Tag: Somwarpet

  • Madikeri | ಜೀವನದಲ್ಲಿ ಜಿಗುಪ್ಸೆ – ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

    Madikeri | ಜೀವನದಲ್ಲಿ ಜಿಗುಪ್ಸೆ – ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

    ಮಡಿಕೇರಿ: ಜೀವನದಲ್ಲಿ ಜಿಗುಪ್ಸೆಗೊಂಡು ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ (Somwarpet) ತಾಲೂಕಿನ ಐಗೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಯಡವಾರೆ ಗ್ರಾಮದಲ್ಲಿ ನಡೆದಿದೆ.

    ನಾರೂರು ಮನೆ ಮಧು (ಅಶೋಕ್) ಮೃತ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮದ್ಯ ಸೇವಿಸಿ ತಲೆಭಾಗಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂರು ವರ್ಷದ ಪುತ್ರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಪತ್ನಿ ಮತ್ತು ಪುತ್ರಿ ಬೆಂಗಳೂರಿಗೆ ತೆರಳಿದ್ದರು. ಭಾನುವಾರ ಬೆಳಗ್ಗೆ ಮೃತನ ತಾಯಿ ಕೂಡ ಬೆಂಗಳೂರಿಗೆ ತೆರಳಿದ್ದರು. ಈ ಸಂದರ್ಭ ತನ್ನ ಮನೆಯಲ್ಲಿ ಇದ್ದ ಡಬ್ಬಲ್ ಬ್ಯಾರೆಲ್ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಪಾಕಿಸ್ತಾನದ ಪರ ಬೇಹುಗಾರಿಕೆ – ಉತ್ತರ ಪ್ರದೇಶದ ಉದ್ಯಮಿ ಬಂಧನ

    ಘಟನೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಮಹಿಳೆ ಕೊಲೆ ಮಾಡಿ ಬೈಕ್ ಅಪಘಾತವೆಂದು ಬಿಂಬಿಸಿದ ಪತಿ, ಮಾವ, ಅತ್ತೆ ಅರೆಸ್ಟ್

  • ಕಾಂಗ್ರೆಸ್ ಗೆದ್ದರೆ ತಾಲಿಬಾನ್‌ಗಳಿಗೆ ಬಿರಿಯಾನಿ ಕೊಟ್ಟು ಸಾಕುತ್ತಾರೆ: ಸಿ.ಟಿ.ರವಿ ವಾಗ್ದಾಳಿ

    ಕಾಂಗ್ರೆಸ್ ಗೆದ್ದರೆ ತಾಲಿಬಾನ್‌ಗಳಿಗೆ ಬಿರಿಯಾನಿ ಕೊಟ್ಟು ಸಾಕುತ್ತಾರೆ: ಸಿ.ಟಿ.ರವಿ ವಾಗ್ದಾಳಿ

    ಮಡಿಕೇರಿ: ಕಾಂಗ್ರೆಸ್ (Congress) ಗೆದ್ದರೆ ಮತ್ತೆ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸಿ ತಾಲಿಬಾನ್‌ಗಳಿಗೆ ಬಿರಿಯಾನಿ ಕೊಟ್ಟು ಸಾಕುತ್ತಾರೆ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ (Somwarpet) ತಾಲೂಕಿನ ಶನಿವಾರಸಂತೆಯಲ್ಲಿ (Shanivarasanthe) ಶಾಸಕ, ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ (Appachu Ranjan) ಪರವಾಗಿ ಮತಯಾಚನೆ ಮಾಡಿ ಮಾತನಾಡಿದ ಅವರು, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಕಾಂಗ್ರೆಸ್ ತನ್ನ ಹಿಂದೂ ವಿರೋಧಿ ನೀತಿಯನ್ನು ಮತ್ತೆ ಪ್ರಕಟಿಸಿದೆ. ಹನುಮನ ನಾಡಿನಲ್ಲಿ ಹನುಮನ ಸೈನಿಕನನ್ನೇ ನಿಷೇಧಿಸುವ ದುಸ್ಸಾಹಸ ಮಾಡುತ್ತಿದೆ. ಕಾಂಗ್ರೆಸ್ ಇದಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಹನುಮನಿಗೆ ನಮಸ್ಕರಿಸಿದ ಮೋದಿ

    ಬಜರಂಗದಳ (Bajarang Dal) ಎಂದರೆ ಹನುಮನ ಆರಾಧಕರು, ರಾಷ್ಟ್ರಭಕ್ತರು. ಅವರನ್ನು ನಿಷೇಧಿಸುತ್ತೇವೆ ಎನ್ನುವುದು ದರ್ಪದ ಮಾತು. ಆ ಮಾತಿಗೆ ಕಾಂಗ್ರೆಸ್ ದೊಡ್ಡ ಬೆಲೆ ತೆರಬೇಕು. ಕಾಂಗ್ರೆಸ್‌ನದ್ದು ನಾಯಿ ಬಾಲ ಇದ್ದಂತೆ. ಯಾವತ್ತೂ ನೆಟ್ಟಗಾಗುವುದಿಲ್ಲ. ಅವರು ಸೋತಾಗ ಸರಿ ಇರುತ್ತಾರೆ. ಗೆದ್ದರೆ ಮತ್ತೆ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಾರೆ. ಅವರು ತಾಲಿಬಾನ್‌ಗಳಿಗೆ ಬಿರಿಯಾನಿ ಕೊಟ್ಟು ಸಾಕುತ್ತಾರೆ. ಇಂತಹ ಬೌದ್ಧಿಕ ದಿವಾಳಿತನ ಅವರಿಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ದಾಖಲೆ ಬರೆದ ಮೋದಿ ಬೆಂಗಳೂರು ರೋಡ್ ಶೋ

  • ಬಜರಂಗದಳ ಅಲ್-ಖೈದಾ ಅಲ್ಲ: ಸಿದ್ದರಾಮಯ್ಯ ವಿರುದ್ಧ ಅಪ್ಪಚ್ಚು ರಂಜನ್ ಕಿಡಿ

    ಬಜರಂಗದಳ ಅಲ್-ಖೈದಾ ಅಲ್ಲ: ಸಿದ್ದರಾಮಯ್ಯ ವಿರುದ್ಧ ಅಪ್ಪಚ್ಚು ರಂಜನ್ ಕಿಡಿ

    ಮಡಿಕೇರಿ: ಬಜರಂಗದಳ ಭಯೋತ್ಪಾದಕ ಸಂಘಟನೆಯಲ್ಲ. ಅದು ಅಲ್-ಖೈದಾವೂ ಅಲ್ಲ ಎಂದು ಮಡಿಕೇರಿ ಕ್ಷೇತ್ರ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ (Appachu Ranjan) ಸಿದ್ದರಾಮಯ್ಯ (Siddaramaiah) ವಿರುದ್ಧ ಕಿಡಿಕಾರಿದ್ದಾರೆ.

    ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ (Somwarpet) ತಾಲೂಕಿನ ಶಿರಂಗಾಲದಲ್ಲಿ ಆಯೋಜಿಸಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜರಂಗದಳ ಒಂದು ದೇಶಭಕ್ತ ಸಂಘಟನೆ. ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ಬಜರಂಗದಳವನ್ನು (Bhajarang Dal) ನಿಷೇಧ ಮಾಡುವುದಾಗಿ ಹೇಳಿದ್ದಾರೆ. ಅವರು ಅವಸಾನ ಹೊಂದುವುದು ಖಚಿತ ಎಂದು ಹರಿಹಾಯ್ದರು. ಇದನ್ನೂ ಓದಿ: ಪತ್ನಿ, ಸಹೋದರನಿಗಾಗಿ ಒಂದು ದಿನ ಆಸ್ಪತ್ರೆಗೆ ಭೇಟಿ – ಮತ್ತೊಂದು ದಿನ ಕ್ಷೇತ್ರದಲ್ಲಿ ಪ್ರಿಯಾಂಕ್ ಪ್ರಚಾರ

    ಬಜರಂಗದಳ ದೇಶಾಭಿಮಾನವನ್ನು ಪಸರಿಸುತ್ತಿರುವ ದೇಶಭಕ್ತರ ಸಂಘಟನೆ. ಅದು ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿಲ್ಲ. ಇಂತಹ ಸಂಘಟನೆಯನ್ನು ನಿಷೇಧಿಸುತ್ತೇವೆ ಎಂದಿರುವ ಸಿದ್ದರಾಮಯ್ಯ ಈ ಬಾರಿ ವರುಣಾದಲ್ಲಿ (Varuna) ಸೋಲುವುದು ಖಚಿತ. ಅಲ್ಲದೇ ಕಾಂಗ್ರೆಸ್ (Congress) 40ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದರು. ಇದನ್ನೂ ಓದಿ: ಯತ್ನಾಳ್‌, ಪ್ರಿಯಾಂಕ್‌ ಖರ್ಗೆಗೆ ಶೋಕಾಸ್‌ ನೋಟಿಸ್‌ ಜಾರಿ

    ಇಂಗ್ಲೆಂಡ್‌ನಿಂದ ಟಿಪ್ಪುವಿನ ಖಡ್ಗ ತಂದ ವಿಜಯ್ ಮಲ್ಯ ಮಣ್ಣು ಮುಕ್ಕಿದರು. ಟಿಪ್ಪು ಧಾರವಾಹಿ ಮಾಡಿದ ಸಂಜಯ್ ಖಾನ್ ಸಹ ಮಣ್ಣು ಮುಕ್ಕಿದರು. ಇದೀಗ ಟಿಪ್ಪು ಜಯಂತಿ ಮತ್ತೆ ಮಾಡುತ್ತೇವೆ ಎನ್ನುತ್ತಿರುವ ಸಿದ್ದರಾಮಯ್ಯನವರ ಸರದಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್‌ ಬಜರಂಗಿ ಸಂಘರ್ಷ – ಬೆಳಗ್ಗೆಯಿಂದಲೇ ದೇವಸ್ಥಾನಗಳಲ್ಲಿ ಮೊಳಗಲಿದೆ ಹನುಮಾನ್ ಚಾಲೀಸಾ

  • ಪ್ರತಾಪ್ ಸಿಂಹ ಮುಂದೆ ಯಾವ ಸ್ಟಾರ್ ಪ್ರಚಾರಕರೂ ಇಲ್ಲ: ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಟಾಂಗ್

    ಪ್ರತಾಪ್ ಸಿಂಹ ಮುಂದೆ ಯಾವ ಸ್ಟಾರ್ ಪ್ರಚಾರಕರೂ ಇಲ್ಲ: ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಟಾಂಗ್

    ಮಡಿಕೇರಿ: ಪ್ರತಾಪ್ ಸಿಂಹ (Prathap Simha) ಮುಂದೆ ಯಾವ ಸ್ಟಾರ್ ಪ್ರಚಾರಕರೂ ಇಲ್ಲ. ವರುಣಾ (Varuna) ಕ್ಷೇತ್ರಕ್ಕೆ ರಮ್ಯಾ ಮತ್ತು ದುನಿಯಾ ವಿಜಿ ಬರಲಿ. ನಾನು ಬರುತ್ತೇನೆ. ಯಾರಿಗೆ ಜೈಕಾರ ಹಾಕುತ್ತಾರೆ ಎನ್ನುವುದನ್ನು ನೋಡಲಿ ಎಂದು ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯಗೆ (Siddaramaiah) ಟಾಂಗ್ ನೀಡಿದ್ದಾರೆ.

    ಡಿ.ಕೆ.ಶಿವಕುಮಾರ್ (D.K.Shivakumar) ಹಾಗೂ ಸಿದ್ದರಾಮಯ್ಯ ಪರ ದುನಿಯಾ ವಿಜಯ್ ಮತ್ತು ರಮ್ಯಾ ಪ್ರಚಾರದ ವಿಚಾರವಾಗಿ ಕೊಡಗಿನ (Kodagu) ಸೋಮವಾರಪೇಟೆಯಲ್ಲಿ (Somwarpet) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರುಣಾ ಕ್ಷೇತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ (MallikarjunKharge) ಬಂದಿದ್ದಾರಾ? ಅವರು ಮೈಸೂರಿಗೆ (Mysuru) ಬಂದು ಕ್ಯಾಂಪೇನ್ ಮಾಡಿ ಅಲ್ಲಿಂದ ಹಾಗೆ ಹೋಗುತ್ತಾರೆ. ಖರ್ಗೆಯವರನ್ನು ರಾಜಕೀಯವಾಗಿ ಮುಗಿಸಲು ಸಿದ್ದರಾಮಯ್ಯ ಮುಂದಾಗಿದ್ದರು. ಹಾಗೆಯೇ ಕೊರಟಗೆರೆಯಲ್ಲಿ 2013ರಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿ ಒಬ್ಬ ದಲಿತ ನಾಯಕನ್ನು ಮುಗಿಸುತ್ತಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಮೇ 13ಕ್ಕೆ ಸಿದ್ದರಾಮಯ್ಯ ಸೋಲಿನ ಜೊತೆಗೆ ಮುಸ್ಲಿಮ್‌ ಓಲೈಕೆ ಅಂತ್ಯ : ಪ್ರತಾಪ್‌ ಸಿಂಹ

    ಡಿ.ಕೆ.ಶಿವಕುಮಾರ್ ಅವರು ಸಹಾ ಮೈಸೂರಿಗೆ ಬರುತ್ತಾರೆ ಆದರೆ ವರುಣಾ ಕ್ಷೇತ್ರಕ್ಕೆ ಹೋಗುವುದಿಲ್ಲ. ಯಾಕೆಂದರೆ ಸಿದ್ದರಾಮಯ್ಯ ಒಬ್ಬ ಜಾತಿವಾದಿ. ಅದಕ್ಕೆ ಕೆ.ಹೆಚ್.ಮುನಿಯಪ್ಪ, ಆಂಜನೇಯ ಸೇರಿದಂತೆ ಯಾರೂ ವರುಣಾದತ್ತ ಬರೋದಿಲ್ಲ. ಸಿದ್ದರಾಮಯ್ಯ ಮುಸ್ಲಿಂ ಅವರ ಓಲೈಕೆ ಮಾಡುವುದು ಬಿಟ್ಟರೆ ಬೇರೆ ಯಾವುದೇ ಕಾಳಜಿ ಇಲ್ಲ. ಅದು ಅವರ ಪಕ್ಷದವರಿಗೂ ಗೊತ್ತು. ಹಾಗಾಗಿ ದುನಿಯಾ ವಿಜಿ ಮತ್ತು ರಮ್ಯಾ ಬರೋದಕ್ಕೂ ಖರ್ಗೆ, ಪರಮೇಶ್ವರ್ ಅವರು ಬರೋದಕ್ಕೂ ಇರುವ ವ್ಯತ್ಯಾಸ ಎಲ್ಲರಿಗೂ ಗೊತ್ತಾಗುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ವಿನಾಶದ ಅಂಚಿನಲ್ಲಿ ಕಾಂಗ್ರೆಸ್ – ಪ್ರಿಯಾಂಕಾ, ರಾಹುಲ್ ಗಾಂಧಿ ಹೋದಲ್ಲೆಲ್ಲಾ ಅವರಿಗೆ ಸೋಲೇ: ಅರುಣ್ ಸಿಂಗ್

    ವರುಣಾ ಕ್ಷೇತ್ರದಲ್ಲಿ ಸೋಮಣ್ಣಗೆ ಜೈಕಾರ ಹಾಕುತ್ತಾರಾ ಅಥವಾ ಸಿದ್ದರಾಮಯ್ಯಗೆ ಜೈಕಾರ ಹಾಕುತ್ತಾರಾ ಎಂಬುದು ನಿಮಗೆ ಗೊತ್ತಾಗುತ್ತದೆ. ವರುಣಾಕ್ಷೇತ್ರದಲ್ಲಿ ಈಗಾಗಲೇ ಒಂದು ಘೋಷವಾಕ್ಯವನ್ನು ಎಲ್ಲರೂ ಹೇಳುತ್ತಿದ್ದಾರೆ. ಸೋಮಣ್ಣಗೆ ವೋಟು, ಸಿದ್ದರಾಮಯ್ಯಗೆ ಏಟು ಎಂದು ಜನಗಳೇ ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಅಭಿಮಾನಿ ಬಳಗವೇ ನಮ್ಮ ಆನೆ ಬಲ – ಬಿಜೆಪಿ ಅಭ್ಯರ್ಥಿ ಗೆಲ್ಲಿಸುವಂತೆ ಕಿಚ್ಚ ಸುದೀಪ್‌ ಮನವಿ

  • ಫೋನಲ್ಲಿ ಮಾತನಾಡುತ್ತಿದ್ದ ವಿವಾಹಿತೆಯ ಮೇಲೆ ಅತ್ಯಾಚಾರ ಯತ್ನ – ಆರೋಪಿಗಳಿಗಾಗಿ ಪೊಲೀಸರ ಶೋಧ

    ಫೋನಲ್ಲಿ ಮಾತನಾಡುತ್ತಿದ್ದ ವಿವಾಹಿತೆಯ ಮೇಲೆ ಅತ್ಯಾಚಾರ ಯತ್ನ – ಆರೋಪಿಗಳಿಗಾಗಿ ಪೊಲೀಸರ ಶೋಧ

    ಮಡಿಕೇರಿ: ವಿವಾಹಿತೆಯ ಮೇಲೆ ತಡರಾತ್ರಿ ಅತ್ಯಾಚಾರಕ್ಕೆ (Rape) ಯತ್ನಿಸಿರುವ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ (Somwarpet) ತಾಲೂಕಿನ ಬಿಳಿಗೆರೆ (Biligere)  ಗ್ರಾಮದಲ್ಲಿ ನಡೆದಿದೆ.

    19 ವರ್ಷದ ವಿವಾಹಿತೆ ರಾತ್ರಿ 9:30ರ ವೇಳೆಗೆ ಮನೆ ಮುಂಭಾಗದಲ್ಲಿ ಪೋನ್‌ನಲ್ಲಿ (Phone) ಮಾತಾನಾಡುತ್ತಿದ್ದಳು. ಈ ಸಂದರ್ಭ ಆಟೋದಲ್ಲಿ (Auto Rickshaw) ಬಂದಿಳಿದ ಮೂವರು ಯುವಕರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಇದನ್ನೂ ಓದಿ: ಸಂಸದರಾಗಲು ಹೊರಟ್ಟಿದ್ದ ಸಿದ್ದರಾಮಯ್ಯ ಸಿಎಂ ಆಗಿದ್ದು ಹೇಗೆ?

    ನಂದಿಮೊಟ್ಟೆಯ ರಾಜ, ಹಟ್ಟಿಹೊಳೆಯ ನೌಶದ್, ಇಗ್ಗೋಡ್ಲಿನ ಫಾರೂಕ್ ಎಂಬವರು ಈ ಪ್ರಕರಣದ ಪ್ರಮುಖ ಆರೋಪಿಗಳು. ಬಲತ್ಕಾರವಾಗಿ ಗೃಹಿಣಿಯನ್ನು ಕಾಫಿತೋಟದೊಳಗೆ ಎಳೆದೊಯ್ಯುತ್ತಿದ್ದ ಸಂದರ್ಭ ಆಕೆ ಜೋರಾಗಿ ಕಿರುಚಲಾರಂಭಿಸಿದಳು. ಇದನ್ನು ಗಮನಿಸಿದ ಆಕೆಯ ಸಂಬಂಧಿಕರು ಭಯಭೀತರಾಗಿ ಕೂಡಲೇ ಸ್ಥಳೀಯರಿಗೆ ಹಾಗೂ ಹಿಂದೂ ಜಾಗರಣ ವೇದಿಕೆಯ (Hindu Jagarana Vedike) ಪ್ರಮುಖರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ಕ್ಷಣಾರ್ಧದಲ್ಲಿ ಘಟನಾ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಓರ್ವ ಆರೋಪಿಯಾದ ರಾಜ ಹಾಗೂ ದುಷ್ಕೃತ್ಯಕ್ಕೆ ಬಳಸಿದ್ದ ಎರಡು ಆಟೋಗಳನ್ನು ವಶಕ್ಕೆ ಪಡೆದಿದ್ದಾರೆ. ಈ ದುಷ್ಕೃತ್ಯದಲ್ಲಿ ತೊಡಗಿದ್ದ ಇನ್ನಿಬ್ಬರು ಆರೋಪಿಗಳಾದ ನೌಶದ್ ಹಾಗೂ ಫಾರೂಕ್ ಪರಾರಿಯಾಗಿದ್ದಾರೆ. ಇದನ್ನೂ ಓದಿ: ದೂರು ಕೊಡಲು ಹೋದ ಯುವತಿಯನ್ನೇ ಮಂಚಕ್ಕೆ ಕರೆದಿದ್ದ ಇನ್‌ಸ್ಪೆಕ್ಟರ್‌ ಅಮಾನತು  

    ಫಾರೂಕ್ ಮಾದಾಪುರದಲ್ಲಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ. ದುಷ್ಕೃತ್ಯಕ್ಕೆ ಬಳಸಿರುವ 2 ಆಟೋರಿಕ್ಷಾಗಳು ನೌಶದ್ ಹಾಗೂ ರಶೀದ್ ಎಂಬವರಿಗೆ ಸೇರಿದ್ದಾಗಿದೆ. ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಓರ್ವ ಆರೋಪಿ ಹಾಗೂ ಎರಡು ಆಟೋರಿಕ್ಷಾಗಳನ್ನು ಸೋಮವಾರಪೇಟೆ ಪೋಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಗಳು ಹೊರದೇಶಗಳಿಗೆ ಪಲಾಯನವಾಗುವ ಸಾಧ್ಯತೆಯಿರುವುದರಿಂದ ದುಷ್ಕೃತ್ಯ ನಡೆಸಿದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ತಪ್ಪಿದಲ್ಲಿ ಅನ್ಯಾಯಕ್ಕೊಳಗಾದ ವಿವಾಹಿತೆ ಹಾಗೂ ಅವರ ಕುಟುಂಬ ವರ್ಗಕ್ಕೆ ನ್ಯಾಯ ದೊರಕಿಸಲು ಸಂಘಟನೆಯ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಲಾರಿ ಡಿಕ್ಕಿ – ಹೆದ್ದಾರಿಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದ ಏಳು ಲಕ್ಷ ಮೌಲ್ಯದ ಮದ್ಯ

    ಘಟನೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಹುಡುಕಾಟ ಮುಂದುವರೆಸಿದ್ದಾರೆ. ಇದನ್ನೂ ಓದಿ: ಗರ್ಭಪಾತಕ್ಕೆ ಯತ್ನ – 19ರ ಯುವತಿ ಸಾವು

  • ಕೋಣಗಳು ಕಾದಾಡಿದ್ದಕ್ಕೆ ಬಡಿದಾಡಿಕೊಂಡ ಮಾಲೀಕರು – ಆಸ್ಪತ್ರೆಗೆ ದಾಖಲು

    ಕೋಣಗಳು ಕಾದಾಡಿದ್ದಕ್ಕೆ ಬಡಿದಾಡಿಕೊಂಡ ಮಾಲೀಕರು – ಆಸ್ಪತ್ರೆಗೆ ದಾಖಲು

    ಮಡಿಕೇರಿ: ಮೇಯಲು ಬಿಟ್ಟ ಕೋಣಗಳು ಗುದ್ದಾಡಿದ ವಿಚಾರವನ್ನು ತೆಗೆದು ಎರಡು ಕುಟುಂಬಗಳು ಬಡಿದಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಗರ್ವಾಲೆ ಪಂಚಾಯ್ತಿ ವ್ಯಾಪ್ತಿಯ ಗುಂಬಾರಗಡಿಯಲ್ಲಿ ನಡೆದಿದೆ.

    ಎರಡು ದಿನಗಳ ಹಿಂದೆ ಕೃಷಿ ಜಮೀನಿನಲ್ಲಿ ಮೇಯಲು ಬಿಟ್ಟಿದ ಕೋಣಗಳು ಗುದ್ದಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮದ ದಾರಿಯಲ್ಲಿ ಬರುತ್ತಿದ್ದ ಒಂದು ಕೋಣದ ಮಾಲೀಕ 60 ವರ್ಷದ ಬಿದ್ದಪ್ಪ ಅವರನ್ನು ಮತ್ತೊಂದು ಕೋಣದ ಮಾಲೀಕ ಮಣಿ ಮತ್ತು ಗಿರೀಶ್ ಪ್ರಶ್ನಿಸಿದ್ದಾರೆ.

    ಮಾತು ಜೋರಾಗಿದ್ದು ಕೊನೆಗೆ ಬಿದ್ದಪ್ಪರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈಗ ಗಲಾಟೆ ಸೋಮವಾರಪೇಟೆ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದು ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಬಿದ್ದಪ್ಪ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

    ಗಂಭೀರವಾಗಿ ಗಾಯಗೊಂಡ ಬಿದ್ದಪ್ಪ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  • ಕೂಲಿ ಮುಗಿಸಿ ವಾಪಸ್ ಆಗುತ್ತಿದ್ದ ಕಾರ್ಮಿಕರಿಬ್ಬರ ಮೇಲೆ ಕಾಡಾನೆ ದಾಳಿ

    ಕೂಲಿ ಮುಗಿಸಿ ವಾಪಸ್ ಆಗುತ್ತಿದ್ದ ಕಾರ್ಮಿಕರಿಬ್ಬರ ಮೇಲೆ ಕಾಡಾನೆ ದಾಳಿ

    ಮಡಿಕೇರಿ: ಕೂಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಕಾರ್ಮಿಕರಿಬ್ಬರ ಮೇಲೆ ಕಾಡಾನೆಗಳು ದಾಳಿ ನಡೆಸಿದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

    ಸೋಮವಾರಪೇಟೆ ತಾಲೂಕಿನ ಕುಸುಬೂರು ನಿವಾಸಿಯಾದ ಕೃಷ್ಣ ಮತ್ತು ಕುಶಾಲಪ್ಪ ಗಂಭೀರವಾಗಿ ಗಾಯಗೊಂಡವರು. ಕೂಲಿ ಕೆಲಸ ಮುಗಿಸಿ ಸೋಮವಾರಪೇಟೆ ತಾಲ್ಲೂಕಿನ ಕಾರೆಕೊಪ್ಪಲಿನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆಗಳು ದಾಳಿ ನಡೆಸಿವೆ.

    ಘಟನೆಯಲ್ಲಿ ಕೃಷ್ಣ ಅವರ ಕಾಲು ಮುರಿದಿದ್ದು, ಕುಶಾಲಪ್ಪ ಅವರ ತಲೆಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಇಬ್ಬರಿಗೂ ಸೋಮವಾರಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕಾಡಾನೆ ದಾಳಿ ನಡೆಸುತ್ತಿದ್ದಂತೆ ಸ್ಥಳೀಯರು ಜೋರಾಗಿ ಕೂಗಾಡಿದ್ದರಿಂದ ಕಾಡಾನೆ ಇಬ್ಬರನ್ನು ಬಿಟ್ಟು ಹೋಗಿದೆ. ಹೀಗಾಗಿ ಇಬ್ಬರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆಗಳ ಉಪಟಳ ಸೋಮವಾರಪೇಟೆ ತಾಲೂಕಿನ ಹಲವೆಡೆ ತೀವ್ರಗೊಂಡಿರುವುದಕ್ಕೆ ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಲಾಕ್‍ಡೌನ್ ಉಲ್ಲಂಘಿಸಿ ಪ್ರವಾಸ- ರೆಸಾರ್ಟಿನಲ್ಲಿ ಮೋಜು, ಮಸ್ತಿ

    ಲಾಕ್‍ಡೌನ್ ಉಲ್ಲಂಘಿಸಿ ಪ್ರವಾಸ- ರೆಸಾರ್ಟಿನಲ್ಲಿ ಮೋಜು, ಮಸ್ತಿ

    ಮಡಿಕೇರಿ: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಕೆಲ ವ್ಯಕ್ತಿಗಳು ಪ್ರವಾಸ ಕೈಗೊಂಡಿದ್ದು, ರೆಸಾರ್ಟಿನಲ್ಲಿ ಮೋಜು ಮಸ್ತಿ ನಡೆಸಿದ್ದಾರೆ.

    ಹೆಮ್ಮಾರಿ ಕೊರೊನಾ ವೈರಸ್ ನಿಯಂತ್ರಿಸಲು ದೇಶವನ್ನು ಲಾಕ್‍ಡೌನ್ ಮಾಡಿ ಜನರು ಮನೆಯಲ್ಲಿರುವಂತೆ ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿದೆ. ವೈದ್ಯರು, ಪೊಲೀಸರು ಹಗಲು ರಾತ್ರಿ ಎನ್ನದೆ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಬೆಂಗಳೂರಿನ ಜನರಿಗೆ ಮಾತ್ರ ಇದೆಲ್ಲಕ್ಕಿಂತ ಮೋಜು ಮಸ್ತಿ ಪ್ರವಾಸವೇ ಮುಖ್ಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಕೆಲ ರೆಸಾರ್ಟ್ ಗಳಿಗೆ ದುಡಿಮೆಯೇ ಮುಖ್ಯವಾಗಿದೆ.

    ಸೋಮವಾರಪೇಟೆ ತಾಲೂಕಿನ 7ನೇ ಹೊಸಕೋಟೆ ಸಮೀಪದ ತೊಡೂರಿನಲ್ಲಿರುವ ಪ್ಯಾಡಿಂಗ್ಟನ್ ರೆಸಾರ್ಟ್ ನಲ್ಲಿ ಬೆಂಗಳೂರಿನ ಪ್ರವಾಸಿಗರು ಕಳೆದ ಕೆಲವು ದಿನಗಳಿಂದಲೂ ಮೋಜು ಮಸ್ತಿ ಮಾಡುತ್ತಿದ್ದಾರೆ. ಜೊತೆಗೆ ಪಕ್ಕದಲ್ಲೇ ಇರುವ ಚಿಕ್ಲಿಹೊಳೆ ಜಲಾಶಯಕ್ಕೆ ಸೈಕಲ್, ಜೀಪ್ ಮೂಲಕ ವಿಹಾರಕ್ಕೆ ತೆರಳಿ ಎಂಜಾಯ್ ಮಾಡುತ್ತಿದ್ದಾರೆ. ಕದ್ದು ಮುಚ್ಚಿ ಹೀಗೆ ಓಡಾಡಿಕೊಂಡಿದ್ದ ವೇಳೆ ಇಂದು ಗ್ರಾಮಸ್ಥರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ.

    ಜಿಲ್ಲೆಯಲ್ಲಿ ಓರ್ವರಿಗೆ ಕೊರೊನಾ ತಗುಲಿದ್ದರಿಂದ ಜಿಲ್ಲೆಯ ಎಲ್ಲಾ ಗಡಿಗಳನ್ನು ಬಂದ್ ಮಾಡಲಾಗಿತ್ತು. ಜಿಲ್ಲೆಯಿಂದ ಯಾರು ಹೊರ ಹೋಗದಂತೆ ಮತ್ತು ಒಳ ಬರದಂತೆ ಕಟ್ಟೆಚ್ಚರ ವಹಿಸಲಾಗಿದೆ. ಇಷ್ಟೆಲ್ಲಾ ಆದರೂ ಬೆಂಗಳೂರಿನಿಂದ ಕೆಲವರು ಕೊಡಗಿನ ರೆಸಾರ್ಟಿಗೆ ಬಂದಿದ್ದು ಹೇಗೆ ಎನ್ನುವ ಪ್ರಶ್ನೆ ಉದ್ಭವಿಸಿದೆ. ಅಷ್ಟೇ ಅಲ್ಲದೆ ಪ್ರವಾಸಿಗರಿಗೆ ಆತಿಥ್ಯ ನೀಡಿರುವ ಪ್ಯಾಡಿಂಗ್ಟನ್ ರೆಸಾರ್ಟ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

  • ವಿದೇಶಿ ಪ್ರಜೆ ಅನುಮಾನಾಸ್ಪದ ಸಾವು- ಕೊಲೆ ಶಂಕೆ

    ವಿದೇಶಿ ಪ್ರಜೆ ಅನುಮಾನಾಸ್ಪದ ಸಾವು- ಕೊಲೆ ಶಂಕೆ

    ಮಡಿಕೇರಿ: ವಿದೇಶಿ ಪ್ರಜೆಯೊಬ್ಬರು ಅನುಮಾನಾಸ್ಪದ ರೀತಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ನಡೆದಿದೆ.

    ಸ್ಪೇನ್ ದೇಶದ ಕಾರ್ಲೋಸ್(65) ಮೃತ ವಿದೇಶ ಪ್ರಜೆ. ಕಾರ್ಲೋಸ್ ಸೋಮೇಶ್ವರ ಬಡಾವಣೆಯ ಐಟಿಐ ಕಾಲೇಜು ಕಟ್ಟಡದ ಮೇಲ್ಭಾಗದಲ್ಲಿ ಕಳೆದ ಎಂಟು ತಿಂಗಳಿನಿಂದ ಬಾಡಿಗೆಗೆ ವಾಸವಿದ್ದರು. ಆದರೆ ಇಂದು ಅಡುಗೆ ಮನೆಯಲ್ಲಿ ಹಾಸಿಗೆಯ ಮೇಲೆ ಮಲಗಿದ ಸ್ಥಿತಿಯಲ್ಲಿ ಶವವಾಗಿ ಕಾಣಿಸಿಕೊಂಡಿದ್ದಾರೆ.

    ಸ್ಪೇನ್ ದೇಶದ ನೌಕಾಪಡೆಯ ನಿವೃತ್ತ ಯೋಧ ಕಾರ್ಲೋಸ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. 2003ರಲ್ಲಿ ಕೇರಳದಲ್ಲಿ ವಾಸವಿದ್ದ ಕಾರ್ಲೋಸ್ 2008ರಲ್ಲಿ ಕುಶಾಲನಗರಕ್ಕೆ ಬಂದು ಮಕ್ಕಳ ಜೊತೆಗೆ ಸೋಮೇಶ್ವರ ಬಡಾವಣೆಯಲ್ಲಿ ವಾಸವಾಗಿದ್ದರು. ಇಲ್ಲಿನ ಟಿಬೆಟಿಯನ್ ಕ್ಯಾಂಪ್‍ನಲ್ಲಿ ಗಿಟಾರ್ ನುಡಿಸಿ ಹಣ ಸಂಪಾದನೆ ಮಾಡುತ್ತಿದ್ದರು. ಅಷ್ಟೇ ಅಲ್ಲದೆ ಸ್ಪೇನ್ ಸರ್ಕಾರದಿಂದ ಪಿಂಚಣಿ ಹಣ ಕೂಡ ಪಡೆಯುತ್ತಿದ್ದರು ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಕಳೆದ ಕೆಲ ದಿನಗಳಿಂದ ಕಾರ್ಲೋಸ್ ಮಕ್ಕಳು ಮನೆಯಲ್ಲಿ ಇರಲಿಲ್ಲ. ಆದರೆ ಮನೆಯಿಂದ ಮೃತ ದೇಹ ಕೊಳೆತ ವಾಸನೆ ಬರಲು ಆರಂಭಿಸಿತ್ತು. ಹೀಗಾಗಿ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕುಶಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಕಾರ್ಲೋಸ್ ಮದ್ಯ ವ್ಯಸನಿಯಾಗಿದ್ದ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಲಗಿದ ಹಾಸಿಗೆ ಮೇಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ಯಾರೋ ಕೊಲೆಗೈದು ಅಪರಾರಿಯಾಗಿದ್ದಾರೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಈ ಸಂಬಂಧ ಕುಶಾಲನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಸಾಲ ವಾಪಸ್ ಕೇಳಿದ್ದಕ್ಕೆ ತಾಯಿ-ಮಗಳಿಂದ ವ್ಯಕ್ತಿಯ ಬರ್ಬರ ಹತ್ಯೆ

    ಸಾಲ ವಾಪಸ್ ಕೇಳಿದ್ದಕ್ಕೆ ತಾಯಿ-ಮಗಳಿಂದ ವ್ಯಕ್ತಿಯ ಬರ್ಬರ ಹತ್ಯೆ

    ಮಡಿಕೇರಿ: ಸಾಲದ ಹಣ ವಾಪಸ್ ಕೇಳಿದ ವ್ಯಕ್ತಿಯನ್ನು ತಾಯಿ ಹಾಗೂ ಮಗಳ ಸೇರಿ ಬರ್ಬರವಾಗಿ ಹತ್ಯೆಗೈದ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಹಳೇ ಕೂಡಿಗೆಯಲ್ಲಿ ನಡೆದಿದೆ.

    ಕೂಡಿಗೆ ಗ್ರಾಮದ ಶಿವು (35) ಹತ್ಯೆಯಾದ ವ್ಯಕ್ತಿ. ಕಮಲಮ್ಮ (50) ಹಾಗೂ ಹರಿಣಿ ಕೊಲೆ ಮಾಡಿದ ಆರೋಪಿಗಳು. ಘಟನೆಯಿಂದಾಗಿ ಕೂಡಿಗೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

    ಮನೆ ಲೀಸ್ ಹಾಕಿಕೊಳ್ಳಲು ಶಿವು ಸಂಬಂಧಿ ಕಮಲಮ್ಮಗೆ ಸಾಲ ನೀಡಿದ್ದ. ಕಮಲಮ್ಮ ಪಡೆದಿದ್ದ ಸಾಲವನ್ನು ಮರಳಿಸಲು ಸತಾಯಿಸುತ್ತಿದ್ದಳು. ಇದರಿಂದ ಬೇಸತ್ತ ಶಿವು ಕಳೆದ ಕೆಲವು ದಿನಗಳಿಂದ ಕಮಲಮ್ಮನ ಮನೆಗೆ ಬಂದು ಹಣ ನೀಡುವಂತೆ ಒತ್ತಾಯಿಸಿದ್ದಾನೆ. ಭಾನುವಾರವೂ ಮನೆಗೆ ಬಂದು ಗಲಾಟೆ ಮಾಡಿದ್ದಾನೆ.

    ಮನೆಯ ಒಳಗೆ ಬಂದು ಶಿವು ಮೇಲೆ ಕಮಲಮ್ಮ ಹಾಗೂ ಮಗಳು ಹರಿಣಿ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ದೀಪದ ಕಂಬದಿಂದ ಹೊಡೆದು ಹತ್ಯೆಗೈದಿದ್ದಾರೆ. ಬಳಿಕ ಶಿವು ಮೃತ ದೇಹವನ್ನು ಮಂಚದ ಕೆಳಗೆ ಬಚ್ಚಿಟ್ಟು ಪೊಲೀಸ್ ಠಾಣೆಗೆ ಹೋಗಿದ್ದಾರೆ. ಈ ವೇಳೆ ಶಿವು ತಮ್ಮ ಮನೆಗೆ ಆಗಾಗ ಬಂದು ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ದಾಖಲಿಸಿ ಮನೆಗೆ ವಾಪಸ್ ಹೋಗಿದ್ದಾರೆ. ಆದರೆ ಶಿವು ಕೊಲೆಯಾದ ವಿಚಾರವನ್ನು ಸ್ಥಳೀಯರು ಆತನ ಕುಟುಂಬದವರಿಗೆ ಹಾಗೂ ಪೊಲೀಸರಿಗೆ ತಿಳಿಸಿದ್ದಾರೆ.

    ತಕ್ಷಣವೇ ಶಿವು ಕುಟುಂಬಸ್ಥರು ಕಮಲಮ್ಮನ ಮನೆಯ ಬಾಗಿಲು ಮುರಿದು ಹಲ್ಲೆಗೆ ಮುಂದಾಗಿದ್ದರು. ಈ ವೇಳೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಜನರನ್ನು ಚದುರಿಸಿದ್ದಾರೆ. ಆದರೂ ಆರೋಪಿಗಳನ್ನು ತಮಗೆ ಒಪ್ಪಿಸುವಂತೆ ಶಿವು ಸಂಬಂಧಿಕರು ಹಾಗೂ ಗ್ರಾಮಸ್ಥರು ಮನೆ ಮೇಲೆ ಕಲ್ಲು ತೂರಾಟ ನಡೆಸಿದರು. ಇದರಿಂದಾಗಿ ಗ್ರಾಮದಲ್ಲಿ ಕೆಲ ಹೊತ್ತು ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

    ಕೊಡಗು ಎಸ್‍ಪಿ ಡಾ.ಸುಮನ್ ಡಿ ಪನ್ನೇಕರ್ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಭಾಯಿಸಿದರು. ಬಳಿಕ ಮನೆಗೆ ಬಾಗಿಲು ತೆಗೆದು ಮಂಚದ ಕೆಳಗಿದ್ದ ಶಿವು ಮೃತ ದೇಹವನ್ನು ಹೊರಗೆ ತೆಗೆದು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ. ಈ ವೇಳೆ ಶಿವು ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಹೇಳಿಕೆಯನ್ನು ದಾಖಲಿಸಿಕೊಂಡರು.

    ಈ ಸಂಬಂಧ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.