Tag: Soap Factory

  • ಮೀರತ್ ಸೋಪ್ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ – ಐವರು ಸಾವು, ಹಲವರಿಗೆ ಗಾಯ

    ಮೀರತ್ ಸೋಪ್ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ – ಐವರು ಸಾವು, ಹಲವರಿಗೆ ಗಾಯ

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಮೀರತ್‌ನ (Meerut) ಸೋಪ್ ಫ್ಯಾಕ್ಟರಿಯಲ್ಲಿ (Soap Factory) ಎರಡೆರಡು ಸ್ಫೋಟ (Explosion) ಸಂಭವಿಸಿದ ಪರಿಣಾಮ 5 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

    ಮೀರತ್‌ನ ಲೋಹಿಯಾ ನಗರದಲ್ಲಿ ಮಂಗಳವಾರ ಬೆಳಗ್ಗೆ ಘಟನೆ ನಡೆದಿದ್ದು, ಕಾರ್ಖಾನೆಯೊಳಗಿದ್ದ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. ಅವಶೇಷಗಳನ್ನು ತೆರವುಗೊಳಿಸುತ್ತಿದ್ದ ಸಂದರ್ಭ ಎರಡನೇ ಬಾರಿಗೆ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ:‌ ಮದುವೆಯ ಮರುದಿನವೇ 1.5 ಲಕ್ಷ ಹಣ, ಚಿನ್ನಾಭರಣಗಳೊಂದಿಗೆ ವಧು ಪರಾರಿ!

    ಈ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ (District Magistrate) ದೀಪಕ್ ಮೀನಾ ಪ್ರತಿಕ್ರಿಯೆ ನೀಡಿದ್ದು, ಯಂತ್ರಗಳಲ್ಲಿ ಬಳಸಲಾಗಿದ್ದ ಕೆಲವು ರಾಸಾಯನಿಕಗಳಿಂದ ಘಟನೆ ನಡೆದಿರಬಹುದು ಎಂದು ಊಹಿಸಲಾಗಿದೆ. ಘಟನೆಯ ನಿಖರ ಕಾರಣವನ್ನು ಕಂಡುಹಿಡಿಯಲಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ರೈಲಿನ 5 ಬೋಗಿಗಳಲ್ಲಿ ಹಠಾತ್ ಬೆಂಕಿ – ಪ್ರಯಾಣಿಕರು ಸೇಫ್

    ಸ್ಫೋಟದಿಂದಾಗಿ ಗೋಡೌನ್ ಪ್ರದೇಶ ಸಂಪೂರ್ಣ ನಾಶವಾಗಿದೆ. ಬಾಡಿಗೆ ಮನೆಯೊಂದರಲ್ಲಿ ಸೋಪ್ ಫ್ಯಾಕ್ಟರಿ ನಡೆಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಪೊಲೀಸ್ ಪಡೆ, ಎಸ್‌ಎಎಸ್‌ಪಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಸ್ಥಳಕ್ಕೆ ಆಗಮಿಸಿದ್ದಾರೆ. ಇದನ್ನೂ ಓದಿ: ಕರ್ತವ್ಯದ ವೇಳೆ ಆತ್ಮಹತ್ಯೆ ಮಾಡಿಕೊಂಡರೆ ಅಂತ್ಯಕ್ರಿಯೆಯಲ್ಲಿ ಮಿಲಿಟರಿ ಗೌರವ ಇಲ್ಲ: ಭಾರತೀಯ ಸೇನೆ

    ಘಟನೆಯ ಕುರಿತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಸಂತಾಪ ಸೂಚಿಸಿದ್ದು, ಅಪಘಾತದ ಬಗ್ಗೆ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಸಲಹೆ ನೀಡಿದ್ದಾರೆ. ಇಷ್ಟು ಮಾತ್ರವಲ್ಲದೇ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: 199 ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳಾಗಿಟ್ಟುಕೊಂಡ ಹಮಾಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾಬೂನು ಕಾರ್ಖಾನೆಗೆ ತ್ವರಿತ ಗತಿಯಲ್ಲಿ ಕಾರ್ಪೊರೇಟ್ ರೂಪ: ಎಂ.ಬಿ ಪಾಟೀಲ್

    ಸಾಬೂನು ಕಾರ್ಖಾನೆಗೆ ತ್ವರಿತ ಗತಿಯಲ್ಲಿ ಕಾರ್ಪೊರೇಟ್ ರೂಪ: ಎಂ.ಬಿ ಪಾಟೀಲ್

    ಬೆಂಗಳೂರು: ಲಾಭದಲ್ಲಿದ್ದರೂ ಸಮಕಾಲೀನ ಮಾರುಕಟ್ಟೆಗೆ ತಕ್ಕಂತೆ ಇಲ್ಲದಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತಕ್ಕೆ (KSDL) ಸಂಪೂರ್ಣ ಹೊಸ ರೂಪ ಕೊಟ್ಟು, ಕಾರ್ಪೊರೇಟ್ ಶೈಲಿಯಲ್ಲಿ ಅದರ ಚಟುವಟಿಕೆಗಳು ಇರುವ ಹಾಗೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿದ್ದಾರೆ.

    ಕಾರ್ಖಾನೆಯ ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಕೆಎಸ್‌ಡಿಎಲ್ ಅನ್ನು ಕೇವಲ ಸರ್ಕಾರಿ ಉದ್ದಿಮೆಯಾಗಿ ನೋಡುವ ದೃಷ್ಟಿಕೋನಕ್ಕೆ ವಿದಾಯ ಹೇಳಲಾಗುವುದು. ಈ ಸಂಸ್ಥೆ ತಯಾರಿಸುವ ಮೈ ಸೋಪು, ಊದುಕಡ್ಡಿ ಸೇರಿದಂತೆ ಪ್ರತಿಯೊಂದು ಉತ್ಪನ್ನವೂ ಸಾಮಾನ್ಯ ಕಿರಾಣಿ ಅಂಗಡಿಯಿಂದ ಹಿಡಿದ ಸೂಪರ್ ಸ್ಪೆಷಾಲಿಟಿ ಮಾಲ್‌ವರೆಗೆ ಎಲ್ಲೆಡೆಯೂ ಸಿಗುವಂತೆ ಮಾಡಲಾಗುವುದು. ಒಟ್ಟಿನಲ್ಲಿ ಇಡೀ ಭಾರತದಾದ್ಯಂತ ಮಾರುಕಟ್ಟೆ ಸೃಷ್ಟಿಸಿಕೊಳ್ಳಬೇಕು ಎನ್ನುವುದು ಈಗಿನ ಗುರಿಯಾಗಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಎನ್‌ಡಿಎ ಕೂಟ ಸೇರಿದ ಜೆಡಿಎಸ್‌ – ದೋಸ್ತಿ ಲೆಕ್ಕಾಚಾರ ಏನು? ಸೀಟ್ ಹಂಚಿಕೆ ಸೂತ್ರ ಏನು?

    ಕೆಎಸ್‌ಡಿಎಲ್ ಈಗ ಹಲವು ಬ್ರ್ಯಾಂಡ್‌ಗಳನ್ನು ಹೊಂದಿದೆ.ಇವುಗಳ ಜೊತೆಗೆ ಹೊಸಹೊಸ ಬ್ರ್ಯಾಂಡ್ ಉತ್ಪನ್ನಗಳನ್ನೂ ತಯಾರಿಸಲಾಗುವುದು. ಲ್ಯಾವೆಂಡರ್, ಬೇವು, ಗುಲಾಬಿ, ಅರಶಿಣ ಇತ್ಯಾದಿ ವಿಧದ ರೀತಿಯ ಸಾಬೂನುಗಳನ್ನು ಮಾರುಕಟ್ಟೆಗೆ ಹೊಸದಾಗಿ ಪರಿಚಯಿಸಲಾಗುವುದು. ಗುಣಮಟ್ಟ, ದಕ್ಷ ಆಡಳಿತ, ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ವಿಸ್ತರಣೆ ಇವು ಈಗ ನಮ್ಮ ಮುಂದಿನ ಉಪಕ್ರಮಗಳಾಗಿವೆ ಎಂದರು. ಇದನ್ನೂ ಓದಿ: ಕಾವೇರಿ ಸಂಕಷ್ಟಕ್ಕೆ ಪರಿಹಾರವಾಗಿರುವ ಮೇಕೆದಾಟು ಯೋಜನೆಗೆ ಕೇಂದ್ರ ಅನುಮತಿ ನೀಡಲಿ: ಡಿಕೆಶಿ

    ಕೆಎಸ್‌ಡಿಎಲ್ ಉತ್ಪನ್ನಗಳು ಉತ್ಕೃಷ್ಟ ಗುಣಮಟ್ಟದಿಂದ ಕೂಡಿವೆ. ಆದರೆ ಮಾರುಕಟ್ಟೆಯಲ್ಲಿ ಡಾಬರ್, ಹಿಂದೂಸ್ಥಾನ ಯೂನಿಲಿವರ್ ಲಿಮಿಟೆಡ್ ತರಹದ ಕಂಪನಿಗಳು ಸಿಂಹಪಾಲು ಹೊಂದಿವೆ. ಜತೆಗೆ ಕೆಎಸ್‌ಡಿಎಲ್ ಕರ್ನಾಟಕವನ್ನು ದಾಟಿ ಆಚೆಗೆ ಹೆಚ್ಚಾಗಿ ಹೋಗಿಲ್ಲ. ಸ್ಪರ್ಧಾತ್ಮಕ ಮಾರುಕಟ್ಟೆಯ ಈ ಯುಗದಲ್ಲಿ ಈ ರೀತಿಯ ಧೋರಣೆ ಸರಿ ಇಲ್ಲ. ಇನ್ನು ಮುಂದೆ ಕೆಎಸ್‌ಡಿಎಲ್ ರಾಜ್ಯದ ಜೊತೆಗೆ ಇಡೀ ದೇಶದ ಸಾಬೂನು ಮತ್ತು ಮಾರ್ಜಕಗಳ ಮಾರುಕಟ್ಟೆಯಲ್ಲಿ ಅತ್ಯಧಿಕ ಪಾಲು ಹೊಂದಬೇಕು. ರಾಜ್ಯದ ಉದ್ದಗಲಕ್ಕೂ ಇರುವ ಸರ್ಕಾರಿ ಕಚೇರಿಗಳು ಮತ್ತು ವಿದ್ಯಾರ್ಥಿ ನಿಲಯಗಳಿಗೆ ಇನ್ನು ಮುಂದೆ ಕೆಎಸ್‌ಡಿಎಲ್ ತಯಾರಿಸುವ ಸಾಬೂನು, ಲಿಕ್ವಿಡ್ ಸೋಪ್, ಹ್ಯಾಂಡ್ ವಾಶ್, ಡಿಶ್ ವಾಶ್‌ಗಳನ್ನೇ ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದರ ಜೊತೆಗೆ ವ್ಯಾಪಕ ಸ್ವರೂಪದಲ್ಲಿ ಬ್ರ‍್ಯಾಂಡಿಂಗ್ ಚಟುವಟಿಕೆಗಳನ್ನು ಆಕರ್ಷಕವಾಗಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಸರ್ಕಾರ ನೀರಿನ ಗ್ಯಾರಂಟಿ ಕೊಡಲಿ, ಶನಿವಾರ ಬೃಹತ್ ಪ್ರತಿಭಟನೆ ಮಾಡ್ತೇವೆ: ಬೊಮ್ಮಾಯಿ

    ಈ ಉದ್ದಿಮೆಯು ಮೈಸೂರು ಮಹಾರಾಜರ ಕಾಲದ ಹೆಗ್ಗುರುತುಗಳಲ್ಲಿ ಒಂದಾಗಿದೆ. ಇದಕ್ಕೆ ಸಮಕಾಲೀನ ಸ್ಪರ್ಶ ಕೊಡಬೇಕಾದ್ದು ಈಗಿನ ಜರೂರಾಗಿದೆ. ಲಾಭವನ್ನು ಹಿಗ್ಗಿಸಿಕೊಳ್ಳುವುದರೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡುವುದೊಂದೇ ಇದಕ್ಕಿರುವ ದಾರಿಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಎನ್‌ಡಿಎ ಒಕ್ಕೂಟಕ್ಕೆ ಅಧಿಕೃತವಾಗಿ ಜೆಡಿಎಸ್‌ ಸೇರ್ಪಡೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]