Tag: sourav ganguly

  • ಗಂಗೂಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ- ಪ್ರಾಣಾಪಾಯದಿಂದ ಪಾರು

    ಗಂಗೂಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ- ಪ್ರಾಣಾಪಾಯದಿಂದ ಪಾರು

    ಕೋಲ್ಕತ್ತಾ: ಟೀಂ ಇಂಡಿಯಾದ ಮಾಜಿ ನಾಯಕ ಸೌರವ್‌ ಗಂಗೂಲಿ (Sourav Ganguly) ಅವರ ಕಾರು ಅಪಘಾತಕ್ಕೀಡಾದ (Accident) ಘಟನೆ ಗುರುವಾರ ಪಶ್ಚಿಮ ಬಂಗಾಳದಲ್ಲಿ (West Bengal) ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.

    ಗಂಗೂಲಿ ಬರ್ಧಮಾನ್‌ಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಂಗೂಲಿ ಅವರ ರೇಂಜ್ ರೋವರ್ ಕಾರು ಸಾಮಾನ್ಯ ವೇಗದಲ್ಲಿ ಚಲಿಸುತ್ತಿತ್ತು. ಈ ವೇಳೆ ಲಾರಿಯೊಂದು ಇದ್ದಕ್ಕಿದ್ದಂತೆ ಅವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದೆ.   ಇದನ್ನೂ ಓದಿ: ಡೈವ್ ಮಾಡೋ ರೀಲ್ಸ್‌ ಹುಚ್ಚಿಗೆ ವೈದ್ಯೆ ಬಲಿ – ತುಂಗಭದ್ರಾ ನದಿಪಾಲಾಗಿದ್ದ ಯುವತಿಯ ಶವ ಪತ್ತೆ

    ಈ ಸಂದರ್ಭದಲ್ಲಿ ಗಂಗೂಲಿ ಅವರ ಕಾರು ಚಾಲಕ ದಿಢೀರ್‌ ಬ್ರೇಕ್‌ ಹಾಕಿದ್ದಾನೆ. ಇದರಿಂದಾಗಿ ಗಂಗೂಲಿ ಅವರ ಕಾರಿನ ಹಿಂದೆ ಬರುತ್ತಿದ್ದ ಬೆಂಗಾವಲು ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿವೆ. ಒಂದು ಬೆಂಗಾವಲು ವಾಹನ ಗಂಗೂಲಿ ಅವರ ಕಾರಿಗೆ ಡಿಕ್ಕಿಯಾಗಿದೆ.

    ಅದೃಷ್ಟವಶಾತ್ ವಾಹನಗಳು ಹೆಚ್ಚಿನ ವೇಗದಲ್ಲಿ ಚಲಿಸದ ಕಾರಣ ಗಂಗೂಲಿ ಪ್ರಾಣಾಪಾಯದಿಂದ ಪಾರಾಗಿದ್ದು ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಅಪಘಾತದ ನಂತರ ಸೌರವ್ ಸುಮಾರು 10 ನಿಮಿಷಗಳ ಕಾಲ ಎಕ್ಸ್‌ಪ್ರೆಸ್‌ವೇಯಲ್ಲಿ ನಿಂತಿದ್ದರು. ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ತನ್ನ ಪ್ರಯಾಣವನ್ನು ಪುನರಾರಂಭಿಸಿದರು. ಇದನ್ನೂ ಓದಿ: 4 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ – ಮುಂಬೈ ಕೋರ್ಟ್‌ನಲ್ಲಿ ಏನಾಯ್ತು?

    ಬರ್ಧಮಾನ್ ತಲುಪಿದ ನಂತರ ಗಂಗೂಲಿ ಬರ್ಧಮಾನ್ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಂತರ ಬರ್ಧಮಾನ್ ಕ್ರೀಡಾ ಸಂಘ ಆಯೋಜಿಸಿದ್ದ ಮತ್ತೊಂದು ಕಾರ್ಯಕ್ರಮದಲ್ಲೂ ಪಾಲ್ಗೊಂಡಿದ್ದರು.

     

  • ಪಾಕ್ ಕೆಲವು ಬದಲಾವಣೆ ಮಾಡಿಕೊಂಡರೆ ಟೀಂ ಇಂಡಿಯಾದಂತೆ ಬಲಿಷ್ಠವಾಗುತ್ತೆ: ಗಂಗೂಲಿ

    ಪಾಕ್ ಕೆಲವು ಬದಲಾವಣೆ ಮಾಡಿಕೊಂಡರೆ ಟೀಂ ಇಂಡಿಯಾದಂತೆ ಬಲಿಷ್ಠವಾಗುತ್ತೆ: ಗಂಗೂಲಿ

    ನವದೆಹಲಿ: ವಿಶ್ವಕಪ್‍ನಿಂದ (World Cup) ಹೊರ ನಡೆದ ಪಾಕ್ (Pakistan) ತಂಡ ಕೆಲವು ಬದಲಾವಣೆಗಳನ್ನು ಕೈಗೊಂಡರೆ ಭಾರತದಂತೆ (Team India) ಬಲಿಷ್ಠವಾಗಲಿದೆ ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಹೇಳಿದ್ದಾರೆ.

    ಪಾಕಿಸ್ತಾನದಲ್ಲಿ ಬಾಬರ್ ಅಜಂ, ಶಹೀನ್ ಅಫ್ರಿದಿ, ಮೊಹಮ್ಮದ್ ರಿಜ್ವಾನ್‍ನಂತಹ ಪ್ರತಿಭಾನ್ವಿತ ಆಟಗಾರರಿದ್ದಾರೆ. ಕೆಲವು ಸರಿಯಾದ ನಿರ್ಧಾರ ಹಾಗೂ ಬದಲಾವಣೆಗಳನ್ನು ಮಾಡಿಕೊಂಡರೆ ಪಾಕ್ ಉತ್ತಮವಾಗಿ ಆಡಲು ಸಾಧ್ಯವಿದೆ. ಪಾಕಿಸ್ತಾನ ಕ್ರಿಕೆಟ್ ತಂಡ ಹಿಂದೆಯೂ ಬಲಿಷ್ಠವಾಗಿತ್ತು. ಈಗಲೂ ಪ್ರತಿಭಾವಂತ ಆಟಗಾರರಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: World Cup 2023: ಹಿಟ್‌ಮ್ಯಾನ್‌ ಸಿಕ್ಸರ್‌ ಹೊಡೆತಕ್ಕೆ ಲೆಜೆಂಡ್‌ ABD ದಾಖಲೆ ಪುಡಿಪುಡಿ

    ಅಭ್ಯಾಸ ಹಾಗೂ ಉತ್ತಮ ನಾಯಕತ್ವ ಗುಣಗಳು ಯಶಸ್ವಿಯಾಗಲು ಸಾಧ್ಯವಿದೆ. ಪಾಕ್ ಮತ್ತೆ ಉತ್ತಮವಾಗಿ ಕ್ರಿಕೆಟ್ ಆಡುವ ನಿರೀಕ್ಷೆ ಇದೆ. ಕೇವಲ ಐಪಿಎಲ್ ಆಡುವುದರಿಂದ ತಂಡಕ್ಕೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಿಲ್ಲ. ಕ್ರಮವಾದ ಅಭ್ಯಾಸದಿಂದ ಮಾತ್ರ ಯಶಸ್ವಿಯಾಗಿ ಪ್ರದರ್ಶನ ನೀಡಲು ಸಾಧ್ಯ ಎಂದಿದ್ದಾರೆ.

    ಹಣ ಸಂಪಾದನೆಗೆ ಮಾತ್ರ ಟಿ-20 ಪಂದ್ಯಗಳನ್ನು ಆಡಿ. ಉತ್ತಮ ಆಟಗಾರರು 4-5 ದಿನ ನಿರಂತರವಾಗಿ ಕ್ರಿಕೆಟ್ ಆಡಬೇಕು. ಭಾರತದಲ್ಲಿ ಕ್ರಿಕೆಟ್‍ಗೆ ಉತ್ತಮ ವಾತಾವರಣವಿದೆ ಎಂದಿದ್ದಾರೆ. ಇದನ್ನೂ ಓದಿ: ವಿಜಯದ ನಾಗಾಲೋಟದತ್ತ ಟೀಂ ಇಂಡಿಯಾ- ಕೊನೆಯ ಲೀಗ್ ಮ್ಯಾಚ್‍ಗೆ ಸಾಕ್ಷಿಯಾಗಲಿದೆ ಚಿನ್ನಸ್ವಾಮಿ ಸ್ಟೇಡಿಯಂ

  • ಸದ್ಯದಲ್ಲೇ ಗಂಗೂಲಿ ಬಯೋಪಿಕ್ : ಗಂಗೂಲಿ ಪಾತ್ರದಲ್ಲಿ ಆಯುಷ್ಮಾನ್

    ಸದ್ಯದಲ್ಲೇ ಗಂಗೂಲಿ ಬಯೋಪಿಕ್ : ಗಂಗೂಲಿ ಪಾತ್ರದಲ್ಲಿ ಆಯುಷ್ಮಾನ್

    ಸಿನಿಮಾ ಮತ್ತು ಕ್ರಿಕೆಟ್ (Cricket) ಪ್ರೇಮಿಗಳಿಗೆ ಸಿಹಿಸುದ್ದಿಯೊಂದು ದೊರೆತಿದ್ದು, ಅತೀ ಶೀಘ್ರದಲ್ಲೇ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಅವರ ಬಯೋಪಿಕ್ ಮೂಡಿ ಬರಲಿದೆ. ಗಂಗೂಲಿ ಬಯೋಪಿಕ್ (Biopic) ತಯಾರಾಗಲಿದೆ ಎಂದು ಹಲವು ತಿಂಗಳುಗಳಿಂದ ಸುದ್ದಿ ಹರಿದಾಡುತ್ತಿತ್ತು. ರಣಬೀರ್ ಕಪೂರ್ ಅವರು ಗಂಗೂಲಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು.

    ಸದ್ಯ ಸಿಕ್ಕಿರುವ ಮಾಹಿತಿಯ ಪ್ರಕಾರ ಗಂಗೂಲಿ ಪಾತ್ರವನ್ನು ರಣಬೀರ್ ಬದಲು ಆಯುಷ್ಮಾನ್ ಖುರಾನಾ (Ayushmann Koran) ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಐಶ್ವರ್ಯ ರಜನಿಕಾಂತ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬರಲಿದೆ. ಈಗಾಗಲೇ ಚಿತ್ರದ ಕೆಲಸದಲ್ಲಿ ಐಶ್ವರ್ಯ ಬ್ಯುಸಿಯಾಗಿದ್ದಾರಂತೆ. ಆಯುಷ್ಮಾನ್ ಜೊತೆ ಮಾತುಕತೆಯೂ ಆಗಿದೆ. ಇದನ್ನೂ ಓದಿ: 69th National Film Award 2023: ಅತ್ಯುತ್ತಮ ಸಿನಿಮಾ, ರಾಕೆಟ್ರಿ ದಿ ನಂಬಿ ಎಫೆಕ್ಟ್

    ಅಂದುಕೊಂಡಂತೆ ನಡೆದರೆ ಡಿಸೆಂಬರ್ ನಲ್ಲಿ ಈ ಸಿನಿಮಾ ಸೆಟ್ಟೇರಲಿದೆ. ಹಲವು ಭಾಷೆಗಳಲ್ಲಿ ಇದು ನಿರ್ಮಾಣವಾಗಲಿದೆ. ಈಗಾಗಲೇ ಆಯುಷ್ಮಾನ್ ಖುರಾನ್ ಕ್ರಿಕೆಟ್ ಕುರಿತಾಗಿ ತರಬೇತಿಯನ್ನೂ ಪಡೆಯುತ್ತಿದ್ದಾರೆ. ಗಂಗೂಲಿ ಅವರನ್ನು ಭೇಟಿ ಮಾಡಿ, ಅವರೊಂದಿಗೆ ಒಂದಷ್ಟು ಹೊತ್ತು ಸಮಯ ಕಳೆದಿದ್ದಾರೆ ಎನ್ನುವ ಮಾಹಿತಿಯೂ ಇದೆ.

    ಕ್ರಿಕೆಟ್ ಮತ್ತು ಕ್ರಿಕೆಟ್ ಆಟಗಾರರ ಕುರಿತಾಗಿ ಈಗಾಗಲೇ ಹಲವು ಸಿನಿಮಾಗಳು ಬಂದಿವೆ. ಈ ಬಾರಿ ಗಂಗೂಲಿ ಕುರಿತಾದ ಸಿನಿಮಾವಾಗುತ್ತಿದೆ. ಲವ್ ರಂಜನ್ ಮತ್ತು ಅಂಕುರ್ ಗರ್ಗ್‍ ಈ ಸಿನಿಮಾವನ್ನು ನಿರ್ಮಾಣ ಮಾಡುವ ಮೂಲಕ ಗಂಗೂಲಿಯ ಸಾಧನೆಯನ್ನು ತೆರೆಗೆ ತರಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ವಕಪ್ ಸೆಮಿಫೈನಲ್‍ಗೆ 5 ಟೀಂ ಹೆಸರಿಸಿದ ಗಂಗೂಲಿ

    ವಿಶ್ವಕಪ್ ಸೆಮಿಫೈನಲ್‍ಗೆ 5 ಟೀಂ ಹೆಸರಿಸಿದ ಗಂಗೂಲಿ

    ನವದೆಹಲಿ: ವಿಶ್ವಕಪ್ (World Cup) ಸೆಮಿಫೈನಲ್‍ಗೆ ಹೋಗಲು ಅವಕಾಶವಿರುವ ಐದು ತಂಡಗಳನ್ನು ಮಾಜಿ ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ (Sourav Ganguly) ಹೆಸರಿಸಿದ್ದಾರೆ. ಇದು ಹೇಳಲು ತುಂಬಾ ಕಷ್ಟ ಎಂದು ಅವರು ಪ್ರತಿಕ್ರಿಸಿದ್ದಾರೆ.

    ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ (Team India) ಸೆಮಿಫೈನಲ್‍ಗೆ ತೆರಳುವ ವಿಶ್ವಾಸವಿದೆ. ನ್ಯೂಜಿಲೆಂಡ್ ತಂಡವನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಪಾಕಿಸ್ತಾನವನ್ನೂ ಈ ಸಾಲಿಗೆ ಸೇರಿಸುತ್ತೇನೆ. ಪಾಕಿಸ್ತಾನ ಅರ್ಹತೆ ಪಡೆದರೆ ಭಾರತ-ಪಾಕಿಸ್ತಾನ ಸೆಮಿಫೈನಲ್‍ನಲ್ಲಿ ಸೆಣಸಬಹುದು ಎಂದಿದ್ದಾರೆ. ಇದನ್ನೂ ಓದಿ: ವಿಶ್ವಕಪ್‌ ಟೂರ್ನಿ ಆಡಲು ಪಾಕ್‌ ತಂಡ ಭಾರತಕ್ಕೆ ಬರಲ್ಲ – ಮತ್ತೆ ಕ್ಯಾತೆ ತೆಗೆದ ಪಾಕ್‌ ಸಚಿವ

    ಈ ವರ್ಷ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಭಾರತದಲ್ಲಿ ನಡೆಯಲಿರುವ 13ನೇ ಆವೃತ್ತಿಯ ಕ್ರಿಕೆಟ್ ವಿಶ್ವಕಪ್‍ಗೆ ಶ್ರೀಲಂಕಾ ಮತ್ತು  ನೆದರ್​​ಲ್ಯಾಂಡ್ ತಂಡಗಳು ಅರ್ಹತೆ ಪಡೆದಿವೆ. ಈಗಾಗಲೇ ಅಂತಿಮ 10 ತಂಡಗಳ ಪಟ್ಟಿ ತಯಾರಾಗಿದೆ. ಇದೇ ಮೊದಲ ಬಾರಿಗೆ ಭಾರತ ಸಂಪೂರ್ಣವಾಗಿ ವಿಶ್ವಕಪ್ ಕ್ರಿಕೆಟ್ ಅತಿಥ್ಯ ವಹಿಸಿಕೊಂಡಿದೆ.

    ಅಹಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಇದೇ ವೇಳೆ ಮುಂಬೈ ಮತ್ತು ಕೋಲ್ಕತ್ತಾ ಸೆಮಿಫೈನಲ್ ಪಂದ್ಯಗಳಿಗೆ ಆತಿಥ್ಯ ವಹಿಸಲಿವೆ. ಭಾರತ ಅಕ್ಟೋಬರ್ 15 ರಂದು ಲೀಗ್ ಹಂತದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ ಮತ್ತು ವಿಶ್ವಕಪ್‍ನಲ್ಲಿ ಇದು ಅತ್ಯಂತ ಆಕರ್ಷಕ ಪಂದ್ಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.‌ ಇದನ್ನೂ ಓದಿ: ನಾಕೌಟ್ ಪಂದ್ಯಗಳಲ್ಲೇ ಟೀಂ ಇಂಡಿಯಾ ಕೈ ಕೊಡ್ತಿರೋದೇಕೆ – ಕಾರಣ ತಿಳಿಸಿದ ದಾದಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಕೌಟ್ ಪಂದ್ಯಗಳಲ್ಲೇ ಟೀಂ ಇಂಡಿಯಾ ಕೈ ಕೊಡ್ತಿರೋದೇಕೆ – ಕಾರಣ ತಿಳಿಸಿದ ದಾದಾ

    ನಾಕೌಟ್ ಪಂದ್ಯಗಳಲ್ಲೇ ಟೀಂ ಇಂಡಿಯಾ ಕೈ ಕೊಡ್ತಿರೋದೇಕೆ – ಕಾರಣ ತಿಳಿಸಿದ ದಾದಾ

    ಮುಂಬೈ: ನಾಕೌಟ್ ಪಂದ್ಯಗಳಲ್ಲಿ ಟೀಂ ಇಂಡಿಯಾ (Team India) ಮಾನಸಿಕ ಒತ್ತಡಕ್ಕಿಂತಲೂ ಹೆಚ್ಚಾಗಿ ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲವಾದ್ದರಿಂದ ಸೋಲನ್ನು ಎದುರಿಸುತ್ತಿದೆ ಎಂದು ಬಿಸಿಸಿಐ (BCCI) ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ತಿಳಿಸಿದ್ದಾರೆ.

    ಶನಿವಾರವಷ್ಟೇ ತಮ್ಮ 51ನೇ ಹುಟ್ಟುಹಬ್ಬ ಆಚರಿಸಿಕೊಂಡ ಗಂಗೂಲಿ, ನಾಕೌಟ್ ಪಂದ್ಯಗಳಲ್ಲಿ ಟೀಂ ಇಂಡಿಯಾ ಗೆಲ್ಲಲು ಏಕೆ ಹೆಣಗಾಡುತ್ತಿದೆ ಎಂಬುದನ್ನ ವಿವರಿಸಿದ್ದಾರೆ. ಇದನ್ನೂ ಓದಿ: ICC World Cup 2023: ಟೀಂ ಇಂಡಿಯಾ ಪರಿಷ್ಕೃತ ವೇಳಾಪಟ್ಟಿ ರಿಲೀಸ್‌ – ಇಲ್ಲಿದೆ ಡಿಟೇಲ್ಸ್‌

    ಹೌದು. 2013ರಲ್ಲಿ ಎಂ.ಎಸ್ ಧೋನಿ (MS Dhoni) ನಾಯಕತ್ವದಲ್ಲಿದ್ದಾಗ ಭಾರತ ತಂಡ ಇಂಗ್ಲೆಂಡ್ ನೆಲದಲ್ಲಿ ಚಾಂಪಿಯನ್ ಟ್ರೋಫಿ ಗೆದ್ದಿತ್ತು. ಆ ನಂತರ ಐಸಿಸಿ (ICC) ಟೂರ್ನಿಗಳಲ್ಲಿ ಯಾವುದೇ ಟ್ರೋಫಿ ಗೆದ್ದಿಲ್ಲ. 2013ರ ನಂತರ ಭಾರತ 4 ಬಾರಿ ಫೈನಲ್ ಹಾಗೂ ಅನೇಕ ಸೆಮಿಫೈನಲ್ ಪಂದ್ಯಗಳಲ್ಲಿ ಸೋತು ಮುಖಭಂಗ ಅನುಭವಿಸಿದೆ. ಇದನ್ನೂ ಓದಿ: ಯಾರ ಜೊತೆ, ಎಲ್ಲಿ ಬೇಕಾದ್ರೂ ಆಡೋಕೆ ನಾವ್‌ ರೆಡಿ – ಪಾಕ್‌ ತಂಡ ಭಾರತಕ್ಕೆ ಬರೋದು ಖಚಿತ; ಬಾಬರ್‌ ಆಜಂ

    ಈ ಕುರಿತು ಸಂದರ್ಶನದಲ್ಲಿ ಮಾತನಾಡಿದ ಗಂಗೂಲಿ, ನಿರ್ಣಾಯಕ ಹಂತಗಳಲ್ಲಿ ನಾವು ಕೆಲವೊಮ್ಮೆ ಉತ್ತಮವಾಗಿ ಕಾರ್ಯನಿರ್ವಹಿಸುವುದಿಲ್ಲ. ಇದು ಮಾನಸಿಕ ಒತ್ತಡ ಮಾತ್ರವೆಂದು ನಾನು ಭಾವಿಸುವುದಿಲ್ಲ. ಮಾನಸಿಕ ಒತ್ತಡಕ್ಕಿಂತ ನಿರೀಕ್ಷಿತ ಪ್ರದರ್ಶನ ನೀಡದಿರುವುದು ಎದ್ದು ಕಾಣುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಈ ಬಾರಿ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದು ಸಾಧನೆಯೇ ಆಗಿದೆ. ಈ ಬಾರಿ ವಿಶ್ವಕಪ್‌ನಲ್ಲೂ ನಮಗೆ ಗೆಲ್ಲುವ ಎಲ್ಲ ಅವಕಾಶಗಳಿವೆ. ಉತ್ತಮ ಆಟಗಾರರೂ ಇದ್ದಾರೆ. ಪ್ರಯತ್ನಪಟ್ಟರೇ ಎಲ್ಲವೂ ಸಾಧ್ಯವಾಗುತ್ತದೆ ಎಂದು ಕಿವಿಮಾತು ಹೇಳಿದ್ದಾರೆ.

    ಕಳೆದ ವರ್ಷ ಟಿ20 ಏಷ್ಯಾಕಪ್‌ನಲ್ಲಿ ಸೂಪರ್ ಫೋರ್ ಹಂತದಲ್ಲಿ ಎಡವಿದ್ದ ಭಾರತ, ನಂತರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯವಾಗಿ ಸೋತಿತ್ತು. ಇನ್ನೂ ಈ ವರ್ಷದ ಆರಂಭದಿಂದ ನಡೆದ ಶ್ರೀಲಂಕಾ, ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ನಡೆದ ಸರಣಿಗಳಲ್ಲಿ ಯಶಸ್ವಿ ಪ್ರದರ್ಶನ ನೀಡಿದ್ದ ಭಾರತ ತಂಡ, ಇತ್ತೀಚೆಗೆ ನಡೆದ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಹೀನಾಯ ಸೋಲನುಭವಿಸಿ, ಸತತ 2ನೇ ಬಾರಿಗೆ ರನ್ನರ್‌ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೌರವ್ ಗಂಗೂಲಿ ಬಯೋಪಿಕ್‌ಗೆ ರಣ್‌ಬೀರ್ ಬದಲು ಮತ್ತೊಬ್ಬ ನಟನ ಎಂಟ್ರಿ

    ಸೌರವ್ ಗಂಗೂಲಿ ಬಯೋಪಿಕ್‌ಗೆ ರಣ್‌ಬೀರ್ ಬದಲು ಮತ್ತೊಬ್ಬ ನಟನ ಎಂಟ್ರಿ

    ಬಾಲಿವುಡ್ (Bollywood)  ಅಂಗಳದಲ್ಲಿ ಸೌರವ್ ಗಂಗೂಲಿ (Sourav Ganguly) ಬರುವ ಬಗ್ಗೆ ಈ ಹಿಂದೆಯೇ ಬಿಗ್ ಅಪ್‌ಡೇಟ್ ನೀಡಿದ್ದರು. ಸೌರವ್ ಗಂಗೂಲಿ ರೋಲ್‌ನಲ್ಲಿ ರಣಬೀರ್ ಕಪೂರ್ ನಟಿಸಬೇಕಿತ್ತು, ಆದರೆ ಸೌರವ್ ಪಾತ್ರಕ್ಕೆ ಬಾಲಿವುಡ್‌ನ ಮತ್ತೊಬ್ಬ ಸ್ಟಾರ್ ನಟ ಕಾಣಿಸಿಕೊಳ್ಳುವ ಬಗ್ಗೆ ಮಾಹಿತಿ ಹರಿದಾಡುತ್ತಿದೆ.

    ಚಿತ್ರರಂಗದಲ್ಲಿ ಬಯೋಪಿಕ್‌ಗಳ ಹಾವಳಿ ಜಾಸ್ತಿಯಾಗಿದೆ. ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರ ಜೀವನವನ್ನು ಈಗಾಗಲೇ ಬೆಳ್ಳಿಪರದೆ ತೋರಿಸುವ ಟ್ರೆಂಡ್ ಶುರುವಾಗಿದೆ. ಕೆಲ ವರ್ಷಗಳ ಹಿಂದೆ ಕ್ರಿಕೆಟಿಗ ಎಂ.ಎಸ್ ಧೋನಿ (M.s Dhoni) ಬಯೋಪಿಕ್ ಸಿನಿಮಾ ಬಂದಿತ್ತು. ಚಿತ್ರಮಂದಿರದಲ್ಲಿ ಸಿನಿಮಾ ಕಮಾಲ್ ಮಾಡಿತ್ತು. ಈಗ ಮತ್ತೊಬ್ಬ ಕ್ರಿಕೆಟಿಗ ಸೌರವ್ ಗಂಗೂಲಿ ಜೀವನದ ಬಗ್ಗೆ ಬಯೋಪಿಕ್ ಬರುವ ಈ ಹಿಂದೆಯೇ ತಿಳಿಸಲಾಗಿತ್ತು. ಸೌರವ್ ಪಾತ್ರ ರಣಬೀರ್ ಕಪೂರ್ ನಟಿಸೋದು ಫೈನಲ್ ಆಗಿತ್ತು. ಆದರೆ ಈಗ ಹೀರೋ ಚೇಂಜ್ ಆಗಿದ್ದಾರೆ.

    ಈಗಾಗಲೇ ಸಂಜಯ್ ದತ್ ಬಯೋಪಿಕ್ ಮಾಡಿ ನಟಿಸಿ ಸೈ ಎನಿಸಿಕೊಂಡಿರುವ ರಣ್‌ಬೀರ್ ಕಪೂರ್ (Ranbir Kapoor) ಅವರು ಸೌರವ್ ಬಯೋಪಿಕ್‌ಗೆ ಸೆಲೆಕ್ಟ್ ಆಗಿದ್ದರು. ಆದರೆ ಈಗ ಸಿನಿಮಾದಲ್ಲಿ ಕೊಂಚ ಬದಲಾವಣೆ ಆಗಿದೆ. ರಣಬೀರ್ ಬದಲು ಆಯುಷ್ಮಾನ್ ಖುರಾನ್ ನಟಿಸಲಿದ್ದಾರೆ. ಸೌರವ್ ಗಂಗೂಲಿ ರೋಲ್‌ಗೆ ನಟ ಆಯುಷ್ಮಾನ್ ಕಾಣಿಸಿಕೊಳ್ಳಲಿದ್ದಾರಂತೆ. ಇದನ್ನೂ ಓದಿ:27 ವರ್ಷಗಳ ಬಳಿಕ ಮಲಯಾಳಂ ಸಿನಿಮಾ ರಂಗಕ್ಕೆ ಕೀರವಾಣಿ ಎಂಟ್ರಿ

    ಒಂದ್ ಕಡೆ ರಣ್‌ಬೀರ್- ಆಯುಷ್ಮಾನ್ ಹೆಸರು ಚಾಲ್ತಿಯಲ್ಲಿದ್ರೆ, ಮತ್ತೊಂದು ಕಡೆ ಈ ಚಿತ್ರಕ್ಕೆ ರಜನಿಕಾಂತ್ ಪುತ್ರಿ ಐಶ್ವರ್ಯ (Aishwarya Rajanikanth) ನಿರ್ದೇಶನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟಕ್ಕೂ ಈ ಸುದ್ದಿ ನಿಜಾನಾ.? ಈ ಬಗ್ಗೆ ಚಿತ್ರತಂಡ ಹೇಳುವವರೆಗೂ ಕಾದುನೋಡಬೇಕಿದೆ.

  • ಶೇಕ್‍ಹ್ಯಾಂಡ್ ವಿವಾದಕ್ಕೆ ತೆರೆ ಎಳೆದ ಕೊಹ್ಲಿ, ಗಂಗೂಲಿ

    ಶೇಕ್‍ಹ್ಯಾಂಡ್ ವಿವಾದಕ್ಕೆ ತೆರೆ ಎಳೆದ ಕೊಹ್ಲಿ, ಗಂಗೂಲಿ

    ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಮತ್ತು ರಾಯಲ್ ಚಾಲೆಂಜರ್ಸ್ (RCB) ತಂಡಗಳ ನಡುವಿನ ಐಪಿಎಲ್ (IPL) ಪಂದ್ಯದ ನಂತರ ವಿರಾಟ್ ಕೊಹ್ಲಿ (Virat Kohli) ಹಾಗೂ ಸೌರವ್ ಗಂಗೂಲಿ (Sourav Ganguly) ಶೇಕ್ ಹ್ಯಾಂಡ್ ಮಾಡುವ ಮೂಲಕ ತಮ್ಮ ಸುತ್ತಲಿನ ವಿವಾದಕ್ಕೆ ತೆರೆ ಎಳೆದಿದ್ದಾರೆ.

    ಕಳೆದ ಬಾರಿ ಈ ಎರಡು ತಂಡಗಳು ಪರಸ್ಪರ ಮುಖಾಮುಖಿಯಾದಾಗ ಶೇಕ್‍ಹ್ಯಾಂಡ್ ಮಾಡದೇ ಇರುವುದು ವಿವಾದದ ವಿಷಯವಾಗಿತ್ತು. ಅಲ್ಲದೆ ಇದಾದ ನಂತರ ಇಬ್ಬರೂ ಇನ್‍ಸ್ಟಾಗ್ರಾಮ್‍ನಲ್ಲಿ ಪರಸ್ಪರ ಅನ್‍ಫಾಲೋ ಮಾಡಿದ್ದರು ಎಂದು ವರದಿಯಾಗಿತ್ತು. ಈಗ ಶನಿವಾರದ ಪಂದ್ಯದಲ್ಲಿ ಡಿಸಿ ಗೆಲುವು ಸಾಧಿಸಿದ ನಂತರ ಇಬ್ಬರು ಮಾತನಾಡಿದ್ದು ವಿವಾದಕ್ಕೆ ತೆರೆ ಬಿದ್ದಂತಾಗಿದೆ. ಇದನ್ನೂ ಓದಿ: RCBಯನ್ನು ಹುರಿದು ಮುಕ್ಕಿದ ಡೆಲ್ಲಿ – ಕ್ಯಾಪಿಟಲ್ಸ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ

    ಫಿಲ್ ಸಾಲ್ಟ್ (Phil Salt)  ಸಿಕ್ಸರ್, ಬೌಂಡರಿ ಬ್ಯಾಟಿಂಗ್ ಹಾಗೂ ಯಶಸ್ವಿ ಬೌಲಿಂಗ್ ದಾಳಿ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಯಲ್ ಚಾಲೆಂಜರ್ಸ್ (Royal Challengers Bangalore) ವಿರುದ್ಧ 7 ವಿಕೆಟ್‍ಗಳ ಭರ್ಜರಿ ಜಯ ದಾಖಲಿಸಿತು.

    ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು. 182 ರನ್‍ಗಳ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ 16.4 ಓವರ್‌ಗಳಲ್ಲೇ 187ರನ್ ಸಿಡಿಸಿ ಸುಲಭವಾಗಿ ಜಯ ಗಳಿಸಿತು.

    ಸಾಲ್ಟ್ 45 ಎಸೆತಗಳಲ್ಲಿ 87 ರನ್ ಗಳಿಸುವುದರ ಜೊತೆಗೆ, ಡೇವಿಡ್ ವಾರ್ನರ್ 14 ಎಸೆತಗಳಲ್ಲಿ 22, ಮಿಚೆಲ್ ಮಾರ್ಷ್ 17 ಎಸೆತಗಳಲ್ಲಿ 26 ಮತ್ತು ರಿಲೀ ರೊಸ್ಸೌವ್ 21 ಎಸೆತಗಳಿಗೆ ಔಟಾಗದೆ 29 ರನ್ ಕಲೆ ಹಾಕಿದರು. ಇದು ಡೆಲ್ಲಿಯ ಸತತ ಎರಡನೇ ಗೆಲುವಾಗಿದೆ. ಅಲ್ಲದೆ ಆರ್‌ಸಿಬಿ 10 ಪಂದ್ಯಗಳಲ್ಲಿ ಐದನೇ ಸೋಲು ಇದಾಗಿದೆ. ಇದನ್ನೂ ಓದಿ: IPLನಲ್ಲಿ 7 ಸಾವಿರ ರನ್‌ ಸಿಡಿಸಿ ದಾಖಲೆ ಬರೆದ ರನ್‌ ಮಿಷಿನ್‌ ಕೊಹ್ಲಿ

  • ಯುದ್ಧ ಮುಂದುವರಿಸಲಿ – ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ದಾದಾ

    ಯುದ್ಧ ಮುಂದುವರಿಸಲಿ – ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ದಾದಾ

    ನವದೆಹಲಿ: ಕಳೆದ ಕೆಲವು ದಿನಗಳಿಂದ ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆ ಕುರಿತು ಬಿಸಿಸಿಐ (BCCI) ಮಾಜಿ ಅಧ್ಯಕ್ಷ ಹಾಗೂ ಟೀಂ ಇಂಡಿಯಾ (Team India) ಮಾಜಿ ನಾಯಕ ಸೌರವ್‌ ಗಂಗೂಲಿ (Sourav Ganguly) ಕೊನೆಗೂ ಮೌನ ಮುರಿದಿದ್ದಾರೆ.

    ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ನಡೆಸುತ್ತಿರುವ ಕುಸ್ತಿಪಟುಗಳ ಪ್ರತಿಭಟನೆಯನ್ನು ದಾದಾ ಬೆಂಬಲಿಸಿದ್ದಾರೆ. ಇದನ್ನೂ ಓದಿ: ಕುಡಿದ ಪೊಲೀಸರಿಂದ ಹಲ್ಲೆ ಆರೋಪ – ದೇಶದ ಅತ್ಯುನ್ನತ ಪ್ರಶಸ್ತಿ ಹಿಂದಿರುಗಿಸಲು ಮುಂದಾದ ಕುಸ್ತಿಪಟುಗಳು

    ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ಕುರಿತು ಮಾತನಾಡಿರುವ ಅವರು, ಕುಸ್ತಿಪಟುಗಳು ತಮ್ಮ ಯುದ್ಧ ಮುಂದುವರಿಸಲಿ. ತಮ್ಮದೇ ಆದ ಹೋರಾಟಕ್ಕೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ನನ್ನನ್ನ ನೇಣಿಗಾದ್ರೂ ಹಾಕಿ, ಆದ್ರೆ ಕುಸ್ತಿ ನಿಲ್ಲಿಸಿದ್ರೆ ನಿಮ್ಮ ಭವಿಷ್ಯಕ್ಕೆ ಹಾನಿ – ಬ್ರಿಜ್‌ಭೂಷಣ್ ಭಾವುಕ ಹೇಳಿಕೆ

    ನನಗೆ ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಅಲ್ಲಿ ಏನಾಗುತ್ತಿದೆ ಎಂಬುದೂ ನನಗೆ ಗೊತ್ತಿಲ್ಲ. ಆದ್ರೆ ಅದರ ಬಗ್ಗೆ ಪತ್ರಿಕೆಗಳಲ್ಲಿ ಓದುತ್ತಿದ್ದೇನೆ. ಕುಸ್ತಿಪಟುಗಳು ಪದಕ ಗೆದ್ದು, ನಮ್ಮ ದೇಶಕ್ಕೆ ಕೀರ್ತಿ ತಂದಿದ್ದಾರೆ. ಶೀಘ್ರವೇ ಈ ಸಮಸ್ಯೆ ಬಗೆಹರಿಯಲಿದೆ ಎಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.

    ಪೊಲೀಸರು – ಕುಸ್ತಿಪಟುಗಳ ನಡುವೆ ಜಟಾಪಟಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಮೇಲೆ ಕುಡಿದ ಅಮಲಿನಲ್ಲಿದ್ದ ಪೊಲೀಸರು ಬುಧವಾರ ರಾತ್ರಿ ಹಲ್ಲೆ ನಡೆಸಿರುವುದಾಗಿ ಕುಸ್ತಿಪಟುಗಳು ಆರೋಪಿಸಿದ್ದರು. ಪ್ರತಿಭಟನಾ ಸ್ಥಳಕ್ಕೆ ಹಾಸಿಗೆಗಳನ್ನು ತರಲು ಹೋಗಿದ್ದಾಗ ಪೊಲೀಸರು ಹಲ್ಲೆ ನಡೆಸಿರುವುದಾಗಿ ದೂರಿದ್ದರು. ಕೆಲವು ಕುಸ್ತಿಪಟುಗಳ ತಲೆಗೆ ಹೊಡೆತ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ. ಒಬ್ಬರು ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತಿಭಟನೆ ಬಳಿಕ ನೋವನುಭವಿಸಿದ ಕುಸ್ತಿಪಟುಗಳು ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಹೇಳಿದ್ದರು.

  • ಕೊಹ್ಲಿಯನ್ನು ಕಂಡರೂ ನೋಡದ ಗಂಗೂಲಿ – ವೀಡಿಯೋ ವೈರಲ್

    ಕೊಹ್ಲಿಯನ್ನು ಕಂಡರೂ ನೋಡದ ಗಂಗೂಲಿ – ವೀಡಿಯೋ ವೈರಲ್

    ನವದೆಹಲಿ: ಟೀಂ ಇಂಡಿಯಾದ (Team India) ಇಬ್ಬರು ಮಾಜಿ ನಾಯಕರ ನಡುವಿನ ಶೀತಲ ಸಮರಕ್ಕೆ ಪುಷ್ಠಿ ನೀಡುವಂತಹ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಬೆಂಗಳೂರು (RCB) ಹಾಗೂ ಡೆಲ್ಲಿ (DC)  ನಡುವಿನ ಐಪಿಎಲ್ (IPL) ಪಂದ್ಯದ ವೇಳೆ ಕೊಹ್ಲಿಯ  (Virat Kohli) ಎದುರಲ್ಲೇ ಗಂಗೂಲಿ (Sourav Ganguly) ಹೋಗಿದ್ದಾರೆ. ಎದುರುಗಡೆ ಕೊಹ್ಲಿ ಕುಳಿತಿದ್ದರೂ ಬೇಕೆಂದೇ ಗಂಗೂಲಿ ಕೊಹ್ಲಿಯನ್ನು ನೋಡಿಲ್ಲ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ʻಹಿಟ್‌ʼ ಮೇಯರ್‌, ಸಂಜು ಸೂಪರ್‌ ಸಿಕ್ಸರ್‌ – ರೋಚಕ ಪಂದ್ಯದಲ್ಲಿ ರಾಜಸ್ಥಾನ್‌ಗೆ 3 ವಿಕೆಟ್‌ಗಳ ಜಯ

    ಪಂದ್ಯ ಮುಗಿದ ಬಳಿಕ ಕೊಹ್ಲಿ ಎಲ್ಲಾ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡುತ್ತಿದ್ದರು ಈ ವೇಳೆ ಗಂಗೂಲಿ ಹತ್ತಿರ ಬಂದಾಗ ಪಾಂಟಿಂಗ್ ಜೊತೆ ಮಾತನಾಡಿದ ವೀಡಿಯೋ ಹರಿದಾಡುತ್ತಿದೆ.

    ಬಿಸಿಸಿಐ (BCCI) ಅಧ್ಯಕ್ಷರಾದ ಬಳಿಕ ಕೊಹ್ಲಿ ಮತ್ತು ಗಂಗೂಲಿ ಸಂಬಂಧ ಹಳಸಿತ್ತು. ಕೊಹ್ಲಿಯನ್ನು ನಾಯಕಪಟ್ಟದಿಂದ ಇಳಿಸಲು ಗಂಗೂಲಿಯೇ ಕಾರಣ ಎಂಬ ಸುದ್ದಿಗಳು ಹರಿದಾಡಿದ್ದವು.

    ನಾಯಕತ್ವ ಬದಲಾವಣೆ ವೇಳೆ ಯಾವುದೇ ಪೂರ್ವ ಮಾಹಿತಿ ನೀಡಿರಲಿಲ್ಲ. ನೇರವಾಗಿ ಏಕದಿನ ಪಂದ್ಯದ ನಾಯಕತ್ವದಿಂದ ಕೆಳಗಿಳಿಸಲಾಯಿತು ಎಂದು ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಕೊಹ್ಲಿ ಹೇಳಿದ್ದರು. ಇದನ್ನೂ ಓದಿ: IPL 2023: ಕೊನೆಗೂ ಐಪಿಎಲ್‌ಗೆ ಎಂಟ್ರಿಕೊಟ್ಟ ಸಚಿನ್‌ ತೆಂಡೂಲ್ಕರ್‌ ಪುತ್ರ

  • ICC ಹಣಕಾಸು ಸಮಿತಿಗೆ ಅಮಿತ್ ಶಾ ಪುತ್ರ ಮುಖ್ಯಸ್ಥ – ದಾದಾಗಿಲ್ಲ BCCI ಬೆಂಬಲ

    ICC ಹಣಕಾಸು ಸಮಿತಿಗೆ ಅಮಿತ್ ಶಾ ಪುತ್ರ ಮುಖ್ಯಸ್ಥ – ದಾದಾಗಿಲ್ಲ BCCI ಬೆಂಬಲ

    ದುಬೈ: ಐಸಿಸಿ (ICC) ಅಧ್ಯಕ್ಷರಾಗಿ ನ್ಯೂಜಿಲೆಂಡ್‌ನ ಗ್ರೆಗ್ ಬಾರ್ಕ್ಲೇ (Greg Barclay) ಅವರನ್ನು 2ನೇ ಅವಧಿಗೆ ಮತ್ತೊಮ್ಮೆ ಆಯ್ಕೆ ಮಾಡಲಾಗಿದೆ. ಹಾಗೆಯೇ ಬಿಸಿಸಿಐನಲ್ಲಿ 2ನೇ ಅವಧಿಗೆ ಕಾರ್ಯದರ್ಶಿಯಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ಪುತ್ರ ಜಯ್ ಶಾ (Jay Shah) ಅವರಿಗೂ ಐಸಿಸಿಯಲ್ಲಿ (ICC) ದೊಡ್ಡ ಜವಾಬ್ದಾರಿ ಸಿಕ್ಕಿದೆ. ಐಸಿಸಿಯ ವಾಣಿಜ್ಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿ ಅವರನ್ನು ಆಯ್ಕೆ ಮಾಡಲಾಗಿದೆ.

    ಜಯ್ ಶಾ ಅವರನ್ನು ಐಸಿಸಿಯ (ICC) ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ (Financial and Commercial Affairs Committee) ಮುಖ್ಯಸ್ಥರಾಗಿ ಆಯ್ಕೆ ಮಾಡಲಾಗಿದೆ. ಐಸಿಸಿ ಎಲ್ಲಾ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳೂ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಇದರಿಂದ ಐಸಿಸಿಯಲ್ಲಿ ಜಯ್ ಶಾ ಬಿಸಿಸಿಐ ಅನ್ನು ಪ್ರತಿನಿಧಿಸಲಿದ್ದಾರೆ ಅನ್ನೋದು ಖಚಿತವಾಗಿದೆ. ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದರೆ ನರೇಂದ್ರ ಮೋದಿ ಸ್ಟೇಡಿಯಂನ ಹೆಸರು ಬದಲಾಯಿಸುತ್ತೇವೆ – ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

    ವಿತ್ತ ಹುದ್ದೆಗೆ ಏಕಿಷ್ಟು ಮಹತ್ವ?
    ಐಸಿಸಿ ವಾಣಿಜ್ಯ ವ್ಯವಹಾರಗಳ ಸಮಿತಿಯ ಹುದ್ದೆಗೆ ಅಧ್ಯಕ್ಷಷ್ಟೇ ಗೌರವವಿದೆ. ಏಕೆಂದರೆ ಐಸಿಸಿ ಸದಸ್ಯ ರಾಷ್ಟ್ರಗಳ ನಡುವೆ ಆದಾಯ ಹಂಚಿಕೆ ನಿರ್ಧರಿಸುತ್ತದೆ. ಐಸಿಸಿ ನಡೆಸುವ ಮಹತ್ವದ ಪ್ರಾಯೋಜಕತ್ವ ಒಪ್ಪಂದಗಳು ಈ ಸಮಿತಿ ಮೂಲಕ ನಿರ್ಧಾರವಾಗುತ್ತದೆ. ಐಸಿಸಿ ಆಯೋಜಿಸುವ ಟೂರ್ನಿಗಳಿಗೆ ಬಜೆಟ್ ಹಂಚಿಕೆ ಮಾಡುವುದೂ ಇದೇ ಸಮಿತಿ ಹಾಗಾಗಿ ಈ ಹುದ್ದೆಗೆ ಮಹತ್ವವಿದೆ. ಇದನ್ನೂ ಓದಿ: ವಿಶ್ವಕಪ್ ಗೆದ್ದರೆ ಬಾಬರ್ 2048ಕ್ಕೆ ಪಾಕ್ ಪ್ರಧಾನಿ ಆಗ್ತಾರೆ – ಗಾವಸ್ಕರ್ ಭವಿಷ್ಯ

    ಬಿಸಿಸಿಐ ಅಧ್ಯಕ್ಷ ಅವಧಿ ಮುಕ್ತಾಯಗೊಂಡ ಬಳಿಕ 2ನೇ ಬಾರಿ ಅಧಿಕಾರವಧಿಯಲ್ಲಿ ಮುನ್ನಡೆಯಲು ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಒಪ್ಪಿರಲಿಲ್ಲ. ಆ ಬಳಿಕ ಗಂಗೂಲಿ ಐಸಿಸಿ ಅಧ್ಯಕ್ಷರಾಗುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಬಿಸಿಸಿಐ ಬೆಂಬಲ ನೀಡದ ಕಾರಣ ಐಸಿಸಿ ಅಧ್ಯಕ್ಷರ ಸ್ಪರ್ಧಾ ಕಣದಿಂದ ಗಂಗೂಲಿ ಹಿಂದೆ ಸರಿದಿದ್ದರು. ಆದರೆ ಬಿಸಿಸಿಐನಲ್ಲಿ ಕಾರ್ಯದರ್ಶಿಯಾಗಿರುವ ಅಮಿತ್ ಶಾ ಪುತ್ರ ಇದೀಗ ಐಸಿಸಿಯಲ್ಲೂ ಸ್ಥಾನ ಪಡೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]