ಧರ್ಮಂ (Dharmam) ಅನ್ನೋ ವಿಭಿನ್ನ ಕಥಾಹಂದರದ ಸಿನಿಮಾವನ್ನ ನಿರ್ದೇಶಕ ಆರ್.ಚಂದ್ರು (R Chandru) ಮೆಚ್ಚಿ ಶುಭ ಹಾರೈಸಿದ್ದಾರೆ. ಸಿನಿಮಾದ ನೀನೇ ತಂದ ಒಲವಾ ಒಡವೆ ಹಾಡನ್ನ ರಿಲೀಸ್ ಮಾಡಿ ತಮ್ಮ ತಾಜ್ ಮಹಲ್ ಸಿನಿಮಾವನ್ನು ಮೆಲುಕು ಹಾಕಿದ್ದಾರೆ. ಧರ್ಮಂ ಸಿನಿಮಾಗೆ ನಾಗಮುಖ ಆ್ಯಕ್ಷನ್‌ಕಟ್ ಹೇಳಿದ್ದು, ಸಿನಿಮಾದಲ್ಲಿ ಸಾಯಿಶಶಿ ನಾಯಕನಾಗಿ ಕಾಣಿಸಿಕೊಂಡಿದ್ರೆ ನಟಿ ವರ್ಣಿಕಾ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಮೇಲೂ ಕೀಳು ಅನ್ನೋ ಭಾವಲೋಕದ ಹೊಸ ಪ್ರಪಂಚದಲ್ಲಿ ಹೋರಾಟ ಮಾಡ್ತಿರೋ ನಾಯಕನ ಜೊತೆ ತನ್ನ ಮನದಾಳದ ಭಾವನೆಗಳನ್ನ ಹೇಳಿಕೊಳ್ಳೋ ತೊಳಲಾಟದಲ್ಲಿನ ಸನ್ನಿವೇಶಗಳು ಹಾಡಿನಲ್ಲಿ ಮೂಡಿಬಂದಿವೆ. ಧರ್ಮಂ ಸಿನಿಮಾ ತಂಡ ಮಲೆಮಹಾದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದು ಸಿನಿಮಾದ ಸಾಂಗ್ ರಿಲೀಸ್ ಮಾಡಿದೆ.ಇದನ್ನೂ ಓದಿ: ನಟ ಸಾಯಿ ದುರ್ಗಾ ತೇಜ್ ಭರ್ಜರಿ ಆಕ್ಷನ್ : ಸಂಬರಲ ಏಟಿಗಟ್ಟು ಗ್ಲಿಂಪ್ಸ್ ರಿಲೀಸ್
ಹಲವು ವಿಭಿನ್ನ ಲೋಕೇಶನ್‌ಗಳಲ್ಲಿ ಹಾಡಿನ ಚಿತ್ರೀಕರಣ ಮಾಡಲಾಗಿದ್ದು, ಖ್ಯಾತ ನಿರ್ದೆಶಕ ಆರ್ ಚಂದ್ರು ಚಿತ್ರತಂಡದ ಪ್ರಯತ್ನ ಮೆಚ್ಚಿ ಶುಭ ಹಾರೈಸಿದ್ದಾರೆ. ನಾಗಮುಖ ನಿರ್ದೇಶನ ಮಾಡಿದ್ರೆ, ನಾಗಶೆಟ್ಟಿ ಕ್ಯಾಮರಾ ಕೈಚಳಕ, ಸರವಣ ಸಂಗೀತ ಕೇಳುಗರನ್ನ ಮೋಡಿ ಮಾಡಿದ್ದಾರೆ. ಪ್ರಕೃತಿ ಮಡಿಲಿನ ದೃಶ್ಯ ವೈಭವ ಹೊಸ ಭಾವಲೋಕಕ್ಕೆ ಪಯಣ ಬೆಳೆಸುವಂತೆ ಮಾಡಿದೆ. ಸದ್ಯ ಹಾಡು ಕೂಡಾ ಅಪಾರ ಮೆಚ್ಚುಗೆಯನ್ನ ಪಡೆದುಕೊಳ್ಳುತ್ತಿದೆ.
ವಿಜಯಪುರ: ಈದ್‌ಮಿಲಾದ್ (Eid Milad) ಮೆರವಣಿಗೆ ವೇಳೆ 15 ನಿಮಿಷ ಪೊಲೀಸರನ್ನ ಸುಮ್ಮನಿರಿಸಿ ಎಂಬ ಹಾಡನ್ನು ಪ್ರಸಾರ ಮಾಡಿದ ಮೂವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಕೇಸ್ (Suo Moto Case) ದಾಖಲಿಸಿಕೊಂಡಿದ್ದಾರೆ.
ವಿಜಯಪುರ (Vijayapura) ನಗರದಲ್ಲಿ ಸೆ.5 ರಂದು ಈದ್‌ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆದಿತ್ತು. ಈ ಮೆರವಣಿಗೆಯಲ್ಲಿ 15 ನಿಮಿಷ ಪೊಲೀಸರನ್ನ ಸುಮ್ಮನಿರಿಸಿ (15 ಮಿನಿಟ್ ಕೆಲಿಯೆ ಪೊಲೀಸಕೋ ಹಠಾಲೋ) ಎಂಬ ಹಾಡನ್ನು ಪ್ರಸಾರ ಮಾಡಲಾಗಿತ್ತು. ಇದೀಗ ಪೊಲೀಸರು ಈ ಹಾಡನ್ನು ಪ್ರಸಾರ ಮಾಡಿದ ಮೂವರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? – ಇಲ್ಲಿದೆ ಇನ್‌ಸೈಡ್ ಸ್ಟೋರಿ
ಈ ಹಾಡು ಪ್ರಸಾರ ಮಾಡಿದ ಡಿಜೆ ವಾಹನದ ಮಾಲೀಕ, ಡಿಜೆ ಆಪರೇಟರ್, ಹಾಗೂ ಇದನ್ನ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಎಂ.ಟಿ ತೌಸಿಫ್ ವಿರುದ್ಧ ಪ್ರಕರಣ ದಾಖಲಾಗಿದೆ.
ಗಾಂಧಿಚೌಕ್ ಪೊಲೀಸ್ (Gandhi Chowk Police) ಠಾಣೆಯಲ್ಲಿ ಸಾಮಾಜಿಕ ಜಾಲತಾಣ ನಿರ್ವಹಣೆ ಮಾಡುತ್ತಿರುವ ಜಿ.ಕೆ ದೇವಕರ್ ಅವರು ಮೂವರ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿದ್ದಾರೆ.
ಅವಳು ಯಾವ ಸಂಗೀತ (Music) ಕ್ಲಾಸ್‌ಗೂ ಹೋದವಳಲ್ಲ…. ಶ್ರೇಯಾ, ಲತಾರಂತ ವಾಯ್ಸ್ ಏನು ಅವಳದ್ದಲ್ಲ.. ಆದ್ರೆ ಇದೆಲ್ಲದನ್ನೂ ಮೀರಿದ ಟಾನಿಕ್ ಅವಳ ಧ್ವನಿಯಲ್ಲಿದೆ! ನಾನವಳ ಹಾಡಿಗೆ ಜೀವಮಾನವಿಡಿ ಫ್ಯಾನ್! ಹೌದು ನಾನು ಅವಳು ಹಾಡುವ ಹಾಡನ್ನು (Song) ಅಷ್ಟು ಇಷ್ಟಪಡ್ತೀನಿ. ಎಷ್ಟಂದ್ರೆ.. ನಾನ್ಯಾವತ್ತೂ ಅವಳ ಸಿಹಿ ಮುತ್ತಿಗೆ ಕಾಡಿದವನಲ್ಲ. ಈ ಮಾತು ಅವಳ ಧ್ವನಿಯಲ್ಲಿ ಕೇಳ ಬಯಸುವ ಆಸೆಗೆ ಮಾತ್ರ ಅನ್ವಯ ಆಗುವುದಿಲ್ಲ..! ಇದರಲ್ಲಿ ಅವಳಿಗೆ ಯಾವ ರಿಯಾಯಿತಿಯನ್ನೂ ಕೊಡದೆ ಆಗಾಗ ಹಾಡಿಸಿ, ಅದನ್ನು ಕೇಳಿ ಸಂಭ್ರಮಿಸುತ್ತಿದ್ದವನು ನಾನು.
ಆ ಹುಣ್ಣಿಮೆಯ ಬೆಳದಿಂಗಳ ರಾತ್ರಿಯಲ್ಲಿ ಅವಳು ಹೇಳಿದ ʻಆಕಾಶ ದೀಪವೂ ನೀನುʼ (Akasha Deepvu Neenu) ಹಾಡು… ಇಂದಿಗೂ ನನ್ನ ಫೇವರೆಟ್! ಇವತ್ತಿಗೂ ಆ ಹಾಡು ನನ್ನ ಮೊಬೈಲ್‌ನಲ್ಲಿ ಗಂಟೆಗೊಮ್ಮೆ ಆದ್ರೂ ಪ್ಲೇ ಆಗುತ್ತೆ! ಅವಳ ಧ್ವನಿಯಲ್ಲಿ ಆ ಹಾಡು ಕೇಳಿ ಸಂಭ್ರಮಿಸುವುದಿದೆ ನೋಡಿ, ಅದೊಂದು ಮಧುರವಾದ ಅಮಲು ಕೊಡುವ ಅನುಭವ. ಬಹುಶಃ ಎಷ್ಟೋ ಜನ ಇಂತಹ ಅನುಭವವನ್ನೇ ಹುಡುಕಿ ಯಾವ್ಯಾವುದೋ ಅಮಲು ಪದಾರ್ಥಗಳಿಗೆ ಕೈ ಹಾಕುತ್ತಾರೇನೋ? ನನಗೆ ಅಂತಹ ದುಷ್ಟ ಅಮಲಿಂದ ತಪ್ಪಿಸಿದ್ದು ಅವಳ ಧ್ವನಿಯ ದಿವ್ಯ ಅಮಲು! ನಾನು ಸದಾ ಅವಳ ದಿವ್ಯ ಪ್ರೇಮದ ಅಮಲಿಗೆ ಚಿರಋಣಿ ಎಂದು ಎದೆ ಮುಟ್ಟಿಕೊಂಡು ಘೋಷಿಸುತ್ತೇನೆ. ಇದನ್ನೂ ಓದಿ: ಹೃದಯ ಕುಂಡದಲ್ಲಿ ಹೂಗಳ ಜೋಡಿಸುವ ಅವಳ ಮಾತುಗಳು ನಂಗಿಷ್ಟ!
ನನ್ನ ಜೊತೆಯಲ್ಲಿದ್ದಾಗ ಅವಳು ಹಾಡಿದ್ದ ಹಾಡುಗಳು… ನನ್ನನ್ನು ಸದಾ ಕಾಡುತ್ತವೆ.. ಯಾರ ಧ್ವನಿಯಲ್ಲಿ ಆ ಹಾಡುಗಳನ್ನು ಕೇಳಿದರೂ, ಅವಳದೇ ಧ್ವನಿಯಲ್ಲಿ ಕೇಳಿದಂತಾಗುತ್ತದೆ. ಆಗೆಲ್ಲ ಮತ್ತದೇ ಸಂಭ್ರಮದ ಮಳೆ ಸುರಿಯುತ್ತದೆ. ನನ್ನ ಮನಸ್ಸಿನಲ್ಲಿ ಪ್ರೇಮಗೀತೆಗಳ ಪಟ್ಟಿಯಲ್ಲಿ ಅವಳ ʻಆಕಾಶ ದೀಪವೂ ನೀನುʼ ಹಾಡು ಯಾವಾಗಲೂ ಅಗ್ರ ಸ್ಥಾನದಲ್ಲಿರುತ್ತದೆ. ಅಷ್ಟು ಮೋಡಿ ಮಾಡಿದ ಹಾಡು ಅದು. ಬಹುಶಃ ಅವಳ ಧ್ವನಿಯಲ್ಲಿ ನಾನು ಮೊದಲು ಕೇಳಿದ ಹಾಡು ಅದು, ಅದಕ್ಕೆ ಇರಬೇಕು. ಸುರಗಿಯ ಘಮದಂತೆ ಆ ಹಾಡು ಮನಸ್ಸಲ್ಲಿ ಪರಿಮಳ ಕಳೆದುಕೊಳ್ಳದಂತೆ ಹಾಗೇ ಉಳಿದು ಬಿಟ್ಟಿದೆ.
ಈ ʻಆಕಾಶ ದೀಪʼನನ್ನ ಬದುಕಿಗೆ ಶೇಕ್ಸ್‌ಪಿಯರ್ (William Shakespeare) ಹೇಳುವ Sonnet 116ನ ಧೃವತಾರೆ ಇರಬೇಕು? ಎಂದು ಒಮ್ಮೊಮ್ಮೆ ಕಾಡಿದ್ದೂ ಇದೆ. ಪ್ರೇಮದ ದೋಣಿಗೆ ಕಗ್ಗತ್ತಲ್ಲಿ ಸದಾ ದಾರಿ ತೋರಿಸುವ ಆ ಧೃವತಾರೆಯಂತೆ, ಅವಳ ನೆನಪು, ಅವಳ ಹಾಡು, ಅವಳ ನಗು, ಎಲ್ಲೋ ಸಂಭ್ರಮದಲ್ಲಿದ್ದಾಳೆ ಎಂಬ ಆ ಖುಷಿ ನನ್ನ ಬದುಕಿನ ನೌಕೆಗೂ ದಾರಿ ತೋರುವ ಧೃವತಾರೆಯಂತೆ ಬೆಳಗುತ್ತಿರುತ್ತದೆ. ಅದಕ್ಕೆ ಆ ಹಾಡು ಕೇಳಿದಾಗಲೆಲ್ಲ ಅನೇಕ ಸಂಭ್ರಮದ ಬಾಗಿಲುಗಳು ತೆರೆಯುತ್ತವೆ!
ಈ ರೀತಿಯ ಸಂಗೀತದ ಅಮಲು ಮನುಷ್ಯನ ಪ್ರೇಮದಲ್ಲಿ ಮಾತ್ರ ಕಾಡಿದ್ದಲ್ಲ ನೋಡಿ, ರಾಧೆಗೆ ಕೃಷ್ಣನ ಕೊಳಲಿನ ನಾದ, ಪಾರ್ವತಿಗೆ ಶಿವನ ಡಮರುಗದ ಸದ್ದು, ಹಾಗೇ ಚತುರ್ಮುಖನಿಗೆ ಶಾರದೆಯ ವೀಣೆಯ ಸ್ವರ.. ಹೀಗೆ ಕಾಡಿರಬಹುದೇನೋ? ತಮ್ಮ ಹೃದಯಕ್ಕೆ ಹತ್ತಿರ ಇರುವವರ ಯಾವುದೋ ಒಂದು ಗುಣ, ಅಭ್ಯಾಸ ನಮ್ಮನ್ನು ಅಮಲಿನಲ್ಲಿ ತೇಲಿಸುವ ಮಹಾಶಕ್ತಿಯನ್ನೇ ಹೊಂದಿರುತ್ತದೆ. ಬೇಕಿದ್ರೆ ಟೆಸ್ಟ್ ಮಾಡಿ!
ನಾನು ಮತ್ತೆ ಅವಳ ತೋಳುಗಳಲ್ಲಿ ಸಿಕ್ಕು, ಅವಳು ಹಾಡುವ ಹಾಡುಗಳನ್ನು ಕೇಳಬೇಕು.. ಅದಕ್ಕಾಗಿ ಮತ್ತೆ ಚೈತ್ರವೊಂದು ಬರಲಿ ಎಂಬ ಬಯಕೆ ನನ್ನದು. ಪ್ರೇಮ ಮಾಮರದ ಚಿಗುರು ತಿಂದು ಮತ್ತೆ ಅವಳು ಕೋಗಿಲೆಯಂತೆ ಹಾಡಬೇಕು. ಅದು ನನ್ನ ಕಿವಿಗಳಿಗೆ ಬಿದ್ದು, ಒಲವು ಮತ್ತೆ ಜೀವಂತವಾಗಬೇಕು ಎಂಬ ಬಯಕೆ. ಆ ಒಂದು ಚೈತ್ರಕ್ಕೆ ಅದೆಷ್ಟು ಜನ್ಮ ಕಾಯಬೇಕೋ ಗೊತ್ತಿಲ್ಲ..! ಹಾಗಂತ ಎದೆಯ ರೇಡಿಯೋದಲ್ಲಿ ಅವಳ ಹಾಡು ಇನ್ನೂ ಮುಗಿದಿಲ್ಲ!
ಎದೆಯ ವೇದಿಕೆಯನ್ನು ಸಿಂಗರಿಸಿ ಮತ್ತಷ್ಟೂ ಪ್ರೇಮಗೀತೆಗಳಿಗಾಗಿ ಕಾಯುತ್ತಿದ್ದೇನೆ. ಅವಳು ಹುಣ್ಣಿಮೆಯ ಬೆಳದಿಂಗಳಂತೆ ಮತ್ತೆ ಬರುತ್ತಾಳೆ.. ಪಾರಿಜಾತದ ಕಂಪಿನ ಧ್ವನಿಯಲ್ಲಿ ಹಾಡನ್ನು ಹಾಡುತ್ತಾಳೆ! ಇದನ್ನೂ ಓದಿ: ಪ್ರೇಮವೆಂದರೆ ನನ್ನ ಪಾಲಿಗೆ ಅವಳ ಸೀರೆಯ ಮೇಲಿದ್ದ ಜಾರಿದ ನವಿಲ ಗರಿ!
ವಿಶ್ವವೇ ಮೆಚ್ಚಿದ ಕಾಂತಾರ ಚಿತ್ರ ಸೇರಿದಂತೆ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನೀಡಿರುವ ಅಜನೀಶ್ ಲೋಕನಾಥ್ abbs studios ಲಾಂಛನದಲ್ಲಿ ಸಿ.ಆರ್ ಬಾಬಿ ಅವರ ಜೊತೆಗೂಡಿ ನಿರ್ಮಿಸಿರುವ ಹಾಗೂ ಸಿ.ಆರ್.ಬಾಬಿ ನಿರ್ದೇಶಿಸಿರುವ ಮತ್ತು ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ಜೋಡಿಯ “ಜಸ್ಟ್ ಮ್ಯಾರೀಡ್” (Just Married) ಚಿತ್ರಕ್ಕಾಗಿ ಪ್ರೇಮಕವಿ ಕೆ.ಕಲ್ಯಾಣ್ ಬರೆದಿರುವ “ಇದು ಮೊದಲನೇ ಸ್ವಾಗತಾನಾ” ಎಂಬ ಹಾಡು ಪ್ರೇಮಿಗಳ ದಿನದಂದೇ ಬಿಡುಗಡೆಯಾಗಿದೆ.
ಈ ಸುಂದರ ಯುಗಳಗೀತೆಯನ್ನು ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್ ಅವರು, “ಇದು ಮೊದಲನೇ ಸ್ವಾಗತನಾ” ಹಾಡು ತುಂಬಾ ಚೆನ್ನಾಗಿದೆ. ಬಾಬಿ ಅವರ ನಿರ್ದೇಶನದಲ್ಲಿ ಹಾಗೂ ಅಜನೀಶ್ ಲೋಕನಾಥ್ ಅವರ ನಿರ್ಮಾಣದಲ್ಲಿ ಮೂಡಿಬಂದಿರುವ “ಜಸ್ಟ್ ಮ್ಯಾರೀಡ್” ಚಿತ್ರದ ಬಿಡುಗಡೆಗೆ ನಾನು ಕಾತುರದಿಂದ ಕಾಯುತ್ತಿದ್ದೇನೆ ಎಂದರು.
“ಇದು ಮೊದಲನೇ ಸ್ವಾಗತಾನಾ” ಹಾಡನ್ನು ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಧನ್ಯವಾದ. ಪ್ರೇಮಿಗಳ ದಿನದಂದು ಬಿಡುಗಡೆಯಾದ ಈ ಹಾಡಿನ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆದಿದೆ. ನಾನೇ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದೇನೆ. ಕೆ.ಕಲ್ಯಣ್ ಬರೆದು ಅಜನೀಶ್ ಲೋಕನಾಥ್ ಸಂಗೀತ ನೀಡಿ ಹಾಗೂ ಜಸ್ಕರಣ್ ಸಿಂಗ್ ಅವರ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾದ ತಕ್ಷಣದಿಂದಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. “ಜಸ್ಟ್ ಮ್ಯಾರೀಡ್” ಆದವರಿಗಂತೂ ನಮ್ಮ ಚಿತ್ರ ಬಹಳ ಹತ್ತಿರವಾಗಲಿದೆ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಪ್ರೇಮಕಥೆ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ನಿರ್ದೇಶಕಿ ಸಿ.ಆರ್.ಬಾಬಿ ತಿಳಿಸಿದ್ದಾರೆ.
ನಿರ್ದೇಶಕಿ ಬಾಬಿ ಅವರೆ ಕಥೆ ಬರೆದಿದ್ದಾರೆ. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆಕಾರರು. ಪಿ ಜಿ ಛಾಯಾಗ್ರಹಣ, ಶ್ರೀಕಾಂತ್ ಮತ್ತು ಅಶಿಕ್ ಕುಸುಗೊಳ್ಳಿ (ಗಣೇಶ ಸಾಂಗ್) ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಮೋರ್, ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ “ಜಸ್ಟ್ ಮ್ಯಾರೀಡ್” ಚಿತ್ರದ ಹಾಡುಗಳನ್ನು ಪ್ರಮೋದ್ ಮರವಂತೆ ಮತ್ತು ಧನಂಜಯ್ ಬರೆದಿದ್ದಾರೆ.
ಶೈನ್ ಶೆಟ್ಟಿ, ಅಂಕಿತ ಅಮರ್, ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ ಅನಿಲ್, ಕುಮುದಾ, ಜಯರಾಮ್, ವೇದಿಕಾ ಕಾರ್ಕಳ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಭರತ್ ಗೌಡ ಹೊಸಕೋಟೆ ನಿರ್ಮಾಣದ, ಶ್ರೀವಿದ ನಿರ್ದೇಶನದ ಹಾಗೂ ಹಾಸ್ಯನಟನಾಗಿ ಜನಮನ ಗೆದ್ದಿರುವ ಕೆಂಪೇಗೌಡ (Kempegowda)ಪ್ರಮುಖಪಾತ್ರದಲ್ಲಿ ನಟಿಸಿರುವ “ಕಟ್ಲೆ” (Katle) ಚಿತ್ರದ ಮೊದಲ ಹಾಡನ್ನು (Song) ನಟ ಡಾರ್ಲಿಂಗ್ ಕೃಷ್ಣ (Darling Krishna) ಇತ್ತೀಚೆಗೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಬಹದ್ದೂರ್ ಚೇತನ್ ಕುಮಾರ್ ಬರೆದಿರುವ “ಯಾರೋ ನಾ ಕಾಣೆ. ಚಂದಾಗೌಳೆ ಶಾಣೆ” ಎಂಬ ಈ ಹಾಡನ್ನು ಖ್ಯಾತ ಗಾಯಕ ಟಿಪ್ಪು ಅವರು ಹಾಡಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಹಾಸ್ಯನಟನಾಗಿದ್ದ ನನ್ನ ಮೇಲೆ ಭರವಸೆಯಿಟ್ಟು ನನ್ನನ್ನು ನಾಯಕನನ್ನಾಗಿ ಮಾಡಿದ ನಿರ್ಮಾಪಕ ಭರತ್ ಗೌಡ ಅವರಿಗೆ ನಾನು ಆಭಾರಿ ಎಂದು ಮಾತು ಆರಂಭಿಸಿದ ನಾಯಕ ಕೆಂಪೇಗೌಡ, ಶ್ರೀವಿದ ಅವರು “ಕಟ್ಲೆ” ಚಿತ್ರಕ್ಕೆ ಅದ್ಭುತವಾದ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇಂದು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಚೇತನ್ ಕುಮಾರ್ ಬರೆದು ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿರುವ ಈ ಹಾಡು ಎಲ್ಲರಿಗೂ ಮೆಚ್ಚುಗೆಯಾಗಲಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಡಾರ್ಲಿಂಗ್ ಕೃಷ್ಣ ಅವರಿಗೆ ಧನ್ಯವಾದ ಎಂದರು.
ಈ ಚಿತ್ರ ಉತ್ತಮವಾಗಿ ಮೂಡಿಬರಲು ಮುಖ್ಯ ಕಾರಣ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿರುವ ಭರತ್ ಗೌಡ ಅವರು. ಅವರು ನಮ್ಮ ಮೇಲೆ ನಂಬಿಕೆಯಿಟ್ಟು ಬಂಡವಾಳ ಹಾಕಿರುವುದೇ ನಮ್ಮ ಕನಸು ನನಸಾಗಲು ಕಾರಣ. ಅವರಿಗೆ ಹಾಗೂ ನನ್ನ ತಂಡಕ್ಕೆ ನನ್ನ ಧನ್ಯವಾದ. ನಮ್ಮ ಚಿತ್ರದ ಪ್ರಥಮ ಹಾಡು ಇಂದು ಬಿಡುಗಡೆಯಾಗಿದೆ. ಸದ್ಯದಲ್ಲೇ “ಕಟ್ಲೆ” ಸೆನ್ಸಾರ್ ವೀಕ್ಷಿಸಲಿದ್ದು, ಡಿಸೆಂಬರ್ ವೇಳೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದರು ನಿರ್ದೇಶಕ ಶ್ರೀವಿದ.
ಶ್ರೀವಿದ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಎಲ್ಲರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಭರತ್ ಗೌಡ ಹೇಳಿದರು. ಹಾಡು ಹುಟ್ಟಿದ ಬಗ್ಗೆ ಹಾಡು ಬರೆದಿರುವ ಚೇತನ್ ಕುಮಾರ್ ಹಾಗೂ ಸಂಗೀತ ಸಂಯೋಜಕನೆ ಕುರಿತು ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್ ಮಾಹಿತಿ ನೀಡಿದರು. ನಾಯಕಿಯರಾದ ಅಮೃತ ರಾಜ್, ಸಂಹಿತ, ನಟರಾದ ಉಮೇಶ್, ತಬಲ ನಾಣಿ, ಹರೀಶ್ ರಾಜ್, ಕರಿಸುಬ್ಬು ನಟಿಯರಾದ ಶೃತಿ, ನಿಸರ್ಗ ಅಪ್ಪಣ್ಣ ಮುಂತಾದವರು “ಕಟ್ಲೆ” ಬಗ್ಗೆ ಮಾತನಾಡಿದರು.
ಡಾಲಿ ಧನಂಜಯ್ ನಿರ್ಮಾಣದ ವಿದ್ಯಾಪತಿ (Vidyapati) ಸಿನಿಮಾ ನಾನಾ ವಿಧದಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಟೀಸರ್, ಮೇಕಿಂಗ್ ನಿಂದಲೇ ಗಮನಸೆಳೆದಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಕರಾಟೆ ತರಗತಿಯಲ್ಲಿ ವಿದ್ಯಾಪತಿಯ ತಲೆಹರಟೆಯ ಹಾಡಿಗೆ ನವರಸ ನಾಯಕ ಜಗ್ಗೇಶ್ (Jaggesh) ಧ್ವನಿಯಾಗಿದ್ದಾರೆ. ಅಯ್ಯೋ ವಿಧಿಯೇ ಎಂದು ಶುರುವಾಗುವ ಹಾಡಿಗೆ ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಡಾಸ್ಮೋಡ್ ಸಂಗೀತ ಸಖತ್ ಕಿಕ್ ಕೊಡುತ್ತದೆ. ಸಖತ್ ಫನ್ ಆಗಿ ಮೂಡಿಬಂದಿರುವ ಗೀತೆಯಲ್ಲಿ ರಂಗಾಯಣ ರಘು ಕೂಡ ಹೆಜ್ಜೆ ಹಾಕಿರುವುದು ವಿಶೇಷ.
“ಟಗರು ಪಲ್ಯ” ಮೂಲಕ ಮಸ್ತ್ ಮನರಂಜನೆ ನೀಡಿದ್ದ ನಾಗಭೂಷಣ್ (Nagabhushan) ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ‘ಉಪಾಧ್ಯಕ್ಷ’ನ ಬೆಡಗಿ ಮಲೈಕಾ ವಸೂಪಾಲ್ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಕರಾಟೆ ಕಿಂಗ್ ಗೆಟಪ್ನಲ್ಲಿ ನಾಗಭೂಷಣ್ ಕಾಣಿಸಿಕೊಳ್ಳುತ್ತಿದ್ದು, ಅವರಿಗೆ ಮಾಸ್ಟರ್ ಆಗಿ ಹಿರಿಯ ನಟ ರಂಗಾಯಣ ರಘು ಅಭಿನಯಿಸಿದ್ದಾರೆ.
ಈ ಹಿಂದೆ ಇಕ್ಕಟ್ ಸಿನಿಮಾ ಮೂಲಕ ಭರವಸೆ ಹುಟ್ಟಿಸಿದ್ದ ಇಶಾಂ ಮತ್ತು ಹಸೀಂ ಖಾನ್ ”ವಿದ್ಯಾಪತಿ” ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಜೊತೆಗೆ, ಸಿನಿಮಾವನ್ನು ಇವರೇ ಬರೆದು, ಸಂಕಲನದ ಜವಾಬ್ದಾರಿಯನ್ನೂ ತಾವೇ ಹೊತ್ತುಕೊಂಡಿದ್ದಾರೆ. ಚಿತ್ರಕ್ಕೆ ಲವಿತ್ ಅವರ ಛಾಯಾಗ್ರಹಣ ಇದೆ. ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆ್ಯಕ್ಷನ್ ವಿದ್ಯಾಪತಿ ಸಿನಿಮಾಗಿದೆ. ಟಗರು ಪಲ್ಯ ಸಿನಿಮಾ ನಿರ್ಮಾಣ ಮಾಡಿದ್ದ ಡಾಲಿ ಧನಂಜಯ್ ಇದೀಗ ‘ವಿದ್ಯಾಪತಿ’ ಪ್ರೊಡ್ಯೂಸ್ ಮಾಡುತ್ತಿದ್ದಾರೆ. ಚಿತ್ರದಲ್ಲಿ ಆ್ಯಕ್ಷನ್ ಜೊತೆಗೆ ಹಾಸ್ಯವೂ ಇರಲಿದೆ.
ನವೆಂಬರ್ ನಲ್ಲಿ ತೆರೆ ಕಾಣಲಿರೋ ಮರ್ಯಾದೆ ಪ್ರಶ್ನೆ (Maryade Prashne) ಸಿನಿಮಾದ ಮೊದಲ ಹಾಡನ್ನು ಪ್ರಮೋದ್ ಮರವಂತೆ ಅವರು ಬರೆದು ನಟ ಶರಣ್ (Sharan) ಹೃದಯಾ ಅವರು ಹಾಡಿದ್ದಾರೆ. ಮರ್ಯಾದೆ ಪ್ರಶ್ನೆ ಸಿನಿಮಾದ ಸಂಗೀತ ನಿರ್ದೇಶಕ ಅರ್ಜುನ್ ರಾಮು ಈ ಹಾಡನ್ನು ಜಾನಪದ ಶೈಲಿಯಲ್ಲಿ ಕಂಪೋಸ್ ಮಾಡಿದ್ದಾರೆ.
ಈ ಹಾಡಿನಲ್ಲಿ ನಟರ ಪಾತ್ರದ ಪರಿಚಯದ ಜೊತೆ ಅವರು ಬದುಕುತ್ತಿರುವ ಮಧ್ಯಮ ವರ್ಗದ ಸಮಾಜವನ್ನು ಪರಿಚಯಿಸುವ ಸಲುವಾಗಿ ಸಾಂದರ್ಭಿಕವಾಗಿ ಈ ಹಾಡನ್ನು ಬಳಸಲಾಗಿದೆ ಎಂದು ಚಿತ್ರದ ನಿರ್ದೇಶಕ ನಾಗರಾಜ ಸೋಮಯಾಜಿ ತಿಳಿಸಿದ್ದಾರೆ.
ಈಗಾಗಲೇ ಬಿಡುಗಡೆ ಮಾಡಿರುವ ಕ್ಯಾರೆಕ್ಟರ್ ಪೋಸ್ಟರ್ ನಲ್ಲಿ ರಾಕೇಶ್ ಅಡಿಗ ಅವರು ಒಬ್ಬ ಕಾರ್ಯಕರ್ತನಾಗಿ ಸುನಿಲ್ ರಾವ್ ಅವರು ಒಬ್ಬ ಡೆಲಿವರಿಬಾಯಾಗಿ,ಪೂರ್ಣಚಂದ್ರ ಮೈಸೂರು ಕ್ಯಾಬ್ ಡ್ರೈವರ್ ಆಗಿ, ತೇಜು ಬೆಳ್ವಾಡಿ ಅವರು ಸೇಲ್ಸ್ ಗರ್ಲ್ ಆಗಿ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿದ್ದಾರೆ.
ಮಧ್ಯಮ ವರ್ಗದ ಬಗ್ಗೆ ಇರುವ ಈ ಕತೆಯಲ್ಲಿ ಈ ಹಾಡು ತುಂಬಾ ಸೊಗಸಾದ ಸಾಹಿತ್ಯವನ್ನು ಒಳಗೊಂಡಿದೆ.ಈ ಹಾಡಿನ ಸಾಹಿತ್ಯದಲ್ಲಿ ಬರುವ ಪ್ರತಿ ಸಾಲುಗಳು ಧನಾತ್ಮಕ ಚಿಂತನೆಗೆ ಕರೆದೊಯ್ಯುತ್ತದೆ. ದಿನ ಬೆಳಗಾದರೆ ಕೇಳುವ ಹಾಡಾಗಿರಬೇಕು ಎಂಬುದು ಈ ಹಾಡಿನ ಮುಖ್ಯ ಉದ್ದೇಶವಾಗಿ ಕಾಣುತ್ತಿದೆ.
ಪವಿತ್ರಾ ಇಂಟರ್‌ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರು ನಿರ್ಮಿಸಿರುವ ಕನ್ನಡದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 (Sanju Weds Geetha 2) ಚಿತ್ರದ ಹಾಡಿನ ಬಿಡುಗಡೆ ಸಮಾರಂಭ ಅಂಬೇಡ್ಕರ್ ಭವನದ ಸುಂದರ ವೇದಿಕೆಯಲ್ಲಿ ನೆರವೇರಿತು. ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅಭಿನಯದ ಈ ಹಾಡನ್ನು ಛಲವಾದಿ ಮಹಾಸಭಾದ ಜ್ಞಾನಪ್ರಕಾಶ ಸ್ವಾಮೀಜಿ ಅವರು ಬಿಡುಗಡೆ ಮಾಡಿದರು. ಜೊತೆಗೆ ಬಸನಾಗಿ ಸ್ವಾಮೀಜಿ ಕೂಡ ಉಪಸ್ಥಿತರಿದ್ದರು.
ಇದೇ ವೇದಿಕೆಯಲ್ಲಿ ಉಪಸ್ಥಿತರಿದ್ದ ಛಲವಾದಿ ಮಹಾಸಭಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡುತ್ತ ‘ನಮ್ಮ ಸಹೋದರ ಕುಮಾರ್ ಈಗ ಸಿನಿಮಾ ರಂಗದಲ್ಲಿ ನಿರ್ಮಾಪಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ, ತುಂಬಾ ಖರ್ಚು ಮಾಡಿ ಅದ್ದೂರಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ, ಅಲ್ಲದೆ ನಮ್ಮವರೇ ಆದ ನಾಗಶೇಖರ್ ಇದಕ್ಕೆ ನಿರ್ದೇಶನ ಮಾಡಿದ್ದಾರೆ. ಸಮಾಜದ ನ್ಯೂನತೆಗಳನ್ನು ತೊಡೆದು ಹಾಕೋ ಕೆಲಸವನ್ನು ನಮ್ಮ ಸಿನಿಮಾಗಳು ಮಾಡಲಿ, ಈ ಚಿತ್ರವು ಅತ್ಯಂತ ಯಶಸ್ವಿಯಾಗಲಿ ಅಂತ ಹಾರೈಸುತ್ತೇನೆ ಎಂದು ಶುಭ ಹಾರೈಸಿದರು. ನಾಗಶೇಖರ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಸಂಜು ಹಾಗೂ ಗೀತಾ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ನಿರೂಪಿಸಿದ್ದಾರೆ. ಈ ಚಿತ್ರದಲ್ಲಿ ಒಬ್ಬ ರೇಶ್ಮೆ ಬೆಳೆಗಾರನಾಗಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದು, ನಾಯಕಿಯಾಗಿ ರಚಿತಾರಾಮ್ ಅಭಿನಯಿಸಿದ್ದಾರೆ.
ನಂತರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ನಿರ್ಮಾಪಕ ಛಲವಾದಿ ಕುಮಾರ್, ಡಿಪರೆಂಟ್ ಪ್ಯಾಟ್ರನ್‌ನಲ್ಲಿ ಮೂಡಿಬಂದಿರುವ, ರಾಗಿಣಿ ಅಭಿನಯದ ಈ ಹಾಡನ್ನು ನಮ್ಮ ನಾರಾಯಣಸ್ವಾಮಿ ಅವರ ಕೈಲೇ ರಿಲೀಸ್ ಮಾಡಿಸಬೇಕೆಂದಿತ್ತು, ಹಾಡು ಅದ್ಭುತವಾಗಿ ಮೂಡಿಬಂದಿದೆ. ಇದು ಅಪ್ಪಟ ಪ್ಯಾಮಿಲಿ ಸ್ಟೋರಿ, ಡಾ.ರಾಜ್‌ಕುಮಾರ್ ಅವರ ಸಿನಿಮಾಗಳನ್ನು ನೆನಪಿಸುತ್ತೆ, ರಚಿತಾರಾಮ್, ರಂಗಾಯಣ ರಘು, ಸಾಧುಕೋಕಿಲ, ತಬಲಾನಾಣಿ ಸಂಪತ್ ಹೀಗೆ ಎಲ್ಲಾ ದೊಡ್ಡ ದೊಡ್ಡ ಕಲಾವಿದರೇ ಅಭಿನಯಿಸಿದ್ದಾರೆ ಎಂದು ಹೇಳಿದರು.
ನಿರ್ದೇಶಕ ನಾಗಶೇಖರ್ ಮಾತನಾಡುತ್ತ , ಶಿಡ್ಲಘಟ್ಟದಿಂದ ಸ್ವಿಟ್ಜರ್ ಲ್ಯಾಂಡ್ ಹೀಗೆ ಅದ್ಭುತವಾದ ಲೊಕೇಶನ್‌ಗಳಲ್ಲಿ 72 ದಿನಗಳ ಕಾಲ ಚಿತ್ರೀಕರಿಸಿದ್ದೇವೆ, ಇವತ್ತು ಇಂಥ ದೊಡ್ಡ ವೇದಿಕೆಯಲ್ಲಿ ನಮ್ಮ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಚಿತ್ರವೀಗ ರಿರೆಕಾರ್ಡಿಂಗ್ ಹಂತದಲ್ಲಿದ್ದು, ಇನ್ನೊಂದು ತಿಂಗಳಲ್ಲಿ ಚಿತ್ರದ ಫಸ್ಟ್ ಕಾಪಿ ಹೊರಬರಲಿದೆ, ಖುಷಿಯ ವಿಚಾರ ಏನೆಂದರೆ ಬಿಡುಗಡೆಗೂ ಮುನ್ನವೇ ಗೋಕುಲ್ ಪಿಲಂಸ್‌ನವರು ನಮ್ಮ ಚಿತ್ರವನ್ನು ಖರೀದಿ ಮಾಡಿದ್ದಾರೆ. ರಿಲೀಸ್ ಡೇಟ್ ಅನೌನ್ಸ್ ಮಾಡಲು ನಾವಂತೂ ರೆಡಿ ಇದ್ದೇವೆ. ಚಿತ್ರದಲ್ಲಿ 5 ಹಾಡುಗಳಿದ್ದು, ಒಂದು ಹಾಡಿಗೆ ಲಹರಿ ಸಂಸ್ಥೆಯ ಅನುಮತಿ ಬೇಕಿದೆ, ನಮ್ಮ ಮಣ್ಣಿನ ಕಥೆ ಮಾಡಲು ಹೊರಟಾಗ ಶಿಡ್ಲಘಟ್ಟದಲ್ಲಿ ರೈತರು ಎದುರಿಸುತ್ತಿರೋ ಸಮಸ್ಯೆ ಕಣ್ಣಮುಂದೆ ಬಂತು, ಅಲ್ಲಿನ ಕಪ್ಪುಮಣ್ಣಿನ ಕಥೆಯನ್ನು ಚಿತ್ರದಲ್ಲಿ ಹೇಳಹೊರಟಿದ್ದೇವೆ, ಇದರಲ್ಲಿ ಎಲ್ಲವೂ ಹೊಸದಾಗಿರುತ್ತೆ. ನಿರ್ಮಾಪಕ ಕುಮಾರ್ ಅವರು ನೀಡಿದ ಸಹಕಾರದಿಂದ ಚಿತ್ರದ ಇಷ್ಟು ಅದ್ದೂರಿಯಾಗಿ ಬಂದಿದೆ. ಈಗಿನ ಕಾಲದ ಲವ್‌ಸ್ಟೋರಿ ಜೊತೆಗೆ ಒಂದು ಸರ್ ಪ್ರೈಸ್ ಕೂಡ ಚಿತ್ರದಲ್ಲಿದೆ ಎಂದರು.
ನಾಯಕ ಶ್ರೀನಗರ ಕಿಟ್ಟಿ ಮಾತನಾಡುತ್ತ ಮೊದಲಬಾರಿಗೆ ಒಬ್ಬ ರೇಶ್ಮೆ ಬೆಳೆಗಾರನಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಇಂದು ಮೊದಲ ಹಾಡು ರಿಲೀಸಾಗಿದೆ. ನಾಗಶೇಖರ್ ಅವರ ಪ್ಯಾಟ್ರನ್ ಅಲ್ಲದೆ ಇರುವ ಈ ಹಾಡಲ್ಲಿ ನಾನು, ರಚಿತಾರಾಮ್, ರಾಗಿಣಿ ದ್ವಿವೇದಿ ಅಭಿನಯಿಸಿದ್ದೇವೆ, ರಾಜ್ಯಾದ್ಯಂತ ಆಗಮಿಸಿರುವ ನಾಯಕರೆಲ್ಲರ ಸಮ್ಮುಖದಲ್ಲಿ ಈ ಹಾಡನ್ನು ರಿಲೀಸ್ ಮಾಡಿದ್ದೇವೆ ಎಂದು ಹೇಳಿದರು. ವಿಶೇಷ ಪಾತ್ರದಲ್ಲಿ ನಟ ಚೇತನ್ ಚಂದ್ರ, ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ. ಸತ್ಯ ಹೆಗಡೆ ಅವರ ಛಾಯಾಗ್ರಹಣ, ಶ್ರೀಧರ್ ವಿ. ಸಂಭ್ರಮ್ ಅವರ ಸಂಗೀತ ನಿರ್ದೇಶನ, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ, ರಾಗಿಣಿ ದ್ವಿವೇದಿ, ಚೇತನ್ ಚಂದ್ರ, ರಂಗಾಯಣ ರಘು, ಸಾಧು ಕೋಕಿಲ , ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್‌ಕುಮಾರ್ ಸೇರಿದಂತೆ ಸಾಕಷ್ಟು ಕಲಾವಿದರ ತಾರಾಗಣ ಈ ಚಿತ್ರಕ್ಕಿದೆ
ಶಿವರಾಜ್ ಕುಮಾರ್ (Shivaraj Kumar) ನಟನೆಯ ಭೈರತಿ ರಣಗಲ್ ಸಿನಿಮಾದ ಕಾವಲಿಗ ಲಿರಿಕಲ್ ಸಾಂಗ್ ಇದೇ ಅಕ್ಟೋಬರ್ 7ರಂದು ಸಂಜೆ 6.03ಕ್ಕೆ ಬಿಡುಗಡೆ ಆಗಲಿದೆ. ‘ಮಾಯದಿರೋ ಮನದ ಗಾಯಕೆ, ಮಮತೆ ಮದ್ದು ಹಚ್ಚೊ ಸೇವಕ’ ಸಾಹಿತ್ಯದಲ್ಲಿ ಈ ಹಾಡು ಮೂಡಿ ಬಂದಿದೆ. ಇತ್ತೀಚೆಗಷ್ಟೇ (Bhairati Rangal) ಚಿತ್ರದ ಶೀರ್ಷಿಕೆ ಗೀತೆ (Title Song) ಬಿಡುಗಡೆಯಾಗಿತ್ತು.
ಕಿನ್ನಾಳ್ ರಾಜ್ ಅವರು ಬರೆದಿರುವ “ಇತಿಹಾಸವೇ ನಿಬ್ಬೆರಿಗಿಸುವ ಎತ್ತಿ ಹಿಡಿಯುವ ಮೈಲಿಗಲ್ಲು” ಎಂಬ ಭೈರತಿ ರಣಗಲ್ ಸಿನಿಮಾದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದರು. ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಸಂತೋಷ್ ವೆಂಕಿ ಹಾಡಿದ್ದಾರೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಿಣೆಯಾಗುತ್ತಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿತ್ತು.
ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್ ನಲ್ಲಿ ಬಂದಿದ್ದ “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ “ಭೈರತಿ ರಣಗಲ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಶಿವರಾಜಕುಮಾರ್ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನ, ಗುಣ ಕಲಾ ನಿರ್ದೇಶನ ಹಾಗೂ ದಿಲೀಪ್ ಸುಬ್ರಹ್ಮಣ್ಯ, ಚೇತನ್ ಡಿಸೋಜ ಸಾಹಸ ನಿರ್ದೇಶನ “ಭೈರತಿ ರಣಗಲ್” ಚಿತ್ರಕ್ಕಿದೆ.
ಮಾಸ್ ಸಿನಿಮಾಗಳಲ್ಲಿಯೇ ಹೆಚ್ಚಾಗಿ ನಟಿಸಿರೋ ಅನೀಶ್ ತೇಜೇಶ್ವರ್ ಆರಾಮ್ ಅರವಿಂದ ಸ್ವಾಮಿ ಸಿನಿಮಾ ಮೂಲಕ ರೋಮ್ಯಾಂಟಿಕ್ ಹೀರೋ ಆಗಿ ನಿಮ್ಮ ಮುಂದೆ ಬರ್ತಿದ್ದಾರೆ. ಆರಂಭದಿಂದಲೂ ವಿಭಿನ್ನ ಪ್ರಚಾರದ ಮೂಲಕ ಪ್ರೇಕ್ಷಕರನ್ನು ಗಮನಸೆಳೆಯುತ್ತಿರುವ ಚಿತ್ರತಂಡ ಈಗ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. ಆರಾಮ್ ಅರವಿಂದ ಸ್ವಾಮಿ ಸಿನಿಮಾ ಅಖಾಡಕ್ಕೆ ಇಳಿಯಲು ಸಜ್ಜಾಗಿದೆ.
ಮುಂದೆ ಹೇಗೋ ಕುಣಿದು ಅನೀಶ್ ಟೈಟಲ್ ಟ್ರ್ಯಾಕ್ ಮೂಲಕ ಜಬರ್ದಸ್ತ್ ಆಗಿ ಕುಣಿದಿದ್ದ ಅನೀಶ್ ತೇಜೇಶ್ವರ್ ಈಗ ಮುಂದೆ ಹೇಗೋ ಏನೋ ಎನ್ನುತ್ತಾ ಬಿಂದಾಸ್ ಆಗಿ ಹೆಜ್ಜೆ ಹಾಕಿದ್ದಾರೆ. ಅನೀಶ್ ಗೆ ಮಿಲನಾ ನಾಗರಾಜ್ ಸಾಥ್ ಕೊಟ್ಟಿದ್ದು, ಮಲ್ಲು ಕುಟ್ಟಿಯಾಗಿ ಮಿಂಚಿದ್ದಾರೆ. ಪ್ರಮೋದ್ ಮರವಂತೆ ಸಾಹಿತ್ಯದ ಮೆಲೋಡಿ ಹಾಡಿಗೆ ನಿಹಾಲ್ ಟೌರೊ ಧ್ವನಿಯಾಗಿದ್ದು, ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಹಾಡಿನ ಶ್ರೀಮಂತಿಕೆ ಹೆಚ್ಚಿಸಿದೆ.
‘ನಮ್ ಗಣಿ ಬಿಕಾಂ ಪಾಸ್’, ‘ಗಜಾನನ ಅಂಡ್ ಗ್ಯಾಂಗ್’ ಅಂತಹ ಸಿನಿಮಾಗಳನ್ನು ನಿರ್ದೇಶಿಸಿರೋ ಅಭಿಷೇಕ್ ಶೆಟ್ಟಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇಲ್ಲಿ ಅನೀಶ್‌ಗೆ ಮಿಲನಾ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ಇಬ್ಬರು ನಾಯಕಿಯರು. ‘ಅಕಿರ’ ಸಿನಿಮಾ ನಿರ್ಮಿಸಿದ್ದ ಶ್ರೀಕಾಂತ್ ಪ್ರಸನ್ನ ಹಾಗೂ ‘ಗುಳ್ಟು’ ಸಿನಿಮಾ ನಿರ್ಮಾಪಕ ಪ್ರಶಾಂತ್ ರೆಡ್ಡಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ವೈವಿಬಿ ಶಿವಸಾಗರ್ ಛಾಯಾಗ್ರಹಣ, ಉಮೇಶ್ ಆರ್. ಬಿ. ಸಂಕಲನ ಈ ಸಿನಿಮಾಗಿದೆ. ಪ್ರಚಾರದ ಪಡಸಾಲೆಗೆ ಇಳಿದಿರುವ ಚಿತ್ರತಂಡ ಭರದಿಂದ ಪ್ರಚಾರ ನಡೆಸ್ತಿದೆ.