Tag: Sohagpur police station

  • 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಕೊಲೆ

    ಭೋಪಾಲ್: ಐದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಂದಿರುವ ಘಟನೆ ಮಧ್ಯಪ್ರದೇಶದ ಹೋಶಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.

    ಬಟ್ಟೆಯಿಂದ ಸುತ್ತಿರುವ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಮನೆಯ ಮೇಲ್ಛಾವಣಿ ಮೇಲೆ ಪತ್ತೆಯಾಗಿದೆ ಎಂದು ಸೊಹಾಗ್‍ಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿಕ್ರಮ್ ರಜಾಕ್ ತಿಳಿಸಿದ್ದಾರೆ. ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಪತ್ನಿ

    ಭಾನುವಾರ ರಾತ್ರಿ ಬಾಲಕಿಯ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯ ಕತ್ತು ಹಿಸುಕಿ ಹತ್ಯೆಗೈದಿರುವ ವಿಚಾರ ಬೆಳಕಿಗೆ ಬಂದಿದೆ. ಬಾಲಕಿಯ ನೆರೆಮನೆಯಲ್ಲಿ ವಾಸಿಸುತ್ತಿರುವ ಸಂಶಯಾಸ್ಪದ ವ್ಯಕ್ತಿಯನ್ನು ಪೊಲೀಸರು ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

    POLICE JEEP

    ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕಿ ನಾಪತ್ತೆಯಾಗಿದ್ದು, ಆಕೆಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬಾಲಕಿ ಶವ ತಮ್ಮ ಮನೆಯ ಮೇಲ್ಚಾವಣಿಯಲ್ಲಿ ಪತ್ತೆಯಾದ ಹಿನ್ನೆಲೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಡಿ.30ರಿಂದ ಕೇರಳದಲ್ಲಿ ನೈಟ್ ಕರ್ಫ್ಯೂ

    ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಮತ್ತು ಕೊಲೆ ಸೆಕ್ಷನ್‍, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ (ಪೋಕ್ಸೋ) ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.