Tag: SpaDEx

  • 2ನೇ ಬಾರಿಗೆ ಉಪಗ್ರಹ ಜೋಡಣೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಳಿಸಿದ ಇಸ್ರೋ

    2ನೇ ಬಾರಿಗೆ ಉಪಗ್ರಹ ಜೋಡಣೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಳಿಸಿದ ಇಸ್ರೋ

    ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO) ಮತ್ತೊಂದು ಮೈಲುಗಲ್ಲು ಸಾಧಿಸಿದ್ದು, ಬಾಹ್ಯಾಕಾಶದಲ್ಲಿ 2ನೇ ಬಾರಿಗೆ ಉಪಗ್ರಹ ಜೋಡಣೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಳಿಸಿದೆ.

    ಈ ಕುರಿತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದರ್ ಸಿಂಗ್ (Jitendra Singh) ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬಾಹ್ಯಾಕಾಶದಲ್ಲಿ ಉಪಗ್ರಹಗಳ ಎರಡನೇ ಡಾಕಿಂಗ್ (Docking) ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ವಿಚಾರವನ್ನು ಹಂಚಿಕೊಳ್ಳಲು ಸಂತೋಷವಾಗುತ್ತಿದೆ ಎಂದಿದ್ದಾರೆ.ಇದನ್ನೂ ಓದಿ: 10 ಗ್ರಾಂ ಚಿನ್ನದ ಬೆಲೆ 1 ಲಕ್ಷ ರೂ. ಸನಿಹಕ್ಕೆ – ಹೊಸ ದಾಖಲೆ ಬರೆದ ಗೋಲ್ಡ್‌

    2024ರ ಡಿಸೆಂಬರ್ 30ರಂದು ಸ್ಪೇಡೆಕ್ಸ್ (Spadex) ಮಿಷನ್‌ನ PSLV-C60 ರಾಕೆಟ್‌ನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿತ್ತು. ನಂತರ 2025 ಜನವರಿ 16ರಂದು ಬೆಳಗ್ಗೆ 6:20ಕ್ಕೆ ಮೊದಲ ಬಾರಿಗೆ ಉಪಗ್ರಹಗಳನ್ನು ಯಶಸ್ವಿಯಾಗಿ ಡಾಕಿಂಗ್ ಮಾಡಲಾಗಿತ್ತು. ಮಾರ್ಚ್ 13ರ ಬೆಳಗ್ಗೆ 9:20ಕ್ಕೆ ಅನ್‌ಡಾಕ್ ಮಾಡಲಾಗಿತ್ತು. ಮುಂದಿನ 2 ವಾರಗಳಲ್ಲಿ ಮತ್ತಷ್ಟು ಪ್ರಯೋಗದ ಪ್ಲ್ಯಾನ್‌ ಇರುವುದಾಗಿ ತಿಳಿಸಿದ್ದಾರೆ.

    ಅಮೆರಿಕ, ರಷ್ಯಾ, ಚೀನಾ ಬಳಿಕ ಬಾಹ್ಯಾಕಾಶ ಡಾಕಿಂಗ್ ಪ್ರಯೋಗವನ್ನು ಪೂರ್ಣಗೊಳಿಸಿದ ನಾಲ್ಕನೇ ದೇಶವಾಗಿ ಭಾರತ ಹೊರಹೊಮ್ಮಿದೆ.ಇದನ್ನೂ ಓದಿ: 6 ವರ್ಷದ ಬಳಿಕ ಪ್ರಧಾನಿ ಮೋದಿ ಸೌದಿ ಅರೇಬಿಯಾ ಪ್ರವಾಸ

  • ಇಸ್ರೋ ಐತಿಹಾಸಿಕ ಸಾಧನೆ| ಡಾಕಿಂಗ್‌ ಸಾಹಸ ಯಶಸ್ವಿ – ಸಾಧನೆಗೈದ ವಿಶ್ವದ 4ನೇ ದೇಶ ಭಾರತ

    ಇಸ್ರೋ ಐತಿಹಾಸಿಕ ಸಾಧನೆ| ಡಾಕಿಂಗ್‌ ಸಾಹಸ ಯಶಸ್ವಿ – ಸಾಧನೆಗೈದ ವಿಶ್ವದ 4ನೇ ದೇಶ ಭಾರತ

    ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ISRO) ಐತಿಹಾಸಿಕ ಸಾಧನೆ ಮಾಡಿದೆ. ಬಾಹ್ಯಾಕಾಶ ಉಪಗ್ರಹಗಳ ಡಾಕಿಂಗ್‌ (Docking) ಪ್ರಯೋಗ ಯಶಸ್ವಿಯಾಗಿದ್ದು ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

    ಎರಡು ಉಪಗ್ರಹಗಳನ್ನು ಜೋಡಿಸುವ ಹಾಗೂ ಬೇರ್ಪಡಿಸುವ ಪ್ರಯೋಗದಲ್ಲಿ ಇಲ್ಲಿಯವರೆಗೆ ಅಮೆರಿಕ, ರಷ್ಯಾ ಮತ್ತು ಚೀನಾ ಯಶಸ್ಸು ಕಂಡಿತ್ತು.

    ಡಿ.30 ರ ರಾತ್ರಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್’ (SpaDEx) ಯೋಜನೆ ಭಾಗವಾಗಿ 2 ಉಪಗ್ರಹಗಳು ಉಡಾವಣೆಯಾಗಿತ್ತು. ಪೋಲಾರ್‌ ಸ್ಯಾಟಲೈಟ್‌ ಲಾಂಚ್‌ ವೆಹಿಕಲ್‌ (PSLV) ರಾಕೆಟ್ ಈ ಪ್ರಯೋಗದ ಭಾಗವಾಗಿದ್ದ ಎಸ್‌ಡಿಎಕ್ಸ್‌01 ಮತ್ತು ಎಸ್‌ಡಿಎಕ್ಸ್02 ಹೆಸರಿನ ಎರಡು ಉಪಗ್ರಹಗಳನ್ನು ಕಕ್ಷೆಗೆ ಸೇರಿಸಿತ್ತು.

    ಭೂಮಿಯಿಂದ 475 ಕಿ.ಮೀ ದೂರದ ಕಕ್ಷೆಗೆ ಉಪಗ್ರಹಗಳನ್ನು ರಾಕೆಟ್‌ ಯಶಸ್ವಿಯಾಗಿ ಸೇರಿಸಿದ ಬಳಿಕ ಜನವರಿ ಮೊದಲ ವಾರದಲ್ಲಿ ಇಸ್ರೋ ಡಾಕಿಂಗ್‌ ಪ್ರಯೋಗ ನಡೆಸಬೇಕಿತ್ತು. ಆದರೆ ಕಾರಣಾಂತರಗಳಿಂದ ಈ ಪ್ರಯೋಗ ಮುಂದೂಡಿಕೆಯಾಗಿತ್ತು. ತನ್ನ ನಾಲ್ಕನೇ ಪ್ರಯತ್ನದಲ್ಲಿ  ಇಸ್ರೋ  ಡಾಕಿಂಗ್‌ ಪ್ರಯೋಗವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

    ಏನಿದು ಪ್ರಯೋಗ?
    ಈ ಎರಡು ಉಪಗ್ರಹಗಳು ತನ್ನಲ್ಲಿರುವ ಸೆನ್ಸರ್‌, ವ್ಯವಸ್ಥೆಯನ್ನು ಬಳಸಿ ಒಂದಕ್ಕೊಂದು ಜೋಡಣೆ ಆಗುವಂತೆ ಮಾಡುವುದು. ನಂತರ ಪರಸ್ಪರ ಬೇರೆಯಾಗುವಂತೆ ಮಾಡಲು ಇಸ್ರೋ ಈ ಪ್ರಯೋಗ ನಡೆಸಿತ್ತು. ಈ ಕಾರಣಕ್ಕೆ ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್’ (Spadex ) ಎಂಬ ಹೆಸರನ್ನು ಇಡಲಾಗಿತ್ತು. ತಲಾ 220 ಕೆಜಿ ತೂಗುವ ಸ್ಪೇಡೆಕ್ಸ್‌ 1 ಮತ್ತು ಸ್ಪೇಡೆಕ್ಸ್‌ 2 ನೌಕೆಗಳನ್ನು ಪರಸ್ಪರ ಕೇವಲ  ಪರಸ್ಪರ 15 ಮೀಟರ್‌ ಅಂತರಕ್ಕೆ ಆರಂಭದಲ್ಲಿ ತರಲಾಗಿತ್ತು. ನಂತರ  3 ಮೀಟರ್‌ ಸನಿಹಕ್ಕೆ ತಂದ ಬಳಿಕ ಈ ಡಾಕಿಂಗ್‌ ಪ್ರಕ್ರಿಯೆ ಆರಂಭಿಸಿತ್ತು.

    ಇಸ್ರೋ ಜ.7 ಮತ್ತು 8 ರಂದು ಪ್ರಯೋಗ ಮಾಡಲು ಮುಂದಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಪ್ರಯೋಗವನ್ನು ಮುಂದೂಡಿತ್ತು. ಜ.12 ರಂದು ಪ್ರಯೋಗ ಆರಂಭಿಸಿತ್ತು.

    ಯಾಕೆ ಇಷ್ಟೊಂದು ಮಹತ್ವ?
    ಮಾನವಸಹಿತ ಅಂತರಿಕ್ಷಯಾನ, ಚಂದ್ರನ ಅಂಗಳಕ್ಕೆ ಮನುಷ್ಯರನ್ನು ಕಳುಹಿಸಿ, ವಾಪಸ್‌ ಕರೆತರಲು ಇಸ್ರೋ ಈಗಾಗಲೇ ಯೋಜನೆ ರೂಪಿಸಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಂತೆ ಇಸ್ರೋ ತನ್ನದೇ ಆದ ಸ್ವದೇಶಿ ‘ಭಾರತೀಯ ಅಂತರಿಕ್ಷ ನಿಲ್ದಾಣ’ ಸ್ಥಾಪಿಸಲು ಸಿದ್ಧತೆ ಆರಂಭಿಸಿದೆ. ಆ ನಿಲ್ದಾಣಕ್ಕೆ ಗಗನಯಾತ್ರಿಗಳು, ಉಪಕರಣಗಳನ್ನು ಕಳುಹಿಸಲು ಡಾಕಿಂಗ್‌, ಅನ್‌ಡಾಕಿಂಗ್‌ ತಂತ್ರಜ್ಞಾನ ತಿಳಿದಿರಬೇಕು.

  • ಇಸ್ರೋದ ಸ್ಪೇಡೆಕ್ಸ್‌ ಉಪಗ್ರಹಕ್ಕೆ ರಾಜ್ಯದ ಬಿಜಿಎಸ್ ಕಾಲೇಜಿನ ಪೇಲೋಡ್ ಸೇರ್ಪಡೆ

    ಇಸ್ರೋದ ಸ್ಪೇಡೆಕ್ಸ್‌ ಉಪಗ್ರಹಕ್ಕೆ ರಾಜ್ಯದ ಬಿಜಿಎಸ್ ಕಾಲೇಜಿನ ಪೇಲೋಡ್ ಸೇರ್ಪಡೆ

    ಚಿಕ್ಕಬಳ್ಳಾಪುರ: ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್’ (SpaDEx) ಯೋಜನೆ ಭಾಗವಾಗಿ 2 ಉಪಗ್ರಹಗಳು ಸೋಮವಾರ ರಾತ್ರಿ (ಇಂದು) ಉಡಾವಣೆಯಾಗಲಿದೆ. ಈ ಉಪಗ್ರಹಕ್ಕೆ ರಾಜ್ಯದ ಪ್ರತಿಷ್ಟಿತ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳ ವತಿಯಿಂದ `ಅರ್ಪಿತ್’ ಪೇಲೋಡ್ ಒದಗಿಸಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಚಿಕ್ಕಬಳ್ಳಾಪುರದ ಎಸ್‌ಜೆಸಿಐಟಿ ಇಂಜಿನಿಯರಿಂಗ್ ಕಾಲೇಜಿನ (SJCIT Engineering College) ತಂಡ ಮುಂದಾಗಿದೆ.

    ಅಂದಹಾಗೆ ಇಂದು ರಾತ್ರಿ 9 ಗಂಟೆ 58 ನಿಮಿಷಕ್ಕೆ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 2 ಉಪಗ್ರಹಗಳು ಉಡಾವಣೆಯಾಗಲಿದೆ. ಇದಕ್ಕಾಗಿ ʻಅರ್ಪಿತ್ʼ ಹೆಸರಿನ ಪೇಲೋಡ್ ನಿರ್ಮಿಸಿರುವ ಎಸ್‌ಜೆಸಿಐಟಿ ಇಂಜಿನಿಯರಿಂಗ್ ಕಾಲೇಜಿನ ತಂಡ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ತಲುಪಿದೆ. ಇದನ್ನೂ ಓದಿ: ಡಾಕಿಂಗ್‌ ಸಾಹಸಕ್ಕೆ ಇಸ್ರೋ ರೆಡಿ – ಏನಿದು ಪ್ರಯೋಗ? ಇಷ್ಟೊಂದು ಮಹತ್ವ ಯಾಕೆ?

    ಈ ಪೇಲೋಡ್‌ನ ಮುಖ್ಯ ಉದ್ದೇಶ ಎಂದರೆ ಸಾರ್ವಜನಿಕರು ಸಹ ಸ್ಯಾಟಲೈಟ್ ಜೊತೆ ಸಂಪರ್ಕ ಸಾಧಿಸುವುದು, ಸ್ಯಾಟಲೈಟ್ ನಿಂದ ರೇಡಿಯೋ ತರಂಗಾಂತರ ಮೂಲಕ ಫೋಟೋ, ವಿಡಿಯೋ, ಆಡಿಯೋ ಹಂಚಿಕೊಳ್ಳಬಹುದಾಗಿದೆ. ಇದನ್ನೂ ಓದಿ: Bihar | ಮರುಪರೀಕ್ಷೆಗೆ ಆಗ್ರಹ – ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಜಲಫಿರಂಗಿ ಪ್ರಯೋಗ

    ಇನ್ನೂ ಈ ಸ್ಪೈಡೆಕ್ಸ್ ಸ್ಯಾಟಲೈಟ್ ಯೋಜನೆ ಬಾಹ್ಯಾಕಾಶದಲ್ಲಿ ಎರಡು ಉಪಗ್ರಹಗಳನ್ನ ಒಂದಕ್ಕೊಂದು ಸಂಪರ್ಕ ಜೋಡಿಸುವುದಾಗಿದೆ. ಈ ಯೋಜನೆಯ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಹೊಸ ಮೈಲಿಗಲ್ಲು ಸಾಧಿಸಲಿದೆ. ಈ ಯೋಜನೆಯಲ್ಲಿ ಎರಡು ಉಗ್ರಹಗಳಿದ್ದು ಒಂದಕ್ಕೊಂದು ಸಂವಹನ ಸಾಧಿಸುವ ಪ್ರಯೋಗ ನಡೆಸಲಾಗುತ್ತದೆ.

    ಇದರಲ್ಲಿ 24 ಪೇಲೋಡ್ ಗಳಿದ್ದು 14 ಪೆಲೋಡ್ ಗಳನ್ನ ಇಸ್ರೋ ಸಂಸ್ಥೆ ನಿರ್ಮಾಣ ಮಾಡಿದ್ರೆ ಉಳಿದ 10 ಪೇಲೋಡ್ ಇತರೆ ಸಂಸ್ಥೆಗಳು ತಯಾರಿ ಮಾಡಿವೆ. ಇದನ್ನೂ ಓದಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ಮಾರಕಕ್ಕೆ ಸ್ಥಳ ಪರಿಶೀಲನೆ