Tag: Somashekhar Reddy

  • ಒಂದು ವರ್ಷದಲ್ಲಾಗುವ ಅಭಿವೃದ್ಧಿ 100 ದಿನಗಳಲ್ಲಿ ಮಾಡಿದ್ದಾರೆ ಬಿಎಸ್‍ವೈ: ಸೋಮಶೇಖರ ರೆಡ್ಡಿ

    ಒಂದು ವರ್ಷದಲ್ಲಾಗುವ ಅಭಿವೃದ್ಧಿ 100 ದಿನಗಳಲ್ಲಿ ಮಾಡಿದ್ದಾರೆ ಬಿಎಸ್‍ವೈ: ಸೋಮಶೇಖರ ರೆಡ್ಡಿ

    – ನಮ್ಮ ಸರ್ಕಾರದಿಂದ ಅಭಿವೃದ್ಧಿಪರ್ವ ರಾಜ್ಯದಲ್ಲಿ ಆರಂಭ

    ಬಳ್ಳಾರಿ: ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ನಂತರ ಅಭಿವೃದ್ಧಿ ಪರ್ವವೇ ಆರಂಭವಾಗಿದೆ. ಒಂದು ವರ್ಷದಲ್ಲಿ ಮಾಡುವ ಅಭಿವೃದ್ಧಿ ಕಾರ್ಯಗಳನ್ನು ಕೇವಲ 100 ದಿನಗಳಲ್ಲಿ ನಮ್ಮ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಾಡಿದ್ದಾರೆ ಎಂದು ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು ಹೇಳಿದ್ದಾರೆ.

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬೃಹತ್ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿದೆ. ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಪ್ರವಾಹ ಸಂದರ್ಭದಲ್ಲಿ ಸರ್ಕಾರ ಕೈಗೊಂಡ ಕಾರ್ಯಗಳ ಬೃಹತ್ ಛಾಯಾಚಿತ್ರ ಪ್ರದರ್ಶನಕ್ಕೆ ಸೋಮಶೇಖರ ರೆಡ್ಡಿ ಅವರು ಚಾಲನೆ ನೀಡಿದರು.

    ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಭಿವೃದ್ಧಿಯೇ ಆಡಳಿತದ ಮಂತ್ರ ಎನ್ನುವ ಧೇಯದಡಿ ನಮ್ಮ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಬಳ್ಳಾರಿ ನಗರಕ್ಕೆ ನೂರಾರು ಕೋಟಿ ರೂ. ಅನುದಾನವನ್ನು ಸರ್ಕಾರ ಒದಗಿಸಿಕೊಟ್ಟಿದೆ. ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಈ ಛಾಯಾಚಿತ್ರ ಪ್ರದರ್ಶನವೇ ಸಾಕ್ಷಿ ಎಂದರು. ಈ ಛಾಯಾಚಿತ್ರ ಪ್ರದರ್ಶನವನ್ನು ಬಳ್ಳಾರಿಯ ರೈಲ್ವೆ ನಿಲ್ದಾಣದಲ್ಲಿಯೂ ಮಾಡುವಂತೆ ವಾರ್ತಾ ಇಲಾಖೆಯ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.

    ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡುವ ವಿಚಾರ ಈ ಭಾಗದ ಜನರ ಬೇಡಿಕೆಯಾಗಿದೆ. ವಾಲ್ಮೀಕಿ ಸಮುದಾಯದ ಪ್ರಬಲ ನಾಯಕ ಶ್ರೀರಾಮುಲು ಅವರಾಗಿದ್ದು, ಡಿಸಿಎಂ ವಿಷಯದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದು ವಿವರಿಸಿದರು. ಹಾಗೆಯೇ ಅಭಿವೃದ್ಧಿ ವಿಚಾರದಲ್ಲಿ ಬಳ್ಳಾರಿ ಹಿಂದೆ ಬಿದ್ದಿಲ್ಲ ಎಂದು ಸ್ಪಷ್ಟಪಡಿಸಿದರು.

  • ಕಾಲ ಚಕ್ರ ಹೀಗೆ ಇರಲ್ಲ, ಬದಲಾಗುತ್ತೆ: ಸೋಮಶೇಖರ್ ರೆಡ್ಡಿ

    ಕಾಲ ಚಕ್ರ ಹೀಗೆ ಇರಲ್ಲ, ಬದಲಾಗುತ್ತೆ: ಸೋಮಶೇಖರ್ ರೆಡ್ಡಿ

    -ಜನಾರ್ದನ ರೆಡ್ಡಿ ಇದ್ದಿದ್ರೆ ಶ್ರೀರಾಮುಲುಗೆ ಬಲ ಬರ್ತಿತ್ತು
    -ಈಗಲೂ ನಾವೇ ಸ್ಟ್ರಾಂಗ್
    -ವಿಭಜನೆ ಬೇಡ, ಬಳ್ಳಾರಿ ಅಖಂಡವಾಗಿರಲಿ

    ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಇಂದು ಸಕ್ರಿಯ ರಾಜಕಾರಣದಲ್ಲಿದಿದ್ರೆ ಸಚಿವ ಶ್ರೀರಾಮುಲುಗೆ ರಾಜಕೀಯದಲ್ಲಿ ಮತ್ತಷ್ಟು ಬಲ ಬರುತ್ತಿತ್ತು. ಇನ್ನೂ ಬೇಗ ಶ್ರೀರಾಮುಲು ಡಿಸಿಎಂ ಆಗುತ್ತಿದ್ದರು ಎಂದು ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

    ಬಳ್ಳಾರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸೋಮಶೇಖರ್ ರೆಡ್ಡಿ, ಇಂದು ಜನಾರ್ದನ ರೆಡ್ಡಿ ನಮ್ಮ ಜೊತೆಯಲ್ಲಿದಿದ್ದರೆ ನಮಗೆ ಯಾವ ಹಿನ್ನಡೆ ಆಗುತ್ತಿರಲಿಲ್ಲ. ವಾಲ್ಮೀಕಿ ಸಮುದಾಯದ ಪ್ರಬಲ ನಾಯಕರಾಗಿ ಉನ್ನತ ಮಟ್ಟದಲ್ಲಿ ಶ್ರೀರಾಮುಲು ಬೆಳೆದಿದ್ದಾರೆ. ಕಾಲ ಚಕ್ರ ಹೀಗೆ ಇರಲ್ಲ, ಬದಲಾಗುತ್ತಿರುತ್ತದೆ. ಕೆಳಗೆ ಇದ್ದೋರು ಮೇಲೆ ಬರಬೇಕು. 2008ರಲ್ಲಿ ಪ್ರಬಲರಾಗಿದ್ವಿ, ಈಗಲೂ ನಾವು ಸ್ಟ್ರಾಂಗ್ ಇದ್ದೇವೆ. ನಮ್ಮನ್ನು ಭಗವಂತ ವೀಕ್ ಮಾಡಬೇಕೇ ಹೊರತು ಬೇರೆಯವರಲ್ಲ ಎಂದಿದ್ದಾರೆ.

    ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಕೊಡುವ ಕುರಿತು ಹೈಕಮಾಂಡ್ ತಿರ್ಮಾನ ತೆಗೆದುಕೊಳ್ಳುತ್ತದೆ. ಶ್ರೀರಾಮುಲು ಡಿಸಿಎಂ ಆಗುವ ವಿಶ್ವಾಸ ನಮಗೆ ಇದೆ. ಇದೇ ವೇಳೆಯಲ್ಲಿ ಬಳ್ಳಾರಿ ಜಿಲ್ಲಾ ವಿಭಜನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು ಅಭಿವೃದ್ಧಿ ವಿಚಾರದಲ್ಲಿ ಬಳ್ಳಾರಿ ಹಿಂದೆ ಇಲ್ಲ. ಸಿಎಂ ಯಡಿಯೂರಪ್ಪ ಅವರು ಚುನಾವಣೆ ನಂತರ ಜಿಲ್ಲೆ ವಿಭಜನೆ ಬಗ್ಗೆ ಮಾತನಾಡೋಣ ಅಂದಿದ್ದಾರೆ. ಜಿಲ್ಲೆ ಅಖಂಡವಾಗಿರೋದು ನನ್ನ ನಿಲುವು ಎಂದು ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.

    ಜಿಲ್ಲೆಯನ್ನು ಒಡೆಯೋದು ಬೇಡ ಎಂದು ಆನಂದ್ ಸಿಂಗ್ ಬಳಿ ಮನವಿ ಮಾಡುತ್ತೇವೆ. ಶಾಸಕರಾದ ಕರುಣಾಕರ್ ರೆಡ್ಡಿ, ಗೋಪಾಲಕೃಷ್ಣ, ಸೋಮಲಿಂಗಪ್ಪ ಜಿಲ್ಲೆ ಅಖಂಡವಾಗಿರಲಿ ಎಂದಿದ್ದೇವೆ. ಜೊತೆಗೆ ಸಿಎಂ ಕರೆದಿದ್ದ ಅಂದಿನ ಸಭೆಗೆ ಬಂದವರಲ್ಲಿ ಶೇ.9ಂ ಜನ ಜಿಲ್ಲೆ ವಿಭಜನೆ ಬೇಡ ಎಂದಿದ್ದಾರೆ. ಆದ್ರೆ ಆನಂದ್ ಸಿಂಗ್ ಮತ್ತು ಇನ್ನೊಬ್ಬ ಎಂಎಲ್ ಸಿ ಇಬ್ಬರೇ, ಬೇಕು ಅಂದಿದ್ದಾರೆ ಎಂದು ತಿಳಿಸಿದ್ದಾರೆ.

  • ಜಿಲ್ಲೆ ವಿಭಜನೆ ಕುರಿತು ಸರ್ಕಾರದ ತೀರ್ಮಾನಕ್ಕೆ ಬದ್ಧವಾಗಿರಬೇಕು- ಶ್ರೀರಾಮುಲು

    ಜಿಲ್ಲೆ ವಿಭಜನೆ ಕುರಿತು ಸರ್ಕಾರದ ತೀರ್ಮಾನಕ್ಕೆ ಬದ್ಧವಾಗಿರಬೇಕು- ಶ್ರೀರಾಮುಲು

    ಉಡುಪಿ: ಬಳ್ಳಾರಿ ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ನಾವು ಬದ್ಧರಾಗಿರಬೇಕಾಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

    ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿ, ವಿಜಯಪುರವನ್ನು ಪ್ರತ್ಯೇಕ ಜಿಲ್ಲೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಸೋಮಶೇಖರ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಸಿಎಂ ಜೊತೆ ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇನೆ. ಆ ಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರುತ್ತೇವೆ. ಆ ಭಾಗ ಅಭಿವೃದ್ಧಿ ಅಗಬೇಕು ಅನ್ನೋದು ನನ್ನ ಅಭಿಪ್ರಾಯ. ದೊಡ್ಡ ಜಿಲ್ಲೆಯಾದ ಕಾರಣ ಬೇರೆ ಬೇರೆ ತೊಂದರೆ ಬರಬಾರದು ಎಂಬೂದು ನಮ್ಮ ದೃಷ್ಟಿಕೋನ ಎಂದರು.

    ನಾನು ಎಲ್ಲರ ಜೊತೆ ಮಾತನಾಡಿ ತೀರ್ಮಾನಕ್ಕೆ ಬರುತ್ತೇನೆ ಹೊರತು, ನನ್ನ ಯಾವುದೇ ವೈಯಕ್ತಿಕ ತೀರ್ಮಾನ ಇಲ್ಲ. ಶಾಸಕ ಸೋಮಶೇಖರ್ ರೆಡ್ಡಿ ನನ್ನ ಸಹೋದರ. ಅವರು ನನ್ನ ಜೊತೆಗಿರುವ ಶಾಸಕ. ಅವರ ಜೊತೆ ಕುಳಿತು ಮಾತನಾಡಿ ಅಭಿಪ್ರಾಯ ಪಡೆದು ಒಂದು ತೀರ್ಮಾನಕ್ಕೆ ಬರುತ್ತೇನೆ ಎಂದು ಹೇಳಿದರು.

    ಸೋಮಶೇಖರ ರೆಡ್ಡಿ ಹೇಳಿದ್ದೇನು?
    ಆನಂದ್ ಸಿಂಗ್ ರಾಜೀನಾಮೆಗೆ ನೀಡಿದ್ದಕ್ಕೆ ಸರ್ಕಾರ ಹೊಸ ಜಿಲ್ಲೆ ಘೋಷಣೆ ಮಾಡಬಾರದು. ಜಿಲ್ಲೆಯಲ್ಲಿ ನಾಲ್ಕು ಜನ ಬಿಜೆಪಿ ಶಾಸಕರಿದ್ದೇವೆ. ನಮ್ಮನ್ನು ಕರೆದು ಸಿಎಂ ಬಿಎಸ್‍ವೈ ಚರ್ಚೆ ನಡೆಸಬೇಕು. ಈಗಾಗಲೇ ಸಿಎಂಗೆ ಸಲಹೆ ನೀಡಿದ್ದೇವೆ. ಯಾವುದೇ ಕಾರಣಕ್ಕೂ ವಿಜಯನಗರ ಜಿಲ್ಲೆ ಘೋಷಣೆ ಮಾಡಬಾರದು. ಅಖಂಡ ಜಿಲ್ಲೆಯಾಗಿ ಇರಬೇಕು ಎಂದು ನಾವು ಒತ್ತಾಯ ಮಾಡಿದ್ದೇವೆ ಎಂದು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದರು.

  • ವಿಜಯನಗರ ಜಿಲ್ಲೆ ಘೋಷಣೆ ಮಾಡ್ಬಾರ್ದು – ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ರೆಡ್ಡಿ

    ವಿಜಯನಗರ ಜಿಲ್ಲೆ ಘೋಷಣೆ ಮಾಡ್ಬಾರ್ದು – ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ರೆಡ್ಡಿ

    – ಹಂಪಿ ಉತ್ಸವ ಆಚರಿಸದಿದ್ರೆ ಹೋರಾಟ

    ಬಳ್ಳಾರಿ: ವಿಜಯನಗರವನ್ನು ಜಿಲ್ಲೆ ಎಂದು ಘೋಷಣೆಗೆ ಸರ್ಕಾರದಿಂದ ಪ್ರಕ್ರಿಯೆ ಆರಂಭವಾಗಿದ್ದು, ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರು ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದಿದ್ದಾರೆ.

    ಬಳ್ಳಾರಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ಆನಂದ್ ಸಿಂಗ್ ರಾಜೀನಾಮೆಗೆ ನೀಡಿದ್ದಕ್ಕೆ ಸರ್ಕಾರ ಹೊಸ ಜಿಲ್ಲೆ ಘೋಷಣೆ ಮಾಡಬಾರದು. ಜಿಲ್ಲೆಯಲ್ಲಿ ನಾಲ್ಕು ಜನ ಬಿಜೆಪಿ ಶಾಸಕರಿದ್ದೇವೆ. ನಮ್ಮನ್ನು ಕರೆದು ಸಿಎಂ ಬಿಎಸ್‍ವೈ ಚರ್ಚೆ ನಡೆಸಬೇಕು. ಈಗಾಗಲೇ ಸಿಎಂಗೆ ಸಲಹೆ ನೀಡಿದ್ದೇವೆ. ಯಾವುದೇ ಕಾರಣಕ್ಕೂ ವಿಜಯನಗರ ಜಿಲ್ಲೆ ಘೋಷಣೆ ಮಾಡಬಾರದು. ಅಖಂಡ ಜಿಲ್ಲೆಯಾಗಿ ಇರಬೇಕು ಎಂದು ನಾವು ಒತ್ತಾಯ ಮಾಡಿದ್ದೇವೆ ಎಂದರು.

    ನವೆಂಬರ್ ತಿಂಗಳಲ್ಲಿ ಹಂಪಿ ಉತ್ಸವ ಆಚರಣೆ ಮಾಡುತ್ತೇವೆ. ಜಿಲ್ಲಾ ಉಸ್ತುವಾರಿ ಲಕ್ಷ್ಮಣ ಸವದಿ ಜೊತೆ ಈ ಸಂಬಂಧ ಚರ್ಚೆ ನಡೆಸುತ್ತೇವೆ. ಈ ಹಿಂದೆ ಹಂಪಿ ಉತ್ಸವ ಆಚರಣೆಗಾಗಿ ಪ್ರತಿಭಟನೆ ನಡೆಸಿದ್ದೆವು. ಈಗಲೂ ಹಂಪಿ ಉತ್ಸವ ಆಚರಣೆ ಮಾಡದಿದ್ದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ ಕೈ ಮಾಜಿ ಶಾಸಕ ಅನಿಲ್ ಲಾಡ್ ಬಿಜೆಪಿ ಸೇರ್ಪಡೆ ವಿಚಾರ ಸಂಬಂಧ ಪ್ರತಿಕ್ರಿಯಿಸಲು ನಿರಾಕರಿಸಿದರು.

    ಸೋಮಶೇಖರ್ ರೆಡ್ಡಿ ಅವರು ಈ ಹಿಂದೆಯೂ ವಿಜಯನಗರ ಜಿಲ್ಲೆಯನ್ನಾಗಿ ಘೋಷಣೆ ಮಾಡಬಾರದೆಂದು ಹೇಳಿದ್ದರು. ವಿಜಯನಗರ ಜಿಲ್ಲೆ ರಚನೆ ಮಾಡುವ ವಿಚಾರ ನಮಗೆ ಒಪ್ಪಿಗೆ ಇಲ್ಲ. ಬಳ್ಳಾರಿ ಜಿಲ್ಲೆಯ ಹೆಸರನ್ನೇ ವಿಜಯನಗರ ಎಂದು ಬದಲಿಸಿವುದು ಭಾವನಾತ್ಮಕ ವಿಚಾರ, ಮುಂದೆ ಕೂಡ ಅಖಂಡ ಜಿಲ್ಲೆ ಒಗ್ಗಟ್ಟಾಗಿಯೇ ಇರಬೇಕು. ಜಿಲ್ಲೆಯನ್ನು ವಿಭಜಿಸುವ ಪ್ರಕ್ರಿಯೆಗೆ ಸ್ವಾಮೀಜಿಗಳು ಬೆಂಬಲ ನೀಡಿರುವುದು ಬೇಸರ ತರಿಸಿದೆ ಎಂದು ಹೇಳಿದ್ದರು.

  • ”ಶ್ರೀರಾಮುಲುಗೆ ಸಚಿವ ಸ್ಥಾನ ಕೊಟ್ಟರೇ ನಮಗೆ ಸಿಕ್ಕಷ್ಟೆ ಖುಷಿ”

    ”ಶ್ರೀರಾಮುಲುಗೆ ಸಚಿವ ಸ್ಥಾನ ಕೊಟ್ಟರೇ ನಮಗೆ ಸಿಕ್ಕಷ್ಟೆ ಖುಷಿ”

    ಬಳ್ಳಾರಿ: ಕರುಣಾಕರ ರೆಡ್ಡಿ ಮತ್ತು ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ, ಶ್ರೀರಾಮುಲು ಸೇರಿದಂತೆ ನಾವೆಲ್ಲಾ ಒಂದಾಗಿ ಒಗಟ್ಟಿನಿಂದ ಇದ್ದೇವೆ. ನಮಗೆ ಸಚಿವ ಸ್ಥಾನದ ಆಸೆಯಿಲ್ಲ, ಕೊಟ್ಟರೆ ಕೆಲಸ ಮಾಡುತ್ತೇವೆ. ಇಲ್ಲವಾದರೆ ಶ್ರೀರಾಮುಲುಗೆ ಸಚಿವ ಸ್ಥಾನ ಕೊಟ್ಟರೂ ನಮಗೆ ಸಿಕ್ಕಷ್ಟೆ ಖುಷಿ ಪಡುತ್ತೇವೆ ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದಾರೆ.

    ಕೆಲ ದಿನಗಳ ಹಿಂದೆ ನೆರೆ ಪೀಡಿತ ಪ್ರದೇಶಗಳಿಗೆ ಶ್ರೀರಾಮುಲು, ಕರುಣಾಕರ ರೆಡ್ಡಿ ಮತ್ತು ಸೋಮಶೇಖರ ರೆಡ್ಡಿ ಜಂಟಿಯಾಗಿ ಭೇಟಿ ನೀಡಿದ್ದರು. ಇದು ಮತ್ತೆ ರೆಡ್ಡಿ ಸಹೋದರರು ಒಂದಾಗಿದ್ದಾರೆ ಎನ್ನುವ ಸಂದೇಶ ಸಾರಿತ್ತು. ಈ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಪ್ರತಿಕ್ರಿಯೆ ನೀಡಿರುವ ಶಾಸಕ ಸೋಮಶೇಖರ ರೆಡ್ಡಿ, ಯಾವತ್ತು ನಾವು ಜಗಳವೇ ಆಡಿಲ್ಲ, ಹೀಗಾಗಿ ನಾವು ಮತ್ತೆ ಒಂದಾಗಿದ್ದೇವೆ ಎಂದು ಹೇಳೋದಲ್ಲ. ನಾವೆಲ್ಲಾ ಎಂದಿಗೂ ಒಂದೇ ಎಂದರು. ಇದನ್ನೂ ಓದಿ:ಶ್ರೀರಾಮುಲು ಟೀಮ್‍ಗೆ ಸಚಿವ ಸ್ಥಾನ ನೀಡ್ಬೇಡಿ – ಸಿಎಂಗೆ ಟಪಾಲ್ ಗಣೇಶ್ ಮನವಿ

    ಸಚಿವ ಸಂಪುಟ ವಿಸ್ತರಣೆ ಕುರಿದಂತೆ ಮಾತನಾಡಿದ ಅವರು, ಭಗವಂತನ ಮೇಲೆ ನಂಬಿಕೆ ಇದೆ, ನನಗೆ ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುವೆ. ಶ್ರೀರಾಮುಲು ಅವರಿಗೆ ಸಚಿವ ಸ್ಥಾನ ಕೊಟ್ಟರೂ ತುಂಬಾ ಖುಷಿ ಎಂದು ಹೇಳಿದರು. ಬಳಿಕ ಬಿಎಸ್‍ಆರ್ ಪಕ್ಷ ಸ್ಥಾಪನೆ ಮಾಡಿದಾಗ ಕರುಣಾಕರ ರೆಡ್ಡಿ ನಮ್ಮೊಂದಿಗೆ ಬರಲಿಲ್ಲ. ಅದೊಂದು ವಿಚಾರ ಬಿಟ್ಟರೇ ನಾವು ಯಾವತ್ತೂ ಜಗಳವಾಡಿಲ್ಲ ಎಂದು ಸ್ಪಷ್ಟಪಡಿಸಿದರು.

  • ತುಂಗಭದ್ರಾ ಡ್ಯಾಂ ಭರ್ತಿಗಾಗಿ ಉಪವಾಸ ಕುಳಿತ ಸೋಮಶೇಖರ ರೆಡ್ಡಿ

    ತುಂಗಭದ್ರಾ ಡ್ಯಾಂ ಭರ್ತಿಗಾಗಿ ಉಪವಾಸ ಕುಳಿತ ಸೋಮಶೇಖರ ರೆಡ್ಡಿ

    ಬಳ್ಳಾರಿ: ತುಂಗಭದ್ರಾ ಅಣೆಕಟ್ಟು ತುಂಬಲೆಂದು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಹರಕೆ ಹೊತ್ತು ಉಪವಾಸ ವೃತ ಆರಂಭಿಸಿದ್ದಾರೆ.

    ಇಂದು ಬೆಳಗ್ಗೆ ಡ್ಯಾಂ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಸೋಮಶೇಖರ ರೆಡ್ಡಿ ಅವರು ವಿಶೇಷ ಪೂಜೆಯನ್ನು ನೆರವೇರಿಸಿದ್ದಾರೆ. ಪೂಜೆ ಬಳಿಕ ಉಪವಾಸ ವ್ರತ ಆಚರಣೆ ಆರಂಭಿಸಿದ್ದಾರೆ. ಈ ಹಿಂದೆಯೂ 2009ರಲ್ಲಿ ಡ್ಯಾಂ ತುಂಬಲೆಂದು ರೆಡ್ಡಿ ಉಪವಾಸ ಮಾಡಿದ್ದರು. ಆ ಸಂದರ್ಭದಲ್ಲಿ 18 ದಿನಗಳ ಉಪವಾಸದ ಬಳಿಕ ಡ್ಯಾಂ ತುಂಬಿತ್ತು. ಪರಿಣಾಮ ಸುತ್ತಮುತ್ತಲಿನ ರೈತರಿಗೆ ಒಳ್ಳೆಯ ಬೆಳೆ ಬೆಳೆಯಲು ಸಾಧ್ಯವಾಗಿತ್ತು.

    ಈ ಬಾರಿ ಮಳೆ ಜಿಲ್ಲೆಯಲ್ಲಿ ಸರಿಯಾಗಿ ಬರುತ್ತಿಲ್ಲ. ಮುಂಗಾರು ಮುಕ್ತಾಯವಾದರೂ ಜಿಲ್ಲೆಯಲ್ಲಿ ಮಳೆ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಉಪವಾಸ ಕುಳಿತರೆ ದೇವರು ಮಳೆಯನ್ನು ಕರುಣಿಸುವನು ಎಂಬ ಭರವೆಸಯಿಂದ ಶಾಸಕರು ಈ ನಿರ್ಧಾರ ಕೈಗೊಂಡಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • 16,356 ತೆಂಗಿನ ಕಾಯಿ ಒಡೆದು ಹರಕೆ ತೀರಿಸಿದ ರೆಡ್ಡಿ ಆಪ್ತ

    16,356 ತೆಂಗಿನ ಕಾಯಿ ಒಡೆದು ಹರಕೆ ತೀರಿಸಿದ ರೆಡ್ಡಿ ಆಪ್ತ

    ಬಳ್ಳಾರಿ: ನಗರದ ಶಾಸಕ ಸೋಮಶೇಖರ್ ರೆಡ್ಡಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ 16,356 ಮತಗಳಿಂದ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಅವರ ಆಪ್ತ ದೇವರಿಗೆ 16,356 ತೆಂಗಿನಕಾಯಿ ಒಡೆದು ಹರಕೆ ತೀರಿಸಿದ್ದಾರೆ.

    ಇಂದು ಸೋಮಶೇಖರ್ ರೆಡ್ಡಿ ಅವರ 54ನೇ ವರ್ಷದ ಹುಟ್ಟುಹಬ್ಬ. ಹೀಗಾಗಿ ಇಂದು ಜನಾರ್ದನ ರೆಡ್ಡಿ ಹಾಗೂ ಸೋಮಶೇಖರ್ ರೆಡ್ಡಿ ಅವರು ಕೋಟೆ ಮಲ್ಲೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ರೆಡ್ಡಿ ಆಪ್ತ ಪಾಲಣ್ಣ 16,356 ತೆಂಗಿನಕಾಯಿ ಒಡೆದು ಹರಕೆ ಸಲ್ಲಿಕೆ ಮಾಡಿದ್ದಾರೆ.

    ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸೋಮಶೇಖರ್ ರೆಡ್ಡಿ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಬಹುದು. ಮಧ್ಯಂತರ ಚುನಾವಣೆ ಬಂದರೆ ಬಿಜೆಪಿಗೆ ಬಹುಮತ ಬರಲಿದೆ. 26 ಲೋಕಸಭಾ ಕ್ಷೇತ್ರಗಳ, 175 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಬಹುಮತ ಬಂದಿದೆ. ಹೀಗಾಗಿ ಈಗಿರುವ ಪರಿಸ್ಥಿತಿ ನೋಡಿದರೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಬಹುದು ಎಂದು ಹೇಳಿದ್ದಾರೆ.

    ಈ ಸರ್ಕಾರ ಇದೇಯೋ ಇಲ್ಲವೋ ಗೊತ್ತಾಗುತ್ತಿಲ್ಲ. ಅಧಿಕಾರಿಗಳು ಯಾರ ಮಾತು ಕೇಳುತ್ತಿಲ್ಲ. ಜೊತೆಗೆ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಸೋಮಶೇಖರ್ ರೆಡ್ಡಿ ಕಿಡಿಕಾರಿದರು.

    ನಾಳೆಯಿಂದ(ಶನಿವಾರ) ಶಾಸಕ ಸೋಮಶೇಖರ್ ರೆಡ್ಡಿ ಉಪವಾಸ ಸತ್ಯಾಗ್ರಹ ಆರಂಭ ಮಾಡಲಿದ್ದಾರೆ. ಮಳೆ ಬಂದು ತುಂಗಭದ್ರಾ ಡ್ಯಾಂ ತುಂಬುವವರೆಗೂ ಉಪವಾಸ ವ್ರತ ಆಚರಣೆ ಮಾಡಲಿದ್ದಾರೆ. ನಾಳೆ ಅಂಜನಾದ್ರಿ ಬೆಟ್ಟಕ್ಕೆ ತೆರಳಿ ಉಪವಾಸ ಆರಂಭಿಸಲಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಗಾಲಿ ಜನಾರ್ದನ ರೆಡ್ಡಿ ಸಿಸಿಬಿ ಮುಂದೆ ಹಾಜರು

    ಗಾಲಿ ಜನಾರ್ದನ ರೆಡ್ಡಿ ಸಿಸಿಬಿ ಮುಂದೆ ಹಾಜರು

    ಬೆಂಗಳೂರು: ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಸಿಸಿಬಿ ಪೊಲೀಸರ ಮುಂದೆ ಇಂದು ಹಾಜರಾಗಿದ್ದಾರೆ. ನ್ಯಾಯಾಲಯ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ ಹಿನ್ನೆಲೆಯಲ್ಲಿ ಇಂದು ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡುವ ವೇಳೆ ಶಾಸಕ ಸೋಮಶೇಖರ್ ರೆಡ್ಡಿ, ಜನಾರ್ದನ ರೆಡ್ಡಿ ಬೆಂಗಳೂರಿನಲ್ಲಿಯೇ ಇದ್ದಾರೆ ಎಂಬ ಮಾಹಿತಿಯನ್ನು ಹೊರ ಹಾಕಿದ್ದರು. ಇಂದು ಮಧ್ಯಾಹ್ನ 3 ಗಂಟೆಗೆ ಸಿಸಿಬಿ ಕಚೇರಿಗೆ ಆಗಮಿಸಿದರು.

    ಜನಾರ್ದನ ರೆಡ್ಡಿ ಕಳೆದ ನಾಲ್ಕು ದಿನಗಳಿಂದ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಇದ್ದಾರೆಂದು ಸಿಸಿಬಿ ಅಧಿಕಾರಿಗಳು ತಂಡದ ಸಮೇತ ಪರಿಶೀಲನೆ ನಡೆಸಿದ್ದರು. ಆದ್ರೆ ಸಿಸಿಬಿ ಅಧಿಕಾರಿಗಳು ಬಂಧನದ ಮಾಹಿತಿ ಹೊರ ಹಾಕಿದ ನಂತರ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿದ್ದಾರೆ ಎಂದು ಅಚ್ಚರಿಯ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ವಿಚಾರಣೆಗೆ ಗೈರಾಗಿದ್ದನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸುವ ಸಾಧ್ಯತೆಗಳಿವೆ. ಪೊಲೀಸರ ಕೈಗೆ ಸಿಗದೇ ನಾಪತ್ತೆಯಾಗಿದ್ದರಿಂದ ಸೋಮವಾರ ಜಾಮೀನು ಸಿಗೋದು ಕಷ್ಟ ಎಂಬುದನ್ನು ವಕೀಲರು ಜನಾರ್ದನ ರೆಡ್ಡಿ ಅವರಿಗೆ ಮನವರಿಕೆ ಮಾಡಿದ್ದಾರಂತೆ. ಈ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅಪರಾಧ ಕೇಂದ್ರ ವಿಭಾಗ ಕಚೇರಿಗೆ ಆಗಮಿಸಿ ಅಂಬಿಡೆಂಟ್ ಕಂಪನಿಯ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ರೆಡ್ಡಿಯನ್ನು ದೂರವಿಟ್ಟಿದ್ದಕ್ಕೆ ಬಿಜೆಪಿಗೆ ಸೋಲು: ಶಾಸಕ ಸೋಮಶೇಖರ ರೆಡ್ಡಿ

    ರೆಡ್ಡಿಯನ್ನು ದೂರವಿಟ್ಟಿದ್ದಕ್ಕೆ ಬಿಜೆಪಿಗೆ ಸೋಲು: ಶಾಸಕ ಸೋಮಶೇಖರ ರೆಡ್ಡಿ

    ಬಳ್ಳಾರಿ: ಗಾಲಿ ಜನಾರ್ದನ ರೆಡ್ಡಿಯವರನ್ನು ಪಕ್ಷದಿಂದ ದೂರವಿಟ್ಟಿದ್ದಕ್ಕೆ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾಗಿದೆ ಎಂದು ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದಾರೆ.

    ಕಾರ್ಗಿಲ್ ವಿಜಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಎಲ್ಲಾ ಅವಕಾಶಗಳಿದ್ದವು, ಆದರೆ ಗಾಲಿ ಜನಾರ್ದನ ರೆಡ್ಡಿಯನ್ನ ಬಿಜೆಪಿ ನಾಯಕರು ಪಕ್ಷದಿಂದ ದೂರವಿಟ್ಟಿದ್ದರಿಂದ ಸೋಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಸಭೆಯ ಬಳಿಕ ಮಾಧ್ಯಮದವರು ಈ ಕುರಿತು ಪ್ರಶ್ನಿಸಿದಾಗ, ರಾಜ್ಯದ ಜನರು ಜನಾರ್ದನ ರೆಡ್ಡಿಯವರನ್ನು ದೂರವಿಟ್ಟಿದ್ದಕ್ಕೆ ಬಿಜೆಪಿ ಸೋಲು ಅನುಭವಿಸಿತೂ ಅಂತಾ ಮಾತನಾಡಿಕೊಳ್ಳುತ್ತಿದ್ದಾರೆ. ಇದು ಜನರ ಅಭಿಪ್ರಾಯವಾಗಿದೆ. ಜನರ ಅಭಿಪ್ರಾಯ ಹೀಗಿರುವಾಗ ಅದನ್ನು ಒಪ್ಪಬೇಕಲ್ವಾ ಎಂದು ಪರೋಕ್ಷವಾಗಿ ಬಿಜೆಪಿ ನಾಯಕರನ್ನು ಟೀಕಿಸಿದರು. ಜನರು ಹೇಳಿದ್ದನ್ನು ನಾನು ಹೇಳಿದ್ದೇನೆ. ಇದರಲ್ಲಿ ನನ್ನದೇನು ಇಲ್ಲ ಅನ್ನೋ ಮೂಲಕ ಸೋಮಶೇಖರ ರೆಡ್ಡಿ ತನ್ನ ಹೇಳಿಕೆಗೆ ಸಮರ್ಥನೆ ನೀಡಿದರು.