ಡಾಲಿ ಪಿಕ್ಚರ್ಸ್ ಕನ್ನಡ ಚಿತ್ರಪ್ರೇಮಿಗಳಿಗೆ ಸದಾಭಿರುಚಿ ಸಿನಿಮಾಗಳನ್ನು ಉಣಬಡಿಸುತ್ತಿದೆ. ಕಳೆದ ವರ್ಷ ಟಗರು ಪಲ್ಯದಂತಹ ಫ್ಯಾಮಿಲಿ ಕಥೆಯನ್ನು ಪ್ರೇಕ್ಷಕರಿಗೆ ನೀಡಿದ್ದ ಈ ಸಂಸ್ಥೆ ಈಗ ವಿದ್ಯಾಪತಿ ಎಂಬ ಹೊಸ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ವಿದ್ಯಾಪತಿಯ ಮೇಕಿಂಗ್, ಫೋಟೋಗಳು ಈಗಾಗಲೇ ನಿರೀಕ್ಷೆ ಹೆಚ್ಚಿಸಿವೆ. ಇದೀಗ ಚಿತ್ರತಂಡ ವಿದ್ಯಾಪತಿಯ ಕಿತಾಪತಿ ಝಲಕ್ ಬಿಟ್ಟು ಮತ್ತಷ್ಟು ಥ್ರಿಲ್ ಹೆಚ್ಚಿಸಿದೆ.
ವಿದ್ಯಾಪತಿಯಾಗಿ ಟಗರು ಪಲ್ಯ ನಾಯಕ ನಾಗಭೂಷಣ್ (Nagabhushan) ಬಣ್ಣ ಹಚ್ಚಿದ್ದಾರೆ. ಅವರ ಹುಟ್ಟುಹಬ್ಬದ (Birthday) ವಿಶೇಷವಾಗಿ ಚಿತ್ರತಂಡ ವಿದ್ಯಾಪತಿ ಚಿತ್ರದ ಪ್ರೋಮೋ ಅನಾವರಣ ಮಾಡಿದೆ. ಜೇಬು ತುಂಬ ಕಾಸಿರೋನು ಕೊಟ್ಯಾಧಿಪತಿ..ನಿಮ್ಮನ್ನೆಲ್ಲ ಹೊಟ್ಟೆತುಂಬ ನಗಿಸುವವನೇ ನಮ್ಮ ‘ವಿದ್ಯಾಪತಿ’ ಅಂತಾ ಹೀರೋನನ್ನು ಪರಿಚಯಿಸಿದೆ. ಕರಾಟೆ ಕಿಂಗ್ ವೇಷ ತೊಟ್ಟಿರುವ ನಾಗಭೂಷಣ್ ಮಾಡುವ ಕಿತಾಪತಿ ತುಣುಕುವೊಂದನ್ನು ಬಿಡುಗಡೆ ಮಾಡಿದೆ. ಕರಾಟೆ ಕಲಿಯುವ ವೇಳೆ ವಿದ್ಯಾಪತಿ ಮಾಡುವ ಯಡವಟ್ಟು ಪ್ರೇಕ್ಷಕರಿಗೆ ಮುಖದ ಮೇಲೆ ಮಂದಹಾಸ ಮೂಡಿಸುತ್ತದೆ.
ಇಕ್ಕಟ್ ಸಿನಿಮಾ ಸೂತ್ರಧಾರರಾದ ಇಶಾಂ ಮತ್ತು ಹಸೀಂ ಖಾನ್ ವಿದ್ಯಾಪತಿ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ. ಟಗರು ಪಲ್ಯ ಮೂಲಕ ಮಸ್ತ್ ಮನರಂಜನೆ ನೀಡಿದ್ದ ನಾಗಭೂಷಣ್ ಮತ್ತೊಮ್ಮೆ ಡಾಲಿ ಧನಂಜಯ್ ಜೊತೆ ಕೈ ಜೋಡಿಸಿದ್ದಾರೆ.
ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ (Shivaraj Kumar) ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶಿವಣ್ಣನ ಜನ್ಮದಿನದ ವಿಶೇಷವಾಗಿ ರಾಶಿ ರಾಶಿ ಉಡುಗೊರೆಗಳು ಶಿವಸೈನ್ಯಕ್ಕೆ ಸಿಕ್ಕಿದೆ. ಆ ಸ್ಪೆಷಲ್ ಗಿಫ್ಟ್ ಗಳಲ್ಲಿ ತುಂಬಾನೇ ಸ್ಪೆಷಲ್ ಎನಿಸಿಕೊಂಡಿರುವುದು ಶಿವಣ್ಣನ 131ನೇ ಚಿತ್ರದ ಝಲಕ್…ಯಾಕೆ ವಿಶೇಷ ಅಂದರೆ ಈ ಹಿಂದೆ ಕನ್ನಡ ಚಿತ್ರರಂಗಕ್ಕೆ ರಾಮ್ ಗೋಪಾಲ್ ವರ್ಮಾ ಕರೆ ತಂದು ಶಿವಣ್ಣನಿಗೆ ಕಿಲ್ಲಿಂಗ್ ವೀರಪ್ಪನ್ ಸಿನಿಮಾ ಮಾಡಿಸಿದ್ದ ಸುಧೀರ್ ಮತ್ತೊಮ್ಮೆ ಕರುನಾಡ ಕಿಂಗ್ ಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ತಮಿಳಿನ ಯುವ ನಿರ್ದೇಶಕ ಕಾರ್ತಿಕ್ ಅದ್ವೈತ್ ದೊಡ್ಮನೆ ದೊರೆಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೊದಲ ಝಲಕ್ ಶಿವಣ್ಣನ ಹುಟ್ಟುಹಬ್ಬಕ್ಕೆ ಅನಾವರಣಗೊಂಡಿದೆ.
ಶಿವಣ್ಣನ ಜನ್ಮದಿನದ ಅಂಗವಾಗಿ 131ನೇ ಚಿತ್ರದ ಮೊದಲ ತುಣುಕು ಬಿಡುಗಡೆ ಮಾಡಲಾಗಿದೆ. 3 ನಿಮಿಷ 49 ಸೆಕೆಂಡ್ ಇರುವ ವಿಡಿಯೋ ತುಣುಕಿನಲ್ಲಿ ಪೊಲೀಸ್ ಸ್ಟೇಷನ್ ನಲ್ಲಿ ರಗಡ್ ಡೈಲಾಗ್ ಮೂಲಕ ಹೀರೋ ಇಂಟ್ರೂಡ್ಯೂಸ್ ಮಾಡಲಾಗುತ್ತದೆ. ಶಿವಣ್ಣನನ್ನು ಅಚ್ಯುತ್ ಕುಮಾರ್ ವರ್ಣನೆ ಮಾಡುವ ರೀತಿ ಅದ್ಭುತವಾಗಿದೆ. ಆದ್ರೆ ಶಿವಣ್ಣ ವಿಡಿಯೋದಲ್ಲಿ ಕಾಣಿಸಿಕೊಳ್ಳಲ್ಲ. ಐ ಆಮ್ ಕಮಿಂಗ್ ಎನ್ನುವ ಕರುನಾಡ ಕಿಂಗ್ ನ ಫೋಟೋ ಬಿಟ್ಟು ಚಿತ್ರತಂಡ ಥ್ರಿಲ್ ಹೆಚ್ಚಿಸಿದೆ. ಚಂಡಮಾರುತ ಮೊದಲ ಮೌನ ಎಂಬ ಅಡಿಬರಹದೊಂದಿಗೆ ಶಿವಣ್ಣನ 131ನೇ ಚಿತ್ರದ ವಿಡಿಯೋ ಝಲಕ್ ಬಿಡುಗಡೆ ಮಾಡಲಾಗಿದ್ದು, ಅಚ್ಯುತ್ ಕುಮಾರ್, ರವೀಂದ್ರ ವಿಜಯ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ.
ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ ಪಾಯುಮ್ ಒಲಿ ನೀ ಎನಕ್ಕು ಚಿತ್ರವನ್ನು ನಿರ್ದೇಶಿಸಿದ್ದ ಕಾರ್ತಿಕ್ ಅದ್ವೈತ್, ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ ಅಂಗಳಕ್ಕೆ ಎಂಟ್ರಿ ಕೊಡುತ್ತಿದ್ದಾರೆ, ಅಂದಹಾಗೇ ಇವರಿಗೆ ಇದು ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್ನಲ್ಲಿ, ವಿಭಿನ್ನ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರೆ. ಆಗಸ್ಟ್ ತಿಂಗಳಲ್ಲಿ ಮುಹೂರ್ತ ನಡೆಯಲಿದೆ. ಇತರ ಕಲಾವಿದರ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ಚಿತ್ರೀಕರಣಕ್ಕೆ ತೆರಳು ಎದುರು ನೋಡುತ್ತಿದೆ ಚಿತ್ರತಂಡ. ಸ್ಯಾಮ್ ಸಿ.ಎಸ್ ಸಂಗೀತ ಒದಗಿಸಲಿದ್ದಾರೆ. ಎ.ಜೆ ಶೆಟ್ಟಿ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ದೀಪು ಎಸ್ ಕುಮಾರ್ ಅವರ ಸಂಕಲನ ಹಾಗೂ ರವಿ ಸಂತೆಹಕ್ಲು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ. ಭುವನೇಶ್ವರಿ ಪ್ರೊಡಕ್ಷನ್ ನಡಿ ಎಸ್ ಎನ್ ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.
ಲಕ್ನೋ: ಜನವರಿ 22 ರಂದು ಪ್ರಾಣ ಪ್ರತಿಷ್ಠಾ (Pran Prathishta) ಅಥವಾ ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನಾ ಸಮಾರಂಭಕ್ಕೆ ಆಹ್ವಾನಿಸಲಾದ ಎಲ್ಲಾ ಗಣ್ಯ ಅತಿಥಿಗಳಿಗೆ (Guest) ಈ ಸಂದರ್ಭದಲ್ಲಿ ವಿಶೇಷ ಉಡುಗೊರೆಗಳನ್ನು (Special Gift) ನೀಡಲಾಗುವುದು ಎಂದು ದೇವಾಲಯದ ಟ್ರಸ್ಟ್ ಬುಧವಾರ ತಿಳಿಸಿದೆ.
ಅಯೋಧ್ಯೆಯಲ್ಲಿ (Ayodhya) ರಾಮಮಂದಿರ (Ram Mandir) ನಿರ್ಮಾಣ ಮತ್ತು ನಿರ್ವಹಣೆಗಾಗಿ ಸ್ಥಾಪಿಸಲಾದ ಟ್ರಸ್ಟ್‌ನಿಂದ ಪವಿತ್ರ ಪ್ರಸಾದದ ಜೊತೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಗೀತಾ ಪ್ರೆಸ್‌ನಿಂದ ‘ಅಯೋಧ್ಯೆ ದರ್ಶನ’ ಪುಸ್ತಕದ ಪ್ರತಿಗಳನ್ನು ನೀಡಲಾಗುತ್ತದೆ. ನಿರ್ದಿಷ್ಟವಾಗಿ, 10,000 ಪ್ರತಿ ಪುಸ್ತಕವನ್ನು ಈ ಸಂದರ್ಭಕ್ಕಾಗಿ ಮುದ್ರಿಸಲಾಗುತ್ತದೆ.
ʼಅಯೋಧ್ಯಾ ದರ್ಶನʼ ಪುಸ್ತಕದಲ್ಲಿ ಏನಿದೆ? ‘ಅಯೋಧ್ಯಾ ದರ್ಶನ’ ಪುಸ್ತಕವು ನಗರದ ಇತಿಹಾಸ, ಪುರಾತನ ಮಹತ್ವ, ರಾಮಾಯಣಕ್ಕೆ ಸಂಬಂಧಿಸಿದ ಅಧ್ಯಾಯಗಳು ಮತ್ತು ದೇವಾಲಯಗಳ ಬಗ್ಗೆ ವಿವರಗಳನ್ನು ಒಳಗೊಂಡಂತೆ ಸಮಗ್ರ ಮಾಹಿತಿಯನ್ನು ಒದಗಿಸುತ್ತದೆ. ಪುಸ್ತಕದ ಮುಖಪುಟದಲ್ಲಿ ಭಗವಾನ್ ರಾಮನ ಚಿತ್ರಣ ಮತ್ತು ರಾಮಮಂದಿರದ ಚಿತ್ರವಿದೆ. ಅಲ್ಲದೇ ಪ್ರತಿಷ್ಠಾಪನಾ ಸಮಾರಂಭದ ದಿನಾಂಕವನ್ನೂ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ: ಮತ್ತೆ 500 ಕಾರ್ಮಿಕರಿಗೆ ಬುಲಾವ್, 4000 ಕಾರ್ಮಿಕರಿಂದ ಹಗಲಿರುಳು ಕೆಲಸ
ಈ ಕಾರ್ಯಕ್ರಮದ ಭಾಗವಾಗಿ ಉಡುಗೊರೆಯಾಗಿ ಕೊಡುವ ಎಲ್ಲಾ 10,000 ಪುಸ್ತಕಗಳು ಗೋರಖ್‌ಪುರದ ಗೀತಾ ಪ್ರೆಸ್‌ನಿಂದ ‘ಸುಪ್ರೀಮ್ ಆಫರಿಂಗ್’ ಎಂಬ ಶೀರ್ಷಿಕೆಯ ವಿಶೇಷ ಟಿಪ್ಪಣಿಯನ್ನು ಒಳಗೊಂಡಿರುತ್ತದೆ. ಈ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸುವ ಎಲ್ಲಾ ಅತಿಥಿಗಳಿಗೆ ‘ಅಯೋಧ್ಯೆ ದರ್ಶನ’ ಪುಸ್ತಕವನ್ನು ನೀಡಲಾಗುವುದು. ಆದರೆ ಆಯ್ದ ಕೆಲವು ವಿಶೇಷ ಅತಿಥಿಗಳು ಮೂರು ಹೆಚ್ಚುವರಿ ಪುಸ್ತಕಗಳನ್ನು ಸ್ವೀಕರಿಸುತ್ತಾರೆ. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದ ಒಳಗಿನ ಚಿತ್ರಣ ಹೇಗಿದೆ? ಇಲ್ಲಿದೆ ಕೆಲವು ಫೋಟೋಸ್
ಸರಿಸುಮಾರು 100 ಅತಿಥಿಗಳಿಗೆ ‘ಅಯೋಧ್ಯಾ ಮಾಹಾತ್ಮ್ಯ’ (ಅಯೋಧ್ಯೆಯ ಮಹಿಮೆ), ‘ಗೀತಾ ದೈನಂದಿನಿ’ (ಗೀತಾ ಡೈರಿ), ಮತ್ತು ಭಗವಾನ್ ರಾಮನ ಕುರಿತ ಲೇಖನವನ್ನು ಒಳಗೊಂಡ ‘ಕಲ್ಯಾಣ ಪಾತ್ರ’ ಪತ್ರಿಕೆಯ ವಿಶೇಷ ಆವೃತ್ತಿಯನ್ನು ಉಡುಗೊರೆಯಾಗಿ ನೀಡಲಾಗುತ್ತದೆ. ‘ಕಲ್ಯಾಣ’ ಪತ್ರಿಕೆಯ ವಿಶೇಷ ಆವೃತ್ತಿಯನ್ನು ಮೊದಲು 1972 ರಲ್ಲಿ ಪ್ರಕಟಿಸಲಾಯಿತು. ಗೀತಾ ಪ್ರೆಸ್ ಅಯೋಧ್ಯೆಯ ವೈಭವದ ಬಗ್ಗೆ ವಿವಿಧ ಲೇಖನಗಳನ್ನು ಒಳಗೊಂಡಿರುವ ‘ಅಯೋಧ್ಯಾ ಮಾಹಾತ್ಮ್ಯ’ ಪುಸ್ತಕವನ್ನು ಸಹ ಪ್ರಸ್ತುತಪಡಿಸುತ್ತದೆ. ಆರ್ಟ್ ಪೇಪರ್‌ನಲ್ಲಿ 45 ಪುಟಗಳ ಮುದ್ರಿತ ಚಿತ್ರಗಳನ್ನು ಹೊಂದಿರುವ ಈ ಪುಸ್ತಕವು ಓದುಗರಿಗೆ ದೃಶ್ಯ ರಸದೌತಣವಾಗಿದೆ. ಇದನ್ನೂ ಓದಿ: 39 ದಿನಗಳಲ್ಲಿ ಶಬರಿಮಲೆಗೆ 204 ಕೋಟಿ ರೂ. ಆದಾಯ- ಕಳೆದ ವರ್ಷ ಎಷ್ಟಿತ್ತು?
ʼಗೀತಾ ದೈನಂದಿನಿʼ ಡೈರಿಯ ವಿಶೇಷತೆಯೇನು? ಇದಲ್ಲದೆ, ಹೊಸ ವರ್ಷ ಪ್ರಾರಂಭವಾಗುತ್ತಿದ್ದಂತೆ, ಗೀತಾ ಪ್ರೆಸ್ ಇಂಗ್ಲಿಷ್ ಮತ್ತು ಹಿಂದಿ ದಿನಾಂಕಗಳೊಂದಿಗೆ ಭಗವದ್ಗೀತೆಯ ಶ್ಲೋಕಗಳನ್ನು ಒಳಗೊಂಡಿರುವ ‘ಗೀತಾ ದೈನಂದಿನಿ’ ಡೈರಿಯನ್ನು ನೀಡುತ್ತದೆ. ದಿನಚರಿಯು ಉಪವಾಸ, ಹಬ್ಬಗಳು ಮತ್ತು ಸೂರ್ಯೋದಯ ಮತ್ತು ಸೂರ್ಯಾಸ್ತದ ಸಮಯದ ಬಗ್ಗೆ ವಿವರಗಳನ್ನು ಒಳಗೊಂಡಿದೆ. ಇದು ವರ್ಷವಿಡೀ ಮಾಹಿತಿಯನ್ನು ಹುಡುಕುವ ವ್ಯಕ್ತಿಗಳಿಗೆ ಜನಪ್ರಿಯ ಆಯ್ಕೆಯಾಗಿದೆ. ಇದನ್ನೂ ಓದಿ: Ayodhya Ram Mandir – ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯರ ಕಂಪ್ಲೀಟ್ ಲಿಸ್ಟ್
ದೇವಾಲಯದ ಮೊದಲ ಹಂತವು ಪೂರ್ಣಗೊಳ್ಳುವ ಹಂತದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22 ರಂದು ರಾಮಲಲ್ಲಾ ವಿಗ್ರಹದ ‘ಪ್ರಾಣ ಪ್ರತಿಷ್ಠೆ’ಯಲ್ಲಿ ಭಾಗವಹಿಸಲಿದ್ದಾರೆ. ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾದ ದೇವಾಲಯದ ಸಂಕೀರ್ಣವು 380 ಅಡಿ ಉದ್ದ (ಪೂರ್ವ-ಪಶ್ಚಿಮ ದಿಕ್ಕು), 250 ಅಡಿ ಅಗಲ ಮತ್ತು 161 ಅಡಿ ಎತ್ತರವಿದೆ. ದೇವಾಲಯದ ಪ್ರತಿಯೊಂದು ಮಹಡಿಯು 20 ಅಡಿ ಎತ್ತರ ಮತ್ತು ಒಟ್ಟು 392 ಕಂಬಗಳು ಮತ್ತು 44 ದ್ವಾರಗಳನ್ನು ಹೊಂದಿದೆ. ಇದನ್ನೂ ಓದಿ: Ram Mandir: ಭಗವಾನ್ ರಾಮನ ಅಜ್ಜಿ ಮನೆಯಿಂದ 3,000 ಕ್ವಿಂಟಾಲ್ ಅಕ್ಕಿ, ಅತ್ತೆ ಮನೆಯಿಂದ 1,100 ತಟ್ಟೆ ಉಡುಗೊರೆ