್ರ ಸಚಿವರಾಗಿದ್ದರು. 2019ರಲ್ಲಿ ಯುಪಿಯ ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸಿ ಜಯದ ನಗೆ ಬೀರಿದ್ದ ಸ್ಮೃತಿ, 2024ರ ಲೋಕಸಭಾ ಚುನಾವಣೆಯಲ್ಲಿ ಸೋಲುತ್ತಾರೆ. ವಿಶೇಷ ಅಂದ್ರೆ ಇದೀಗ ಸ್ಮೃತಿ ಮತ್ತೆ ಅಭಿನಯಕ್ಕೆ ಮರಳಿದ್ದಾರೆ. ಅವರಿಗೆ ಭಾರಿ ಜನಮನ್ನಣೆ ತಂದುಕೊಟ್ಟ ಧಾರಾವಾಹಿ ಮೂಲಕವೇ ಅಭಿನಯಕ್ಕೆ ಮರಳುತ್ತಿದ್ದಾರೆ.
ಕೇಂದ್ರ ಸಚಿವೆಯಾಗಿ ಅಬ್ಬರಿಸಿದ್ದ ಸ್ಮೃತಿ ಇರಾನಿ ಒಮ್ಮೆ ಸೋತಿದ್ದಕ್ಕೆ ಮತ್ತೆ ವಾಪಸ್ ಹೋದ್ರು ಎಂದು ಟೀಕೆ ಮಾಡಲಾಗುತ್ತಿದೆ. ಈ ಬಗ್ಗೆ ಮಾಜಿ ಸಚಿವೆ ಸ್ಮೃತಿ ಇರಾನಿ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಪ್ರತಿಕ್ರಿಯಿಸಿದ್ದು, ‘ನಾನು ಫುಲ್‌ಟೈಂ ರಾಜಕಾರಣಿ, ಪಾರ್ಟ್ ಟೈಂ ನಟಿ ಅಷ್ಟೇ’ ಎಂದಿದ್ದಾರೆ. ಇದನ್ನೂ ಓದಿ: ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿಯ ಸೀರಿಯಲ್ ಫಸ್ಟ್ ಲುಕ್ ಔಟ್
ಅಂದಹಾಗೆ ಸ್ಮೃತಿ ಇರಾನಿ ಧಾರಾವಾಹಿಗೆ ರೀ-ಎಂಟ್ರಿ ಕೊಟ್ಟಿದ್ದು ಅದರ ಪ್ರೋಮೋ ರಿಲೀಸ್ ಆಗಿದೆ. `ಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ’ (Kyunki Saas Bhi Kabhi Bahu Thi) ಏಕ್ತಾ ಕಪೂರ್ ನಿರ್ಮಾಣದ ಸಾರ್ವಕಾಲಿಕ ಹಿಟ್ ಧಾರಾವಾಹಿಯಾಗಿತ್ತು. ಅದರ ಪಾರ್ಟ್ 2 ಬರ್ತಿರೋದೇ ವಿಶೇಷ. `ಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ’2 ಪ್ರೋಮೋ ರಿಲೀಸ್ ಆಗಿದ್ದು, ಇದರ ಮೂಲಕ ಸ್ಮೃತಿ ಇರಾನಿ ಬಣ್ಣಕ್ಕೆ ರೀ ಎಂಟ್ರಿ ಕೊಟ್ಟಿದ್ದಾರೆ. ಈ ಧಾರಾವಾಹಿಯಲ್ಲಿ ಸೊಸೆ ಪಾತ್ರ ಮಾಡಿದ್ದ ಸ್ಮೃತಿ ಉತ್ತರ ಭಾರತದೆಲ್ಲೆಡೆ ಜನಪ್ರೀತಿ ಗಳಿಸಿದ್ದವರು. ಇದೀಗ ಅದೇ ಧಾರಾವಾಹಿ ಮೂಲಕ ಸ್ಮೃತಿ ಅಭಿನಯಕ್ಕೆ ಮರಳಿದ್ದಾರೆ. ಇಲ್ಲಿಗೆ ಸ್ಮೃತಿ ರಾಜಕೀಯ ಜೀವನ ಮುಕ್ತಾಯವಾಗಿದೆ ಎಂಬ ಟೀಕೆ ಬರುತ್ತಿದ್ದ ಬೆನ್ನಲ್ಲೇ ಸ್ಮೃತಿ ಇರಾನಿ ಅಭಿನಯ ಪಾರ್ಟ್ ಟೈಂ ಜಾಬ್ ಎನ್ನುವ ಮೂಲಕ ರಾಜಕೀಯ ತೊರೆದಿಲ್ಲ ಅನ್ನೋದಕ್ಕೆ ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ನಾಯಕಿ, ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ (Smriti Irani) ಕಿರುತೆರೆಗೆ ವಾಪಸ್ ಆಗಿದ್ದಾರೆ. ಜನಪ್ರಿಯತೆ ತಂದುಕೊಟ್ಟಿದ್ದ `ಕ್ಯೂಂಕಿ ಸಾಸ್ ಭೀ ಕಭಿ ಬಹು ಥೀ’ (Kyunki Saas Bhi Kabhi Bahu Thi) ಸೀಸನ್ 2ರ ಧಾರಾವಾಹಿ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ.ಇದನ್ನೂ ಓದಿ: Shivamogga | ದೆವ್ವ ಬಿಡಿಸುತ್ತೇನೆಂದು ಚಿತ್ರಹಿಂಸೆ – ಮಹಿಳೆ ಸಾವು
ಧಾರಾವಾಹಿ ಶುರುವಾಗಿ ಈಗಾಗಲೇ 25 ವರ್ಷ ತುಂಬಿದ್ದು, ಈಗ 2ನೇ ಸೀಸನ್‌ಗೆ ಸಿದ್ಧತೆ ನಡೆಯುತ್ತಿದೆ. ಮಾಜಿ ಸಚಿವೆ ಸ್ಮೃತಿ ಇರಾನಿ ಅವರ, ಸೀರಿಯಲ್‌ನಲ್ಲಿನ ಪಾತ್ರ `ತುಳಸಿ’ ಫಸ್ಟ್ ಲುಕ್ ರಿಲೀಸ್ ಆಗಿದೆ.
ಫಸ್ಟ್ ಲುಕ್‌ನಲ್ಲಿ ಸ್ಮೃತಿ ಮೆರೂನ್ ಸೀರೆಯಲ್ಲಿ ಕಾಣಿಸಿಕೊಂಡಿದ್ದು, ದೊಡ್ಡದಾದ ಕೆಂಪು ಬಿಂದಿ, ಮಂಗಳಸೂತ್ರ ಹಾಗೂ ಆಭರಣಗಳಿಂದ ಅಲಂಕಾರಗೊಂಡಿದ್ದಾರೆ. 2014ರಲ್ಲಿಯೇ ಸ್ಮೃತಿ ಅವರು ಸೀರಿಯಲ್‌ಗೆ ಮರಳಬೇಕಿತ್ತು. ಆದರೆ ಸಂಸತ್ತಿನಲ್ಲಿ ಕ್ಯಾಬಿನೆಟ್ ಸಚಿವೆಯಾಗಿ ಸೇವೆ ಸಲ್ಲಿಸಬೇಕಾಗಿದ್ದ ಕಾರಣದಿಂದ ವಾಪಸ್ಸಾಗಲು ಸಾಧ್ಯವಾಗಿರಲಿಲ್ಲ. ಆದರೆ ಸೆಟ್ ಎಲ್ಲವೂ ಸಿದ್ಧವಾಗಿತ್ತು. ಪ್ರಮಾಣವಚನ ಸ್ವೀಕರಿಸಬೇಕು ಎಂದು ಪ್ರಧಾನಿ ಕಚೇರಿಯಿಂದ ಕರೆಬಂದಿತ್ತು ಎಂದು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.ಇದನ್ನೂ ಓದಿ: ನಮಗೆ ಕುಡಿಯೋಕೆ ನೀರು ಕೊಡಿ: ಸಿಎಂಗೆ ವಿದ್ಯಾರ್ಥಿನಿ ಪತ್ರ
ಲಕ್ನೋ: ರಾಹುಲ್ ಗಾಂಧಿ (Rahul Gandhi) ಅವರು ʻಇಂಡಿಯಾʼ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾ? ಪ್ರಧಾನಿ ಮೋದಿಯಂತಹ ವ್ಯಕ್ತಿಯೊಂದಿಗೆ ಚರ್ಚೆ ಮಾಡಲು ಸಾಧ್ಯವೇ? ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ವ್ಯಂಗ್ಯವಾಡಿದ್ದಾರೆ.
ಲೋಕಸಭಾ ಚುನಾವಣೆಗೆ Lok Sabha Election) ಸಂಬಂಧಿಸಿದಂತೆ ಪ್ರಮುಖ ವಿಷಯಗಳ ಕುರಿತು ಪ್ರಧಾನಿ ಮೋದಿ (PM Modi) ಅವರೊಂದಿಗೆ ಸಾರ್ವಜನಿಕ ಚರ್ಚೆಗೆ ಆಹ್ವಾನ ಸ್ವೀಕರಿಸಿದ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಲೇವಡಿ ಮಾಡಿದ್ದಾರೆ.
ಪ್ರಧಾನಿ ಮೋದಿ ಚರ್ಚೆ ಕುರಿತು ರಾಗಾ ಹೇಳಿದ್ದೇನು?
ಲೋಕಸಭಾ ಚುನಾವಣಾ ವಿಷಯಗಳ ಕುರಿತು ಬಹಿರಂಗ ಚರ್ಚೆಗೆ ನಾನು ಸಿದ್ಧ, ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದು, ನಿವೃತ್ತ ನ್ಯಾಯಮೂರ್ತಿಗಳು, ಪತ್ರಕರ್ತರು ನೀಡಿದ ಆಹ್ವಾನ ಸ್ವೀಕರಿಸಿದ್ದಾರೆ. ನಿವೃತ್ತ ನ್ಯಾ.ಮದನ್ ಲೋಕೂರ್, ನಿವೃತ್ತ ನ್ಯಾ.ಅಭಿಜಿತ್ ಪಿ.ಶಾ, ಹಿರಿಯ ಪತ್ರಕರ್ತ ಎನ್.ರಾಮ್ ಅವರ ಆಹ್ವಾನಕ್ಕೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ‘‘ನಿಮ್ಮ ಆಹ್ವಾನದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಮಾಲೋಚಿಸಿರುವೆ. ಇಂಥ ವೇದಿಕೆಗಳಲ್ಲಿ ಚರ್ಚೆಗೆ ಅವರು ಒಪ್ಪಿದ್ದಾರೆ. ಚರ್ಚೆಯಲ್ಲಿ ಪಾಲ್ಗೊಳ್ಳಲು ನಾವು ಸಿದ್ಧವಾಗಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಚರ್ಚೆಯಲ್ಲಿ ಭಾಗವಹಿಸಬೇಕೆಂದು ದೇಶದ ಜನ ನಿರೀಕ್ಷಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಇಂತಹ ಚರ್ಚೆಗಳಿಂದ ದೇಶದ ರಾಜಕೀಯ ನಾಯಕರ ದೃಷ್ಟಿಕೋನದ ಬಗ್ಗೆ ಜನತೆ ಅರ್ಥ ಮಾಡಿಕೊಳ್ಳಲು ನೆರವಾಗಲಿದೆ. ರಾಜಕೀಯ ಪಕ್ಷಗಳ ಆರೋಪ ಪ್ರತ್ಯಾರೋಪಗಳ ನೈಜತೆ ತಿಳಿಯಲು ಸಹಕಾರಿಯಾಗಲಿದೆ. ಚುನಾವಣಾ ಪ್ರಚಾರದಲ್ಲಿ ರಾಜಕೀಯ ನಾಯಕರ ನೀತಿ ನಿಲುವುಗಳ ಬಗ್ಗೆ ಜನರಿಗೆ ಅರ್ಥ ಮಾಡಿಕೊಳ್ಳಲು ಚರ್ಚೆಗಳು ಸಹಕಾರಿಯಾಗಲಿವೆ, ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ – ಚುನಾವಣಾಧಿಕಾರಿಗಳ ವಿರುದ್ಧ `ಕೈ’ ಕಿಡಿ!
ಖರ್ಗೆ ವಿರುದ್ಧವೂ ವಾಗ್ದಾಳಿ:
ಕಾಂಗ್ರೆಸ್ ಜನರ ಸಂಪತ್ತು ಮರುಹಂಚಿಕೆ ಬಗ್ಗೆ ಮಾತನಾಡುತ್ತಿದೆ. ಈ ನಿರ್ಧಾರದ ಮೂಲಕ ನಾಗರಿಕರ ಅರ್ಧದಷ್ಟು ಆಸ್ತಿಯನ್ನು ಕಸಿದುಕೊಳ್ಳಲಿದೆ ಎಂಬುದನ್ನು ತೋರಿಸಿದೆ. ರಾಮ ಮಂದಿರದ ನಿರ್ಧಾರವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಕಾಂಗ್ರೆಸ್ ಮಾತನಾಡುತ್ತದೆ. ಈ ಎಲ್ಲಾ ಸಮಸ್ಯೆಗಳು ರಾಷ್ಟ್ರೀಯ ಸಮಸ್ಯೆಗಳು. ಇದರ ಬಗ್ಗೆ ಪ್ರಧಾನಿ ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕರಿಗೂ ಪ್ರಶ್ನೆ ಮಾಡುವ ಹಕ್ಕಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಲಕ್ನೋ: ರಾಹುಲ್ ಗಾಂಧಿ (Rahul Gandhi) ಬಾರಿಯೂ ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದಿಂದ (Amethi Lok Sabha constituency) ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ.
ರಾಹುಲ್ ಗಾಂಧಿಯ ಚುನಾವಣಾ ರಾಜಕಾರಣಕ್ಕೆ ಜನ್ಮ ನೀಡಿದ್ದ ಉತ್ತರ ಪ್ರದೇಶ ಅಮೇಠಿ ಕ್ಷೇತ್ರದಲ್ಲಿ ಅವರ ಮನೆಯನ್ನು ನವೀಕರಣ (House Renovation) ಮಾಡುತ್ತಿರುವುದರಿಂದ ಈಗ ಈ ಪ್ರಶ್ನೆ ಎದ್ದಿದೆ.
ಅಮೇಠಿ ನಗರದ ಗೌರಿಗಂಜ್ ನಗರದಲ್ಲಿರುವ ರಾಹುಲ್ ಅವರ ನಿವಾಸವನ್ನು ಸುಣ್ಣಬಣ್ಣ ಬಳಿದು ಸ್ವಚ್ಛಗೊಳಿಸಿ ಉದ್ಯಾನವನ್ನು ಅಂದಗೊಳಿಸುವ ಕಾರ್ಯ ನಡೆಯುತ್ತಿದೆ. ಅಷ್ಟೇ ಅಲ್ಲದೇ ಚುನಾವಾಣಾ ಪ್ರಚಾರದ ಭಿತ್ತಿಪತ್ರಗಳನ್ನೂ ತಂದಿರಿಸಲಾಗಿದೆ. ಈ ಕೆಲಸಗಳನ್ನು ನೋಡಿ ಮತ್ತೆ ರಾಹುಲ್ ಅಮೇಠಿ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಎನ್ನಲಾಗುತ್ತಿದೆ. ಇದನ್ನೂ ಓದಿ: ಹಲವು ಸಮಸ್ಯೆಗಳ ನಡುವೆ ಯಶಸ್ವಿಯಾಗಿ 3ನೇ ಲೋಕಸಭಾ ಚುನಾವಣೆ ನಡೆಸಿದ ಭಾರತ!
ಕಳೆದ ವಾರ ಗಾಜಿಯಾಬಾದ್‌ನಲ್ಲಿ ಪತ್ರಕರ್ತರೊಬ್ಬರು ನೀವು ಅಮೇಠಿಯಿಂದ ಸ್ಪರ್ಧೆ ಮಾಡುತ್ತೀರಾ ಎಂದು ಪ್ರಶ್ನಿಸಿದ್ದರು. ಇದಕ್ಕೆ ರಾಹುಲ್ ಗಾಂಧಿ, ಇದು ಬಿಜೆಪಿಯ ಪ್ರಶ್ನೆ. ತುಂಬಾ ಒಳ್ಳೆಯದು. ನಮ್ಮ ಪಕ್ಷದಲ್ಲಿ ಎಲ್ಲಾ ಅಭ್ಯರ್ಥಿಗಳ ಆಯ್ಕೆ ನಿರ್ಧಾರಗಳನ್ನು ಕಾಂಗ್ರೆಸ್ ಚುನಾವಣಾ ಸಮಿತಿಯು ತೆಗೆದುಕೊಳ್ಳುತ್ತದೆ. ನಾನು ಪಕ್ಷದ ಸೈನಿಕನಾಗಿದ್ದು ಸಮಿತಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಉತ್ತರಿಸಿದ್ದರು. ಇದನ್ನೂ ಓದಿ: ಕೇವಲ 5 ದಿನದ ಚುನಾವಣೆ; ಕಾಂಗ್ರೆಸ್ ಕುಸಿದರೂ ಗೆದ್ದ ಇಂದಿರಾ
ರಾಹುಲ್ ಈಗಾಗಲೇ ಕೇರಳದ ವಯನಾಡಿನಿಂದ (Wayanad) ನಾಮಪತ್ರ ಸಲ್ಲಿಸಿದ್ದಾರೆ. ಏ.26 ರಂದು ಚುನಾವಣೆ ನಡೆಯಲಿದೆ.
2004ರ ಬಳಿಕ ರಾಹುಲ್ ಈ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಿದ್ದರು. 2019 ಲೋಕಸಭಾ ಚುನಾವಣೆಯಲ್ಲಿ ರಾಹುಲ್ 55 ಸಾವಿರ ಮತಗಳ ಅಂತರದಲ್ಲಿ ಸೋಲುಂಡಿದ್ದರು. ಬಿಜೆಪಿಯ ಸ್ಮೃತಿ ಇರಾನಿ (Smriti Irani) 4,68,514 ಮತಗಳನ್ನು ಪಡೆದಿದ್ದರೆ ರಾಹುಲ್ 4,13,394 ಮತಗಳನ್ನು ಪಡೆದಿದ್ದರು. ರಾಹುಲ್‍ರ ಈ ಸೋಲು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ ಉಂಟು ಮಾಡಿತ್ತು.
2024ರ ಚುನಾವಣೆಯಲ್ಲೂ ಬಿಜೆಪಿಯಿಂದ ಸ್ಮೃತಿ ಇರಾನಿ ಕಣಕ್ಕೆ ಇಳಿದಿದ್ದಾರೆ. ಉತ್ತರ ಪ್ರದೇಶದಲ್ಲಿ ಎಸ್‌ಪಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ.
ಈ ಬಾರಿಯ ಲೋಕಸಭಾ ಚುನಾವಣೆ ತಾರೆಯರಿಂದ ರಂಗೇರಿದೆ. ಅದರಲ್ಲೂ ಬಿಜೆಪಿಯು ನಾನಾ ಕ್ಷೇತ್ರಗಳಲ್ಲಿ ನಟಿಯರಿಗೆ ಟಿಕೆಟ್ ನೀಡಿ ಅದೃಷ್ಟ ಪರೀಕ್ಷೆಗೆ ರೆಡಿಯಾಗಿದೆ. ಈಗಾಗಲೇ ಚುನಾವಣೆಯಲ್ಲಿ ಪಾಲ್ಗೊಂಡ ನಟಿಯರ ಜೊತೆಗೆ ಹೊಸ ಮುಖಗಳಿಗೂ ಮಣೆ ಹಾಕಿದೆ. ಹಾಗಾಗಿ ಲೋಕ ಅಖಾಡದಲ್ಲಿ ಬಣ್ಣದ ಬೆಡಗಿಯರು ಕಾಣುತ್ತಿದ್ದಾರೆ. ಚಿತ್ರರಂಗಕ್ಕೆ ಅಲ್ಪವಿರಾಮ ಹೇಳಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.
ರಾಧಿಕಾ ಶರತ್ ಕುಮಾರ್
ತಮಿಳು ನಾಡಿನಲ್ಲಿ ನಟಿ ರಾಧಿಕಾ ಶರತ್ ಕುಮಾರ್ (Radhika Sarath Kumar) ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ನಟಿ ಹಾಗೂ ರಾಜಕಾರಣಿಯೂ ಆಗಿರುವ ರಾಧಿಕಾ ಅವರು, ವಿರುಧನಗರ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ. ಇತ್ತೀಚೆಗಷ್ಟೇ ರಾಧಿಕಾ ಪತ್ನಿ ಶರತ್ ಕುಮಾರ್ ಅವರು ತಮ್ಮ ಅಖಿಲ ಭಾರತೀಯ ಸಮತುಮ ಮಕ್ಕಳ ಕಚ್ಚಿ ಪಕ್ಷವನ್ನು ಬಿಜೆಪಿ ಜೊತೆ ವಿಲಿನ ಮಾಡಿಕೊಂಡಿದ್ದರು.
ಕಂಗನಾ ರಣಾವತ್
ಬಿಜೆಪಿ ತನ್ನ ಲೋಕಸಭಾ (Lok Sabha) ಚುನಾವಣೆಯ 5ನೇ ಪಟ್ಟಿ ಘೋಷಣೆ ಮಾಡುವ ಮೂಲಕ ಅಚ್ಚರಿ ಮೂಡಿಸಿತ್ತು. ಈ ಪಟ್ಟಿಯಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut)ಗೆ ತವರು ರಾಜ್ಯ ಹಿಮಾಚಲ ಪ್ರದೇಶದ (Himachal Pradesh) ಮಂಡಿ (Mandi) ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಕಂಗನಾ ಮಂಡಿ ಕ್ಷೇತ್ರದಲ್ಲಿ ಕಾಣಿಸಿಕೊಂಡು ಪ್ರಚಾರದಲ್ಲಿ ತೊಡಗಿದ್ದಾರೆ. ಹಲವು ತಿಂಗಳುಗಳಿಂದ ಕಂಗನಾ ರಣಾವತ್ ರಾಜಕೀಯಕ್ಕೆ ಬರುತ್ತಾರೆ ಎನ್ನುವ ಸುದ್ದಿ ಇತ್ತು. ಅವರು ಕೂಡ ಕೃಷ್ಣ ಕಣ್ಬಿಟ್ಟರೆ ರಾಜಕೀಯಕ್ಕೆ ಬರೋದು ದೊಡ್ಡ ವಿಷಯವೇ ಅಲ್ಲ ಎಂದೂ ಹೇಳಿದ್ದರು. ಜೊತೆಗೆ ರಾಜಕೀಯ ಮುಖಂಡರನ್ನು ಭೇಟಿ ಮಾಡುವ ಮೂಲಕ ಟಿಕೆಟ್ ಬೇಡಿಕೆಯನ್ನೂ ಇಟ್ಟಿದ್ದರು. ಕೊನೆಗೂ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಹೇಮಾ ಮಾಲಿನಿ
ಬಾಲಿವುಡ್ ನಟಿ ಹೇಮಾ ಮಾಲಿನಿ (Hema Malini) 2024ರ ಲೋಕಸಭೆ ಚುನಾವಣೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮತ್ತೆ 2ನೇ ಬಾರಿ ಲೋಕಸಭೆ ಚುನಾವಣೆಗೆ (Loksabha Elections 2024) ನಿಲ್ಲುವ ಮೂಲಕ ನಟಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. 1999ರಲ್ಲಿ ವಿನೋದ್ ಖನ್ನಾ ಪರವಾಗಿ ಹೇಮಾ ಮಾಲಿನಿ ಪ್ರಚಾರ ಮಾಡಿದ್ದರು. 2004ರಲ್ಲಿ ಅಫಿಷಿಯಲ್ ಆಗಿ ಬಿಜೆಪಿಗೆ ಸೇರ್ಪಡೆಯಾದರು. 2014ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಜಯಂತ್ ಚೌಧರಿ ಅವರನ್ನು ಸೋಲಿಸಿ ಹೇಮಾ ಮಾಲಿನಿ ಮಥುರಾದಲ್ಲಿ ಗೆದ್ದು ಬೀಗಿದ್ದರು. ಇದೀಗ 3ನೇ ಬಾರಿಯು ಮಥುರಾದಿಂದಲೇ ನಟಿ ಲೋಕಸಭಾ ಎಲೆಕ್ಷನ್‌ಗೆ ನಿಂತಿದ್ದಾರೆ.
ಸ್ಮೃತಿ ಇರಾನಿ
ಕಿರುತೆರೆಯ ಖ್ಯಾತ ನಟಿಯಾಗಿದ್ದ ಸ್ಮೃತಿ ಇರಾನಿ (Smriti Irani), ಆನಂತರ ಕಿರುತೆರೆಯಿಂದ ದೂರವಾಗಿ ರಾಜಕಾರಣಕ್ಕೆ ಪ್ರವೇಶ ಮಾಡಿದರು. 2019 ರಲ್ಲಿ ಕಾಂಗ್ರೆಸ್ ಭದ್ರಕೋಟೆಯಾದ ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಮೃತಿ ಇರಾನಿ ಗೆಲುವು ಸಾಧಿಸಿದ್ದರು. ನಂತರ ಮಂತ್ರಿಯಾಗಿಯೂ ಕೆಲಸ ಮಾಡಿದವರು. ಈಗ ಸ್ಮೃತಿ ಇರಾನಿ ಅವರಿಗೆ ಮತ್ತೊಮ್ಮೆ ಉತ್ತರ ಪ್ರದೇಶದ ಅದೇ ಕ್ಷೇತ್ರವನ್ನು ಸ್ಪರ್ಧೆಗೆ ನೀಡಲಾಗಿದೆ.
ಲಾಕೆಟ್ ಚಟರ್ಜಿ
ಬಂಗಾಳಿ ಚಲನಚಿತ್ರ ಚಿತ್ರ ನಟಿ ಹಾಗೂ ಜನಪ್ರಿಯ ಡಾನ್ಸ್ ಆಗಿರುವ ಲಾಕೆಟ್ ಚಟರ್ಜಿ (Locket chatterjee) ಅವರಿಗೂ ಈ ಬಾರಿ ಬಿಜೆಪಿ ಟಿಕೆಟ್ ಘೋಷಿಸಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಕ್ಷೇತ್ರದಿಂದ ಕಳೆದ ಬಾರಿ ಗೆದ್ದ ಇವರಿಗೆ, ಈ ಬಾರಿಯೂ ಅದೇ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿದ್ದು, ಈ ಬಾರಿಯೂ ಅಷ್ಟೇ ಹುರುಪಿನಿಂದ ಅವರು ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ.
ನವನೀತ್ ಕೌರ್
ಲೋಕಸಭೆ ಅಖಾಡಕ್ಕೆ ಸಿನಿಮಾ ಕಲಾವಿದರಿಂದ ರಂಗೇರುತ್ತಿದೆ. ಈಗಾಗಲೇ ಕಂಗನಾ ರಣಾವತ್ (Navneet Kaur) ಸೇರಿದಂತೆ ಹಲವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಅದರಂತೆ ತನ್ನ 7ನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ್ದು, ಅದರಲ್ಲಿ ಮಹಾರಾಷ್ಟ್ರ ಮೂಲದ ನಟಿ, ಕನ್ನಡದಲ್ಲೂ ದರ್ಶನ್ ಚಿತ್ರದಲ್ಲಿ ನಟಿಸಿರುವ ನವನೀತ್ ಕೌರ್ ರಾಣಾಗೆ ಟಿಕೆಟ್ ಘೋಷಣೆ ಮಾಡಿದೆ.
ನವನೀತ್ ಕೌರ್ ಗೆ ಚುನಾವಣೆ ಹೊಸದೇನೂ ಅಲ್ಲ. ಈಗಾಗಲೇ ಅವರು ಸಂಸದೆಯಾಗಿ ಗುರುತಿಸಿಕೊಂಡಿದ್ದಾರೆ. ಅಮರಾತಿಯಲ್ಲಿ ಕಳೆದ ಬಾರಿ ಗೆದ್ದಿದ್ದಾರೆ. ಆದರೆ, ಇತ್ತಿಚೆಗಷ್ಟೇ ಅವರು ಬಿಜೆಪಿ ಸೇರಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಶಕ್ತಿಯನ್ನು ಮತ್ತಷ್ಟು ಬಲ ಪಡಿಸಲು ತಾನು ಬಿಜೆಪಿ ಸೇರಿಕೊಂಡಿರುವುದಾಗಿ ಹೇಳಿದ್ದರು. ಬಿಜೆಪಿ ಸೇರಿದ ಬೆನ್ನಲ್ಲೇ ಅವರಿಗೂ ಟಕೆಟ್ ಘೋಷಣೆ ಆಗಿದೆ.
2019ರ ಸಾರ್ವತ್ರೀಕ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ನಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಜಂಟಿ ಅಭ್ಯರ್ಥಿಯಾಗಿ ಅಮರಾವತಿಯಲ್ಲಿ ಸ್ಪರ್ಧೆ ಮಾಡಿದ್ದ ನವನೀತ್ ಕೌರ್ ಗೆಲುವು ಪಡೆದು ಸಂಸದರಾಗಿ ಆಯ್ಕೆಯಾಗಿದ್ದರು. ಲೋಕಸಭೆಗೆ ಆಯ್ಕೆಯಾದ ಬಳಿಕ ಸಂಸತ್‍ನಲ್ಲಿ ಹಲವು ವಿಚಾರಗಳ ಕುರಿತು ಧ್ವನಿ ಎತ್ತಿದ್ದರು. ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಹಿಂದಿ ಭಾಷೆಗಳ ಚಿತ್ರಗಳಲ್ಲಿ ನವನೀತ್ ಕೌರ್ ನಟಿಸಿದ್ದಾರೆ.
ನವದೆಹಲಿ: ಕೊನೆಗೂ ಅಳೆದುತೂಗಿ ಕಾಂಗ್ರೆಸ್ ತನ್ನ ಮೊದಲ ಪಟ್ಟಿ ರಿಲೀಸ್ ಮಾಡಿದೆ. ಆದರೆ ಈ ಪಟ್ಟಿಯಲ್ಲಿ ಬಹುನಿರೀಕ್ಷಿತ ಕ್ಷೇತ್ರ ಅಮೇಥಿಯನ್ನು ಕೈಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವೀಯ (Amit Malviya) ಅವರು ಕೈ ನಾಯಕರನ್ನು ಕಾಲೆಳೆದಿದ್ದಾರೆ.
ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆಯೇ ತಮ್ಮ ಎಕ್ಸ್ ಖಾತೆಯಲ್ಲಿ, “ಅಮೇಥಿ ಕ್ಷೇತ್ರದಿಂದ (Amethi Constituency) ರಾಹುಲ್ ಗಾಂಧಿಯವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೆದರಿದೆಯೇ..?” ಎಂದು ಬರೆದುಕೊಂಡಿದ್ದಾರೆ.
ಉತ್ತರಪ್ರದೇಶ ಬಿಟ್ಟು ಕಾಂಗ್ರೆಸ್ 39 ಅಭ್ಯರ್ಥಿಗಳ ಹೆಸರನ್ನು ಇಂದು (ಶುಕ್ರವಾರ) ಘೋಷಣೆ ಮಾಡಿದ ಬಳಿಕ ಮಾಳವೀಯ ಈ ಮೂಲಕ ವ್ಯಂಗ್ಯವಾಡಿದ್ದಾರೆ. ಇಂದು ಬಿಡುಗಡೆ ಮಾಡಿದ ಕಾಂಗ್ರೆಸ್‌ನ ಪಟ್ಟಿಯಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ರಾಹುಲ್ ಗಾಂಧಿ ಗೆದ್ದು ಬಿಜೆಪಿ ಸೋತ ರಾಯ್ ಬರೇಲಿ ಅಥವಾ ಅಮೇಥಿಯನ್ನು ಉಲ್ಲೇಖಿಸಿಲ್ಲ.
ಮೊದಲ ಪಟ್ಟಿಯ ಪ್ರಕಾರ, ಈ ಬಾರಿಯ ಲೋಕಸಭಾ ಚುನಾವಣೆಗೆ ಕೇರಳದ ವಯನಾಡ್ ಕ್ಷೇತ್ರದಿಂದ (Wayanad Constituency) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸಲಾಗಿದೆ. ಆದರೆ ರಾಹುಲ್ ಗಾಂಧಿ ಅವರು ಅಮೇಥಿಗೆ ಮರಳುತ್ತಾರೆಯೇ ಮತ್ತು ಅವರ ಹಳೆಯ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ.
ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ (Smriti Irani) ಅವರನ್ನು ಸೋಲಿಸುವ ಮೊದಲು ರಾಹುಲ್ ಗಾಂಧಿ (Rahul Gandhi) ಅವರು ಸತತವಾಗಿ ಮೂರು ಬಾರಿ ಗೆದ್ದಿದ್ದರು. 2014ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸ್ಮೃತಿ ಇರಾನಿ ಸೋಲನ್ನು ಕಂಡರು. ಆದರೆ 2019ರಲ್ಲಿ ಅಮೇಥಿಯ ಮತದಾರರು ಇರಾನಿ ಅವರ ಕೈಹಿಡಿದರು. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳಿಗೆ ಅಮೇಥಿ ಪ್ರತಿಷ್ಠೆಯ ಕ್ಷೇತ್ರವಾಗಿದೆ.
ಹಾಲಿ ಸಂಸದೆ ಸ್ಕೃತಿ ಇರಾನಿಯವರು ಈ ಹಿಂದೆ ಕಾಂಗ್ರೆಸ್ (Congress First List) ಬಗ್ಗೆ ವ್ಯಂಗ್ಯವಾಡಿದ್ದರು. ಸದ್ಯದ ಪರಿಸ್ಥಿತಿಯಲ್ಲಿ ಯಾರು ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬುದು ನನಗೆ ತಿಳಿದಿಲ್ಲ. ಆದರೆ ಅಭ್ಯರ್ಥಿಯನ್ನು ಘೋಷಿಸಲು ಕಾಂಗ್ರೆಸ್ಸಿಗರಿಗೆ ಸಾಧ್ಯವಾಗುತ್ತಿಲ್ಲ, ಸೋಲಿನ ಭಯ ಅವರನ್ನು ಕಾಡುತ್ತಿದೆ. ಅಮೇಥಿಯ ಜನರು ಮತ್ತೆ ತಮ್ಮ ಶಕ್ತಿಯನ್ನು ತೋರುತ್ತಾರೆ ಎಂಬ ಸತ್ಯ ಕಾಂಗ್ರೆಸ್ಗೆ ಗೊತ್ತಿದೆ ಎಂದಿದ್ದರು.
ನವದೆಹಲಿ: ಲೋಕಸಭಾ ಚುನಾವಣೆ (Loksabha Election 2024) ಕಾವು ದೇಶದಲ್ಲಿ ದಿನದಿನಕ್ಕೆ ಹೆಚ್ಚಾಗ್ತಿದೆ. ಅಮೇಥಿಯಲ್ಲಿ ಮಂಗಳವಾರವೂ ಯಾತ್ರೆ ನಡೆಸಿದ್ದ ರಾಹುಲ್ ಗಾಂಧಿ, ರಾತ್ರಿಹೊತ್ತು ಮದ್ಯ ಸೇವಿಸುವವರಿಂದ ಉತ್ತರಪ್ರದೇಶ ಭವಿಷ್ಯ ನರ್ತನ ಮಾಡ್ತಿದೆ ಅಂತಾ ವಿಮರ್ಶೆ ಮಾಡಿದ್ರು. ಅಷ್ಟೇ ಅಲ್ಲ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಹಾಡಹಗಲೇ ಕುಡಿದುಬಿದ್ದಿದ್ದ ವ್ಯಕ್ತಿಗಳನ್ನು ಕಂಡೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ರು. ಇದಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ಕೌಂಟರ್ ನೀಡಿದ್ದಾರೆ.
ರಾಹುಲ್ (Rahul Gandhi) ಮಾತು ಕೇಳಿದ್ರೆ ಅವರ ಮನಸ್ಸಲ್ಲಿ ಎಷ್ಟು ವಿಷ ತುಂಬಿಕೊಂಡಿದೆ ಎನ್ನುವುದು ಗೊತ್ತಾಗ್ತಿದೆ. ತಮ್ಮ ಮಗನನ್ನು ಚೆನ್ನಾಗಿ ಬೆಳೆಸಲಾಗದಿದ್ರೆ ಹೋಯ್ತು.. ಕನಿಷ್ಠ ಹುಚ್ಚು ಹುಚ್ಚಾಗಿ ಮಾತಾಡದಂತೆ ನೋಡಿಕೊಳ್ಳಲಿ ಎಂದು ಸೋನಿಯಾ ಗಾಂಧಿಗೆ ಸ್ಮೃತಿ ಇರಾನಿ ಸಲಹೆ ನೀಡಿದ್ರು. ರಾಹುಲ್ ತಮ್ಮ ಮಾತಿಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಖಾತೆಗಳಿಂದ 65 ಕೋಟಿ ರೂ. ಕಡಿತಗೊಳಿಸಿದೆ – IT ವಿರುದ್ಧ ಗಂಭೀರ ಆರೋಪ
ಈ ಮಧ್ಯೆ ಎಂಪಿ ಎಲೆಕ್ಷನ್ ಹೇಗೆ ನಡೆಯುತ್ತದೆ ಎಂಬುದಕ್ಕೆ ಚಂಡೀಗಢ ಮೇಯರ್ ಚುನಾವಣೆಯೇ ಉದಾಹರಣೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ರು. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಎಸಗಲು ಬಿಜೆಪಿ ಸಜ್ಜಾಗಿದೆ ಎಂದು ಪರೋಕ್ಷವಾಗಿ ಆಪಾದನೆ ಮಾಡಿದ್ರು. I.N.D.I.A ಕೂಟದ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸಲು ರಾಹುಲ್ ಗಾಂಧಿ 5 ದಿನ ನ್ಯಾಯಯಾತ್ರೆಯನ್ನು ಸ್ಥಗಿತ ಮಾಡಲಿದ್ದಾರೆ. ಈ ಐದು ದಿನದಲ್ಲಿ 2 ದಿನಗಳನ್ನು ಇಂಗ್ಲೆಂಡ್‍ನ ಕೇಂಬ್ರಿಡ್ಜ್ ವಿವಿಯಲ್ಲಿ ಉಪನ್ಯಾಸ ನೀಡೋದಕ್ಕೆ ರಾಹುಲ್ ಗಾಂಧಿ ಮೀಸಲಿಟ್ಟಿದ್ದಾರೆ ಎನ್ನುವುದು ವಿಶೇಷ.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಯವರನ್ನು (Smriti Irani) ದೆಹಲಿಯಲ್ಲಿ (Delhi) ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಸುದೀರ್ಘವಾಗಿ ಮಾತುಕತೆ ನಡೆಸಿದ್ದಾರೆ.
ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆ ಮಾಡಬೇಕು. ಅಲ್ಲದೇ ಐಸಿಡಿಎಸ್ ಯೋಜನೆಯಡಿ ಅಂಗನವಾಡಿಗಳಿಗೆ ನೀಡಬೇಕಿರುವ ಅಕ್ಕಿ ಮತ್ತು ಗೋಧಿ ಕಳೆದ ಒಂದು ವರ್ಷದಿಂದ ಬಿಡುಗಡೆಯಾಗದೆ ಬಾಕಿ ಉಳಿದಿದೆ. ಈ ಕುರಿತು ಕೇಂದ್ರ ಸಚಿವರ ಗಮನಕ್ಕೆ ತಂದ ಅವರು ಕೂಡಲೇ ಬಿಡುಗಡೆಗೊಳಿಸಲು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಬರಗಾಲ ಪರಿಹಾರ ಬಿಡುಗಡೆ ವಿಚಾರವಾಗಿ ಡಿ.23ಕ್ಕೆ ಕೇಂದ್ರದ ಸಭೆ: ಕೃಷ್ಣಬೈರೇಗೌಡ
ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 51 ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರು ಮಾಡುವಂತೆ, ಸಿಬ್ಬಂದಿ ನೀಡುವಂತೆ ಹಾಗೂ ಸಕ್ಷಮ್ ಯೋಜನೆಯಡಿಯ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ್ ಕ್ಲಾಸ್ ರೂಂ ಆಗಿ ಪರಿವರ್ತಿಸಬೇಕು ಎಂದು ಮನವಿ ಮಾಡಿದರು. ಈ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸ್ಕೃತಿ ಇರಾನಿ, ತಕ್ಷಣ ಈ ಬಗ್ಗೆ ಸಂಬಂಧಿಸಿದಂತೆ ಸಮಗ್ರ ವರದಿ ನೀಡುವಂತೆ ಮತ್ತು ಅನುದಾನ ಬಿಡುಗಡೆಗೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದ್ದಾರೆ.
ನವದೆಹಲಿ: ‘ಪೀರಿಯೆಡ್ ಲೀವ್’ ನೀಡುವ ಕುರಿತ ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ಹೇಳಿಕೆಯನ್ನು ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಬೆಂಬಲಿಸಿದ್ದಾರೆ.
ಇರಾನಿ ಹೇಳಿಕೆಯನ್ನು ತಮ್ಮ ಇನ್ ಸ್ಟಾ ಸ್ಟೋರಿಯಲ್ಲಿ ಹಾಕಿಕೊಂಡಿರುವ ನಟಿ, ಮನುಕುಲದ ಇತಿಹಾಸದಲ್ಲಿ ದುಡಿಯದ ಮಹಿಳೆ ಇಲ್ಲವೇ ಇಲ್ಲ. ವ್ಯವಸಾಯದಿಂದ ಹಿಡಿದು ಮನೆ ಕೆಲಸ, ಮಕ್ಕಳನ್ನು ಬೆಳೆಸುವವರೆಗೆ ಹೀಗೆ ಪ್ರತಿ ದಿನ ಕೆಲಸ ಮಾಡುತ್ತಲೇ ಇರುತ್ತಾರೆ. ಕುಟುಂಬ ಸಮುದಾಯ ಅಥವಾ ರಾಷ್ಟ್ರದ ಮೇಲಿನ ಅವರ ಬದ್ಧತೆಗೆ ಯಾವ ವಿಚಾರಗಳು ಅಡ್ಡಿಯಾಗುವುದಿಲ್ಲ. ಹೀಗಾಗಿ ಪೀರಿಯೆಡ್ ಸಮಯದಲ್ಲಿ ಮಹಿಳೆಯರಿಗೆ ರಜೆಯ ಅವಶ್ಯಕತೆ ಇಲ್ಲ. ಇದು ಋತುಚಕ್ರವೇ ಹೊರತು ರೋಗ ಅಥವಾ ಅಂಗವಿಕಲತೆ ಅಲ್ಲ ಎಂಬುದನ್ನು ದಯವಿಟ್ಟು ಅರ್ಥ ಮಾಡಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.
ಸ್ಮೃತಿ ಇರಾನಿ ಹೇಳಿದ್ದೇನು..?: ಗುರುವಾರ ರಾಜ್ಯ ಸಭೆಯಲ್ಲಿ ಸಚಿವೆ ಸ್ಮೃತಿ ಇರಾನಿಯವರು ಪೀರಿಯೆಡ್ ಲೀವ್ (Period Leave) ಕುರಿತು ಚರ್ಚೆ ನಡೆಸಿದರು. ಹೀಗೆ ಮಾತನಾಡುತ್ತಾ ಋತುಚಕ್ರ ಮಹಿಳೆಯರ ಜೀವನದ ನೈಸರ್ಗಿಕ ಭಾಗ. ಇದು ಅಂಗವಿಕಲತೆ ಎಂದು ಪರಿಗಣಿಸಬಾರದು ಎಂಬುದಾಗಿ ಪ್ರಸ್ತಾಪ ಮಾಡಿದರು. ಇದನ್ನೂ ಓದಿ: ಸಂಸತ್ ಮೇಲಿನ ದಾಳಿಯ ಪ್ರಮುಖ ರೂವಾರಿ ಲಲಿತ್ ಝಾ 7 ದಿನ ಪೊಲೀಸ್ ಕಸ್ಟಡಿಗೆ
10ರಿಂದ 19 ವರ್ಷ ವಯಸ್ಸಿನ ಹೆಣ್ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ ‘ಋತುಚಕ್ರ ನೈರ್ಮಲ್ಯ ನಿರ್ವಹಣೆ’ ಯೋಜನೆಯನ್ನು ಇದೇ ವೇಳೆ ಸಚಿವೆ ಎತ್ತಿ ಹಿಡಿದರು.
ನವದೆಹಲಿ: ಸಂಸತ್ ಸದಸ್ಯತ್ವ ಅನರ್ಹತೆ ರದ್ದಾದ ಬಳಿಕ ನಿನ್ನೆ ಮೊದಲ ಭಾಷಣ ಮಾಡಿದ ರಾಹುಲ್ ಗಾಂಧಿ (Rahul Gandhi) ಮೋದಿ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಪರ ಮಾತನಾಡಿದರು. ರಾಹುಲ್ ಗಾಂಧಿ ಲೋಕಸಭೆಯಿಂದ ನಿರ್ಗಮಿಸುವ ವೇಳೆ ಬಿಜೆಪಿ ಸಂಸದರತ್ತ ಫ್ಲೈಯಿಂಗ್ ಕಿಸ್ ನೀಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ. ಆದ್ರೆ ಇದು ಪ್ರೀತಿ ಮತ್ತು ಅಕ್ಕರೆಯ ಸನ್ನೆ ಅಷ್ಟೇ ಎಂದು ಎಐಸಿಸಿ ಮಾಜಿ ವಕ್ತಾರೆ ಹಾಗೂ ಹಾಲಿ ಶಿವಸೇನೆ ಸಂಸದೆ (ಉದ್ಧವ್ ಠಾಕ್ರೆ ಬಣ) ಪ್ರಿಯಾಂಕಾ ಚತುರ್ವೇದಿ (Priyanka Chaturvedi) ಸಮರ್ಥನೆ ಮಾಡಿಕೊಂಡಿದ್ದಾರೆ.
#WATCH | Shiv Sena (UBT) MP Priyanka Chaturvedi says, “It was the responsibility of the PM to come to the parliament and convey the issues in Manipur, but he didn’t. This was the reason why we had to pass a no-confidence motion. I hope today he’ll answer all the questions.” pic.twitter.com/9tCiuM7UxL
ಈ ಕುರಿತು ಇಂದು ಸದನದ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಮಾತನಾಡುವಾಗ ಬಿಜೆಪಿ ಸಂಸದರು ಅಡ್ಡಿಪಡಿಸುತ್ತಿದ್ದರು. ಆಗ ರಾಹುಲ್ ಗಾಂಧಿ ಮಾಡಿದ್ದು ಪ್ರೀತಿ ವಾತ್ಸಲ್ಯದ ಸೂಚಕವಾಗಿತ್ತು. ಅದರಿಂದ ಏನು ಸಮಸ್ಯೆ? ಅದನ್ನು ಅರ್ಥ ಮಾಡಿಕೊಳ್ಳಲಾರದಷ್ಟು ವಿಫಲರಾಗಿ ಏಕೆ ದ್ವೇಷ ಸಾಧಿಸುತ್ತಿದ್ದಾರೆ? ಎಂದು ಚತುರ್ವೇದಿ ಪ್ರಶ್ನೆ ಮಾಡಿದ್ದಾರೆ.
ಸದನದಲ್ಲಿ ಏನಾಯಿತು?
ಸಂಸತ್ ಸದಸ್ಯ ಸ್ಥಾನ ಮರುಸ್ಥಾಪನೆ ಬಳಿಕ ಕಲಾಪದಲ್ಲಿ ಭಾಗಿಯಾದ ರಾಹುಲ್ ಗಾಂಧಿ ಮೊದಲ ಬಾರಿ ಮಾತನಾಡಿದರು. ಸರ್ಕಾರದ ವಿರುದ್ಧ ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಪರ ಸುದೀರ್ಘವಾಗಿ ಮಾತನಾಡಿದರು. ರಾಹುಲ್ ಗಾಂಧಿ ಭಾಷಣದ ಬಳಿಕ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಾತು ಆರಂಭಿಸಿದರು. ಸ್ಮೃತಿ ಇರಾನಿ (Smriti Irani) ಮಾತು ಆರಂಭಿಸುತ್ತಿದ್ದಂತೆ ಲೋಕಸಭೆಯಿಂದ ನಿರ್ಗಮಿಸಲು ಮುಂದಾದ ರಾಹುಲ್ ಗಾಂಧಿ, ಹಾದಿ ಮಧ್ಯೆ ಕೆಲವು ಫೈಲ್ ಗಳನ್ನು ಕೆಳಗೆ ಬೀಳಿಸಿಕೊಂಡರು. ಈ ವೇಳೆ ಅದನ್ನು ಎತ್ತಿಕೊಳ್ಳಲು ಮುಂದಾದಾಗ ಅಲ್ಲೇ ಕೂತಿದ್ದ ಬಿಜೆಪಿ ಸಂಸದರು, ರಾಹುಲ್ ಗಾಂಧಿ ನೋಡಿ ನಗಲು ಆರಂಭಿಸಿದ್ದರು. ಇದನ್ನು ಗಮನಿಸಿದ ರಾಗಾ, ಅವರಿಗೆ ಫ್ಲೈಯಿಂಗ್ ಕಿಸ್ ನೀಡಿ ಮುಂದೆ ನಡೆದರು ಎನ್ನಲಾಗಿದೆ. ಇದನ್ನೂ ಓದಿ: ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಈ ಯಾವ ದೃಶ್ಯಗಳು ಲೋಕಸಭೆಯಲ್ಲಿರುವ ಮುಖ್ಯ ಕ್ಯಾಮೆರಾದಲ್ಲಿ ಸೆರೆಯಾಗಿಲ್ಲ. ಆದ್ರೆ ಪ್ರತ್ಯಕ್ಷದರ್ಶಿ ಸಂಸದರು ಈ ಬಗ್ಗೆ ಮಾಹಿತಿ ನೀಡಿದ್ದು, ಬಿಜೆಪಿ ಮಹಿಳಾ ಸಂಸದರು ರಾಹುಲ್ ಗಾಂಧಿ ನಡೆ ಅನುಚಿತವಾಗಿತ್ತು ಎಂದು ಆರೋಪಿಸಿದ್ದಾರೆ. ಇದು ಅಶ್ಲೀಲ ಮತ್ತು ಸ್ತ್ರೀದ್ವೇಷದ ಪುರುಷ ಮಾತ್ರ ಸಂಸತ್ತಿನಲ್ಲಿ ಮಹಿಳಾ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಲು ಸಾಧ್ಯ. ಇಂತಹ ಉದಾಹರಣೆ ಹಿಂದೆಂದೂ ಕಂಡಿರಲಿಲ್ಲ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.