Tag: South Teachers Constituency

  • ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ – ಕಾಂಗ್ರೆಸ್‌, ಮೈತ್ರಿ ಅಭ್ಯರ್ಥಿಗಳಿಗೆ ಗೆಲುವು

    ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ – ಕಾಂಗ್ರೆಸ್‌, ಮೈತ್ರಿ ಅಭ್ಯರ್ಥಿಗಳಿಗೆ ಗೆಲುವು

    ಬೆಂಗಳೂರು: ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ (Teachers Constituency) ಕಾಂಗ್ರೆಸ್ ಅಭ್ಯರ್ಥಿಗಳು (Congress Candidates) ಗೆಲುವು ದಾಖಲಿಸಿದ್ದಾರೆ.

    ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ರಾಮೋಜಿಗೌಡ 11,841 ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆದು, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಡಿ.ಟಿ ಶ್ರೀನಿವಾಸ್ 11,700ಕ್ಕೂ ಅಧಿಕ ಪ್ರಾಶಸ್ತ್ಯ ಮತಗಳನ್ನು ಪಡೆದು ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಅಭ್ಯರ್ಥಿಗಳ ಗೆಲುವನ್ನು ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದ್ದಾರೆ.

    ಮೈತ್ರಿ ಅಭ್ಯರ್ಥಿಗೂ ಗೆಲುವು:
    ಇನ್ನೂ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿಗೆ ಭರ್ಜರಿ ಗೆಲುವಾಗಿದೆ. 37,627 ಮತಗಳನ್ನು ಪಡೆದುಕೊಂಡಿರುವ ಸರ್ಜಿ 6,935 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ; ಮೈತ್ರಿ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಭರ್ಜರಿ ಗೆಲುವು

    ಇನ್ನೂ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಘುಪತಿ ಭಟ್ 7,039 ಮತಗಳನ್ನ ಪಡೆದುಕೊಂಡರೇ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13,516 ಮತಗಳನ್ನ ಪಡೆದು ಸೋಲು ಕಂಡಿದ್ದಾರೆ. ಇದನ್ನೂ ಓದಿ: ಜೂನ್ 4ರಂದು ಷೇರುಪೇಟೆ ಮಹಾಪತನ ದೇಶದ ಅತಿದೊಡ್ಡ ಹಗರಣ: ರಾಹುಲ್ ಗಾಂಧಿ

    ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಎರಡು ಚುನಾವಣೆಗಳಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ಇತ್ತೀಚೆಗಷ್ಟೇ ಮೈಸೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿತ್ತು. ಗುರುವಾರವೂ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಸೋತಿದ್ದರು. ಇದೀಗ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೀನಾಯ ಸೋಲು ಕಂಡಿದ್ದು, ಕಾಂಗ್ರೆಸ್‌ಗೆ ಮುಖಭಂಗವಾಗಿದೆ.

  • ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ; ಮೈತ್ರಿ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಭರ್ಜರಿ ಗೆಲುವು

    ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ; ಮೈತ್ರಿ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಭರ್ಜರಿ ಗೆಲುವು

    – ಸಿಎಂ ತವರಲ್ಲಿ ಕಾಂಗ್ರೆಸ್‌ ಧೂಳೀಪಟ

    ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ (South Teachers Constituency) ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ (Congress) ಹೀನಾಯ ಸೋಲನುಭವಿಸಿದ್ದು, ಸಿಎಂಗೆ ಮತ್ತೊಮ್ಮೆ ಮುಖಭಂಗವಾಗಿದೆ. ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವಿನ ನಗೆ ಬೀರಿದ್ದಾರೆ.

    4,622 ಮತಗಳ ಭಾರಿ ಅಂತರದಿಂದ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ವಿವೇಕಾನಂದ ಗೆದ್ದಿದ್ದಾರೆ. ವಾಟಾಳ್ ನಾಗರಾಜ್‌ಗೆ ಕೇವಲ 84 ಮತಗಳು ಸಿಕ್ಕಿವೆ. 1,049 ಮತಗಳು ಅಸಿಂಧುವಾಗಿದೆ. ಇದನ್ನೂ ಓದಿ: ವಿಧಾನ ಪರಿಷತ್‌ ಚುನಾವಣೆ – 11 ಅಭ್ಯರ್ಥಿಗಳು ಅವಿರೋಧ ಆಯ್ಕೆ

    ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಎರಡು ಚುನಾವಣೆಗಳಲ್ಲಿ ಕಾಂಗ್ರೆಸ್‌ ಧೂಳಿಪಟವಾಗಿದೆ. ಮೊನ್ನೆ ಮೈಸೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯಕವಾಗಿ ಸೋಲು ಕಂಡಿತ್ತು. ಇಂದು ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮರಿತಿಬ್ಬೇಗೌಡ ಸೋತಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಿದ್ದ ಜೆಡಿಎಸ್‌ನ (JDS) ಕೆ.ವಿವೇಕಾನಂದಗೆ ಭರ್ಜರಿ ಗೆಲುವು ಸಿಕ್ಕಿದೆ.

    ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಮೈತ್ರಿ ಪಕ್ಷ ಗೆಲವು ದಾಖಲಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಗೆಲುವಿನ ನಾಗಾಲೋಟಕ್ಕೆ ಮೈತ್ರಿ ಅಭ್ಯರ್ಥಿ ಬ್ರೇಕ್‌ ಹಾಕಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ದರೋಡೆಕೋರರ ನಾಯಕ: ಛಲವಾದಿ ನಾರಾಯಣಸ್ವಾಮಿ

    ಸತತ ನಾಲ್ಕು ಬಾರಿ ಮರಿತಿಬ್ಬೇಗೌಡ ಗೆದ್ದಿದ್ದರು. ಕಳೆದ ಬಾರಿ ಜೆಡಿಎಸ್‌ನಿಂದ ಗೆದ್ದು ನಂತರದ ದಿನಗಳಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದರು.