Tag: Sri Lanka

  • ಶ್ರೀಲಂಕಾದಲ್ಲಿ ಸೈಕಲ್‌ಗಳಿಗೆ ಡಿಮ್ಯಾಂಡೋ ಡಿಮ್ಯಾಂಡ್‌!

    ಶ್ರೀಲಂಕಾದಲ್ಲಿ ಸೈಕಲ್‌ಗಳಿಗೆ ಡಿಮ್ಯಾಂಡೋ ಡಿಮ್ಯಾಂಡ್‌!

    ಕೊಲಂಬೊ: ಇಂಧನ ಕೊರತೆ ಹಿನ್ನೆಲೆಯಲ್ಲಿ ಶ್ರೀಲಂಕಾದ ಜನತೆ ಸಂಕಷ್ಟ ಎದುರಿಸುತ್ತಿದ್ದಾರೆ. ಪೆಟ್ರೋಲ್‌, ಡೀಸೆಲ್‌ ಇಲ್ಲದೇ ವಾಹನಗಳು ಮನೆಗಳಲ್ಲಿ ನಿಂತಿವೆ. ದೇಶಾದ್ಯಂತ ಪೆಟ್ರೋಲ್‌ ಬಂಕ್‌ಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಜನ ಸಾಕಾಗಿದ್ದಾರೆ. ಈ ಯಾವುದೇ ತಲೆನೋವು ಬೇಡ ಎಂದು ತೀರ್ಮಾನಿಸಿರುವ ಜನ ಈಗ ಬೈಸಿಕಲ್‌ಗಳತ್ತ ಮುಖ ಮಾಡಿದ್ದಾರೆ.

    ಶ್ರೀಲಂಕಾ ಜನತೆ ತಮ್ಮ ದೈನಂದಿನ ಪ್ರಯಾಣಕ್ಕಾಗಿ ಸೈಕಲ್‌ಗಳ ಮೊರೆ ಹೋಗಿದ್ದಾರೆ. ಇಂಧನ ಕೊರತೆ ಹಾಗೂ ಪೆಟ್ರೋಲ್‌, ಡೀಸೆಲ್‌ ಬೆಲೆ ಗಗನಕ್ಕೇರಿರುವುದರಿಂದ ಜನ ಸೈಕಲ್‌ಗಳನ್ನು ಕೊಳ್ಳಲು ಮುಗಿಬಿದ್ದಿದ್ದಾರೆ. ಈಗಾಗಲೇ ಅನೇಕ ಅಂಗಡಿಗಳಲ್ಲಿ ಸೈಕಲ್‌ ಸ್ಟಾಕ್‌ ಖಾಲಿಯಾಗಿದೆ. ಕಚೇರಿ ಮತ್ತು ಶಾಲಾ-ಕಾಲೇಜುಗಳಿಗೆ ಸೈಕಲ್‌ಗಳ ಮೂಲಕ ತೆರಳುತ್ತಿದ್ದಾರೆ. ಇದನ್ನೂ ಓದಿ: ಗೊಟಬಯ ರಾಜಪಕ್ಸೆ ಇನ್ನೂ ದೇಶದಲ್ಲಿಯೇ ಇದ್ದಾರೆ: ಮಹಿಂದಾ ಯಾಪಾ ಅಬೇವರ್ಧನ

    ದೇಶದ ಪ್ರಸ್ತುತ ಆರ್ಥಿಕ ಪರಿಸ್ಥಿತಿಯಿಂದಾಗಿ ನಾವು ಸೈಕಲ್ ಬಳಸಲಾರಂಭಿಸಿದ್ದೇವೆ. ಪೆಟ್ರೋಲ್ ಪಡೆಯಲು ನಮಗೆ ಸಾಧ್ಯವಾಗುತ್ತಿಲ್ಲ. ಸರತಿಯಲ್ಲಿ ನಿಲ್ಲಲು ನಮಗೆ ಸಮಯವಿಲ್ಲ. ಕೆಲವೊಮ್ಮೆ ಸರತಿಯಲ್ಲಿ ನಿಂತರೂ ನಮಗೆ ಸಿಗುತ್ತದೆ ಎಂಬ ಖಾತರಿಯನ್ನು ನೀಡುವುದಿಲ್ಲ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

    ಪ್ರಸ್ತುತ ಪೆಟ್ರೋಲ್ ಬೆಲೆ ಲೀಟರ್‌ಗೆ 470 ಶ್ರೀಲಂಕಾ ರೂಪಾಯಿ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 460 ಶ್ರೀಲಂಕಾ ರೂಪಾಯಿಗೆ ಮಾರಾಟವಾಗುತ್ತಿದೆ. ದೇಶದಲ್ಲಿ ಸೈಕಲ್‌ ಬಳಕೆ ಪ್ರಮಾಣ ಶೇ.30ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಲಂಕಾ ಪ್ರತಿಭಟನೆ: ಪ್ರಧಾನಿಯ ಬೆಡ್‌ರೂಂನಲ್ಲಿ WWE ಪ್ರದರ್ಶನ

    ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ರಾಜಪಕ್ಸ ಮನೆತನದ ಆಡಳಿತದ ವಿರುದ್ಧ ರೊಚ್ಚಿಗೆದ್ದ ಜನ ಕಳೆದ ಮೂರು ದಿನಗಳ ಹಿಂದೆ ಗೊಟಬಯ ರಾಜಪಕ್ಸ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗೊಟಬಯ ರಾಜಪಕ್ಸೆ ಇನ್ನೂ ದೇಶದಲ್ಲಿಯೇ ಇದ್ದಾರೆ: ಮಹಿಂದಾ ಯಾಪಾ ಅಬೇವರ್ಧನ

    ಗೊಟಬಯ ರಾಜಪಕ್ಸೆ ಇನ್ನೂ ದೇಶದಲ್ಲಿಯೇ ಇದ್ದಾರೆ: ಮಹಿಂದಾ ಯಾಪಾ ಅಬೇವರ್ಧನ

    ಕೊಲಂಬೋ: ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ದೇಶದಲ್ಲಿಲ್ಲ ಎಂದಿದ್ದ ಸ್ಪೀಕರ್ ಮಹಿಂದಾ ಯಾಪಾ ಅಬೇವರ್ಧನ ಅವರು ಇದೀಗ ಅಧ್ಯಕ್ಷರು ಇನ್ನೂ ದೇಶದಲ್ಲಿಯೇ ಇದ್ದಾರೆ ಎಂದು ಹೇಳಿದ್ದಾರೆ.

    ಗೊಟಬಯ ರಾಜಪಕ್ಸೆ ಅವರೊಂದಿಗೆ ಮಹಿಂದಾ ಯಾಪಾ ಅಬೇವರ್ಧನ ಅವರು ಸಂಪರ್ಕದಲ್ಲಿದ್ದು, ಅಧ್ಯಕ್ಷರು ಸ್ಪೀಕರ್ ಜೊತೆಗೆ ಸಂವಹನ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೊಟಬಯ ರಾಜಪಕ್ಸೆ

    ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದ ಜನ ಅಧ್ಯಕ್ಷ ಗೊಟಬಯ ರಾಜಪಕ್ಸೆ ಮತ್ತು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ನುಗ್ಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಷ್ಟ್ರಪತಿ ಹಾಗೂ ಪ್ರಧಾನಿ ಇಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಅವರ ನಿವಾಸಗಳನ್ನು ಒತ್ತುವರಿ ಮಾಡಿಕೊಂಡಿಕೊಳ್ಳುವುದಾಗಿ ಪ್ರತಿಭಟನಾಕಾರರು ಹೇಳಿದ್ದರು.

    ದೇಶದಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದ ಹಿನ್ನೆಲೆ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಸೋಮವಾರ ಅಧಿಕೃತವಾಗಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರಿಗೆ ತಿಳಿಸಿದ್ದರು. ಇದನ್ನೂ ಓದಿ: ಲಂಕಾ ಪ್ರತಿಭಟನೆ: ಪ್ರಧಾನಿಯ ಬೆಡ್‌ರೂಂನಲ್ಲಿ WWE ಪ್ರದರ್ಶನ

    ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಮಹಿಂದಾ ಯಾಪಾ ಅಬೇವರ್ಧನ ಅವರು, ಭದ್ರತೆ ಇಲ್ಲದ ಕಾರಣ ಗೊಟಬಯ ರಾಜಪೆಕ್ಸೆ ಅವರು ದೇಶದಿಂದ ಹೊರಗಿದ್ದಾರೆ ಎಂದಿದ್ದರು. ಆದರೀಗ ರಾಜಕೀಯ ಬಿಕ್ಕಟ್ಟಿನಿಂದ ಸಂದರ್ಭಾನುಸಾರವಾಗಿ ಹೀಗೆ ಹೇಳಿದ್ದೆ. ಆದರೆ ಗೊಟಬಯ ರಾಜಪಕ್ಸೆ ಇನ್ನೂ ದೇಶದಲ್ಲಿಯೇ ಇದ್ದಾರೆ ಎಂದು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೊಟಬಯ ರಾಜಪಕ್ಸೆ

    ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೊಟಬಯ ರಾಜಪಕ್ಸೆ

    ಕೊಲಂಬೊ: ಪ್ರತಿಭಟನಾಕಾರರು ಹೆಚ್ಚುತ್ತಿರುವ ಒತ್ತಡದ ನಡುವೆ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಅಧಿಕೃತವಾಗಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ತಿಳಿಸಿದರು.

    ಈ ಹಿಂದೆ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಮಾಧ್ಯಮದವರೊಂದಿಗೆ ಮಾತನಾಡಿ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ಅವರು ಜುಲೈ 13 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಘೋಷಿಸಿದ್ದರು. ಆದರೆ ಶನಿವಾರದಂದು ಅಧ್ಯಕ್ಷರ ಭವನಕ್ಕೆ ಸಾವಿರಾರು ಜನರು ನುಗ್ಗಿ ದಾಂಧಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದೇ ರಾಜೀನಾಮೆ ನೀಡಿದ್ದಾರೆ.

    ಈ ಹಿಂದೆ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಕೂಡ ತಮ್ಮ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದರು. ಆದರೆ ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದಿರುವ ಶ್ರೀಲಂಕಾ ಜನ ಎಲ್ಲೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಷ್ಟ್ರಪತಿ ಹಾಗೂ ಪ್ರಧಾನಿ ಇಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಅವರ ನಿವಾಸಗಳನ್ನು ಒತ್ತುವರಿ ಮಾಡಿಕೊಂಡಿಕೊಳ್ಳುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ.

    ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಅಧಿಕೃತ ನಿವಾಸ ಟೆಂಪಲ್ ಟ್ರೀ ಅನ್ನು ಆಕ್ರಮಿಸಿಕೊಂಡಿರುವ ಪ್ರತಿಭಟನಾಕಾರರು ಅಲ್ಲಿಯೇ ಮೊಕ್ಕಾಂ ಹೂಡಿ, ಅವರ ಮನೆಯ ಆವರಣದಲ್ಲಿಯೇ ಅಡುಗೆ ಮಾಡಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಜನಾಕ್ರೋಶ ಉಲ್ಬಣ – ಪ್ರಧಾನಿ ಸ್ಥಾನಕ್ಕೆ ರನಿಲ್‌ ವಿಕ್ರಮಸಿಂಘೆ ರಾಜೀನಾಮೆ

    ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಪ್ರತಿಭಟನಾಕಾರನೋರ್ವ, ನಾವು ಪ್ರಧಾನಿ ಮನೆಯೊಳಗಿದ್ದೇವೆ. ಪ್ರತಿಭಟನಾಕಾರರಾದ ನಾವೆಲ್ಲರೂ ಒಟ್ಟಿಗೆ ಸೇರಿ ಅಡುಗೆ ಮಾಡುತ್ತಿದ್ದೇವೆ. ನಾವು ಪಿಎಂ ವಿಕ್ರಮಸಿಂಘೆ ಮತ್ತು ಅಧ್ಯಕ್ಷ ರಾಜಪಕ್ಸೆ ಅವರ ರಾಜೀನಾಮೆಗಾಗಿ ಹೋರಾಟ ನಡೆಸುತ್ತಿದ್ದೇವೆ. ಅವರು ರಾಜೀನಾಮೆ ನೀಡಿದಾಗ ನಂತರ ಈ ಮನೆಯನ್ನು ತೊರೆಯುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲೇ ಅಡುಗೆ ಮಾಡಿ ತಿಂದ ಪ್ರತಿಭಟನಾಕಾರರು

    ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಟೆಂಪಲ್ ಟ್ರೀ ನಿವಾಸದಲ್ಲಿ ಪ್ರತಿಭಟನಾಕಾರರು ಕೇರಂ ಆಟ ಆಡುವುದು, ಆರಾಮವಾಗಿ ಮಲಗಿರುವುದು ಮತ್ತು ಡುವುದು, ಅಡುಗೆ ಮಾಡುವುದು ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲೇ ಅಡುಗೆ ಮಾಡಿ ತಿಂದ ಪ್ರತಿಭಟನಾಕಾರರು

    ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲೇ ಅಡುಗೆ ಮಾಡಿ ತಿಂದ ಪ್ರತಿಭಟನಾಕಾರರು

    ಕೊಲಂಬೋ: ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದಿರುವ ಶ್ರೀಲಂಕಾ ಜನ ಎಲ್ಲೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಅಧಿಕೃತ ನಿವಾಸ ‘ಟೆಂಪಲ್ ಟ್ರೀ’ ಅನ್ನು ಆಕ್ರಮಿಸಿಕೊಂಡಿರುವ ಪ್ರತಿಭಟನಾಕಾರರು ಅಲ್ಲಿಯೇ ಮೊಕ್ಕಾಂ ಹೂಡಿ, ಅವರ ಮನೆಯ ಆವರಣದಲ್ಲಿಯೇ ಅಡುಗೆ ಮಾಡಿದ್ದಾರೆ.

    ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಪ್ರತಿಭಟನಾಕಾರನೋರ್ವ, ನಾವು ಪ್ರಧಾನಿ ಮನೆಯೊಳಗಿದ್ದೇವೆ. ಪ್ರತಿಭಟನಾಕಾರರಾದ ನಾವೆಲ್ಲರೂ ಒಟ್ಟಿಗೆ ಸೇರಿ ಅಡುಗೆ ಮಾಡುತ್ತಿದ್ದೇವೆ. ನಾವು ಪಿಎಂ ವಿಕ್ರಮಸಿಂಘೆ ಮತ್ತು ಅಧ್ಯಕ್ಷ ರಾಜಪಕ್ಸೆ ಅವರ ರಾಜೀನಾಮೆಗಾಗಿ ಹೋರಾಟ ನಡೆಸುತ್ತಿದ್ದೇವೆ. ಅವರು ರಾಜೀನಾಮೆ ನೀಡಿದಾಗ ನಂತರ ಈ ಮನೆಯನ್ನು ತೊರೆಯುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದ ಪ್ರಧಾನಿ ರನೀಲ್ ವಿಕ್ರಮಸಿಂಘೆ ಮನೆಗೆ ಬೆಂಕಿ, ವಾಹನಗಳು ಜಖಂ – ಹೊಸ ಸರ್ಕಾರ ರಚನೆಗೆ ಅಸ್ತು

    ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ‘ಟೆಂಪಲ್ ಟ್ರೀ’ ನಿವಾಸದಲ್ಲಿ ಪ್ರತಿಭಟನಾಕಾರರು ಕೇರಂ ಆಟ ಆಡುವುದು, ಆರಾಮವಾಗಿ ಮಲಗಿರುವುದು ಮತ್ತು ಅಡ್ಡಾಡುವ ದೃಶ್ಯಗಳನ್ನು ಈ ವೀಡಿಯೋದಲ್ಲಿ ನೀವು ಕಾಣಬಹುದಾಗಿದೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲಿ ಪ್ರತಿಭಟನಾಕಾರರಿಗೆ ಸಿಕ್ತು ಲಕ್ಷ ಲಕ್ಷ ಹಣ!

    Live Tv
    [brid partner=56869869 player=32851 video=960834 autoplay=true]

  • ಶ್ರೀಲಂಕಾಕ್ಕೆ ಭಾರತ ಯಾವಾಗಲೂ ಬೆಂಬಲ ನೀಡುತ್ತೆ: ಜೈಶಂಕರ್

    ತಿರುವನಂತಪುರಂ: ಶ್ರೀಲಂಕಾಕ್ಕೆ ಭಾರತ ಸರ್ಕಾರ ಯಾವಾಗಲೂ ಬೆಂಬಲ ನೀಡುತ್ತದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ದ್ವೀಪ ರಾಷ್ಟ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ನೆರೆಯ ದೇಶಕ್ಕೆ ಸಹಾಯ ಮಾಡಲು ಪ್ರಯತ್ನಿಸುತ್ತಿದೆ. ಸದ್ಯ ನಿರಾಶ್ರಿತರ ಬಿಕ್ಕಟ್ಟು ಇಲ್ಲ ಎಂದು ಸ್ಪಷ್ಟಪಡಿಸಿದರು.

    ನೆರೆಹೊರೆಯ ಮೊದಲ ನೀತಿ ಅಡಿಯಲ್ಲಿ, ಸಂಕಷ್ಟಗಳನ್ನು ನಿವಾರಿಸಲು ಸಹಾಯಕ್ಕಾಗಿ ಶ್ರೀಲಂಕಾ ಸರ್ಕಾರದ ಮನವಿಗೆ ಭಾರತವು ತುರ್ತಾಗಿ ಪ್ರತಿಕ್ರಿಯಿಸಿದೆ. ಮೂಲಸೌಕರ್ಯ ಸಂಪರ್ಕ ಮತ್ತು ನವೀಕರಿಸಬಹುದಾದ ಇಂಧನದ ಮೂಲಕ ಉಭಯ ದೇಶಗಳ ನಡುವಿನ ಆರ್ಥಿಕ ಸಂಪರ್ಕವನ್ನು ಹೆಚ್ಚಿಸುತ್ತದೆ ಎಂದು ಭರವಸೆ ನೀಡಿದರು.

    ಈಗಾಗಲೇ ಶ್ರೀಲಂಕಾಕ್ಕೆ ಹೆಚ್ಚು ಬೆಂಬಲ ನೀಡಿದ್ದೇವೆ. ಇನ್ನೂ ಹೆಚ್ಚು ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇವೆ. ಅವರಿಗೆ ಅಗತ್ಯವಿರುವಾಗ ನಾವು ಯಾವಾಗಲೂ ಸಹಾಯ ಮಾಡುತ್ತೇವೆ. ಶ್ರೀಲಂಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹಾಗೂ ಗಲಾಟೆಗಳನ್ನು ಗಮನಿಸುತ್ತಿದ್ದೇವೆ ಎಂದರು. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲಿ ಪ್ರತಿಭಟನಾಕಾರರಿಗೆ ಸಿಕ್ತು ಲಕ್ಷ ಲಕ್ಷ ಹಣ!

    ಪ್ರಸ್ತುತದಲ್ಲಿ ಶ್ರೀಲಂಕಾದಲ್ಲಿ ರಾಜಪಕ್ಸೆ ಮನೆತನದ ಆಡಳಿತ ವಿರೋಧಿಸಿ ಅಲ್ಲಿನ ಜನತೆ ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ. ಆಕ್ರೋಶಿತ ಜನಸಮೂಹ ಶನಿವಾರ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ನಿವಾಸಕ್ಕೆ ಲಗ್ಗೆಯಿಟ್ಟು ದಾಂಧಲೆ ಸೃಷ್ಟಿಸಿದರು. ಸ್ವಿಮ್ಮಿಂಗ್ ಪೂಲ್‍ನಲ್ಲಿ ಈಜಾಡಿದರು. ಅಡುಗೆ ಕೋಣೆಯಲ್ಲಿನ ತಿಂಡಿ-ತಿನಿಸು ತಿಂದರು. ಹಾಸಿಗೆಯಲ್ಲಿ ಬಿದ್ದು ಹೊರಳಾಡಿದರು. ಇದನ್ನೂ ಓದಿ: ‘ಸಿಂಗ್, ಡ್ಯಾನ್ಸ್ ಆ್ಯಂಡ್ ಪ್ರೇʼ- ಶ್ರೀಲ ಪ್ರಭುಪಾದರ ಕುರಿತ ಪುಸ್ತಕ ಬಿಡುಗಡೆ ಮಾಡಿದ ಸುಧಾಮೂರ್ತಿ

    Live Tv
    [brid partner=56869869 player=32851 video=960834 autoplay=true]

  • ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲಿ ಪ್ರತಿಭಟನಾಕಾರರಿಗೆ ಸಿಕ್ತು ಲಕ್ಷ ಲಕ್ಷ ಹಣ!

    ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲಿ ಪ್ರತಿಭಟನಾಕಾರರಿಗೆ ಸಿಕ್ತು ಲಕ್ಷ ಲಕ್ಷ ಹಣ!

    ಕೊಲಂಬೊ: ದೇಶದ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಶನಿವಾರ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಮನೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ನಿವಾಸದಲ್ಲಿ ದೊಡ್ಡ ಮೊತ್ತದ ಹಣವನ್ನು ಪತ್ತೆ ಹಚ್ಚಿದ್ದಾರೆ.

    ಪ್ರತಿಭಟನಾಕಾರರು ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲಿ ಲಕ್ಷಾಂತರ ರೂ. ಹಣವನ್ನು ಪತ್ತೆ ಮಾಡಿದ್ದಾರೆ. ಹಣವನ್ನು ತೆಗೆದುಕೊಂಡು ಎಣಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 1.78 ಲಕ್ಷ ರೂ. (17.8 ಮಿಲಿಯನ್‌ ಶ್ರೀಲಂಕನ್‌ ರುಪಿ) ಪ್ರತಿಭಟನಾಕಾರರಿಗೆ ಸಿಕ್ಕಿತ್ತು. ನಂತರ ಅದನ್ನು ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    https://twitter.com/SJIMYAKUS/status/1546005772920066049?ref_src=twsrc%5Etfw%7Ctwcamp%5Etweetembed%7Ctwterm%5E1546005772920066049%7Ctwgr%5E%7Ctwcon%5Es1_&ref_url=https%3A%2F%2Fwww.hindustantimes.com%2Fworld-news%2Fprotestors-find-millions-in-cash-at-sri-lanka-president-rajapaksa-s-mansion-101657432246136.html

    ರಾಜಪಕ್ಸೆ ಮನೆತನದ ಆಡಳಿತ ವಿರೋಧಿಸಿ ಶ್ರೀಲಂಕಾ ಜನತೆ ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ. ಆಕ್ರೋಶಿತ ಜನಸಮೂಹ ಶನಿವಾರ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ನಿವಾಸಕ್ಕೆ ಲಗ್ಗೆಯಿಟ್ಟು ದಾಂಧಲೆ ಸೃಷ್ಟಿಸಿದರು. ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಈಜಾಡಿದರು. ಅಡುಗೆ ಕೋಣೆಯಲ್ಲಿನ ತಿಂಡಿ-ತಿನಿಸು ತಿಂದರು. ಹಾಸಿಗೆಯಲ್ಲಿ ಬಿದ್ದು ಹೊರಳಾಡಿದರು.

    ಇದೇ ವೇಳೆ ಪ್ರತಿಭಟನಾಕಾರರು ರಾಜಪಕ್ಸೆ ಅವರ ತಿಜೋರಿಯನ್ನೂ ಪತ್ತೆ ಹಚ್ಚಿ ಹಣವನ್ನು ತೆಗೆದುಕೊಂಡಿದ್ದಾರೆ. ಅಧ್ಯಕ್ಷರ ನಿವಾಸದಿಂದ ಪ್ರತಿಭಟನಾಕಾರರು ಇನ್ನೂ ಹೊರಬಂದಿಲ್ಲ. ಅಲ್ಲೇ ಠಿಕಾಣಿ ಹೂಡಿ ಪ್ರತಿಭಟನೆ ಮುಂದುವರಿಸಿದ್ದಾರೆ. ಇದರ ನಡುವೆ ನಿನ್ನೆ ರಾತ್ರಿ ಪ್ರಧಾನಿ ರನಿಲ್‌ ವಿಕ್ರಮಸಿಂಘೆ ಅವರ ಮನೆಗೂ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದರು.

    Live Tv
    [brid partner=56869869 player=32851 video=960834 autoplay=true]

  • ಲಂಕಾ ಅಧ್ಯಕ್ಷರ ಸ್ಥಿತಿ ಪ್ರಧಾನಿ ಮೋದಿಗೂ ಬರಲಿದೆ- ಟಿಎಂಸಿ ಶಾಸಕ ಎಚ್ಚರಿಕೆ

    ಲಂಕಾ ಅಧ್ಯಕ್ಷರ ಸ್ಥಿತಿ ಪ್ರಧಾನಿ ಮೋದಿಗೂ ಬರಲಿದೆ- ಟಿಎಂಸಿ ಶಾಸಕ ಎಚ್ಚರಿಕೆ

    ಕೋಲ್ಕತ್ತಾ: ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಸ್ಥಿತಿ ಪ್ರಧಾನಿ ನರೇಂದ್ರ ಮೋದಿ ಅವರೂ ಎದುರಿಸಬೇಕಾಗುತ್ತದೆ ಎಂದು ತೃಣಮೂಲ ಕಾಂಗ್ರೆಸ್ (TMC) ಶಾಸಕ ಇದ್ರಿಸ್ ಅಲಿ ಎಚ್ಚರಿಕೆ ನೀಡಿದ್ದಾರೆ.

    ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ನಡುವೆ ಅಲ್ಲಿನ ಜನರು ತಮ್ಮ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಾವಿರಾರು ಪ್ರತಿಭಟನಾಕಾರರು ರಾಜಪಕ್ಸೆಯವರ ನಿವಾಸಕ್ಕೆ ಮುತ್ತಿಗೆ ಹಾಕಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಿದ್ದಾರೆ. ಇಂದು ಸಹ ಪ್ರಧಾನಿ ನಿವಾಸದಲ್ಲಿ ಪ್ರಜೆಗಳದ್ದೇ ದರ್ಬಾರ್  ಮುಂದುವರಿದಿದೆ.  ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಗೆ ನುಗ್ಗಿದ ಸಾವಿರಾರು ಜನ – ಪೂಲ್‌ನಲ್ಲಿ ಪ್ರತಿಭಟನಾಕಾರರು, ರಾಜಪಕ್ಸೆ ಪರಾರಿ

    ಜುಲೈ 11ರಂದು ನಡೆಯಲಿರುವ ಕೋಲ್ಕತ್ತಾದ ಸೀಲ್ದಾಹ್ ಮೆಟ್ರೋ ನಿಲ್ದಾಣದ ಉದ್ಘಾಟನಾ ಸಮಾರಂಭಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಹ್ವಾನಿಸಿದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.  ಇದನ್ನೂ ಓದಿ: ಕೊಲೆ ಯತ್ನ ನಡೆದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹಾಸ್ಯ ನಟ ಬಾಬು ಮೋಹನ್

    ಮಮತಾ ಬ್ಯಾನರ್ಜಿ ಅವರು ರೈಲ್ವೆ ಸಚಿವರಾಗಿದ್ದಾಗ ಈ ಯೋಜನೆಯನ್ನು ಪ್ರಾರಂಭಿಸಿದರು. ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದಿರುವುದು ಅನ್ಯಾಯ. ಈ ಹಿಂದೆಯೂ ಕೇಂದ್ರ ಗೃಹಸಚಿವ ಅಮಿತ್ ಶಾರ ಅಧ್ಯಕ್ಷತೆಯಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಿಂದ ಮಮತಾ ಬ್ಯಾನರ್ಜಿ ಅವರನ್ನು ಹೊರಗಿಡಲಾಗಿತ್ತು. ಇದರಿಂದ ಕೇಂದ್ರ ಸರ್ಕಾರ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಟಿಎಂಸಿ ಆರೋಪಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಶ್ರೀಲಂಕಾ ಪ್ರಧಾನಿ ಮನೆಗೆ ಬೆಂಕಿ ಇಟ್ಟ ಪ್ರತಿಭಟನಾಕಾರರು

    ಶ್ರೀಲಂಕಾ ಪ್ರಧಾನಿ ಮನೆಗೆ ಬೆಂಕಿ ಇಟ್ಟ ಪ್ರತಿಭಟನಾಕಾರರು

    ಕೊಲಂಬೊ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ನಡುವೆ ಅಲ್ಲಿನ ಜನರ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಿದ್ದಾರೆ.

    ದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಬಿಕ್ಕಟ್ಟು ದಿನೇ ದಿನೇ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ನಡುವೆ ಅಲ್ಲಿನ ಜನರು ತಮ್ಮ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. ಸಾವಿರಾರು ಪ್ರತಿಭಟನಾಕಾರರು ರಾಜಪಕ್ಸೆಯವರ ನಿವಾಸಕ್ಕೆ ಮುತ್ತಿಗೆ ಹಾಕಿ ಸ್ವಿಮ್ಮಿಂಗ್ ಪೂಲ್‍ನಲ್ಲಿ ಈಜಿದ್ದರು. ಇದನ್ನೂ ಓದಿ: ಶ್ರೀಲಂಕಾದಲ್ಲಿ ಜನಾಕ್ರೋಶ ಉಲ್ಬಣ – ಪ್ರಧಾನಿ ಸ್ಥಾನಕ್ಕೆ ರನಿಲ್‌ ವಿಕ್ರಮಸಿಂಘೆ ರಾಜೀನಾಮೆ

    ಇದೀಗ ಪ್ರತಿಭಟನಾಕಾರರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ಈ ಬಗ್ಗೆ ಪ್ರಧಾನಿ ಕಚೇರಿ ಮಾಹಿತಿ ನೀಡಿದೆ. ಈಗಾಗಲೇ ರನಿಲ್ ವಿಕ್ರಮಸಿಂಘೆ ಅವರು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಎಲ್ಲಾ ನಾಗರಿಕರ ಸುರಕ್ಷತೆ ಸೇರಿದಂತೆ ಸರ್ಕಾರದ ಮುಂದುವರಿಕೆಗಾಗಿ ಪಕ್ಷದ ನಾಯಕರ ಶಿಫಾರಸನ್ನು ಸ್ವೀಕರಿಸಿ, ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುತ್ತೇನೆ. ಇದಕ್ಕೆ ಅನುಕೂಲವಾಗುವಂತೆ ನಾನು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದರು. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಗೆ ನುಗ್ಗಿದ ಸಾವಿರಾರು ಜನ – ಪೂಲ್‌ನಲ್ಲಿ ಪ್ರತಿಭಟನಾಕಾರರು, ರಾಜಪಕ್ಸೆ ಪರಾರಿ

    Live Tv
    [brid partner=56869869 player=32851 video=960834 autoplay=true]

  • ಶ್ರೀಲಂಕಾದಲ್ಲಿ ಜನಾಕ್ರೋಶ ಉಲ್ಬಣ – ಪ್ರಧಾನಿ ಸ್ಥಾನಕ್ಕೆ ರನಿಲ್‌ ವಿಕ್ರಮಸಿಂಘೆ ರಾಜೀನಾಮೆ

    ಶ್ರೀಲಂಕಾದಲ್ಲಿ ಜನಾಕ್ರೋಶ ಉಲ್ಬಣ – ಪ್ರಧಾನಿ ಸ್ಥಾನಕ್ಕೆ ರನಿಲ್‌ ವಿಕ್ರಮಸಿಂಘೆ ರಾಜೀನಾಮೆ

    ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಿಂದ ಶ್ರೀಲಂಕಾದಲ್ಲಿ ಜನತೆ ರೊಚ್ಚಿಗೆದ್ದು ಪ್ರತಿಭಟನೆ ನಡೆಸುತ್ತಿದ್ದು, ದೇಶದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ದ್ವೀಪ ರಾಷ್ಟ್ರ ಅಧ್ಯಕ್ಷ ಗೊಟಬಯ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ಅಧ್ಯಕ್ಷರ ಭವನಕ್ಕೆ ನುಗ್ಗಿ ಜನರು ದಾಂಧಲೆ ನಡೆಸಿದರು. ಇದರ ಬೆನ್ನಲ್ಲೇ ರನಿಲ್‌ ವಿಕ್ರಮಸಿಂಘೆ ಅವರು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾದಲ್ಲಿ ಅರಾಜಕತೆ ವಾತಾವರಣ ಸೃಷ್ಟಿಯಾಗಿದೆ. ದೇಶದ ಜನತೆ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದೆ. ಪರಿಣಾಮವಾಗಿ ಮಹಿಂದಾ ರಾಜಪಕ್ಸೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ನಂತರ ರನಿಲ್‌ ವಿಕ್ರಮಸಿಂಘೆ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆರ್ಥಿಕ ದುಸ್ಥಿತಿಯಿಂದ ಕಂಗೆಟ್ಟಿರುವ ದೇಶಕ್ಕೆ ಅನೇಕ ಕಡೆಯಿಂದ ಸಾಲ ಹಾಗೂ ಇನ್ನಿತರ ಸೌಲಭ್ಯಕ್ಕಾಗಿ ರನಿಲ್‌ ಪ್ರಯತ್ನಿಸಿದರು. ಆದರೆ ಆಡಳಿತದಲ್ಲಿ ಸುಧಾರಣೆ ತರುವುದು ಕಷ್ಟ ಎಂಬುದನ್ನು ಅರಿತು ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಗೆ ನುಗ್ಗಿದ ಸಾವಿರಾರು ಜನ – ಪೂಲ್‌ನಲ್ಲಿ ಪ್ರತಿಭಟನಾಕಾರರು, ರಾಜಪಕ್ಸೆ ಪರಾರಿ

    ರಾಜಪಕ್ಸೆ ಮನೆತನದ ಆಡಳಿತದ ವಿರುದ್ಧ ಶ್ರೀಲಂಕಾದಲ್ಲಿ ಜನಾಕ್ರೋಶ ವ್ಯಕ್ತವಾಗಿದೆ. ಪರಿಣಾಮವಾಗಿ ಇಂದು ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ನಿವಾಸಕ್ಕೆ ನುಗ್ಗಿ ಜನ ದಾಂಧಲೆ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ನಿವಾಸಕ್ಕೆ ಲಗ್ಗೆಯಿಟ್ಟ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಈಜಾಡಿದರು. ಅಧ್ಯಕ್ಷರ ನಿವಾಸದ ಸೋಫಾ, ಬೆಡ್‌ ಮೇಲೆ ಬಿದ್ದು ಹೊರಳಾಡಿದರು. ಅಡುಗೆ ಮನೆಗೆ ನುಗ್ಗಿ ದಾಂಧಲೆ ಸೃಷ್ಟಿಸಿದರು.

    ಪ್ರತಿಭಟನಾಕಾರರ ಆಕ್ರೋಶದಿಂದ ಹೆದರಿದ ಗೊಟಬಯ ಅವರು ಪರಾರಿಯಾದರು. ಈ ಎಲ್ಲಾ ಘಟನೆಗಳು ನಡೆದ ನಂತರ ರನಿಲ್‌ ವಿಕ್ರಮಸಿಂಘೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರೀಲಂಕಾ ಅಧ್ಯಕ್ಷರ ಮನೆಗೆ ನುಗ್ಗಿದ ಸಾವಿರಾರು ಜನ – ಪೂಲ್‌ನಲ್ಲಿ ಪ್ರತಿಭಟನಾಕಾರರು, ರಾಜಪಕ್ಸೆ ಪರಾರಿ

    ಶ್ರೀಲಂಕಾ ಅಧ್ಯಕ್ಷರ ಮನೆಗೆ ನುಗ್ಗಿದ ಸಾವಿರಾರು ಜನ – ಪೂಲ್‌ನಲ್ಲಿ ಪ್ರತಿಭಟನಾಕಾರರು, ರಾಜಪಕ್ಸೆ ಪರಾರಿ

    ಕೊಲಂಬೋ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ನಡುವೆ ಅಲ್ಲಿನ ಜನರು ತಮ್ಮ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಶನಿವಾರ ಸಾವಿರಾರು ಪ್ರತಿಭಟನಾಕಾರರು ರಾಜಪಕ್ಸೆಯವರ ನಿವಾಸಕ್ಕೆ ಮುತ್ತಿಗೆ ಹಾಕಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಿದ್ದಾರೆ.

    ಶ್ರೀಲಂಕಾದ ರಾಜಧಾನಿ ಕೊಲಂಬೋದಲ್ಲಿ ಇಂದು ಸಾವಿರಾರು ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಭೇದಿಸಿ, ಅಧ್ಯಕ್ಷರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ. ಪ್ರತಿಭಟನಾಕಾರರು ಶ್ರೀಲಂಕಾದ ಧ್ವಜ, ಹೆಲ್ಮೆಟ್‌ಗಳನ್ನು ಹಿಡಿದುಕೊಂಡು ಅಧ್ಯಕ್ಷರ ನಿವಾಸಕ್ಕೆ ನುಗ್ಗಿದ್ದಾರೆ. ಇದನ್ನೂ ಓದಿ: ಆಪರೇಷನ್ ಅಮರನಾಥ ಚಾಲೆಂಜ್ ಆಗಿದೆ: ಕರ್ನಲ್ ವಿ.ಎಂ. ನಾಯಕ್

    ರಾಜಪಕ್ಸೆ ವಿರುದ್ಧ ಘೋಷಣೆ ಕೂಗಿರುವ ಜನರು ಅವರ ನಿವಾಸದಲ್ಲಿ ದಾಂಧಲೆ ನಡೆಸಿದ್ದಾರೆ. ಸ್ವಿಮ್ಮಿಂಗ್ ಪೂಲ್‌ಗೆ ಇಳಿದು ಈಜಾಡಿದ್ದಾರೆ. ಸೋಫಾ, ಬೆಡ್‌ಗಳ ಮೇಲೆ ಕುಣಿದಾಡಿದ್ದಾರೆ. ಅಡುಗೆ ಮನೆಗೂ ನುಗ್ಗಿ, ಹಸಿವನ್ನು ನೀಗಿಸಿಕೊಂಡಿದ್ದಾರೆ. ಇಷ್ಟು ಮಾತ್ರವಲ್ಲದೇ ಸಾಮಾಜಿಕ ಮಾಧ್ಯಮಗಳಲ್ಲಿ ಲೈವ್ ಸ್ಟ್ರೀಮ್‌ಗಳನ್ನು ಮಾಡಿ ಆನಂದಿಸಿದ್ದಾರೆ.

    ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರನ್ನು ಶುಕ್ರವಾರ ತಮ್ಮ ಸುರಕ್ಷತೆಗಾಗಿ ನಿವಾಸದಿಂದ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಇಂದಿನ ಪ್ರತಿಭಟನೆಯಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಕನಿಷ್ಠ 21 ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಬೈಕ್ ಜಪ್ತಿ ಮಾಡಿ ವಿಮೆ ಮಾಡಿಸಿದ ಪೊಲೀಸರು – ಕಣ್ಣೀರಿಟ್ಟ ಸವಾರ

    ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಸಿಂಹಳದಲ್ಲಿ 2.2 ಕೋಟಿ ಜನರು ಹೋರಾಡುತ್ತಿದ್ದಾರೆ. ಇಂಧನ, ಆಹಾರ, ಔಷಧಿಗಳಂತಹ ಅಗತ್ಯ ವಸ್ತುಗಳ ಕೊರತೆ ಉಂಟಾಗಿದ್ದು, ಜನರು ಸಾವು ಬದುಕಿನ ನಡುವೆ ಹೆಣಗಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]