Tag: Sports City

  • ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ʻಚಿನ್ನʼ ಗೆದ್ದವರಿಗೆ 6 ಕೋಟಿ ರೂ. ಗಿಫ್ಟ್‌ – ಬೆಂಗ್ಳೂರಿಗೇ ಬರಲಿದೆ ʻಕ್ರೀಡಾ ನಗರʼ

    ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ʻಚಿನ್ನʼ ಗೆದ್ದವರಿಗೆ 6 ಕೋಟಿ ರೂ. ಗಿಫ್ಟ್‌ – ಬೆಂಗ್ಳೂರಿಗೇ ಬರಲಿದೆ ʻಕ್ರೀಡಾ ನಗರʼ

    – ಬೆಳ್ಳಿ ಪದಕ ವಿಜೇತರಿಗೆ 6 ಕೋಟಿ ರೂ, ಕಂಚಿನ ಪದಕ ವಿಜೇತರಿಗೆ 3 ಕೋಟಿ ರೂ. ಪ್ರೋತ್ಸಾಹಧನ

    ಬೆಂಗಳೂರು: ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics 2024) ಚಿನ್ನದ ಪದಕ ಗಳಿಸುವ ಕ್ರೀಡಾಪಟುಗಳಿಗೆ 6 ಕೋಟಿ ರೂ., ಬೆಳ್ಳಿ ಪದಕ ಪಡೆಯುವ ಕ್ರೀಡಾಪಟುಗಳಿಗೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಪಡೆಯುವ ಕ್ರೀಡಾಪಟುಗಳಿಗೆ 03 ಕೋಟಿ ರೂ. ಪ್ರೋತ್ಸಾಹಧನ ಘೋಷಣೆ. ಇದನ್ನೋ ಓದಿ: Karnataka Budget 2024: ಸರ್ಕಾರಕ್ಕೆ 1 ರೂಪಾಯಿ ಬಂದಿದ್ದು ಎಲ್ಲಿಂದ? 1 ರೂ. ಹೋಗಿದ್ದು ಎಲ್ಲಿಗೆ?

    ಇದೇ 2024ರ ಜುಲೈ 26ರಿಂದ ಆಗಸ್ಟ್‌ 11ರ ವರೆಗೆ ಪ್ಯಾರಿಸ್‌ನಲ್ಲಿ ಒಲಿಂಪಿಕ್ಸ್‌ ಕ್ರೀಡಾಹಬ್ಬ ನಡೆಯಲಿದೆ. ಕ್ರೀಡೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಪ್ರೋತ್ಸಾಹ ಧನ ಘೋಷಣೆ ಮಾಡಲಾಗಿದೆ. ಇದನ್ನೋ ಓದಿ: ಮೈಸೂರು ಏರ್‌ಪೋರ್ಟ್‌ ರನ್‌ವೇ ವಿಸ್ತರಣೆಗೆ ಅನುದಾನ ಘೋಷಣೆ – ತವರು ಜಿಲ್ಲೆಗೆ ಸಿಎಂ ಕೊಡುಗೆ ಏನು?

    ಕ್ರೀಡಾ ಕ್ಷೇತ್ರಕ್ಕೆ ಸಿಎಂ ಕೊಡುಗೆ ಅಪಾರ:

    * ಕ್ರೀಡಾಪಟುಗಳಿಗೆ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಶೇ.2 ರಷ್ಟು ಹುದ್ದೆ ಮೀಸಲು.

    * ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ 70 ಎಕರೆ ಪ್ರದೇಶದಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾ ನಗರ (Sports City) ಸ್ಥಾಪನೆ ಹಾಗೂ 4 ಅತ್ಯಾಧುನಿಕ ಕ್ರೀಡಾ ಸಂಕೀರ್ಣಗಳ ನಿರ್ಮಾಣ.

    * ರಾಜ್ಯದ ವಿವಿಧ ಕ್ರೀಡಾ ಸಂಘ ಸಂಸ್ಥೆಗಳಿಗೆ 12 ಕೋಟಿ ರೂ. ಅನುದಾನ

    * ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗಳಿಸುವ ಕ್ರೀಡಾಪಟುಗಳಿಗೆ 6 ಕೋಟಿ ರೂ., ಬೆಳ್ಳಿ ಪದಕ ಪಡೆಯುವ ಕ್ರೀಡಾಪಟುಗಳಿಗೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಪಡೆಯುವ ಕ್ರೀಡಾಪಟುಗಳಿಗೆ 03 ಕೋಟಿ ರೂ. ಪ್ರೋತ್ಸಾಹಧನ ಘೋಷಣೆ.

    • ಏಷ್ಯನ್‌ ಮತ್ತು ಕಾಮನ್‌ವೆಲ್ತ್‌ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ 35 ಲಕ್ಷ ರೂ., ಬೆಳ್ಳಿ ಪದಕ ವಿಜೇತ ಕ್ರೀಡಾಪಟುಗಳಿಗೆ 25 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತ ಕ್ರೀಡಾಪಟುಗಳಿಗೆ 15 ಲಕ್ಷ ರೂ. ಪ್ರೋತ್ಸಾಹಧನ ನೀಡಲು ಕ್ರಮ.

    * ರಾಜ್ಯದ 14 ಸ್ಥಳಗಳಲ್ಲಿ ಮುಂದಿನ ಎರಡು ವರ್ಷದೊಳಗೆ 35 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯ, ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡ ನಿರ್ಮಾಣ ಹಾಗೂ 10 ಕೋಟಿ ರೂ. ವೆಚ್ಚದಲ್ಲಿ ಬಳ್ಳಾರಿಯಲ್ಲಿ ಕ್ರೀಡಾ ವಸತಿ ನಿಲಯದ ಉನ್ನತೀಕರಣ ಹಾಗೂ ಕ್ರೀಡಾ ಸೌಕರ್ಯಗಳ ಅಭಿವೃದ್ಧಿಗೆ ಕ್ರಮ.