Tag: Social networking site

  • ಬಾರ್ ಮಾಲೀಕರಿಂದ ದುಪ್ಪಟ್ಟು ಹಣ ವಸೂಲಿ – ವೀಡಿಯೋ ವೈರಲ್

    ಬಾರ್ ಮಾಲೀಕರಿಂದ ದುಪ್ಪಟ್ಟು ಹಣ ವಸೂಲಿ – ವೀಡಿಯೋ ವೈರಲ್

    ನೆಲಮಂಗಲ: ಮದ್ಯಪ್ರಿರಿಯರಿಗೆ ಬಾರ್ ಮಾಲೀಕರು ಮಹಾ ಮೋಸ ಮಾಡಿ ವಸೂಲಿಗಿಳಿದಿದ್ದಾರೆ ಎಂಬ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಟಾಬಯಲಾಗಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ನಗರದಲ್ಲಿರುವ ಕೆಲವು ಬಾರ್, ವೈನ್ ಹಾಗೂ ಬಾರ್ ಅಂಡ್ ರೆಸ್ಟೋರೆಂಟ್ ಗಳಲ್ಲಿ ಮದ್ಯದ ದರಕ್ಕಿಂತ ಸುಮಾರು 30% ರಿಂದ 40% ಹೆಚ್ಚಿನ ದರಕ್ಕೆ ಮದ್ಯ ಮಾರಾಟ ಮಾಡಿ ಮದ್ಯಪ್ರಿಯರಿಗೆ ಮಹಾ ಮೋಸ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಇಂದಿರಾ ಗಾಂಧಿಯನ್ನು ಏಕವಚನದಲ್ಲಿ ಬೈಯ್ದಿದ್ದಾರೆ – ಸಿದ್ದುಗೆ ಕಟೀಲ್ ಸವಾಲು

    ಹೆಚ್ಚಿನ ದರಕ್ಕೆ ಮದ್ಯಮಾರಾಟದ ಹಿಂದೆ ನೆಲಮಂಗಲ ಅಬಕಾರಿ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಆರೋಪ ಕೂಡ ಇದ್ದು, ಬಾರ್ ಅಂಡ್ ರೆಸ್ಟೊರೆಂಟ್ ಅಲ್ಲಿ ಬಿಲ್ ಕೇಳಿದ್ರೆ ಮದ್ಯನೆ ಕೊಡಲ್ಲ ಎಂಬ ಆರೋಪ ಕೂಡ ಇದೆ. ಅದು ಅಲ್ಲದೇ ಈ ಎಲ್ಲ ಅಕ್ರಮಗಳಿಗೆ ಕಡಿವಾಣ ಹಾಕುವಂತೆ ಸಾಮಾಜಿಕ ಜಾಲತಾಣದಲ್ಲಿ ಆಗ್ರಹ ಮಾಡಿದ್ದು, ಅಧಿಕಾರಿಗಳ ಜಾಣ ಕುರುಡುತನಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕೂಡಲೇ ಇಂತಹ ಅಕ್ರಮಕ್ಕೆ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

  • ಗೋಮೂತ್ರ ಸೇವಿಸಿದ್ರೆ ಕೊರೊನಾ ಬರಲ್ಲ – ಹರಿದಾಡುತ್ತಿದೆ ಶ್ರೀರಾಮುಲು ಟ್ವೀಟ್ ಫೋಟೋ

    ಗೋಮೂತ್ರ ಸೇವಿಸಿದ್ರೆ ಕೊರೊನಾ ಬರಲ್ಲ – ಹರಿದಾಡುತ್ತಿದೆ ಶ್ರೀರಾಮುಲು ಟ್ವೀಟ್ ಫೋಟೋ

    ಬೆಂಗಳೂರು: ಗೋಮೂತ್ರ ಸೇವಿಸೋದ್ರಿಂದ, ಸಗಣಿಯನ್ನು ದೇಹಕ್ಕೆ ಸವರಿಕೊಂಡರೆ ಕೊರೊನಾ ಬರುವುದಿಲ್ಲ ಎಂದು ಬರೆದಿರುವ ಸಚಿವ ರಾಮುಲು ಖಾತೆ ಟ್ವೀಟ್ ಸ್ಕ್ರೀನ್ ಶಾಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಗಂಜಲ ಕುಡಿಯುವುದಿಂದ ಹಾಗೂ ಸಗಣಿಯನ್ನು ದೇಹಕ್ಕೆ ಸವರಿಕೊಳ್ಳುವುದರಿಂದ ಕೊರೊನಾ ವೈರಸ್ ತಡೆಗಟ್ಟಬಹುದು ಎಂದು ಟ್ವಿಟ್ಟರ್ ನಲ್ಲಿ ಬರೆಯಲಾಗಿದೆ.

    ಎಷ್ಟು ಗಂಟೆಗೆ ಈ ಟ್ವೀಟ್ ಪ್ರಕಟವಾಗಿದೆ ಎನ್ನುವ ವಿವರ ಇದರಲ್ಲಿ ಇಲ್ಲ. ಒಟ್ಟು 17 ಮಂದಿ ಕಮೆಂಟ್ ಮಾಡಿದ್ದರೆ 48 ಮಂದಿ ರಿಟ್ವೀಟ್ ಮಾಡಿದ್ದಾರೆ. ಈ ವಿಚಾರದ ಬಗ್ಗೆ ಶ್ರೀರಾಮುಲು ತಂಡವನ್ನು ಸಂಪರ್ಕಿಸಿದರೆ ನಾವು ಟ್ವೀಟ್ ಮಾಡಿಲ್ಲ, ಸಚಿವರ ಖಾತೆ ಹ್ಯಾಕ್ ಆಗಿರಬಹುದು ಎಂದು ಪ್ರತಿಕ್ರಿಯಿಸಿದ್ದಾರೆ.

    ಖಾತೆ ಹ್ಯಾಕ್ ಆಗಿದೆಯೋ ಅಥವಾ ಅಧಿಕೃತ ಖಾತೆಯನ್ನು ಬಳಸಿ ಫೋಟೋ ಎಡಿಟ್ ಮಾಡಿ ಫೋಟೋ ತಯಾರಿಸಿದ್ದಾರೋ ಗೊತ್ತಿಲ್ಲ. ಒಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ಹರಿದಾಡುತ್ತಿದೆ.

  • ಸಂಸದ ಬಸವರಾಜ್ ಜೊತೆಗೆ ಮುದ್ದೆ ಊಟ ಸವಿದ ಪ್ರಜ್ವಲ್ ರೇವಣ್ಣ

    ಸಂಸದ ಬಸವರಾಜ್ ಜೊತೆಗೆ ಮುದ್ದೆ ಊಟ ಸವಿದ ಪ್ರಜ್ವಲ್ ರೇವಣ್ಣ

    ಹಾಸನ: ತುಮಕೂರು ಸಂಸದ ಬಸವರಾಜ್ ಜೊತೆಗೆ ಮುದ್ದೆ ಊಟ ಮಾಡಿದ ಹಾಸನದ ನೂತನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ.

    ಸಂಸದ ಪ್ರಜ್ವಲ್ ರೇವಣ್ಣ, ಬಸವರಾಜ್ ಅವರು ಜೊತೆ ಕುಳಿತು ಊಟ ಮಾಡುತ್ತಿರುವ ಫೋಟೋವನ್ನು ಪ್ರಜ್ವಲ್ ರೇವಣ್ಣ ಅಭಿಮಾನಿಗಳು ಟ್ವಿಟ್ಟರ್ ಮತ್ತು ಫೇಸ್‍ಬುಕ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, “ಡೆಲ್ಲಿ ಅಲ್ಲ ಅಮೆರಿಕಕ್ಕೆ ಹೋದ್ರೂ ನಮಗೆ ರಾಗಿ ಮುದ್ದೆ ಇರ್ಬೇಕ್” ಎಂದು ಬರೆದುಕೊಂಡಿದ್ದರು.

    https://twitter.com/NammaMP_Prajwal/status/1146099514907873280

    ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರೆ ಕೆಲವರು ಮೆಚ್ಚುಗೆ ಸೂಚಿಸಿದ್ದಾರೆ. ದೇವೇಗೌಡರು ತಮ್ಮ ಸ್ವಕ್ಷೇತ್ರ ಹಾಸನವನ್ನು ಮೊಮ್ಮಗನಿಗೆ ಬಿಟ್ಟುಕೊಟ್ಟು ತುಮಕೂರಿನಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಈಗ ದೇವೇಗೌಡರನ್ನು ಸೋಲಿಸಿದ ಬಿಜೆಪಿ ಸಂಸದರ ಜೊತೆ ಊಟಮಾಡಿದ ಪ್ರಜ್ವಲ್ ಅವರನ್ನು ಕೆಲವರು ಟೀಕಿಸಿ ಕಾಮೆಂಟ್ ಮಾಡಿದ್ದಾರೆ.

    ಕೆಲವರು ನೀವು ದೇವೇಗೌಡರ ಮೊಮ್ಮಗನಾಗಿದ್ದರೆ ಬಸವರಾಜು ಅವರ ಜೊತೆ ಕುಳಿತು ಊಟ ಮಾಡುತ್ತಿರಲಿಲ್ಲ ಎಂದು ಹೇಳಿದ್ದಾರೆ. ಇನ್ನೂ ಕೆಲವರು ಯಾವುದೇ ಕಾರಣಕ್ಕೂ ತುಮಕೂರು ಸಂಸದರ ಜೊತೆ ಕುಳಿತುಕೊಳ್ಳಬಾರದು ಎಂದು ಕಾಮೆಂಟ್ ಮಾಡಿದ್ದಾರೆ.