Tag: soundarya jagadeesh

  • ಕೈನೋವಿನ ನಡುವೆಯೂ ಸೌಂದರ್ಯ ಜಗದೀಶ್ ಅಂತಿಮ ದರ್ಶನ ಪಡೆದ ಡಿಬಾಸ್

    ಕೈನೋವಿನ ನಡುವೆಯೂ ಸೌಂದರ್ಯ ಜಗದೀಶ್ ಅಂತಿಮ ದರ್ಶನ ಪಡೆದ ಡಿಬಾಸ್

    ಸ್ಯಾಂಡಲ್‌ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagadeesh) ಇಂದು (ಏ.14) ತಮ್ಮ ನಿವಾಸದಲ್ಲಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ಸ್ಯಾಂಡಲ್‌ವುಡ್‌ ಗಣ್ಯರು ಜಗದೀಶ್‌ ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ. ಇದೀಗ ಕೈನೋವಿನ ಸಂದರ್ಭದಲ್ಲಿಯೂ ನಟ ದರ್ಶನ್ (Darshan) ಆಪ್ತ ಸ್ನೇಹಿತ ಸೌಂದರ್ಯ ಜಗದೀಶ್ ಅಂತಿಮ ದರ್ಶನ ಪಡೆದಿದ್ದಾರೆ.

    ಸೌಂದರ್ಯ ಜಗದೀಶ್ ಆತ್ಮಹತ್ಯೆ ಇದೀಗ ಕುಟುಂಬಸ್ಥರಿಗೆ, ಆಪ್ತರಿಗೆ ಶಾಕ್ ಕೊಟ್ಟಿದೆ. ಜಗದೀಶ್‌ಗೆ ಅಂತಿಮ ನಮನ ಸಲ್ಲಿಸಲು ಗಣ್ಯರು ಮನೆಗೆ ಭೇಟಿ ನೀಡುತ್ತಿದ್ದಾರೆ. ಹೀಗಿರುವಾಗ ಹಲವು ವರ್ಷಗಳ ಸ್ನೇಹಿತರಾದ ಜಗದೀಶ್‌ಗೆ ಅಂತಿಮ ದರ್ಶನ ಪಡೆಯಲು ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಆಗಮಿಸಿದ್ದಾರೆ. ಇದನ್ನೂ ಓದಿ:ದುಬಾರಿ ಕಾರು ಖರೀದಿಸಿದ ‘ಬಿಗ್ ಬಾಸ್’ ಬೆಡಗಿ ನಮ್ರತಾ ಗೌಡ

    ‘ಡೆವಿಲ್’ ಶೂಟಿಂಗ್‌ನಲ್ಲಿ ಕೈಗೆ ಏಟು ಮಾಡಿಕೊಂಡಿದ್ದರ ಹಿನ್ನಲೆ ಇತ್ತೀಚೆಗೆ ದರ್ಶನ್ ಎಡಗೈಗೆ ಸರ್ಜರಿ ಆಗಿತ್ತು. ಒಂದು ತಿಂಗಳುಗಳ ಕಾಲ ರೆಸ್ಟ್ ಅಗತ್ಯ ಎಂದು ವೈದ್ಯರು ಹೇಳಿದ್ದರು. ಕೈನೋವಿನ ಸಂದರ್ಭದಲ್ಲೂ ಜಗದೀಶ್ ಅಂತಿಮ ದರ್ಶನಕ್ಕೆ ದರ್ಶನ್ ಆಗಮಿಸಿ ಕುಟುಂಬದವರಿಗೆ ಸಂತೈಸಿದ್ದಾರೆ. ಈ ವೇಳೆ, ದರ್ಶನ್ ಜೊತೆ ನಟ ಧನ್ವೀರ್ ಗೌಡ ಮತ್ತು ಯಶಸ್ ಸೂರ್ಯ ಆಗಮನಿಸಿದ್ದರು.

    ನಿರ್ಮಾಪಕ ಸೌಂದರ್ಯ ಜಗದೀಶ್‌ಗೆ ಅಂತಿಮ ದರ್ಶನ ಪಡೆಯಲು ಉಪೇಂದ್ರ ದಂಪತಿ, ನಟಿ ಅಮೂಲ್ಯ, ಶ್ರೀನಗರ ಕಿಟ್ಟಿ, ವಿನೋದ್ ಪ್ರಭಾಕರ್, ಲವ್ಲಿ ಸ್ಟಾರ್ ಪ್ರೇಮ್, ಗುರುಕಿರಣ್ ದಂಪತಿ, ನಟ ಗುರುನಂದನ್ ಸೇರಿದಂತೆ ಅನೇಕರು ಆಗಮಿಸಿದ್ದರು.

    ಏ.15ರಂದು ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ಸೌಂದರ್ಯ ಜಗದೀಶ್ ಅಂತ್ಯಕ್ರಿಯೆ ನಡೆಯಲಿದೆ.

  • ಸೌಂದರ್ಯ ಜಗದೀಶ್ ಆತ್ಮಹತ್ಯೆ ಬಗ್ಗೆ ಡಿಸಿಪಿ ಪ್ರತಿಕ್ರಿಯೆ

    ಸೌಂದರ್ಯ ಜಗದೀಶ್ ಆತ್ಮಹತ್ಯೆ ಬಗ್ಗೆ ಡಿಸಿಪಿ ಪ್ರತಿಕ್ರಿಯೆ

    ನ್ನಡದ ಚಿತ್ರನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ (Soundarya Jagadeesh) ಇಂದು (ಏ.14) ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಈಗಾಗಲೇ ಪೊಲೀಸರು ಮನೆಗೆ ಭೇಟಿ ಪರಿಶೀಲನೆ ಕೂಡ ನಡೆಸಿದ್ದಾರೆ. ಜಗದೀಶ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಡಿಸಿಪಿ ಸೈಯದ್ ವುಲ್ಲಾ ಅದಾವತ್ ಪ್ರತಿಕ್ರಿಯೆ ನೀಡಿದ್ದಾರೆ.

    ನಿರ್ಮಾಪಕ ಜಗದೀಶ್ ಮನೆಯಲ್ಲಿ ಉತ್ತರ ವಿಭಾಗದ ಡಿಸಿಪಿ ಸೈಯದ್ ವುಲ್ಲಾ ಅದಾವತ್ ಪರಿಶೀಲನೆ ನಡೆಸಿದ್ದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಬೆಳಗ್ಗೆ 9.45ಕ್ಕೆ ಘಟನೆ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಅವರ ಪತ್ನಿ ಈಗಾಗಲೇ ದೂರು ಕೊಟ್ಟಿದ್ದಾರೆ. ಪತ್ನಿ ಕೂಡ ಇದು ಸೂಸೈಡ್ ಎಂದು ಕ್ಲೀಯರ್ ಕಟ್ ಆಗಿ ಹೇಳಿದ್ದಾರೆ ಎಂದು ಡಿಸಿಪಿ ಮಾತನಾಡಿದ್ದರು.

    ಇತ್ತೀಚಿಗೆ ಸೌಂದರ್ಯ ಜಗದೀಶ್ ಮಾನಸಿಕವಾಗಿ ತುಂಬಾ ನೊಂದಿದ್ದರು. ಕೆಲ ದಿನಗಳ ಹಿಂದಷ್ಟೇ ಸೌಂದರ್ಯ ಜಗದೀಶ್ ಅತ್ತೆಯ ಮೃತಪಟ್ಟಿದ್ದರು. ಅತ್ತೆಯ ಜೊತೆ ತುಂಬಾ ಉತ್ತಮ ಒಡನಾಟ ಹೊಂದಿದ್ದ ಜಗದೀಶ್, ಅತ್ತೆಯ ಸಾವಿನ ಬಳಿಕ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಹೀಗಾಗಿ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ. ಕೇಸ್ ದಾಖಲಿಸಿಕೊಂಡು ತನಿಖೆ ಮಾಡ್ತಾ ಇದ್ದೀವಿ ಎಂದು ಡಿಸಿಪಿ ಮಾತನಾಡಿದ್ದಾರೆ. ಇದನ್ನೂ ಓದಿ:ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ

    ಅಂದಹಾಗೆ, ಏ.15ರಂದು ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ಸೌಂದರ್ಯ ಜಗದೀಶ್ ಅಂತ್ಯಕ್ರಿಯೆ ನಡೆಯಲಿದೆ. ಇಂದು (ಏ.14) ಜಗದೀಶ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

  • ಸೋಮವಾರ ನಿರ್ಮಾಪಕ ಸೌಂದರ್ಯ ಜಗದೀಶ್‌ ಅಂತ್ಯಕ್ರಿಯೆ

    ಸೋಮವಾರ ನಿರ್ಮಾಪಕ ಸೌಂದರ್ಯ ಜಗದೀಶ್‌ ಅಂತ್ಯಕ್ರಿಯೆ

    ನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ (Producer Soundarya Jagadeesh) ಅವರು ತಮ್ಮ ಮಹಾಲಕ್ಷ್ಮಿ ಲೇಔಟ್ ನಿವಾಸದಲ್ಲಿ ಇಂದು (ಏ.14) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏ.15ರಂದು ಹಾಸನ ಜಿಲ್ಲೆಯ ಹಿರಿಸಾವೆ ಬಳಿ ಇರುವ ಫಾರಂಹೌಸ್‌ನಲ್ಲಿ ಸೌಂದರ್ಯ ಜಗದೀಶ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ನಟ ಕಮ್‌ ನಿರ್ಮಾಪಕ ರವಿಗೌಡ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:45 ಕೋಟಿ ಮೌಲ್ಯದ ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ

    ಸದ್ಯ ಸೌಂದರ್ಯ ಜಗದೀಶ್ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದ್ದು, ಮೃತದೇಹವನ್ನು ಕುಟುಂಬಸ್ಥರಿಗೆ ಪೊಲೀಸರು ಹಸ್ತಾಂತರ ಮಾಡಿದ್ದಾರೆ. ಮಹಾಲಕ್ಷ್ಮಿ ಲೇಔಟ್‌ ನಿವಾಸದಲ್ಲಿ ನಾಳೆ ಬೆಳಗ್ಗೆ 9 ಗಂಟೆಯವರೆಗೂ ಸಾರ್ವಜನಿಕರು ಹಾಗೂ ಚಿತ್ರರಂಗದ ಮಂದಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಹಾಸನ ಜಿಲ್ಲೆಯ ಚೆನ್ನರಾಯ ಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ಅಂತಿಮ ಕಾರ್ಯ ನಡೆಯಲಿದೆ.

    ಉದ್ಯಮಿಯಾಗಿದ್ದ ಜಗದೀಶ್ ಅವರು ಅಪ್ಪು & ಪಪ್ಪು, ಸ್ನೇಹಿತರು, ರಾಮ್ ಲೀಲಾ, ಮಸ್ತ್ ಮಜಾ ಮಾಡಿ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು.

  • ಸೌಂದರ್ಯ ಜಗದೀಶ್‌ ಆತ್ಮಹತ್ಯೆ ಸುದ್ದಿ ಕೇಳಿ ಶಾಕ್‌ ಆಯ್ತು: ಪ್ರೇಮ್

    ಸೌಂದರ್ಯ ಜಗದೀಶ್‌ ಆತ್ಮಹತ್ಯೆ ಸುದ್ದಿ ಕೇಳಿ ಶಾಕ್‌ ಆಯ್ತು: ಪ್ರೇಮ್

    ನ್ನಡ ಚಲನಚಿತ್ರ ನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ (Soundarya Jagadeesh) ಅವರು ತಮ್ಮ ಮಹಾಲಕ್ಷ್ಮಿ ಲೇಔಟ್ ನಿವಾಸದಲ್ಲಿ ಇಂದು (ಏ.14) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ಲವ್ಲಿ ಸ್ಟಾರ್ ಪ್ರೇಮ್ (Lovely Star Prem) ಅವರು ಜಗದೀಶ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸೌಂದರ್ಯ ಜಗದೀಶ್ ಆತ್ಮಹತ್ಯೆ ಸುದ್ದಿ ಕೇಳಿ ಶಾಕ್‌ ಆಯ್ತು ಎಂದಿದ್ದಾರೆ. ಇದನ್ನೂ ಓದಿ:ಸಲ್ಮಾನ್‌ ಖಾನ್‌ ನಿವಾಸದ ಹೊರಗೆ ಗುಂಡಿನ ದಾಳಿ

    ಸೌಂದರ್ಯ ಜಗದೀಶ್‌ಗೆ ಏನಾಯ್ತು ಎಂಬುದು ನನಗೆ ಗೊತ್ತಿಲ್ಲ. ಒಂದು ಅಪರೂಪದ ಸ್ನೇಹ ನಾವು ಕಳೆದುಕೊಂಡು ಬಿಟ್ಟಿದ್ದೇವೆ. ಯಾರೇ ಸಹಾಯ ಕೇಳಿದ್ರು ಇಲ್ಲ ಎಂದು ಹೇಳುತ್ತಿರಲಿಲ್ಲ. ಇತ್ತೀಚೆಗೆ ಅವರ ಮನೆಯ ಡ್ರೈವರ್ ತೀರಿಕೊಂಡಿದ್ದರು. ಅವರ ಅತ್ತೆ ಕೂಡ ಇತ್ತೀಚೆಗೆ ನಿಧನರಾದರು. ಈಗ ಸೌಂದರ್ಯ ಜಗದೀಶ್ ಆತ್ಮಹತ್ಯೆಯ ಸುದ್ದಿ ಕೇಳಿ ಶಾಕ್ ಆಯ್ತು ಎಂದು ನಟ ಪ್ರೇಮ್ ಮಾತನಾಡಿದ್ದಾರೆ.

    ಇತ್ತೀಚೆಗಷ್ಟೇ ಮಗಳ ಮದುವೆ ಅದ್ಧೂರಿಯಾಗಿ ಮಾಡಿದ್ದರು. ಖುಷಿ ಖುಷಿಯಾಗಿ ಇದ್ದರು. ಎಲ್ಲರನ್ನೂ ಕರೆದು ಪಾರ್ಟಿ ಮಾಡಿದ್ದರು. ಅವರಿಗೆ ಆರ್ಥಿಕ ಸಮಸ್ಯೆ ಏನು ಇರಲಿಲ್ಲ. ಒಂದು ಅಪರೂಪದ ಸ್ನೇಹವನ್ನು ನಾವೆಲ್ಲರೂ ಕಳೆದುಕೊಂಡಿದ್ದೇವೆ. ಅವರ ಕುಟುಂಬಕ್ಕೆ ದುಃಖವನ್ನು ತಡೆದುಕೊಳ್ಳುವ ಶಕ್ತಿ ಕೊಡಲಿ. ಜಗದೀಶ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಟ ಪ್ರೇಮ್ ಸಂತಾಪ ಸೂಚಿಸಿದ್ದಾರೆ.

  • ಸೌಂದರ್ಯ ಜಗದೀಶ್ ಆತ್ಮಹತ್ಯೆ- ಗೆಳೆಯ ಶ್ರೇಯಸ್ ಹೇಳಿದ್ದೇನು?

    ಸೌಂದರ್ಯ ಜಗದೀಶ್ ಆತ್ಮಹತ್ಯೆ- ಗೆಳೆಯ ಶ್ರೇಯಸ್ ಹೇಳಿದ್ದೇನು?

    ನ್ನಡ ಚಿತ್ರರಂಗದ ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagadeesh) ಆತ್ಮಹತ್ಯೆ ಮಾಡಿಕೊಂಡಿದ್ದರ ಬಗ್ಗೆ ಆಪ್ತ ಸ್ನೇಹಿತ ಶ್ರೇಯಸ್ (Shreyas) ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಟಾಲಿವುಡ್ ನಟ ರಾಮ್‌ಚರಣ್‌ಗೆ ಗೌರವ ಡಾಕ್ಟರೇಟ್

    ಸೌಂದರ್ಯ ಜಗದೀಶ್ ಅವರ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಸುಗುಣ ಆಸ್ಪತ್ರೆಗೆ ಸೇರಿಸಲಾಯಿತು. ಅವರು ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ. ಜಗದೀಶ್ ಆತ್ಮಹತ್ಯೆಗೆ ಬೇರೆ ಏನು ಕಾರಣ ಇಲ್ಲ. ಸದ್ಯ ಎಂ.ಎಸ್ ರಾಮಯ್ಯದಲ್ಲಿ ಮರಣೋತ್ತರ ಪರೀಕ್ಷೆ ಮಾಡಿಸಲಾಗುತ್ತಿದೆ ಎಂದು ಗೆಳೆಯ ಶ್ರೇಯಸ್ ಮಾತನಾಡಿದ್ದಾರೆ.

    ಇತ್ತೀಚೆಗಷ್ಟೇ ಅದ್ಧೂರಿಯಾಗಿ ಮಗಳ ಮದುವೆ ಮಾಡಿದ್ದರು ಸೌಂದರ್ಯ ಜಗದೀಶ್. ಮಗಳ ಮದುವೆ ಸಂದರ್ಭದಲ್ಲಿ ಖುಷಿ ಖುಷಿಯಾಗಿಯೇ ಇದ್ದರು. ಇದೀಗ ಅವರ ಆತ್ಮಹತ್ಯೆಯ ಸುದ್ದಿ ಕೇಳಿ ಚಿತ್ರರಂಗದ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.

    ಉದ್ಯಮಿಯಾಗಿದ್ದ ಜಗದೀಶ್ ಅವರು ಅಪ್ಪು & ಪಪ್ಪು, ಸ್ನೇಹಿತರು, ರಾಮ್ ಲೀಲಾ, ಮಸ್ತ್ ಮಜಾ ಮಾಡಿ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು.

  • ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ

    ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ

    ಸ್ನೇಹಿತರು, ರಾಮ್ ಲೀಲಾ ಚಿತ್ರದ ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagadeesh) ಇಂದು (ಏ.14) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಣಕಾಸಿನ ವಿಚಾರದಲ್ಲಿ ಸಂಬಂಧಿಸಿದ ಹಿನ್ನಲೆಯಲ್ಲಿ ನಿರ್ಮಾಪಕ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಈ ಘಟನೆ ನಡೆದಿದ್ದು, ಸದ್ಯ ಸುಗುಣ ಆಸ್ಪತ್ರೆಯಲ್ಲಿ ಅವರ ಮೃತದೇಹ ಇಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:ಅದೃಷ್ಟದಿಂದ ಸಿನಿಮಾ ಚಾನ್ಸ್ ಗಿಟ್ಟಿಸಿಕೊಂಡ್ರಾ ರಶ್ಮಿಕಾ ಮಂದಣ್ಣ?

    ಇತ್ತೀಚೆಗಷ್ಟೇ ಅದ್ಧೂರಿಯಾಗಿ ಮಗಳ ಮದುವೆ ಮಾಡಿದ್ದರು ಸೌಂದರ್ಯ ಜಗದೀಶ್. ಮಗಳ ಮದುವೆ ಸಂದರ್ಭದಲ್ಲಿ ಖುಷಿ ಖುಷಿಯಾಗಿಯೇ ಇದ್ದರು. ಇದೀಗ ಅವರ ಆತ್ಮಹತ್ಯೆಯ ಸುದ್ದಿ ಕೇಳಿ ಚಿತ್ರರಂಗದ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.

    ಉದ್ಯಮಿಯಾಗಿದ್ದ ಜಗದೀಶ್‌ ಅವರು ಅಪ್ಪು & ಪಪ್ಪು, ಸ್ನೇಹಿತರು, ರಾಮ್ ಲೀಲಾ, ಮಸ್ತ್ ಮಜಾ ಮಾಡಿ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು.

  • ಸೌಂದರ್ಯ ಜಗದೀಶ್ ಕುಟುಂಬಸ್ಥರಿಂದ ಹಲ್ಲೆ ಪ್ರಕರಣ- ಮನೆ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್

    ಸೌಂದರ್ಯ ಜಗದೀಶ್ ಕುಟುಂಬಸ್ಥರಿಂದ ಹಲ್ಲೆ ಪ್ರಕರಣ- ಮನೆ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್

    ಬೆಂಗಳೂರು: ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮನೆಯ ಸೆಕ್ಯೂರಿಟಿಯನ್ನು ಅರೆಸ್ಟ್ ಮಾಡಿದ್ದಾರೆ.

    ಬಾಲಾಜಿ ಅರೆಸ್ಟ್ ಆದ ಸೆಕ್ಯೂರಿಟಿ. ಮನೆಗೆ ನುಗ್ಗಿ ಹಲ್ಲೆ ನಡೆಸಲು ಪ್ರಚೋದನೆ ಮತ್ತು ಸಹಾಯದ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಸೆಕ್ಯೂರಿಟಿ ಬಾಲಾಜಿಯನ್ನ ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಕೇಸ್ – ಪತ್ನಿ ರೇಖಾ, ಪುತ್ರ ಸ್ನೇಹಿತ್‍ಗೆ ಪೊಲೀಸರಿಂದ ನೋಟಿಸ್

    ಇತ್ತ ಎಫ್‍ಐಆರ್ ದಾಖಲಾದರೂ ಆರೋಪಿಗಳು ನಾಪತ್ತೆಯಾಗಿದ್ದಾರೆ. ನಿರ್ಮಾಪಕನ ಕಿರಿಕ್ ಮಗ, ಪತ್ನಿ ಹಾಗೂ ಬೌನ್ಸರ್ ಗಳು ಇನ್ನೂ ಪೊಲಿಸರ ಕೈಗೆ ಸಿಕ್ಕಿಲ್ಲ. ಹೀಗಾಗಿ ಮಹಾಲಕ್ಷ್ಮೀ ಲೇ ಔಟ್ ಪೊಲೀಸರು ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ರಾತ್ರಿಯೆಲ್ಲಾ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಕಳೆದ ರಾತ್ರಿ 1 ಗಂಟೆವರೆಗೂ ಬೌನ್ಸರ್ ಗಳ ಮನೆಯನ್ನು ಪೊಲೀಸರು ಜಾಲಾಡಿದ್ದಾರೆ. ಬಾಗಲಗುಂಟೆ, ಕೊಡಿಗೇಹಳ್ಳಿಯಲ್ಲಿ ಬೌನ್ಸರ್ ಮನೆ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಳಿಕ ಮನೆಗೆ ಹೋಗಿಲ್ಲ. ಬೌನ್ಸರ್ ಮನೆಯವರಿಂದ ಮಾಹಿತಿ ಪಡೆದಿದ್ದಾರೆ. ಆದರೆ ಮನೆಯಲ್ಲಿ ಬೌನ್ಸರ್ ಗಳು ಸಿಗದೇ ವಾಪಸ್ ಆಗಿದ್ದಾರೆ. ಇದನ್ನೂ ಓದಿ: ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR

    ಮಂಜುಳಾ ಪುರುಷೋತ್ತಮ್ ಅವರ ಕುಟುಂಬಕ್ಕೆ ಕ್ಷಮೆ ಕೇಳತ್ತೇನೆ. ಇನ್ನು ಮುಂದೆ ನಮ್ಮ ಮನೆ ಕೆಲಸದವರು ಮಂಜುಳ ಅವರ ಕೆಲಸದವರ ಜೊತೆ ಜಗಳವಾಡದಂತೆ ನೋಡಿ ಕೊಳ್ಳುತ್ತೇನೆ. ನನ್ನ ಮಗ ಸ್ನೇಹಿತ್ ಹಾಗೂ ಪತ್ನಿ ರೇಖಾ ಜಗಳ ಬಿಡಸಲು ಹೋಗಿದ್ದರು. ಅವರು ಯಾರ ಮೇಲೂ ಹಲ್ಲೆ ಮಾಡಲು ಹೋಗಿಲ್ಲ. ಈ ಘಟನೆಯಿಂದ ನಮ್ಮಿಬ್ಬರ ಕುಟುಂಬಕ್ಕೆ ಬಹಳ ನೋವಾಗಿದೆ. ಹೆಣ್ಣು ಮಗಳೊಬ್ಬಳಿಗೆ ಹಾಗೂ ಅವರ ತಾಯಿಗೆ ನೋವಾಗಿರುವ ವಿಷಯ ತಿಳಿದು ನನಗೆ ನೋವಾಗಿದೆ. ನಿರ್ಮಾಪಕ ಸೌಂದರ್ಯ ಜಗದೀಶ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.