Tag: sri lanka prime minister

  • ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸ ರಾಜೀನಾಮೆ

    ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸ ರಾಜೀನಾಮೆ

    ಕೊಲಂಬೊ: ದ್ವೀಪರಾಷ್ಟ್ರದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಸರ್ಕಾರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಯು ತೀವ್ರಗೊಂಡಿದೆ. ಇದರ ನಡುವೆಯೇ ಶ್ರೀಲಂಕಾದ ಪ್ರಧಾನ ಮಂತ್ರಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸ ಸೋಮವಾರ ರಾಜೀನಾಮೆ ನೀಡಿದ್ದಾರೆ.

    ಶುಕ್ರವಾರ ನಡೆದ ವಿಶೇಷ ಸಭೆಯಲ್ಲಿ ಅಧ್ಯಕ್ಷ ಗೊಟಬಯಾ ರಾಜಪಕ್ಸೆ ಅವರು ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೆ ಪರಿಹಾರವಾಗಿ ಅಧಿಕಾರದಿಂದ ಕೆಳಗಿಳಿಯುವಂತೆ ಪ್ರಧಾನಿಗೆ ತಿಳಿಸಿದ್ದರು. ಮೂರು ದಿನಗಳ ನಂತರ ಪ್ರಧಾನಿ ಮಹಿಂದಾ ರಾಜೀನಾಮೆ ಸಲ್ಲಿಸಿದ್ದಾರೆ.

    ಇದೀಗ ಪ್ರಧಾನಿ ರಾಜೀನಾಮೆ ನೀಡಿದ್ದು, ಅಧ್ಯಕ್ಷ ರಾಜಪಕ್ಸ ಅವರು ಸಂಸತ್ತಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳನ್ನು ಸರ್ವಪಕ್ಷಗಳ ಸಂಪುಟ ರಚನೆಗೆ ಆಹ್ವಾನಿಸುವ ನಿರೀಕ್ಷೆಯಿದೆ.

    ಸೋಮವಾರ ಬೆಳಗ್ಗೆ ಪ್ರತಿಭಟನಾಕಾರರು ಪ್ರಧಾನಿಯವರ ಅಧಿಕೃತ ನಿವಾಸವಾದ ಟೆಂಪಲ್ ಟ್ರೀಸ್ ಎದುರು ಹೋರಾಟ ತೀವ್ರಗೊಳಿಸಿದರು. ಪ್ರಧಾನಿ ಮಹಿಂದಾ ರಾಜಪಕ್ಸ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರು. ಸಾರ್ವಜನಿಕರು ಸಂಯಮದಿಂದ ವರ್ತಿಸುವಂತೆ ಒತ್ತಾಯಿಸಿ ಟ್ವೀಟ್ ಮಾಡಿದ ಬೆನ್ನಲ್ಲೇ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    sri lanka

    ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ನಮ್ಮ ಸಾರ್ವಜನಿಕರು ಸಂಯಮದಿಂದ ವರ್ತಿಸುವಂತೆ ನಾನು ಮನವಿ ಮಾಡುತ್ತೇನೆ. ಹಿಂಸೆಯು ಹಿಂಸೆಯನ್ನು ಮಾತ್ರ ಹುಟ್ಟುಹಾಕುತ್ತದೆ ಎಂಬುದನ್ನು ನೆನಪಿನಲ್ಲಿಡಿ. ಈಗಿನ ಬಿಕ್ಕಟ್ಟಿಗೆ ಆರ್ಥಿಕ ಪರಿಹಾರದ ಅಗತ್ಯವಿದೆ. ಈ ಆಡಳಿತವು ಬಿಕ್ಕಟ್ಟು ಪರಿಹರಿಸಲು ಬದ್ಧವಾಗಿದೆ ಎಂದು ಮಹಿಂದಾ ಟ್ವೀಟ್‌ ಮಾಡಿದ್ದರು.