Tag: Southern States

  • ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು: ಆಂಧ್ರ ಸಿಎಂ ಕರೆ

    ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು: ಆಂಧ್ರ ಸಿಎಂ ಕರೆ

    – ವೃದ್ಧರ ಸಂಖ್ಯೆ ಹೆಚ್ಚಳಕ್ಕೆ ಕಳವಳ ವ್ಯಕ್ತಪಡಿಸಿದ ಚಂದ್ರಬಾಬು ನಾಯ್ಡು

    ಅಮರಾವತಿ: ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು (Chandrababu Naidu) ಕರೆ ನೀಡಿದ್ದಾರೆ.

    ವಯಸ್ಸಾದವರ ಸಂಖ್ಯೆ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ, ಹೆಚ್ಚಿನ ಮಕ್ಕಳಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಹೊಸ ಕಾನೂನನ್ನು ಜಾರಿಗೊಳಿಸಲಾಗುವುದು. ಜನಸಂಖ್ಯೆ ನಿರ್ವಹಣೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Wayanad By Eelections| ಪ್ರಿಯಾಂಕಾ ವಿರುದ್ಧ ಸ್ಪರ್ಧಿಸುತ್ತಿರುವ ನವ್ಯಾ ಹರಿದಾಸ್‌ ಯಾರು?

    ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗುವ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ನಾಯ್ಡು ತಿಳಿಸಿದ್ದಾರೆ.

    2 ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸದಂತೆ ರಾಜ್ಯವು ಈ ಹಿಂದೆ ಕಾನೂನನ್ನು ಅಂಗೀಕರಿಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ನಾವು ಆ ಕಾನೂನನ್ನು ರದ್ದುಗೊಳಿಸಿದ್ದೇವೆ. ಈಗ ಅದನ್ನು ಹಿಂತೆಗೆದುಕೊಳ್ಳಲು ನಾವು ಪರಿಗಣಿಸುತ್ತಿದ್ದೇವೆ. ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬಗಳಿಗೆ ಸರ್ಕಾರವು ಹೆಚ್ಚಿನ ಪ್ರಯೋಜನಗಳನ್ನು ಒದಗಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದ ಹಲವೆಡೆ ಗ್ರೆನೇಡ್ ದಾಳಿ ನಡೆಸಿದ್ದ ಇಬ್ಬರು ಉಗ್ರರು ಅರೆಸ್ಟ್‌

    ನಾವು 2047 ರ ವರೆಗೆ ಜನಸಂಖ್ಯಾ ಪ್ರಯೋಜನವನ್ನು ಹೊಂದಿದ್ದರೂ, ಆಂಧ್ರ ಸೇರಿದಂತೆ ದಕ್ಷಿಣ ಭಾರತದಲ್ಲಿ ವೃದ್ಧರ ಸಂಖ್ಯೆ ಏರಿಕೆಯಾಗುತ್ತಿದೆ. ಜಪಾನ್, ಚೀನಾ ಮತ್ತು ಯುರೋಪಿಯನ್ ರಾಷ್ಟ್ರಗಳಂತಹ ಅನೇಕ ದೇಶಗಳು ಈ ಸಮಸ್ಯೆಯೊಂದಿಗೆ ಹೋರಾಡುತ್ತಿವೆ. ಹೆಚ್ಚಿನ ವಯಸ್ಸಾದ ಜನಸಂಖ್ಯೆಯನ್ನು ಹೊಂದಿವೆ. ದಕ್ಷಿಣದಲ್ಲಿ ಭಾರತದ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ದೇಶದ ಇತರ ಭಾಗಗಳಿಗೆ ಅಥವಾ ವಿದೇಶಗಳಿಗೆ ವಲಸೆ ಹೋಗುವುದರಿಂದ ಸಮಸ್ಯೆ ಉಲ್ಬಣಗೊಂಡಿದೆ ಎಂದು ಸಿಎಂ ತಿಳಿಸಿದ್ದಾರೆ.

  • ಕರ್ನಾಟಕದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆ – ಕೇಂದ್ರದಿಂದ ಆಘಾತಕಾರಿ ಮಾಹಿತಿ ಬಹಿರಂಗ

    ಕರ್ನಾಟಕದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆ – ಕೇಂದ್ರದಿಂದ ಆಘಾತಕಾರಿ ಮಾಹಿತಿ ಬಹಿರಂಗ

    ನವದೆಹಲಿ: ದೇಶದಲ್ಲೇ ಅತಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿರುವ ಆಘಾತಕಾರಿ ಅಂಶ ಪ್ರಕಟವಾಗಿದೆ.

    2019ರಲ್ಲಿ ದಕ್ಷಿಣದ ಆರು ರಾಜ್ಯಗಳಲ್ಲಿ ಒಟ್ಟು 35 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದ್ದು, 14 ಸಾವಿರ ಕೇಸ್ ದಾಖಲಾಗುವ ಮೂಲಕ ಕರ್ನಾಟಕ ಅಗ್ರ ಸ್ಥಾನದಲ್ಲಿದೆ.

    ಲೋಕಸಭೆಯ ಅಧಿವೇಶನದಲ್ಲಿ ಪ್ರಶ್ನೆಯೊಂದಕ್ಕೆ ಕೇಂದ್ರ ಸರ್ಕಾರ ಉತ್ತರಿಸಿದ್ದು, ಇದರಲ್ಲಿ ಮಾಹಿತಿ ಬಹಿರಂಗವಾಗಿದೆ. ದಕ್ಷಿಣ ಭಾರತ ಆರು ರಾಜ್ಯಗಳಲ್ಲಿ ಶೇ.50ರಷ್ಟು ಪ್ರಕರಣಗಳು ದಾಖಲಾಗಿದ್ದು, ಕರ್ನಾಟಕ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಕೇರಳ ಹಾಗೂ ಆಂಧ್ರ ಪ್ರದೇಶಗಳಲ್ಲಿ ಒಟ್ಟು 36 ಜನ ಈ ಮಹಾಮಾರಿಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: ಡೆಂಗ್ಯೂ ಜ್ವರಕ್ಕೆ ಮನೆ ಮದ್ದು

    ಅಕ್ಟೋಬರ್ ವರೆಗೆ ದೇಶದಲ್ಲಿ ಒಟ್ಟು 91 ಸಾವಿರ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ನವೆಂಬರ್ ಹಾಗೂ ಡಿಸೆಂಬರ್ ಅಂಕಿ ಅಂಶಗಳನ್ನೂ ಸೇರಿಸಿದರೆ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಾಗಲಿದೆ ಎಂದು ಹೇಳಿದೆ.

    ಮಹಾರಾಷ್ಟ್ರ ಹಾಗೂ ಗೋವಾಗಳಲ್ಲಿ ಅನುಕ್ರಮವಾಗಿ 9,899 ಹಾಗೂ 908 ಕೇಸ್ ದಾಖಲಾಗಿವೆ. ಡೆಂಗ್ಯೂ ಮಹಾಮಾರಿಯನ್ನು ನಿಯಂತ್ರಿಸಲು ಕರ್ನಾಟಕದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯ ಕಲ್ಪಿಸಿದರೂ ಸಹ ಪ್ರಕರಣಗಳ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ.

    ಕಳೆದ ವರ್ಷ ರಾಜ್ಯದಲ್ಲಿ 4 ಸಾವಿರ ಪ್ರಕರಣಗಳು ಪತ್ತೆಯಾಗಿದ್ದವು. ಇದರಲ್ಲಿ ಶೇ.70ರಷ್ಟು ಬೆಂಗಳೂರಿನಲ್ಲಿಯೇ ದಾಖಲಾಗಿದ್ದವು. ಅಲ್ಲದೆ ಡೆಂಗ್ಯೂ ಮಹಾಮಾರಿಗೆ ದಕ್ಷಿಣದ ರಾಜ್ಯಗಳಲ್ಲಿ ಹಲವರು ಮೃತಪಟ್ಟಿದ್ದರು. ದೇಶಾದ್ಯಂತ ಒಟ್ಟು 82 ಜನ ಸಾವನ್ನಪ್ಪಿದ್ದರು. ಕರ್ನಾಟಕ, ಕೇರಳಗಳಲ್ಲಿ 13 ಹಾಗೂ 16 ಜನ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

    ದಕ್ಷಿಣ ರಾಜ್ಯಗಳಲ್ಲೇ ಹೆಚ್ಚೇಕೆ?
    ಅಧಿಕಾರಿಗಳ ನಿರಾಸಕ್ತಿ ಹಾಗೂ ಸೊಳ್ಳೆಗಳ ಸಂತಾನೋತ್ಪತ್ತಿ ಸ್ಥಳಗಳನ್ನು ನಿಯಂತ್ರಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಇಲ್ಲದಿರುವುದೇ ಡೆಂಗ್ಯೂ ಪ್ರಕರಣಗಳು ಹೆಚ್ಚಲು ಕಾರಣ. ಈ ಕುರಿತು ಹೆಚ್ಚು ಜಾಗೃತಿ ಮೂಡಿಸುವ ಅಗತ್ಯವಿದೆ. ಆಶಾ ಕಾರ್ಯಕರ್ತೆಯರ ಮೂಲಕ ರಾಜ್ಯಾದ್ಯಂತ ಬೃಹತ್ ಜಾಗೃತಿ ಅಭಿಯಾನವನ್ನು ನಾವು ಕೈಗೊಂಡಿದ್ದೇವೆ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಿ.ಕೆ.ಪಾಂಡೆ ತಿಳಿಸಿದ್ದಾರೆ.