Tag: Sonal Montero

  • ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾಗೆ ಶುಭಾರಂಭ

    ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾಗೆ ಶುಭಾರಂಭ

    ಶ್ರೀನಿವಾಸ್ ಮಂಡ್ಯ ನಿರ್ದೇಶಿಸುತ್ತಿರುವ ‘ರೋಲೆಕ್ಸ್ ಕೋಮಲ್’ ಚಿತ್ರತಂಡ ಇಂದು ಮುಹೂರ್ತ ಆಚರಿಸಿಕೊಂಡಿದೆ. ಸೆನ್ಸೇಶನಲ್ ಸ್ಟಾರ್ ಕೋಮಲ್, ಸೋನಾಲ್ ಮೊಂಟೆರೋ ಮುಖ್ಯ ಭೂಮಿಕೆಯ ಈ ಚಿತ್ರದ ಚಿತ್ರೀಕರಣ ನಾಳೆಯಿಂದ ಆರಂಭವಾಗಲಿದೆ. ನಿರ್ದೇಶಕ ಶ್ರೀನಿವಾಸ್ ಮಂಡ್ಯ ಮಾತನಾಡಿ ನಾಳೆಯಿಂದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು ಸುತ್ತಾಮುತ್ತ ಚಿತ್ರೀಕರಣ ನಡೆಯಲಿದೆ. ಕೋಮಲ್ ಸರ್ ಈ ಹಿಂದಿನ ತಮ್ಮ ಸಿನಿಮಾಗಳಿಗಿಂತ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಪಾತ್ರ ವಿಭಿನ್ನವಾಗಿದೆ. ವಿಭಿನ್ನವಾಗಿ ಸಿನಿಮಾವನ್ನು ಕಟ್ಟಿಕೊಡುವ ಪ್ರಯತ್ನ ಮಾಡಿದ್ದೇನೆ. ರಂಗಾಯಣ ರಘು, ಶೋಭರಾಜ್, ಅಪೂರ್ವ ಸೇರಿದಂತೆ ಹಲವು ಕಲಾವಿದರು ತಾರಾಬಳಗದಲ್ಲಿದ್ದಾರೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

    ನಟ ಕೋಮಲ್ ಮಾತನಾಡಿ ನಾಳೆಯಿಂದ ಚಿತ್ರೀಕರಣ ಆರಂಭವಾಗುತ್ತೆ. ರೋಲೆಕ್ಸ್ ಅನ್ನೋದು ಒಂದು ಬ್ರ್ಯಾಂಡ್ ಆ ಬ್ರ್ಯಾಂಡ್ ಹೇಗೆ ಕ್ರಿಯೇಟ್ ಆಗುತ್ತೆ ಅನ್ನೋದೇ ಈ ಚಿತ್ರದ ಎಳೆ. ತುಂಬಾ ಎಂಟಟೈನ್ಮೆಂಟ್ ಆಗಿದೆ ಸಿನಿಮಾ. ಸಾಕಷ್ಟು ಟ್ವಿಸ್ಟ್ ಅಂಡ್ ಟರ್ನ್ ಇದೆ. ಗರಗಸ ನಂತರ ಈ ತರದೊಂದು ಪ್ರಯೋಗ ಮಾಡುತ್ತಿದ್ದೇನೆ. ಪರ್ಫಾಮೆನ್ಸ್ ಗೆ ಸಾಕಷ್ಟು ಅವಕಾಶ ಇದೆ. ಹಾಡುಗಳು ಈಗಾಗಲೇ ರೆಕಾರ್ಡ್ ಆಗಿದೆ.  ಆಲ್ಬಂ ಹಿಟ್ ಆಗೋ ಎಲ್ಲಾ ಸೂಚನೆ ಕೂಡ ಇದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆಗೆ ಸಾಕ್ಷಿಯಾದ ಸೆಲೆಬ್ರಿಟಿಗಳು

    ಸೋನಾಲ್ ಮೊಂಟೆರೋ ಮಾತನಾಡಿ ಇಡೀ ಸಿನಿಮಾದಲ್ಲಿ ನಾನು ಕೋಮಲ್ ಸರ್ ಕ್ಯಾರಿ ಆಗ್ತೀವಿ. ನಾಳೆಯಿಂದ ಚಿತ್ರೀಕರಣ ಆರಂಭವಾಗುತ್ತೆ. ನನ್ನ ಭಾಗದ ಚಿತ್ರೀಕರಣ 25ದಿನ ನಡೆಯಲಿದೆ. ಸದ್ಯ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತದೆ. ಶುಗರ್ ಫ್ಯಾಕ್ಟರಿ ಬಿಡುಗಡೆಗೆ ರೆಡಿಯಾಗಿದೆ. ಮಿ. ನಟ್ವರ್ ಲಾಲ್, ಬುದ್ದಿವಂತ 2, ಗರಡಿ, ಮಹಾದೇವ, ತಲ್ವರ್ ಪೇಟೆ, ಸರೋಜಿನಿ ನಾಯ್ಡು ಸಿನಿಮಾಗಳಲ್ಲಿ ನಟಿಸುತ್ತಿದ್ದೇನೆ ಎಂದು ತಿಳಿಸಿದ್ರು.

    ನಿರ್ಮಾಪಕ ಅನಿಲ್ ಕುಮಾರ್ ಮಾತನಾಡಿ ಫೀನಿಕ್ಸ್ ಎಂಟರ್ಟೈನ್ಮೆಂಟ್ಸ್ ನಲ್ಲಿ ಮೂಡಿ ಬರ್ತಿರುವ ಮೊದಲ ಕನ್ನಡ ಸಿನಿಮಾ. ಚಿತ್ರದ ಕಥೆ ನನಗೆ ತುಂಬಾ ಇಷ್ಟ ಆಯ್ತು. ಕೋಮಲ್ ಸರ್ ಕೂಡ ಕಥೆ ಕೇಳಿ ಒಕೆ ಮಾಡಿದ್ದು ತುಂಬಾ ಖುಷಿ ಆಯ್ತು. ಈ ಸಬ್ಜೆಕ್ಟ್ ಮೇಲೆ ಕೋಮಲ್ ಸರ್ ಕೂಡ ಬಹಳ ನಂಬಿಕೆ ಇಟ್ಟಿದ್ದಾರೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬರಲಿದೆ. ಸೆಪ್ಟೆಂಬರ್ ನಲ್ಲಿ ಸಿನಿಮಾ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇವೆ. ರಾಕೇಶ್ ಸಿ ತಿಲಕ್ ಕ್ಯಾಮೆರಾ ವರ್ಕ್, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನ, ಅರವಿಂದ್ ರಾಜ್ ಸಂಕಲನ ಚಿತ್ರಕ್ಕಿದೆ ಎಂದು ತಿಳಿಸಿದ್ರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೋಮಲ್ ಜೊತೆ ಡ್ಯುಯೆಟ್ ಹಾಡಲು ಬಂದ ಕರಾವಳಿ ಹುಡುಗಿ

    ಕೋಮಲ್ ಜೊತೆ ಡ್ಯುಯೆಟ್ ಹಾಡಲು ಬಂದ ಕರಾವಳಿ ಹುಡುಗಿ

    ಕೋಮಲ್ (Komal) ಆಫ್ಟರ್ ಲಾಂಗ್ ಬ್ರೇಕ್ ಬಳಿಕ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲೂ ಬ್ಯುಸಿಯಾಗುತ್ತಿದ್ದಾರೆ. ಶ್ರೀನಿವಾಸ್ ಮಂಡ್ಯ (Srinivas Mandya) ನಿರ್ದೇಶನದಲ್ಲಿ ಮೂಡಿ ಬರ್ತಿರೋ ‘ರೋಲೆಕ್ಸ್ ಕೋಮಲ್’ (Rolex) ಚಿತ್ರಕ್ಕೆ ಕೋಮಲ್ ಬಣ್ಣ ಹಚ್ಚುತ್ತಿದ್ದಾರೆ. ಫೋಟೋಶೂಟ್ ಮೂಲಕ ಗಮನ ಸೆಳೆದ ಈ ಚಿತ್ರ ಜನವರಿ 26ರಂದು ಸೆಟ್ಟೇರುತ್ತಿದೆ. ಅದಕ್ಕೂ ಮುನ್ನ ಚಿತ್ರತಂಡದಿಂದ ಹೊಸದೊಂದು ಅಪ್ಡೇಟ್ ಹೊರಬಿದ್ದಿದೆ.

    ‘ರೋಲೆಕ್ಸ್ ಕೋಮಲ್’ ಚಿತ್ರಕ್ಕೆ ನಾಯಕಿ ಹುಡುಕಾಟದಲ್ಲಿದ್ದ ಚಿತ್ರತಂಡಕ್ಕೆ ಕರಾವಳಿ ಬೆಡಗಿ ಸೋನಾಲ್ ಮೊಂಟೆರೋ (Sonal Montero) ಜೊತೆಯಾಗಿದ್ದಾರೆ. ಚಿತ್ರದ ಕಥೆ ಕೇಳಿ ಇಂಪ್ರೆಸ್ ಆಗಿರೋ ಸೋನಾಲ್ ಕೋಮಲ್ ಜೊತೆ ನಟಿಸೋಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸ್ಯಾಂಡಲ್ ವುಡ್ ಅಂಗಳದಲ್ಲಿ ಸಖತ್ ಬ್ಯುಸಿಯಾಗಿರೋ ಸೋನಾಲ್ ಮೊಂಟೆರೋ ಹಲವು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ. ಇದೀಗ ‘ರೋಲೆಕ್ಸ್ ಕೋಮಲ್’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದು ‘ರೋಲೆಕ್ಸ್ ಕೋಮಲ್’ ಚಿತ್ರತಂಡ ಸೇರಿಕೊಂಡಿದ್ದಾರೆ. ಇದನ್ನೂ ಓದಿ: `ಧಮಾಕ’ ಸಕ್ಸಸ್ ನಂತರ ಕನ್ನಡತಿ ಶ್ರೀಲೀಲಾಗೆ ತೆಲುಗಿನಲ್ಲಿ ಡಿಮ್ಯಾಂಡ್

    ಕಂಟೆಂಟ್ ಬೇಸ್ಡ್ ಸಿನಿಮಾವಾಗಿರೋ ಈ ಚಿತ್ರ ನಿರ್ದೇಶಕ ಶ್ರೀನಿವಾಸ್ ಮಂಡ್ಯ ಅವರ ಎರಡನೇ ಸಿನಿಮಾ ವೆಂಚರ್. ಈ ಹಿಂದೆ ‘ಬಿಲ್ ಗೇಟ್ಸ್’ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀನಿವಾಸ್ ಮಂಡ್ಯ ಈ ಬಾರಿ  ಇಂಟ್ರಸ್ಟಿಂಗ್ ಕಥೆ ಹೊತ್ತು ಬಂದಿದ್ದಾರೆ. ಜನವರಿ 26ರಂದು ಸಿನಿಮಾ ಸೆಟ್ಟೇರಲಿದ್ದು 27ರಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ಶ್ರೀನಿವಾಸ್ ಮಂಡ್ಯ ತಿಳಿಸಿದ್ದಾರೆ.

    ಫೀನಿಕ್ಸ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಡಿ ಅನಿಲ್ ಕುಮಾರ್. ಎಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಂಗಾಯಣ ರಘು, ಶೋಭರಾಜ್, ಅರವಿಂದ್, ಅಪೂರ್ವ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ರಾಕೇಶ್ ಸಿ ತಿಲಕ್ ಕ್ಯಾಮೆರಾ ವರ್ಕ್, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನ, ಅರವಿಂದ್ ರಾಜ್ ಸಂಕಲನ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮೊದಲ ಹೆಜ್ಜೆಯಲ್ಲೇ ಭರವಸೆಯ ಛಾಪು ಮೂಡಿಸಿದ ಝೈದ್ ನಟನೆ

    ಮೊದಲ ಹೆಜ್ಜೆಯಲ್ಲೇ ಭರವಸೆಯ ಛಾಪು ಮೂಡಿಸಿದ ಝೈದ್ ನಟನೆ

    ಝೈದ್ ಖಾನ್ (Zaid Khan) ಹಾಗೂ ಸೋನಲ್ ಮೊಂತೆರೋ (Sonal Montero) ನಟನೆಯ  ಬನಾರಸ್ ಸಿನೆಮಾ ಸಾಕಷ್ಟು ಕ್ರೇಜ್ ಗಳೊಂದಿಗೆ ಬಿಡುಗಡೆಗೊಂಡು, ಕನ್ನಡವೂ ಸೇರಿದಂತೆ ಪಂಚ ಭಾಷೆಯಲ್ಲೂ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ತಿದೆ. ನಿರ್ದೇಶಕ ಜಯತೀರ್ಥ (Jayathirtha) ಬನಾರಸ್ ಗೆ (Banaras) ಆಕ್ಷನ್ ಕಟ್ ಹೇಳ್ತಿದ್ದಾರೆ ಅಂದಾಗ ಹೆಚ್ಚಾಗಿದ್ದ ಕುತೂಹಲ ಮೂಡಿಕೊಳ್ಳೋದು ಸಹಜ. ಈ ಚಿತ್ರಕ್ಕೆ ಝೈದ್ ಖಾನ್ ನಾಯಕರಾಗ್ತಿದ್ದಾರೆ ಅಂದಾಗ ಚರ್ಚೆ ಬೇರೆಯದ್ದೇ ಮಟ್ಟಕ್ಕೆ ತಲುಪಿತ್ತು. ಯಾಕಂದ್ರೆ, ಹಣವಿದ್ದವರಿಗೆ ಈ ಸಿನೆಮಾಗಳೆಲ್ಲ ಶೋಕಿಗಾಗಿ, ಹಣದ ಬಲ ಪ್ರದರ್ಶನದಲ್ಲಿ ಸಿನೆಮಾ ಮುಗಿದು ಹೋಗತ್ತೆ ಅನ್ನೋ ಬೇರೆಯದ್ದೇ ತರಹದ ಮಾತುಗಳು, ವಿಮರ್ಶೆಗಳು ಕೇಳಿಬಂದಿದ್ದವು. ಜೊತೆಗೆ ಬಾಯ್ಕಾಟ್ ಬನಾರಸ್ ಎಂಬ ವಿರೋಧಗಳ ಕೂಗು ಸಹ ಜೋರಾಗಿನೇ ಇತ್ತು. ಆದ್ರೆ ಇವರೆಲ್ಲರ ಮಾತನ್ನ, ನಂಬಿಕೆಯನ್ನ, ವಿರೋಧ ಗಳನ್ನ ಗೆದ್ದು ಝೈದ್ ತಾನೊಬ್ಬ ಅದ್ಭುತ ನಟನೆಂಬುದನ್ನ ಪ್ರೂವ್ ಮಾಡಿದ್ದಾರೆ.

    ಈಗ ಪಂಚ ಭಾಷೆಗಳಲ್ಲೂ ತೆರೆಕಂಡು ಮಿನುಗುತ್ತಿರುವ ಬನಾರಸ್ ಬಗೆಗಿನ ಪಾಸಿಟಿವ್ ಮಾತುಗಳೇ ಸಿನೆಮಾದ ಮಿಂಚಿನ ಓಟಕ್ಕೆ ನಾಂದಿ ಹಾಡಿವೆ. ಕರ್ನಾಟಕದಲ್ಲಂತೂ ಬನಾರಸ್ ನೋಡಿದ ಸಿನಿಪ್ರಿಯರಿಗೆ ಝೈದ್ ನಟನೆ ನುರಿತ ಕಲಾವಿದನಂತೆ ಕಾಣಿಸಿದೆ. ಹಾಗಾಗಿಯೇ ಝೈದ್ ನಟನೆಯನ್ನ ಮೆಚ್ಚಿ ಕೊಂಡಾಡುತ್ತಿದ್ದಾರೆ. ಇದಕ್ಕೆಲ್ಲ ಕಾರಣವಾಗಿದ್ದು ಬಹುಶಃ ಝೈದ್ ಸಿನೆಮಾ ರಂಗಕ್ಕೆ ಪಾದಾರ್ಪಣೆ ಮಾಡುವ ಮೊದಲು ವಹಿಸಿದ್ದ ಶ್ರಮ, ಶ್ರದ್ದೆಯೇ. ಶ್ರೀಮಂತರ ಮನೆಯಿಂದ ಯಾರೇ ಸಿನಿಮಾ ರಂಗಕ್ಕೆ ಬಂದರೂ ಕೂಡಾ ಅದೊಂದು ತೆರೆನಾದ ಚಿಕಿತ್ಸಕ ನೋಟ ಅವರತ್ತ ನೆಟ್ಟಿರುವುದು ಸಹಜ.  ಹಣಬಲ ಒಂದರಿಂದಲೇ ಅಂಥವರು ಜಯಿಸಿಕೊಳ್ಳಲು ಹವಣಿಸುತ್ತಿದ್ದಾರೆ ಎಂಬಂತಹ ವಿಮರ್ಶೆಗಳೂ ಮೊದಲು ಝೈದ್ ಖಾನ್ ಬಗ್ಗೆಯೂ  ಇದ್ದದ್ದು ಸುಳ್ಳಲ್ಲ. ಆದ್ರೆ ಸಿನೆಮಾ ನೋಡಿದ ಮೇಲಂತು ಝೈದ್ ಓರ್ವ ಭರವಸೆಯ ನಟ, ಬನಾರಸ್ ನಾಯಕನಾಗಿ ಆತ ಅದ್ಭುತವಾಗಿ ನಟಿಸಿದ್ದಾರೆಂಬ ಮೆಚ್ಚುಗೆ ಪ್ರೇಕ್ಷಕರ ಕಡೆಯಿಂದಲೇ ವ್ಯಾಪಕವಾಗಿ ಕೇಳಿ ಬರುತ್ತಿದೆ.

    ಈ ಹಿಂದೆ ಝೈದ್ ಬಗ್ಗೆ ಸ್ಟಾರ್ ನಟರೊಬ್ಬರು ಬನಾರಸ್ ಸಿನೆಮಾವನ್ನ ನೋಡಿ,  ಝೈದ್ ಖಾನ್ ಈಗಾಗಲೇ ಮೂರ್ನಾಲಕ್ಕು ಸಿನಿಮಾ ಮಾಡಿದ್ದಾರೇನೋ ಅಂತ ಫೀಲ್ ಆಗುವಂತೆ ನಟಿಸಿದ್ದಾರೆಂದೂ ಹೇಳಿದ್ದರು. ಬನಾರಸ್ ಅನ್ನು ಕಣ್ತುಂಬಿಕೊಂಡ ಪ್ರತಿಯೊಬ್ಬರಿಗೂ ದರ್ಶನ್ ಹೇಳಿರೋದು ಅಕ್ಷರಶಃ ನಿಜವೆನ್ನಿಸಿದಂತೆ ನಟಿಸಿದ್ದಾರೆ ಝೈದ್. ಇದನ್ನೂ ಓದಿ: ಕನ್ನಡತಿ ಅನುಷಾ ಶೆಟ್ಟಿ ಜೊತೆ ತೆಲುಗು ಸ್ಟಾರ್ ನಾಗಶೌರ್ಯ ಮದುವೆ

    ಸದ್ಯ ಬನಾರಸ್ ಪ್ರಭೆ  ಕರ್ನಾಟಕದ ಉದ್ದಗಲಕ್ಕೂ ಹಬ್ಬಿದ್ದು,  ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಇದೇ ಖುಷಿಯಲ್ಲಿ ಝೈದ್ ಸಿನಿಮಾ ಮಂದಿರಗಳಿಗೆ ಭೇಟಿ ನೀಡಿ ಅಭಿಮಾನಿಗಳೊಂದಿಗೆ ಸಿನೆಮಾ ನೋಡಿ ಅವರ ಪ್ರತಿಕ್ರಿಯೆಯನ್ನು ಎಂಜಾಯ್ ಮಾಡ್ತಿದ್ದಾರೆ.ಈ ಮೂಲಕ ಕರ್ನಾಟಕ ಸೇರಿದಂತೆ ಇತರ ರಾಜ್ಯಗಳಲ್ಲೂ ಪ್ರೇಕ್ಷಕ ವರ್ಗವೇ ನಿರ್ಧರಿಸಿದಂತೆ  ಚಿತ್ರರಂಗಕ್ಕೆ ಝೈದ್ ಖಾನ್  ಒಂದೊಳ್ಳೆ ಭರವಸೆಯ ನಟನೆಂಬುದನ್ನ ಮೊದಲ ಸಿನೆಮಾದಲ್ಲೇ ಒಪ್ಪಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹುಬ್ಬಳ್ಳಿಯಲ್ಲಿ ಝೈದ್ ಖಾನ್ ನಟನೆಯ ‘ಬನಾರಸ್’ ಸಿನಿಮಾದ ಪ್ರಿರಿಲೀಸ್ ಕಾರ್ಯಕ್ರಮ

    ಹುಬ್ಬಳ್ಳಿಯಲ್ಲಿ ಝೈದ್ ಖಾನ್ ನಟನೆಯ ‘ಬನಾರಸ್’ ಸಿನಿಮಾದ ಪ್ರಿರಿಲೀಸ್ ಕಾರ್ಯಕ್ರಮ

    ಶಾಸಕ ಜಮೀರ್ ಅಹ್ಮದ್‌ಖಾನ್ ಅವರ ಪುತ್ರ ಝೈದ್‌ ಖಾನ್ (Zaid Khan) ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಚಿತ್ರ ಬನಾರಸ್. ಬೆಲ್ ಬಾಟಂ ಖ್ಯಾತಿಯ ಜಯತೀರ್ಥ (Jayathirtha) ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದ ಬಿಡುಗಡೆ ಪೂರ್ವ ಮನರಂಜನಾ (ಪ್ರೀರಿಲೀಸ್ ಇವೆಂಟ್) (Prerelease) ಕಾರ್ಯಕ್ರಮ ಶನಿವಾರ ಸಂಜೆ ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯ ರೈಲ್ವೇ ಸ್ಪೋರ್ಟ್ಸ್ ಗ್ರೌಂಡ್ ಆವರಣದಲ್ಲಿ ಅದ್ದೂರಿಯಾಗಿ ನೆರವೇರಿತು.

    ಈಗಾಗಲೇ ತನ್ನ ಸುಂದರ ಹಾಡುಗಳು ಹಾಗೂ ಟ್ರೈಲರ್ ಮೂಲಕ ಜನಪ್ರಿಯವಾಗಿರುವ ಬನಾರಸ್ (Banaras) ಚಿತ್ರದ ಈ ವರ್ಣರಂಜಿತ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ವಿನೋದ್ ಪ್ರಭಾಕರ್, ನೆನಪಿರಲಿ ಪ್ರೇಮ್, ವಿ.ನಾಗೇಂದ್ರ ಪ್ರಸಾದ್, ನಿರ್ದೇಶಕ ಜಯತೀರ್ಥ ಸೇರಿದಂತೆ ಚಿತ್ರರಂಗದ ಹಲವಾರು ಪ್ರಮುಖರು ಭಾಗವಹಿಸಿದ್ದರು. ಸತತ ಮೂರು ಗಂಟೆಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ನಡೆದ ವಿವಿಧ ಮನಮೋಹಕ ನೃತ್ಯ-ಗಾಯನಗಳನ್ನು  ನೆರೆದಿದ್ದ ಜನತೆ ತದೇಕಚಿತ್ತದಿಂದ ವೀಕ್ಷಿಸಿದರು. ಇದನ್ನೂ ಓದಿ:ದೇವರು ಮೆಚ್ಚೋದಿಲ್ಲ ಎಂದು ಸಾನ್ಯ ವಿರುದ್ಧ ರಾಂಗ್ ಆದ ಸಂಬರ್ಗಿ

    ನಂತರ ನಾಯಕನಟ ಜೈದ್‌ಖಾನ್ ಮಾತನಾಡುತ್ತ ‘ಇಂದು ನನ್ನ ಜೀವನದಲ್ಲಿ  ತುಂಬಾ ದೊಡ್ಡ ದಿನ, ನನ್ನ ಜೀವನದ ಇಬ್ಬರು ದೊಡ್ಡ ಶಕ್ತಿಗಳು ಇಲ್ಲಿ ಬಂದಿದ್ದಾರೆ. ನನಗೆ ಅಣ್ಣನ ಸಮಾನರಾದ ದರ್ಶನ್ ಹಾಗೂ  ನನ್ನಪ್ಪ, ಅವರು ಇದೇ ಮೊದಲಬಾರಿಗೆ ನನ್ನ ಸಿನಿಮಾ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಅಪ್ಪನಿಗೆ ಈ ವೇದಿಕೆಯ ಮೇಲೆ ಭರವಸೆ ನೀಡುತ್ತೇನೆ. ಅಪ್ಪಾ, ನೀವು ತಲೆತಗ್ಗಿಸುವ ಕೆಲಸ ಎಂದೂ ಮಾಡಲ್ಲ. ಇವತ್ತು ನಾನಿಲ್ಲಿ ನಿಂತಿದ್ದೇನೆ ಎಂದರೆ ಅದಕ್ಕೆ ನನ್ನಪ್ಪನೇ ಕಾರಣ. ಅಲ್ಲದೆ ದರ್ಶನಣ್ಣ ನನಗೆ ಮೊದಲಿಂದಲೂ ತುಂಬಾ ಸಪೋರ್ಟ್ ಮಾಡುತ್ತಿದ್ದಾರೆ. ಇನ್ನು ಬನಾರಸ್ ಚಿತ್ರದ ಬಗ್ಗೆ ಹೇಳುವುದಾದರೆ ಇದರಲ್ಲಿ ತುಂಬಾನೇ ವಿಶೇಷತೆಗಳಿವೆ. ಚಿತ್ರಕ್ಕಾಗಿ ನಾನು ತುಂಬಾನೇ ಕಷ್ಟಪಟ್ಟಿದ್ದೇನೆ. ಜಯತೀರ್ಥ ಅವರು ಒಂದು ಅದ್ಭುತ ಚಿತ್ರವನ್ನು ನನಗಾಗಿ ಮಾಡಿ ಕೊಟ್ಟಿದ್ದಾರೆ. ನ.೪ರಂದು ಚಿತ್ರ ದೇಶಾದ್ಯಂತ ಬಿಡುಗಡೆಯಾಗುತ್ತಿದೆ, ಸಿನಿಮಾ ಜನರ ಮನಸನ್ನು ಗೆದ್ದೇಗೆಲ್ಲುತ್ತೆ ಎಂಬ ಭರವಸೆಯಿದೆ. ಚಿತ್ರ ನೋಡಿ ಹರಸಿ’ ಎಂದು ಕೇಳಿಕೊಂಡರು.

    ಬನಾರಸ್ ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಹೀಗೆ ಏಕಕಾಲದಲ್ಲಿ ಐದು ಭಾಷೆಗಳಲ್ಲಿ ತಯಾರಾಗಿರುವ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತಿಲಕ್‌ರಾಜ್ ಬಲ್ಲಾಳ್ ಅವರು ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದಾರೆ. ಪಂಚರಂಗಿ ಖ್ಯಾತಿಯ ಸೋನಲ್ ಮೊಂತೇರೋ (Sonal Montero) ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ಸುಜಯ್ ಶಾಸ್ತ್ರಿ,  ದೇವರಾಜ್, ಅಚ್ಯುತ್ ಕುಮಾರ್, ಸಪ್ನಾ ರಾಜ್, ಬರ್ಖತ್ ಅಲಿ ಮುಂತಾದವರು ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದ್ದು, ಈಗಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿರುವ ಬನಾರಸ್ ಚಿತ್ರ ನವೆಂಬರ್ ೪ರಂದು ದೇಶಾದ್ಯಂತ ೫ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ‘ಬನಾರಸ್’ ಸಿನಿಮಾ ಕರ್ನಾಟಕದ ವಿತರಣಾ ಹಕ್ಕು ತನ್ನದಾಗಿಸಿಕೊಂಡ ಡಿ ಬೀಟ್ಸ್

    ‘ಬನಾರಸ್’ ಸಿನಿಮಾ ಕರ್ನಾಟಕದ ವಿತರಣಾ ಹಕ್ಕು ತನ್ನದಾಗಿಸಿಕೊಂಡ ಡಿ ಬೀಟ್ಸ್

    ಬನಾರಸ್ (Banaras) ಚಿತ್ರದ ಕಡೆಯಿಂದ ಒಂದರ ಹಿಂದೊಂದರಂತೆ ಖುಷಿಯ ಸಂಗತಿಗಳು ಹೊರ ಬೀಳುತ್ತಿವೆ. ಹೊಸತನಗಳಿಂದಲೇ ಮೈ ಕೈ ತುಂಬಿಕೊಂಡಿರುವ ಚಿತ್ರವೊಂದು ಹೆಜ್ಜೆ ಹೆಜ್ಜೆಗೂ ದಾಖಲೆ ಬರೆಯುತ್ತಾ ಮುಂದುವರೆಯುತ್ತೆ. ಸದ್ಯ ಬನಾರಸ್ ಚಿತ್ರದ ನಡೆ ಆ ಮಾತಿಗೆ ಅನ್ವರ್ಥ ಎಂಬಂತಿದೆ. ಒಂದು ಕಡೆಯಿಂದ ತಂಗಾಳಿಯಂತೆ ತೇಲಿ ಬಂದು ಎಲ್ಲರ ಮನಸೋಕಿ ಮುದಗೊಳಿಸಿರುವ ಮಾಯಗಂಗೆ, ಮತ್ತೊಂದೆಡೆ ವಾರದ ಹಿಂದಷ್ಟೇ ಬಿಡುಗಡೆಗೊಂಡು ಮಿಲಿಯನ್ನುಗಟ್ಟಲೆ ವೀವ್ಸ್ ಪಡೆದು ಪ್ರಸಿದ್ಧಿ ಪಡೆದುಕೊಂಡಿರುವ ಟ್ರೈಲರ್… ಇದೆಲ್ಲದರಿಂದಾಗಿ ನಿಗಿ ನಿಗಿಸೋ ನಿರೀಕ್ಷೆ ಮೂಡಿಸಿರುವ ಬಾನಾರಸ್ ದಿಕ್ಕಿನಿಂದ ಮತ್ತೊಂದು ಸುದ್ದಿ ಹೊರಬಿದ್ದಿದೆ. ಈ ಸಿನಿಮಾದ ವಿಶಾಲ ಕರ್ನಾಟಕ ವಿತರಣಾ ಹಕ್ಕನ್ನು ಖ್ಯಾತ ವಿತರಣಾ ಸಂಸ್ಥೆ ಡಿ ಬೀಟ್ಸ್ ಪಡೆದುಕೊಂಡಿದೆ.

    ಶೈಲಜಾ ನಾಗ್ (Shailaja Nag) ಮತ್ತು ಬಿ ಸುರೇಶ್ ಸಾರಥ್ಯದ ಡಿ ಬೀಟ್ಸ್ (D Bits) ಎಂಥಾ ಗುಣಮಟ್ಟವನ್ನು ಕಾಯ್ದುಕೊಂಡಿರುವ ಚಿತ್ರವೆಂಬುದು ಎಲ್ಲರಿಗೂ ಗೊತ್ತಿದೆ. ಈ ಸಂಸ್ಥೆಯಿಂದ ಬಿಡುಗಡೆಗೊಳ್ಳುವುದೇ ಪ್ರತಿಷ್ಠೆಯ ಸಂಗತಿ ಎಂಬಂಥಾ ವಾತಾವರಣವೂ ಇದೆ. ಎಲ್ಲ ದಿಕ್ಕುಗಳಿಂದಲೂ ಹಿಡಿಸಿದರೆ ಮಾತ್ರವೇ ಅಂಥಾ ಚಿತ್ರಕ್ಕೆ ಡಿ ಬೀಟ್ಸ್ ಕಡೆಯಿಂದ ಬಿಡುಗಡೆಯ ಭಾಗ್ಯ ಸಿಗುತ್ತದೆ. ಅಂಥಾದ್ದರಲ್ಲಿ ಶೈಲಜಾ ನಾಗ್ ವಿತರಣಾ ಹಕ್ಕು ಖರೀದಿಸಿದ್ದಾರೆಂದರೆ, ಬನಾರಸ್ ಮೂಡಿ ಬಂದಿರುವ ರೀತಿ ಎಂಥಾದ್ದಿದೆ ಎಂಬುದು ಯಾರಿಗಾದರೂ ಅರ್ಥವಾಗುತ್ತದೆ. ಅದುವೇ ಬನಾರಸ್ ಬಗೆಗಿನ ಬೆರಗನ್ನು ಇಮ್ಮಡಿಯಾಗುವಂತೆ ಮಾಡಿದೆ. ಇದನ್ನೂ ಓದಿ:ಗೊಬ್ಬರಗಾಲ ಮೈ ಮೇಲೆ ದೆವ್ವ: ಹೆದರಿ ಓಡಿದ ನವಾಜ್, ರೂಪೇಶ್ ರಾಜಣ್ಣ

    ಬನಾರಸ್ ಅನ್ನು ವಿಶಾಲ ಕರ್ನಾಟಕಕ್ಕೆ ಯಾವ ಸಂಸ್ಥೆಯ ಮೂಲಕ ವಿತರಣೆ ಮಾಡುತ್ತಾರೆಂಬ ಕುತೂಹಲಕ್ಕೆ ಈ ಮೂಲಕ ತೆರೆಬಿದ್ದಿದೆ. ನಿರೀಕ್ಷೆಯಂತೆಯೇ ಡಿ ಬೀಟ್ಸ್ ವಿತರಣಾ ಹಕ್ಕನ್ನು ಖರೀದಿಸಿದೆ. ಅತ್ಯಂತ ವ್ಯವಸ್ಥಿತವಾಗಿ ಚಿತ್ರವನ್ನು ಕರ್ನಾಟಕದ ತುಂಬೆಲ್ಲ ಪಸರಿಸೋದು ಡಿ ಬೀಟ್ಸ್ ಹೆಚ್ಚುಗಾರಿಕೆ. ಅದಕ್ಕೆ ತಕ್ಕುದಾಗಿಯೇ ಬನಾರಸ್ ಬಿಡುಗಡೆಗೆ ಪ್ಲಾನು ಮಾಡಿಕೊಳ್ಳಲಾಗಿದೆ. ಈ ವಿದ್ಯಮಾನದಿಂದಾಗಿ ನಿರ್ಮಾಪಕ ತಿಲಕ್ ರಾಜ್ ಬಲ್ಲಾಳ್ ಸಂತೃಪ್ತರಾಗಿದ್ದಾರೆ. ನಾಯಕ ನಟ ಝೈದ್ ಖಾನ್ ಮುಖದಲ್ಲಿಯೂ ಸಂತಸ ಮಿರುಗುತ್ತಿದೆ.

    ಬನಾರಸ್ ಬಿಡುಗಡೆಗೆ ಇನ್ನು ಬಾಕಿ ಉಳಿದಿರೋದು ಕೆಲವೇ ದಿನಗಳು ಮಾತ್ರ. ಈ ಸಂಬಂಧವಾಗಿ ಝೈದ್ ಖಾನ್ (Zaid Khan) ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ನಾಯಕಿ ಸೋನಲ್ ಮೊಂತೇರೋ (Sonal Montero) ಕೂಡಾ ಅದಕ್ಕೆ ಸಾಥ್ ಕೊಟ್ಟಿದ್ದಾರೆ. ಒಂದಿಡೀ ಚಿತ್ರತಂಡವೇ ನಾನಾ ಜವಾಬ್ದಾರಿ ಹೊತ್ತು ಉತ್ಸಾಹದಿಂದ ಮುಂದಡಿ ಇಡುತ್ತಿದೆ. ಇದೀಗ ಕರ್ನಾಟಕದಲ್ಲಿ ವಿತರಣಾ ಹಕ್ಕು ಡಿ ಬೀಟ್ಸ್ ಉಡಿ ಸೇರುತ್ತಲೇ, ಇನ್ನುಳಿದ ಒಂದಷ್ಟು ಭಾಷೆಗಳಲ್ಲಿಯೂ ಮಾತುಕತೆ ನಡೆಯುತ್ತಿವೆ. ದೊಡ್ಡ ಸಂಸ್ಥೆಗಳೇ ವಿತರಣಾ ಹಕ್ಕು ಖರೀದಿಸಲು ಮುಂದೆ ಬಂದಿವೆ. ಒಟ್ಟಾರೆಯಾಗಿ ಬನಾರಸ್ ಪ್ರಥಮ ಹೆಜ್ಜೆಯಲ್ಲಿಯೂ ನಿರ್ಣಾಯಕವಾಗಿ ಸದ್ದು ಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಬದಾಮಿಯಲ್ಲಿ ಬೀಡು ಬಿಟ್ಟಿತ್ತು ಯೋಗರಾಜ್ ಭಟ್‌ & ಟೀಮ್

    ಬದಾಮಿಯಲ್ಲಿ ಬೀಡು ಬಿಟ್ಟಿತ್ತು ಯೋಗರಾಜ್ ಭಟ್‌ & ಟೀಮ್

    ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ ಗರಡಿ ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೂರ್ಯ ನಾಯಕನಾಗಿ ನಟಿಸುತ್ತಿರುವ, ಸೋನಾಲ್ ಮಾಂಟೆರೊ ನಾಯಕಿಯಾಗಿ ನಟಿಸುತ್ತಿರುವ ಈ ಸಿನಿಮಾದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ: ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ

    ಈ ಸುಂದರ ತಾಣದಲ್ಲಿ “ಗರಡಿ” ಚಿತ್ರದ ಟೈಟಲ್ ಸಾಂಗ್ ಅದ್ದೂರಿಯಾಗಿ ಚಿತ್ರೀಕರಣಗೊಂಡಿದೆ. ಕರ್ನಾಟಕ ರಾಜ್ಯದ ಮಂತ್ರಿಗಳು, ನಟರು, ನಿರ್ಮಾಪಕರೂ ಆಗಿರುವ ಕೌರವ ಬಿ.ಸಿ.ಪಾಟೀಲ್ ಈ ಹಾಡಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಗರಡಿ ಮನೆಯಲ್ಲಿ ತರಭೇತಿ ಪಡೆದಿರುವ ಸಾಕಷ್ಟು ಕುಸ್ತಿಪಟುಗಳು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.  ಬರೀ ಹಾಡಿನ ಚಿತ್ರೀಕರಣವಷ್ಟೇ ಅಲ್ಲದೇ ನಾಯಕ ಸೂರ್ಯ, ನಾಯಕಿ ಸೋನಾಲ್ ಮಾಂಟೆರೊ, ಕೌರವ ಬಿ‌.ಸಿ.ಪಾಟೀಲ್ ಮುಂತಾದವರ ಅಭಿನಯದಲ್ಲಿ ಮಾತಿನ ಭಾಗದ ಚಿತ್ರೀಕರಣ ಸಹ ನಡೆದಿದೆ. ಇದನ್ನೂ ಓದಿ : ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

    ಬಹಳ ದಿನಗಳ ನಂತರ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಇದನ್ನೂ ಓದಿ: ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ

    ವಿ.ಹರಿಕೃಷ್ಣ ಅವರ ಸುಮಧುರ ಸಂಗೀತ, ನಿರಂಜನ್ ಬಾಬು ಛಾಯಾಗ್ರಹಣ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸೂರ್ಯ, ಸೋನಾಲ್ ಮಾಂಟೆರೊ, ಕೌರವ ಬಿ.ಸಿ.ಪಾಟೀಲ್, ರವಿಶಂಕರ್, ಎಸ್.ಟಿ.ಸೋಮಶೇಖರ್, ಬಲ ರಾಜವಾಡಿ, ಚೆಲುವರಾಜು, ರಾಘವೇಂದ್ರ, ಸೂರಜ್ ಬೇಲೂರ್, ಕಾಮಿಡಿ ಕಿಲಾಡಿಗಳು ನಯನ, ತ್ರಿವೇಣಿ(ಟಗರು), ರವಿಚೇತನ್, ತೇಜಸ್ವಿನಿ ಪ್ರಕಾಶ್ ಮುಂತಾದವರು “ಗರಡಿ” ಚಿತ್ರದ ತಾರಾಬಳಗದಲ್ಲಿದ್ದಾರೆ.