Tag: Someshwara temple

  • ಐತಿಹಾಸಿಕ ಸೋಮೇಶ್ವರ ದೇವಸ್ಥಾನ ವಕ್ಫ್‌ಗೆ ಪರಭಾರೆ ಆರೋಪ; ವಕ್ಫ್ ಬೋರ್ಡ್, ಸರ್ಕಾರದ ವಿರುದ್ಧ ಪ್ರತಿಭಟನೆ

    ಐತಿಹಾಸಿಕ ಸೋಮೇಶ್ವರ ದೇವಸ್ಥಾನ ವಕ್ಫ್‌ಗೆ ಪರಭಾರೆ ಆರೋಪ; ವಕ್ಫ್ ಬೋರ್ಡ್, ಸರ್ಕಾರದ ವಿರುದ್ಧ ಪ್ರತಿಭಟನೆ

    ಗದಗ: ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ (Waqf Board) ಭೂ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ವಕ್ಫ್ ಬೋರ್ಡ್ ವಿರುದ್ಧ ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ರೈತರು ಸೇರಿಕೊಂಡು ಗದಗ-ಬಾಗಲಕೋಟೆ ರಾಜ್ಯ ಹೆದ್ದಾರಿ ತಡೆದು, ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು.

    6ನೇ ವಿಕ್ರಮಾದಿತ್ಯನ ಕಾಲದ ಐತಿಹಾಸಿಕ ಸೋಮೇಶ್ವರ ದೇವಸ್ಥಾನದ (Someshwara Temple) ಜಮೀನು ವಕ್ಫ್‌ಗೆ ಸೇರಿಸುವ ಹುನ್ನಾರ ನಡೆಸಿದ್ದಾರೆ. ಇದು ಸಂಸ್ಕೃತ ವಿಶ್ವವಿದ್ಯಾಲಯ ಕೇಂದ್ರವಾಗಿತ್ತು. ಕವಿ ಚಾಮರಸಾ ಬರೆದ ಪ್ರಭುಲಿಂಗಲೀಲೆ ಪುರಾಣ ಇದೇ ದೇವಸ್ಥಾನದಲ್ಲಿ ಬರೆದಿರುವ ಇತಿಹಾಸವಿದೆ. ಅಂತಹ ಐತಿಹಾಸಿಕ ದೇವಸ್ಥಾನದ ಭೂಮಿಯನ್ನು ವಕ್ಫ್‌ಗೆ ಪರಭಾರೆ ಮಾಡಲು ಹೊರಟಿರುವುದು ಖಂಡನೀಯ. ಇದನ್ನೂ ಓದಿ: ಮಹಿಳೆಯರಿಗೆ ಫ್ರೀ ಬಸ್‌ ಕೊಟ್ಟರು, ಪಾಪ ಪುರುಷರಿಗೆ ಏನ್‌ ಮಾಡಿದ್ರು? – ಸರ್ಕಾರಕ್ಕೆ ನಟಿ ತಾರಾ ಪ್ರಶ್ನೆ

    ಗೆಜೆಟ್‌ನಲ್ಲಿ ಸೋಮೇಶ್ವರ ದೇವಸ್ಥಾನಕ್ಕೆ ಸೇರಿದ ಸರ್ವೆ ನಂ.562 ರ 12 ಎಕರೆ 22 ಗುಂಟೆ ಜಮೀನು ವಕ್ಫ್ ಆಸ್ತಿ ಎಂದು ನಮೂದಾಗಿದೆ. ಈ ಎಲ್ಲದರಿಂದ ಆಕ್ರೋಶಕ್ಕೆ ಒಳಗಾದ ಜನರು ರಾಜ್ಯ ಹೆದ್ದಾರಿ ತಡೆದು ವಕ್ಫ್ ಬೋರ್ಡ್, ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಹಾಗೂ ರಾಜ್ಯ ಸರ್ಕಾರದ ವಿರುಧ್ಧ ಧಿಕ್ಕಾರ ಕೂಗಿದರು. ನಡು ರಸ್ತೆಯಲ್ಲೇ ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ – ತಾಯಿ, ಮಗಳಿಗೆ ಗಂಭೀರ ಗಾಯ

    ಗಂಟೆ ಗಟ್ಟಲೆ ರಸ್ತೆ ತಡೆ ನಡೆಸಿದ್ದರಿಂದ ವಾಹನಗಳು ಸಾಲುಗಟ್ಟಿ ನಿಂತವು. ಕೆಲಕಾಲ ವಾಹನ ಸವಾರರು ಪರದಾಡಿದರು. ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಈ ವೇಳೆ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು. ನಂತರ ಸ್ಥಳಕ್ಕೆ ಬಂದ ಗದಗ ತಹಶೀಲ್ದಾರ್‌ಗೆ ಸ್ಥಳಿಯರು ತರಾಟೆಗೆ ತೆಗೆದುಕೊಂಡರು. ಸೋಮೇಶ್ವರ ದೇವಸ್ಥಾನದ ಜಾಗ ವಕ್ಫ್ ಹೇಗೆ ಆಯಿತು? ಶೀಘ್ರದಲ್ಲೇ ಇದನ್ನು ರದ್ದು ಮಾಡದಿದ್ದರೆ ಉಗ್ರವಾದ ಹೋರಾಟ ಮಾಡುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಬೀದಿ ನಾಯಿ ಜೊತೆ ಅಸಭ್ಯ ವರ್ತನೆ – ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

    ಈ ವೇಳೆ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಶ್ರೀಧರ್ ಕುಲಕರ್ಣಿ ಸೇರಿದಂತೆ ಅನೇಕ ಸಂಘಟಿಕರು, ಸೋಮೇಶ್ವರ ದೇವಸ್ಥಾನ ಆಡಳಿತ ಮಂಡಳಿಯವರು, ರೈತರು ಉಪಸ್ಥಿತರಿದ್ದರು. ಇದನ್ನೂ ಓದಿ: ಸೆಟ್ಟೇರಿತು ರಾಘು ಶಿವಮೊಗ್ಗ ನಿರ್ದೇಶನದ ಹೊಸ ಸಿನಿಮಾ-‘ದಿ ಟಾಸ್ಕ್’ನಲ್ಲಿ ನವಪ್ರತಿಭೆಗಳ ಸಂಗಮ

  • ಸೋಮೇಶ್ವರ ದೇವಾಲಯ ಜಾಗಕ್ಕೆ ಕಿತ್ತಾಟ: ವ್ಯಕ್ತಿಯ ವಿರುದ್ಧ ತಿರುಗಿಬಿದ್ದ ಗ್ರಾಮಸ್ಥರು

    ಸೋಮೇಶ್ವರ ದೇವಾಲಯ ಜಾಗಕ್ಕೆ ಕಿತ್ತಾಟ: ವ್ಯಕ್ತಿಯ ವಿರುದ್ಧ ತಿರುಗಿಬಿದ್ದ ಗ್ರಾಮಸ್ಥರು

    ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳ ಗ್ರಾಮದಲ್ಲಿ ಸೋಮೇಶ್ವರ ದೇವಾಲಯಕ್ಕೆ ಸೇರಿದ ಜಾಗದ ವಿವಾದ ಕೆಲ ಘಂಟೆಗಳ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

    ಇಲ್ಲಿನ ಖಾಸಗಿ ವ್ಯಕ್ತಿ ಮುನಿರಾಜು ಮರಸೂರು ಗ್ರಾಮ ಪಂಚಾಯ್ತಿಯಲ್ಲಿ ಅಕ್ರಮವಾಗಿ ಸೋಮೇಶ್ವರ ದೇವಾಲಯಕ್ಕೆ ಸೇರಿದ ಜಾಗವನ್ನು ಕಬಳಿಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಊರಿನ ಗ್ರಾಮಸ್ಥರು ಆತನ ವಿರುದ್ಧ ತಿರುಗಿಬಿದ್ದಿದ್ದರು. ಇದನ್ನೂ ಓದಿ: ಆಧಾರ್ ಕಾರ್ಡ್ ಇರೋರೆಲ್ಲ ಭಾರತೀಯರು: ವಚನಾನಂದ ಶ್ರೀ

    ಇದೇ ಜಾಗದಲ್ಲಿ ಮುಸ್ಲಿಮರ ಕಡೆಯಿಂದ ಇಲ್ಲಿನ ಸ್ಥಳೀಯ ವ್ಯಕ್ತಿಯಾದ ಮುನಿರಾಜುಗೆ ಮಾರಾಟ ಮಾಡಿರುವುದಾಗಿ ದಾಖಲೆಗಳಿವೆ. ಹೀಗಾಗಿ ಮುನಿರಾಜು ನನಗೆ ಸೇರಿದ ಜಾಗ ಅಂತ ಸರ್ವೆ ಮಾಡಿಕೊಂಡಿದ್ದರು. ಅದಕ್ಕಾಗಿ ಕೆಲ ಘಂಟೆಗಳ ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನೂ ಓದಿ: ಕಲಾವಿದನ ನಾಲಿಗೆಯಿಂದ ಅರಳಿತು ಅಂಬೇಡ್ಕರ್ ಚಿತ್ರ

    ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ದಂಡಾಧಿಕಾರಿಗಳು ಈ ಬಗ್ಗೆ ಗಮನಹರಿಸಿ ಸೋಮೇಶ್ವರ ದೇವಾಲಯದ ಜಾಗವನ್ನು ಬಿಟ್ಟುಕೊಡುವಂತೆ ಸೂಚಿಸಿದರು. ಈ ವೇಳೆ ಕೆಲ ಗಂಟೆಗಳ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

  • ಶಾಶ್ವತ ಬರದನಾಡಲ್ಲಿ ನೆಲದಿಂದ ಉಕ್ಕುತ್ತಿದೆ ಜಲ – ಕಡೂರಿನ ದೇವಾಲಯದಲ್ಲಿ ವಿಸ್ಮಯ

    ಶಾಶ್ವತ ಬರದನಾಡಲ್ಲಿ ನೆಲದಿಂದ ಉಕ್ಕುತ್ತಿದೆ ಜಲ – ಕಡೂರಿನ ದೇವಾಲಯದಲ್ಲಿ ವಿಸ್ಮಯ

    ಚಿಕ್ಕಮಗಳೂರು: ಶಾಶ್ವತ ಬರಗಾಲಕ್ಕೆ ತುತ್ತಾದ ತಾಲೂಕು ಎಂದೇ ಕರೆಯುವ ಕಡೂರಿನ ಖಂಡುಗದಹಳ್ಳಿಯ ದೇವಾಲಯದಲ್ಲಿನ ಬೋರ್‌ವೆಲ್‌ನಲ್ಲಿ ಎರಡು ದಿನಗಳಿಂದ ನಿರಂತರವಾಗಿ ನೀರು ಉಕ್ಕಿಬರುತ್ತಿದೆ.

    ಖಂಡುಗದಹಳ್ಳಿಯ ಸೋಮೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಒಂದು ವರ್ಷದ ಹಿಂದೆ ಬೋರ್‌ವೆಲ್‌ ಕೊರೆಸಿದ್ದರು. ಬೋರ್‌ವೆಲ್‌ ಕೊರೆದಾಗಿನಿಂದ ಅರ್ಧ ಇಂಚು ನೀರು ಬರುತ್ತಿತ್ತು. ಆದರೆ ಎರಡು ದಿನಗಳಿಂದ ಬೋರ್‌ನಿಂದ ನಿರಂತರವಾಗಿ ನೀರು ಉಕ್ಕಿ ಹರಿಯುತ್ತಿದೆ. ಬರದ ನಾಡಲ್ಲಿ ಈ ವಿಸ್ಮಯ ನಡೆದಿರುವುದು ಸೋಮೇಶ್ವರ ಸ್ವಾಮಿಯ ಮಹಿಮೆ ಎಂದು ಭಕ್ತರು ಹಾಡಿ ಹೊಗಳುತ್ತಿದ್ದಾರೆ.

     

    ಹಿಂದೊಮ್ಮೆ ದೇವಾಲಯದಲ್ಲಿ ನೀರಿನಲ್ಲಿ ದೀಪ ಹಚ್ಚಿದ್ದು ಜನರನ್ನು ಅಚ್ಚರಿಗೊಳಿಸಿತ್ತು. ಈಗ ಬೋರ್‌ವೆಲ್‌ನಲ್ಲಿ ನೀರು ಉಕ್ಕುತ್ತಿರುವುದು ಜನರ ಆಶ್ಚರ್ಯಕ್ಕೆ ಕಾರಣವಾಗಿದೆ. ಹೀಗೆ ಈ ಭಾಗದಲ್ಲಿ ಸೋಮೇಶ್ವರ ಸ್ವಾಮಿಯಿಂದ ಹಲವು ವಿಸ್ಮಯಗಳು ನಡೆಯುತ್ತಲೇ ಇರುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews