Tag: Social Media Post

  • ಬಳ್ಳಾರಿಯಲ್ಲಿ ಮೂಢನಂಬಿಕೆ ಇನ್ನೂ ಜೀವಂತ – ಸತ್ತ ಬಾಲಕನನ್ನು ಬದುಕಿಸಲು 8 ಗಂಟೆ ಉಪ್ಪಿನಲ್ಲಿಟ್ಟ ಗ್ರಾಮಸ್ಥರು

    ಬಳ್ಳಾರಿಯಲ್ಲಿ ಮೂಢನಂಬಿಕೆ ಇನ್ನೂ ಜೀವಂತ – ಸತ್ತ ಬಾಲಕನನ್ನು ಬದುಕಿಸಲು 8 ಗಂಟೆ ಉಪ್ಪಿನಲ್ಲಿಟ್ಟ ಗ್ರಾಮಸ್ಥರು

    ಬಳ್ಳಾರಿ: ಇಂದಿನ ಕಾಲದಲ್ಲಿ ಸಾಮಾಜಿಕ ಜಾಲತಾಣಗಳು ಜನರ ಬದುಕಿನ ಮೇಲೆ ಸಾಕಷ್ಟು ಪ್ರಭಾವ ಬೀರುತ್ತಿವೆ. ಕೆಲ ಸುಳ್ಳು ಸುದ್ದಿಗಳಂತೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಅದೆಷ್ಟೋ ಜನರ ಬದುಕನ್ನು ಬಲಿ ಪಡೆದಿವೆ. ಆದರೆ ಸತ್ತವವನ್ನು ಬದುಕಿಸಲು ಜನ ವಿಲಕ್ಷಣ ಪ್ರಯೋಗ ಮಾಡಿದ ಘಟನೆ ಗಣಿನಾಡು ಬಳ್ಳಾರಿಯಲ್ಲಿ ನಡೆದಿದೆ.

    ಆಧುನೀಕರಣ ಎನ್ನುವುದು ಎಷ್ಟು ಮುಂದುವರೆದಿದ್ದರೂ ಮೌಢ್ಯತೆ, ಮೂಢನಂಬಿಕೆ ಎನ್ನುವುದು ಇನ್ನೂ ಜೀವಂತವಾಗಿಯೇ ಇದೆ. ಇದಕ್ಕೆ ಬಳ್ಳಾರಿ ಜಿಲ್ಲೆಯ ಈ ಘಟನೆಯೇ ಸಾಕ್ಷಿಯಾಗಿದೆ. ಹೌದು, ಬಳ್ಳಾರಿಯ ಸಿರವಾರ ಗ್ರಾಮದ ಶೇಖರ್ ಹಾಗೂ ಗಂಗಮ್ಮಾ ಅವರ ಕಿರಿಯ ಮಗ ಭಾಸ್ಕರ್ ನೀರಿನ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದನು. ಇದನ್ನು ನೋಡಿದ ಕೆಲ ಗ್ರಾಮಸ್ಥರು ನೀರಿನಲ್ಲಿ ಮುಳುಗಿ ಸತ್ತವರನ್ನು 2 ಗಂಟೆಗಳ ಒಳಗೆ ಉಪ್ಪಿನಲ್ಲಿ ಹುದುಗಿಸಿಟ್ಟರೆ, ಅವರು ಮತ್ತೆ ಬದುಕುತ್ತಾರೆ ಎಂಬ ಪೋಸ್ಟ್ ನಂಬಿ ಅದೇ ರೀತಿ ಮಾಡಿದ್ದಾರೆ. ಇದನ್ನೂ ಓದಿ: ನೆಲಮಂಗಲದಲ್ಲಿ ಹೆದ್ದಾರಿಗೆ ನುಗ್ಗಿದ ನೀರು – ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್

    ಆ ಒಂದು ಪೋಸ್ಟ್ ನಂಬಿ ಜನರು ಮಗುವಿನ ಶವವನ್ನು ಸತತ ಎಂಟು ಗಂಟೆಗಳ ಕಾಲ ಉಪ್ಪಿನಲ್ಲಿಟ್ಟು ಮತ್ತೆ ಬದುಕುತ್ತಾನೆ ಎಂದು ಕಾದು ಕುಳಿತಿದ್ದರು. ಆದರೆ 8 ಗಂಟೆ ಬಳಿಕವೂ ಬಾಲಕ ಭಾಸ್ಕರ್ ಬದುಕದಿದ್ದಾಗ ಒಂದು ನಿರ್ಧಾರಕ್ಕೆ ಬಂದ ಗ್ರಾಮಸ್ಥರು ಶವ ಸಂಸ್ಕಾರಕ್ಕೆ ಮುಂದಾದರು. ಇದನ್ನೂ ಓದಿ: ಜಮೀರ್ `ಗಣೇಶ’ ಅಸ್ತ್ರ – ಇಷ್ಟು ದಿನ ಇಲ್ಲದ್ದು ಈಗ್ಯಾಕೆ? ಶಾಸಕರ ನಡೆಗೆ ಸ್ಥಳೀಯರಿಂದ ಆಕ್ರೋಶ

    ಒಟ್ಟಾರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಪೋಸ್ಟ್ ನಂಬಿದ ಗ್ರಾಮಸ್ಥರು ವಿಲಕ್ಷಣ ಪ್ರಯೋಗಕ್ಕೆ ಮುಂದಾಗಿದ್ದರು. ಅದೆಷ್ಟು ಮುಂದುವರೆದಿದ್ದರೂ ಕೆಲವೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ಬರುವ ಅಸಂಬದ್ಧ ಪೋಸ್ಟ್‌ಗಳನ್ನು ನಂಬುವುದು ನಿಜಕ್ಕೂ ಆಶ್ಚರ್ಯ ಅನಿಸುತ್ತದೆ. ವೈರಲ್ ಪೋಸ್ಟ್‌ಗಳನ್ನು ನಂಬುವ ಜನ ಇನ್ನಾದರೂ ಎಚ್ಚೆತ್ತುಕೊಳ್ಳಬೇಕಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನಟಿ ಕಂಗನಾ ರಣಾವತ್‌ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಸೆನ್ಸಾರ್‌ಗೆ ಸುಪ್ರೀಂ ನಕಾರ

    ನಟಿ ಕಂಗನಾ ರಣಾವತ್‌ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಸೆನ್ಸಾರ್‌ಗೆ ಸುಪ್ರೀಂ ನಕಾರ

    ನವದೆಹಲಿ: ವಿವಾದಿತ ಹೇಳಿಕೆಗಳ ಮೂಲಕ ಸದಾ ಸುದ್ದಿಯಾಗುವ ಬಾಲಿವುಡ್‌ ನಟಿ ಕಂಗನಾ ರಣಾವತ್‌ ಅವರ ಸೋಷಿಯಲ್‌ ಮೀಡಿಯಾ ಪೋಸ್ಟ್‌ಗಳನ್ನು ಸೆನ್ಸಾರ್‌ ಮಾಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

    ಕಂಗನಾ ವಿವಾದಿತ ಹೇಳಿಕೆಗಳ ಪೋಸ್ಟ್‌ಗಳು ಹಾಗೂ ಅವರ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ಆಧರಿಸಿ ಕ್ರಮಕೈಗೊಳ್ಳುವಂತೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಮತ್ತು ಬೇಲಾ ತ್ರಿವೇದಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಇದನ್ನೂ ಓದಿ: ತಂದೆ-ತಾಯಿಯಾದ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್!

    ಸಿಖ್‌ ರೈತರನ್ನು ಖಲಿಸ್ತಾನ ಉಗ್ರರಿಗೆ ಹೋಲಿಸಿ ಕಾಮೆಂಟ್‌ ಮಾಡಿದ್ದಾರೆ. ಇಂತಹ ಅನೇಕ ವಿವಾದಿತ ಹೇಳಿಕೆಗಳನ್ನು ಅವರು ನೀಡಿದ್ದಾರೆ. ಈ ರೀತಿಯ ಹೇಳಿಕೆಗಳು ಜನಾಂಗೀಯ ತಾರತಮ್ಯ, ಗಲಭೆಗಳಿಗೆ ಕಾರಣವಾಗಬಹುದು. ಇವರ ಹೇಳಿಕೆಗಳು ಅಪರಾಧದ ಅಂಶಗಳನ್ನು ಒಳಗೊಂಡಿವೆ ಎಂದು ಅರ್ಜಿದಾರರು ದೂರಿದ್ದರು.

    ರಣಾವತ್‌ ಅವರ ಪೋಸ್ಟ್‌ಗಳನ್ನು ಓದದಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಿದೆ. ಅವರ ಹೇಳಿಕೆಗಳನ್ನು ನೀವು ಹೆಚ್ಚು ಪ್ರಚಾರ ಮಾಡಿ ಅವರ ಉದ್ದೇಶಗಳಿಗೆ ಸೇವೆ ಸಲ್ಲಿಸುತ್ತಿದ್ದೀರಿ. ಆ ಮೂಲಕ ನಿಮ್ಮ ಸ್ವಂತ ಅಭಿಪ್ರಾಯಗಳಿಗೆ ಅಪಚಾರ ಮಾಡುತ್ತಿದ್ದೀರಿ ಎಂದು ನ್ಯಾಯಮೂರ್ತಿ ಚಂದ್ರಚೂಡ್‌ ತಿಳಿಸಿದ್ದಾರೆ. ಇದನ್ನೂ ಓದಿ: ಐಪಿಎಲ್‌ನಲ್ಲೇ ದುಬಾರಿ ಆಟಗಾರನಾಗಿ ಹೊರಹೊಮ್ಮಿದ ರಾಹುಲ್‌ಗೆ ಕ್ಯಾಪ್ಟನ್‌ ಪಟ್ಟ ಕಟ್ಟಿದ ಲಕ್ನೋ

    ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ, ಖಲಿಸ್ತಾನ ಉಗ್ರರು ಎಂದು ಕಂಗನಾ ಕಾಮೆಂಟ್‌ ಮಾಡಿದ್ದರು. ಈ ವೇಳೆ ಕೇಂದ್ರ ಸರ್ಕಾರದ ಪರವಾಗಿ ಮಾತನಾಡಿದ್ದರು. ಅಷ್ಟೆ ಅಲ್ಲದೇ ತಮ್ಮ ಅನೇಕ ಹೇಳಿಕೆಗಳ ಮೂಲಕ ವಿವಾದಕ್ಕೆ ಕಾರಣವಾಗಿದ್ದರು.

  • ರಾವತ್, ಸೇನಾಧಿಕಾರಿಗಳ ಮರಣ ಸಂಭ್ರಮಿಸಿದ ಕಿಡಿಗೇಡಿಗಳ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ

    ರಾವತ್, ಸೇನಾಧಿಕಾರಿಗಳ ಮರಣ ಸಂಭ್ರಮಿಸಿದ ಕಿಡಿಗೇಡಿಗಳ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ

    ಮಡಿಕೇರಿ: ಹೊರಗಿನ ಶತ್ರುಗಳನ್ನು ಎದುರಿಸಬಹುದು ಆದರೆ ಒಳಗಿನ ಶತ್ರುಗಳಿಂದಲೇ ಅಪಾಯ ಜಾಸ್ತಿ ಇದೆ ಎಂದು ಕೊಡಗು ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

    ಡಿಸೆಂಬರ್ 8 ರಂದು ಹೆಲಿಕಾಪ್ಟರ್ ದುರಂತದಲ್ಲಿ ರಕ್ಷಣಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಅಗಲಿಕೆಯಿಂದ ಇಡೀ ದೇಶವೇ ಶೋಕತಪ್ತವಾಗಿದೆ. ಗುರುವಾರ ತಮಿಳುನಾಡಿನಲ್ಲಿ ಹುತಾತ್ಮರ ಮೃತದೇಹ ಮೆರವಣಿಗೆ ಹೋಗುವ ವೇಳೆ ಅಲ್ಲಿನ ಜನರು ಪುಷ್ಪ ನಮನ ಸಲ್ಲಿಸಿ, ಜೈಕಾರ ಕೂಗಿ ತಮ್ಮ ನೋವು ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕೆಲ ವಿಕೃತ ಮನಸ್ಸಿನ ವ್ಯಕ್ತಿಗಳು ಅವರ ಸಾವನ್ನು ಸಂಭ್ರಮಾಚರಣೆ ನಡೆಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಕೊಂಡಿದ್ದರು. ಇಂತಹ ವಿಕೃತ ಮನಸ್ಸಿನವರನ್ನು ಮಟ್ಟ ಹಾಕಬೇಕು ಎಂದು ಪ್ರತಾಪ್ ಸಿಂಹ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸೈನಿಕರ ತವರು ಜಿಲ್ಲೆ ಕೊಡಗಿಗೆ ಅಮೋಘ ಕೊಡುಗೆ ನೀಡಿದ್ದರು ಬಿಪಿನ್ ರಾವತ್

    ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಹೊರಗಿನ ಶತ್ರುಗಳನ್ನು ಎದುರಿಸಬಹುದು. ಆದರೆ ಒಳಗಿನ ಶತ್ರುಗಳಿಂದಲೇ ಅಪಾಯ ಜಾಸ್ತಿ. ಪಾಕಿಸ್ತಾನ ಅಥವಾ ಹೊರಗಿನ ಶತ್ರುಗಳು ಯಾರೆಂದು ನಮಗೆ ಗೊತ್ತಾಗುತ್ತದೆ. ಆದರೆ ಒಳಗಿನ ಶತ್ರುಗಳನ್ನು ಗುರುತಿಸುವುದು ಹೇಗೆ? ಇಂತಹ ವಿಕೃತರನ್ನು ಹುಡುಕಿ ಶಿಕ್ಷಿಸಬೇಕೆಂದು ನಾನು ಸಿಎಂ ಬೊಮ್ಮಾಯಿ ಅವರಲ್ಲಿ ಮನವಿ ಮಾಡುತ್ತೇನೆ. ಅಂತಹ ವಿಕೃತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈಗಾಗಲೇ ಉತ್ತರ ಪ್ರದೇಶ ಸಿಎಂ ಅಂತಹ ಕ್ರಮಕ್ಕೆ ಮುಂದಾಗಿದ್ದಾರೆ. ನಮ್ಮಲ್ಲಿ ವಿಕೃತ ಮನಸ್ಸಿನವರ ಮೇಲೆ ಕಾನೂನು ರೀತಿಯ ಕ್ರಮಗೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ:  ಜನರಲ್ ರಾವತ್‍ರ ಮರಣವನ್ನು ಸಂಭ್ರಮಿಸಿದ ಕಿಡಿಗೇಡಿ ಅರೆಸ್ಟ್

  • ಕೊರೊನಾ ಬಂದ್ಮೇಲೆ ಶಾಸಕರು, ಸಂಸದರು ಕಾಣೆ: ಪೋಸ್ಟ್ ಹರಿಬಿಟ್ಟ ಯುವಕನ ಬಂಧನ

    ಕೊರೊನಾ ಬಂದ್ಮೇಲೆ ಶಾಸಕರು, ಸಂಸದರು ಕಾಣೆ: ಪೋಸ್ಟ್ ಹರಿಬಿಟ್ಟ ಯುವಕನ ಬಂಧನ

    ರಾಯಚೂರು: ಕೊರೊನಾ ಬಂದ್ಮೇಲೆ ಶಾಸಕರು, ಸಂಸದರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟಿದ್ದ ಯುವಕನನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.

    ಕೊರೊನಾ ವೈರಸ್ ಸಂಕಷ್ಟ ಬಂದಾಗಿನಿಂದ ಶಾಸಕರು, ಸಂಸದರು ಕಾಣೆಯಾಗಿದ್ದಾರೆ. ನಿಮಗೆ ಎಲ್ಲಾದರೂ ಕಾಣಿಸಿದರೆ ದಯವಿಟ್ಟು ಕ್ಷೇತ್ರಕ್ಕೆ ಕಳುಹಿಸಿ ಎನ್ನುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಹರಿದಾಡುತ್ತಿವೆ. ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ಫೋಟೋ ಹಾಕಿ ಹರಿಬಿಟ್ಟ ಪೋಸ್ಟ್ ಹಿನ್ನೆಲೆ ತನಿಖೆ ನಡೆಸಿದ ಪೊಲೀಸರ ಕೈಗೆ ಓರ್ವ ಯುವಕ ಸಿಕ್ಕಿಬಿದ್ದಿದ್ದಾನೆ.

    ರಾಯಚೂರು ತಾಲೂಕಿನ ಸಿಂಗನೋಡಿ ಗ್ರಾಮದ ತಿಮ್ಮಪ್ಪ ಬಂಧಿತ ಆರೋಪಿ. ಯುವಕನನ್ನ ಠಾಣೆಗೆ ಕರೆದೊಯ್ದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬಿಜೆಪಿ ಸಂಸದರ ಫೋಟೋಗಳ ಪೋಸ್ಟ್ ಅನ್ನು ಎಡಿಟ್ ಮಾಡಿ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ ಫೋಟೋ ಹಾಕಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟ ಯುವಕನನ್ನ ಬಂಧಿಸಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬುಧವಾರ ಬೆಳಗ್ಗೆಯಿಂದ ಯುವಕನನ್ನ ಠಾಣೆಯಲ್ಲಿ ಕೂಡಿ ಹಾಕಿದ್ದು, ಪ್ರಕರಣವನ್ನೂ ದಾಖಲಿಸುತ್ತಿಲ್ಲ, ಹೊರಗಡೆಯೂ ಬಿಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ.