Tag: Social Media Influencer

  • ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ – ಪಶ್ಚಿಮ ಬಂಗಾಳದ ಸೋಶಿಯಲ್‌ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ಅರೆಸ್ಟ್‌

    ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ – ಪಶ್ಚಿಮ ಬಂಗಾಳದ ಸೋಶಿಯಲ್‌ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ಅರೆಸ್ಟ್‌

    ಕೋಲ್ಕತ್ತಾ: ಭಾರತೀಯ ಸೇನೆಯ (Indian Army) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ (West Bengal) ಸೋಶಿಯಲ್‌ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ನನ್ನು (Social Media Influencer) ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ನಾಡಿಯಾ ಜಿಲ್ಲೆಯ ಆರಂಗಟಾದ ಬಿಸ್ವಾಜಿತ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಆರೋಪಿ ಭಾರತೀಯ ಸಶಸ್ತ್ರ ಪಡೆಗಳ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ. ಆತನನ್ನು ಬಂಧಿಸಿ ಶನಿವಾರ ಮಧ್ಯಾಹ್ನ ನಾಡಿಯಾ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿತ್ತು. ಈ ವೇಳೆ ಆರೋಪಿ ತನ್ನ ತಪ್ಪಿಗೆ ಕ್ಷಮೆಯಾಚಿಸಿದ್ದಾನೆ. ಇದನ್ನೂ ಓದಿ: ನನ್ನ ಹೃದಯ ಚೂರಾಗಿದೆ.. ನೋವು, ದುಃಖದಲ್ಲಿ ನರಳುತ್ತಿದ್ದೇನೆ: ಕಾಲ್ತುಳಿತ ದುರಂತಕ್ಕೆ ವಿಜಯ್‌ ಮೊದಲ ಪ್ರತಿಕ್ರಿಯೆ

    ಬಿಸ್ವಾಸ್ ಆಗಾಗ ಫೇಸ್‌ಬುಕ್ ಲೈವ್‌ನಲ್ಲಿ ಬರುತ್ತಿದ್ದ. ಆಗೆಲ್ಲ ಸಶಸ್ತ್ರ ಪಡೆಗಳು ಮತ್ತು ಸಿಬ್ಬಂದಿಯನ್ನು ಅತ್ಯಂತ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಭಾಷೆ ಬಳಸಿ ನಿಂದಿಸುತ್ತಿದ್ದ. ಈ ಬಗ್ಗೆ ಆತನ ನೆರೆಹೊರೆಯವರು ಹಾಗೂ ಸಾಮಾಜಿಕ ಮಾಧ್ಯಮದಲ್ಲಿದ್ದ ಕೆಲವು ಸ್ನೇಹಿತರು ಪೊಲೀಸರಿಗೆ ದೂರು ನೀಡಿದ್ದರು. ದೂರಿನಡಿ ಆತನನ್ನು ಬಂಧಿಸಲಾಗಿದೆ. ಆರೋಪಿ ಯಾವ ಉದ್ದೇಶಕ್ಕೆ ಈ ರೀತಿ ವರ್ತಿಸಿದ್ದಾನೆ ಎಂದು ಇನ್ನೂ ತಿಳಿದು ಬಂದಿಲ್ಲ.

    ಆಪರೇಷನ್ ಸಿಂದೂರ್ ಸಮಯದಲ್ಲಿ ಸಹ ಪಶ್ಚಿಮ ಬಂಗಾಳದ ಕೆಲವು ಜನರು ಭಾರತೀಯ ಸೇನೆಯ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ್ದರು. ಈ ಬಗ್ಗೆ ಪೊಲೀಸರು ತಕ್ಷಣವೇ ಅವರ ವಿರುದ್ಧ ಕ್ರಮ ಕೈಗೊಂಡಿದ್ದರು. ಇದನ್ನೂ ಓದಿ: Vijay Rally Stampede | ಸಾವಿನ ಸಂಖ್ಯೆ 39ಕ್ಕೆ ಏರಿಕೆ – 48 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

  • ಇನ್ಸ್ಟಾದಲ್ಲಿ ಬೆಂಗಳೂರಿಗರ ಬಗ್ಗೆ ನಾಲಗೆ ಹರಿಬಿಟ್ಟ ಒಡಿಶಾ ಯುವತಿ

    ಇನ್ಸ್ಟಾದಲ್ಲಿ ಬೆಂಗಳೂರಿಗರ ಬಗ್ಗೆ ನಾಲಗೆ ಹರಿಬಿಟ್ಟ ಒಡಿಶಾ ಯುವತಿ

    ಬೆಂಗಳೂರು: ಬೆಂಗಳೂರಿಗರ ಬಗ್ಗೆ ಅನ್ಯರಾಜ್ಯದ ಯುವತಿ ನಾಲಗೆ ಹರಿಬಿಟ್ಟಿದ್ದು, ಬೆಂಗಳೂರಿಗರಿಗೆ ತಲೆಯಲ್ಲಿ ಬುದ್ಧಿ ಇಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ವಿಡಿಯೋ ಪೋಸ್ಟ್ ಮಾಡಿದ್ದಾಳೆ.

    ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್ ಆಗಿರುವ ನೇಹಾ ಬಿಸ್ವಾಲ್ ಎಂಬ ಒಡಿಶಾ  (Odisha) ಮೂಲದ ಯುವತಿ, ಬೆಂಗಳೂರಿನಲ್ಲಿ ಕೆಲಸ ಮಾಡ್ತಿದ್ದಾಳೆ. ರಸ್ತೆಯಲ್ಲಿ ನಡೆದುಕೊಂಡು ಆಫೀಸ್‌ಗೆ ಹೋಗುವಾಗ, ಯಾರೋ ಒಬ್ಬ ಕಾರು ಚಾಲಕ ವೇಗವಾಗಿ ಹೋದ ಪರಿಣಾಮ ರಸ್ತೆಯಲ್ಲಿದ್ದ ನೀರು ಯುವತಿಯ ಮೇಲೆ ಎರಚಿತ್ತು. ಇದನ್ನೂ ಓದಿ: Mysuru | ಸಿಡಿಮದ್ದು ಸ್ಫೋಟ – ಮಹಿಳೆಗೆ ಗಾಯ

    ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗದೇ ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ಯುವತಿಯು, ನೀರು ಎರಚಿರೋದನ್ನ ರೀಲ್ ಮಾಡಿ ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾಳೆ. ಇದನ್ನೂ ಓದಿ: ಕಾಂಬೋಡಿಯಾ-ಥೈಲ್ಯಾಂಡ್‌ ಘರ್ಷಣೆ – ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯ ಪ್ರಜೆಗಳಿಗೆ ಸಲಹೆ

    ಈ ರೀಲ್ಸ್‌ನಲ್ಲಿ ಬೆಂಗಳೂರಿನಲ್ಲಿ ಇರುವ ಜನರಿಗೆ ಶಿಕ್ಷಣ ಇದೆ. ಆದ್ರೆ ಅರ್ಥ ಮಾಡಿಕೊಳ್ಳುವ ಬುದ್ಧಿ ಇಲ್ಲ. ಇಷ್ಟು ಚೂ* ಜನ ಇದ್ದಾರೆ. ಇಷ್ಟು ಮಳೆ ಬರುತ್ತಿರುವಾಗ ವಾಹನಗಳನ್ನು ವೇಗವಾಗಿ ಚಲಾಯಿಸುತ್ತಾರೆ. ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ವೇಗವಾಗಿ ಕಾರು ಚಾಲನೆ ಮಾಡಿದ್ದರಿಂದ ರಸ್ತೆಯಲ್ಲಿದ್ದ ನೀರು ನನ್ನ ಬಾಯಿಗೆ ಹೋಯಿತು. ಆ ಚ್ಯೂ*ನ ನೋಡಿ, ಈ ಕಾರನ್ನು ನೋಡಿ. ನೀರು ಹೇಗೆ ನನ್ನ ಮೇಲೆ ಬಿದ್ದಿದೆ ನೋಡಿ. ನನಗೆ ಅಳು, ಸಿಟ್ಟು ಎರಡೂ ಬರುತ್ತಿದೆ. ಥೂ.. ಇಷ್ಟು ಅನಕ್ಷರಸ್ಥರು ಇದ್ದಾರೆ. ನಿಮ್ಮಿಂದ ನಾವು ರಸ್ತೆಯಲ್ಲಿ ನಡೆದಾಡಬಾರದಾ? ಛೀ.. ಎಂದು ರೀಲ್ಸ್‌ನಲ್ಲಿ ಬೆಂಗಳೂರಿಗರಿಗೆ ಬೈದು ಅವಮಾನ ಮಾಡಿದ್ದಾಳೆ. ಇದನ್ನೂ ಓದಿ: Rajasthan | ಶಾಲಾ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಸಾವು – ಐವರು ಶಿಕ್ಷಕರ ಅಮಾನತು

    ಬೆಂಗಳೂರಲ್ಲಿರೋರು ಅನಕ್ಷರಸ್ಥರೆಂದು ಯುವತಿ ಆರೋಪಿಸಿದ್ದು, ಆಕೆಯ ಮಾತಿಗೆ ಕನ್ನಡಿಗರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

  • ಬಿಲ್ಡರ್ ಮೇಲೆ ಟ್ರ್ಯಾಪ್‌ – ಕೋಟಿ ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದ `ಹನಿ’ ಲೇಡಿ ಅರೆಸ್ಟ್

    ಬಿಲ್ಡರ್ ಮೇಲೆ ಟ್ರ್ಯಾಪ್‌ – ಕೋಟಿ ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದ `ಹನಿ’ ಲೇಡಿ ಅರೆಸ್ಟ್

    – 13 ಲಕ್ಷ ಫಾಲೋವರ್ಸ್ ಹೊಂದಿದ್ದ ಕೀರ್ತಿ

    ಗಾಂಧೀನಗರ: ಬಿಲ್ಡರ್‌ನ್ನು ಹನಿಟ್ರ್ಯಾಪ್‌ (Honeytrap) ಬಲೆಗೆ ಬೀಳಿಸಿ, ಬ್ಲ್ಯಾಕ್‌ಮೇಲ್ ಮಾಡಿ ಕೋಟ್ಯಂತರ ರೂ.ಗೆ ಬೇಡಿಕೆಯಿಟ್ಟಿದ್ದ ಸೋಷಿಯಲ್ ಮೀಡಿಯಾ ತಾರೆಯೊಬ್ಬಳನ್ನ ಸೂರತ್ ಪೊಲೀಸರು ಅಹಮದಾಬಾದ್‌ನಲ್ಲಿ (Ahmedabad) ಬಂಧಿಸಿದ್ದಾರೆ.

    ಸೋಷಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್ ಕೀರ್ತಿ ಪಟೇಲ್ ಬಂಧಿತ ಆರೋಪಿ. ಇನ್‌ಸ್ಟಾಗ್ರಾಮ್‌ನಲ್ಲಿ 13 ಲಕ್ಷ ಫಾಲೋವರ್ಸ್ ಹೊಂದಿರುವ ಈಕೆಯ ವಿರುದ್ಧ ಕಳೆದ ವರ್ಷ ಜೂ.02ರಂದೇ ಪ್ರಕರಣ ದಾಖಲಾಗಿತ್ತು.ಇದನ್ನೂ ಓದಿ: ಹನಿಮೂನ್ ಹಂತಕಿಯ ಮತ್ತೊಂದು ರಹಸ್ಯ ಬಯಲು – 3 ವಾರಗಳಲ್ಲಿ ಆ ಸಂಖ್ಯೆಗೆ 234 ಬಾರಿ ಫೋನ್‌ ಕಾಲ್‌ ಮಾಡಿದ್ದ ಸೋನಂ

    ಪ್ರಾಥಮಿಕ ಮಾಹಿತಿ ಪ್ರಕಾರ, ಸೂರತ್‌ನಲ್ಲಿ ಓರ್ವ ಬಿಲ್ಡರ್‌ನ್ನು ಹನಿಟ್ರ್ಯಾಪ್‌ ಬಲೆಗೆ ಬೀಳಿಸಿಕೊಂಡು, ಬಳಿಕ ಬ್ಲ್ಯಾಕ್‌ಮೇಲ್ ಮಾಡಲು ಪ್ರಾರಂಭಿಸಿದ್ದಳು. ಅದಾದ ನಂತರ ಕೋಟ್ಯಂತರ ರೂ.ಗೆ ಬೇಡಿಕೆ ಇಟ್ಟಿದ್ದಳು. ಈ ಕುರಿತು ಪ್ರಕರಣ ದಾಖಲಾದ ಬೆನ್ನಲ್ಲೇ ಆರೋಪಿ ಕೀರ್ತಿ ತಲೆಮರೆಸಿಕೊಂಡಿದ್ದಳು. ಎಫ್‌ಐಆರ್‌ನಲ್ಲಿ ಎ1 ಆರೋಪಿಯ ಹೊರತಾಗಿ ಇನ್ನೂ ನಾಲ್ವರ ಹೆಸರನ್ನು ಉಲ್ಲೇಖಿಸಲಾಗಿತ್ತು. ಆ ನಾಲ್ವರನ್ನು ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ ಬಂಧಿಸಲಾಗಿತ್ತು. ಇದಲ್ಲದೇ ಸುಲಿಗೆ ಹಾಗೂ ಭೂಕಬಳಿಕೆ ಆರೋಪಗಳು ಆಕೆಯ ಮೇಲಿದೆ ಎಂದು ತನಿಖೆ ವೇಳೆ ತಿಳಿದುಬಂದಿದೆ.

    ಈ ಕುರಿತು ಉಪಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಮಾತನಾಡಿ, ಪ್ರಕರಣ ದಾಖಲಾದ ಸ್ವಲ್ಪ ಸಮಯದ ನಂತರ ಸೂರತ್ ನ್ಯಾಯಾಲಯ ಆರೋಪಿಯ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ಕೀರ್ತಿ ಪಟೇಲ್‌ನ್ನು ಪತ್ತೆಹಚ್ಚಲು ಕಳೆದ 10 ತಿಂಗಳಿನಿಂದ ಪ್ರಯತ್ನಿಸುತ್ತಿದ್ದೆವು. ಆರೋಪಿ ಪೊಲೀಸರಿಗೆ ದಾರಿ ತಪ್ಪಿಸುವ ಉದ್ದೇಶದೊಂದಿಗೆ ದಿನೇ ದಿನೇ ಊರು ಬದಲಾಯಿಸುವುದು, ಸಿಮ್ ಕಾರ್ಡ್ ಬದಲಾಯಿಸುವುದನ್ನು ಮಾಡುತ್ತಿದ್ದಳು. ನಮ್ಮ ತಾಂತ್ರಿಕ ತಂಡ, ಸೈಬರ್ ತಜ್ಞರು ಹಾಗೂ ಬೇರೆ ಬೇರೆ ಪೊಲೀಸ್ ಠಾಣೆಯೊಂದಿಗೆ ಸಂಪರ್ಕದಲ್ಲಿದ್ದ ನಾವು ಕೊನೆಗೆ ಇನ್‌ಸ್ಟಾಗ್ರಾಂ ಸಹಾಯದಿಂದ ಆರೋಪಿಯನ್ನು ಅಹಮದಾಬಾದ್‌ನ ಸರ್ಖೇಜ್ ಪ್ರದೇಶದಲ್ಲಿ ಪತ್ತೆಹಚ್ಚಿದ್ದೇವೆ ಎಂದು ತಿಳಿಸಿದ್ದಾರೆ.

    ಸದ್ಯ ಆರೋಪಿಯ ಹೇಳಿಕೆಗಳನ್ನು ದಾಖಲಿಸಿ, ತನಿಖೆ ಮುಂದುವರಿಸಿದ್ದೇವೆ. ಜೊತೆಗೆ ಸಾರ್ವಜನಿಕರು ಸುಲಿಗೆಯಂತಹ ಯಾವುದೇ ತೊಂದರೆಯಲ್ಲಿ ಸಿಲುಕಿಕೊಂಡಿದ್ದರೂ ಪೊಲೀಸ್ ಠಾಣೆಗೆ ಹಾಗೂ ಎಸಿಪಿ, ಡಿಸಿಪಿ ಕಚೇರಿಗೆ ದೂರು ಸಲ್ಲಿಸಿ ಎಂದು ಹೇಳಿದ್ದಾರೆ.ಇದನ್ನೂ ಓದಿ: Israel-Iran Conflict – ಇರಾನ್‍ನಿಂದ ದೆಹಲಿ ತಲುಪಿದ 110 ಭಾರತೀಯರು

  • ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

    ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

    ಚಂಡೀಗಢ: ಸೋಷಿಯಲ್ ಮೀಡಿಯಾ ಸ್ಟಾರ್ (Social Media Influencer) ಒಬ್ಬರು ತಮ್ಮದೇ ಕಾರಿನೊಳಗೆ ಶವವಾಗಿ ಪತ್ತೆಯಾದ ಘಟನೆ ಪಂಜಾಬ್‌ನ (Punjab) ಆಸ್ಪತ್ರೆಯೊಂದರ ಪಾರ್ಕಿಂಗ್ ಏರಿಯಾದಲ್ಲಿ ನಡೆದಿದೆ.

    ಕಮಲ್ ಕೌರ್ (ಕಾಂಚನ್ ತಿವಾರಿ) ನಿಗೂಢವಾಗಿ ಸಾವನ್ನಪ್ಪಿದ ಸೋಷಿಯಲ್ ಮೀಡಿಯಾ ಸ್ಟಾರ್. ಕಮಲ್ ಕೌರ್ ತಮ್ಮ ಹೆಸರಿನಲ್ಲಿ ನೋಂದಣಿಯಾಗಿರುವ ಕಾರಿನ ಹಿಂಬದಿ ಸೀಟಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ‘ಕಮಲ್ ಕೌರ್ ಭಾಬಿ’ ಎಂಬ ಹೆಸರಿನಿಂದ ಫೇಮಸ್ ಆಗಿದ್ದ ಕಮಲ್, ಇನ್ಸ್ಟಾಗ್ರಾಂನಲ್ಲಿ 3.83 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದರು. ಅಲ್ಲದೇ ಅಶ್ಲೀಲ ಭಾಷೆಯನ್ನು ಬಳಸಿ ವೀಡಿಯೊಗಳನ್ನು ಪೋಸ್ಟ್ ಮಾಡುವುದಕ್ಕೆ ಹೆಸರುವಾಸಿಯಾಗಿದ್ದು, ಹಲವು ವಿವಾದಕ್ಕೀಡಾಗಿದ್ದರು. ನಿಲ್ಲಿಸಿದ್ದ ಕಾರಿನಿಂದ ಕೆಟ್ಟ ವಾಸನೆ ಬರುತ್ತಿರುವುದರ ಕುರಿತು ಪೊಲೀಸರಿಗೆ ಮಾಹಿತಿ ದೊರೆತ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

    ಘಟನೆಯ ಕುರಿತು ಪ್ರತಿಕ್ರಿಯಿಸಿದ ಲುಧಿಯಾನ ಪೊಲೀಸ್ ವರಿಷ್ಠಾಧಿಕಾರಿ ನರೇಂದ್ರ ಸಿಂಗ್, ಬುಧವಾರ ರಾತ್ರಿ ಭಟಿಂಡಾದ (Bathinda) ಪಾರ್ಕಿಂಗ್ ಸ್ಥಳದಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮಹಿಳೆಯನ್ನು ಕಮಲ್ ಕೌರ್ ಎಂದು ಗುರುತಿಸಲಾಗಿದೆ. ಅವರ ನಿಜವಾದ ಹೆಸರು ಕಾಂಚನ್ ಕೌರ್, ಲುಧಿಯಾನ ನಿವಾಸಿ. ಕಮಲ್ ಕೌರ್ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಭಾಷೆಯನ್ನು ಬಳಸಿ ವೀಡಿಯೊಗಳನ್ನು ಪೋಸ್ಟ್ ಮಾಡುವುದಕ್ಕೆ ಹೆಸರುವಾಸಿಯಾಗಿದ್ದರು. ಘಟನೆ ಸಂಬಂಧ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು

    ಕಮಲ್ ಕೌರ್ ಅವರನ್ನು ಕೊಲೆ ಮಾಡಿ ನಂತರ ಆಕೆಯ ದೇಹವನ್ನು ಕಾರಿನ ಹಿಂದಿನ ಸೀಟಿನಲ್ಲಿ ಎಸೆಯಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಮೃತದೇಹ ಕೊಳೆತ ಕಾರಣ ಗಾಯದ ಗುರುತುಗಳನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಹೀದ್ ಭಾಯ್ ಮಣಿ ಸಿಂಗ್ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

  • ಜಮ್ಮು-ಕಾಶ್ಮೀರದ ಸೋಷಿಯಲ್‌ ಮೀಡಿಯಾ ಸ್ಟಾರ್‌ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

    ಜಮ್ಮು-ಕಾಶ್ಮೀರದ ಸೋಷಿಯಲ್‌ ಮೀಡಿಯಾ ಸ್ಟಾರ್‌ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮೂಲದ ಸೋಷಿಯಲ್‌ ಮೀಡಿಯಾ ಸ್ಟಾರ್‌ (Social Media Star) ಹಾಗೂ ರೇಡಿಯೋ ಜಾಕಿ ಸಿಮ್ರಾನ್‌ ಸಿಂಗ್‌ (25) ಗುರುಗ್ರಾಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಿದ್ದಾರೆ.

    ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಸುಮಾರು 7 ಲಕ್ಷ ಅಭಿಮಾನಿಗಳನ್ನು ಒಳಗೊಂಡಿದ್ದ ಸಿಮ್ರಾನ್‌, ಇದೇ ತಿಂಗಳ ಡಿಸೆಂಬರ್‌ 13ರಂದು ಕೊನೆಯದ್ದಾಗಿ ರೀಲ್ಸ್‌ವೊಂದನ್ನ ಪೋಸ್ಟ್‌ ಮಾಡಿದ್ದರು. ಬಳಿಕ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಚಾಕು ಇರಿದು ಗೆಳತಿಯ ಹತ್ಯೆ – ಕೊಲೆ ಬಳಿಕ ತಾನು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪಾಗಲ್‌ ಪ್ರೇಮಿ

    ಮಾಹಿತಿ ಪ್ರಕಾರ, ಸಿಮ್ರಾನ್‌ ಗುರುಗ್ರಾಮ್‌ ಸೆಕ್ಟರ್‌-47ರಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿರುವುದಾಗಿ ಆಕೆಯ ಸ್ನೇಹಿತನೊಬ್ಬ ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಪ್ರಕರಣ ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ಬಳಿಕ ಆಕೆಯ ಮೃತದೇಹವನ್ನ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಇನ್ಮುಂದೆ 5, 8ನೇ ತರಗತಿ ವಿದ್ಯಾರ್ಥಿಗಳು ಫೇಲ್‌ ಆಗ್ತಾರಾ?; ಏನಿದು ‘ನೋ-ಡಿಟೆನ್ಷನ್‌ ಪಾಲಿಸಿ’?

    ಜಮ್ಮು ಪ್ರದೇಶದ ನಿವಾಸಿಯಾಗಿರುವ ಆಕೆಯನ್ನ ಅವರ ಅಭಿಮಾನಿಗಳು ʻಜಮ್ಮು ಕಿ ಧಡ್ಕನ್ (ಜಮ್ಮುವಿನ ಹೃದಯ ಬಡಿತ)ʼ ಎಂದು ಕರೆಯುತ್ತಿದ್ದರು. ಇದನ್ನೂ ಓದಿ: ಅತ್ಯಾಚಾರಕ್ಕೆ ವಿರೋಧಿಸಿದ ಬಾಲಕಿಯ ತಲೆಗೆ ಕಲ್ಲಿನಿಂದ ಹೊಡೆದು ಹತ್ಯೆ – ಕಾಮುಕನಿಗೆ ಗುಂಡೇಟು ನೀಡಿ ಬಂಧಿಸಿದ ಪೊಲೀಸರು