Tag: Space Station

  • ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಕೈಬೀಸಿದ ಶುಭಾಂಶು ಶುಕ್ಲಾ

    ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಕೈಬೀಸಿದ ಶುಭಾಂಶು ಶುಕ್ಲಾ

    ಕ್ಯಾಲಿಫೋರ್ನಿಯಾ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು (ISS) ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿರುವ ಭಾರತೀಯ ಗಗನಯಾತ್ರಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubanshu Shukla) ಸೇರಿ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್ ಆಗಿದ್ದಾರೆ. ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಶುಭಾಂಶು ಶುಕ್ಲಾ ಕೈಬೀಸಿದರು.

    ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 3ಕ್ಕೆ ಕ್ಯಾಲಿಫೋರ್ನಿಯಾ (California) ಕರಾವಳಿಯಲ್ಲಿ ಯಶಸ್ವಿಯಾಗಿ ಸ್ಪ್ಯಾಷ್‌ ಡೌನ್ ಮಾಡಲಾಯಿತು. ಬಳಿಕ ಕ್ಯಾಪ್ಸುಲ್‌ ಸುರಕ್ಷಿತವಾಗಿದೆಯೇ ಎಂದು ಪರಿಶೀಲಿಸಿದ ಬಳಿಕ ಕೆಳಗಡೆ ಇರುವ ಬಾಗಿಲು(ಹ್ಯಾಚ್) ತೆರೆಯಲಾಯಿತು. ಈ ಬಾಗಿಲಿನ ಮೂಲಕ ಯಾನಿಗಳನ್ನು ಸ್ಪೇಸ್ ಎಕ್ಸ್ ಸಿಬ್ಬಂದಿ ಹೊರಗೆ ನಿಧಾನವಾಗಿ ಎಳೆದು ಕೈಹಿಡಿದು ಕರೆದುಕೊಂಡು ಹೋದರು. ಈ ವೇಳೆ ಎರಡನೇಯದಾಗಿ ಹೊರಬಂದ ಶುಭಾಂಶು ಶುಕ್ಲಾ ನಗುಮುಖದಿಂದ ಕೈಬೀಸಿ ಸಂತೋಷ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಭುವಿಗೆ ಶುಭಾಂಶು ಶುಕ್ಲಾ – ಕ್ಯಾಲಿಫೋರ್ನಿಯಾ ಕಡಲ ತೀರದಲ್ಲಿ ಸ್ಪ್ಲ್ಯಾಷ್‌ ಡೌನ್

    ಕ್ಯಾಪ್ಸುಲ್‌ನಿಂದ ಹೊರಬಂದ ಬಳಿಕ ವೈದ್ಯಕೀಯ ತಪಾಸಣೆ ಮಾಡಿ ಕ್ವಾರಂಟೈನ್ ಮಾಡಲಾಗುತ್ತದೆ. ಸಾಮಾನ್ಯವಾಗಿ ಗಗನಯಾತ್ರಿಗಳಿಗೆ ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು 7 ದಿನಗಳ ವಿಶ್ರಾಂತಿಯ ಅವಶ್ಯಕತೆಯಿರುತ್ತದೆ. ಇನ್ನೂ ಯಶಸ್ವಿ ಲ್ಯಾಂಡಿಂಗ್ ಬಳಿಕ ಶುಭಾಂಶು ಶುಕ್ಲಾ ಕುಟುಂಬಸ್ಥರು ಸಂಭ್ರಮಿಸಿದ್ದಾರೆ.

    ಪ್ರಕ್ರಿಯೆ ಹೇಗಿತ್ತು?
    ಸೋಮವಾರ (ಜು.14) ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಡ್ರ್ಯಾಗನ್‌ ಕ್ಯಾಪ್ಸುಲ್ ಪ್ರವೇಶಿಸಿ, ಸಂಜೆ 4:35ಕ್ಕೆ ಅನ್‌ಡಾಕಿಂಗ್ (ಬೇರ್ಪಡಿಸುವಿಕೆ) ಪ್ರಕ್ರಿಯೆ ಯಶಸ್ವಿಯಾಗಿತ್ತು. ಒಟ್ಟು 22.5 ಗಂಟೆಗಳ ಪ್ರಯಾಣ ಬಳಿಕ ಇಂದು ಮಧ್ಯಾಹ್ನ 3ಕ್ಕೆ ಪೆಸಿಫಿಕ್ ಮಹಾಸಾಗರದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ 4 ಪ್ಯಾರಾಚೂಟ್‌ಗಳು ಕ್ಯಾಪ್ಸುಲ್ ವೇಗವನ್ನು ತಗ್ಗಿಸಿತ್ತು. ಯಶಸ್ವಿ ಸ್ಪ್ಯಾಷ್‌ ಡೌನ್ ಬಳಿಕ ಸುರಕ್ಷಿತವಾಗಿ ಶುಭಾಂಶು ಶುಕ್ಲಾ ಹಾಗೂ ಇನ್ನುಳಿದ ಮೂವರು ಗಗನಯಾತ್ರಿಗಳು ಭೂಮಿಗೆ ಬಂದಿಳಿದಿದ್ದಾರೆ.

    ನಾಲ್ವರು ಗಗನಯಾತ್ರಿಗಳು ಭೂಮಿಗೆ ಮರಳುವ ಮುನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಾವನಾತ್ಮಕ ಬೀಳ್ಕೊಡುಗೆ ಸಿಕ್ಕಿತು. ಶುಭಾಂಶು ಶುಕ್ಲಾ ಸಾರೇ ಜಹಾನ್ ಸೆ ಅಚ್ಚಾ ಎಂದು ಬಾಹ್ಯಾಕಾಶದಲ್ಲಿ ಭಾರತವನ್ನು ಭಾವನಾತ್ಮಕವಾಗಿ ಹೊಗಳಿದರು. ಈ ವೇಳೆ ರಾಕೇಶ್ ಶರ್ಮಾ 41 ವರ್ಷಗಳ ಹಿಂದೆ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಸಮಯವನ್ನು ನೆನಪಿಸಿಕೊಂಡು, ಅಲ್ಲಿಂದ ಭಾರತ ಹೇಗೆ ಕಾಣುತ್ತದೆ ಎಂದು ವಿವರಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಭಾರತದ ಧ್ವಜ ಹಾರಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದ ಶುಭಾಂಶು ಶುಕ್ಲಾ ಸ್ವಾಗತಿಸಲು ಭಾರತೀಯರು ಉತ್ಸುಕರಾಗಿದ್ದಾರೆ.

    ಜೂ.25ರಂದು ಆಕ್ಸಿಯಂ-4 ಮಿಷನ್ ಮೂಲಕ ಭಾರತದ ಶುಭಾಂಶು ಶುಕ್ಲಾ, ಅಮೆರಿಕ ಮಹಿಳಾ ಗಗನಯಾತ್ರಿ ಪೆಗ್ಗಿ ವಿಟ್ಸನ್, ಹಂಗೇರಿಯ ಟಿಬೋರ್ ಕಾಪು ಹಾಗೂ ಪೋಲೆಂಡ್ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್‌ಸ್ಕಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಯಾನಕ್ಕೆ ತೆರಳಿದ್ದರು. ಬಾಹ್ಯಾಕಾಶದಲ್ಲಿ 18 ದಿನಗಳ ಕಾಲ ಉಳಿದು ಹಲವಾರು ವೈಜ್ಞಾನಿಕ ಪ್ರಯೋಗಗಳನ್ನು ಮಾಡಿದ್ದರು.ಇದನ್ನೂ ಓದಿ: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನ ಪತ್ನಿ ನದಿಗೆ ತಳ್ಳಿದ ಆರೋಪ ಕೇಸ್‌ – ಪರಸ್ಪರ ವಿಚ್ಛೇದನಕ್ಕೆ ಮುಂದಾದ ದಂಪತಿ

  • ಬಾಹ್ಯಾಕಾಶದಲ್ಲಿ ಮಲ, ಮೂತ್ರ ವಿಸರ್ಜನೆ ಮಾಡಿದರೆ ಏನಾಗುತ್ತೆ?

    ಬಾಹ್ಯಾಕಾಶದಲ್ಲಿ ಮಲ, ಮೂತ್ರ ವಿಸರ್ಜನೆ ಮಾಡಿದರೆ ಏನಾಗುತ್ತೆ?

    ಅಂತರಿಕ್ಷದಲ್ಲಿ ಮಾನವನ ಜೀವನ ಹೇಗೆ ಇರುತ್ತದೆ ಎನ್ನುವ ಕುರಿತು ಯೋಚಿಸಿದಾಗ ಹಲವು ಪ್ರಶ್ನೆಗಳು ಮುಂದೆ ಬರುತ್ತವೆ. ಮಾನವನಿಗೆ ಉಸಿರಾಟ, ಆಹಾರ ಹಾಗೂ ನೀರು ಹೇಗೆ ಮೂಲಭೂತ ಅವಶ್ಯಕತೆಗಳೋ ಹಾಗೆಯೇ ಮಲ, ಮೂತ್ರ ವಿಸರ್ಜನೆಯು ಮಾನವನ ಜೀವನ ಶೈಲಿ ಆರೋಗ್ಯಕರವಾಗಿರಿಸಲು ಸಹಾಯಮಾಡುತ್ತದೆ.

    ಹೌದು, ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೂ ತನ್ನದೇ ಆದ ಜೀವನ ಶೈಲಿ ಹಾಗೂ ದೈನಂದಿನ ಕ್ರಿಯೆಗಳು ಇರುತ್ತವೆ. ಆ ಕ್ರಿಯೆಗಳಲ್ಲಿ ಯಾವುದಾದರೂ ಒಂದು ಏರುಪೇರು ಆದರೂ ಕೂಡ ಜೀವನ ಶೈಲಿಯ ಮೇಲೆ ಪರಿಣಾಮ ಬೀರುತ್ತದೆ. ಹೀಗಿರುವಾಗ ಬಾಹ್ಯಾಕಾಶಕ್ಕೆ ಹೋಗುವ ಗಗನಯಾತ್ರಿಗಳು ಅಂತರಿಕ್ಷದಲ್ಲಿ ಮಲ, ಮೂತ್ರ ವಿಸರ್ಜನೆಯ ನಿರ್ವಹಣೆ ಹೇಗೆ ಮಾಡುತ್ತಾರೆ ಎನ್ನುವುದು ಪ್ರಶ್ನೆಯಾಗಿದೆ. ಬಾಹ್ಯಾಕಾಶದಲ್ಲಿ ಮಾನವನ ತ್ಯಾಜ್ಯ ನಿರ್ವಹಣೆ ಒಂದು ದೊಡ್ಡ ಸವಾಲು. ಗುರುತ್ವಾಕರ್ಷಣೆ ಇಲ್ಲದ ಈ ಪರಿಸರದಲ್ಲಿ ಮಾನವನ ತ್ಯಾಜ್ಯ ಹೇಗೆ ನಿರ್ವಹಿಸಲಾಗುತ್ತದೆ. ಅದಲ್ಲದೆ ಭೂಮಿಯಿಂದ ಬಾಹ್ಯಾಕಾಶಕ್ಕೆ ವಸ್ತುಗಳ ಮರುಪೂರೈಕೆ ತುಂಬಾ ಕಷ್ಟಕರವಾದದ್ದು. ಆದರೆ ಯಾವುದೇ ಪೂರೈಕೆ ಇದ್ದರೂ ಕೂಡ ಅದರ ವೆಚ್ಚ ಕೂಡ ಜಾಸ್ತಿ.

    ಬಾಹ್ಯಾಕಾಶದಲ್ಲಿ ಗುರುತ್ವಾಕರ್ಷಣೆ ಇಲ್ಲದಿರುವ ಕಾರಣ ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಸಾಮಾನ್ಯವಾಗಿ ಭೂಮಿಯ ಮೇಲಿರುವ ಪ್ರತಿಯೊಬ್ಬ ಮಾನವ ಹಾಗೂ ಪ್ರಾಣಿಗಳು ನಡೆದುಕೊಂಡು ಜೀವನ ನಡೆಸುತ್ತವೆ. ಇನ್ನೂ ಕೆಲವು ನಡೆದುಕೊಂಡು ಹಾಗೂ ಹಾರಾಟ ನಡೆಸಿ ಜೀವನ ನಡೆಸುತ್ತವೆ. ಹೀಗಿರುವಾಗ ಬಾಹ್ಯಾಕಾಶಕ್ಕೆ ತೆರಳುವ ಗಗನಯಾತ್ರಿಗಳು ತೇಲಾಡಿಕೊಂಡು ಜೀವನ ನಡೆಸುವ ಅಭ್ಯಾಸ ಮಾಡಿಕೊಳ್ಳುತ್ತಾರೆ. ನಡೆಯುತ್ತಿರುವ ಮನುಷ್ಯ ದಿಡೀರನೆ ತೇಲಾಡಿಕೊಂಡು ಬದುಕುವ ಅಭ್ಯಾಸ ಮಾಡಿದಾಗ ದೇಹದ ಮೇಲೆ ಅಥವಾ ದಿನನಿತ್ಯದ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಅಂತರಿಕ್ಷಕ್ಕೆ ತೆರಳಿದ ಪ್ರಾರಂಭದ ದಿನಗಳಲ್ಲಿ ಮನುಷ್ಯನಿಗೆ ವಾಂತಿ, ಮಲ, ಮೂತ್ರ ವಿಸರ್ಜನೆಯಲ್ಲಿ ಪರಿಣಾಮ ಬೀರಬಹುದು. ಹೀಗಾಗಿ ಕೆಲವು ವ್ಯವಸ್ಥೆಗಳನ್ನು ಮಾಡಲಾಗಿರುತ್ತದೆ.

    ವಿಮಾನದಲ್ಲಿ ಪ್ರಯಾಣಿಸುವಾಗ ಅಥವಾ ಇನ್ನಿತರೆ ದೇಶಗಳಲ್ಲಿ ವಾಂತಿ ಮಾಡುವಾಗ ಕೆಲವು ಪ್ಲಾಸ್ಟಿಕ್ ಚೀಲಗಳನ್ನು ಬಳಸುತ್ತಾರೆ. ಅದೇ ರೀತಿ ಬಾಹ್ಯಾಕಾಶದಲ್ಲಿಯೂ ಕೂಡ ವಾಂತಿಗಾಗಿ `ಸ್ಪೇಸ್ ಸಿಕ್ನೆಸ್ ಬ್ಯಾಗ್’ ಗಳನ್ನು ಬಳಸುತ್ತಾರೆ. ಇವುಗಳಿಗೆ ಸೋರಿಕೆಯಾಗದಂತೆ ಬಿಗಿಯಾದ ಮುಚ್ಚುವಿಕೆಯನ್ನು ನೀಡಲಾಗಿರುತ್ತದೆ. ಬಳಿಕ ಇವುಗಳನ್ನು ತ್ಯಾಜ್ಯ ಸಂಗ್ರಹಿಸುವ ಜಾಗದಲ್ಲಿ ಇಡಲಾಗುತ್ತದೆ.

    ಪ್ರಸ್ತುತ ಅಂತಾರಾಷ್ಟ್ರೀಯ ಬಾಹ್ಯಾಕಾಶದಲ್ಲಿ ವಿಶೇಷ ಶೌಚಾಲಯಗಳ ಬಳಕೆ ಮಾಡಲಾಗುತ್ತಿದೆ. ಮಲ, ಮೂತ್ರ ವಿಸರ್ಜನೆಗಾಗಿ ಪ್ರತ್ಯೇಕ ಕೊಠಡಿಯ ರೀತಿಯಲ್ಲಿ ನಿರ್ಮಿಸಲಾಗಿರುತ್ತದೆ. ಇದರಲ್ಲಿ ಚಿಕ್ಕದಾದ ಕಮೋಡ್ ರೀತಿಯಲ್ಲಿರುತ್ತದೆ. ಅದರಲ್ಲಿ ಒಂದು ಚಿಕ್ಕದಾದ ಕೊಳವೆಯನ್ನು ನಿರ್ಮಿಸಿರುತ್ತಾರೆ. ಇನ್ನು ಅದರ ಮೇಲೆ ಕುಳಿತಾಗ ಕಾಲುಗಳಿಡಲು ಎರಡು ಹೋಲ್ಡರ್ ಗಳ ರೀತಿಯಲ್ಲಿ ನಿರ್ಮಿಸಲಾಗಿರುತ್ತದೆ. ತ್ಯಾಜ್ಯವನ್ನು ತೇಲದಂತೆ ಮಾಡಲು ಹಾಗೂ ವಾಸನೆಯನ್ನು ನಿಯಂತ್ರಿಸಲು ಶೌಚಾಲಯದ ಕೊಳವೆಯ ಮೇಲೆ ಬಿಗಿಯಾದ ಮುಚ್ಚಳವನ್ನು ನಿರ್ಮಿಸಲಾಗಿರುತ್ತದೆ. ಇದರ ಪಕ್ಕದಲ್ಲಿ ಎರಡು ಗಾಳಿ ನಿಯಂತ್ರಿತ ಪೈಪ್‌ಗಳನ್ನು ನಿರ್ಮಿಸಲಾಗಿರುತ್ತದೆ. ಇವುಗಳನ್ನು ಬಳಸಿ ಮಲ ಹಾಗೂ ಮೂತ್ರದ ವಾಸನೆ ಬರದಂತೆ ಉಪಯೋಗಿಸಲಾಗುತ್ತದೆ.

    ಪ್ರತಿ ಬಾರಿ ಮಲ,ಮೂತ್ರ ವಿಸರ್ಜನೆಗೆ ಹೋದಾಗ ಈ ಗಾಳಿಯ ಪೈಪನ್ನು ತೆರೆದು ಬಿಡುತ್ತಾರೆ. ಆಗ ಅದು ಗಾಳಿ ಸೂಸಲು ಪ್ರಾರಂಭಿಸುತ್ತದೆ. ಬಳಿಕ ಮಲ ವಿಸರ್ಜನೆಗೆ ಹೋಗುವ ಮುನ್ನ ಸಂಗ್ರಹಿಸಿಟ್ಟಿರುವ ಪ್ಲಾಸ್ಟಿಕ್ ಕವರ್ ನ್ನು ಚಿಕ್ಕ ಕೊಳವೆಯೊಳಗೆ ತೆರದು ಹಾಕುತ್ತಾರೆ. ಬಳಿಕ ತಮ್ಮ ಕೆಲಸ ಮುಗಿದ ನಂತರ ಆ ಪ್ಲಾಸ್ಟಿಕ್ ಅನ್ನು ಚೆನ್ನಾಗಿ ಬಿಗಿಗೊಳಿಸಿ, ಅದೇ ಕೊಳವೆಯೊಳಗೆ ಹಾಕಿ ಪ್ರೆಸ್ ಮಾಡಲಾಗುತ್ತದೆ. ಬಳಿಕ ಅದು ಮಲ ಸಂಗ್ರಹ ಜಾಗಕ್ಕೆ ಹೋಗುತ್ತದೆ. ಇನ್ನು ಮೂತ್ರ ವಿಸರ್ಜನೆಗೆ ಗಾಳಿಯ ಪೈಪ್ ಇರುತ್ತದೆ. ಆ ಪೈಪ್ ಅನ್ನು ತೆರೆದು ಆ ಪೈಪ್ ಮೂಲಕ ಮೂತ್ರ ವಿಸರ್ಜನೆ ಮಾಡಲಾಗುತ್ತದೆ.

    ಮಲ ಹಾಗೂ ಇನ್ಯಾವುದೇ ತ್ಯಾಜ್ಯಗಳನ್ನು ಪ್ರತಿ 30 ರಿಂದ 90  ದಿನಗಳಲ್ಲಿ ಭೂಮಿಗೆ ಕಳುಹಿಸಲಾಗುತ್ತದೆ. ಇನ್ನು ಮೂತ್ರವನ್ನು ಶುದ್ಧೀಕರಿಸಿ ಮರುಬಳಕೆ ಮಾಡಲಾಗುತ್ತದೆ. ಜೊತೆಗೆ ಬೆವರನ್ನು ಕೂಡ ಶುದ್ಧೀಕರಣ ಮಾಡಲಾಗುತ್ತದೆ. ಮೂತ್ರದ ಹಾಗೂ ಮಲದ ವಿಸರ್ಜನೆಯ ನಂತರ ಪ್ರತ್ಯೇಕ ಭಾಗದಲ್ಲಿ ಸಂಗ್ರಹಗೊಳ್ಳುತ್ತದೆ. ಈ ಮೂಲಕ ಮಲವನ್ನು ಭೂಮಿಗೆ ಕಳುಹಿಸಿದರೆ, ಮೂತ್ರವು ಇನ್ನೊಂದು ಭಾಗದಲ್ಲಿ ಶುದ್ಧೀಕರಣಗೊಂಡು ಮರು ಬಳಕೆಗೆ ಸಹಾಯಕವಾಗುತ್ತದೆ.

    ನಾಸಾ ಮಾಹಿತಿಯ ಪ್ರಕಾರ, ಮೂತ್ರ ಶುದ್ಧೀಕರಣದ ಬಳಿಕ ಭೂಮಿಯ ಮೇಲೆ ಸಿಗುವ ನೀರಿಗಿಂತ ಹೆಚ್ಚು ಶುದ್ಧವಾಗಿರುತ್ತದೆ ಎಂದು ತಿಳಿಸಿದೆ. ಇದೇ ರೀತಿ ಮಲ, ವಾಂತಿ ಹಾಗೂ ಇನ್ಯಾವುದೇ ತ್ಯಾಜ್ಯವನ್ನು ಬಿಗಿಯಾಗಿ ಸಂಗ್ರಹಿಸಿದಲಾಗುವ ಪ್ಲಾಸ್ಟಿಕ್ ಗಳಲ್ಲಿ ಸಂಗ್ರಹಿಸಿ, ಬಳಿಕ ಅದನ್ನು ಭೂಮಿಗೆ ತಂದು ಸುಟ್ಟು ಹಾಕಲಾಗುತ್ತದೆ. ಈ ರೀತಿ ಅಂತರಾಷ್ಟ್ರೀಯ ಬಾಹ್ಯಾಕಾಶದಲ್ಲಿ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತದೆ. ಸದ್ಯ ಮಲವನ್ನು ಸುಟ್ಟು ಹಾಕಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮರುಬಳಕೆ ಮಾಡಬೇಕು ಎನ್ನುವ ಉದ್ದೇಶದಿಂದ ಅಭಿವೃದ್ಧಿ ಕಾರ್ಯ ನಡೆಸುತ್ತಿದೆ.

    ಇನ್ನು ಮುಂದಿನ ದಿನಗಳಲ್ಲಿ ಚಂದ್ರ ಅಥವಾ ಮಂಗಳ ಗ್ರಹಕ್ಕೆ ದೀರ್ಘಕಾಲದ ಕಾರ್ಯಾಚರಣೆಗಾಗಿ ನಾಸಾ ತೆರಳಿದರೆ, ಆ ಸಮಯದಲ್ಲಿ ತ್ಯಾಜ್ಯ ವಿಲೇವಾರಿಗೆ ಇನ್ನಿತರ ವಿಧಾನಗಳನ್ನು ಅಭಿವೃದ್ಧಿಪಡಿಸುತ್ತಿದೆ. ಈ ಮೂಲಕ ತ್ಯಾಜ್ಯಗಳನ್ನ ಸಂಪೂರ್ಣವಾಗಿ ಮರುಬಳಕೆ ಮಾಡುವಂತಹ ಗುರಿಯನ್ನು ನಾಸಾ ಹೊಂದಿದ್ದು, ಹೊಸ ಮಾರ್ಗಗಳನ್ನು ಕಂಡುಹಿಡಿಯುವಲ್ಲಿ ತೊಡಗಿಕೊಂಡಿದೆ.

    ನಾಸಾ ಲೂನಾರ್ ಲೂ ಚಾಲೆಂಜ್ ಎಂಬ ಜಾಗತಿಕ ಸ್ಪರ್ಧೆಯ ಮೂಲಕ ಇಂಜಿನಿಯರ್ ಗಳು, ವಿಜ್ಞಾನಿಗಳು ಹಾಗೂ ನವ ಉದ್ಯಮಿಗಳನ್ನು ಬಾಹ್ಯಾಕಾಶದಲ್ಲಿ ಬಳಸಲಾಗುವ ಶೌಚಾಲಯಗಳು ವಿವಿಧ ವಿನ್ಯಾಸಗಳನ್ನು ತಯಾರಿಸಲು ತೊಡಗಿಸಿದೆ. ಈ ಮೂಲಕ ಮಲ, ಮೂತ್ರ ಹಾಗೂ ವಾಂತಿಯನ್ನು ನೀರು, ಶಕ್ತಿ ಹಾಗೂ ಗೊಬ್ಬರದಂತಹ ಉಪಯುಕ್ತ ವಸ್ತುವನ್ನಾಗಿ ಪರಿವರ್ತಿಸಬೇಕು ಎಂಬ ಸವಾಲನ್ನು ನೀಡಿದೆ. ಈ ರೀತಿ ತಯಾರಾದರೆ ಮೂರು ಮಿಲಿಯನ್ ಡಾಲರ್ ( ಸುಮಾರು 25 ರಿಂದ 26 ಕೋಟಿ ರೂ.ಷ್ಟು) ಬಹುಮಾನ ನೀಡಲಿದೆ.

  • ಮಾರ್ಚ್ ಅಂತ್ಯಕ್ಕೆ ಸುನಿತಾ ವಿಲಿಯಮ್ಸ್ ಭೂಮಿಗೆ ವಾಪಸ್?

    ಮಾರ್ಚ್ ಅಂತ್ಯಕ್ಕೆ ಸುನಿತಾ ವಿಲಿಯಮ್ಸ್ ಭೂಮಿಗೆ ವಾಪಸ್?

    ವಾಷಿಂಗ್ಟನ್: ಬಾಹ್ಯಾಕಾಶದಲ್ಲಿರುವ ಸುನಿತಾ ವಿಲಿಯಮ್ಸ್ (Sunita Williams) ಭೂಮಿಗೆ ಮರಳುವುದು ಇನ್ನಷ್ಟು ತಡವಾಗಲಿದೆ ಎಂದು ನಾಸಾ (NASA) ಮಾಹಿತಿ ನೀಡಿದೆ.

    ಮೂರನೇ ಬಾರಿ ಅಂತರಿಕ್ಷಕ್ಕೆ ತೆರಳಿರುವ ಭಾರತ ಮೂಲದ ಅಮೆರಿಕನ್ ವ್ಯೋಮಗಾಮಿ ಸುನಿತಾ ವಿಲಿಯಮ್ಸ್ ಭೂಮಿಗೆ ಮರಳುವುದು ತಡವಾಗಲಿದೆ. ಮಾರ್ಚ್ ಅಂತ್ಯಕ್ಕೆ ಭೂಮಿಗೆ ವಾಪಸ್ ಆಗಲಿದ್ದಾರೆ. ಮುಂದಿನ ಮಾರ್ಚ್ವರೆಗೂ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಇರಲಿದ್ದಾರೆ ಎಂದು ನಾಸಾ ತಿಳಿಸಿದೆ.ಇದನ್ನೂ ಓದಿ: ನಾವು ಎಂದಿಗೂ ಅಂಬೇಡ್ಕರ್‌ರನ್ನ ಅವಮಾನಿಸುವುದಿಲ್ಲ.. ನನ್ನ ಹೇಳಿಕೆ ತಿರುಚಲಾಗಿದೆ: ಅಮಿತ್ ಶಾ

    2024ರ ಜೂನ್ 6ರಂದು ಸುನಿತಾ ಮತ್ತು ವಿಲ್ಮೋರ್ ಎಂಟು ದಿನಗಳ ಕಾರ್ಯಾಚರಣೆಗಾಗಿ ಬೋಯಿಂಗ್ ಸ್ಟಾರ್ ಲೈನರ್ ಕ್ಯಾಪ್ಸುಲ್‌ನಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಬಾಹ್ಯಾಕಾಶ ನೌಕೆಯ ಸಮಸ್ಯೆ ಹಾಗೂ ತಾಂತ್ರಿಕ ದೋಷಗಳಿಂದಾಗಿ ಹಿಂದಿರುಗಲು ಸಾಧ್ಯವಾಗಿರಲಿಲ್ಲ. ಈ ಮುಂಚೆ 2025ರ ಫೆಬ್ರವರಿ ತಿಂಗಳಲ್ಲಿ ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ತಿಳಿಸಿತ್ತು. ಆದರೆ ಇದೀಗ ಮಾರ್ಚ್‌ಗೆ ಮುಂದೂಡಿಕೆ ಆಗಿದೆ.

    ಸುನಿತಾ ಬಾಹ್ಯಾಕಾಶ ನಿಲ್ದಾಣಕ್ಕೆ ಹೋಗಿದ್ಯಾಕೆ?
    ನಾಸಾದ ಸಹಭಾಗಿತ್ವದಲ್ಲಿ ಬೋಯಿಂಗ್ ರೂಪಿಸಿದ್ದ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಪರೀಕ್ಷಾರ್ಥ ಪ್ರಯಾಣದ ಭಾಗವಾಗಿ ಉಪಗ್ರಹ ಉಡಾವಣೆ ಮಾಡಲಾಗಿತ್ತು. ಸುನಿತಾ ಮತ್ತು ಬುಚ್ ಇಬ್ಬರೂ ಗಗನಯಾತ್ರಿಗಳು ಜೂ.5 ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹೋಗಿದ್ದರು. ಎಂಟು ದಿನಗಳ ಕಾಲ ಅಲ್ಲಿದ್ದು ಜೂ.14 ರಂದು ಸ್ಟಾರ್‌ಲೈನರ್ ಮೂಲಕವೇ ಭೂಮಿಗೆ ವಾಪಸ್ ಆಗಬೇಕಿತ್ತು. ಆದರೆ, ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಅವರು ಬಾಹ್ಯಾಕಾಶದಲ್ಲೇ ಉಳಿಯುವಂತಾಗಿದೆ.ಇದನ್ನೂ ಓದಿ: ಕನ್ನಡ ಸಾಹಿತ್ಯ ಸಮ್ಮೇಳನ: ಡಿ.20, 21 ಕ್ಕೆ ಮಂಡ್ಯ ಜಿಲ್ಲೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

  • ಸ್ಪೇಸ್‌ನಲ್ಲೇ ಕ್ರಿಸ್ಮಸ್ ಸಂಭ್ರಮ – ಸಾಂತಾಕ್ಲಾಸ್ ಆದ ಸುನಿತಾ ವಿಲಿಯಮ್ಸ್!

    ಸ್ಪೇಸ್‌ನಲ್ಲೇ ಕ್ರಿಸ್ಮಸ್ ಸಂಭ್ರಮ – ಸಾಂತಾಕ್ಲಾಸ್ ಆದ ಸುನಿತಾ ವಿಲಿಯಮ್ಸ್!

    ವಾಷಿಂಗ್ಟನ್: ಕ್ರಿಸ್ಮಸ್ ಹಬ್ಬಕ್ಕಾಗಿ ಬಾಹ್ಯಾಕಾಶದಲ್ಲಿ ಸುನಿತಾ ವಿಲಿಯಮ್ಸ್ (Sunita Williams) ಸಾಂತಾಕ್ಲಾಸ್ ಆಗಿ ಕಾಣಿಸಿಕೊಂಡಿದ್ದು, ಫೋಟೋವೊಂದಕ್ಕೆ ಪೋಸ್ ನೀಡಿದ್ದಾರೆ.

    ಕಳೆದ ಆರು ತಿಂಗಳಿಂದ ಬಾಹ್ಯಾಕಾಶದಲ್ಲಿರುವ ಸುನಿತಾ ವಿಲಿಯಮ್ಸ್ ಇದೀಗ ಕ್ರಿಸ್ಮಸ್ ಸಂಭ್ರಮದಲ್ಲಿದ್ದಾರೆ. ಸದ್ಯ ಸುನಿತಾ ಅವರು ಸಾಂತಾ ಕ್ಲಾಸ್ ಆಗಿ ಕಾಣಿಸಿಕೊಂಡಿರುವ ಫೋಟೋವನ್ನು ನಾಸಾದ ಜಾನ್ಸನ್ ಬಾಹ್ಯಾಕಾಶ ಕೇಂದ್ರ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ವೈರಲ್ ಆಗುತ್ತಿದೆ.ಇದನ್ನೂ ಓದಿ: ಮುಂಗಡ ಟಿಕೆಟ್ ಬುಕಿಂಗ್‌ನಲ್ಲೂ ‘ಯುಐ’ ದಾಖಲೆ- ಇನ್ನೇನಿದ್ರೂ ಉಪ್ಪಿ ಮೇನಿಯಾ ಶುರು

    ಹ್ಯಾಮ್ ರೇಡಿಯೋದಲ್ಲಿ ಮಾತನಾಡುವ ಸಮಯದಲ್ಲಿ ಸುನಿತಾ ವಿಲಿಯಮ್ಸ್ ಹಾಗೂ ಡಾನ್ ಪೆಟ್ಟಿಟ್ ಜೊತೆಗೂಡಿ ಫೋಟೋಗೆ ಪೋಸ್ ನೀಡಿದ್ದಾರೆ. ಫೋಟೋದಲ್ಲಿ ಇಬ್ಬರು ಸಾಂತಾಕ್ಲಾಸ್ ಟೋಪಿ ಧರಿಸಿದ್ದು, ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಲು ತಯಾರಿ ನಡೆಸುತ್ತಿದ್ದಾರೆ.

    ಸ್ಪೇಸ್‌ಎಕ್ಸ್ ಡ್ರ‍್ಯಾಗನ್ ಕ್ಯಾಪ್ಸುಲ್, ಭೂಮಿಯಿಂದ ಸರಕು ಹಾಗೂ ಇನ್ನಿತರ ಉಡುಗೊರೆಗಳನ್ನು ಸರಬರಾಜು ಮಾಡಿದೆ ಹಾಗೂ ಕ್ರಿಸ್ಮಸ್ ಸಮೀಪಿಸುತ್ತಿರುವ ಕಾರಣ ಗಗನಯಾತ್ರಿಗಳು ತಮ್ಮ ಕುಟುಂಬ, ಸ್ನೇಹಿತರಿಗೆ ವಿಡಿಯೋ ಕರೆ ಮೂಲಕ ಸಂಪರ್ಕ ಕಲ್ಪಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

    ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್ 2024ರ ಜೂನ್‌ನಿಂದ ಬಾಹ್ಯಾಕಾಶದಲ್ಲಿದ್ದಾರೆ. ಎಂಟು ದಿನಗಳ ಕಾರ್ಯಾಚರಣೆಗಾಗಿ ಬಾಹ್ಯಾಕಾಶಕ್ಕೆ ತೆರಳಿದ್ದ ಅವರು ಬಾಹ್ಯಾಕಾಶ ನೌಕೆಯ ಸಮಸ್ಯೆ ಹಾಗೂ ತಾಂತ್ರಿಕ ದೋಷಗಳಿಂದಾಗಿ ಹಿಂದಿರುಗಲು ಸಾಧ್ಯವಾಗಿಲ್ಲ. 2025ರ ಫೆಬ್ರವರಿ ತಿಂಗಳಲ್ಲಿ ಭೂಮಿಗೆ ಮರಳಲಿದ್ದಾರೆ ಎಂದು ವರದಿಗಳು ತಿಳಿಸಿವೆ.ಇದನ್ನೂ ಓದಿ: NDA ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ ಅತಿಹೆಚ್ಚು 2.08 ಲಕ್ಷ ಕೋಟಿ ಅನುದಾನ: ಸಂಸದ ಕೆ.ಸುಧಾಕರ್‌

  • ಬಾಹ್ಯಾಕಾಶ ನಿಲ್ದಾಣ ತಲುಪಿತು ಕ್ರ್ಯೂ-9 ಮಿಷನ್ – ಅಪ್ಪಿಕೊಂಡು ಸ್ವಾಗತಿಸಿದ ಗಗನಯಾನಿಗಳು

    ಬಾಹ್ಯಾಕಾಶ ನಿಲ್ದಾಣ ತಲುಪಿತು ಕ್ರ್ಯೂ-9 ಮಿಷನ್ – ಅಪ್ಪಿಕೊಂಡು ಸ್ವಾಗತಿಸಿದ ಗಗನಯಾನಿಗಳು

    ವಾಷಿಂಗ್ಟನ್‌: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ (Sunita Williams) ಮತ್ತು ಬುಚ್ ವಿಲ್ಮೋರ್ ಅವರನ್ನು ಮರಳಿ ಕರೆ ತರುವ ನಿಟ್ಟಿನಲ್ಲಿ ಹಾರಿಸಲಾಗಿದ್ದ ಸ್ಪೇಸ್‌ ಎಕ್ಸ್‌ ಕ್ರ್ಯೂ9 ಮಿಷನ್ (Crew9) ಯಶಸ್ವಿಯಾಗಿ ಅಂತರಿಕ್ಷ ನಿಲ್ದಾಣದಲ್ಲಿ ಲ್ಯಾಂಡ್‌ ಆಗಿದೆ.

    ಫಾಲ್ಕನ್ 9 ರಾಕೆಟ್ ಫ್ಲೋರಿಡಾದ ಕೇಪ್ ಕೆನವೆರಲ್‌ನಿಂದ ಶನಿವಾರ ಭಾರತೀಯ ಕಾಲಮಾನ ರಾತ್ರಿ 10:47ಕ್ಕೆ ಉಡಾವಣೆಯಾಗಿತ್ತು. ಸ್ಪೇಸ್‌ ಎಕ್ಸ್ ಕ್ರ್ಯೂ-9 ಮಿಷನ್ (Crew-9 Mission) ಭಾನುವಾರ ಸಂಜೆ ಅಂತರಿಕ್ಷ ನಿಲ್ದಾಣದ ಜೊತೆ ಸಂಪರ್ಕ ಸಾಧಿಸಿತು.

    ಡಾಕ್‌ ಆದ ನಂತರ ನಾಸಾ ಗಗನಯಾತ್ರಿ ನಿಕ್ ಹೇಗ್ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೊವ್ ಅವರು ಅಂತಾರಾಷ್ಟ್ರೀಯ ನಿಲ್ದಾಣದಲ್ಲಿರುವ (ISS) ಗಗನಯಾನಿಗಳನ್ನು ಅಪ್ಪಿಕೊಂಡರು.

    ಫೆಬ್ರವರಿಯಲ್ಲಿ ಹೇಗ್ ಮತ್ತು ಗೋರ್ಬುನೊವ್ ಬಾಹ್ಯಾಕಾಶ ನಿಲ್ದಾಣದಿಂದ ಮರಳುವಾಗ ಬುಚ್ ವಿಲ್ಮೋರ್ ಮತ್ತು ಸುನಿತಾ ವಿಲಿಯಮ್ಸ್ ಅವರನ್ನು ಕರೆ ತರುತ್ತಾರೆ.

     

    ಜೂನ್ ತಿಂಗಳಲ್ಲಿ 8 ದಿನಗಳ ಬಾಹ್ಯಾಕಾಶ ಯಾತ್ರೆ ತೆರಳಿದ್ದ ಇಬ್ಬರು ಗಗನಯಾತ್ರಿಗಳು ಬೋಯಿಂಗ್ ಸ್ಟಾರ್‌ಲೈನರ್‌ ಬಹ್ಯಾಕಾಶ ನೌಕೆಯಲ್ಲಿನ ತಾಂತ್ರಿಕ ದೋಷದಿಂದಾಗಿ ಬಾಹ್ಯಾಕಾಶದಲ್ಲೇ ಉಳಿದಿದ್ದಾರೆ. ಕ್ರ್ಯೂ 9 ಮಿಷನ್‌ ಮೂಲಕ ಸುಮಾರು 200 ವೈಜ್ಞಾನಿಕ ಪ್ರಯೋಗಗಳನ್ನು ನಡೆಸುತ್ತದೆ.