Tag: Spanish

  • ಮಾರ್ಚ್ 7ಕ್ಕೆ ಸ್ಪ್ಯಾನಿಷ್ ಭಾಷೆಯಲ್ಲಿ ‘ಸಲಾರ್’ ರಿಲೀಸ್

    ಮಾರ್ಚ್ 7ಕ್ಕೆ ಸ್ಪ್ಯಾನಿಷ್ ಭಾಷೆಯಲ್ಲಿ ‘ಸಲಾರ್’ ರಿಲೀಸ್

    ಗಾಗಲೇ ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿರುವ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾ ಸ್ಪ್ಯಾನಿಷ್ (Spanish0 ಭಾಷೆಯಲ್ಲಿ ರಿಲೀಸ್ ಆಗಲಿದೆ. ಈಗಾಗಲೇ ಸ್ಪ್ಯಾನಿಷ್ ಭಾಷೆಗೆ ಚಿತ್ರವನ್ನು ಡಬ್ ಮಾಡಲಾಗುತ್ತಿದ್ದು, ಮಾರ್ಚ್ 7 ರಂದು ಈ ಚಿತ್ರವನ್ನು ರಿಲೀಸ್ ಮಾಡುವುದಾಗಿ ಸಂಸ್ಥೆ ತಿಳಿಸಿದೆ.

    ಸಲಾರ್ ಸಿನಿಮಾ ಬಾಕ್ಸಾಫೀಸಿನಲ್ಲಿ ಈವರೆಗೂ 627 ಕೋಟಿ ರೂಪಾಯಿ ಅಧಿಕ ಗಳಿಸಿ, ಇನ್ನೂ ಮುನ್ನುಗ್ಗುತ್ತಿದೆ. ಈ ನಡುವೆ ಸಲಾರ್ 2 ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿಗಳು ಹೊರ ಬಿದ್ದಿವೆ. ಆಂಗ್ಲ ವೆಬ್ ಸೈಟ್ ಜೊತೆ ನಿರ್ಮಾಪಕ ವಿಜಯ ಕಿರಗಂದೂರು (Vijaya Kirgandur) ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದು, ಅದರ ಪ್ರಕಾರ ಸಲಾರ್ 2 ಸಿನಿಮಾ 2025ರಲ್ಲಿ ಬಿಡುಗಡೆ ಆಗಿದೆ.

    ಇನ್ನೂ ಅಚ್ಚರಿಯ ಸಂಗತಿ ಅಂದರೆ, ಈಗಾಗಲೇ ಸಲಾರ್ 2 ಸಿನಿಮಾದ ಸ್ಕ್ರಿಪ್ಟ್ ರೆಡಿಯಾಗಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಸಲಾರ್ 2 ಸಿನಿಮಾದ ಕುರಿತಂತೆ ನಿರ್ದೇಶಕ ಪ್ರಶಾಂತ್ ನೀಲ್ ಕೆಲಸ ಕೂಡ ಶುರು ಮಾಡಲಿದ್ದಾರಂತೆ. ಸಲಾರ್ ಸಿನಿಮಾಗಿಂತಲೂ ಸಲಾರ್ 2 ಇನ್ನೂ ಅದ್ಧೂರಿಯಾಗಿ ಇರಲಿದೆ ಎಂದು ವಿಜಯ್ ತಿಳಿಸಿದ್ದಾರೆ.

    ಹೊಂಬಾಳೆ ಫಿಲ್ಮ್ಸ್ (Hombale Films) ನಿರ್ಮಾಣದ ಸಲಾರ್ (Salaar) ಸಿನಿಮಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಈ ಸಿನಿಮಾ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿಶ್ವದಾದ್ಯಂತ  ಕೋಟಿ ಕೋಟಿ ಹಣವನ್ನು ಗಳಿಸಿದೆ. ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ಹಣ ಹರಿದು ಬರುತ್ತಿದೆ. ಈ ಮೂಲಕ ಭಾರತೀಯ ಚಿತ್ರರಂಗದಲ್ಲಿ, ಮೊದಲ ದಿನ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೊಸ ದಾಖಲೆಯನ್ನು ಮಾಡಿದೆ. ಕನ್ನಡದ ನಿರ್ಮಾಣದ ಸಂಸ್ಥೆಯೊಂದು ರಾಷ್ಟ್ರೀಯ ಮಟ್ಟದಲ್ಲಿ ಇಂಥದ್ದೊಂದು ದಾಖಲೆ ಮಾಡಿರುವುದು ಕನ್ನಡ ಚಿತ್ರರಂಗಕ್ಕೆ ಮತ್ತು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

    ಕನ್ನಡದಲ್ಲಿ ‘ಮಾಸ್ಟರ್ ಪೀಸ್‍’, ‘ರಾಜಕುಮಾರ’, ‘ಯುವರತ್ನ’, ‘ಕೆಜಿಎಫ್‍ 1 ಮತ್ತು 2’, ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್’ ಮುಂತಾದ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್, ತನ್ನ ನಿರ್ಮಾಣದ ಚಿತ್ರಗಳ ಮೂಲಕ ಜಗತ್ತಿನ ಗಮನ ಸೆಳೆದಿರುವುದಷ್ಟೇ ಅಲ್ಲ, ಕನ್ನಡ ಚಿತ್ರಗಳನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗುವ ಮೂಲಕ ಎಲ್ಲರ ಗಮನ ಸೆಳೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

    ‘ಸಲಾರ್’ ಪ್ಯಾನ್‍ ಇಂಡಿಯಾ ಚಿತ್ರವಾದರೂ, ಈ ಚಿತ್ರದ ಹಿಂದಿರುವ ತಾಂತ್ರಿಕ ತಂಡದವರೆಲ್ಲರೂ ಕನ್ನಡದವರಾಗಿದ್ದಾರೆ. ನಿರ್ಮಾಪಕರಾದ ವಿಜಯ್‍ ಕಿರಗಂದೂರು, ನಿರ್ದೇಶಕ ಪ್ರಶಾಂತ್‍ ನೀಲ್‍ (Prashant Neel), ಛಾಯಾಗ್ರಾಹಕ ಭುವನ್‍ ಗೌಡ, ಸಂಗೀತ ನಿರ್ದೇಶಕ ರವಿ ಬಸ್ರೂರು, ಕಲಾ ನಿರ್ದೇಶಕ ಶಿವಕುಮಾರ್ ಸೇರಿದಂತೆ ಚಿತ್ರದಲ್ಲಿ ಕೆಲಸ ಮಾಡಿರುವ ಹಲವು ತಂತ್ರಜ್ಞರು ಹಾಗೂ ಕಲಾವಿದರು  ಈ ನೆಲದ ಮಣ್ಣಿನವರಾಗಿದ್ದು, ಇದು ಕನ್ನಡದ ಪ್ರತಿಭಾ ಸಂಪತ್ತಿನ ಒಂದು ಉದಾಹರಣೆಯಷ್ಟೇ.

     

    ‘ಸಲಾರ್’ ಪ್ಯಾನ್‍ ಇಂಡಿಯಾ ಚಿತ್ರವಾದರೂ, ಈ ಚಿತ್ರದ ಹಿಂದಿರುವ ತಾಂತ್ರಿಕ ತಂಡದವರೆಲ್ಲರೂ ಕನ್ನಡದವರಾಗಿದ್ದಾರೆ. ನಿರ್ಮಾಪಕರಾದ ವಿಜಯ್‍ ಕಿರಗಂದೂರು, ನಿರ್ದೇಶಕ ಪ್ರಶಾಂತ್‍ ನೀಲ್‍ (Prashant Neel), ಛಾಯಾಗ್ರಾಹಕ ಭುವನ್‍ ಗೌಡ, ಸಂಗೀತ ನಿರ್ದೇಶಕ ರವಿ ಬಸ್ರೂರು, ಕಲಾ ನಿರ್ದೇಶಕ ಶಿವಕುಮಾರ್ ಸೇರಿದಂತೆ ಚಿತ್ರದಲ್ಲಿ ಕೆಲಸ ಮಾಡಿರುವ ಹಲವು ತಂತ್ರಜ್ಞರು ಹಾಗೂ ಕಲಾವಿದರು  ಈ ನೆಲದ ಮಣ್ಣಿನವರಾಗಿದ್ದು, ಇದು ಕನ್ನಡದ ಪ್ರತಿಭಾ ಸಂಪತ್ತಿನ ಒಂದು ಉದಾಹರಣೆಯಷ್ಟೇ.

  • ಕೊರೊನಾ ಸೋಂಕು ತಗುಲಿ ಸ್ಪೇನ್ ಫುಟ್ಬಾಲ್ ಕೋಚ್ ಸಾವು

    ಕೊರೊನಾ ಸೋಂಕು ತಗುಲಿ ಸ್ಪೇನ್ ಫುಟ್ಬಾಲ್ ಕೋಚ್ ಸಾವು

    ಮ್ಯಾಡ್ರಿಡ್: ಸ್ಪೇನ್ ದೇಶದ ಫುಟ್ಬಾಲ್ ತಂಡವೊಂದರ ತರಬೇತುದಾರ ಫ್ರಾನ್ಸಿಸ್ಕೊ ಗಾರ್ಸಿಯಾ ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ.

    21 ವರ್ಷದ ಫ್ರಾನ್ಸಿಸ್ಕೊ ಗಾರ್ಸಿಯಾ ಅಥ್ಲೆಟಿಕೊ ಪೋರ್ಟಾಡಾ ಕ್ಲಬ್‍ನ ಕೋಚ್ ಆಗಿದ್ದರು. ಗಾರ್ಸಿಯಾ ಅವರ ನಿಧನದ ಬಗ್ಗೆ ಅಥ್ಲೆಟಿಕೊ ಪೋರ್ಟಾಡಾ ತನ್ನ ಇನ್‍ಸ್ಟಾಗ್ರಾಮ್‍ನಲ್ಲಿ ಮಾಹಿತಿ ನೀಡಿದೆ.

    https://twitter.com/FutbolBible/status/1239613119858606081

    ಗಾರ್ಸಿಯಾ ಅವರು ಅಥ್ಲೆಟಿಕೊದ ಯುವ ತಂಡದ ಮುಖ್ಯ ಕೋಚ್ ಆಗಿದ್ದರು. ಕೆಲವು ದಿನಗಳ ಹಿಂದೆ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದರೆ ಅವರು ಮೃತಪಟ್ಟಿದ್ದಾರೆ. ಅವರಿಲ್ಲದೆ ನಾವು ಏನನ್ನೂ ಸಾಧಿಸಲು ಆಗುವುದಿಲ್ಲ ಎಂದು ಪೋರ್ಟಾಡಾ ಕ್ಲಬ್ ದುಃಖ ವ್ಯಕ್ತಪಡಿಸಿದೆ.

    ತರಬೇತುದಾರ, ವ್ಯವಸ್ಥಾಪಕರ ಉಭಯ ಜವಾಬ್ದಾರಿ:
    ಗಾರ್ಸಿಯಾ ಅವರು ಸ್ಪೇನ್‍ನ ಪ್ರತಿಭಾವಂತ ಆಟಗಾರರಾರಗಿ ಗುರುತಿಸಿಕೊಂಡಿದ್ದರು. ಅಥ್ಲೆಟಿಕೊ ಪೋರ್ಡಾಟಾ ಕ್ಲಬ್‍ನಲ್ಲಿ ತರಬೇತಿಯ ಜೊತೆಗೆ ವ್ಯವಸ್ಥಾಪಕ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಕೇವಲ 21 ವರ್ಷ ವಯಸ್ಸಿನ ಗಾರ್ಸಿಯಾ ಎರಡೂ ಜವಾಬ್ದಾರಿಗಳಲ್ಲಿ ಬಳಸುತ್ತಿದ್ದ ತಂತ್ರಗಳು ಬಹಳ ಪರಿಣಾಮಕಾರಿ ಆಗಿರುತ್ತಿದ್ದವು.

    ಕ್ಲಬ್ ಏನು ಹೇಳಿದೆ?
    ಅಥ್ಲೆಟಿಕೊ ಪೋರ್ಡಾಟಾ ಇನ್‍ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಗಾರ್ಸಿಯಾ ನಿಧನವನ್ನು ಬಹಿರಂಗಪಡಿಸಲಾಗಿದೆ. ‘ಫ್ರಾನ್ಸಿಸ್ಕೊ ಗ್ರಾಸಿಯಾ ಅವರ ನಿಧನಕ್ಕೆ ನಾವು ಶೋಕಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ಗಾರ್ಸಿಯಾ ಅವರ ಕುಟುಂಬ ಮತ್ತು ಸ್ನೇಹಿತರಿಗೆ ಕ್ಲಬ್ ಸಂತಾಪ ಸೂಚಿಸಿದೆ. ಗಾರ್ಸಿಯಾ ಇಲ್ಲದೆ ನಾವು ಏನೂ ಅಲ್ಲ. ಅವರಿಲ್ಲದೆ ನಾವು ಏನು ಮಾಡಬಹುದು? ನೀವು ಇಲ್ಲದೆ ನಮ್ಮ ಪ್ರಯಾಣವು ಕಷ್ಟಕರವಾಗಿರುತ್ತದೆ ಎಂದು ನಮಗೆ ತಿಳಿದಿದೆ. ಆದರೆ ನಿಮಗಾಗಿ ನಾವು ಶ್ರಮಿಸುತ್ತೇವೆ. ನೀವು ಯಾವಾಗಲೂ ನಮ್ಮ ಹೃದಯದಲ್ಲಿ ಜೀವಂತವಾಗಿರುತ್ತೀರಿ. ಬೈ ಎಂದು’ ಬರೆಯಲಾಗಿದೆ.

    ಆದರೆ ಕೆಲವು ಮಾಧ್ಯಮ ವರದಿಯ ಪ್ರಕಾರ, ಗಾರ್ಸಿಯಾ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹೀಗಾಗಿ ಕ್ಯಾನ್ಸರ್ ನಿಂದಲೇ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಮಂಗಳವಾರ ಬೆಳಗ್ಗೆ ವೇಳೆಗೆ ಸ್ಪೇನ್‍ನಲ್ಲಿ ಒಟ್ಟು 9,942 ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಈ ಅವಧಿಯಲ್ಲಿ 342 ಜನರು ಸಾವನ್ನಪ್ಪಿದ್ದಾರೆ. ಚಿಕಿತ್ಸೆಯ ನಂತರ 532 ಜನರು ಚೇತರಿಸಿಕೊಂಡಿದ್ದಾರೆ.

    https://www.instagram.com/p/B9xFHiBqYQx/