Tag: Sreeramulu

  • ಪ್ರಣಾಳಿಕೆಗೆ ತಕ್ಕಂತೆ ನಡೆಯದಿದ್ದರೆ ಪ್ರತಿಭಟನೆ ಎದುರಿಸಿ: ಶ್ರೀರಾಮುಲು

    ಪ್ರಣಾಳಿಕೆಗೆ ತಕ್ಕಂತೆ ನಡೆಯದಿದ್ದರೆ ಪ್ರತಿಭಟನೆ ಎದುರಿಸಿ: ಶ್ರೀರಾಮುಲು

    ರಾಯಚೂರು: ಪ್ರಣಾಳಿಕೆಯನ್ನು ಕಾರ್ಯರೂಪಕ್ಕೆ ತರಬೇಕು, ಇಲ್ಲದಿದ್ದರೆ ಒಂದು ಕ್ಷಣ ಕೂಡ ನೀವು ಅಧಿಕಾರದಲ್ಲಿ ಉಳಿಯದಂತೆ ಪ್ರತಿಭಟನೆ ಮಾಡುತ್ತೇವೆ ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ.

    ವಿಧಾನ ಪರಿಷತ್ ಪದವಿಧರ ಕ್ಷೇತ್ರದ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಜಿಲ್ಲೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕ್‍ಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

    ರೈತರ ಸಾಲ ಮನ್ನಾ ಮಾಡದಿದ್ದರೆ ವಿಧಾನಸಭೆ ಹೊರಗೆ ಹಾಗೂ ಒಳಗೆ ಹೋರಾಟ ಮಾಡುತ್ತೇವೆ. ಹೋರಾಟ ಮಾಡುವ ಹಕ್ಕಿದೆ. ಮುಖ್ಯಮಂತ್ರಿಗಳಾಗಿ ಅವರು ಏನು ಕ್ರಮಬೇಕಾದರೂ ತಗೆದುಕೊಳ್ಳಲಿ. ಬೆಂಗಳೂರು ಹೊರತುಪಡೆಸಿ ರಾಜ್ಯದ ವಿವಿಧೆಡೆ ಬಂದ್ ಕೈಗೊಳ್ಳಲಾಗುವುದು. ರೈತರಿಗಾಗಿ ನಾವು ಹೋರಾಟ ಮಾಡುತ್ತಿದ್ದು ಅವರು ಬೆಂಬಲ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಬಿಜೆಪಿಯು ಕಾಂಗ್ರೆಸ್ ಹಾಗೂ ಜೆಡಿಎಸ್ ಗಿಂತ ಹೆಚ್ಚು ಸ್ಥಾನ ಪಡೆದಿತ್ತು. ನಾವು ರೈತರ ಸಾಲ ಮನ್ನಾ ಮಾಡುತ್ತಿದ್ದೇವು. ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮುಖ್ಯಮಂತ್ರಿ ಆಗುತ್ತಿದ್ದಂತೆ ಪ್ರಣಾಳಿಕೆ ಕೈಚೆಲ್ಲುತ್ತಿದ್ದಾರೆ ಎಂದು ಎಚ್‍ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು.

    ವಾಮಮಾರ್ಗದಿಂದ ರಚನೆಯಾದ ಸರ್ಕಾರಕ್ಕೆ ಮಂತ್ರಿ ಮಂಡಲ ರಚನೆ ಕಷ್ಟವಾಗುತ್ತಿದೆ. ಸಮ್ಮಿಶ್ರ ಸರ್ಕಾರಕ್ಕೆ ಬಹಳ ದಿನ ನಡೆಯುವುದಿಲ್ಲ, ಮುಂದೆ ನಾವೇ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಪರ ಮತಯಾಚನೆಗೆ ಮುಂದಾದ ಯಶ್

    ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಪರ ಮತಯಾಚನೆಗೆ ಮುಂದಾದ ಯಶ್

    ಚಿತ್ರದುರ್ಗ: ಕರ್ನಾಟಕ ವಿಧಾನಸಭಾ ಚುಣಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿ ಮತ್ತು ಜೆಡಿಎಸ್ ಪರ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿರೋ ನಟ ಯಶ್ ಇಂದು ಮೊಳಕಾಲ್ಮೂರು ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ.

    ಯಶ್ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರ ಮತಯಾಚನೆ ನಡೆಸಲಿದ್ದಾರೆ. ಇಂದು ಸಂಜೆ ಸುಮಾರು 5 ಗಂಟೆಗೆ ನಾಯಕನಟ್ಟಿಯಲ್ಲಿ ಬಹಿರಂಗ ಪ್ರಚಾರ ಆರಂಭಿಸಿ ನಾಯಕನಟ್ಟಿ, ಕೊಂಡ್ಲಹಳ್ಳಿ, ಮೊಳಕಾಲ್ಮೂರು ಹಾಗು ರಾಂಪುರದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಬಾರಿ ಸಂಸದ ಶ್ರೀರಾಮುಲು ಸ್ಪರ್ಧೆಯಿಂದಾಗಿ ಮೊಳಕಾಲ್ಮೂರು ಕ್ಷೇತ್ರ ಬಾರಿ ಹೈ ವೊಲ್ಟೇಜ್ ಎನ್ನಿಸಿಕೊಂಡಿದೆ. ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಪರ ಪ್ರಚಾರಕ್ಕಿಳಿದು ಮತದಾರರ ಗೊಂದಲಕ್ಕೆ ತೆರೆ ಎಳೆದ ಯಶ್

    ಉತ್ತಮ ಕೆಲಸ ಮಾಡುವ ವ್ಯಕ್ತಿಗಳು ಮುಖ್ಯ. ಅದಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಪ್ರಚಾರ ಮಾಡುತ್ತಿದ್ದೇನೆ. ಯಾರು ಜನಪರ ಕೆಲಸ ಮಾಡುತ್ತಾರೋ ಅವರಿಗೆ ಮತ ಹಾಕಿ ಅಂತ ಹೇಳಿದ್ದ ನಟ ಯಶ್ ಈಗ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಪರ ಬಹಿರಂಗವಾಗಿ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

    ನಟ ಯಶ್, ನಾನು ವಿವಿಧ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದರಿಂದ ಮತದಾರರಿಗೆ ಗೊಂದಲವಾಗಿರಬಹುದೆಂದು ನಿನ್ನೆಯಷ್ಟೇ ಸಮರ್ಥನೆ ನೀಡಿದ್ದರು. ನನ್ನ ಪ್ರಚಾರ ಯಾವುದೇ ಪಕ್ಷದ ಪರ ಅಲ್ಲ. ನನಗೆ ಇಷ್ಟವಾಗುವ ವ್ಯಕ್ತಿಗಳ ಪರ ಮತಯಾಚನೆ ಮಾಡುವೆ. ನಾನು ರಾಜ್ಯದ ಎಲ್ಲಿ ಬೇಕಾದ್ರೂ ಚುನಾವಣೆಗೆ ನಿಲ್ಲಬಹುದು. ಆದರೆ ಆ ಬಗ್ಗೆ ನಾನು ಚಿಂತಿಸಿಲ್ಲ ಅಂತ ಹೇಳಿದ್ದರು.

  • ಜಾತಿಗಣತಿಯ ಪೂರ್ಣ ಮಾಹಿತಿ ಪಡೆದೇ ಬದಾಮಿಯಲ್ಲಿ ಸಿಎಂ ಸ್ಪರ್ಧೆ- ಹಿರಿಯ ನಾಯಕರ ಬಳಿಯಿದೆ ಪಕ್ಕಾ ಲೆಕ್ಕ!

    ಜಾತಿಗಣತಿಯ ಪೂರ್ಣ ಮಾಹಿತಿ ಪಡೆದೇ ಬದಾಮಿಯಲ್ಲಿ ಸಿಎಂ ಸ್ಪರ್ಧೆ- ಹಿರಿಯ ನಾಯಕರ ಬಳಿಯಿದೆ ಪಕ್ಕಾ ಲೆಕ್ಕ!

    ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಬಾಗಲಕೋಟೆ ಜಿಲ್ಲೆಯ ಬದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. ಇತ್ತ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದಲೂ ಸಿಎಂ ಕಣಕ್ಕಿಳಿದಿದ್ದಾರೆ.

    ಸಿಎಂ ಬದಾಮಿಯಲ್ಲಿ ಕಣಕ್ಕಿಳಿಯಲು ಜಾತಿ ಲೆಕ್ಕಾಚಾರವೇ ಮೂಲ ಕಾರಣ ಎನ್ನಲಾಗಿದೆ. ಆದ್ರೆ ಜಾತಿ ಸಮೀಕ್ಷೆ ನಡೆಸಿದ ಕಾಂಗ್ರೆಸ್ ಸರ್ಕಾರ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿಲ್ಲ. ಬದಾಮಿ ಕ್ಷೇತ್ರದ ಹಿರಿಯ ನಾಯಕರಲ್ಲಿ ಜಾತಿ ಲೆಕ್ಕಾಚಾರದ ಪೂರ್ಣ ಮಾಹಿತಿ ಲಭ್ಯವಿದೆ ಅಂತಾ ಹೇಳಲಾಗ್ತಿದ್ದು, ಈ ಅಂಕಿ ಅಂಶಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಹೊಸ ಜಾತಿ ಲೆಕ್ಕಾಚಾರ ಈ ಕೆಳಗಿನಂತಿದೆ ಎಂದು ಹೇಳಲಾಗ್ತಿದೆ:
    ಕುರುಬ-49,600, ಲಿಂಗಾಯತ-20,299, ಎಸ್‍ಸಿ-29,900, ವಾಲ್ಮೀಕಿ-19,500, ಮುಸ್ಲಿಂ-19,000, ದೇವಾಂಗ(ನೇಕಾರ)-15,500, ಗಾಣಿಗ-10,500, ಕ್ಷತ್ರೀಯ ಮರಾಠ-5,700, ವಿಶ್ವಕರ್ಮ-4,600, ರೆಡ್ಡಿ-3,800, ಉಪ್ಪಾರ-2,700, ಕಬ್ಬಲಿಗ-2,650, ಗೊಲ್ಲ-2,250, ಕ್ರಿಶ್ಚಿಯನ್-1450 ಮತ್ತು ಇತರೆ-27,000.

    ಕುರುಬ ಸಮುದಾಯದ ಅತಿ ಹೆಚ್ಚು ಮತಗಳನ್ನು ಹೊಂದಿರುವ ಬದಾಮಿ ಕ್ಷೇತ್ರದಲ್ಲಿ ಸರಳವಾಗಿ ಜಯ ಸಾಧಿಸಬಹುದು ಎಂಬುದು ಕಾಂಗ್ರೆಸ್ ಲೆಕ್ಕಾಚಾರ. ಇದೇ ಆಧಾರದ ಮೇಲೆಯೇ ಬಿಜೆಪಿ ಸಹ ದಲಿತ ನಾಯಕ, ಸಂಸದ ಶ್ರೀರಾಮುಲು ಅವರನ್ನು ಕಣಕ್ಕಿಳಿಸಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ. ಎಸ್‍ಸಿ, ಲಿಂಗಾಯತ ಮತ್ತು ವಾಲ್ಮೀಕಿ ಸಮುದಾಯದ ಮತಗಳ ಕ್ರೂಡಿಕರಣವಾದ್ರೆ ಶ್ರೀರಾಮುಲು ಸರಳ ಬಹುಮತದಿಂದ ಗೆಲುವು ಸಾಧಿಸ್ತಾರೆ ಎಂಬುದು ಬಿಜೆಪಿಯ ಲೆಕ್ಕಾಚಾರವಾಗಿದೆ.

    ಈ ಹಿಂದೆ ಹೇಳಲಾಗ್ತಿದ್ದ 2011ರ ಜನಗಣತಿಯ ಆಧಾರದಲ್ಲಿ ದಾಖಲಾಗಿರುವ ಮಾಹಿತಿ ಹೀಗಿತ್ತು.

    ಮತದಾರರ ಸಂಖ್ಯೆ ಎಷ್ಟಿದೆ?
    ಕ್ಷೇತ್ರದ ಒಟ್ಟು ಮತದಾರರು- 2,12,184
    ಪುರುಷ ಮತದಾರರು -1,07,074
    ಮಹಿಳಾ ಮತದಾರರು – 1,05,110

    ಬದಾಮಿ ಕ್ಷೇತ್ರದ ಜಾತಿವಾರು ಲೆಕ್ಕಾಚಾರ
    ಕುರುಬ – 46 ಸಾವಿರ
    ಗಾಣಿಗ – 26 ಸಾವಿರ
    ಲಿಂಗಾಯತ – 32 ಸಾವಿರ (ಪಂಚಮಸಾಲಿ. ಬಣಜಿಗ)
    ನೇಕಾರ – 17 ಸಾವಿರ
    ಪ. ಜಾತಿ ಪಂಗಡ – 25 ಸಾವಿರ
    ಅಲ್ಪ ಸಂಖ್ಯಾತರು – 12 ಸಾವಿರ
    ಮರಾಠಾ ಕ್ಷತ್ರೀಯ – 9 ಸಾವಿರ
    ವಾಲ್ಮೀಕಿ – 13 ಸಾವಿರ
    ಬಂಜಾರ – 6 ಸಾವಿರ
    ರೆಡ್ಡಿ – 10 ಸಾವಿರ
    ಇತರರು – 16 ಸಾವಿರ

    2013ರ ಫಲಿತಾಂಶ ಏನಿತ್ತು?
    2013ರ ಚುನಾವಣೆಯಲ್ಲಿ ಬಿಬಿ ಚಿಮ್ಮನಕಟ್ಟಿ 15,113 ಮತಗಳ ಅಂತರದಿಂದ ಜಯಗಳಿಸಿದ್ದರು. ಚಿಮ್ಮನಕಟ್ಟಿ 57,446(41.3%) ಮತಗಳನ್ನು ಪಡೆದಿದ್ದರೆ ಜೆಡಿಎಸ್ ನ ಮಹಾಂತೇಶ್ ಗುರುಪಾದಪ್ಪ ಅವರು 42,333(30.4%) ಮತಗಳನ್ನು ಪಡೆದಿದ್ದರು. ಕಲ್ಲಪ್ಪ ಪಟ್ಟಣಶೆಟ್ಟಿ ಅವರು 30,310(21.8%) ಮತಗಳನ್ನು ಗಳಿಸಿದ್ದರು.

  • ಸಿಎಂಗೆ ‘ಬದಾಮಿ’ ಸವಿಯಾಗದಂತೆ ಬಿಜೆಪಿ ಮಾಸ್ಟರ್ ಪ್ಲಾನ್ – ಸಿಎಂ ವಿರುದ್ಧ ರಾಮುಲು ಕಣಕ್ಕೆ!

    ಸಿಎಂಗೆ ‘ಬದಾಮಿ’ ಸವಿಯಾಗದಂತೆ ಬಿಜೆಪಿ ಮಾಸ್ಟರ್ ಪ್ಲಾನ್ – ಸಿಎಂ ವಿರುದ್ಧ ರಾಮುಲು ಕಣಕ್ಕೆ!

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಎಲ್ಲೇ ಸ್ಪರ್ಧೆಗೆ ನಿಂತರೂ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಬದಾಮಿಯಲ್ಲಿ ಸ್ಪರ್ಧೆಗೆ ನಿಂತರೆ ಯಾರನ್ನು ಕಣಕ್ಕಿಳಿಸಬೇಕು ಎಂದು ಬಿಜೆಪಿ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ.

    ಬದಾಮಿಯಲ್ಲಿ ಸಿದ್ದರಾಮಯ್ಯ ಕಟ್ಟಿ ಹಾಕಲು ಬಿಜೆಪಿ ಶ್ರೀರಾಮುಲು ಅವರನ್ನು ಸ್ಪರ್ಧೆಗೆ ಸಿದ್ಧವಾಗಿರುವಂತೆ ಸೂಚಿಸಿದೆ. ಬಿಜೆಪಿಯಿಂದ ಶ್ರೀರಾಮುಲು ಅವರನ್ನು ಕಣಕ್ಕಿಳಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಬಿಜೆಪಿ ಉನ್ನತ ಮೂಲಗಳಿಂದ ‘ಪಬ್ಲಿಕ್ ಟಿವಿ’ಗೆ ಲಭ್ಯವಾಗಿದೆ.

    ಈಗಾಗಲೇ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಬದಾಮಿಯಿಂದಲೂ ಸ್ಪರ್ಧೆಗಿಳಿಯಲಿದ್ದಾರೆ ಎಂಬ ಮಾತು ಪ್ರಬಲವಾಗಿ ಕೇಳಿ ಬರುತ್ತಿದೆ. ಒಂದು ವೇಳೆ ಹೈಕಮಾಂಡ್ ನಿರ್ಧಾರ ಕೈಗೊಂಡರೆ ನಾನು ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ನಾಮಪತ್ರ ಸಲ್ಲಿಸುವುದನ್ನೇ ಕಾಯುತ್ತಿರುವ ಬಿಜೆಪಿ ಏಪ್ರಿಲ್  23 ರಂದು ನಾಮಪತ್ರ ಸಲ್ಲಿಸಲು ಸಿದ್ಧವಾಗಿರುವಂತೆ ಶ್ರೀರಾಮುಲುಗೆ ಈಗಾಗಲೇ ಸೂಚನೆ ಹೋಗಿದೆ ಎನ್ನಲಾಗಿದೆ.

  • ತೆರೆಮರೆಯಲ್ಲೇ ಕಾಂಗ್ರೆಸ್‍ಗೆ ಶಾಕ್ ಕೊಟ್ಟ ಜನಾರ್ದನ ರೆಡ್ಡಿ

    ತೆರೆಮರೆಯಲ್ಲೇ ಕಾಂಗ್ರೆಸ್‍ಗೆ ಶಾಕ್ ಕೊಟ್ಟ ಜನಾರ್ದನ ರೆಡ್ಡಿ

    ಬಳ್ಳಾರಿ: ರಾಜಕೀಯ ರಣರಂಗದ ಅಖಾಡದಿಂದ ದೂರ ಉಳಿದಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಇದೀಗ ಸದ್ದಿಲ್ಲದೇ ಕಾಂಗ್ರೆಸ್‍ಗೆ ಶಾಕ್ ಕೊಟ್ಟಿದ್ದಾರೆ.

    ಕಾಂಗ್ರೆಸ್ ಟಿಕೆಟ್ ಸಿಗದೇ ಅಸಮಾಧಾನಗೊಂಡಿದ್ದ ಹಿರಿಯ ಶಾಸಕ ಎನ್‍ವೈ ಗೋಪಾಲಕೃಷ್ಣರನ್ನು ಬಿಜೆಪಿಗೆ ಸೆಳೆದಿದ್ದಾರೆ. ಕಾಂಗ್ರೆಸ್ ನಿಂದ ಟಿಕೆಟ್ ವಂಚಿತರಾದ ಬಳಿಕ ಎನ್.ವೈ.ಗೋಪಾಲಕೃಷ್ಣ ಮನೆಗೆ ಸೋಮವಾರ ರಾತ್ರಿ ಶ್ರೀರಾಮುಲು ಜೊತೆಗೆ ದಿಢೀರ್ ಧಾವಿಸಿದ ಜನಾರ್ದನ ರೆಡ್ಡಿ, ಬಿಜೆಪಿಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬುಧವಾರ ಅಧಿಕೃತವಾಗಿ ಎನ್‍ವೈ ಗೋಪಾಲಕೃಷ್ಣ ಕಮಲ ಹಿಡಿಯಲಿದ್ದಾರೆ.

    ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ನಮ್ಮ ಮನೆಗೆ ಬಂದು ಬಿಜೆಪಿ ಸೇರುವಂತೆ ಸಲಹೆ ನೀಡಿದ್ರು. ಇನ್ನು ಟಿಕೆಟ್ ನೀಡೋದು ಬಿಜೆಪಿ ಹೈಕಮಾಂಡ್ ತೀರ್ಮಾನಿಸುತ್ತದೆ ಅಂತಾ ಎನ್ ವೈ ಗೋಪಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ.

    ಎನ್‍ವೈ ಗೋಪಾಲಕೃಷ್ಣ ಜೊತೆಗಿನ ಮಾತುಕತೆಯ ನಂತರ ಜನಾರ್ದನ ರೆಡ್ಡಿ ಯಾವುದೇ ಪ್ರತಿಕ್ರಿಯೆ ನೀಡದೇ ಹೋಗಿದ್ದಾರೆ. ಕೂಡ್ಲಗಿ ಮತ್ತು ಮೊಳಕಾಲ್ಮೂರು ಕ್ಷೇತ್ರಗಳಲ್ಲಿ ಪ್ರಾಬಲ್ಯ ಹೊಂದಿರುವ ಎನ್ ವೈ ಗೋಪಾಲಕೃಷ್ಣ ಬಿಜೆಪಿ ಸೇರ್ಪಡೆಗೊಂಡಿರುವುದು ಕಾಂಗ್ರೆಸ್‍ಗೆ ದೊಡ್ಡ ಹೊಡೆತ ಅಂತಾ ವಿಶ್ಲೇಷಣೆ ಮಾಡಲಾಗ್ತಿದೆ.

  • ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಎಸಿಬಿ ಯಲ್ಲಿನ ಪ್ರಕರಣಗಳ ಮರು ತನಿಖೆ: ಬಿಎಸ್‍ವೈ

    ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಎಸಿಬಿ ಯಲ್ಲಿನ ಪ್ರಕರಣಗಳ ಮರು ತನಿಖೆ: ಬಿಎಸ್‍ವೈ

    ಕಾರವಾರ: ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಎಸಿಬಿಯಲ್ಲಿ ಪೂರ್ಣ ತನಿಖೆಯಾಗದೇ ಉಳಿದಿರುವ ಎಲ್ಲಾ ಪ್ರಕರಣಗಳ ಮರು ತನಿಖೆ ಮಾಡಿ ತಕ್ಕ ಶಾಸ್ತಿ ಮಾಡುತ್ತೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭಟ್ಕಳದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯ ಸಭಾ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

    ರಾಜ್ಯ ಸರ್ಕಾರ ಜನರು ಕೊಟ್ಟ ತೆರಿಗೆ ಹಣವನ್ನ ಲೂಟಿ ಮಾಡಿ ಲೋಕಾಯುಕ್ತ ಸಂಸ್ಥೆಯ ಶಕ್ತಿಯನ್ನ ಹಾಳುಮಾಡಿ ಎಸಿಬಿ ಎಂಬ ಸಂಸ್ಥೆಯನ್ನು ಕಟ್ಟಿಕೊಂಡಿದೆ. ನಿಮ್ಮ ಕುಟುಂಬದವರು ಹಾಗೂ ಮಂತ್ರಿಮಂಡಲದ ಶಾಸಕರು ಮಾಡಿದ ಹಗಲು ದರೋಡೆಯನ್ನ ಕುಲಾಫೆ ಮಾಡಿಸಿಕೊಳ್ಳಲು ಎಸಿಬಿ ಎಂಬ ಸಂಸ್ಥೆ ಕಟ್ಟಿಕೊಳ್ಳಲಾಗಿದೆ. ಕರ್ನಾಟಕದ ಕಾಂಗ್ರೆಸ್ ನ ಉಸ್ತುವಾರಿ ಹೊತ್ತಿರುವ ವೇಣುಗೋಪಾಲ್ ಒಬ್ಬ ಅತ್ಯಾಚಾರಿ. ಸಿದ್ದರಾಮಯ್ಯ ಒಬ್ಬ ಭ್ರಷ್ಟ. ಭ್ರಷ್ಟಾಚಾರಿ-ಅತ್ಯಾಚಾರಿ ಸೇರಿ ಸರ್ಕಾರ ನಡೆಸುತ್ತಿದ್ದಾರೆ. ಐಎನ್‍ಎ ವರದಿ ನೀಡಿದರೂ ಪಿಎಫ್‍ಐ ತಲೆಎತ್ತಲು ಸಿದ್ದರಾಮಯ್ಯನವರೇ ಕಾರಣರಾಗಿದ್ದಾರೆ. ಸಿದ್ದರಾಮಯ್ಯನವರು ಸಮುದಾಯಗಳ ನಡುವೆ ಜಾತಿಯ ವಿಷಬೀಜ ಬಿತ್ತಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

    ಭಟ್ಕಳ ಭಯೋತ್ಪಾದನೆಗೆ ಕುಮ್ಮಕ್ಕು ಕೊಡುತ್ತಿರುವ ಈ ಊರಿನ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ಶಾಂತವಾಗಿದ್ದ ಕರಾವಳಿ ಉಗ್ರರ ತಾಂಡವಾಗಿದೆ. ಶಾಂತಿ ಕದಡಲು ಹೊರಟಿರುವ ಈ ಭಟ್ಕಳವನ್ನ ರಕ್ಷಣೆ ಮಾಡಬೇಕಿದೆ. ಕೋಮುವಾದವನ್ನ ಹತ್ತಿಕ್ಕಬೇಕಾದ ಸರ್ಕಾರ ಒಂದು ಕೋಮಿಗೆ ಪ್ರಾಮುಖ್ಯತೆ ನೀಡುತ್ತಿದೆ ಎಂದು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

    ಭಟ್ಕಳದಲ್ಲಿ ನಡೆದ ಪರಿವರ್ತನಾ ಯಾತ್ರೆಯ ಸಭಾ ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಶ್ರೀರಾಮುಲು, ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

     

  • ಯಡಿಯೂರಪ್ಪ, ಶೋಭಾ, ಸದಾನಂದ ಗೌಡರಿಂದ ಹಿಂದೂ ಕಾರ್ಯಕರ್ತರ ಕೊಲೆ:ಶ್ರೀರಾಮುಲು ಎಡವಟ್ಟು

    ಯಡಿಯೂರಪ್ಪ, ಶೋಭಾ, ಸದಾನಂದ ಗೌಡರಿಂದ ಹಿಂದೂ ಕಾರ್ಯಕರ್ತರ ಕೊಲೆ:ಶ್ರೀರಾಮುಲು ಎಡವಟ್ಟು

    ಮಂಗಳೂರು: ಬಿಜೆಪಿ ನಾಯಕರಿಂದ ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ ಎಂದು ಹೇಳುವ ಮೂಲಕ ಬಳ್ಳಾರಿ ಸಂಸದ ಬಿ. ಶ್ರೀರಾಮುಲು ಎಡವಟ್ಟು ಮಾಡಿಕೊಂಡಿದ್ದಾರೆ.

    ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಸಂಸದ ಶ್ರೀರಾಮುಲು, ಮೊನ್ನೆ ಮೊನ್ನೆ ಶೋಭಾ ಕರಂದ್ಲಾಜೆ, ಬಿ.ಎಸ್ ಯಡಿಯೂರಪ್ಪ ಮತ್ತು ಸದಾನಂದ ಗೌಡ ಅವರು ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವಂತಹ ಕೆಲಸ ಮಾಡಿದರು. ಇದನ್ನು ನೀವೆಲ್ಲರೂ ನೋಡಿದ್ದೀರಿ ಎಂದು ಹೇಳಿದ್ದಾರೆ.

    ಕರಾವಳಿಯ ಕೊಲೆ ರಾಜಕೀಯದ ಬಗ್ಗೆ ಮಾತನಾಡುವ ಭಾಷಣ ಮಾಡುವ ಮಾತಿನ ಭರದಲ್ಲಿ ಸಂಸದ ಶ್ರೀ ರಾಮುಲು ಅವರು ಏನೋ ಹೇಳಲು ಹೋಗಿ ಇನ್ನೇನೋ ಹೇಳಿಬಿಟ್ಟಿದ್ದಾರೆ. ಮರು ಕ್ಷಣವೇ ತಮ್ಮ ಹೇಳಿಕೆ ಬಗ್ಗೆ ಎಚ್ಚೆತ್ತಾ ಅವರು ಕರ್ನಾಟಕದಲ್ಲಿ ಜಾತಿ ವಿಭಜನೆ ಮಾಡುವ ಹಾಗೂ ಆರ್‍ಎಸ್‍ಎಸ್, ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಹೇಳಿದರು.

    ಸಂಸದ ಶ್ರೀ ರಾಮುಲು ಅವರ ಮಾತನ್ನು ಕೇಳಿ ವೇದಿಕೆ ಮೇಲಿದ್ದ ಬಿಜೆಪಿ ಮುಖಂಡರು ಕ್ಷಣ ಕಾಲ ಕಂಗಾಲು ಆಗಿದ್ದರು.

    https://www.youtube.com/watch?v=dwZiNKvyUug