Tag: Spooky College

  • ‘ಮೆಲ್ಲುಸಿರೆ ಸವಿಗಾನ’ ಹಾಡಿಗೆ ಸೊಂಟ ಬಳುಕಿಸಿದ ರೀಷ್ಮಾ ನಾಣಯ್ಯ

    ‘ಮೆಲ್ಲುಸಿರೆ ಸವಿಗಾನ’ ಹಾಡಿಗೆ ಸೊಂಟ ಬಳುಕಿಸಿದ ರೀಷ್ಮಾ ನಾಣಯ್ಯ

    ರವತ್ತರ ದಶಕದಲ್ಲಿ ಡಾ.ರಾಜ್ ಹಾಗೂ ಲೀಲಾವತಿ ಅಭಿನಯಿಸಿದ್ದ “ವೀರಕೇಸರಿ” ಚಿತ್ರದ  “ಮೆಲ್ಲುಸಿರೆ ಸವಿಗಾನ” ಹಾಡನ್ನು “ಸ್ಪೂಕಿ ಕಾಲೇಜ್” ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. “ಏಕ್ ಲವ್ ಯಾ” ಚಿತ್ರದ ಖ್ಯಾತಿಯ ರೀಷ್ಮಾ ನಾಣಯ್ಯ ಈ ಸುಮಧುರ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಹಿರಿಯ ನಿರ್ದೇಶಕ ಭಗವಾನ್, ಸಾಹಿತಿ ಪದ್ಮಶ್ರೀ ದೊಡ್ಡರಂಗೇಗೌಡ ಹಾಗೂ ಪತ್ರಕರ್ತ ಬಿ.ಗಣಪತಿ ಅವರು ಈ ಹಾಡನ್ನು ಬಿಡುಗಡೆ ಮಾಡಿದರು.

    ಆ ಕಾಲದಲ್ಲಿ ಸಿನಿಮಾ ಮಾಡುವುದು ಅಷ್ಟು ಸುಲಭ ಇರಲಿಲ್ಲ. ಈಗ ಹಾಗಲ್ಲ ತಂತ್ರಜ್ಞಾನ ಮುಂದುವರೆದಿದೆ. “ಮೆಲ್ಲುಸಿರೆ ಸವಿಗಾನ” ಹಾಡಿಗೆ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಈ ಚಿತ್ರದಲ್ಲಿ ಬಳಸಿಕೊಂಡಿದ್ದಾರೆ.  ರೀಷ್ಮಾ ನಾಣಯ್ಯ ಅಭಿನಯ, ಭೂಷಣ್ ನೃತ್ಯ ನಿರ್ದೇಶನ‌ ಎಲ್ಲವೂ ಚೆನ್ನಾಗಿದೆ. ನಿರ್ದೇಶಕ ಭರತ್ ನನ್ನ ಶಿಷ್ಯ. ಚಿತ್ರಕ್ಕೆ ಒಳ್ಳೆಯ ನಾಯಕಿ ಎಂದರು ಹಿರಿಯ ನಿರ್ದೇಶಕ ಭಗವಾನ್. ಅರವತ್ತರ ದಶಕದ ಈ ಹಾಡನ್ನು ಈಗಿನ ರೀತಿಗೆ ಚಿತ್ರೀಕರಿಸುವುದು ಕಷ್ಟಸಾಧ್ಯ. ಅದರೆ ಅದನ್ನು ನಿರ್ದೇಶಕ ಭರತ್ ಸಾಧ್ಯವಾಗಿಸಿದ್ದಾರೆ ಎಂದು ಸಾಹಿತಿ ದೊಡ್ಡರಂಗೇಗೌಡ ತಿಳಿಸಿದರು. ಇದನ್ನೂ ಓದಿ:ಸಾರಾ ಜೊತೆಗಿನ ಡೇಟಿಂಗ್ ಬಗ್ಗೆ ಸ್ಪಷ್ಟನೆ ನೀಡಿದ ಕ್ರಿಕೆಟಿಗ ಶುಭಮನ್ ಗಿಲ್

    ಈ ಹಾಡನ್ನು ದಾಂಡೇಲಿಯಲ್ಲಿ ಸುಮಾರು 250ಕ್ಕೂ ಅಧಿಕ ತಂತ್ರಜ್ಞರ ಪಾಲ್ಗೊಳ್ಳುವಿಕೆಯಲ್ಲಿ ಚಿತ್ರಿಸಿಕೊಳ್ಳಲಾಯಿತು. ಭೂಷಣ್ ಒಳ್ಳೆಯ ದಾಗ ಬಲಿ ನಿರ್ದೇಶನದಲ್ಲಿ ರೀಷ್ಮಾ ನಾಣಯ್ಯ ಈ ಹಾಡುಗೆ ಹೆಜ್ಜೆ ಹಾಕಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಐಶ್ವರ್ಯ ರಂಗರಾಜನ್ ಗಾಯನ ಹಾಗೂ ಮನೋಹರ್ ಜೋಷಿ ಅವರ ಛಾಯಾಗ್ರಹಣ ಈ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ವಿಶ್ವಾಸ್ ಕಲಾ ನಿರ್ದೇಶನ ಕೂಡ ಕಣ್ಮನ ಸೆಳೆಯುತ್ತದೆ. ಹಾಡು ಹಾಗೂ ಚಿತ್ರ ಅದ್ದೂರಿಯಾಗಿ ಮೂಡಿಬರಲು ನಿರ್ಮಾಪಕ ಹೆಚ್ ಕೆ ಪ್ರಕಾಶ್ ಅವರ ಸಹಕಾರ ಹಾಗೂ ನನ್ನ ಚಿತ್ರತಂಡದ ಶ್ರಮ ಕಾರಣ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ. ಪ್ರೋತ್ಸಾಹಿಸಿ ಎಂದರು ನಿರ್ದೇಶಕ ಭರತ್ ಜಿ.

    ಹಾಡಿನ ಬಗ್ಗೆ ರೀಷ್ಮಾ ನಾಣಯ್ಯ, ಚಿತ್ರದ ಬಗ್ಗೆ ನಾಯಕ ವಿವೇಕ್ ಸಿಂಹ, ನಾಯಕಿ ಖುಷಿ ರವಿ, ಛಾಯಾಗ್ರಾಹಕ ಮನೋಹರ್ ಜೋಷಿ ಮುಂತಾದವರು ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

  • ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಕೇಳಿ ಬರಲಿದೆ ‘ಮೆಲ್ಲುಸಿರೆ ಸವಿಗಾನ’ ಹಾಡು

    ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಕೇಳಿ ಬರಲಿದೆ ‘ಮೆಲ್ಲುಸಿರೆ ಸವಿಗಾನ’ ಹಾಡು

    ಕ್ರಿಯಾಶೀಲ ನಿರ್ದೇಶಕ ಭರತ್ ಜಿ ನಿರ್ದೇಶಿಸಿರುವ “ಸ್ಪೂಕಿ ಕಾಲೇಜ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ತೆರೆಗೆ ಬರಲು ಅಣಿಯಾಗುತ್ತಿದೆ. ಧಾರವಾಡದ ಶತಕಕ್ಕೂ ಮೀರಿದ ಇತಿಹಾಸವಿರುವ ಪುರಾತನ ಕಾಲೇಜಿನಲ್ಲಿ ಈ ಚಿತ್ರದ ಬಹುತೇಕ ಚಿತ್ರೀಕರಣ ನಡೆದಿದೆ. ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ದಾಂಡೇಲಿ ಅಭಯಾರಣ್ಯದಲ್ಲಿ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಡೆದಿದೆ.

    ಟೀಸರ್ ಮೂಲಕ ಈಗಾಗಲೇ ಜನಮನ ಗೆದ್ದಿರುವ “ಸ್ಪೂಕಿ ಕಾಲೇಜ್” ಚಿತ್ರದಲ್ಲಿ ಡಾ||ರಾಜಕುಮಾರ್ ಅಭಿನಯದ “ವೀರಕೇಸರಿ” ಚಿತ್ರದ ಜನಪ್ರಿಯ “ಮೆಲ್ಲುಸಿರೆ ಸವಿಗಾನ” ಹಾಡನ್ನು ಬಳಸಿಕೊಳ್ಳಲಾಗಿದೆ.‌ ಈ ಹಾಡಿಗೆ ರೀಷ್ಮಾ ನಾಣಯ್ಯ ಹೆಜ್ಜೆ ಹಾಕಿದ್ದಾರೆ.   ಈ ಹಾಡು ಇದೇ ನವೆಂಬರ್ 14ರಂದು ಬಿಡುಗಡೆಯಾಗಲಿದೆ.  ಇದನ್ನೂ ಓದಿ:ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಅಶೋಕ್ ಕಶ್ಯಪ್

    ಭೂಷಣ್ ಅವರ ನೃತ್ಯ ನಿರ್ದೇಶನದಲ್ಲಿ, 250 ಕ್ಕೂ ಅಧಿಕ ತಂತ್ರಜ್ಞರ ಪಾಲ್ಗೊಳ್ಳುವಿಕೆಯಲ್ಲಿ, ಅದ್ಭುತವಾದ ಸೆಟ್ ನಲ್ಲಿ ಈ ಹಾಡು ಚಿತ್ರೀಕರಣವಾಗಿದೆ. “ರಂಗಿತರಂಗ” , “ಅವನೇ ಶ್ರೀಮನ್ನಾರಾಯಣ” ಚಿತ್ರಗಳ ನಿರ್ಮಾಪಕ ಹೆಚ್.ಕೆ.ಪ್ರಕಾಶ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.  ಕಥೆ, ಚಿತ್ರಕಥೆ ಹಾಗು ಸಂಭಾಷಣೆಯನ್ನು ನಿರ್ದೇಶಕ ಭರತ್ ಅವರೆ ಬರೆದಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಹಾಗೂ ಶ್ರೀಕಾಂತ್ (ಕೆ ಜಿ ಎಫ್) ಅವರ ಸಂಕಲನ ಈ ಚಿತ್ರಕ್ಕಿದೆ.

     “ಪ್ರೀಮಿಯರ್ ಪದ್ಮಿನಿ” ಖ್ಯಾತಿಯ ವಿವೇಕ್ ಸಿಂಹ “ಸ್ಪೂಕಿ ಕಾಲೇಜ್” ನ ನಾಯಕ. “ದಿಯಾ” ಮೂಲಕ ಹೆಸರಾಗಿರುವ ಖುಷಿ ರವಿ ನಾಯಕಿ.  ಅಜಯ್ ಪೃಥ್ವಿ, ಹನುಮಂತೇ ಗೌಡ, ಕೆ.ಎಸ್.ಶ್ರೀಧರ್, ವಿಜಯ್ ಚೆಂಡೂರ್, ಶರಣ್ಯ ಶೆಟ್ಟಿ, ರಘು ರಮಣಕೊಪ್ಪ ಹಾಗೂ “ಕಾಮಿಡಿ ಕಿಲಾಡಿಗಳು” ಶೋನ‌ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ರೀಷ್ಮಾ ನಾಣಯ್ಯ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೆಲ್ಲುಸಿರೆ ಸವಿಗಾನವನ್ನು ಮತ್ತೆ ನೆನಪಿಸಿದ ಸ್ಪೂಕಿ ಕಾಲೇಜಿನ ರೀಷ್ಮಾ ನಾಣಯ್ಯ

    ಮೆಲ್ಲುಸಿರೆ ಸವಿಗಾನವನ್ನು ಮತ್ತೆ ನೆನಪಿಸಿದ ಸ್ಪೂಕಿ ಕಾಲೇಜಿನ ರೀಷ್ಮಾ ನಾಣಯ್ಯ

    ನಿರ್ದೇಶಕ ಭರತ್ ಜಿ ನಿರ್ದೇಶಿಸುತ್ತಿರುವ “ಸ್ಪೂಕಿ ಕಾಲೇಜ್” ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಪೋಸ್ಟರ್, ಫಸ್ಟ್ ಲುಕ್ ಮೂಲಕ ಈಗಾಗಲೇ ಜನಮನ ಗೆದ್ದಿರುವ “ಸ್ಪೂಕಿ ಕಾಲೇಜ್” ಚಿತ್ರದ ಹಾಡೊಂದಕ್ಕೆ “ಏಕ್ ಲವ್ ಯಾ” ಬೆಡಗಿ ರೀಷ್ಮಾ ನಾಣಯ್ಯ ಹೆಜ್ಜೆ ಹಾಕಿದ್ದಾರೆ. ಡಾ||ರಾಜಕುಮಾರ್ ಅಭಿನಯದ “ವೀರಕೇಸರಿ” ಚಿತ್ರದ “ಮೆಲ್ಲುಸಿರೆ ಸವಿಗಾನ” ಹಾಡನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ನೂತನ ಶೈಲಿಯಲ್ಲಿ ಈ ಹಾಡು ಮೂಡಿಬಂದಿದೆ. ಭೂಷಣ್ ನೃತ್ಯ ನಿರ್ದೇಶನ ಮಾಡಿರುವ ಈ ಹಾಡಿಗೆ ರೀಷ್ಮಾ ನಾಣಯ್ಯ ಅದ್ಭುತವಾಗಿ ನೃತ್ಯ ಮಾಡಿದ್ದಾರೆ.

    ಈ ಹಾಡನ್ನು ನಾವು ಬಲವಂತವಾಗಿ ತುರುಕಿಲ್ಲ. ಚಿತ್ರದ ಕಥೆಯನ್ನು ಹೇಳುವ ಹಾಡೊಂದು ಬೇಕಿತ್ತು. “ಮೆಲ್ಲುಸಿರೆ ಸವಿಗಾನ” ಹಾಡನ್ನು ಕೇಳಿದಾಗ, ಈ ಅದ್ಭುತ ಹಾಡು ಸೂಕ್ತ ಎನಿಸಿತು. ಹಾಗಾಗಿ ಈ ಹಾಡನ್ನು ಆಯ್ಕೆ ಮಾಡಿಕೊಂಡೆವು. ದಾಂಡೇಲಿಯ ಅರಣ್ಯ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅದ್ಭುತ ಸೆಟ್ ನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ. 250 ಕ್ಕೂ ಅಧಿಕ ತಂತ್ರಜ್ಞರ ಪಾಲ್ಗೊಳ್ಳುವಿಕೆಯಲ್ಲಿ ಈ ಹಾಡು ಅದ್ದೂರಿಯಾಗಿ ಬಂದಿದೆ ಎಂದು ಮಾಹಿತಿ ನೀಡಿರುವ ನಿರ್ದೇಶಕ ಭರತ್, ಹಾಡು ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ನಿರ್ಮಾಪಕ ಹೆಚ್.ಕೆ. ಪ್ರಕಾಶ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ‘ಜೊತೆ ಜೊತೆಯಲಿ’ ಧಾರಾವಾಹಿ: ಆರ್ಯವರ್ಧನ್ ಅಲ್ಲ, ಅವನ ಸಹೋದರನ ಪಾತ್ರದಲ್ಲಿ ಹರೀಶ್ ರಾಜ್

    ಈ ಹಾಡಿನಲ್ಲಿ ಅಭಿನಯಿಸುವುದಕ್ಕೆ ರೀಷ್ಮಾ ನಾಣಯ್ಯ ಸಾಕಷ್ಟು ತಯಾರಿ ಮಾಡಿಕೊಂಡಿದರಂತೆ‌. ಅಣ್ಣವ್ರು ಅಭಿನಯಿಸಿದ್ದ ಜನಪ್ರಿಯ ಹಾಡಿಗೆ ನಾನು ನೃತ್ಯ ಮಾಡಿರುವುದು ಖುಷಿಯಾಗಿದೆ ಎನ್ನುತ್ತಾರೆ ರೀಷ್ಮಾ ನಾಣಯ್ಯ. “ಸ್ಪೂಕಿ ಕಾಲೇಜ್” ನ ಬಹುತೇಕ ಚಿತ್ರೀಕರಣ ಧಾರವಾಡದ ನೂರಕ್ಕೂ ಅಧಿಕ ವರ್ಷಗಳ ಇತಿಹಾಸವಿರುವ ಕಾಲೇಜೊಂದರಲ್ಲಿ ನಡೆದಿದೆ. ಅರಣ್ಯ ಭಾಗದ ಚಿತ್ರೀಕರಣವನ್ನು ದಾಂಡೇಲಿಯಲ್ಲಿ ಚಿತ್ರಿಸಲಾಗಿದೆ. ಆನಂತರ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. “ರಂಗಿತರಂಗ” , “ಅವನೇ ಶ್ರೀಮನ್ನಾರಾಯಣ” ಚಿತ್ರಗಳ ನಿರ್ಮಾಪಕ ಹೆಚ್.ಕೆ.ಪ್ರಕಾಶ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.  ಕಥೆ, ಚಿತ್ರಕಥೆ ಹಾಗು ಸಂಭಾಷಣೆಯನ್ನು ನಿರ್ದೇಶಕ ಭರತ್ ಅವರೆ ಬರೆದಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಹಾಗೂ ಶ್ರೀಕಾಂತ್ (ಕೆ ಜಿ ಎಫ್) ಅವರ ಸಂಕಲನ ಈ ಚಿತ್ರಕ್ಕಿದೆ.

     “ಪ್ರೀಮಿಯರ್ ಪದ್ಮಿನಿ” ಖ್ಯಾತಿಯ ವಿವೇಕ್ ಸಿಂಹ “ಸ್ಪೂಕಿ ಕಾಲೇಜ್” ನ ನಾಯಕ. “ದಿಯಾ” ಮೂಲಕ ಹೆಸರಾಗಿರುವ ಖುಷಿ ರವಿ ನಾಯಕಿ.  ಅಜಯ್ ಪೃಥ್ವಿ, ಹನುಮಂತೇ ಗೌಡ, ಕೆ.ಎಸ್.ಶ್ರೀಧರ್, ವಿಜಯ್ ಚೆಂಡೂರ್, ಶರಣ್ಯ ಶೆಟ್ಟಿ, ರಘು ರಮಣಕೊಪ್ಪ ಹಾಗೂ “ಕಾಮಿಡಿ ಕಿಲಾಡಿಗಳು” ಶೋನ‌ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ರೀಷ್ಮಾ ನಾಣಯ್ಯ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]