Tag: SP Ravi d Channannavar

  • ಸರ್ಕಾರಿ ಶಾಲಾ ಮಕ್ಕಳಿಗೆ ಪಾಠ ಹೇಳಿದ ರವಿ ಚನ್ನಣ್ಣನವರ್

    ಸರ್ಕಾರಿ ಶಾಲಾ ಮಕ್ಕಳಿಗೆ ಪಾಠ ಹೇಳಿದ ರವಿ ಚನ್ನಣ್ಣನವರ್

    ಬೆಂಗಳೂರು: ನೆಲಮಂಗಲ ತಾಲೂಕಿನ ಕಾಚನಹಳ್ಳಿ ಸರ್ಕಾರಿ ಶಾಲಾ ಮಕ್ಕಳಿಗೆ ಬೆಂಗಳೂರು ಗ್ರಾಮಾಂತರ ಎಸ್‍ಪಿ ರವಿ ಡಿ.ಚನ್ನಣ್ಣನವರ್ ಪಾಠ ಹೇಳಿದ್ದಾರೆ.

    ಪ್ರಕರಣವೊಂದರ ವಿಚಾರಣೆ ನಿಮಿತ್ತ ರವಿ ಚನ್ನಣ್ಣನವರ್ ಅವರು ಕಾಚನಹಳ್ಳಿ ಗ್ರಾಮಕ್ಕೆ ಬಂದಿದ್ದರು. ಈ ಮಧ್ಯೆ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಪಾಠ ಮಾಡಿದ್ದಾರೆ. ಜೊತೆಗೆ ಸಾಮಾನ್ಯ ಜ್ಞಾನ ಪ್ರಶ್ನೆಗಳನ್ನು ಕೇಳಿ ಮಕ್ಕಳನ್ನು ಪ್ರೋತ್ಸಾಹಿಸಿದ್ದಾರೆ.

    ನಾನು ಕೂಡ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಎಸ್‍ಪಿ ಆಗಿರುವೆ. ವಿದ್ಯೆ ಮನುಷ್ಯನ ಆಸ್ತಿ. ನಿಮ್ಮಲ್ಲಿರುವ ವಸ್ತುಗಳನ್ನು ಯಾರಾದರು ಕದಿಯಬಹುದು. ಆದರೆ ನಿಮ್ಮಲ್ಲಿರುವ ವಿದ್ಯೆಯನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

    ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದು ಯಾವಾಗ? ಕರ್ನಾಟಕದ ಮುಖ್ಯಮಂತ್ರಿ ಯಾರು? ಈಗಿನ ಪ್ರಧಾನಿ ಯಾರು? ಸೈನ್ಸ್ ಸ್ಪೆಲ್ಲಿಂಗ್ ಹೇಳಿ. ಸಂವಿಧಾನದ ಶಿಲ್ಪಿ ಯಾರು? ಎಂದು ಏಳನೇ ತರಗತಿ ಮಕ್ಕಳಿಗೆ ಚನ್ನಣ್ಣನವರ್ ಪ್ರಶ್ನೆ ಕೇಳಿದರು. ವಿದ್ಯಾರ್ಥಿಗಳು ಸರಿಯಾದ ಉತ್ತರ ನೀಡಿದಾಗ ಗುಡ್ ಎಂದು ಪ್ರೋತ್ಸಾಹಿಸಿದರು.

    ಶಾಲಾ ಆವರಣದಲ್ಲಿ ಯಾರಾದರೂ ಮದ್ಯ ಸೇವಿಸುತ್ತಾರಾ? ಜೂಜು ಆಡುತ್ತಾರಾ? ಯಾರಾದರೂ ಅಸಭ್ಯವಾಗಿ ನಡೆದುಕೊಳ್ಳುತ್ತಾರಾ ಎಂದು ಮಕ್ಕಳನ್ನು ಪ್ರಶ್ನಿಸಿದರು. ಆಗ ಮಕ್ಕಳು ಇಲ್ಲ ಸರ್ ಎಂದು ಪ್ರತಿಕ್ರಿಯೆ ನೀಡಿದರು. ಮಕ್ಕಳೊಂದಿಗೆ ಮಾತು ಮುಂದುವರಿಸಿದ ಅವರು, ಒಂದು ವೇಳೆ ಅಂತವರು ಇದ್ದರೆ ನನ್ನ ಗಮನಕ್ಕೆ ತನ್ನಿ ಎಂದು ತಮ್ಮ ಮೊಬೈಲ್ ನಂಬರ್ ಅನ್ನು ವಿದ್ಯಾರ್ಥಿಗಳಿಗೆ ಕೊಟ್ಟರು.

    https://www.youtube.com/watch?v=qf4tToZBvws

  • ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ರವಿ ಚನ್ನಣ್ಣನವರ್

    ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ರವಿ ಚನ್ನಣ್ಣನವರ್

    ಬೆಂಗಳೂರು: ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರದ ನೂತನ ಎಸ್.ಪಿ ರವಿ.ಡಿ.ಚನ್ನಣ್ಣನವರ್ ದಿಟ್ಟ ಕ್ರಮಕ್ಕೆ ಮುಂದಾಗಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಖಾಸಗಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ರವಿ ಚನ್ನಣ್ಣನವರ್ ಭಾಗಿಯಾಗಿದ್ದರು. ಈ ವೇಳೆ, ಬೆಂಗಳೂರು ರಾಜಧಾನಿ ಜೊತೆಯಲ್ಲೇ ಬೆಳೆಯುತ್ತಿರುವ ನೆಲಮಂಗಲ ಪೊಲೀಸ್ ಉಪವಿಭಾಗದಲ್ಲಿ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳುವ ಬಗ್ಗೆ ತಿಳಿಸಿದರು. ಅಲ್ಲದೆ ಅಕ್ರಮ ಚಟುವಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಸಾರ್ವಜನಿಕರು ಪೊಲೀಸ್ ವ್ಯವಸ್ಥೆಯೊಂದಿಗೆ ಸ್ಪಂದಿಸಿದಾಗ ಸಮಾಜಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಾಣ ಮಾಡಲು ಅನುಕೂಲವಾಗುತ್ತದೆ ಎಂದು ರವಿ ಚನ್ನಣ್ಣನವರ್ ಹೇಳಿದರು. ಹಾಗೆಯೇ ನೆಲಮಂಗಲ ಉಪವಿಭಾಗದ ಆರು ಠಾಣೆಗಳ ವ್ಯಾಪ್ತಿಗೆ ಬರುವ ಹಲವಾರು ನಾಗರಿಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಕುಂದು ಕೊರತೆಗಳನ್ನು ವಿವರಿಸಿದರು. ಅದನ್ನು ಆಲಿಸಿದ ಎಸ್.ಪಿ, ಪೊಲೀಸರಿಗೆ ಸವಾಲಗಿರುವ ಗಾಂಜಾ, ಟ್ರಾಫಿಕ್, ಅಕ್ರಮ ಮದ್ಯ, ರೌಡಿ ಚಟುವಟಿಕೆಗಳಿಗೆ ಕಾನೂನು ಪ್ರಕಾರ ಪಾಠ ಹೇಳಲಿದ್ದೇವೆ ಎಂದು ಜನರಿಗೆ ಭರವಸೆ ಕೊಟ್ಟರು.

    ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ರೌಡಿಗಳು ಅಪರಾಧ ಚಟುವಟಿಕೆಗಳಿಗೆ ಉತ್ತೇಜನ ನೀಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಜೊತೆಗೆ ಗ್ರಾಮಾಂತರ ಪ್ರದೇಶದ ವಾಹನ ಸವಾರರಿಗೆ ಕೂಡ ಎಚ್ಚರಿಕೆ ನೀಡಿದರು. ಡ್ರಿಂಕ್ ಆಂಡ್ ಡ್ರೈವ್, ರ್‍ಯಾಷ್ ಆಂಡ್ ನೆಗ್ಲಿಜಿಯಂಟ್ ಮತ್ತು ವ್ಹೀಲಿಂಗ್ ಮಾಡಿಕೊಂಡು ವಾಹನ ಓಡಿಸಿದರೆ ವಾಹನ ಮುಟ್ಟುಗೋಲು ಜೊತೆಗೆ ವಾಹನ ಪರವಾನಿಗೆ ರದ್ದು ಮಾಡಲಾಗುತ್ತೆ ಎಂದು ಜನಸಂಪರ್ಕ ಸಭೆಯಲ್ಲಿ ರವಿ ಚೆನ್ನಣ್ಣನವರ್ ವಾರ್ನಿಂಗ್ ನೀಡಿದರು.