ಬೆಂಗಳೂರು: ಲೋಕಸಭಾ ಚುನಾವಣೆಯ ಬೆಂಗಳೂರು ದಕ್ಷಿಣ (Bengaluru South) ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಹಾಲಿ ಸಂಸದರಾಗಿರುವ ತೇಜಸ್ವಿ ಸೂರ್ಯ ಅವರು ಮತ್ತೊಮ್ಮೆ ಗೆದ್ದು ಬೀಗಿದ್ದಾರೆ.
ತೇಜಸ್ವಿ ಸೂರ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ (Sowmya Reddy) ವಿರುದ್ಧ 2,77,083 ಮತಗಳ ಅಂತರದಿಂದ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಸೂರ್ಯ ಅವರು ಎರಡನೇ ಬಾರಿಗೆ ಸಂಸತ್ ಪ್ರವೇಶ ಮಾಡಲಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ತೇಜಸ್ವಿ ಸೂರ್ಯ (Tejasvi Surya) ಅವರಿಗೆ 7,50,830 ಮತಗಳು ಬಿದ್ದಿದೆ. ವಿಧಾನಸಭೆ ಸೋಲಿನ ಬಳಿಕ ಲೋಕಸಭೆಯಲ್ಲಿ ಗೆಲುವಿನ ನಿರೀಕ್ಷೆಯಲಿದ್ದ ಸೌಮ್ಯಾ ರೆಡ್ಡಿಯವರು 4,73,747 ಮತಗಳನ್ನು ಪಡೆಯುವ ಮೂಲಕ ಮತ್ತೊಮ್ಮೆ ಸೋಲಿನ ರುಚಿ ಕಂಡಿದ್ದಾರೆ. ಇನ್ನು 7830 ಮತಗಳು ನೋಟಾ ಚಲಾವಣೆಯಾಗಿದೆ.
ಕಳೆದ ಮೂರು ದಶಕಗಳಿಂದ ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿ ಉಳಿದಿದೆ. ಮುಖ್ಯವಾಗಿ ಇದು ದಿ. ಅನಂತ್ ಕುಮಾರ್ ಅವರ ಭದ್ರಕೋಟೆಯಾಗಿತ್ತು. 2019ರ ಚುನಾವಣೆಯಲ್ಲಿ ತೇಜಸ್ವಿ ಸೂರ್ಯ ಅವರಿಗೆ 7,39,229 ಮತಗಳು ಬಿದ್ದಿದ್ದರೆ, ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬಿ.ಕೆ ಹರಿಪ್ರಸಾದ್ ಅವರು 4,08,037 ಮತಗಳನ್ನು ಪಡೆದು 3 ಲಕ್ಷಕ್ಕೂ ಅಧಿಕ ಮತಗಳ ಅಂತರದ ಸೋಲು ಅನುಭವಿಸಿದ್ದರು.
– 1.50 ಕೋಟಿ ರೂ. ಸಾಲ; ತಂದೆಯಿಂದಲೇ 56.28 ಲಕ್ಷ ಸಾಲ ಪಡೆದಿರೋ ಮಗಳು – ಮಾಜಿ ಶಾಸಕಿ ಮೇಲೆ 6 ಕ್ರಿಮಿನಲ್ ಕೇಸ್
ಬೆಂಗಳೂರು: ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ (Sowmya Reddy) ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಜೊತೆಗೆ 2.03 ಕೋಟಿ ರೂ. ಆಸ್ತಿ ಘೋಷಿಸಿದ್ದಾರೆ. ಬ್ಯಾಂಕ್ ಹಾಗೂ ವೈಯಕ್ತಿಕ ಸಾಲ ಒಟ್ಟು 1.50 ಕೋಟಿ ರೂ. ಇವರ ಮೇಲಿದೆ.
2022-23 ರಲ್ಲಿ ವಾರ್ಷಿಕ ಆದಾಯ 17.39 ಲಕ್ಷ ರೂ. ಇದೆ ಎಂದು ತಾವು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಸೌಮ್ಯಾ ರೆಡ್ಡಿ ತಿಳಿಸಿದ್ದಾರೆ. ಪ್ರಸ್ತುತ ನಗದು ಹಣ 44,135 ರೂ. ಹಾಗೂ ಬ್ಯಾಂಕ್ ಖಾತೆಯಲ್ಲಿ 40,96,352 ರೂ. ಹಣ ಹೊಂದಿದ್ದಾರೆ. ಇದನ್ನೂ ಓದಿ: ಪತ್ನಿ ಸೇರಿ ಒಟ್ಟು 60.78 ಕೋಟಿ ರೂ. ಆಸ್ತಿ ಘೋಷಿಸಿದ ಸೋಮಣ್ಣ
19.85 ಲಕ್ಷ ರೂ. ಮೌಲ್ಯದ ಒಂದು ಇನ್ನೋವಾ ಕಾರು ಇವರ ಬಳಿಯಿದೆ. 5 ಕೆಜಿ ಬೆಳ್ಳಿ, 950 ಗ್ರಾಂ ಚಿನ್ನ (28,02,500 ಮೌಲ್ಯದ ಒಡವೆ) ಇದೆ. ಬೇಗೂರು ಬಳಿ 1.24 ಲಕ್ಷ ಮೌಲ್ಯದ ಪ್ಲಾಟ್ ಕೂಡ ಇದೆ. ಸಾರ್ವಜನಿಕ ಆಸ್ತಿ ಹಾನಿ ಸೇರಿದಂತೆ 6 ಪ್ರಕರಣಗಳು ಇವರ ಮೇಲಿದೆ.
ಸೌಮ್ಯಾ ರೆಡ್ಡಿ ಅವರು ಕೈ ಸಾಲ ಕೂಡ ಮಾಡಿದ್ದಾರೆ. ತಮ್ಮ ತಂದೆಯವರಿಂದಲೂ ಸಾಲ ಪಡೆದುಕೊಂಡಿದ್ದಾರೆ. ರಾಮಲಿಂಗಾ ರೆಡ್ಡಿ (Ramalinga Reddy) ತಮ್ಮ ಪುತ್ರಿಗೆ 56.28 ಲಕ್ಷ ರೂ. ಸಾಲ ನೀಡಿದ್ದಾರೆ.
ಬೆಂಗಳೂರು ದಕ್ಷಿಣ (Bengaluru South) ಕ್ಷೇತ್ರವೆಂದರೆ ಅದು ಬಿಜೆಪಿ ಭದ್ರಕೋಟೆ. 1991 ರಿಂದ ಸತತವಾಗಿ ಬಿಜೆಪಿ ಗೆದ್ದು ಅಧಿಪತ್ಯ ಸ್ಥಾಪಿಸಿದೆ. 2024 ರ ಲೋಕಸಭಾ ಚುನಾವಣೆಗೆ ಕ್ಷೇತ್ರವನ್ನು ಬಿಜೆಪಿ ಪ್ರತಿಷ್ಠೆಯಾಗಿ ಪರಿಗಣಿಸಿದೆ. ಹೇಗಾದರು ಮಾಡಿ ಕ್ಷೇತ್ರವನ್ನು ವಶಕ್ಕೆ ಪಡೆಯಬೇಕು ಎಂದು ಆಡಳಿತಾರೂಢ ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ.
ಕಾಂಗ್ರೆಸ್‌ಗೆ (Congress) ಈ ಕ್ಷೇತ್ರದಲ್ಲಿ ಅಸ್ತಿತ್ವ ಇಲ್ಲ. ಚುನಾವಣಾ ಇತಿಹಾಸ ಗಮನಿಸಿದರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿರುವುದು ಎರಡೇ ಬಾರಿ. ಆದರೆ ಬಿಜೆಪಿ (BJP) ಭದ್ರ ಬುನಾದಿ ಹಾಕಿಕೊಂಡಿದೆ. ಸತತ ಆರು ಬಾರಿ ಅನಂತ್ ಕುಮಾರ್ ಅವರು ಈ ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ. ಇನ್ನು ಕಳೆದ ಚುನಾವಣೆಯಲ್ಲಿ ತೇಜಸ್ವಿ ಸೂರ್ಯ (Tejasvi Surya) ತಮ್ಮ ರಾಜಕೀಯ ಜೀವನದ ಚೊಚ್ಚಲ ಗೆಲುವಿನೊಂದಿಗೆ ಪಾರ್ಲಿಮೆಂಟ್ ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: Bengaluru North Lok Sabha 2024: ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್ ಹಾಕುತ್ತಾ ಕಾಂಗ್ರೆಸ್?
ಕ್ಷೇತ್ರ ಪರಿಚಯ
ಒಕ್ಕಲಿಗರ ಪ್ರಾಬಲ್ಯವಿರುವ ಬೆಂಗಳೂರು ದಕ್ಷಿಣ ಕ್ಷೇತ್ರವು ಸ್ವಾತಂತ್ರ್ಯ ನಂತರ ಮೈಸೂರು ರಾಜ್ಯಕ್ಕೆ ಸೇರಿತ್ತು. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಟಿ.ಮಾದಯ್ಯಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕ್ಷೇತ್ರದಿಂದ ಮೊದಲ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಗೆದ್ದರು. ಅದಾದ ಬಳಿಕ ಬೆಂಗಳೂರು ಉತ್ತರ ಮತ್ತು ದಕ್ಷಿಣ ಕ್ಷೇತ್ರವನ್ನು ಕ್ಷೇತ್ರವಾಗಿ ಮಾಡಲು ವಿಲೀನಗೊಳಿಸಲಾಯಿತು. ಹೆಚ್.ಸಿ.ದಾಸಪ್ಪ 1957 ರಿಂದ 1962 ರ ವರೆಗೆ ಈ ಕ್ಷೇತ್ರದಿಂದ ಚುನಾಯಿತರಾದರು. ನೆಹರೂ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದರು. ನಂತರ ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ಈ ಕ್ಷೇತ್ರದಲ್ಲಿ ಸತತ ಮೂರು ಬಾರಿ ಗೆದ್ದಿದ್ದರು.
ತುರ್ತು ಪರಿಸ್ಥಿತಿ ಮತ್ತು ದೇಶಾದ್ಯಂತ ಕ್ಷೇತ್ರಗಳ ಮರುವಿಂಗಡಣೆಯ ನಂತರ, ಈ ಲೋಕಸಭಾ ಸ್ಥಾನವು 1977 ರಲ್ಲಿ ಬೆಂಗಳೂರು ದಕ್ಷಿಣವಾಗಿ ಅಸ್ತಿತ್ವಕ್ಕೆ ಬಂದಿತು. ಅಂದಿನಿಂದ ಈ ಕ್ಷೇತ್ರದಲ್ಲಿ 12 ಚುನಾವಣೆಗಳು ನಡೆದಿವೆ. ಬಿಜೆಪಿ 8 ಬಾರಿ, ಜನತಾ ಪಕ್ಷ 3 ಬಾರಿ ಮತ್ತು ಕಾಂಗ್ರೆಸ್ ಕೇವಲ ಒಂದು ಬಾರಿ ಗೆದ್ದಿದೆ. ಬಿಜೆಪಿ ನಾಯಕ ಅನಂತ್ ಕುಮಾರ್ ಈ ಕ್ಷೇತ್ರದಿಂದ ಸತತ 6 ಬಾರಿ ಗೆದ್ದಿದ್ದಾರೆ. ಇದನ್ನೂ ಓದಿ: Bagalkot Lok Sabha 2024: ಚಾಲುಕ್ಯರ ನಾಡಲ್ಲಿ ಬಾವುಟ ಹಾರಿಸೋದ್ಯಾರು?
ವಿಧಾನಸಭಾ ಕ್ಷೇತ್ರಗಳೆಷ್ಟು?
ಈ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳು ಒಳಪಡುತ್ತವೆ. ಗೋವಿಂದರಾಜನಗರ, ವಿಜಯನಗರ, ಚಿಕ್ಕಪೇಟೆ, ಬಸವನಗುಡಿ, ಪದ್ಮನಾಭನಗರ, ಬಿಟಿಎಂ ಲೇಔಟ್, ಜಯನಗರ, ಬೊಮ್ಮನಹಳ್ಳಿ. ಒಟ್ಟು ಕ್ಷೇತ್ರಗಳ ಪೈಕಿ ಮೂರರಲ್ಲಿ ಮಾತ್ರ ಕಾಂಗ್ರೆಸ್ ಶಾಸಕರಿದ್ದಾರೆ. ಇನ್ನುಳಿದ ಐದು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಗೆದ್ದಿದ್ದಾರೆ.
ಕಳೆದ ಚುನಾವಣೆಯಲ್ಲಿ ಏನಾಗಿತ್ತು?
2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತೇಜಸ್ವಿ ಸೂರ್ಯ ಗೆಲುವು ಸಾಧಿಸಿದರು. ಇವರ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್ ಸೋಲನುಭವಿಸಿದರು. 3,31,192 ಮತಗಳ ಅಂತರದಿಂದ ಬಿಜೆಪಿ ಗೆದ್ದಿತ್ತು.
ತೇಜಸ್ವಿ ಸೂರ್ಯಗೆ ಮತ್ತೆ ಟಿಕೆಟ್
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸತತ ಗೆಲುವಿನ ಓಟ ಮುಂದುವರಿಸಲು ಬಿಜೆಪಿ ಶತಪ್ರಯತ್ನ ಮಾಡುತ್ತಿದೆ. ಹೀಗಾಗಿ ಎರಡನೇ ಬಾರಿಗೆ ತೇಜಸ್ವಿ ಸೂರ್ಯಗೆ ಟಿಕೆಟ್ ಕೊಟ್ಟಿದೆ. 2019 ರಲ್ಲಿ ಗೆದ್ದು ಮೊದಲ ಬಾರಿಗೆ ಸಂಸದರಾಗಿದ್ದ ಸೂರ್ಯಗೆ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಜವಾಬ್ದಾರಿಯನ್ನು ವಹಿಸಲಾಗಿತ್ತು. ಯುವ ಸಮುದಾಯವನ್ನು ಮುಖ್ಯವಾಹಿನಿಗೆ ತಂದು ಬೆಳೆಸುವ ನಿಟ್ಟಿನಲ್ಲಿ ಬಿಜೆಪಿ ನಾನಾ ತಂತ್ರಗಳನ್ನು ರೂಪಿಸುತ್ತಿದೆ. ಕಳೆದ 32 ವರ್ಷಗಳಿಂದ ಕ್ಷೇತ್ರದಲ್ಲಿ ವಿಜಯ ಸಾಧಿಸಿರುವ ಬಿಜೆಪಿ ಮತ್ತೊಮ್ಮೆ ಗೆಲ್ಲುವ ನಿರೀಕ್ಷೆಯಲ್ಲಿದೆ. ಇದನ್ನೂ ಓದಿ: Chamarajanagara Lok Sabha 2024: ಕಾಂಗ್ರೆಸ್ ಕೋಟೆಗೆ ಎಂಟ್ರಿ ಕೊಟ್ಟಿರೋ ಬಿಜೆಪಿ ಮತ್ತೆ ಸಿಂಹಾಸನ ಏರುತ್ತಾ?
ಕಾಂಗ್ರೆಸ್‌ನಿಂದ ಸೌಮ್ಯಾ ರೆಡ್ಡಿಗೆ ಮಣೆ
ಬೆಂಗಳೂರು ವ್ಯಾಪ್ತಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು ತಮ್ಮದೇ ಆದ ಹಿಡಿತವನ್ನ ಹೊಂದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಪುತ್ರಿಯನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸುವ ನಿಟ್ಟಿನಲ್ಲಿ ತಯಾರಿ ನಡೆಸಿದ್ದರು. ಈ ಸಂಬಂಧ ಹೈಕಮಾಂಡ್ ನಾಯಕರ ಜೊತೆಯೂ ಚರ್ಚೆ ನಡೆಸಿದ್ದರು. ಅದಕ್ಕೆ ಈಗ ಫಲ ಸಿಕ್ಕಿದೆ. ನಿರೀಕ್ಷೆಯಂತೆ ಸೌಮ್ಯಾ ರೆಡ್ಡಿಗೆ (Sowmya Reddy) ಕಾಂಗ್ರೆಸ್ ಟಿಕೆಟ್ ನೀಡಿದೆ. ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ಮಧ್ಯೆ ನೇರ ಹಣಾಹಣೆ ಏರ್ಪಡಲಿದೆ.
ಜಾತಿವಾರು ಲೆಕ್ಕಾಚಾರ
ಒಕ್ಕಲಿಗ- 3,21,000
ಲಿಂಗಾಯತ- 34,000
ಬ್ರಾಹ್ಮಣ- 1,81,000
ಮುಸ್ಲಿಂ- 1,58,000
ಸಚಿವರ ಕುಟುಂಬದವರಿಗೆ ಯಾರ‍್ಯಾರಿಗೆ ಟಿಕೆಟ್? (2 ಪಟ್ಟಿ ಸೇರಿ)
* ಡಿಸಿಎಂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್- ಬೆಂಗಳೂರು ಗ್ರಾಮೀಣ
* ಸಚಿವ ಮಧು ಬಂಗಾರಪ್ಪ ಸಹೋದರಿ ಗೀತಾ ಶಿವರಾಜ್ ಕುಮಾರ್- ಶಿವಮೊಗ್ಗ
* ಸಚಿವ ರಾಮಲಿಂಗ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ- ಬೆಂಗಳೂರು ದಕ್ಷಿಣ
* ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ- ಬೀದರ್
* ಸಚಿವ ಮಲ್ಲಿಕಾರ್ಜುನ ಪತ್ನಿ ಪ್ರಭಾ ಮಲ್ಲಿಕಾರ್ಜುನ- ದಾವಣಗೆರೆ
* ಸಚಿವ ಶಿವಾನಂದ ಪಟೀಲ್ ಪುತ್ರಿ ಸಂಯುಕ್ತ ಪಾಟೀಲ್- ಬಾಗಲಕೋಟೆ
* ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್- ಬೆಳಗಾವಿ
* ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ- ಚಿಕ್ಕೋಡಿ
ಮೂರು ಕಡೆ ಪಕ್ಷದ ನಾಯಕರ ಸಂಬಂಧಿಕರಿಗೆ ಟಿಕೆಟ್
* ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ- ಕಲಬುರ್ಗಿ
* ರೆಹಮಾನ್ ಖಾನ್ ಪುತ್ರ ಮನ್ಸೂರ್ ಅಲಿ ಖಾನ್- ಬೆಂಗಳೂರು ಕೇಂದ್ರ
* ಶಾಸಕ ರಾಘವೇಂದ್ರ ಹಿಟ್ನಾಳ್ ಸಹೋದರ ರಾಜಶೇಖರ ಹಿಟ್ನಾಳ್- ಕೊಪ್ಪಳ
ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 3 ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದ 17 ಅಭ್ಯರ್ಥಿಗಳು ಸೇರಿ 57 ಹುರಿಯಾಳುಗಳನ್ನು ಅಖೈರುಗೊಳಿಸಿದೆ.
ಮೈಸೂರು-ಕೊಡಗು ಕ್ಷೇತ್ರದಿಂದ ರಾಜವಂಶಸ್ಥ ಯದುವೀರ್ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಇತ್ತ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರೊ. ಎಂ.ವಿ.ರಾಜೀವ್ ಗೌಡ ಅವರನ್ನು ಪೈಪೋಟಿಗೆ ಇಳಿಸಿದೆ.
ಯಾರ‍್ಯಾರು ಕಣಕ್ಕೆ?
ಬೀದರ್ -ಸಾಗರ್ ಖಂಡ್ರೆ
ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್
ಬಾಗಲಕೋಟೆ – ಸಂಯುಕ್ತ ಪಾಟೀಲ್
ಉತ್ತರ ಕನ್ನಡ – ಅಂಜಲಿ ಲಿಂಬಾಳ್ಕರ್
ಚಿಕ್ಕೋಡಿ – ಪ್ರಿಯಾಂಕ ಜಾರಕಿಹೊಳಿ
ಕಲಬುರಗಿ – ರಾಧಾಕೃಷ್ಣ
ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್
ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ
ದಕ್ಷಿಣ ಕನ್ನಡ – ಪದ್ಮರಾಜ್
ಬೆಂಗಳೂರು ಸೆಂಟ್ರಲ್ – ಮನ್ಸೂರ್ ಅಲಿ ಖಾನ್
ಚಿತ್ರದುಗ – ಚಂದ್ರಪ್ಪ
ಮೈಸೂರು – ಎಂ.ಲಕ್ಷ್ಮಣ್
ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ
ಧಾರವಾಡ – ವಿನೋದ್ ಅಸೂಟಿ
ಬೆಂಗಳೂರು ಉತ್ತರ – ರಾಜೀವ್ ಗೌಡ
ರಾಯಚೂರು – ಕುಮಾರ್ ನಾಯಕ್
ಕೊಪ್ಪಳ – ರಾಜಶೇಖರ್ ಹಿಟ್ನಾಳ್
ರಾಜ್ಯದ ಪಟ್ಟಿಯಲ್ಲಿ 6 ಸಚಿವರ ಕುಟುಂಬದವರಿಗೆ ಟಿಕೆಟ್.
ಸಚಿವ ರಾಮಲಿಂಗ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ – ಬೆಂಗಳೂರು ದಕ್ಷಿಣ
ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ- ಬೀದರ್
ಸಚಿವ ಮಲ್ಲಿಕಾರ್ಜುನ ಪತ್ನಿ ಪ್ರಭಾ ಮಲ್ಲಿಕಾರ್ಜುನ- ದಾವಣಗೆರೆ
ಸಚಿವ ಶಿವಾನಂದ ಪಟೀಲ್ ಪುತ್ರಿ ಸಂಯುಕ್ತ ಪಾಟೀಲ್- ಬಾಗಲಕೋಟೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್- ಬೆಳಗಾವಿ
ಸಚಿವ ಸತೀಶ್ ಜಾರಕಿಹೋಳಿ ಪುತ್ರಿ ಪ್ರಿಯಾಂಕ ಜಾರಕಿಹೋಳಿ – ಚಿಕ್ಕೋಡಿ
ಬೆಂಗಳೂರು: ಭಾರೀ ಹೈಡ್ರಾಮಾದ ಬಳಿಕ ಜಯನಗರ ಗೊಂದಲಕ್ಕೆ ತೆರೆ ಬಿದ್ದಿದೆ. ಜಯನಗರ (Jayanagar Constituency) ದಲ್ಲಿ ಬಿಜೆಪಿ (BJP) ಅಭ್ಯರ್ಥಿ ರಾಮಮೂರ್ತಿ (Ramamurthy) ಗೆಲುವು ತನ್ನದಾಗಿಸಿಕೊಂಡಿದ್ದಾರೆ.
ಇತ್ತ ಬಿಜೆಪಿ ವಿರುದ್ಧ ಕಾಂಗ್ರೆಸ್ (Congress) ಕಾರ್ಯಕರ್ತರು ಘೋಷಣೆ ಕೂಗಿದ ಪ್ರಸಂಗವೂ ನಡೆದಿದೆ. ಮೋಸ.. ಮೋಸ ಬಿಜೆಪಿ ಅಂತ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ಇನ್ನು ಕೌಂಟಿಂಗ್ ಸೆಂಟರ್ ಮುಂಭಾಗ ಸೌಮ್ಯಾ ರೆಡ್ಡಿ (Sowmya Reddy) ಕಣ್ಣೀರು ಹಾಕಿದ್ದಾರೆ. ಅಲ್ಲದೆ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ; 1 ಮತದ ಅಂತರದಿಂದ ಸೋತಿದ್ದ ಅಭ್ಯರ್ಥಿ 59 ಸಾವಿರ ದಾಖಲೆ ಮತಗಳಲ್ಲಿ ಗೆಲುವು
ರೀಕೌಂಟಿಂಗ್‍ನಲ್ಲಿ ಬಿಜೆಪಿಗೆ ಮುನ್ನಡೆ ಹಿನ್ನೆಲೆಯಲ್ಲಿ ಜಯನಗರ ಕೌಂಟಿಂಗ್ ಸೆಂಟರ್ ಬಳಿ ಹೈಡ್ರಾಮಾ ನಡೆದಿತ್ತು. ಕೌಂಟಿಂಗ್ ಸೆಂಟರ್ ಬಳಿ ಡಿಕೆ ಬ್ರದರ್ಸ್ ಕೂಡ ದೌಡಾಯಿಸಿದ್ದರು. ಈ ವೇಳೆ ಪೊಲೀಸರ ಜೊತೆ ಕಾಂಗ್ರೆಸ್ ಮುಖಂಡರು ವಾಗ್ವಾದ ಕೂಡ ನಡೆಸಿದ್ದಾರೆ. ಗೇಟ್ ತಳ್ಳಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಪೊಲೀಸರು ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದರು.
1989 ರಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಜಯನಗರ, 2008, 2013 ರಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿತ್ತು. 2018 ರ ಚುನಾವಣೆಯಲ್ಲಿ ಜಯನಗರ ಕ್ಷೇತ್ರಕ್ಕೆ ಸೌಮ್ಯರೆಡ್ಡಿ ಎಂಟ್ರಿ ಕೊಟ್ಟರು. ಚುನಾವಣೆಯಲ್ಲಿ ಗೆದ್ದು ಕ್ಷೇತ್ರವನ್ನ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದರು. 2018 ಚುನಾವಣೆಯಲ್ಲಿ ಗೆದ್ದು, ಮತ್ತೆ 2023 ರ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಈ ಬಾರಿ ಸೋಲು ಕಂಡರು.
23 ಸೀರೆ , 32 ಬ್ಲೌಸ್ ಪೀಸ್, ಸಾಮ್ ಸಂಗ್, ನೋಕಿಯಾ ಆಂಡ್ರೈಡ್ ಮೊಬೈಲ್ , 16 ಶಾಲು, 150 ಪ್ರೋಗ್ರೆಸ್ ರಿಪೋರ್ಟ್ ಇರೋ ಬುಕ್ ಲೆಟ್ಸ್ ಸಿಕ್ಕಿರುವ ಬಗ್ಗೆ ಮಾಹಿತಿ ಲಭಿಸಿದೆ.
ಏಪ್ರಿಲ್ 13 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ. ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ ಎಂದು ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು: ಬೆಡ್ ಬ್ಲಾಕ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಈ ಪೈಕಿ ಆರೋಪಿ ಒಬ್ಬಳು ಕಾಂಗ್ರೆಸ್ ನಾಯಕರ ಜೊತೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಬೆಂಗಳೂರು ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ(42) ಮತ್ತು ರೋಹಿತ್(32) ಅವರನ್ನು ಬಂಧಿಸಿದ್ದಾರೆ. ಈ ಪೈಕಿ ನೇತ್ರಾವತಿ ಹಲವು ಕಾಂಗ್ರೆಸ್ ನಾಯಕರ ಜೊತೆ ಇರುವ ಫೋಟೋಗಳು ಈಗ ಹರಿದಾಡುತ್ತಿದೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಕಂಡ್ರೆ ಜೊತೆಗೆ ಇರುವ ಫೋಟೋಗಳು ಹರಿದಾಡುತ್ತಿದೆ.
ಬಂಧಿತ ನೇತ್ರಾವತಿ ಮತ್ತು ರೋಹಿತ್ ನೆರೆಮನೆ ನಿವಾಸಿಯಾಗಿದ್ದಾರೆ. ನಾನು ಸಾಮಾಜಿಕ ಕಾರ್ಯಕರ್ತೆ ಎಂದು ಪೊಲೀಸರ ಬಳಿ ನೇತ್ರಾವತಿ ಹೇಳಿದ್ದಾಳೆ.
ಬಿಬಿಎಂಪಿ ವಾರ್ ರೂಮಿನಲ್ಲಿ ಈಕೆ ಹಲವರ ಜೊತೆ ಸಂಪರ್ಕದಲ್ಲಿರುವುದು ಖಚಿತವಾಗಿದೆ. ಈ ದಂಧೆಯ ಹಿಂದೆ ದೊಡ್ಡ ಜಾಲವೇ ಇರುವುದು ಸಿಸಿಬಿ ಗಮನಕ್ಕೆ ಬಂದಿದೆ. ಈಗ ಪೊಲೀಸರು ಇವರ ಜೊತೆ ಸಂಪರ್ಕದಲ್ಲಿದ್ದವರ ಪತ್ತೆಗೆ ಮುಂದಾಗುತ್ತಿದ್ದಂತೆ ಹಲವರು ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.
ಬೆಂಗಳೂರು: ಶಾಸಕಿ ಸೌಮ್ಯಾ ರೆಡ್ಡಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.
ಕೋವಿಡ್ ಪಾಸಿಟಿವ್ ಆಗಿರುವ ಕಾರಣ ಮುಂಜಾಗ್ರತೆಯ ದೃಷ್ಟಿಯಿಂದ ನಾನು ಸಮೀಪದ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸೌಮ್ಯಾ ರೆಡ್ಡಿ ಮನವಿ ಮಾಡಿಕೊಂಡಿದ್ದಾರೆ.
ಶುಕ್ರವಾರ ಒಂದೇ ದಿನ ರಾಜ್ಯದಲ್ಲಿ 2,566 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 1,490 ಕೇಸ್ ಪತ್ತೆಯಾಗಿವೆ. ಸಿಲಿಕಾನ್ ಸಿಟಿಯಲ್ಲಿ 3 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟು 174 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರ 55, ಕಲಬುರಗಿ 17, ಬೀದರ್, ಮಂಡ್ಯ ಹಾಗೂ ತುಮಕೂರಿನಲ್ಲಿ ತಲಾ 12 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 24 ಗಂಟೆಯಲ್ಲಿ 62,258 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 291 ಜನರು ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 4,52,647 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರ ಸಂಖ್ಯೆ 1,19,08,910 ಏರಿಕೆಯಾಗಿದೆ.
ಬೆಂಗಳೂರು: ಮಾಡೋಕೆ ಏನೂ ಕೆಲಸ ಇಲ್ವಾ? ಹೆಣ್ಣು ಮಗಳಿಗೆ ಅನ್ಯಾಯ ಆಗಿದೆ ಅಂತ ನಾವು ಪ್ರತಿಭಟನೆ ಮಾಡ್ತಾ ಇರೋದು ಎಂದು ಸುಧಾಕರ್ ಅವರ ಹೇಳಿಕೆ ವಿಚಾರವಾಗಿ ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ತಿರುಗೇಟು ಕೊಟ್ಟಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಿಳೆಗೆ ಕೆಲಸ ಕೋಡಿಸುತ್ತೇನೆ ಎಂದು ಹೇಳಿ ಮಿಸ್ ಯೂಸ್ ಮಾಡಿಕೊಂಡಿದ್ದಾರೆ. ಈ ಕುರಿತಾಗಿ ನಾವು ಹೋರಾಟ ಮಾಡುತ್ತಿರುವುದು. ನಾವು ಚರ್ಚೆ ಮಡುತ್ತಿರುವುದನ್ನು ನೋಡಿ ಜನರು ನಗುತ್ತಿದ್ದಾರೆ. ನಾವು ಯಾಕೆ ಪ್ರತಿಭಟನೆ ಮಾಡ್ತಾ ಇದ್ದೇವೆ ಅಂತ ಅರ್ಥ ಮಾಡ್ಕೊಳ್ಳಲಿ. ಯಾರೇ ಆಗಲಿ ಸಿಬಿಐಗೆ ಹೋಗಲಿ ಎಂದಿದ್ದಾರೆ.
ರಾಜ್ಯದಲ್ಲಿ ಸದ್ಯ ಒಂದೆಂಡ್ತಿ ರಾಜಕಾರಣ ನಡೆಯುತ್ತಿದೆ. ಸುಧಾಕರ್ ಅವರು ನೀಡಿರುವ ಹೇಳಿಕೆಯಿಂದ ಇಂದು ರಾಜ್ಯ ರಾಜ್ಯಕಾರಣದಲ್ಲಿ ಈ ಬಗ್ಗೆ ಚರ್ಚೆ ಆರಂಭವಾಗಿದೆ. ಆರೋಗ್ಯ ಸಚಿವರ ಈ ಹೇಳಿಕೆಗೆ ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ಕಿಡಿಕಾರಿದ್ದಾರೆ.
ಒಬ್ಬರ ಪರ್ಸನಲ್ ವಿಚಾರಕ್ಕಾಗಿ ನಾವು ಪ್ರತಿಭಟನೆ ಮಾಡ್ತಾ ಇಲ್ಲ. ಹೆಣ್ಣು ಮಗಳಿಗೆ ಅನ್ಯಾಯವಾಗಿದೆ ಎಂದು ಹೇಳುತ್ತಿದ್ದೇವೆ. ಸಿಬಿಐಗೆ ಈ ಪ್ರಕರಣವನ್ನು ಕಳುಹಿಸಿ. ಯಾಕೆ ಕೋರ್ಟ್ ಹೋಗಿ ಇನ್‍ಂಜೆಕ್ಷನ್ ತಗೊಂಡಿರೋದು. ತನಿಖೆಯನ್ನು ಯಾಕೆ ಮಾಡುತ್ತಿಲ್ಲ. ಇವರಿಗೆ ಯಾಕೆ ಭಯವಾಗಿದೆ. ಬಡ ಮಹಿಳಗೆ ಅನ್ಯಾಯವಾಗಿದ್ದು, ಈ ವಿಚಾರಕ್ಕೆ ನ್ಯಾಯ ಕೊಡಿಸಲಿ ಎಂದು ಹೇಳಿದ್ದಾರೆ. ಸುಧಾಕರ್ ನೀಡುರುವ ಹೇಳಿಕೆ ವಿಚಾರವಾಗಿ ಚರ್ಚೆ ಮಾಡಲು ನಾವು ವಿಧಾನ ಸೌಧದಲ್ಲಿ ನಿಂತಿದ್ದೇವೆ ಎನ್ನುತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.