Tag: Social exclusion

  • ಮಂಡ್ಯ | ದಲಿತ ಸಮುದಾಯದಿಂದಲೇ ದಲಿತರಿಗೆ ಬಹಿಷ್ಕಾರ ಆರೋಪ; ಗ್ರಾಮದ 7 ಕುಟುಂಬಕ್ಕೆ ಶಿಕ್ಷೆ

    ಮಂಡ್ಯ | ದಲಿತ ಸಮುದಾಯದಿಂದಲೇ ದಲಿತರಿಗೆ ಬಹಿಷ್ಕಾರ ಆರೋಪ; ಗ್ರಾಮದ 7 ಕುಟುಂಬಕ್ಕೆ ಶಿಕ್ಷೆ

    – ಕುಲದ ವಿರುದ್ಧ ಮಾತನಾಡಿದ್ದಕ್ಕೆ ಬಹಿಷ್ಕಾರ

    ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ದಲಿತ ಸಮುದಾಯವೇ (Dalit Community) ದಲಿತರನ್ನು ಬಹಿಷ್ಕರಿಸಿರುವ ಆರೋಪ ಕೇಳಿ ಬಂದಿದೆ.

    ಕಾಲೋನಿಯ 7 ಕುಟುಂಬಗಳು ಬಹಿಷ್ಕಾರಕ್ಕೆ ಒಳಗಾಗಿದ್ದು, ಕುಟುಂಬಗಳ ಜೊತೆ ನೆರೆ ಹೊರೆಯವರು ಮಾತನಾಡದಂತೆ ಕುಲದ ಮುಖಂಡರು ಆದೇಶ ಮಾಡಿದ್ದಾರೆ. ಇದೀಗ ಬಹಿಷ್ಕಾರಕ್ಕೊಳಗಾದ (Social Exclusion) ಕುಟುಂಬಗಳು ಕಾನೂನು ಹೋರಾಟ ನಡೆಸಲು ಮುಂದಾಗಿದ್ದಾರೆ.

    ಕುಲದ ವಿರುದ್ಧ ಮಾತನಾಡಿದ ಕಾರಣಕ್ಕೆ 7 ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಬಹಿಷ್ಕಾರಕ್ಕೊಳಗಾದ ಕುಟುಂಬಗಳ ಜೊತೆ ನೆರೆ ಹೊರೆಯವರು ಮಾತನಾಡದಂತೆ ಆದೇಶ ಮಾಡಲಾಗಿದೆ.

    ತಮ್ಮದೇ ಸಮುದಾಯದವರಿಂದ ಸಾಮಾಜಿಕ ಬಹಿಷ್ಕಾರದ ಶಿಕ್ಷೆಗೆ ಗುರಿಯಾಗಿರುವ ಕುಟುಂಬಗಳೀಗ ಸಿಡಿದೆದ್ದಿವೆ. ಈ ಹಿನ್ನೆಲೆ ತಮಗಾದ ಅನ್ಯಾಯವನ್ನು ಅರಿತು, ತಮ್ಮ ನೆರವಿಗೆ ಬರುವಂತೆ ಸರ್ಕಾರ ಸೇರಿದಂತೆ ಡಿಸಿ, ಎಸ್ಪಿ ಹಾಗೂ ತಾಲೂಕು ಆಡಳಿತಕ್ಕೆ ಬಹಿಷ್ಕಾರಕ್ಕೊಳಗಾದ ಕುಟುಂಬಗಳು ಮನವಿ ಮಾಡಿವೆ.

  • ಅಂತರ್ಜಾತಿ ವಿವಾಹ- ಸಾಮಾಜಿಕ ಬಹಿಷ್ಕಾರ ಪ್ರಕರಣ: 12 ಜನರ ಬಂಧನ

    ಅಂತರ್ಜಾತಿ ವಿವಾಹ- ಸಾಮಾಜಿಕ ಬಹಿಷ್ಕಾರ ಪ್ರಕರಣ: 12 ಜನರ ಬಂಧನ

    ಚಾಮರಾಜನಗರ: ಅಂತರ್ಜಾತಿ ವಿವಾಹವಾದ (Inter Caste Marriage) ಜೋಡಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ (Social exclusion) ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲದ (Kollegala) ಕುಣಗಳ್ಳಿಯ (Kunagalli) 12 ಮಂದಿಯನ್ನು ಬಂಧಿಸಲಾಗಿದೆ.

    ಗೋವಿಂದರಾಜು ಎಂಬ ಯುವಕ ದಲಿತ ಯುವತಿಯನ್ನು ಮದುವೆಯಾಗಿದ್ದ. ಇದನ್ನು ವಿರೋಧಿಸಿ ಉಪ್ಪಾರ (Uppara) ಸಮುದಾಯದ ಮುಖಂಡರು ಗೋವಿಂದರಾಜು ಕುಟುಂಬಕ್ಕೆ 6 ಲಕ್ಷ ರೂ. ದಂಡ ವಿಧಿಸಿ ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ಇದನ್ನೂ ಓದಿ: ಬಿಸಿ ಟೀ ತಂದುಕೊಡದ್ದಕ್ಕೆ ಗದರಿದ ಅತ್ತೆ- ರಾಡ್‍ನಿಂದ ಹೊಡೆದು ಕೊಲೆಗೈದ ಸೊಸೆ

    KILLING CRIME

    ಘಟನೆಗೆ ಸಂಬಂಧಿಸಿದಂತೆ ಅಗರ-ಮಾಂಬಳ್ಳಿ (Agara-Mamballi) ಪೊಲೀಸ್ ಠಾಣೆಯಲ್ಲಿ 15 ಮಂದಿ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 1860ರ ಅಡಿ ಪ್ರಕರಣ ದಾಖಲಾಗಿತ್ತು. ಮಹಿಳೆ ಸೇರಿದಂತೆ ಇನ್ನೂ ಮೂವರು ನಾಪತ್ತೆಯಾಗಿದ್ದಾರೆ.

    ನೊಂದ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ 1 ಲಕ್ಷ ರೂ. ಪರಿಹಾರ ನೀಡಲಾಗಿದೆ. ಇದನ್ನೂ ಓದಿ: ಸುಳ್ಳು ವಯಸ್ಸಿನ ದಾಖಲೆ ಆರೋಪ ಶಾಸಕ ಕೆ.ಜಿ ಬೋಪಯ್ಯ ವಿರುದ್ಧ ದೂರು