Tag: sports coach

  • ಕ್ರೀಡಾ ತರಬೇತುದಾರನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ವಿದ್ಯಾರ್ಥಿಗಳಿಂದ ಪ್ರತಿಭಟನೆ

    ಕ್ರೀಡಾ ತರಬೇತುದಾರನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ವಿದ್ಯಾರ್ಥಿಗಳಿಂದ ಪ್ರತಿಭಟನೆ

    ಶಿವಮೊಗ್ಗ: ಕ್ರೀಡಾ ತರಬೇತುದಾರನೋರ್ವ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಪರಿಣಾಮ ವಿದ್ಯಾರ್ಥಿಗಳು ತರಬೇತುದಾರನ ವಿರುದ್ಧ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ.

    ಶಿವಮೊಗ್ಗದ ನೆಹರು ಕ್ರೀಡಾಂಗಣದ ಅಥ್ಲೆಟಿಕ್ಸ್ ಕ್ರೀಡಾ ತರಬೇತುದಾರ ಬಾಳಪ್ಪ ಮಾನೆ ಎಂಬಾತ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಕೊಟ್ಟು ಅವಾಚ್ಯ ಪದಗಳಿಂದ ನಿಂದನೆ ಮಾಡುತ್ತಿದ್ದನು. ಈಗಾಗಿ ನೊಂದ ವಿದ್ಯಾರ್ಥಿಗಳು ಕ್ರೀಡಾ ತರಬೇತುದಾರನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಮುಂಬರುವ ವಾರಗಳಲ್ಲಿ ಓಮಿಕ್ರಾನ್ ಅಲೆ ತೀವ್ರಗೊಳ್ಳಬಹುದು ಎಂದ ತಜ್ಞರು!

    ಈ ವಿಚಾರವಾಗಿ ಸಂಬಂಧಪಟ್ಟ ಕ್ರೀಡಾಧಿಕಾರಿಗಳಿಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಹಲವು ಬಾರಿ ಮನವಿ ನೀಡಿದ್ದರೂ, ಸಹ ಈ ತರಬೇತುದಾರನ ವಿರುದ್ಧ ಕ್ರೀಡಾ ಇಲಾಖೆ ಅಧಿಕಾರಿ ಯಾವುದೇ ಕ್ರಮ ಜರುಗಿಸಿಲ್ಲ ಎಂದು ದೂರಿದ್ದಾರೆ.

    ಈ ಸಂಬಂಧ ಪೋಷಕರು ಹಾಗೂ ವಿದ್ಯಾರ್ಥಿಗಳು ಪ್ರಶ್ನಿಸಿದ್ದು, ಅವರಿಗೆ ಸಬೂಬು ಹೇಳಿ ಕಳುಹಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಕ್ರೀಡಾ ಹಾಸ್ಟೆಲ್ ನಲ್ಲಿ ಗ್ರಾಮೀಣ ಭಾಗದ ಕ್ರೀಡಾಪಟು ವಿದ್ಯಾರ್ಥಿಗಳು, ಅತಿ ಹೆಚ್ಚಾಗಿ ಅಭ್ಯಾಸ ಮಾಡುತ್ತಿದ್ದರು.

    ಈ ವೇಳೆ ತರಬೇತುದಾರನಿಂದ ಆದಂತಹ ದೌರ್ಜನ್ಯವನ್ನು ಮೇಲಾಧಿಕಾರಿಗಳಿಗೆ ತಿಳಿಸಿದರೆ ಆ ತರಬೇತುದಾರ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ದೂರಿದ್ದಾರೆ. ಈ ಕೂಡಲೇ, ಜಿಲ್ಲಾಧಿಕಾರಿಗಳು, ತರಬೇತುದಾರರನ್ನು ಅಮಾನತು ಮಾಡುವಂತೆ ವಿದ್ಯಾರ್ಥಿಗಳು ಹಾಗು ಪೋಷಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಧಿಕೃತ ಸಭೆ ಅಲ್ಲ ಎಂದಿದ್ದ ಬಾಲಚಂದ್ರ ಜಾರಕಿಹೊಳಿಗೆ ಕತ್ತಿ ಟಾಂಗ್