Tag: sports university

  • ರಾಜ್ಯದಲ್ಲಿ ಕ್ರೀಡಾ ವಿವಿ ಸ್ಥಾಪನೆಗೆ ಕ್ರಮ: ನಾರಾಯಣ ಗೌಡ

    ರಾಜ್ಯದಲ್ಲಿ ಕ್ರೀಡಾ ವಿವಿ ಸ್ಥಾಪನೆಗೆ ಕ್ರಮ: ನಾರಾಯಣ ಗೌಡ

    ಬೆಳಗಾವಿ: ಕರ್ನಾಟಕದಲ್ಲಿ ಶೀಘ್ರದಲ್ಲೇ ಕ್ರೀಡಾ ವಿವಿ ಸ್ಥಾಪನೆಗೆ ಕ್ರಮವಹಿಸುವುದಾಗಿ ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

    ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಕೊಡಗಿನಿಂದಲೂ ಪ್ರಸ್ತಾವನೆ ಬಂದಿದೆ. ಆದರೆ ವಿವಿ ಸ್ಥಾಪನೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ನಿಯಮಗಳ ಅನ್ವಯ ಪರಿಶೀಲನೆ ನಡೆಸಿ ಸೂಕ್ತ ಜಾಗದಲ್ಲಿ ರಾಜ್ಯದ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ – ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ

    ಕೊಡಗು ಕ್ರೀಡೆ ಮೂಲಕ ರಾಜ್ಯ ಮತ್ತು ದೇಶಕ್ಕೆ ಕೀರ್ತಿ ತಂದ ಜಿಲ್ಲೆ.‌ ಕೊಡಗು ಜಿಲ್ಲೆಗೆ ವಿವಿಧ ಕ್ರೀಡಾ ಯೋಜನೆಗಳಿಗೆ ಪ್ರಸಕ್ತ ಸಾಲಿನಲ್ಲಿ ಇಲಾಖೆಯಿಂದ 2.18 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಅಲ್ಲದೇ ಕೊಡಗು ಜಿಲ್ಲೆಯ ಕೂಡಿಗೆಯಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಹಾಕಿ ಟರ್ಫ್ ನಿರ್ಮಿಸಲಾಗಿದೆ. ಇಲ್ಲಿನ ಕ್ರೀಡಾ ಶಾಲೆಯಲ್ಲಿ ಒಟ್ಟು 290 ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರೋಹಿತ್, ಜಡೇಜಾ ಪ್ರಾಕ್ಟೀಸ್