Tag: SN Narayanswamy

  • ಶಾಸಕ ನಾರಾಯಣಸ್ವಾಮಿ ಬಿಪಿಎಲ್ ಕಾರ್ಡ್ ಆಗಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಕೆ.ವೈ ನಂಜೇಗೌಡ

    ಶಾಸಕ ನಾರಾಯಣಸ್ವಾಮಿ ಬಿಪಿಎಲ್ ಕಾರ್ಡ್ ಆಗಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಕೆ.ವೈ ನಂಜೇಗೌಡ

    – ಕೋಲಾರದಲ್ಲಿ ಮುಂದುವರಿದ ಕಾಂಗ್ರೆಸ್ ಶಾಸಕರ ವಾಕ್ಸಮರ

    ಕೋಲಾರ: ಕೋಲಾರದಲ್ಲಿ (Kolar) ಕಳೆದೊಂದು ವಾರದಿಂದ ಕಾಂಗ್ರೆಸ್ ಶಾಸಕರ ವಾಕ್ಸಮರ ಜೋರಾಗಿ ನಡೆಯುತ್ತಿದೆ. ಸ್ವಪಕ್ಷೀಯ ಕಾಂಗ್ರೆಸ್ ಶಾಸಕರು ಒಬ್ಬರನ್ನೊಬ್ಬರು ಕಾಲೆಳೆದುಕೊಳ್ಳುವ ಮೂಲಕ ಜಿಲ್ಲಾ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಲ್ಲವೆಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

    ಭಾನುವಾರ ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ (SN Naraynaswamy) ನಾನು ಬಿಪಿಎಲ್ ಕಾರ್ಡ್ ಎಂಎಲ್‌ಎ, ಮಾಲೂರು ಶಾಸಕ ಕೆ.ವೈ.ನಂಜೇಗೌಡ (KY Nanjegowda) ಎಪಿಎಲ್ ಶಾಸಕರೆಂದು ಆರೋಪಿಸಿದ್ದರು. ಅಲ್ಲದೇ ಅವರಿಗೆ ಉಸ್ತುವಾರಿ ಸಚಿವರು ಎರಡೂವರೆ ಸಾವಿರ ಕೋಟಿ ಅನುದಾನ ಕೊಟ್ಟಿದ್ರೆ ಅವರ ಸ್ವಾಮಿನಿಷ್ಠೆ ಇರಲಿ ಎಂದು ಶಾಸಕ ನಂಜೇಗೌಡಗೆ ಟಾಂಗ್ ನೀಡಿದ್ದರು. ಈ ಹಿನ್ನೆಲೆ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಇಂದು ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಟಾಂಗ್ ಕೊಟ್ಟಿದ್ದು, ಬಿಪಿಎಲ್ ಕಾರ್ಡ್ ಆಗಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುವುದಾಗಿ ಸವಾಲು ಹಾಕಿದ್ದಾರೆ. ಇದನ್ನೂ ಓದಿ: ದಾವಣಗೆರೆ | ಡಿಜೆಗೆ ಅನುಮತಿ ನಮ್ಮ ಹೋರಾಟಕ್ಕೆ ಸಿಕ್ಕ ಫಲ – ರಾಜಕೀಯ ಮುಖಂಡರಿಂದ ಸುಳ್ಳು ಪೋಸ್ಟ್

    ಕೋಲಾರ ಜಿಲ್ಲೆ ಮಾಲೂರು ಹಾಲು ಒಕ್ಕೂಟದಲ್ಲಿ ಮಾತನಾಡಿದ ಅವರು, ನಾರಾಯಣಸ್ವಾಮಿ ಅವರು ದೊಡ್ಡ ಇನ್‌ಕಮ್ ಟಾಕ್ಸ್ ಹೋಲ್ಡರ್ ಆಗಿದ್ದಾರೆ. ಬಿಪಿಎಲ್ ಕಾರ್ಡ್‌ನವರೆಂದು ಇನ್ನೊಮ್ಮೆ ಮಾತನಾಡಬೇಡಿ. ಬಿಪಿಎಲ್ ಕಾರ್ಡ್ ಅಂತ ನೀವು ಡಿಕ್ಲೇರ್ ಮಾಡಿದರೆ ನಾನು ರಾಜಕೀಯ ನಿವೃತ್ತಿ ಪಡೆಯುವೆ. ನಿಮ್ಮ ತಂದೆ ತಾಯಿ ಅವರು ಆಗ ಬಿಪಿಎಲ್ ಕಾರ್ಡ್ ಹೊಂದಿರಬಹುದು ಆದ್ರೆ ನೀನು ಬುದ್ಧಿವಂತ, ಎಪಿಎಲ್ ಆಗಿದ್ದೀಯಾ. ಈಗಲೂ ನೀನು ಬಿಪಿಎಲ್ ಕಾರ್ಡ್ ಎಂದು ಪ್ರೂವ್ ಮಾಡಿದರೆ ನಾನು ರಾಜಕೀಯದಲ್ಲಿ ಇರುವುದಿಲ್ಲ ಎಂದು ಸವಾಲಾಕಿದ್ದಾರೆ. ನಾನು ನಮ್ಮ ತಾತನವರ ಕಾಲದಿಂದ ಎಪಿಎಲ್ ಕಾರ್ಡ್ ಹೊಂದಿರುವೆ. ನಾವು ಏನು ಮಾಡುತ್ತೀವಿ, ಮಾತನಾಡುತ್ತಿದ್ದೇವೆ ಅಂತ ಜನರು ನೋಡುತ್ತಿದ್ದಾರೆ. ಮೂರು ಬಾರಿ ಶಾಸಕರಾಗಿದ್ದೀರಿ, ಯಾರ ಬಗ್ಗೆ ಮಾತನಾಡುತ್ತಿದ್ದೀರಿ ತಿಳಿದುಕೊಳ್ಳಿ ಎಂದರು. ಇದನ್ನೂ ಓದಿ: ಸರ್ಕಾರಿ ಕೆಲಸಗಳಿಗೆ ಇನ್ಮುಂದೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್ ಸೇವೆ ಪಡೆಯಲು ನಿರ್ಧಾರ

    ಇನ್ನು ಎಂಎಲ್‌ಸಿ ಅನಿಲ್ ಕುಮಾರ್ ಜಿಲ್ಲೆಯ ಕಾಂಗ್ರೆಸ್ ಶಾಸಕರನ್ನು ಕೆಡಿಸುತ್ತಿದ್ದಾರೆಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಅನಿಲ್ ಕುಮಾರ್ ಹೇಳಿದೆಲ್ಲ ಕೇಳುವುದಕ್ಕೆ ನಾನು ಮಗುವೆ? ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದವನಲ್ಲ, ಕೆಳ ಹಂತದಿಂದ ನಾನು ಬಂದಿರುವೆ. ಈ ಹಿಂದೆ ಅನಿಲ್ ಕುಮಾರ್ ಮತ್ತು ನಾರಾಯಣಸ್ವಾಮಿ ಎಷ್ಟು ಒಗ್ಗಟ್ಟು ಆಗಿದ್ದರು. ಅನಿಲ್ ಕುಮಾರ್ ಸಾಮಾನ್ಯ ವ್ಯಕ್ತಿ, ಒಳ್ಳೆತನ ಇಲ್ಲಿ ಇರುತ್ತೆ ಅಲ್ಲಿ ಇರುತ್ತಾರೆ ಎಂದು ಶಾಸಕ ನಾರಾಯಣಸ್ವಾಮಿಗೆ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ RSS vs RSS ನಡುವಿನ ಜಗಳ – ಪ್ರಿಯಾಂಕ್ ಖರ್ಗೆ

  • ಸಿದ್ದರಾಮಯ್ಯ ರಾಜಕೀಯ ಬಿಡುವ ಮಾತೇ ಇಲ್ಲ: ಎಸ್ಎನ್ ನಾರಾಯಣಸ್ವಾಮಿ

    ಸಿದ್ದರಾಮಯ್ಯ ರಾಜಕೀಯ ಬಿಡುವ ಮಾತೇ ಇಲ್ಲ: ಎಸ್ಎನ್ ನಾರಾಯಣಸ್ವಾಮಿ

    -ರಾಜಕೀಯ ಕೊನೆಯಾಗುತ್ತಿದೆ ಎಂದರೆ ವಯಸ್ಸಾಗುತ್ತಿದೆ ಎಂದರ್ಥ
    – ನಾನು ಸಚಿವ ಆಕಾಂಕ್ಷಿ ಎಂದ ಬಂಗಾರಪೇಟೆ ಶಾಸಕ

    ಕೋಲಾರ: ಸಿದ್ದರಾಮಯ್ಯ (Siddaramaiah) ರಾಜಕೀಯ ಬಿಡುವ ಮಾತೇ ಇಲ್ಲ. ರಾಜಕೀಯ (Politics) ಕೊನೆಯಗುತ್ತಿದೆ ಎಂದರೆ ವಯಸ್ಸಾಗುತ್ತಿದೆ ಎಂದು ಅರ್ಥ ಎಂದು ಕೋಲಾರದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ (SN Narayanaswamy) ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.

    ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಸ್.ಎನ್ ಸಿಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಇಷ್ಟು ವರ್ಷ ರಾಜಕಾರಣ ಮಾಡಿದ್ದಾರೆ. ಇನ್ನೂ ಎಷ್ಟು ವರ್ಷ ಮಾಡಲು ಸಾಧ್ಯ ಎಂಬ ದಾಟಿಯಲ್ಲಿ ಹೇಳಿದ್ದಾರೆ ಅಷ್ಟೇ. ಸಿದ್ದರಾಮಯ್ಯ ಗಟ್ಟಿಯಾಗಿರುವವರೆಗೂ ಅವರು ಈ ರಾಜ್ಯಕ್ಕೆ ಬೇಕು, ಅವರ ಸೇವೆ ಬೇಕು. ಸಿದ್ದರಾಮಯ್ಯನವರ ಜೀವನಪರ್ಯಂತ ನಿವೃತ್ತಿ ಮಾತಿಲ್ಲ. ರಾಜಕೀಯವಾಗಿ ಇದ್ದೇ ಇರುತ್ತಾರೆ ಎಂದರು. ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ – ಹೋರಾಟ ಹತ್ತಿಕ್ಕಲು ಅಶ್ರುವಾಯು ಪ್ರಯೋಗ

    ಎರಡೂವರೆ ವರ್ಷದ ನಂತರ ಅಧಿಕಾರ ಹಸ್ತಾಂತರವಾಗುತ್ತಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಮ್ಮಲ್ಲಿ ಈ ಬಗ್ಗೆ ಎಲ್ಲೂ ಚರ್ಚೆಯಾಗಿಲ್ಲ. ಹೈಕಮಾಂಡ್ ಮಾತಿಗೆ ಬದ್ಧರಾಗಿರುತ್ತೇವೆ. ಸದ್ಯಕ್ಕೆ ಸಿದ್ದರಾಮಯ್ಯನವರ ಕುರ್ಚಿ ಖಾಲಿ ಇಲ್ಲ. ಕುರ್ಚಿ ಬಿಡಿ ಎಂದು ಯಾರೂ ಹೇಳುತ್ತಿಲ್ಲ. ಆದರೆ ವಿರೋಧ ಪಕ್ಷದವರ ಬೊಬ್ಬೆ ಬಿಟ್ಟರೆ, ನಮ್ಮ ಪಕ್ಷದಲ್ಲಿ ಯಾರೂ ಸಹ ಬಿಡಿ ಎಂದು ಹೇಳುತ್ತಿಲ್ಲ ಎಂದು ನುಡಿದರು. ಇದನ್ನೂ ಓದಿ: ದೇಶ ತೊರೆಯುತ್ತಿದ್ದ ಸಿರಿಯಾ ಅಧ್ಯಕ್ಷನಿದ್ದ ವಿಮಾನ ಕಣ್ಮರೆ – ಕ್ಷಿಪಣಿ ದಾಳಿಗೆ ಪತನ?

    ಇನ್ನೂ ರಾಜ್ಯದಲ್ಲಿ ಕಾಂಗ್ರೆಸ್ ಸ್ಥಾನ 138 ಆಗಿದೆ. ಬಲ ಜಾಸ್ತಿ ಆಗಿದೆ. ಅಧಿಕಾರ ಪ್ರಸ್ತಾಪ ಪಬ್ಲಿಕ್‌ನಲ್ಲಿ ಆಗಿಲ್ಲ, ನಮ್ಮಲ್ಲೂ ಸಹ ಆಗಿಲ್ಲ. ಸಿಎಂ, ಡಿಸಿಎಂ, ಇಬ್ಬರ ನಡುವೆ ಒಪ್ಪಂದಕ್ಕೆ ಬಂದಿರಬಹುದು. ಆದರೆ ಇದರ ಬಗ್ಗೆ ಎಲ್ಲೂ ಪ್ರಸ್ತಾಪ ಇಲ್ಲ. ಅವರ ಮನಸ್ಸಿಗೆ ತಕ್ಕಂತೆ ಕೆಲವರು ಮಾತನಾಡಿರಬಹುದು. ಬಹಿರಂಗವಾಗಿ, ಶಾಸಕಾಂಗ ಸಭೆಯಲ್ಲಿ ಇಬ್ಬರು ನಾಯಕರು ಒಪ್ಪಂದ ಆಗಿದೆ ಎಂದು ಎಲ್ಲೂ ಹೇಳಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಕೇಸ್ – ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಖುಲಾಸೆ

    ಬೆಳಗಾವಿ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಮತ್ತು ಸಚಿವ ಸಂಪುಟ ಆಗುವುದಿಲ್ಲ. ನಾನು ಸಚಿವ ಆಕಾಂಕ್ಷಿ. ಅತಿ ಹೆಚ್ಚು ಬಲಗೈ ಸಮುದಾಯ ಇರುವ ಜಿಲ್ಲೆಯಲ್ಲಿ ಅತ್ಯಂತ ಹಿರಿಯ ಶಾಸಕ ಅಭಿವೃದ್ಧಿ ಮಾಡಲು ನನಗೆ ಅವಕಾಶ ಕೊಟ್ಟರೆ ಮಾಡುವೆ. ಸಚಿವ ಸ್ಥಾನಕ್ಕೆ ಒತ್ತಾಯ ಮಾಡಲ್ಲ. ಇನ್ನೂ ಎರಡೂವರೆ ವರ್ಷದ ನಂತರ ಸಚಿವ ಸ್ಥಾನ ನೀಡುವ ಭರವಸೆ ಖರ್ಗೆ ಅವರು ನೀಡಿದ್ದಾರೆ. ಸಿಎಂ, ಡಿಸಿಎಂ ಅವರು ಸಹ ಭರವಸೆ ನೀಡಿದ್ದಾರೆ. ಜವಾಬ್ದಾರಿ ಕೊಡುತ್ತಾರೆ ಎಂಬ ವಿಶ್ವಾಸವಿದೆ. ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಆಗಲ್ಲ, ಏಪ್ರಿಲ್‌ನಲ್ಲಿ ಆಗಬಹುದು ಎಂದು ಹೇಳಿದರು. ಇದನ್ನೂ ಓದಿ: `ಮಹಾ’ ಸ್ಪೀಕರ್ ಹುದ್ದೆಗೆ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ನಾಮಪತ್ರ ಸಲ್ಲಿಕೆ

  • ಹಿರಿಯ ಶಾಸಕನಾದ್ರೂ ಉದಾಸೀನ ಮನೋಭಾವದಿಂದ ನೋಡ್ತಾರೆ; ಬೈರತಿ ಸುರೇಶ್ ವಿರುದ್ಧ ನಾರಾಯಣಸ್ವಾಮಿ ಬೇಸರ

    ಹಿರಿಯ ಶಾಸಕನಾದ್ರೂ ಉದಾಸೀನ ಮನೋಭಾವದಿಂದ ನೋಡ್ತಾರೆ; ಬೈರತಿ ಸುರೇಶ್ ವಿರುದ್ಧ ನಾರಾಯಣಸ್ವಾಮಿ ಬೇಸರ

    ಕೋಲಾರ: ನಾನು ಜಿಲ್ಲೆಯ ಮಟ್ಟಿಗೆ ಹಿರಿಯ ಶಾಸಕನಾದರು ನನ್ನನ್ನು ಪರಿಗಣಿಸುವುದಿಲ್ಲ. ಜಿಲ್ಲೆಯ ಅಭಿವೃದ್ಧಿ ಸೇರಿದಂತೆ ಪಕ್ಷ ಸಂಘಟನೆ ವಿಚಾರದಲ್ಲಿ ನನ್ನನ್ನು ಉದಾಸೀನ ಮನೋಭಾವದಿಂದ ನೋಡುತ್ತಿದ್ದಾರೆ ಎಂದು ಕೋಲಾರ ಉಸ್ತುವಾರಿ ಸಚಿವ ಬೈರತಿ ಸುರೇಶ್ (Byrathi Suresh) ವಿರುದ್ಧ ಶಾಸಕ ಹಾಗೂ ಕೆಯುಐಡಿಎಫ್ ಮಂಡಳಿ ಅಧ್ಯಕ್ಷ ಎಸ್.ಎನ್.ನಾರಾಯಣಸ್ವಾಮಿ (SN Narayanaswamy) ಬೇಸರ ವ್ಯಕ್ತಪಡಿಸಿದ್ದಾರೆ.

    ಕೋಲಾರ (Kolar) ಜಿಲ್ಲೆ ಬಂಗಾರಪೇಟೆಯ (Bangarpet) ಪುರಸಭೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವರ್ಗಾವಣೆ ವಿಚಾರದಲ್ಲಿ ನನ್ನ ಮಾತಿಗೆ ಮನ್ನಣೆ ನೀಡುತ್ತಿಲ್ಲ. ಜಿಲ್ಲೆಯಲ್ಲಿರುವ ಗುಂಪುಗಳಲ್ಲಿ ಗುರುತಿಸಿಕೊಳ್ಳಲು ನನಗೆ ಇಷ್ಟವಿಲ್ಲ. ಕೋಲಾರ ಕಾಂಗ್ರೆಸ್ ಹೊಲಸಾಗಿದೆ. ಇಲ್ಲಿ ಯರ‍್ಯಾರೋ ನಾಯಕರಾಗಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಸಭೆಯಲ್ಲಿ ನಡೆದ ಗಲಾಟೆಯಿಂದ, ತಲೆ ತಗ್ಗಿಸುವಂತಾಗಿದೆ. ಹಿರಿಯ, ಕಿರಿಯ ಶಾಸಕರು ಯಾರೆಂದು ತಿಳಿದು ಆದ್ಯತೆ ನೀಡಬೇಕೆಂದು ಉಸ್ತುವಾರಿ ಸಚಿವ ಬೈರತಿ ಸುರೇಶ್ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಕೊಟ್ಟ ಹಣ ವಾಪಸ್‌ ಕೇಳಿದ್ದಕ್ಕೆ ಅಪ್ರಾಪ್ತರಿಂದ ಫೈರಿಂಗ್‌ – ಓರ್ವ ಸಾವು, ಇಬ್ಬರು ಗಂಭೀರ

    ಸದ್ಯಕ್ಕೆ ನನಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಎರಡೂವರೆ ವರ್ಷದ ನಂತರ ನಂಗೆ ಮಂತ್ರಿ ಸ್ಥಾನ ನೀಡುವ ಭರವಸೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ. ವಕ್ಪ್ ಬೋರ್ಡ್ ವಿವಾದ ವಿಚಾರದಲ್ಲಿ ನಾವು ರೈತರ ಪರ ನಿಲ್ಲುತ್ತೇವೆ. ಯಾವುದೇ ಕಾರಣಕ್ಕೂ ವಕ್ಫ್ ಬೋರ್ಡ್‌ಗೆ ರೈತರ ಆಸ್ತಿ ನೀಡಬಾರದು. ಈಗಾಗಲೇ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ನಾಯಕ ತೀಟೆ ರವಿ ಏನೇನೋ ಹೇಳಿಕೆ ನೀಡುತ್ತಿದ್ದು, ಕೇವಲ ರಾಜಕೀಯ ಮಾಡಲು, ಬಿಜೆಪಿ, ಜೆಡಿಎಸ್ ಹೋರಾಟ ಮಾಡುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಚುನಾವಣೆ ನಡೆದರೆ ತೆಲಂಗಾಣ, ಕರ್ನಾಟಕದಲ್ಲಿ ವಸೂಲಿ ಡಬಲ್ ಆಗಿದೆ: ಮೋದಿ ವಾಗ್ದಾಳಿ

    ಇನ್ನು ರಾಜ್ಯ ಕಾಂಗ್ರೆಸ್‌ನಲ್ಲಿ 5 ವರ್ಷದಲ್ಲಿ ಅಧಿಕಾರ ಹಂಚಿಕೆ ವಿಚಾರ ಕುರಿತು ಮಾತನಾಡಿದ ಅವರು, ಅಂತಹ ಯಾವುದೇ ಹಂಚಿಕೆ ಒಪ್ಪಂದವೂ ಆಗಿಲ್ಲ. ಎಲ್ಲವೂ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು ಎಂದರು. 5 ವರ್ಷ ಸಿಎಂ ಆಗಿರ್ತೀನಿ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ಅದು ಸಹಜ ಹೇಳಿಕೆ. ಆದರೆ ಎಲ್ಲವೂ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: 20 ಮಾರ್ಗಗಳಲ್ಲಿ 2025ರಲ್ಲಿ ಸೀಪ್ಲೇನ್ ಕಾರ್ಯಾಚರಣೆ ಪ್ರಾರಂಭ: ಸ್ಪೈಸ್‌ಜೆಟ್

  • ಸಂಸದ ಮುನಿಸ್ವಾಮಿ, ಶಾಸಕ ಎಸ್‌ಎನ್ ನಾರಾಯಣಸ್ವಾಮಿ ಜಟಾಪಟಿ ಪ್ರಕರಣ – ಎಫ್‌ಐಆರ್ ದಾಖಲು

    ಸಂಸದ ಮುನಿಸ್ವಾಮಿ, ಶಾಸಕ ಎಸ್‌ಎನ್ ನಾರಾಯಣಸ್ವಾಮಿ ಜಟಾಪಟಿ ಪ್ರಕರಣ – ಎಫ್‌ಐಆರ್ ದಾಖಲು

    ಕೋಲಾರ: ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ (S Muniswamy) ಹಾಗೂ ಶಾಸಕ ಎಸ್‌ಎನ್ ನಾರಾಯಣಸ್ವಾಮಿ (SN Narayanaswamy) ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧವೂ ಎಫ್‌ಐಆರ್ (FIR) ದಾಖಲಿಸಲಾಗಿದೆ.

    ಶಾಸಕ ಎಸ್‌ಎನ್ ನಾರಾಯಣಸ್ವಾಮಿ ವಿರುದ್ಧ ಬಿಜೆಪಿ (BJP) ಯುವಮೋರ್ಚಾ ಜಿಲ್ಲಾಧ್ಯಕ್ಷ ಬಾಲಾಜಿ ದೂರು ನೀಡಿದ್ದು, ಬಂಗಾರಪೇಟೆ ಶಾಸಕರ ದೂರಿನ ಅನ್ವಯ ಸಂಸದರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಸೆ.25ರಂದು ನಗರದ ಚನ್ನಯ್ಯ ರಂಗಮಂದಿರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮುನಿಸ್ವಾಮಿ ಹಾಗೂ ನಾರಾಯಣಸ್ವಾಮಿ ಅವರು ಪರಸ್ಪರ ಗಲಾಟೆ ಮಾಡಿಕೊಂಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಈ ವೇಳೆ ಎಸ್ಪಿ ನಾರಾಯಣ ಅವರು ಇಬ್ಬರ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಅಲ್ಲದೇ ಜಿಲ್ಲಾ ಮಂತ್ರಿ ಭೈರತಿ ಸುರೇಶ್ ಮಧ್ಯ ಪ್ರವೇಶಿಸಿ ಸಂಸದರಿಂದ ಅಗಬಹುದಾದಂತಹ ಮಾರಣಾಂತಿಕ ಹಲ್ಲೆಯನ್ನು ತಪ್ಪಿಸಿದ್ದಾರೆ. ಇದನ್ನೂ ಓದಿ: ಕೈಯಿಂದ ಲೋಕ ಸಮರಕ್ಕೆ ತಯಾರಿ – ಸಿಎಂ ಪುತ್ರ ಯತೀಂದ್ರಗೆ ಸಿಗುತ್ತಾ ಟಿಕೆಟ್?

    ಸಂಸದ ಮುನಿಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಶಾಸಕ ಎಸ್.ಎನ್ ನಾರಾಯಣಸ್ವಾಮಿ ದೂರು ನೀಡಿದ್ದಾರೆ. ಇವರ ದೂರಿನ ಅನ್ವಯ ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸಂಸದ ಮುನಿಸ್ವಾಮಿ ಅವರ ಮೇಲೆ ಒಂದೇ ತಿಂಗಳಲ್ಲಿ ಎರಡನೇ ಬಾರಿ ಎಫ್‌ಐಆರ್ ದಾಖಲಿಸಲಾಗಿದೆ. ಅರಣ್ಯ ಇಲಾಖೆ ತೆರವು ಕಾರ್ಯಾಚರಣೆ ವಿಚಾರದಲ್ಲಿ ಮುನಿಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಎ1 ಆರೋಪಿಯಾಗಿ ಮುನಿಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಇದನ್ನೂ ಓದಿ: ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ – ದಾವಣಗೆರೆ ಮೂಲದ ಹಿಂದೂ ಸಂಘಟನೆಯ ಸಂಚಾಲಕ ಅರೆಸ್ಟ್‌

    ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಸದ ಮುನಿಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈಗಾಗಲೇ ಎಸ್.ಎನ್ ನಾರಾಯಣಸ್ವಾಮಿ ಹಾಗೂ ಎಸ್ಪಿ ನಾರಾಯಣ್ ವಿರುದ್ಧ ರಾಜ್ಯಪಾಲರಿಗೆ ಮುನಿಸ್ವಾಮಿ ದೂರು ನೀಡಿದ್ದಾರೆ. ಸೆ.27ರಂದು ರಾಜ್ಯಪಾಲರನ್ನು ಭೇಟಿ ಮಾಡಿ ಸಂಸದ ಮುನಿಸ್ವಾಮಿ ದೂರು ನೀಡಿದ್ದು, ಇದರ ಬೆನ್ನಲ್ಲೇ ಶನಿವಾರ ಸಂಸದ ಮುನಿಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]