Tag: soldiers

  • ಪುಲ್ವಾಮಾದಲ್ಲಿ ಮತ್ತೆ ಗುಂಡಿನ ದಾಳಿ- ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮ

    ಪುಲ್ವಾಮಾದಲ್ಲಿ ಮತ್ತೆ ಗುಂಡಿನ ದಾಳಿ- ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮ

    – ಓರ್ವ ನಾಗರಿಕನೂ ಬಲಿ

    ಶ್ರೀನಗರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದೆ. ಸೇನಾ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

    ಮೇಜರ್ ಡಿ.ಎಸ್ ದೊಂಡಿಯಾಲ್, ಹೆಡ್ ಕಾನ್ಸ್ ಸ್ಟೇಬಲ್ ಸೇವಾರಾಂ, ಸಿಪಾಯಿ ಅಜಯ್ ಕುಮಾರ್, ಹರೀಶ್ ಸಿಂಗ್ ಹುತಾತ್ಮರಾಗಿದ್ದಾರೆ. ಸಿಪಾಯಿ ಗುಲ್ಜಾರ್ ಮಹಮ್ಮದ್ ಗೆ ಗಂಭೀರ ಗಾಯಗಳಾಗಿದ್ದು ಅವರಿಗೆ ಬದಾಮಿಬಾಗ್ ನಲ್ಲಿರುವ ಸೇನೆಯ 92ನೇ ಬೇಸ್ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುಂಡಿನ ದಾಳಿಗೆ ಮುಷ್ತಾಕ್ ಅಹ್ಮದ್ ಎಂಬ ನಾಗರಿಕ ಕೂಡ ಬಲಿಯಾಗಿದ್ದಾರೆ.

    ಪುಲ್ವಾಮಾ ಜಿಲ್ಲೆಯ ಪಿಂಗ್ಲಾನ್ ಪ್ರದೇಶದಲ್ಲಿ ಯೋಧರ ಹಾಗೂ ಉಗ್ರರ ನಡುವೆ ಅಹೋರಾತ್ರಿ ಭೀಕರ ಕಾಳಗ ನಡೆದಿದೆ. 40 ಯೋಧರ ಬಲಿ ಪಡೆದ ಆದಿಲ್ ದಾರ್ ಗೆ ನೆರವು ನೀಡಿದ್ದ ಉಗ್ರರ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸೈನಿಕರು ಆ ಪ್ರದೇಶವನ್ನು ಸುತ್ತುವರಿದು ದಾಳಿ ನಡೆಸಿದಾಗ ಉಗ್ರರು ಪ್ರತಿ ದಾಳಿ ನಡೆಸಿದ್ದಾರೆ.

    55 ರಾಷ್ಟ್ರೀಯ ರೈಫಲ್ಸ್ ರೆಜಿಮೆಂಟ್, ಪೊಲೀಸ್ ಮತ್ತು ಸಿಆರ್ ಪಿಎಫ್ ಒಳಗೊಂಡು ಭಾರತೀಯ ಸೇನೆ ಈ ಕಾರ್ಯಚರಣೆಯನ್ನು ಕೈಕೊಂಡಿತ್ತು. ಯೋಧರು ತಮ್ಮನ್ನು ಸುತ್ತುವರಿದಿದ್ದಾರೆ ಎಂದು ತಿಳಿದ ಜೈಷ್ ಇ ಮೊಹಮ್ಮದ್ ಸಂಘಟನೆಯ ಮೂವರು ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿ ಬಳಿಕ ಉಗ್ರರು ಅಲ್ಲಿಂದ ಪರಾರಿ ಆಗಿದ್ದಾರೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೊದಲು ದೇಶ ನಂತರ ವ್ಯಾಪಾರ- ಪಾಕ್‍ಗೆ ಚಹಾ ರಫ್ತು ನಿಲ್ಲಿಸಲು ಸಿದ್ಧ ಎಂದ ಚಹಾ ರಫ್ತುದಾರರು

    ಮೊದಲು ದೇಶ ನಂತರ ವ್ಯಾಪಾರ- ಪಾಕ್‍ಗೆ ಚಹಾ ರಫ್ತು ನಿಲ್ಲಿಸಲು ಸಿದ್ಧ ಎಂದ ಚಹಾ ರಫ್ತುದಾರರು

    ನವದೆಹಲಿ: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಿಂದ ಯೋಧರು ಹುತಾತ್ಮರಾಗಿರುವುದಕ್ಕೆ ಸಿಡಿದೆದ್ದಿರುವ ಭಾರತ ಸರ್ಕಾರ, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರ ಸ್ಥಾನದಿಂದ ಕಿತ್ತೊಗೆದಿದೆ. ಇದರಿಂದ ಉಭಯ ರಾಷ್ಟ್ರಗಳ ನಡುವೆ ಇದ್ದ ಹಲವು ರೀತಿ ವ್ಯವಹಾರ ಸಂಬಂಧಗಳು ಮುರಿದು ಬಿದ್ದಿದ್ದು, ಪಾಕಿಸ್ತಾನಕ್ಕೆ ಚಹಾ ರಫ್ತು ನಿಲ್ಲಿಸಲು ಸಿದ್ಧ ಎಂದು ಭಾರತೀಯ ಚಹಾ ಪೂರೈಕೆದಾರರ ಒಕ್ಕೂಟ (ಐಟಿಇಎ) ಮುಖ್ಯಸ್ಥ ಅನ್ಶುಮನ್ ಕನೋರಿಯಾ ತಿಳಿಸಿದ್ದಾರೆ.

    ಭಾರತದಿಂದ ಪಾಕಿಸ್ತಾನಕ್ಕೆ ಪ್ರತಿವರ್ಷ ಸುಮಾರು 150 ಕೋಟಿ ರೂ. ಮೌಲ್ಯದ ಚಹಾವನ್ನು ರಫ್ತು ಮಾಡಲಾಗುತ್ತಿತ್ತು. ಚಹಾ ಮಂಡಳಿಯ ವರದಿ ಪ್ರಕಾರ 2018ರಲ್ಲಿ ಸುಮಾರು 154.71 ಕೋಟಿ ರೂ. ಮೌಲ್ಯದ 1.58 ಕೋಟಿ ಕೆ.ಜಿ ಚಹಾವನ್ನು ಪಾಕಿಸ್ತಾನಕ್ಕೆ ಪೂರೈಕೆ ಮಾಡಲಾಗಿತ್ತು. ಆದ್ರೆ ಪುಲ್ವಾಮ ಉಗ್ರರ ದಾಳಿಯಿಂದ ಉಭಯ ರಾಷ್ಟ್ರಗಳ ನಡುವೆ ಭಾರಿ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರನ್ನು ಬೆಂಬಲಿಸುತ್ತೇವೆ ಎಂದು ಚಹಾ ಪೂರೈಕೆದಾರರ ಒಕ್ಕೂಟ ಹೇಳಿದೆ. ಅಲ್ಲದೆ ನಮಗೆ ನಷ್ಟವಾದರೂ ಸರಿ ನಾವು ಮಾತ್ರ ಪಾಕಿಸ್ತಾನಕ್ಕೆ ಚಹಾ ರಫ್ತು ಮಾಡಲ್ಲ. ದೇಶ ಮೊದಲು ನಂತರ ವ್ಯಪಾರ ಎಂದು ಕೇಂದ್ರ ಸರ್ಕಾರಕ್ಕೆ ಸಾಥ್ ನೀಡಿದ್ದಾರೆ.

    ಕೇಂದ್ರ ಸರ್ಕಾರ ಪಾಕಿಸ್ತಾನದ ಜೊತೆ ಭಾರತದ ಎಲ್ಲಾ ವ್ಯಾಪಾರಿ ಸಂಬಂಧಗಳನ್ನು ಸ್ಥಗಿತಗೊಳಿಸಿದರೆ ಚಹಾ ಪೂರೈಕೆ ಮಾಡುವುದನ್ನು ನಿಲ್ಲಿಸುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಐಟಿಇಎ ಮುಖ್ಯಸ್ಥ ಅನ್ಶುಮನ್ ಕನೋರಿಯಾ ಖಂಡಿತ ನಿಲ್ಲಿಸುತ್ತೇವೆ. ದೇಶಕ್ಕಾಗಿ ಏನನ್ನಾದರೂ ಮಾಡಲು ನಾವು ಸಿದ್ಧರಿದ್ದೇವೆ. ಮೊದಲು ರಾಷ್ಟ್ರ ನಂತರ ವ್ಯಾಪಾರ ಎಂದು ಉತ್ತರಿಸಿದ್ದಾರೆ. ಅಷ್ಟೇ ಅಲ್ಲದೆ ಪುಲ್ವಾಮ ಉಗ್ರರ ದಾಳಿ ವಿರುದ್ಧವಾಗಿ ಕೇಂದ್ರ ಸರ್ಕಾರ ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ಚಹಾ ರಫ್ತುದಾರರ ಬೆಂಬಲವಿದೆ. 1989ರಿಂದ ಭಾರತೀಯ ಸೇನೆಗೆ ಪಾಕಿಸ್ತಾನ ತೊಂದರೆ ಕೊಡುತ್ತಿದೆ ಎಂದು ಕನೋರಿಯಾ ಹೇಳಿದ್ದಾರೆ.

    ಅಲ್ಲದೇ ಉಭಯ ರಾಷ್ಟ್ರಗಳ ವ್ಯಾಪಾರ ಸಂಬಂಧ ಸ್ಥಗಿತಗೊಂಡರೆ ನಮಗೆ ನಷ್ಟವಾಗುತ್ತದೆ ಎಂಬುದರ ಕುರಿತು ಯೋಚನೆಯನ್ನೇ ಮಾಡಿಲ್ಲ. ಇಂತಹ ದುರ್ಘಟನೆಗಳು ನಡೆದಾಗ ನಮಗೆ ದೇಶ ಮೊದಲಾಗುತ್ತದೆ. ನಾವು ಕೇಂದ್ರ ಸರ್ಕಾರದ ಸೂಚನೆಗಳಿಗೆ ಕಾಯುತ್ತಿದ್ದೇವೆ. ಇದರಿಂದ ಮಾರುಕಟ್ಟೆ ಮೇಲೆ ಆಗುವ ಪರಿಣಾಮ ಸೆಕೆಂಡರಿ ಎಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹುತಾತ್ಮ ಯೋಧ ಗುರು ಕುಟುಂಬಕ್ಕೆ ಗ್ರಾಮ ಪಂಚಾಯ್ತಿಯಿಂದ 10 ಲಕ್ಷ ರೂ. ಧನಸಹಾಯ!

    ಹುತಾತ್ಮ ಯೋಧ ಗುರು ಕುಟುಂಬಕ್ಕೆ ಗ್ರಾಮ ಪಂಚಾಯ್ತಿಯಿಂದ 10 ಲಕ್ಷ ರೂ. ಧನಸಹಾಯ!

    ಚಿಕ್ಕಬಳ್ಳಾಪುರ: ಗುರುವಾರದಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಗುರು ಅವರ ಕುಟುಂಬಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಣ್ಣೇಶ್ವರ ಗ್ರಾಮ ಪಂಚಾಯ್ತಿಯಿಂದ ಧನಸಹಾಯ ನೀಡಲು ನಿರ್ಧರಿಸಲಾಗಿದೆ.

    ಮಂಡ್ಯ ಜಿಲ್ಲೆಯ ಕೆ.ಎಂ ದೊಡ್ಡಿಯ ಗುಡಿಗೆರೆ ಗ್ರಾಮದ ವೀರ ಯೋಧ ಗುರು ಅವರು ಪುಲ್ವಮಾ ಉಗ್ರರ ದಾಳಿಯಲ್ಲಿ ವೀರಮರಣವನ್ನಪ್ಪಿದ್ದಾರೆ. ಆದ್ದರಿಂದ ಹುತಾತ್ಮ ಯೋಧ ಗುರು ಕುಟುಂಬಕ್ಕೆ ಅಣ್ಣೇಶ್ವರ ಗ್ರಾಮ ಪಂಚಾಯ್ತಿ 10 ಲಕ್ಷ ರೂ. ಹಣ ನೀಡಲು ಮುಂದಾಗಿದೆ. ಪರಿಹಾರಧನ ನೀಡಲು ಸರ್ಕಾರ ಸಹ ಅನುಮೋದನೆ ನೀಡುವಂತೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಲಕ್ಷ್ಮಿ ಮನವಿ ಮಾಡಿದ್ದಾರೆ. ಅಲ್ಲದೆ ಗ್ರಾಮ ಪಂಚಾಯ್ತಿ ಜನಪ್ರತಿನಿಧಿಗಳು ಧನಸಹಾಯ ಮಾಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

    ಅಣ್ಣೇಶ್ವರ ಗ್ರಾಮ ಪಂಚಾಯ್ತಿ ಸದಸ್ಯರು ಅನ್ಯಾಯವಾಗಿ ಪಾಪಿ ಉಗ್ರರ ದಾಳಿಗೆ ಬಲಿಯಾದ ಯೋಧರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಹುತಾತ್ಮ ಯೋಧನ ಕುಟುಂಬಕ್ಕೆ 10 ಲಕ್ಷ ಧನಸಹಾಯ ಮಾಡಲು ಸಿದ್ಧ ಎಂದು ಹೇಳಿ ದೇಶಭಕ್ತಿ ಮೆರೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬುದ್ಧಿಜೀವಿಗಳಿಗೆ ಶಾಸಕ ರಾಜುಗೌಡ ಎಚ್ಚರಿಕೆ

    ಬುದ್ಧಿಜೀವಿಗಳಿಗೆ ಶಾಸಕ ರಾಜುಗೌಡ ಎಚ್ಚರಿಕೆ

    ರಾಯಚೂರು: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಾವಿಗೆ ಸಂತಾಪ ಸೂಚಿಸಿ, ಬಳಿಕ ಬುದ್ಧಿಜೀವಿಗಳು ಹೇಳಿಕೆ ನೀಡುವಾಗ ಅವರ ನಾಲಗೆ ಮೇಲೆ ಹಿಡಿತವಿರಿಲಿ. ಇಲ್ಲದಿದ್ದರೆ ನಾಲಗೆ ಕತ್ತರಿಸಬೇಕಾಗುತ್ತದೆ ಎಂದು ಸುರಪುರ ಶಾಸಕ ರಾಜುಗೌಡ ಎಚ್ಚರಿಕೆ ನೀಡಿದ್ದಾರೆ.

    ರಾಯಚೂರಿನಲ್ಲಿ ನಡೆದ ಆರೋಗ್ಯಕ್ಕಾಗಿ ಓಟ ಕಾರ್ಯಕ್ರಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪುಲ್ವಾಮದಲ್ಲಿ ನಡೆದ ಘೋರ ಉಗ್ರರ ದಾಳಿಯಲ್ಲಿ ವೀರ ಯೋಧರು ಹುತಾತ್ಮರಾಗಿರುವುದು ಬೇಸರದ ಸಂಗತಿ. ಇದರಿಂದ ಇಡೀ ದೇಶಕ್ಕೆ ನೋವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಯೋಧರ ಹತ್ಯೆಯನ್ನು ಸಂಭ್ರಮಿಸುವ ಪ್ರಜೆಗಳು, ನಟರು, ರಾಜಕಾರಣಿಗಳು ಹಾಗೂ ಉದ್ಯಮಿಗಳು ಯಾರೇ ಆಗಲಿ ಅವರು ದೇಶದ್ರೋಹಿಗಳು ಎಂದು ಕಿಡಿಕಾರಿದ್ದಾರೆ.

    ಸಿಆರ್‌ಪಿಎಫ್‌ನ 40 ಕ್ಕೂ ಅಧಿಕ ಯೋಧರು ಬಲಿಯಾಗಿದ್ದಾರೆ. ಈ ಕೃತ್ಯವೆಸಗಿದ ಪಾಕ್ ಉಗ್ರರನ್ನು ಬುಡ ಸಮೇತ ಕಿತ್ತು ಎಸೆಯಬೇಕು ಎಂದು ನಾನು ಮೋದಿ ಅವರಿಗೆ ಮನವಿ ಮಾಡುತ್ತೇನೆ. ಆಗ ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ದೊರೆಯುತ್ತದೆ. ಈ ವಿಚಾರವಾಗಿ ಎಲ್ಲಾ ಪಕ್ಷಗಳು ಒಂದಾಗಬೇಕಾಗಿದೆ. ಇಲ್ಲಿ ರಾಜಕೀಯ ಮಾಡುವುದು ಬೇಡ. ಗಡಿ ಯೋಧರು ಯಾವ ಜಾತಿ, ಪಕ್ಷ ಭೇದವಿಲ್ಲದೆ ನಾವೆಲ್ಲ ಭಾರತೀಯರೆಂದು ದೇಶವನ್ನು ಕಾಯುತ್ತಾರೆ. ಹಾಗೆಯೇ ನಾವೆಲ್ಲ ಒಂದಾಗಿ ಉಗ್ರರ ವಿರುದ್ಧ ನಿಲ್ಲಬೇಕು. ಯೋಧರ ಹತ್ಯೆಯನ್ನು ಸಂಭ್ರಮಿಸೋ ಜನರು ದೇಶದ್ರೋಹಿಗಳು. ಬುದ್ಧಿಜೀವಿಗಳು ಈ ರೀತಿಯ ಹೇಳಿಕೆ ನೀಡಿದರೆ ನಾಲಗೆ ಕತ್ತರಿಸಬೇಕಾಗುತ್ತದೆ. ಯಾರೇ ದೇಶದ್ರೋಹ ಹೇಳಿಕೆ ನೀಡಿದರೂ ಅವರ ಪ್ರತಿರೋಧಕ್ಕೆ ಯುವಕರ ಪಡೆ ಸಿದ್ಧವಾಗಿದೆ ಎಂದು ಶಾಸಕರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಫೆ.19ರಂದು ಕರ್ನಾಟಕ ಬಂದ್: ಕನ್ನಡ ಸಂಘಟನೆಗಳಿಂದ ಕರೆ

    ಫೆ.19ರಂದು ಕರ್ನಾಟಕ ಬಂದ್: ಕನ್ನಡ ಸಂಘಟನೆಗಳಿಂದ ಕರೆ

    ಬೆಂಗಳೂರು: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡ ಸಂಘಟನೆಗಳು ಫೆ.19 ರಂದು ಕರ್ನಾಟಕ ಬಂದ್‍ಗೆ ಕರೆಕೊಟ್ಟಿವೆ.

    ಬೆಳಗ್ಗೆ 6 ರಿಂದ ಸಂಜೆ 6ರ ವರೆಗೆ ಬಂದ್ ನಡೆಯಲಿದ್ದು ಅಂದು ಬೆಳಗ್ಗೆ 10 ಘಂಟೆಗೆ ಟೌನ್ ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲು ಕನ್ನಡ ಸಂಘಟನೆಗಳು ಮುಂದಾಗಿವೆ.

    ಹೋಟೆಲ್, ಖಾಸಗಿ ಬಸ್ಸುಗಳು, ಶಿಕ್ಷಣ ಸಂಸ್ಥೆಗಳು, ಪೆಟ್ರೋಲ್ ಬಂಕ್, ಬಿಡಿಎ, ನಗರ ಸಭೆ, ಐಟಿ-ಬಿಟಿ ಕಂಪೆನಿಗಳು ಮುಚ್ಚಬೇಕು. ಇಲ್ಲದಿದ್ದರೆ ಬಂದ್ ವೇಳೆ ಏನೇ ವ್ಯತ್ಯಾಸ ಆದರೂ ನಾವು ಹೊಣೆ ಅಲ್ಲ ಎಂದ ವಾಟಾಳ್ ನಾಗರಾಜ್ ಹೇಳಿದ್ದಾರೆ.

    ಬಂದ್ ವಿರುದ್ಧ ಕಿಡಿ:
    ಬಂದ್‍ಗೆ ಕರೆ ನೀಡಿದ್ದಕ್ಕೆ ಕನ್ನಡ ಸಂಘಟನೆಗಳಿಂದಲೇ ಆಕ್ರೋಶ ವ್ಯಕ್ತವಾಗಿದೆ. ಪ್ರತಿ ಬಾರಿಯೂ ವಾಟಾಳ್ ನಾಗರಾಜ್ ಬಂದ್‍ಗೆ ಕರೆ ನೀಡುತ್ತಾರೆ. ಆದರೆ ಈ ಬಂದ್ ಚಾಳಿಯಿಂದ ಯಾವುದೇ ಪ್ರಯೋಜನ ಇಲ್ಲ. ಹೀಗಾಗಿ ಬಂದ್‍ಗೆ ನಮ್ಮ ಸಂಪೂರ್ಣ ವಿರೋಧ ಇದೆ. ವಾಟಾಳ್ ನಾಗರಾಜ್ ನಮಗೆ ಗುರುಗಳು ಇದ್ದಹಾಗೆ. ಅವರು ಪ್ರತಿ ಬಾರಿ ಬಂದ್ ಮಾಡಿ ಸಾಧಿಸೋದಾದರೂ ಏನು? ಬಂದ್ ಮಾಡಿದರೆ ಪ್ರಯೋಜನವಿಲ್ಲ ಎಂದು ನಾಗೇಶ್ ಗೌಡ ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉಗ್ರರಿಗೆ ಪಾಠ ಕಲಿಸಿ, ಪಾಕಿಸ್ತಾನವನ್ನು ತುಂಡರಿಸಿ ಮೋದಿ ಹೊಸ ಇತಿಹಾಸ ಸೃಷ್ಟಿಸಬೇಕು: ಅನಂತ್‍ನಾಗ್

    ಉಗ್ರರಿಗೆ ಪಾಠ ಕಲಿಸಿ, ಪಾಕಿಸ್ತಾನವನ್ನು ತುಂಡರಿಸಿ ಮೋದಿ ಹೊಸ ಇತಿಹಾಸ ಸೃಷ್ಟಿಸಬೇಕು: ಅನಂತ್‍ನಾಗ್

    ಮಂಗಳೂರು: ಪುಲ್ವಾಮದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ವೀರ ಯೋಧರ ಸಾವಿನಿಂದ ಬೇಸರ, ಅಸಹನೆ, ಸಿಟ್ಟು ಉಕ್ಕಿಬರುತ್ತಿದೆ. ಕಾಶ್ಮೀರದ ಪ್ರಜಾಪ್ರಭುತ್ವ ಹೆಸರಲ್ಲಿ ಕೆಟ್ಟ ಜನರಿಗೆ ಬೆಂಬಲ ಕೊಟ್ಟು ಸರ್ಕಾರ ಯೋಧರ ಸಾವಿಗೆ ಕಾರಣವಾಗುತ್ತಿದೆ ಎಂದು ಹಿರಿಯ ನಟ ಅನಂತ್‍ನಾಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಯೋಧರು ಅನ್ಯಾಯವಾಗಿ ಸಾಯುವಂತೆ ರಾಜಕಾರಣಿಗಳು ಮಾಡುತ್ತಿದ್ದಾರೆ. ಕಾಶ್ಮೀರದ ಪ್ರಜಾಪ್ರಭುತ್ವ ನೆಪದಲ್ಲಿ ಯೋಧರ ಸಾವಿಗೆ ಕಾರಣರಾಗುತ್ತಿದ್ದಾರೆ. ಪಾಕಿಸ್ತಾನವನ್ನು ತುಂಡರಿಸಿ, ಉಗ್ರರಿಗೆ ಪಾಠ ಕಲಿಸಿ ನರೇಂದ್ರ ಮೋದಿಯವರು ಮತ್ತೊಂದು ಇತಿಹಾಸ ಸೃಷ್ಟಿಸಬೇಕಾಗಿದೆ ಎಂದು ಅನಂತ್ ನಾಗ್ ಹೇಳಿದರು.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪುಲ್ವಾಮದಲ್ಲಿ ಹುತಾತ್ಮರಾದ ಯೋಧರ ಸಾವಿಗೆ ಸಂತಾಪ ಸೂಚಿಸಿ, ಈ ವಿಚಾರದಲ್ಲಿ ಅಸಹಾಯಕತೆ ನಮ್ಮನ್ನು ಸುತ್ತುವರಿದಿದೆ. ರಾಜಕಾರಣಿಗಳು ಭಾರತದ ಎಡ ಮತ್ತು ಬಲ ಭುಜಗಳನ್ನು ಕತ್ತರಿಸಿದ್ದಾರೆ. ಧರ್ಮದ ಆಧಾರದ ಮೇಲೆ ವಿಭಜನೆಯಾದರೂ, ಸಮಸ್ಯೆಗಳಿಗೆ ಉತ್ತರ ಸಿಕ್ಕಿಲ್ಲ. ಲಾಲ್ ಬಹದ್ದೂರ್ ಶಾಸ್ತ್ರಿಯವರು ಪ್ರಧಾನಿಯಾಗಿದ್ದಾಗ 1965ರಲ್ಲಿ ಪಾಕಿಸ್ತಾನದ ಅಯೂಬ್ ಖಾನ್ ಭಾತರದ ಮೇಲೆ ದಾಳಿ ಮಾಡಿದಾಗ, ಅವನಿಗೆ ಪಾಠ ಕಲಿಸಿದ್ದರು. 1971ರಲ್ಲಿ ಇಂದಿರಾ ಗಾಂಧಿ ಅವರು ಪೂರ್ವ ಪಾಕಿಸ್ಥಾನವನ್ನು ಬಾಂಗ್ಲಾದೇಶವನ್ನಾಗಿ ನಿರ್ಮಾಣ ಮಾಡಿ ಕ್ರಮ ತೆಗೆದುಕೊಂಡಿದ್ದರು. ಈಗ ಉಗ್ರರ ದಾಳಿಯಿಂದ ದೇಶದ ಯೋಧರು ಬಲಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇನ್ನು ತಡ ಮಾಡಬಾರದು, ಇಂತಹ ದುಷ್ಕೃತ್ಯ ಮೆರೆದವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಆಗ್ರಹಿಸಿದರು.

    ಕಾಶ್ಮೀರದಂತಹ ಸಣ್ಣ ಜಾಗದಲ್ಲಿ ಇಂತಹ ಘೋರ ಘಟನೆಗಳು ನಡೆಯಲು ಬಿಟ್ಟಿದ್ದೇ ತಪ್ಪಾಗಿದೆ. ಒಂದೆಡೆ ಪೂರ್ವ ಪಾಕಿಸ್ತಾನ ಬಾಂಗ್ಲಾದೇಶವಾಗಿದೆ, ಇನ್ನೂ ನೆರೆಯ ಪಾಕಿಸ್ಥಾನವನ್ನು ಯಾವ ಸ್ಥಾನ ಮಾಡಬೇಕೆಂದು ಮೋದಿ ಅವರಿಗೆ ಗೊತ್ತಿದೆ. ಪಾಕಿಸ್ತಾನ ಭಯೋತ್ಪಾದಕರ ದೇಶ ಅನ್ನುವುದು ಇಡೀ ಜಗತ್ತಿಗೆ ಗೊತ್ತಿದೆ. ಬೇರೆ ರಾಷ್ಟ್ರಗಳಿಂದ ಹಣ ಪಡೆದು ಇಂದು ಪಾಕಿಸ್ತಾನ ಬದುಕುತ್ತಿದೆ. ಕಾಶ್ಮೀರಿ ಹುಡುಗನ ಕೈಗೆ 350 ಕೆಜಿಯಷ್ಟು ಸಿಡಿಮದ್ದು ಕೊಟ್ಟವರು ಯಾರು? ಸ್ವಾತಂತ್ರ್ಯ ಸಂದರ್ಭದಲ್ಲಿ ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಡುವಂತಾಗಿದೆ ಎಂದು ಅನಂತ್‍ನಾಗ್ ಕಿಡಿಕಾರಿದ್ದಾರೆ.

    ಕಾಶ್ಮೀರವನ್ನು ಪೂರ್ತಿ ಸೇನೆಯ ಕೈಗೆ ಕೊಟ್ಟು ಉಗ್ರರಿಂದ ತಕ್ಕ ಪಾಠ ಕಲಿಸಬೇಕು. ಕಾಶ್ಮೀರದಲ್ಲಿ ಯೋಧರಿಗೆ ಕಲ್ಲು ತೂರುತ್ತಿದ್ದರೂ ಆಡಳಿತ ಸಹಿಸಿಕೊಳ್ತಿರೋದ್ಯಾಕೆ? ಅಲ್ಲಿ ಯೋಧರಿಗೆ ಸ್ವಾತಂತ್ರ್ಯ ನೀಡದಿರುವುದೇ ಇಂಥ ಸ್ಥಿತಿಗೆ ಕಾರಣ ಎಂದು ಹಿರಿಯ ನಟ ಅನಂತ್‍ನಾಗ್ ಅಭಿಪ್ರಾಯ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೇಶಕ್ಕೆ ಏನೂ ಮಾಡೋದಕ್ಕಾಗುತ್ತಿಲ್ಲ- ಪವರ್ ಸ್ಟಾರ್ ಕೊರಗು

    ದೇಶಕ್ಕೆ ಏನೂ ಮಾಡೋದಕ್ಕಾಗುತ್ತಿಲ್ಲ- ಪವರ್ ಸ್ಟಾರ್ ಕೊರಗು

    ಉಡುಪಿ: ನಾವು ದೇಶಕ್ಕಾಗಿ ಏನಾದ್ರು ಮಾಡಬೇಕು. ಆದ್ರೆ ನಮ್ಮಿಂದ ಏನೂ ಮಾಡುವುದಕ್ಕೆ ಆಗುತ್ತಿಲ್ಲವಲ್ಲ ಎಂಬ ಕೊರಗು ಕಾಡುತ್ತಿದೆ ಎಂದು ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೇಳಿದ್ದಾರೆ.

    ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನಗೈದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಗ್ರರ ದಾಳಿ ಸಹಿಸಲು ಅಸಾಧ್ಯವಾದುದು. ನಮ್ಮ ಯೋಧರನ್ನು ಕಳೆದುಕೊಂಡ ದಿನ ನಮಗೆಲ್ಲಾ ಕತ್ತಲೆ ದಿನ. ನಮಗೋಸ್ಕರ ಗಡಿಭಾಗದಲ್ಲಿ ಯೋಧರು ಕಷ್ಟಪಡ್ತಾರೆ. ಯೋಧರ ಬಗ್ಗೆ ನಾನು ಏನು ಮಾತಾಡಿದ್ರೂ ಅದು ಕಮ್ಮಿಯಾಗ್ತದೆ. ಮಂಡ್ಯ ಮೂಲದ ನಮ್ಮ ಹೆಮ್ಮೆಯ ಯೋಧನನ್ನು ಕಳೆದುಕೊಂಡಿದ್ದೇವೆ. ಒಂದು ಕಡೆಯಿಂದ ನಮಗೆ ದುಖವಾಗ್ತಿದೆ. ನಮಗೇನೂ ಮಾಡೋಕೆ ಆಗ್ತಿಲ್ಲ ಎನ್ನುವ ನೋವೂ ಆಗ್ತಿದೆ ಎಂದರು.

    ಸರ್ಕಾರ ಈ ಹೊತ್ತಲ್ಲಿ ಏನ್ಮಾಡ್ತಿದೆ ಎನ್ನುವುದು ಮುಖ್ಯವಲ್ಲ. ನಾವು, ನಮ್ಮ ಕುಟುಂಬ ಈ ದೇಶಕ್ಕೆ ಏನು ಮಾಡಿದ್ದೇವೆ ಎನ್ನುವುದು ಮುಖ್ಯ. ಎಲ್ಲರೂ ಸೇರಿ ಈ ದೇಶಕ್ಕಾಗಿ ಏನಾದರೂ ಮಾಡೋಣ ಎಂದು ಪುನೀತ್ ಕರೆ ನೀಡಿದರು. ಇದೇ ಸಂದರ್ಭ ಶ್ರೀಕೃಷ್ಣ- ಮುಖ್ಯಪ್ರಾಣ ದೇವರ ದರ್ಶನ ಮಾಡಿದ ಪವರ್ ಸ್ಟಾರ್, ಹುತಾತ್ಮ ಯೋಧರ ಆತ್ಮ ಶಾಂತಿಗಾಗಿ ದೇವರಲ್ಲಿ ಪ್ರಾರ್ಥನೆ ಮಾಡಿದರು.

    ಅಪ್ಪಾಜಿ ಜೊತೆ ಹಲವು ಬಾರಿ ಕೃಷ್ಣಮಠಕ್ಕೆ ಭೇಟಿ ನೀಡಿದ್ದೆ. ಆ ದಿನಗಳು ಯಾವತ್ತಿಗೂ ಮರೆಯೋಕೆ ಆಗಲ್ಲ. ‘ನಟಸಾರ್ವಭೌಮ’ ಚಿತ್ರ ಗೆಲ್ಲಿಸಿದ್ದಕ್ಕೆ ಕನ್ನಡ ಪ್ರೇಕ್ಷಕರಿಗೆ ಇದೇ ಸಂದರ್ಭದಲ್ಲಿ ಪುನೀತ್ ರಾಜ್‍ಕುಮಾರ್ ಧನ್ಯವಾದ ಸಲ್ಲಿಸಿದರು.

    https://www.youtube.com/watch?v=rEZkAveI8KU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪುಲ್ವಾಮಾ ದಾಳಿ: ಹುತಾತ್ಮ ಯೋಧರಿಗೆ ಚಿತ್ರರಂಗದ ನಮನ

    ಪುಲ್ವಾಮಾ ದಾಳಿ: ಹುತಾತ್ಮ ಯೋಧರಿಗೆ ಚಿತ್ರರಂಗದ ನಮನ

    ಬೆಂಗಳೂರು: ಪುಲ್ವಾಮಾದಲ್ಲಿ ಭಯೋತ್ಪಾದನ ದಾಳಿಯಲ್ಲಿ ಹುತಾತ್ಮರಾದ 49 ಕ್ಕೂ ಹೆಚ್ಚು ಯೋಧರಿಗೆ ಚಿತ್ರರಂಗ ಹಲವು ಕಲಾವಿದರು ಸಂತಾಪ ಸೂಚಿಸಿದ್ದಾರೆ.

    ನಟರಾದ ದರ್ಶನ್, ಸುದೀಪ್, ಪುನೀತ್ ರಾಜ್‍ಕುಮಾರ್ ಜಗ್ಗೇಶ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ನಟ-ನಟಿಯರು ಟ್ವೀಟ್ ಮಾಡಿ ತಮ್ಮ ಸಂತಾಪ ಸೂಚಿಸಿ ಹೇಡಿ ಕೃತ್ಯದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಪುಲ್ವಾಮಾ ದಾಳಿ ಬಗ್ಗೆ ತುಂಬಾ ದುಃಖವಾಗಿದೆ, ಭಯೋತ್ಪಾದನೆ ಯಾವತ್ತೂ ಮಾನವ ಕುಲಕ್ಕೆ ಅಪಾಯಕಾರಿ ಎಂದು ದರ್ಶನ್ ಟ್ವೀಟ್ ಮಾಡಿದ್ದು, ಕಾಶ್ಮೀರದ ಪುಲ್ವಾಮಾ ದಾಳಿಯಲ್ಲಿ ಯೋಧರು ಹುತಾತ್ಮರಾಗಿರುವುದು ಬೇಸರದ ಸಂಗತಿ ಎಂಬುದಾಗಿ ಪುನೀತ್ ನಮನ ಸಲ್ಲಿಸಿದ್ದಾರೆ.

    ಯೋಧರ ಬಲಿದಾನಕ್ಕೆ ಅವರ ತ್ಯಾಗಕ್ಕೆ ನನ್ನ ಭಾವಪೂರ್ಣ ನಮನ, ಅವರ ತ್ಯಾಗಕ್ಕೆ ತಕ್ಕ ನ್ಯಾಯ ಸಿಗಬೇಕು ಎಂದು ಯಶ್ ತಿಳಿಸಿದ್ದು, ಉಳಿದಂತೆ ಜಗ್ಗೇಶ್, ರಶ್ಮಿಕಾ, ಶ್ರೀಮುರುಳಿ, ಸುಮಲತಾ ಅಂಬರೀಶ್, ನಿರ್ದೇಶಕ ಪವನ್ ಒಡೆಯರ್ ಸೇರಿದಂತೆ ಅನೇಕ ನಟ-ನಟಿಯರು ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರಿ ಟ್ಟೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

     

  • ಗನ್ ಬಿಟ್ಟು ಚಾಕ್ ಪೀಸ್ ಹಿಡಿದು ಪಾಠ ಮಾಡಿದ ಯೋಧರು!

    ಗನ್ ಬಿಟ್ಟು ಚಾಕ್ ಪೀಸ್ ಹಿಡಿದು ಪಾಠ ಮಾಡಿದ ಯೋಧರು!

    ರಾಂಚಿ: ರಾಜ್ಯವ್ಯಾಪಿ ಪ್ರತಿಭಟನೆಯಲ್ಲಿ ಶಿಕ್ಷಕರು ತೊಡಗಿದ್ದರಿಂದ ಜಾರ್ಖಂಡ್ ರಾಜ್ಯದ ರಾಮಘಡ ಜಿಲ್ಲೆಯ ಶಾಲೆಯಲ್ಲಿ ಯೋಧರು ಶಸ್ತ್ರಾಸ್ತ್ರವನ್ನು ಬಿಟ್ಟು ಮಕ್ಕಳಿಗೆ ಪಾಠ ಹೇಳಿಕೊಟ್ಟಿದ್ದಾರೆ.

    ಹೌದು, ದೇಶವನ್ನು ಕಾಯುವ ಯೋಧರು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಬಲ್ಲ ನೈಪುಣ್ಯತೆಯನ್ನು ಹೊಂದಿರುತ್ತಾರೆನ್ನುವುದು ಮತ್ತೊಮ್ಮೆ ಸಾಭೀತಾಗಿದೆ.

    ಜಾರ್ಖಂಡ್‍ನ ನಕ್ಸಲ್ ಪೀಡಿತ ಜಿಲ್ಲೆಗಳಲ್ಲಿ ಒಂದಾದ ರಾಮಘಡ ಜಿಲ್ಲೆಯಲ್ಲಿ ಶಿಕ್ಷಕರು ರಾಜ್ಯವ್ಯಾಪಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಶಿಕ್ಷಕರ ಅಭಾವವನ್ನು ತಪ್ಪಿಸಲು ಸ್ವತಃ ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್)ಯ ಯೋಧರು ತಮ್ಮ ಗನ್‍ಗಳನ್ನು ಬಿಟ್ಟು, ಮಕ್ಕಳಿಗಾಗಿ ಚಾಕ್ ಪೀಸ್ ಹಿಡಿದಿದ್ದಾರೆ. ಅಲ್ಲದೇ ಶಾಲೆಗಳಲ್ಲಿ ಮಕ್ಕಳಿಗೆ ಪಾಠವನ್ನು ಮಾಡಿದ್ದಾರೆ. ಈ ಮೂಲಕ ದೇಶವನ್ನು ನಿರ್ಮಿಸುವ ಎಲ್ಲಾ ಕೆಲಸಗಳಲ್ಲಿ ಸಮರ್ಥರಿದ್ದೇವೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಕೀಯಾ ಕೃತ್ ಮಧ್ಯ ವಿದ್ಯಾಲಯದ ಪ್ರಾಂಶುಪಾಲ ರಾಮ್ ಸರಣ್ ಯಾದವ್, ಶಿಕ್ಷಕರ ಪ್ರತಿಭಟನೆಯ ಸಮಯದಲ್ಲಿ ನಮಗೆ ನಿರಂತರವಾಗಿ ತರಗತಿಗಳನ್ನು ನಡೆಸಲು ನಾವು ತುಂಬಾ ಕಷ್ಟಪಟ್ಟಿದ್ದೇವು. ಈ ವೇಳೆ ಸಿಆರ್‍ಪಿಎಫ್‍ನ 26ನೇ ಬೆಟಾಲಿಯನ್ ಯೋಧರು ಈ ಕಾರ್ಯಕ್ಕೆ ತೊಡಗಿಕೊಂಡು, ತರಗತಿಗಳು ಮೊದಲಿನಂತೆ ನಡೆಯಲು ಸಹಕರಿಸಿದ್ದಾರೆಂದು ಹೇಳಿದ್ದಾರೆ.

    ಸಿಆರ್‌ಪಿಎಫ್ ಯೋಧರು ಜಾರ್ಖಂಡ್ ರಾಜ್ಯದ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಿರಂತರವಾಗಿ ಕಣ್ಗಾವಲನ್ನು ಇಟ್ಟಿದ್ದರೂ, ಇದರ ಮಧ್ಯೆಯೇ ಮಕ್ಕಳಿಗೆ ಬೋಧನೆ ಮಾಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ದೇಶದ ಯಾವುದೇ ಕಠಿಣ ಪರಿಸ್ಥಿತಿಗಳಲ್ಲಿ ಮೊದಲು ನೆನಪಿಗೆ ಬರುವುದೇ ನಮ್ಮ ಯೋಧರು. ಪ್ರವಾಹ, ಚಂಡಮಾರುತ, ಭೂಕಂಪ ಸೇರಿದಂತೆ ಯಾವುದೇ ಪ್ರಕೃತಿ ವಿಕೋಪಗಳಲ್ಲಿ ಸದಾ ಮುನ್ನುಗ್ಗಿ ಜನರ ರಕ್ಷಣೆಗೆ ತಮ್ಮ ಪ್ರಾಣವನ್ನೇ ಮುಡುಪಾಗಿಡುತ್ತಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಇಬ್ಬರು ಸೈನಿಕರಿಂದ ಪೊಲೀಸರ ಮೇಲೆ ಹಲ್ಲೆ!

    ಇಬ್ಬರು ಸೈನಿಕರಿಂದ ಪೊಲೀಸರ ಮೇಲೆ ಹಲ್ಲೆ!

    ಮಂಗಳೂರು: ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಮದ್ಯಪಾನ ಮಾಡಿ ಬೈಕ್ ಚಲಾಯಿಸುತ್ತಿದ್ದ ಸೈನಿಕರನ್ನು ಅಡ್ಡಗಟ್ಟಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಮರ್ದಾಳ, ತಾಕೋಟೆಕೆರೆ ಎಂಬಲ್ಲಿ ನಡೆದಿದೆ.

    ಹರೀಶ್ ಮತ್ತು ರತ್ನಾಕರ್ ಪಾನಮತ್ತ ಸೈನಿಕರು. ಮದ್ಯಪಾನ ಸೇವಿಸಿ ಚಲಾಯಿಸುತ್ತಿದ್ದ ಬೈಕ್ ತಡೆದ ಹಿನ್ನಲೆಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಪೊಲೀಸರ ಮೇಲೆ ಹಲ್ಲೆ ಮಾಡಲು ಸೈನಿಕರಿಗೆ ಸ್ನೇಹಿತರು ಕೂಡ ಸಾಥ್ ನೀಡಿದ್ದಾರೆ. ಹಲ್ಲೆಯ ಪರಿಣಾಮ ಪೊಲೀಸರೊಬ್ಬರು ಗಾಯಗೊಂಡಿದ್ದಾರೆ.

    ಹಲ್ಲೆ ಮಾಡಿದ ಸೈನಿಕರು ರಜೆ ನಿಮಿತ್ತ ಊರಿಗೆ ಬಂದಿದ್ದರು. ಪ್ರಕರಣ ಸಂಬಂಧ ಹಲ್ಲೆ ಮಾಡಿದ್ದ ಇಬ್ಬರು ಸೈನಿಕರು ಹಾಗೂ ಹಲ್ಲೆ ಮಾಡಲು ಸಾಥ್ ನೀಡಿದ್ದ ಸ್ನೇಹಿತರನ್ನು ಸೇರಿ ನಾಲ್ವರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews