Tag: soldiers

  • ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ

    ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ

    – ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಭಯೋತ್ಪಾದಕರೊಂದಿಗಿನ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕಥುವಾದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ರೈಸಿಂಗ್ ಸ್ಟಾರ್ ಕಾರ್ಪ್ಸ್‌ನ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

    ಗುಪ್ತಚರ ಮಾಹಿತಿಯ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಕಿಶ್ತ್ವಾರ್‌ನ ಚತ್ರೂದಲ್ಲಿ ಪ್ರಾರಂಭಿಸಲಾಗಿದೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿತ್ತು. ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ತಿಳಿಸಿದೆ.

    ಕಿಶ್ತ್ವಾರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರೇ ಜುಲೈನಲ್ಲಿ ದೋಡಾದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲೂ ಭಾಗಿಯಾಗಿದ್ದರು. ಆಗ ಅಧಿಕಾರಿ ಸೇರಿದಂತೆ ನಾಲ್ವರು ಸೈನಿಕರು ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದರು.

  • ಅರುಣಾಚಲ ಪ್ರದೇಶದಲ್ಲಿ ಪ್ರಪಾತಕ್ಕೆ ಬಿದ್ದ ಟ್ರಕ್ – ಮೂವರು ಯೋಧರು ಹುತಾತ್ಮ

    ಅರುಣಾಚಲ ಪ್ರದೇಶದಲ್ಲಿ ಪ್ರಪಾತಕ್ಕೆ ಬಿದ್ದ ಟ್ರಕ್ – ಮೂವರು ಯೋಧರು ಹುತಾತ್ಮ

    ಇಟಾನಗರ: ಟ್ರಕ್ (Truck) ಸ್ಕಿಡ್ ಆಗಿ ಪ್ರಪಾತಕ್ಕೆ ಬಿದ್ದ ಪರಿಣಾಮ ಮೂವರು ಭಾರತೀಯ ಯೋಧರು (Indian Soldiers) ಹುತಾತ್ಮರಾಗಿದ್ದು, ಅನೇಕರು ಗಾಯಗೊಂಡ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ.

    ಸೈನಿಕರನ್ನು ಸಾಗಿಸುತ್ತಿದ್ದ ಟ್ರಕ್ ಲೆಪರಾಡ ಜಿಲ್ಲೆಯ ಬಸರಾಗೆ ತೆರಳುತ್ತಿದ್ದ ವೇಳೆ ಸ್ಕಿಡ್ ಆಗಿ ಪ್ರಪಾತಕ್ಕೆ ಉರುಳಿದೆ. ಇದರಿಂದ ಮೂವರು ಯೋಧರು ಹುತಾತ್ಮರಾಗಿದ್ದು ಅನೇಕರಿಗೆ ಗಾಯಗಳಾಗಿವೆ. ಅರುಣಾಚಲ ಪ್ರದೇಶದ (Arunachal Pradesh) ಅಪ್ಪರ್ ಸುಭನ್ಸಿರಿ ಎಂಬಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.  ಇದನ್ನೂ ಓದಿ: 2028ರ ವೇಳೆಗೆ 80  ಕೋಟಿ ಪ್ರವಾಸಿಗರನ್ನು ಆಕರ್ಷಿಸುವ ಗುರಿ – ಉತ್ತರ ಪ್ರದೇಶದಲ್ಲಿ ತಯಾರಿ ಹೇಗಿದೆ?

    ಸೇನಾ ಮೂಲಗಳ ಪ್ರಕಾರ, ಹುತಾತ್ಮರಾದ ಮೂವರು ಯೋಧರನ್ನು ಹವಲ್ದಾರ್ ನಖಾತ್ ಸಿಂಗ್, ನಾಯಕ್ ಮುಖೇಶ್ ಕುಮಾರ್, ಗ್ರೆನೇಡಿಯರ್ ಆಶಿಶ್ ಕುಮಾರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಭಾರತದ ರೈಲು, ಪೆಟ್ರೋಲ್ ಪೈಪ್‌ಲೈನ್‌ಗಳ ಮೇಲೆ ದಾಳಿ ಮಾಡಿ -ರಾಮೇಶ್ವರಂ ಕೆಫೆ ಸ್ಫೋಟ ಸಂಚುಕೋರನಿಂದ ಕರೆ

    ಘಟನೆ ಸಂಭವಿಸಿದ ಕೂಡಲೇ ಸ್ಥಳೀಯರು ಸೇರಿ ಗಾಯಗೊಂಡ ಸೈನಿಕರನ್ನು ಮೇಲೆತ್ತಲು ಸಹಾಯ ಮಾಡಿದ್ದಾರೆ. ಇದನ್ನೂ ಓದಿ:  ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ನಲ್ಲಿ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್ – ಮಹಿಳೆ ಸಾವು

    ಘಟನೆಯ ಕುರಿತು ಸೇನೆಯ ಪೂರ್ವ ಕಮಾಂಡ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಈಸ್ಟೆನ್ ಕಮಾಂಡ್ ಆರ್ಮಿ ಕೇಡರ್ ಮತ್ತು ಎಲ್ಲಾ ಶ್ರೇಣಿಯ ಲೆಫ್ಟಿನೆಂಟಲ್ ಜನರಲ್ ಆರ್ ಸಿ ತಿವಾರಿ, ಬ್ರೇವ್‌ಹಾರ್ಟ್ಸ ಹವ್ ನಖತ್ ಸಿಂಗ್, ಎನ್‌ಕೆ ಮುಖೇಶ್ ಕುಮಾರ್, ಮತ್ತು ಜಿಡಿಆರ್ ಆಶಿಶ್‌ರವರ ಈ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೊಯ್ನಾ ಜಲಾಶಯ ಸಂಪೂರ್ಣ ಭರ್ತಿ – ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ

    ಅರುಣಾಚಲ ಪ್ರದೇಶದ ಸಿಎಂ ಪ್ರೇಮ ಖಂಡು (CM Prema Khundu) ಕೂಡ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ವ್ಯಕ್ತಪಡಿಸಿದ್ದು, ಹುತಾತ್ಮ ಯೋಧರನ್ನು ಗೌರವಪೂರ್ವಕವಾಗಿ ಸ್ಮರಿಸಲಾಗುವುದು, ಈ ದುಖಃವನ್ನು ಭರಿಸುವ ಶಕ್ತಿ ಹುತಾತ್ಮ ಯೋಧರ ಕುಟುಂಬಸ್ಥರಿಗೆ ಸಿಗಲಿ ಎಂದು ನಾನು ಬುದ್ಧನಲ್ಲಿ ಪ್ರಾರ್ಥನೆ ಮಾಡುತ್ತೆನೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ದರ್ಶನ್‌ ವಿಶೇಷ ಆತಿಥ್ಯಕ್ಕೆ ಪ್ರಭಾವಿ ಸಚಿವರ ಆದೇಶ?

  • ತ್ರಿಪುರಾದಲ್ಲಿ ಪ್ರವಾಹ; ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಸಾವು

    ತ್ರಿಪುರಾದಲ್ಲಿ ಪ್ರವಾಹ; ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಸಾವು

    ಅಗರ್ತಲಾ: ತ್ರಿಪುರಾದಲ್ಲಿ (Tripura Flood) ನಿರಂತರ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಸಾವಿಗೀಡಾಗಿದ್ದಾರೆ.

    ತ್ರಿಪುರಾ ಸ್ಟೇಟ್ ರೈಫಲ್ಸ್ (ಟಿಎಸ್ಆರ್) ಯೋಧ ಸೇರಿದಂತೆ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ದಕ್ಷಿಣ ತ್ರಿಪುರಾ ಜಿಲ್ಲೆಯ ಬೆಲೋನಿಯಾದ ಟಿಎಸ್‌ಆರ್ ಜವಾನ್ ಆಶಿಶ್ ಬೋಸ್ ಮತ್ತು ಪಶ್ಚಿಮ ತ್ರಿಪುರಾ ಜಿಲ್ಲೆಯ ಇಂದ್ರನಗರದ ಚಿರಂಜಿತ್ ಡೇ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಚೆನ್ನೈಗೆ ಯುಎಸ್ ವಿದೇಶಾಂಗ ವ್ಯವಹಾರಗಳ ಹಂಗಾಮಿ ಸಹಾಯಕ ಕಾರ್ಯದರ್ಶಿ ಜೆನ್ನಿಫರ್ ಆರ್. ಲಿಟಲ್‌ಜಾನ್ ಭೇಟಿ

    ಆ.19 ರಿಂದ ರಾಜ್ಯದಲ್ಲಿ ಮಳೆ ಸಂಬಂಧಿತ ಅವಘಡಗಳಿಂದ 24 ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದು, ರಾಜ್ಯದಾದ್ಯಂತ 558 ಪರಿಹಾರ ಶಿಬಿರಗಳಲ್ಲಿ ಸುಮಾರು 1.28 ಲಕ್ಷ ಜನರು ಆಶ್ರಯ ಪಡೆದಿದ್ದಾರೆ.

    ತ್ರಿಪುರಾ ಪ್ರವಾಹಕ್ಕೆ ಸಿಲುಕಿದವರ ರಕ್ಷಿಸುವ ಸಂದರ್ಭದಲ್ಲಿ ಇಬ್ಬರು ವೀರ ಯೋಧರಾದ ಆಶಿಶ್ ಬೋಸ್ ಮತ್ತು ಚಿರಂಜಿತ್ ಡೇ ಅವರು ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ಅಗಲಿಕೆಯಿಂದ ತೀವ್ರ ದುಃಖವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ. ಅವರ ನಿಸ್ವಾರ್ಥ ಸೇವೆಯನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಮಾಣಿಕ್ ಸಹಾ ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್‌ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ನಕಲಿ ಎನ್‌ಸಿಸಿ ಶಿಬಿರದಲ್ಲಿ ಲೈಂಗಿಕ ದೌರ್ಜನ್ಯ ಕೇಸ್ – ಪ್ರಮುಖ ಆರೋಪಿಯ ತಂದೆ ಸಾವು

    ಕಳೆದ ಎರಡು ದಿನಗಳಲ್ಲಿ ಕಡಿಮೆ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿದ್ದು, ಸೆಪಹಿಜಾಲಾ ಜಿಲ್ಲೆಯ ಸೋನಮುರಾದಲ್ಲಿ ಗೋಮತಿ ನದಿಯನ್ನು ಹೊರತುಪಡಿಸಿ ಎಲ್ಲಾ ನದಿಗಳಲ್ಲಿ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಕೆಳಗಿಳಿದಿದೆ. ರಾಜ್ಯಾದ್ಯಂತ ಪ್ರವಾಹದಿಂದಾಗಿ ಸುಮಾರು 5,000 ಕೋಟಿ ರೂ.ನಷ್ಟು ನಷ್ಟವಾಗಿದೆ ಎಂದರು ವರದಿಯಾಗಿದೆ.

  • ಜಮ್ಮು-ಕಾಶ್ಮೀರ; ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ

    ಜಮ್ಮು-ಕಾಶ್ಮೀರ; ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಅನಂತನಾಗ್ ಜಿಲ್ಲೆಯಲ್ಲಿ ಇಂದು ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು (Soldiers) ಹುತಾತ್ಮರಾಗಿದ್ದಾರೆ. ಓರ್ವ ಯೋಧ ಹಾಗೂ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ.

    ಇಂದು ಮಧ್ಯಾಹ್ನ ಅನಂತ್‌ನಾಗ್ ಜಿಲ್ಲೆಯ ಅಹ್ಲಾನ್ ಗಡೋಲ್‌ನಲ್ಲಿ ಎನ್‌ಕೌಂಟರ್ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಕರ್ನಾಗ್ ಉಪವಿಭಾಗದ ಅರಣ್ಯದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಭಯೋತ್ಪಾದಕರು ಸೇನೆಯ ಗಸ್ತು ತಿರುಗುವಿಕೆಯನ್ನು ಗುರಿಯಾಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಲಂಚವಾಗಿ 5 ಕೆಜಿ ಆಲುಗಡ್ಡೆಗೆ ಬೇಡಿಕೆಯಿಟ್ಟಿದ್ದ ಸಬ್‌ ಇನ್‌ಸ್ಪೆಕ್ಟರ್‌ ಅಮಾನತು

    ವಿದೇಶಿಯರು ಎಂದು ಶಂಕಿಸಲಾದ ಭಯೋತ್ಪಾದರನ್ನು ಮಟ್ಟಹಾಕಲು ಸೇನೆಯ ವಿಶೇಷ ಪಡೆಗಳು, ಪ್ಯಾರಾಟ್ರೂಪರ್‌ಗಳು ಕಾರ್ಯಾಚರಣೆಯಲ್ಲಿದ್ದಾರೆ. ಕಳೆದ ಒಂದು ವರ್ಷದಲ್ಲಿ ಕೋಕರ್‌ನಾಗ್‌ನಲ್ಲಿ ನಡೆದ ಎನ್‌ಕೌಂಟರ್‌ ಬಿಟ್ಟರೆ, ಇದು ಎರಡನೇ ಪ್ರಮುಖ ಗುಂಡಿನ ಚಕಮಕಿಯಾಗಿದೆ.

    ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಅವರಿಗೆ ತಕ್ಷಣದ ವೈದ್ಯಕೀಯ ನೆರವು ಒದಗಿಸಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ತಿಳಿಸಿದೆ. ಇದನ್ನೂ ಓದಿ: ಈ ಗ್ರಾಮದಲ್ಲಿ ಧೂಮಪಾನ ಮಾಡುವಂತಿಲ್ಲ, ಅರ್ಧಂಬರ್ಧ ಬಟ್ಟೆ ಧರಿಸುವಂತಿಲ್ಲ – ಯಾಕೆ ಗೊತ್ತಾ?

    ಸೆಪ್ಟೆಂಬರ್ 2023 ರಲ್ಲಿ, ಕೋಕರ್ನಾಗ್ ಅರಣ್ಯದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಕಮಾಂಡಿಂಗ್ ಆಫೀಸರ್, ಮೇಜರ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಹುತಾತ್ಮರಾಗಿದ್ದರು.

  • ಯೋಧರಿಗಾಗಿ ಇಂದೋರ್‌ ಐಐಟಿಯಿಂದ ಹೈಟೆಕ್‌ ಬೂಟುಗಳ ಆವಿಷ್ಕಾರ! ವಿಶೇಷತೆ ಏನು?

    ಯೋಧರಿಗಾಗಿ ಇಂದೋರ್‌ ಐಐಟಿಯಿಂದ ಹೈಟೆಕ್‌ ಬೂಟುಗಳ ಆವಿಷ್ಕಾರ! ವಿಶೇಷತೆ ಏನು?

    ಮ್ಮ ಪ್ರಾಣವನ್ನು ಲೆಕ್ಕಿಸದೇ ದೇಶದ ಗಡಿ ಕಾಯುವ ಯೋಧರಿಗಾಗಿ (Soldiers) ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಇಂದೋರ್‌ (IIT Indore) ವಿಶೇಷವಾದ ಬೂಟುಗಳನ್ನು ವಿನ್ಯಾಸಗೊಳಿಸಿದೆ. ಈ ಬೂಟುಗಳು ತುಂಬಾ ವಿಶೇಷವಾಗಿದ್ದು, ಯೋಧರಿಗೆ ಬಹಳ ಅನುಕೂಲವಾಗಿದೆ. ಈ ಬೂಟುಗಳಲ್ಲಿ ವಿಶೇಷ ಏನಿದೆ? ಇದರಿಂದ ಸೇನಾಪಡೆಗೆ ಏನು ಉಪಯೋಗ ಎಂಬುದನ್ನು ಈ ಕೆಳಗೆ ವಿವರಿಸಲಾಗಿದೆ.

    ಯೋಧರ ಸುರಕ್ಷತೆಗಾಗಿ ಇಂದೋರ್‌ ಐಐಟಿ ವಿಶೇಷ ಬೂಟುಗಳನ್ನು ಅನಾವರಣಗೊಳಿಸಿದ್ದು, ಈ ಬೂಟುಗಳು ವಿದ್ಯುತ್‌ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೇ ಯೋಧ ಇರುವ ಸ್ಥಳವನ್ನು ಸಹ ಈ ಬೂಟುಗಳ ಸಹಾಯದಿಂದ ತಿಳಿದುಕೊಳ್ಳಬಹುದಾಗಿದೆ.

    ಬೂಟುಗಳ ಅಡಿಭಾಗದಲ್ಲಿ ವಿದ್ಯುತ್‌ ಉತ್ಪಾದನೆ:
    ಈ ಸುಧಾರಿತ ಶೂಗಳ ವಿಶೇಷತೆ ಏನೆಂದರೆ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯ. ಸೈನಿಕನ ಚಲನವಲನದಿಂದ ಚಲನ ಶಕ್ತಿಯನ್ನು ಸೆರೆಹಿಡಿಯುವ ವಿಶಿಷ್ಟ ತಂತ್ರಜ್ಞಾನದೊಂದಿಗೆ ಶೂಗಳನ್ನು ವಿನ್ಯಾಸಗೊಳಿಸಲಾಗಿದೆ. ಈ ಶಕ್ತಿಯನ್ನು ನಂತರ ಶೂಗಳ ಅಡಿಭಾಗದಲ್ಲಿ ಅಳವಡಿಸಲಾಗಿರುವ ಸಾಧನದಲ್ಲಿ ಸಂಗ್ರಹಿಸಲಾಗುತ್ತದೆ. ಸಂಗ್ರಹಿಸಿದ ವಿದ್ಯುತ್ ಅನ್ನು ಸಣ್ಣ ಉಪಕರಣಗಳಿಗೆ ಬಳಸಬಹುದು, ಕ್ಷೇತ್ರದಲ್ಲಿ ಸೈನಿಕರಿಗೆ ಅನುಕೂಲಕರ ಮತ್ತು ಪೋರ್ಟಬಲ್ ಶಕ್ತಿಯ ಮೂಲವನ್ನು ನೀಡುತ್ತದೆ.

    ಈ ಆವಿಷ್ಕಾರವು ಸೈನಿಕರಿಗೆ ವಿಶ್ವಾಸಾರ್ಹ ಶಕ್ತಿಯ ಮೂಲವನ್ನು ಒದಗಿಸುವ ಮೂಲಕ ಸ್ವಾಯತ್ತತೆಯನ್ನು ಹೆಚ್ಚಿಸುವುದಲ್ಲದೇ ಬಾಹ್ಯ ವಿದ್ಯುತ್ ಸರಬರಾಜುಗಳ ಮೇಲಿನ ಅವರ ಅವಲಂಬನೆಯನ್ನು ಕಡಿಮೆ ಮಾಡುತ್ತದೆ. 

    GPS, RFID ಜೊತೆಗೆ ನೈಜ-ಸಮಯದ ಸ್ಥಳ ಟ್ರ್ಯಾಕಿಂಗ್:
    ವಿದ್ಯುತ್ ಉತ್ಪಾದಿಸುವುದರ ಜೊತೆಗೆ, ಈ ವಿಶೇಷ ಶೂಗಳು ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ (GPS) ಮತ್ತು ರೇಡಿಯೊ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್ (RFID) ತಂತ್ರಜ್ಞಾನಗಳೊಂದಿಗೆ ಅಳವಡಿಸಲ್ಪಟ್ಟಿವೆ. ಈ ವ್ಯವಸ್ಥೆಗಳು ಶೂ ಧರಿಸಿರುವ ಸೈನಿಕನ ಸ್ಥಳ ಟ್ರ್ಯಾಕಿಂಗ್ ಅನ್ನು ಸಕ್ರಿಯಗೊಳಿಸುತ್ತವೆ. ಇದರಿಂದ ಮಿಲಿಟರಿ ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬಹುದು.

    GPS ಮೂಲಕ ಸೈನಿಕರ ನಿಖರವಾದ ಸ್ಥಳವನ್ನು ಯಾವುದೇ ಕ್ಷಣದಲ್ಲಿ ನಿರ್ಧರಿಸಬಹುದು.ಅಲ್ಲದೇ ಇದು ಕಾರ್ಯತಂತ್ರದ ಯೋಜನೆಯನ್ನು ಸುಗಮಗೊಳಿಸುತ್ತದೆ. ಇದರಿಂದ ವಿವಿಧ ಕಾರ್ಯಾಚರಣೆಯ ಸನ್ನಿವೇಶಗಳಲ್ಲಿ ಸೈನಿಕರ ಚಲನವಲನಗಳು ಮತ್ತು ಇರುವಿಕೆಯನ್ನು ಸುಲಭವಾಗಿ ಕಂಡುಕೊಳ್ಳಬಹುದು.

    DRDO ನೊಂದಿಗೆ ಸಹಯೋಗ:
    ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಇಂದೋರ್ ಈಗಾಗಲೇ ಈ ಶೂಗಳ 10 ಜೋಡಿಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗೆ (ಡಿಆರ್‌ಡಿಒ) ಪೂರೈಸುವ ಮೂಲಕ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಹಯೋಗವು ಭಾರತೀಯ ಸಶಸ್ತ್ರ ಪಡೆಗಳಿಗೆ ಪ್ರಮಾಣಿತ ಸಾಧನವಾಗಿ ಪರಿಣಮಿಸುವ ಈ ಶೂಗಳ ಸಾಮರ್ಥ್ಯವನ್ನು ಒತ್ತಿಹೇಳುತ್ತದೆ. ಕಾರ್ಯಾಚರಣೆಯ ಸಾಮರ್ಥ್ಯವನ್ನು ಹೆಚ್ಚಿಸುವುದಲ್ಲದೇ ಸಿಬ್ಬಂದಿಗಳ ಸುರಕ್ಷತೆಯನ್ನು ಕೂಡ ಇದು ಖಾತ್ರಿಪಡಿಸುತ್ತದೆ.

    ವಿದ್ಯುತ್ ಉತ್ಪಾದನೆ ಮತ್ತು ನೈಜ-ಸಮಯದ ಸ್ಥಳ ಟ್ರ್ಯಾಕಿಂಗ್ ಅನ್ನು ಸಂಯೋಜಿಸುವ ಮೂಲಕ, IIT ಇಂದೋರ್ ಸೈನಿಕರು ಎದುರಿಸುತ್ತಿರುವ ಪ್ರಾಯೋಗಿಕ ಸವಾಲುಗಳನ್ನು ಪರಿಹರಿಸಿದೆ. ಈ ಬೂಟುಗಳು ಮತ್ತಷ್ಟು ಪರೀಕ್ಷೆ ಮತ್ತು ನಿಯೋಜನೆಗೆ ಒಳಗಾಗುವುದರಿಂದ, ಅವು ಸೈನಿಕರ ಕಾರ್ಯಾಚರಣೆಯ ದಕ್ಷತೆ ಮತ್ತು ಸುರಕ್ಷತೆಯಲ್ಲಿ ಗಮನಾರ್ಹ ಸುಧಾರಣೆಗಳನ್ನು ತರುತ್ತವೆ ಎಂದು ನಿರೀಕ್ಷಿಸಲಾಗಿದೆ. ಪ್ರಯಾಣದಲ್ಲಿರುವಾಗ ವಿದ್ಯುಚ್ಛಕ್ತಿಯನ್ನು ಉತ್ಪಾದಿಸುವ ಸಾಮರ್ಥ್ಯ ಮತ್ತು ಲೊಕೇಶನ್‌ ಟ್ರ್ಯಾಂಕಿಂಗ್‌ ಸಿಸ್ಟಮ್ ಸೇನಾಪಡೆಗೆ ಮತ್ತಷ್ಟು ಬಲ ತುಂಬುತ್ತದೆ.

    ಐಐಟಿ ಇಂದೋರ್ ನಿರ್ದೇಶಕ ಪ್ರೊಫೆಸರ್ ಸುಹಾಸ್  ಜೋಶಿ  ಈ ಕುರಿತು ಮಾತನಾಡಿ, ಈ ಶೂಗಳ ನವೀನ ವೈಶಿಷ್ಟ್ಯಗಳು ಸೇನಾ ಸಿಬ್ಬಂದಿಯ ಸುರಕ್ಷತೆ, ಸಮನ್ವಯ ಮತ್ತು ದಕ್ಷತೆಯನ್ನು ಹೆಚ್ಚಿಸುತ್ತದೆ. ಅಧಿಕಾರಿಗಳ ಪ್ರಕಾರ, ಪ್ರೊಫೆಸರ್ ಐಎ ಪಳನಿ ಅವರ ಮಾರ್ಗದರ್ಶನದಲ್ಲಿ ತಯಾರಿಸಲಾದ ಈ ಬೂಟುಗಳು ಟ್ರಿಬೋ-ಎಲೆಕ್ಟ್ರಿಕ್ ನ್ಯಾನೊಜೆನರೇಟರ್ (TENG) ತಂತ್ರಜ್ಞಾನದೊಂದಿಗೆ ಶಕ್ತಗೊಂಡಿದ್ದು, ಪ್ರತಿ ಹಂತದಲ್ಲೂ ವಿದ್ಯುತ್ ಉತ್ಪಾದಿಸಬಹುದು. ಅಡಿಭಾಗದಲ್ಲಿರುವ ಸಾಧನದಲ್ಲಿ ವಿದ್ಯುತ್ ಸಂಗ್ರಹವಾಗುತ್ತದೆ. ಇದರಿಂದ ಸಣ್ಣ ಉಪಕರಣಗಳನ್ನು ಕಾರ್ಯನಿರ್ವಹಿಸಲು ಬಳಸಬಹುದು ಎಂದು ತಿಳಿಸಿದ್ಧಾರೆ..

    ಜಿಪಿಎಸ್ ಮತ್ತು ರೇಡಿಯೊ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್ (ಆರ್‌ಎಫ್‌ಐಡಿ) ತಂತ್ರಜ್ಞಾನಗಳನ್ನು ಹೊಂದಿರುವ ಈ ಶೂಗಳು ನೈಜ ಸಮಯದಲ್ಲಿ ಸಿಬ್ಬಂದಿಯ ಸ್ಥಳವನ್ನು ನಿರ್ಧರಿಸಲು ಸಹಾಯ ಮಾಡುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    TENG ತಂತ್ರಜ್ಞಾನವನ್ನು ಅಲ್ಝೈಮರ್‌ನಿಂದ ಬಳಲುತ್ತಿರುವವರು ಕೂಡ ಬಳಸಬಹುದಾಗಿದೆ. ಇಷ್ಟು ಮಾತ್ರವಲ್ಲದೇ, ಶಾಲಾ ಮಕ್ಕಳು ಮತ್ತು ಪರ್ವತಾರೋಹಿಗಳ ಸ್ಥಳವನ್ನು ಪತ್ತೆಹಚ್ಚಲು, ಕಾರ್ಖಾನೆಗಳಲ್ಲಿನ ಕಾರ್ಮಿಕರ ಹಾಜರಾತಿ ಮತ್ತು ಕೆಲಸದ ಮೇಲ್ವಿಚಾರಣೆಗೆ ಈ ಬೂಟುಗಳು ಸಹಾಯ ಮಾಡಬಹುದು ಎಂದು ವರದಿಗಳು ತಿಳಿಸಿವೆ.

    ಇನ್ನೂ ಈ ಶೂಗಳು ಕ್ರೀಡಾಪಟುಗಳ ಚಲನವಲನವನ್ನು, ಪ್ರದರ್ಶನವನ್ನು ನಿಖರವಾಗಿ ವಿಶ್ಲೇಷಿಸಲು ಸಹಾಯ ಮಾಡುತ್ತದೆ.ಬ ಅಲ್ಲದೇ ಕಾರ್ಯನಿರತ ಪೋಷಕರು ತಮ್ಮ ಮಕ್ಕಳ ಇರುವಿಕೆಯ ಬಗ್ಗೆ ಶಾಲೆಯ ದಿನದಾದ್ಯಂತ ಮೇಲ್ವಿಚಾರಣೆ ಮಾಡಬಹುದು ಮತ್ತು ನಿಖರವಾದ ಹಾಜರಾತಿ ದಾಖಲೆಗಳನ್ನು ನಿರ್ವಹಿಸಲು ಶಾಲೆಗಳು RFID ತಂತ್ರಜ್ಞಾನವನ್ನು ಬಳಸಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

  • ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌ಗೆ ನಾಲ್ವರು ಉಗ್ರರು ಬಲಿ – ಇಬ್ಬರು ಯೋಧರು ಹುತಾತ್ಮ

    ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌ಗೆ ನಾಲ್ವರು ಉಗ್ರರು ಬಲಿ – ಇಬ್ಬರು ಯೋಧರು ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆಯು (Indian Army) ಹೊಡೆದುರುಳಿಸಿದೆ.

    ಜಿಲ್ಲೆಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರ ಉಪಟಳದ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಡೆಸಿತು. ಈ ಸಂದರ್ಭದಲ್ಲಿ ಒಂದರ ಹಿಂದೆ ಒಂದು ಎಂಬಂತೆ ಎನ್‌ಕೌಂಟರ್‌ಗಳು ನಡೆದವು. ಇದನ್ನೂ ಓದಿ: ಕಾಶ್ಮೀರದಲ್ಲಿ ಭಯೋತ್ಪಾದಕರು-ಭದ್ರತಾಪಡೆಗಳ ನಡುವೆ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ

    ಮೊಡೆರ್ಗಾಮ್ ಗ್ರಾಮದಲ್ಲಿ ಕನಿಷ್ಠ ಇಬ್ಬರು ಭಯೋತ್ಪಾದಕರು (Terrorists) ಇದ್ದಾರೆ ಎಂಬ ಮಾಹಿತಿ ಆಧರಿಸಿ ಮನೆಯ ಮೇಲೆ ಸಿಆರ್‌ಪಿಎಫ್, ಸೇನೆ ಮತ್ತು ಸ್ಥಳೀಯ ಪೊಲೀಸರ ಜಂಟಿ ಪಡೆಗಳು ದಾಳಿ ನಡೆಸಿತು. ದಾಳಿಯ ಸಮಯದಲ್ಲಿ ಭಯೋತ್ಪಾದಕರ ಗುಂಡಿನ ದಾಳಿ ಪರಿಣಾಮವಾಗಿ ಯೋಧರೊಬ್ಬರು ಹುತಾತ್ಮರಾದರು.

    ಕುಲ್ಗಾಮ್‌ನ ಫ್ರಿಸಾಲ್ ಪ್ರದೇಶದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರು ಬಲಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಓರ್ವ ಸೇನಾ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಇದನ್ನೂ ಓದಿ: SEBEX 2: ಭಾರತದಿಂದ ಪರಮಾಣು ರಹಿತ ಬಾಂಬ್‌ ಅಭಿವೃದ್ಧಿ – ಶತ್ರು ರಾಷ್ಟ್ರಗಳಲ್ಲಿ ಹೆಚ್ಚಿದ ನಡುಕ!

    ಉದ್ದೇಶಿತ ಸ್ಥಳದಿಂದ ಭಾರಿ ಗುಂಡಿನ ದಾಳಿಯ ನಡುವೆ ಭಯೋತ್ಪಾದಕರ ಮೃತದೇಹಗಳನ್ನು ಹೊರತೆಗೆಯಲು ಸಾಧ್ಯವಾಗಲಿಲ್ಲ. ಎನ್‌ಕೌಂಟರ್ ಸ್ಥಳದಲ್ಲಿ ಇನ್ನೂ ಇಬ್ಬರು ಉಗ್ರರು ಇದ್ದಾರೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

  • ಕಾಂಬೋಡಿಯಾದ ಸೇನಾನೆಲೆಯಲ್ಲಿ ಮದ್ದುಗುಂಡುಗಳ ಸ್ಫೋಟ – 20 ಸೈನಿಕರು ಸಾವು

    ಕಾಂಬೋಡಿಯಾದ ಸೇನಾನೆಲೆಯಲ್ಲಿ ಮದ್ದುಗುಂಡುಗಳ ಸ್ಫೋಟ – 20 ಸೈನಿಕರು ಸಾವು

    ನಾಮ್ ಪೆನ್: ಕಾಂಬೋಡಿಯಾ (Cambodia) ದೇಶದ ಪಶ್ಚಿಮ ಭಾಗದಲ್ಲಿರುವ ಸೇನಾ ನೆಲೆಯಲ್ಲಿ ಮದ್ದುಗುಂಡುಗಳು ಸ್ಫೋಟಗೊಂಡ (Ammunition Explosion) ಪರಿಣಾಮ ಇಪ್ಪತ್ತು ಸೈನಿಕರು (Soldiers) ಮೃತಪಟ್ಟಿದ್ದಾರೆ ಎಂದು ಕಾಂಬೋಡಿಯಾ ಪ್ರಧಾನಿ ಹನ್ ಮಾನೆಟ್ (Hun Manet) ಶನಿವಾರ ತಿಳಿಸಿದ್ದಾರೆ.

    ಘಟನೆ ಕುರಿತು ಪ್ರಧಾನಿ ಹನ್ ಮಾನೆಟ್ ಫೇಸ್‌ಬುಕ್‌ನಲ್ಲಿ ಮಾಹಿತಿ ನೀಡಿದ್ದು, ಸೈನಿಕರ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಏಪ್ರಿಲ್ 27, 2024ರ ಶನಿವಾರ ಮಧ್ಯಾಹ್ನ ಕಂಪಾಂಗ್ ಸ್ಪ್ಯೂ ಪ್ರಾಂತ್ಯದ 3ನೇ ಮಿಲಿಟರಿ ಗ್ರಾಮದಲ್ಲಿ ಸ್ಫೋಟದ ಸುದ್ದಿಯನ್ನು ಕೇಳಿ ಆಘಾತವಾಯಿತು. ಘಟನೆಯಲ್ಲಿ 20 ಸೈನಿಕರು ಮೃತಪಟ್ಟಿದ್ದು, ಹಲವು ಸೈನಿಕರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಸೈನಿಕರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಾಳು ಸೈನಿಕರು ಶೀಘ್ರವೇ ಗುಣಮುಖರಾಗಲಿ ಎಂದು ಹನ್ ಮಾನೆಟ್ ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಒಬ್ಬ ನಾಡದ್ರೋಹಿ: ಡಿಕೆಶಿ ವಾಗ್ದಾಳಿ

    ಅಲ್ಲದೇ ಈ ದುರಂತದಲ್ಲಿ ಮೃತಪಟ್ಟ ಸೈನಿಕರ ಅಂತ್ಯಕ್ರಿಯೆಯ ವೆಚ್ಚದ ಸಂಪೂರ್ಣ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಲಿದೆ. ಮೃತ ಸೈನಿಕರ ಕುಟುಂಬಕ್ಕೆ ತಲಾ 20 ಮಿಲಿಯನ್ ಯುಎಸ್ ಡಾಲರ್ ಮತ್ತು ಘಟನೆಯಲ್ಲಿ ಗಾಯಗೊಂಡ ಸೈನಿಕರಿಗೆ ತಲಾ 20 ಮಿಲಿಯನ್ ರಿಯೆಲ್ ಆರ್ಥಿಕ ನೆರವು ನೀಡುತ್ತೇನೆ ಎಂದು ಹನ್ ಮಾನೆಟ್ ತಿಳಿಸಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ, ಇನ್ಸುಲಿನ್ ಡೋಸ್ ಮುಂದುವರಿಸಲು ಏಮ್ಸ್ ಮೆಡಿಕಲ್ ಬೋರ್ಡ್ ಸಲಹೆ

  • ಲೇಹ್‌ನಲ್ಲಿ ಸೈನಿಕರೊಂದಿಗೆ ಹೋಳಿ ಆಚರಿಸಿದ ರಾಜನಾಥ್ ಸಿಂಗ್

    ಲೇಹ್‌ನಲ್ಲಿ ಸೈನಿಕರೊಂದಿಗೆ ಹೋಳಿ ಆಚರಿಸಿದ ರಾಜನಾಥ್ ಸಿಂಗ್

    ನವದೆಹಲಿ: ಹೋಳಿ (Holi) ಹಬ್ಬದ ಪ್ರಯುಕ್ತ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಲಡಾಖ್‌ನ (Ladakh) ಲೇಹ್‌ಗೆ (Leh) ತೆರಳಿ ಭಾನುವಾರ ಸೈನಿಕರೊಂದಿಗೆ (Soldiers) ಬಣ್ಣದ ಹಬ್ಬ ಹೋಳಿಯನ್ನು ಆಚರಿಸಿದರು.

    ಹೋಳಿ ಹಬ್ಬ ಆಚರಣೆ ವೇಳೆ ರಾಜನಾಥ್ ಸಿಂಗ್ ಜೊತೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಲೆಫ್ಟಿನೆಂಟ್ ಜನರಲ್ ರಶೀಮ್ ಬಾಲಿ ಉಪಸ್ಥಿತರಿದ್ದರು. ಇದಕ್ಕೂ ಮೊದಲು ರಕ್ಷಣಾ ಸಚಿವರು ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ (Siachen) ಪ್ರದೇಶಕ್ಕೆ ಭೇಟಿ ನೀಡಲು ನಿರ್ಧರಿಸಿದ್ದರು. ಆದರೆ ಪ್ರತಿಕೂಲ ಹವಾಮಾನದಿಂದ ಅದು ಸಾಧ್ಯವಾಗಲಿಲ್ಲ. ಭೇಟಿ ಅಸಾಧ್ಯವಾದ ಹಿನ್ನೆಲೆ ಅಲ್ಲಿನ ಕಮಾಂಡಿಂಗ್ ಅಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ರಾಜನಾಥ್ ಸಿಂಗ್, ಆದಷ್ಟು ಬೇಗ ಸಿಯಾಚಿನ್ ಪ್ರದೇಶಕ್ಕೆ ಭೇಟಿ ನೀಡಿ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದರು. ಇದನ್ನೂ ಓದಿ: ನಿವೃತ್ತ ವಾಯುಸೇನೆ ಮುಖ್ಯಸ್ಥ ಭದೌರಿಯಾ ಬಿಜೆಪಿ ಸೇರ್ಪಡೆ

    ಈ ಸಂದರ್ಭದಲ್ಲಿ ಯೋಧರನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ನಮ್ಮ ರಾಜಧಾನಿಯಾದರೇ, ಲಡಾಖ್ ಶೌರ್ಯವನ್ನು ತೋರಿಸುವ ಮತ್ತೊಂದು ರಾಜಧಾನಿಯಾಗಿದೆ. ನಿಮ್ಮೆಲ್ಲರನ್ನು ಭೇಟಿ ಮಾಡಿ ಹೋಳಿ ಆಚರಿಸಿರುವುದು ನನಗೆ ಅತ್ಯಂತ ಸಂತೋಷದಾಯಕ ಕ್ಷಣ. ಸಿಯಾಚಿನ್ ಸಾಮಾನ್ಯ ಪ್ರದೇಶವಲ್ಲ. ಇದು ಭಾರತದ ಸಾರ್ವಭೌಮತ್ವ ಮತ್ತು ನಿರ್ಣಯದ ಸಂಕೇತ. ಇದು ನಮ್ಮ ರಾಷ್ಟ್ರೀಯ ನಿರ್ಣಯವನ್ನು ಪ್ರತಿನಿಧಿಸುತ್ತದೆ ಎಂದರು. ಇದನ್ನೂ ಓದಿ: ಇಡಿ ಕಸ್ಟಡಿಯಲ್ಲಿದ್ದುಕೊಂಡೇ ಮೊದಲ ಸರ್ಕಾರಿ ಆದೇಶ ಹೊರಡಿಸಿದ ಕೇಜ್ರಿವಾಲ್‌ – ಆದೇಶದಲ್ಲಿ ಏನಿದೆ?

    ನಿಮ್ಮನ್ನು, ನಿಮ್ಮ ಮಕ್ಕಳನ್ನು, ನಿಮ್ಮ ಹೆತ್ತವರನ್ನು, ಕುಟುಂಬವನ್ನು ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಅದಕ್ಕೆ ನಾವು ಯಾವಾಗಲೂ ಸಿದ್ಧರಿದ್ದೇವೆ. ನಾನು ನಿಮಗೆ ಏನನ್ನೂ ಹೇಳಬೇಕಿಲ್ಲ. ನೀವು ನಿಮ್ಮ ದೇಹ ಮತ್ತು ಮನಸ್ಸನ್ನು ಅರ್ಪಿಸಿ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೀರಿ. ನಮ್ಮ ಸರ್ಕಾರವೂ ಸಶಸ್ತ್ರಪಡೆಗಳ ಸುಧಾರಣೆಗಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಉಗ್ರನಾಗಲು ಐಸಿಸ್‌ ಸೇರಲು ಮುಂದಾಗಿದ್ದ ಐಐಟಿ ವಿದ್ಯಾರ್ಥಿ ವಶಕ್ಕೆ

  • ಜಮ್ಮು ಕಾಶ್ಮೀರದಲ್ಲಿ ಉಗ್ರರ ಜೊತೆ ಗುಂಡಿನ ಚಕಮಕಿ – ಐವರು ಯೋಧರು ಹುತಾತ್ಮ, ಮೂವರಿಗೆ ಗಾಯ

    ಜಮ್ಮು ಕಾಶ್ಮೀರದಲ್ಲಿ ಉಗ್ರರ ಜೊತೆ ಗುಂಡಿನ ಚಕಮಕಿ – ಐವರು ಯೋಧರು ಹುತಾತ್ಮ, ಮೂವರಿಗೆ ಗಾಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಪೂಂಚ್ ಜಿಲ್ಲೆಯಲ್ಲಿ ಉಗ್ರರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಐವರು ಯೋಧರು (Five Soldiers ) ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ.

    ಗುರುವಾರ ಮಧ್ಯಾಹ್ನ 3:45ಕ್ಕೆ ರಾಜೌರಿಯ ಪೂಂಚ್ ಪ್ರದೇಶದಲ್ಲಿ ಡೇರಾ ಕಿ ಗಲಿ ಮೂಲಕ ಸಾಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ನಂತರ ಎನ್‌ಕೌಂಟರ್ ಆರಂಭವಾಗಿದೆ.  ಇದನ್ನೂ ಓದಿ: ಹರಿಣರ ಬೇಟೆಯಾಡಿ ಸರಣಿ ಗೆದ್ದ ಭಾರತ – ಧೋನಿ ಟ್ರೆಂಡ್‌ ಮುಂದುವರಿಸಿದ ಕೆ.ಎಲ್‌ ರಾಹುಲ್‌

    ಬುಧವಾರ ರಾತ್ರಿಯಿಂದ ಡಿಕೆಜಿ ಪ್ರದೇಶ ಎಂದು ಕರೆಯಲ್ಪಡುವ ಡೇರಾ ಕಿ ಗಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಈ ಪ್ರದೇಶವು ಭಯೋತ್ಪಾದಕರ ತಾಣವಾಗಿದೆ ಮತ್ತು ಕಳೆದ ಕೆಲವು ವರ್ಷಗಳಿಂದ ಸೇನೆಯ ಮೇಲೆ ಪ್ರಮುಖ ದಾಳಿಗಳು ಈ ಭಾಗದಲ್ಲಿ ನಡೆಯುತ್ತಿದೆ. ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನ ಟರ್ಮಿನಲ್‌ 2ಗೆ ವಿಶ್ವದ ಸುಂದರ ವಿಮಾನ ನಿಲ್ದಾಣ ಗೌರವ

    ಕಳೆದ ಎರಡು ವರ್ಷಗಳಲ್ಲಿ ಈ ಪ್ರದೇಶದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ 35ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ.

     

  • ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನ ಗುರಿಯಾಗಿಸಿ ಉಗ್ರರ ದಾಳಿ – ಮೂವರು ಯೋಧರು ಹುತಾತ್ಮ

    ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನ ಗುರಿಯಾಗಿಸಿ ಉಗ್ರರ ದಾಳಿ – ಮೂವರು ಯೋಧರು ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು (Soldiers) ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ.

    ಇಂದು (ಗುರುವಾರ) ಮಧ್ಯಾಹ್ನ 3:45ಕ್ಕೆ ರಾಜೌರಿಯ ಪೂಂಚ್ ಪ್ರದೇಶದಲ್ಲಿ ಡೇರಾ ಕಿ ಗಲಿ ಮೂಲಕ ಹಾದು ಹೋಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚುಹಾಕಿ ದಾಳಿ ನಡೆಸಿದರು. ಈ ವೇಳೆ ಎನ್‌ಕೌಂಟರ್ ನಡೆಸಲಾಗಿತ್ತು. ಇದನ್ನೂ ಓದಿ: ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷಗಿರಿಗೆ ಬ್ರಿಜ್ ಭೂಷಣ್ ಬೆಂಬಲಿತ ಅಭ್ಯರ್ಥಿ ಆಯ್ಕೆ

    ಸೇನೆಯು ಬುಧವಾರ ರಾತ್ರಿಯಿಂದ ಡಿಕೆಜಿ ಪ್ರದೇಶ ಎಂದು ಕರೆಯಲ್ಪಡುವ ಡೇರಾ ಕಿ ಗಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಉಗ್ರರ ವಿರುದ್ಧ ಎನ್‌ಕೌಂಟರ್ ಮುಂದುವರಿದಿದೆ.

    ಕಳೆದ ರಾತ್ರಿ ಡಿಕೆಜಿಯ ಸಾಮಾನ್ಯ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಇಂದು ಸಂಜೆ ಸಂಪರ್ಕವನ್ನು ಸ್ಥಾಪಿಸಲಾಗಿದೆ. ಎನ್‌ಕೌಂಟರ್ ಪ್ರಗತಿಯಲ್ಲಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಸಂಸದರಿಗೇ ರಕ್ಷಣೆ ಇಲ್ಲ, ಬೇರೆಯವ್ರಿಗೆ ಹೇಗೆ ಎಂದು ಪ್ರಶ್ನಿಸಿದ ನಮ್ಮನ್ನೂ ಅಮಾನತು ಮಾಡಿದ್ರು: ಡಿಕೆ‌ ಸುರೇಶ್

    ಕಳೆದ ತಿಂಗಳು, ರಾಜೌರಿಯ ಕಲಾಕೋಟೆಯಲ್ಲಿ ಸೇನೆ ಮತ್ತು ಅದರ ವಿಶೇಷ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಿದ ನಂತರ ಇಬ್ಬರು ಕ್ಯಾಪ್ಟನ್‌ಗಳು ಸೇರಿದಂತೆ ಐವರು ಸೈನಿಕರು ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದರು.

    ಈ ಪ್ರದೇಶವು ಭಯೋತ್ಪಾದಕರ ತಾಣವಾಗಿದೆ. ಕಳೆದ ಕೆಲವು ವರ್ಷಗಳಿಂದ ಸೇನೆಯ ಮೇಲೆ ಪ್ರಮುಖ ದಾಳಿಯ ತಾಣವಾಗಿದೆ. ಈ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ರಾಜೌರಿ-ಪೂಂಚ್ ಪ್ರದೇಶದಲ್ಲಿನ ಅವಳಿ ದಾಳಿಯಲ್ಲಿ 10 ಯೋಧರು ಹುತಾತ್ಮರಾಗಿದ್ದರು. ಈ ಪ್ರದೇಶವು 2003 ಮತ್ತು 2021 ರ ನಡುವೆ ಭಯೋತ್ಪಾದನೆಯಿಂದ ಮುಕ್ತವಾಗಿತ್ತು. ನಂತರ ಆಗಾಗ್ಗೆ ಎನ್‌ಕೌಂಟರ್‌ಗಳು ನಡೆಯುತ್ತಿದ್ದವು. ಇದನ್ನೂ ಓದಿ: ಲೋಕಸಭೆಯಲ್ಲಿ ಸ್ಮೋಕ್ ಬಾಂಬ್ ಸ್ಫೋಟ ಪ್ರಕರಣ – ಸಂಸತ್ ಭವನಕ್ಕೆ CISFನಿಂದ ಭದ್ರತೆ?

    ಕಳೆದ ಎರಡು ವರ್ಷಗಳಲ್ಲಿ ಈ ಪ್ರದೇಶದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ 35 ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ.