Tag: Sowjanya

  • ಸೌಜನ್ಯ ಕೇಸ್‌ ಮರು ತನಿಖೆ ನಡೆಸಿ: ಸಿಎಂಗೆ ಕುಟುಂಬ ಸದಸ್ಯರ ಮನವಿ

    ಸೌಜನ್ಯ ಕೇಸ್‌ ಮರು ತನಿಖೆ ನಡೆಸಿ: ಸಿಎಂಗೆ ಕುಟುಂಬ ಸದಸ್ಯರ ಮನವಿ

    ಬೆಂಗಳೂರು: ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣದ (Sowjanya Murder) ಮರು ತನಿಖೆ ಮಾಡುವಂತೆ ಸೌಜನ್ಯ ಕುಟುಂಬ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಬಳಿ ಮನವಿ ಮಾಡಿದ್ದಾರೆ.

    ಬುಧವಾರ ಸಂಜೆ ಸೌಜನ್ಯ ಕುಟುಂಬ ಸದಸ್ಯರು ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮರು ತನಿಖೆ ನಡೆಸುವಂತೆ ಮನವಿ ಮಾಡಿದರು.

    ಏನಿದು ಪ್ರಕರಣ?
    ಉಜಿರೆಯ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ 2012ರ ಅಕ್ಟೋಬರ್ 9ರಂದು ಕಾಣೆಯಾಗಿದ್ದಳು ಎಂದು ತಂದೆ ಚಂದ್ರಪ್ಪ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅಕ್ಟೋಬರ್ 10ರಂದು ಅರೆನಗ್ನ ಸ್ಥಿತಿಯಲ್ಲಿ ಸೌಜನ್ಯ ಶವ ಪತ್ತೆಯಾಗಿತ್ತು. ಬಳಿಕ ಆಕೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿತ್ತು.  ಇದನ್ನೂ ಓದಿ: ನೀಲಿ ಬಣ್ಣದ ಜೀನ್ಸ್‌ ಬ್ಯಾನ್‌, ಆತ್ಮಹತ್ಯೆಗೈದ್ರೆ ಕುಟುಂಬಕ್ಕೆ ಶಿಕ್ಷೆ – ಉತ್ತರ ಕೊರಿಯಾದಲ್ಲಿದೆ ವಿಚಿತ್ರ ಕಾನೂನುಗಳು

    ಮೊದಲು ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ್ದರು. ನಂತರ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಆ ಬಳಿಕ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. 2016ರಲ್ಲಿ ತನಿಖೆ ಪೂರ್ಣಗೊಳಿಸಿದ ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು. ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್‌ ರಾವ್‌ನನ್ನು (Santosh Rao) ಕೋರ್ಟ್‌ ದೋಷಮುಕ್ತಗೊಳಿಸಿತ್ತು. ಸಿಬಿಐ ವಿಶೇಷ ನ್ಯಾಯಾಲಯದ (CBI Special Court) ನ್ಯಾಯಾಧೀಶ ಸಂತೋಷ್.ಸಿ.ಬಿ. ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಯನ್ನು ಖುಲಾಸೆಗೊಳಿಸಿ ಆದೇಶ ಪ್ರಕಟಿಸಿದ್ದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ- ಮಗಳ ಸಾವಿನ ಬಗ್ಗೆ ಅನುಮಾನ ಇದೆ ಎಂದ ತಂದೆ

    ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ- ಮಗಳ ಸಾವಿನ ಬಗ್ಗೆ ಅನುಮಾನ ಇದೆ ಎಂದ ತಂದೆ

    ಮಡಿಕೇರಿ: ಬೆಂಗಳೂರಿನಲ್ಲಿ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿ ಅಲ್ಲ. ಸಾವಿನ ಬಗ್ಗೆ ಅನುಮಾನ ಇದೆ ಎಂದು ತಂದೆ ಮಾದಪ್ಪ ಅವರು ಪಬ್ಲಿಕ್ ಟಿವಿ ಜೊತೆ ಹೇಳಿಕೊಂಡಿದ್ದಾರೆ.

    ದೂರವಾಣಿ ಮೂಲಕ ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಅವರು, ನನ್ನ ಮಗಳು ಹಾಗೂ ಮಗ ಬೆಂಗಳೂರಿನಲ್ಲಿ ವಾಸವಾಗಿದ್ದು, ಅವರಿಬ್ಬರೂ ಕೂಡ ಬೇರೆ, ಬೇರೆ ಕಡೆ ವಾಸ ಮಾಡುತ್ತಿದ್ದಾರೆ. ನಿನ್ನೆ ಸಂಜೆ ಕರೆ ಮಾಡಿ ಇಬ್ಬರು ಕೊಡಗಿಗೆ ಬರುವುದಾಗಿ ತಿಳಿಸಿದ್ದರು. ಇಂದು ಅವರು ಬರಬೇಕಿತ್ತು ಅದರೆ ಈ ರೀತಿಯಲ್ಲಿ ಅಗುತ್ತದೆ ಎಂದು ನಿರೀಕ್ಷೆ ಮಾಡಿರಲ್ಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ

    ನಿನ್ನೆ ಸಂಜೆ ಕರೆ ಮಾಡಿದಾಗ ತನ್ನ ಬಳಿ 6 ಲಕ್ಷ ರೂಪಾಯಿ ಹಣ ಇದೆ ಎಂದು ಸೌಜನ್ಯ ಹೇಳಿದ್ದಳು. ಅದರೆ ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ ಅಂದರೆ ಅನುಮಾನ ಮೂಡಿದೆ. ಅಲ್ಲಿಯ ಪೊಲೀಸರು ನಾವು ಹೋಗುವ ಮೊದಲೇ ಶವ ಪರೀಕ್ಷೆಗೆ ತೆಗೆದುಕೊಂಡು ಹೋಗಿದ್ದಾರೆ. ಇದು ನಮಗೆ ಇನ್ನಷ್ಟು ಅನುಮಾನ ಮೂಡುವಂತೆ ಮಾಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅರವಿಂದ್ ಬೈಕ್ ಮುಂದೆ ದಿವ್ಯಾ ಉರುಡುಗ ಸ್ಟೈಲಿಶ್ ಪೋಸ್