Tag: Sri Lanka

  • ದ್ವೀಪರಾಷ್ಟ್ರದಲ್ಲಿ ಇಂಧನ ಬಿಕ್ಕಟ್ಟು- ಶಾಲೆಗಳಿಗೆ ರಜೆ ಘೋಷಣೆ

    ದ್ವೀಪರಾಷ್ಟ್ರದಲ್ಲಿ ಇಂಧನ ಬಿಕ್ಕಟ್ಟು- ಶಾಲೆಗಳಿಗೆ ರಜೆ ಘೋಷಣೆ

    ಕೊಲೊಂಬೊ: ಶ್ರೀಲಂಕಾದಲ್ಲಿ ಇಂಧನ ಬಿಕ್ಕಟ್ಟಿನಿಂದಾಗಿ ಶಿಕ್ಷಣ ಸಚಿವಾಲಯವು ಇಂದಿನಿಂದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿದೆ.

    ಈ ಬಗ್ಗೆ ಶ್ರೀಲಂಕಾ ಶಿಕ್ಷಣ ಸಚಿವರು ಮಾಹಿತಿ ನೀಡಿದ್ದು, ಮುಂದಿನ ರಜೆಯ ಅವಧಿಯಲ್ಲಿ ಶಾಲೆಯು ಪಠ್ಯಕ್ರಮವನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪ್ರಾಂಶುಪಾಲರ ಮೇಲೆ ಸಾರಿಗೆ ತೊಂದರೆಯ ಪರಿಣಾಮ ಬೀರದ ಪರಿಸ್ಥಿತಿಗಳಲ್ಲಿ ವಿಭಾಗೀಯ ಮಟ್ಟದಲ್ಲಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳೊಂದಿಗೆ ತರಗತಿಗಳನ್ನು ನಡೆಸಲು ಅನುಮತಿಸಲಾಗುವುದು ಎಂದು ಹೇಳಿದರು.

    ಕೊಲಂಬೊ ನಗರದ ಆಸುಪಾಸಿನಲ್ಲಿರುವ ಎಲ್ಲಾ ಸರ್ಕಾರಿ ಮತ್ತು ಸರ್ಕಾರಿ-ಅನುಮೋದಿತ, ಖಾಸಗಿ ಶಾಲೆಗಳಲ್ಲಿ ದೀರ್ಘಾವಧಿಯ ವಿದ್ಯುತ್ ಕಡಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವಾರದವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಲಿಬಿಯಾದಲ್ಲಿ ಸಂಸತ್ ಭವನಕ್ಕೆ ಬೆಂಕಿ

    ಇದೇ ವೇಳೆ ಮುಂದಿನ ವಾರದಲ್ಲಿ ಆನ್‍ಲೈನ್ ಬೋಧನೆಗೆ ಅನುಕೂಲವಾಗುವಂತೆ ಶ್ರೀಲಂಕಾದ ಲೋಕೋಪಯೋಗಿ ಆಯೋಗವು ಬೆಳಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಕಡಿತಗೊಳಿಸದಿರಲು ಒಪ್ಪಿಕೊಂಡಿದೆ ಎಂದು ಮಾಹಿತಿ ನೀಡಿದರು.

    ಈ ಹಿಂದೆಯೂ ಜೂನ್ 18ರಂದು ಶ್ರೀಲಂಕಾ ಸರ್ಕಾರವು ಎಲ್ಲಾ ಶಾಲೆಗಳನ್ನು ಒಂದು ವಾರಗಳ ಕಾಲ ಬಂದ್ ಮಾಡುವುದಾಗಿ ಘೋಷಿಸಿತ್ತು. ಇದನ್ನೂ ಓದಿ: ಮಹಾ ಬಿಕ್ಕಟ್ಟಿಗೆ ಇಂದು ಕ್ಲೈಮ್ಯಾಕ್ಸ್‌ – ಶಿಂಧೆಗೆ ಇಂದು ವಿಶ್ವಾಸ ಪರೀಕ್ಷೆ

    Live Tv
    [brid partner=56869869 player=32851 video=960834 autoplay=true]

  • ಹೂಡಿಕೆ ಉತ್ತೇಜನಕ್ಕೆ ಭಾರತೀಯ ಹೂಡಿಕೆದಾರರಿಗೆ ವೀಸಾ ನೀಡಿದ ಶ್ರೀಲಂಕಾ

    ಹೂಡಿಕೆ ಉತ್ತೇಜನಕ್ಕೆ ಭಾರತೀಯ ಹೂಡಿಕೆದಾರರಿಗೆ ವೀಸಾ ನೀಡಿದ ಶ್ರೀಲಂಕಾ

    ಕೊಲೊಂಬೊ: ದೇಶದಲ್ಲಿ ಹೂಡಿಕೆಯನ್ನು ಉತ್ತೇಜಿಸಲು ದ್ವೀಪ ರಾಷ್ಟ್ರವು ಭಾರತೀಯ ಉದ್ಯಮಿಗಳಿಗೆ ಶ್ರೀಲಂಕಾ ಸಚಿವ ಧಮ್ಮಿಕಾ ಪೆರೆರಾ ಅವರು 5 ವರ್ಷಗಳ ವೀಸಾಗಳನ್ನು ಹಸ್ತಾಂತರಿಸಿದರು.

    ಶ್ರೀಲಂಕಾದಲ್ಲಿರುವ ಭಾರತೀಯ ಹೈಕಮಿಷನ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಶ್ರೀಲಂಕಾದಲ್ಲಿ ಭಾರತೀಯ ಉದ್ಯಮಿಗಳಿಗೆ 5 ವರ್ಷಗಳ ವೀಸಾಗಳನ್ನು ಹಸ್ತಾಂತರಿಸುತ್ತಿದ್ದಾರೆ. ಇದು ವ್ಯಾಪಾರ ಮಾಡಲು ಸುಲಭತೆಯನ್ನು ಹೆಚ್ಚಿಸುತ್ತದೆ. ಜೊತೆಗೆ ಹೂಡಿಕೆಯನ್ನು ಉತ್ತೇಜಿಸುವಲ್ಲಿ ಸ್ವಾಗತಾರ್ಹ ಹೆಜ್ಜೆಯಾಗಿದೆ ಎಂದು ತಿಳಿಸಿದರು.

    ಈ ಹಿಂದೆ ಕೊಲೊಂಬೊದಲ್ಲಿರುವ ಭಾರತೀಯ ಹೈಕಮಿಷನರ್ ಗೋಪಾಲ್ ಬಾಗ್ಲೆ ಶ್ರೀಲಂಕಾದ ವ್ಯಾಪಾರ ಸಚಿವರನ್ನು ಭೇಟಿಯಾಗಿ ವ್ಯಾಪಾರದ ವಿವಿಧ ಅಂಶಗಳ ಕುರಿತು ಚರ್ಚಿಸಿದ್ದರು. ಇದನ್ನೂ ಓದಿ: ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ಗೆ ಕೊಲೆ ಬೆದರಿಕೆ ಪತ್ರ – ಲಿಸ್ಟ್‌ನಲ್ಲಿ ಸಿದ್ದು, ಹೆಚ್‌ಡಿಕೆ ಹೆಸರು

    ವ್ಯಾಪಾರ ಸಚಿವ ನಳಿನ್ ಫೆರ್ನಾಂಡೋ ಅವರನ್ನು ಹೈಕಮಿಷನರ್ ಭೇಟಿ ಮಾಡಿದರು. ಅವರು ವ್ಯಾಪಾರದ ಪ್ರಮಾಣವನ್ನು ಹೆಚ್ಚಿಸುವುದು, ಭಾರತ ಮತ್ತು ಶ್ರೀಲಂಕಾ ನಡುವಿನ ವ್ಯಾಪಾರ ಸಂಪರ್ಕವನ್ನು ಸುಲಭಗೊಳಿಸಲು ವೇದಿಕೆಗಳನ್ನು ರಚಿಸುವಂತಹ ದ್ವಿರಾಷ್ಟ್ರೀಯ ವ್ಯಾಪಾರದ ವಿವಿಧ ಅಂಶಗಳ ಕುರಿತು ಚರ್ಚಿಸಿರುವ ಬಗ್ಗೆ ಭಾರತೀಯ ರಾಯಭಾರ ಕಚೇರಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ಪಾಕ್ ಪೊಲೀಸರಿಂದ 9 ಟೆರರಿಸ್ಟ್ ಬಂಧನ

    ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮಾರ್ಚ್‍ನಲ್ಲಿ ಕೊಲಂಬೊದಲ್ಲಿರುವ ಸುವಾಸೇರಿಯಾ ಪ್ರಧಾನ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಫೌಂಡೇಶನ್ ಎದುರಿಸುತ್ತಿರುವ ವೈದ್ಯಕೀಯ ಸರಬರಾಜುಗಳ ಕೊರತೆಯ ಬಗ್ಗೆ ತಿಳಿಸಲಾಗಿದೆ ಎಂದು ಬಾಗ್ಲೇ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಇಂದು ಕೆಲ ವೈದ್ಯಕೀಯ ನೆರವನ್ನು ಶ್ರೀಲಂಕಾಕ್ಕೆ ಹಸ್ತಾಂತರಿಸಲಾಯಿತು.

    Live Tv

  • ಕ್ಯಾಚ್ ಹಿಡಿಯಲು ಹೋದಾಗ ಪ್ಯಾಂಟಿಗೆ ಬಡಿದ ಬೇಲ್ಸ್ – ನೋವಿನಿಂದ ನರಳಾಡಿದ ವಾರ್ನರ್

    ಕ್ಯಾಚ್ ಹಿಡಿಯಲು ಹೋದಾಗ ಪ್ಯಾಂಟಿಗೆ ಬಡಿದ ಬೇಲ್ಸ್ – ನೋವಿನಿಂದ ನರಳಾಡಿದ ವಾರ್ನರ್

    ಕೊಲಂಬೋ: ಶ್ರೀಲಂಕಾ ಪ್ರವಾಸಗೊಂಡಿರುವ ಆಸ್ಟ್ರೇಲಿಯಾ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್‍ಗಳ ಭರ್ಜರಿ ಜಯದೊಂದಿಗೆ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಜೊತೆಗೆ 3ನೇ ದಿನದಾಟದಲ್ಲಿ ಆಸ್ಟ್ರೇಲಿಯಾದ ಫೀಲ್ಡರ್ ಡೇವಿಡ್ ವಾರ್ನರ್ ಪ್ಯಾಂಟಿಗೆ ಬೇಲ್ಸ್ ಬಡಿದ ಪ್ರಸಂಗ ನಡೆದಿದೆ.

    3ನೇ ದಿನದಾಟದ ಆರಂಭದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಶ್ರೀಲಂಕಾದ ಬ್ಯಾಟ್ಸ್‌ಮ್ಯಾನ್‌ ಜೆಫ್ರಿ ವಾಂಡರ್ಸೆ ಆಸ್ಟ್ರೇಲಿಯಾದ ಬೌಲರ್ ಟ್ರಾವಿಸ್ ಹೆಡ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಈ ವೇಳೆ ಸ್ಲಿಪ್‍ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಡೇವಿಡ್ ವಾರ್ನರ್ ಬಾಲ್ ಕ್ಯಾಚ್ ಪಡೆಯಲು ಮುಂದಾದರು. ಆಗ ಬೇಲ್ಸ್ ವಾರ್ನರ್ ಪ್ಯಾಂಟಿಗೆ ಬಡಿದು ದಿಢೀರ್ ಆಗಿ ಮೈದಾನಕ್ಕೆ ಬಿದ್ದು ನೋವಿನಿಂದ ನರಳಾಡಿದರು. ನಂತರ ನೋವು ನಿವಾರಣೆಗೊಂಡು ಫೀಲ್ಡಿಂಗ್ ಮುಂದುವರಿಸಿದರು. ಇದನ್ನೂ ಓದಿ: ಭಾರತ Vs ಇಂಗ್ಲೆಂಡ್ ಟೆಸ್ಟ್ – ಮತ್ತೆ ಸುದ್ದಿಯಾದ ಜಾರ್ವೋ 69

    ಇದೀಗ ವಾರ್ನರ್ ಪ್ಯಾಟಿಂಗೆ ಬಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ ತೊಡಗಿದೆ. ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 3ನೇ ದಿನದಾಟದಲ್ಲಿ 10 ವಿಕೆಟ್‍ಗಳ ಅಂತರದ ಜಯದೊಂದಿಗೆ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

    ಶ್ರೀಲಂಕಾ ಮೊದಲ ಇನ್ನಿಂಗ್ಸ್‌ನಲ್ಲಿ 212 ರನ್‍ಗಳಿಗೆ ಆಲೌಟ್ ಆಯಿತು. ನಂತರ ಆಸ್ಟ್ರೇಲಿಯಾ 321 ರನ್ ಬಾರಿಸಿ 109 ರನ್‍ಗಳ ಮುನ್ನಡೆ ಪಡೆದುಕೊಂಡಿತ್ತು. ದ್ವಿತೀಯ ಇನ್ನಿಂಗ್ಸ್‍ನಲ್ಲಿ 113 ರನ್‍ಗಳಿಗೆ ಶ್ರೀಲಂಕಾ ಆಲೌಟ್ ಆಗಿ ಕೇವಲ 5 ರನ್‍ಗಳ ಟಾರ್ಗೆಟ್ ನೀಡಿತು. ಈ ಟಾರ್ಗೆಟ್‍ನ್ನು ವಾರ್ನರ್ ಮೊದಲ ಓವರ್‌ನ ನಾಲ್ಕು ಎಸೆತಗಳಲ್ಲಿ 1 ಬೌಂಡರಿ, 1 ಸಿಕ್ಸ್ ಸಹಿತ 10 ಬಾರಿಸಿ ಆಸ್ಟ್ರೇಲಿಯಾಗೆ 10 ವಿಕೆಟ್‍ಗಳ ಜಯ ತಂದು ಕೊಟ್ಟರು. ಇದನ್ನೂ ಓದಿ: ಕೇವಲ 40ರೂ.ನಲ್ಲಿ ಧೋನಿ ಮಂಡಿ ನೋವು ಗುಣಪಡಿಸಿದ ಹಳ್ಳಿ ವೈದ್ಯ!

    Live Tv

  • ಶ್ರೀಲಂಕಾ ಬಿಕ್ಕಟ್ಟು; ಡೀಸೆಲ್‌ಗಾಗಿ ಬಂಕ್‌ನಲ್ಲಿ 5 ದಿನ ಕ್ಯೂನಲ್ಲಿ ನಿಂತಿದ್ದ ಟ್ರಕ್‌ ಡ್ರೈವರ್‌ ಸಾವು

    ಶ್ರೀಲಂಕಾ ಬಿಕ್ಕಟ್ಟು; ಡೀಸೆಲ್‌ಗಾಗಿ ಬಂಕ್‌ನಲ್ಲಿ 5 ದಿನ ಕ್ಯೂನಲ್ಲಿ ನಿಂತಿದ್ದ ಟ್ರಕ್‌ ಡ್ರೈವರ್‌ ಸಾವು

    ಕೊಲಂಬೊ: ಡೀಸೆಲ್‌ಗಾಗಿ ಬಂಕ್‌ನಲ್ಲಿ ಸತತ 5 ದಿನಗಳ ಕಾಲ ಕ್ಯೂನಲ್ಲಿ ನಿಂತಿದ್ದ ಟ್ರಕ್‌ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶ್ರೀಲಂಕಾದಲ್ಲಿ ನಡೆದಿದೆ.

    ದೇಶದ ಪಶ್ಚಿಮ ಪ್ರಾಂತ್ಯದ ಫಿಲ್ಲಿಂಗ್ ಸ್ಟೇಷನ್‌ನಲ್ಲಿ ಐದು ದಿನಗಳ ಕಾಲ ಸರದಿಯಲ್ಲಿ ನಿಂತಿದ್ದ 63 ವಯಸ್ಸಿನ ಟ್ರಕ್‌ ಚಾಲಕ ಶ್ರೀಲಂಕಾದಲ್ಲಿ ಸಾವನ್ನಪ್ಪಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರದಲ್ಲಿ ಇಂಧನ ಸಂಗ್ರಹಕ್ಕಾಗಿ ಸರತಿ ಸಾಲಿನಲ್ಲಿ ನಿಂತು ದೀರ್ಘಕಾಲ ಕಾದು ಮೃತಪಟ್ಟವರ ಸಂಖ್ಯೆ 10ಕ್ಕೇರಿದೆ. ಇದನ್ನೂ ಓದಿ: ರಫ್ತು ನಿಲ್ಲಿಸಿದ ಭಾರತ – ಗೋಧಿಗಾಗಿ ರಷ್ಯಾ ಕಡೆ ಮುಖ ಮಾಡಿದ ಬಾಂಗ್ಲಾದೇಶ

    sri lanka diesel

    ಅಂಗುರುವಾತೋಟದ ಫಿಲ್ಲಿಂಗ್ ಸ್ಟೇಷನ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಮೃತಪಟ್ಟವರು 43 ರಿಂದ 84 ವರ್ಷ ವಯಸ್ಸಿನ ಪುರುಷರೇ ಆಗಿದ್ದಾರೆ. ಈ ಪೈಕಿ ಹೆಚ್ಚಿನ ಸಾವುಗಳು ಹೃದಯಾಘಾತದಿಂದ ಸಂಭವಿಸಿದ್ದಾಗಿವೆ ಎಂದು ವರದಿಯಾಗಿದೆ.

    ವಾರದ ಹಿಂದೆ, 53 ವರ್ಷದ ವ್ಯಕ್ತಿಯೊಬ್ಬರು ಕೊಲಂಬೊದ ಪಾನದುರಾದ ಪೆಟ್ರೋಲ್‌ ಬಂಕ್‌ನಲ್ಲಿ ದೀರ್ಘಕಾಲ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ ಸಾವನ್ನಪ್ಪಿದರು. ಇದನ್ನೂ ಓದಿ: 6 ವರ್ಷದ ಹಿಂದೆ ಮದುವೆ- 4ನೇ ಪತ್ನಿಗೆ ಡಿವೋರ್ಸ್ ಕೊಟ್ಟ 91ರ ರೂಪರ್ಟ್ ಮುರ್ಡೋಕ್

    ಶ್ರೀಲಂಕಾದಲ್ಲಿ 2.2 ಕೋಟಿ ಜನಸಂಖ್ಯೆ ಇದೆ. 70 ವರ್ಷಗಳ ನಂತರ ಈ ದೇಶ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇಂಧನ ಕೊರತೆ, ಆಹಾರದ ಬೆಲೆಗಳಲ್ಲಿ ಏರಿಕೆ ಮತ್ತು ಔಷಧಗಳ ಕೊರತೆ ದೇಶವನ್ನು ಹೆಚ್ಚು ಭಾದಿಸುತ್ತಿದೆ.

    Live Tv

  • ಭಾರತ ನೀಡಿದ ಹಣಕಾಸಿನ ನೆರವು ದೇಣಿಗೆಯಲ್ಲ: ಶ್ರೀಲಂಕಾ ಪ್ರಧಾನಿ

    ಭಾರತ ನೀಡಿದ ಹಣಕಾಸಿನ ನೆರವು ದೇಣಿಗೆಯಲ್ಲ: ಶ್ರೀಲಂಕಾ ಪ್ರಧಾನಿ

    ಕೊಲೊಂಬೋ: ಭಾರತವು ಒದಗಿಸುವ ಹಣಕಾಸಿನ ನೆರವು ದೇಣಿಗೆಯಲ್ಲ ಎಂದು ಶ್ರೀಲಂಕಾದ ಪ್ರಧಾನ ಮಂತ್ರಿ ರಾನಿಲ್ ವಿಕ್ರಮಸಿಂಘೆ ಸ್ಪಷ್ಟಪಡಿಸಿದರು.

    ಸಂಸತ್ತಿನಲ್ಲಿ ಮಾತನಾಡಿದ ಅವರು, ದೇಶವು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಅನುಭವಿಸುತ್ತಿರುವುದರಿಂದ ಭಾರತವು ಹಣವನ್ನು ಸಾಲದ ರೂಪದಲ್ಲಿ ನೀಡಿದೆ. ಇದನ್ನು ಮರುಪಾವತಿ ಮಾಡಲು ಯೋಜನೆಯನ್ನು ಹೊಂದಬೇಕು ಎಂದು ತಿಳಿಸಿದರು.

    ಭಾರತದಿಂದ ಕ್ರೆಡಿಟ್ ಲೈನ್ ಅಡಿಯಲ್ಲಿ 31,32,54,000 ರೂ. ಮೊತ್ತದ ಸಾಲವನ್ನು ತೆಗೆದುಕೊಂಡಿದ್ದೇವೆ. ಭಾರತವು ಈ ರೀತಿ ನಮ್ಮನ್ನು ನಿರಂತರವಾಗಿ ಬೆಂಬಲಿಸಲು ಸಾಧ್ಯವಾಗುವುದಿಲ್ಲ. ಅವರ ಸಹಾಯಕ್ಕೂ ಮಿತಿ ಇರುತ್ತದೆ. ಇದರಿಂದಾಗಿ ನಾವು ಸಾಲವನ್ನು ಮರುಪಾವತಿಸಬೇಕು ಎಂದು ತಿಳಿಸಿದರು.

    SHRILANKA

    ದ್ವೀಪ ರಾಷ್ಟ್ರ ತನ್ನ ಸ್ವಾತಂತ್ರ್ಯದ ಬಳಿಕ ಎಂದೂ ಸಂಭವಿಸದ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಅಲ್ಲಿನ 2 ಕೋಟಿಗೂ ಅಧಿಕ ಜನರು ಆಹಾರ, ಇಂಧನ ಹಾಗೂ ಔಷಧಕ್ಕಾಗಿ ತೀವ್ರವಾದ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ದೇಶ ಭಾರೀ ಹಣದುಬ್ಬರ ಹಾಗೂ ಸುದೀರ್ಘ ವಿದ್ಯುತ್ ಕಡಿತವನ್ನೂ ಎದುರಿಸುತ್ತಿದೆ. ಶ್ರೀಲಂಕಾ ಎರಡು ವಾರ ಶಟ್‍ಡೌನ್ – ತುರ್ತು ಸೇವೆಗಳು ಮಾತ್ರ ಲಭ್ಯ

    ಸ್ಥಳೀಯ ಆರ್ಥಿಕ ಪರಿಸ್ಥಿತಿಗಳನ್ನು ನಿರ್ಣಯಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಉನ್ನತ ಶ್ರೇಣಿಯ ಅಧಿಕಾರಿಗಳ ತಂಡ ನಾಳೆ ಕೊಲಂಬೊಗೆ ಆಗಮಿಸಲಿದೆ. ಇದನ್ನೂ ಓದಿ: ಪೆಟ್ರೋಲ್‍ಗಾಗಿ ಕ್ಯೂ ನಿಂತ ಜನರಿಗೆ ಟೀ, ಬನ್ ನೀಡಿದ ಮಾಜಿ ಕ್ರಿಕೆಟಿಗ

    Live Tv

  • ಶ್ರೀಲಂಕಾ ಎರಡು ವಾರ ಶಟ್‍ಡೌನ್ – ತುರ್ತು ಸೇವೆಗಳು ಮಾತ್ರ ಲಭ್ಯ

    ಶ್ರೀಲಂಕಾ ಎರಡು ವಾರ ಶಟ್‍ಡೌನ್ – ತುರ್ತು ಸೇವೆಗಳು ಮಾತ್ರ ಲಭ್ಯ

    ಕೊಲಂಬೋ: ಶ್ರೀಲಂಕಾ ದೇಶ ಎರಡು ವಾರ ಶಟ್‍ಡೌನ್ ಆಗಲಿದೆ. ಕಾರಣ ಆ ದೇಶದಲ್ಲಿ ತೈಲ ಸಂಗ್ರಹ ಅತ್ಯಂತ ವೇಗವಾಗಿ ಕಡಿಮೆ ಆಗ್ತಿದೆ. ಇರೋದನ್ನು ತುರ್ತು ಸೇವೆಗಳಿಗೆ ಬಳಸಿಕೊಳ್ಳುವ ಸಲುವಾಗಿ ಶ್ರೀಲಂಕಾ ಸರ್ಕಾರ ಈ ನಿರ್ಣಯ ತೆಗೆದುಕೊಂಡಿದೆ.

    ಶಟ್‍ಡೌನ್ ಭಾಗವಾಗಿ ಶಾಲೆ-ಕಾಲೇಜ್‍ಗಳು ಬಂದ್ ಆಗಿವೆ. ತುರ್ತು ಸೇವೆಗಳನ್ನು ಒದಗಿಸುವ ಸರ್ಕಾರಿ ಕಚೇರಿಗಳಷ್ಟೇ ಓಪನ್ ಆಗಿವೆ. ಆಸ್ಪತ್ರೆಗಳು ಮತ್ತು ಕೊಲಂಬೋ ನೌಕಾನೆಲೆ ಮಾತ್ರ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಪೆಟ್ರೋಲ್ ಬಂಕ್‍ಗಳ ಮುಂದೆ ಜನ ಸಾಲುಗಟ್ಟಿ ನಿಂತಿದ್ದಾರೆ. ಸರಕಾರಿ ಉದ್ಯೋಗಿಗಳಿಗೆ ಎರಡು ವಾರಗಳ ಕಾಲ ಮನೆಯಿಂದಲೇ ಕೆಲಸ ಮಾಡುವಂತೆ ಸರ್ಕಾರ ಸೂಚನೆ ನೀಡಿದೆ. ಪ್ರತಿಭಟನೆಗಳು ಮುಂದುವರೆದಿವೆ. ಗೋ ಗೋ ಗೊಟಬಯ ಹೋರಾಟ 73 ದಿನ ಪೂರೈಸಿದೆ. ಇದನ್ನೂ ಓದಿ: ಪೆಟ್ರೋಲ್‍ಗಾಗಿ ಕ್ಯೂ ನಿಂತ ಜನರಿಗೆ ಟೀ, ಬನ್ ನೀಡಿದ ಮಾಜಿ ಕ್ರಿಕೆಟಿಗ

    ದೇಶದ ಆರ್ಥಿಕತೆಯನ್ನು ಸರಿಯಾಗಿ ನಿಭಾಯಿಸುವಲ್ಲಿ ವಿಫಲವಾಗಿರುವ ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನಕಾರರು, ಅಧ್ಯಕ್ಷರ ಸಚಿವಾಲಯದ ಎಲ್ಲಾ ಪ್ರವೇಶದ್ವಾರಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೌದ್ಧ ಧರ್ಮದ ಗುರು ಹಾಗೂ ನಾಲ್ವರು ಮಹಿಳೆಯರು ಸೇರಿದಂತೆ 21 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಸಲಿಂಗ ವಿವಾಹ ನಿಷೇಧಿಸುವುದು ಅಸಾಂವಿಧಾನಿಕವಲ್ಲ-ಕೋರ್ಟ್ ತೀರ್ಪು

    ಭಾನುವಾರ ರಾತ್ರಿ ಪ್ರತಿಭಟನಕಾರರು ಅಧ್ಯಕ್ಷರ ಸಚಿವಾಲಯದ ಎರಡು ಪ್ರವೇಶದ್ವಾರಗಳನ್ನು ಬಂದ್ ಮಾಡಿದರು. ಆದರೆ, ಅಂತಾರಾಷ್ಟ್ರೀಯ ಹಣಕಾಸು ನಿಧಿಯ ತಂಡವು ದೇಶದ ಆರ್ಥಿಕ ಇಲಾಖೆಯ ಕಚೇರಿಗೆ ಭೇಟಿ ನೀಡಲಿದೆ. ಈ ಹಿನ್ನೆಲೆಯಲ್ಲಿ ಎರಡೂ ಪ್ರವೇಶ ದ್ವಾರಗಳಲ್ಲಿ ಪ್ರತಿಭಟನೆ ಕೈಗೊಂಡಿದ್ದವರನ್ನು ವಶಕ್ಕೆ ಪಡೆಯಲಾಗಿತ್ತು. ಈ ಮಧ್ಯೆ, ಅದಾನಿ ಗ್ರೂಪ್‍ಗೆ ವಿದ್ಯುತ್ ಯೋಜನೆ ನೀಡುವಂತೆ ನನ್ನನ್ನು ಯಾರು ಕೇಳಿಲ್ಲ ಎಂದು ಲಂಕಾ ಪ್ರಧಾನಿ ರಣಿಲ್ ವಿಕ್ರಮಸಿಂಘೆ ಸ್ಪಷ್ಟಪಡಿಸಿದ್ದಾರೆ. ಅದಾನಿ ಕುರಿತು ಲಂಕಾದ ಹಿರಿಯ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

    ದ್ವೀಪ ರಾಷ್ಟ್ರ ತನ್ನ ಸ್ವಾತಂತ್ರ್ಯದ ಬಳಿಕ ಎಂದೂ ಸಂಭವಿಸದ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಅಲ್ಲಿನ 2 ಕೋಟಿಗೂ ಅಧಿಕ ಜನರು ಆಹಾರ, ಇಂಧನ ಹಾಗೂ ಔಷಧಕ್ಕಾಗಿ ತೀವ್ರವಾದ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ದೇಶ ಭಾರೀ ಹಣದುಬ್ಬರ ಹಾಗೂ ಸುದೀರ್ಘ ವಿದ್ಯುತ್ ಕಡಿತವನ್ನೂ ಎದುರಿಸುತ್ತಿದೆ. ಈ ನಡುವೆ ಔಷಧಿಗಳು, ಅಡುಗೆ ಅನಿಲ, ಇಂಧನ ಮತ್ತು ಆಹಾರ ಸೇರಿದಂತೆ ಮೂಲಭೂತ ಅವಶ್ಯಕತೆಗಳ ಕೊರತೆಯೊಂದಿಗೆ ಆರ್ಥಿಕ ಸ್ಥಿತಿಯು ಹದಗೆಟ್ಟು ಜನ ಬೀದಿಗಿಳಿದು ಸರ್ಕಾರದ ವಿರುದ್ಧ ಸಮರ ಸಾರುತ್ತಿದ್ದಾರೆ. ಅಗತ್ಯ ವಸ್ತುಗಳ ಆಮದಿಗೆ ಬೇಕಾದ ವಿದೇಶಿ ಕರೆನ್ಸಿ ಕೊರತೆ ಈ ಬಿಕ್ಕಟ್ಟಿಗೆ ಪ್ರಮುಖ ಕಾರಣವಾಗಿದೆ. ಶ್ರೀಲಂಕಾ ಸರ್ಕಾರ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ನೊಂದಿಗೆ ಮಾತುಕತೆ ನಡೆಸುತ್ತಿದ್ದು, ಬೇಲ್‌ಔಟ್ ಪ್ಯಾಕೇಜ್‌ಗಾಗಿ ಮನವಿ ಮಾಡಿದೆ.

    Live Tv

  • ಪೆಟ್ರೋಲ್‍ಗಾಗಿ ಕ್ಯೂ ನಿಂತ ಜನರಿಗೆ ಟೀ, ಬನ್ ನೀಡಿದ ಮಾಜಿ ಕ್ರಿಕೆಟಿಗ

    ಪೆಟ್ರೋಲ್‍ಗಾಗಿ ಕ್ಯೂ ನಿಂತ ಜನರಿಗೆ ಟೀ, ಬನ್ ನೀಡಿದ ಮಾಜಿ ಕ್ರಿಕೆಟಿಗ

    ಕೊಲಂಬೋ: ಈಗಾಗಲೇ ಆರ್ಥಿಕ ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ. ಲಂಕಾದಲ್ಲಿ ಪೆಟ್ರೋಲ್, ಡೀಸೆಲ್ ಅಭಾವ ಉಂಟಾಗಿದೆ. ಜನ ಸರದಿ ಸಾಲಿನಲ್ಲಿ ನಿಂತು ಪೆಟ್ರೋಲ್, ಡೀಸೆಲ್ ಖರೀದಿಗೆ ಮುಂದಾಗಿದ್ದಾರೆ. ಈ ವೇಳೆ ಜನಸಾಮಾನ್ಯರಿಗೆ ಚಹಾ ಮತ್ತು ಬನ್ ವಿತರಿಸಿ ಮಾಜಿ ಕ್ರಿಕೆಟಿಗ ರೋಶನ್ ಮಹಾನಾಮ ನೆರವಾಗಿದ್ದಾರೆ.

    SRILANKA

    ಈ ಬಗ್ಗೆ ಟ್ಟಿಟ್ಟರ್ ಮೂಲಕ ತಿಳಿಸಿರುವ ರೋಶನ್ ಮಹಾನಾಮ, ನಾವು ಇಂದು ಸಂಜೆ ಸ್ವಯಂ ಸೇವಕ ತಂಡದೊಂದಿಗೆ ವಿಜೆರಾಮ ಮಾವತಾ ಸುತ್ತಲಿನ ಪೆಟ್ರೋಲ್ ಬಂಕ್‍ನಲ್ಲಿ ಪೆಟ್ರೋಲ್‍ಗಾಗಿ ಸರದಿ ಸಾಲಿನಲ್ಲಿ ನಿಂತಿದ್ದ ಜನರಿಗೆ ಟೀ ಮತ್ತು ಬನ್‍ಗಳನ್ನು ವಿತರಿಸಲಾಯಿತು. ದಿನದಿಂದ ದಿನಕ್ಕೆ ಇಲ್ಲಿನ ಪರಿಸ್ಥಿತಿ ಹದಗೆಡುತ್ತಿದೆ. ಸರತಿ ಸಾಲುಗಳು ದಿನದಿಂದ ದಿನಕ್ಕೆ ಉದ್ದವಾಗುತ್ತಿದ್ದು, ಸರತಿ ಸಾಲಿನಲ್ಲಿ ನಿಲ್ಲುವ ಜನರಿಗೆ ಆರೋಗ್ಯ ಸಮಸ್ಯೆ ಕೂಡ ಕಾಡುತ್ತಿದೆ. ಹಾಗಾಗಿ ಜನರಿಗೆ ನೆವಾಗಲು ಮುಂದಾಗುವವರು ದ್ರವ ರೂಪದ ಆಹಾರವನ್ನು ಹೆಚ್ಚಾಗಿ ನೀಡಿ ಸಹಕರಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಲೀಟರ್‌ ಪೆಟ್ರೋಲ್‌ಗೆ 420 ರೂ., ಡೀಸೆಲ್‌ಗೆ 400 ರೂ.

    ದ್ವೀಪ ರಾಷ್ಟ್ರ ತನ್ನ ಸ್ವಾತಂತ್ರ್ಯದ ಬಳಿಕ ಎಂದೂ ಸಂಭವಿಸದ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಅಲ್ಲಿನ 2 ಕೋಟಿಗೂ ಅಧಿಕ ಜನರು ಆಹಾರ, ಇಂಧನ ಹಾಗೂ ಔಷಧಕ್ಕಾಗಿ ತೀವ್ರವಾದ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇದನ್ನೂ ಓದಿ: ಬಾಲ್ಯ ಸ್ನೇಹಿತ ಅಬ್ಬಾಸ್ ನೆನಪಿಸಿಕೊಂಡ ಮೋದಿ – ನೆಟ್ಟಿಗರಿಗೆ ಕುತೂಹಲ

    ದೇಶ ಭಾರೀ ಹಣದುಬ್ಬರ ಹಾಗೂ ಸುದೀರ್ಘ ವಿದ್ಯುತ್ ಕಡಿತವನ್ನೂ ಎದುರಿಸುತ್ತಿದೆ. ಈ ನಡುವೆ ಔಷಧಿಗಳು, ಅಡುಗೆ ಅನಿಲ, ಇಂಧನ ಮತ್ತು ಆಹಾರ ಸೇರಿದಂತೆ ಮೂಲಭೂತ ಅವಶ್ಯಕತೆಗಳ ಕೊರತೆಯೊಂದಿಗೆ ಆರ್ಥಿಕ ಸ್ಥಿತಿಯು ಹದಗೆಟ್ಟು ಜನ ಬೀದಿಗಿಳಿದು ಸರ್ಕಾರದ ವಿರುದ್ಧ ಸಮರ ಸಾರುತ್ತಿದ್ದಾರೆ. ಅಗತ್ಯ ವಸ್ತುಗಳ ಆಮದಿಗೆ ಬೇಕಾದ ವಿದೇಶಿ ಕರೆನ್ಸಿ ಕೊರತೆ ಈ ಬಿಕ್ಕಟ್ಟಿಗೆ ಪ್ರಮುಖ ಕಾರಣವಾಗಿದೆ. ಕೆಲದಿನಗಳ ಹಿಂದೆ ಭಾರತ ಶ್ರೀಲಂಕಾಗೆ ನೆರವಾಗಿತ್ತು.

    Live Tv

  • ಪೆಟ್ರೋಲ್, ಡೀಸೆಲ್ ಅಭಾವ – ಮುಂದಿನ ವಾರದಿಂದಲೇ ಶಾಲೆಗಳು ಬಂದ್

    ಪೆಟ್ರೋಲ್, ಡೀಸೆಲ್ ಅಭಾವ – ಮುಂದಿನ ವಾರದಿಂದಲೇ ಶಾಲೆಗಳು ಬಂದ್

    ಕೊಲಂಬೊ: ಈಗಾಗಲೇ ಆರ್ಥಿಕ ದಿವಾಳಿಯಾಗಿರುವ ಶ್ರೀಲಂಕಾಕ್ಕೆ ಭಾರತ ಸಹಾಯಹಸ್ತ ನೀಡಿದ ಬಳಿಕವೂ ಪೆಟ್ರೋಲ್, ಡೀಸೆಲ್ ಅಭಾವ ಉಂಟಾಗಿದೆ. ಹಾಗಾಗಿ ಮುಂದಿನ ವಾರದಿಂದ ಶಾಲೆಗಳನ್ನು ಬಂದ್‌ ಮಾಡುವುದಾಗಿ ಲಂಕಾ ಶಿಕ್ಷಣ ಸಚಿವಾಲಯ ಘೋಷಿಸಿದೆ.

    ಶಾಲಾ- ಕಾಲೇಜುಗಳೊಂದಿಗೆ ಸಾರ್ವಜನಿಕ ವಲಯ ಕಚೇರಿಗಳನ್ನೂ ಸ್ಥಗಿತಗೊಳಿಸುವುದಾಗಿ ಸರ್ಕಾರ ಘೋಷಿಸಿದೆ. ಶ್ರೀಲಂಕಾ ಶಿಕ್ಷಣ ಸಚಿವಾಲಯವು ಕೊಲಂಬೊ ನಗರ ವ್ಯಾಪ್ತಿಯಲ್ಲಿನ ಎಲ್ಲ ಸರ್ಕಾರಿ ಹಾಗೂ ಸರ್ಕಾರಿ ಅನುಮೋದಿತ ಖಾಸಗಿ ಶಾಲೆಗಳನ್ನು ಸ್ಥಗಿತಗೊಳಿಸಲು ಮುಂದಾಗಿದ್ದು, ಮುಂದಿನ ವಾರದಿಂದ ಆನ್‌ಲೈನ್ ತರಗತಿಗಳನ್ನು ನಡೆಸುವಂತೆ ಕೇಳಿದೆ. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಭಾರೀ ಪ್ರವಾಹಕ್ಕೆ 25 ಜನ ಬಲಿ- ಅಪಾಯದ ಸುಳಿಯಲ್ಲಿ 40 ಲಕ್ಷ ಮಂದಿ

    ಶ್ರೀಲಂಕಾ ತನ್ನ ಆಮದುಗಳಿಗೆ ಪಾವತಿಸಲು, ವಿದೇಶಿ ವಿನಿಮಯ ಪಡೆಯಲು ತೀವ್ರ ಒತ್ತಡದಲ್ಲಿದೆ. ಇದು ದೇಶದ ಆರ್ಥಿಕತೆಯ ಹಲವಾರು ಕ್ಷೇತ್ರಗಳಿಗೂ ಹಿನ್ನಡೆ ಉಂಟುಮಾಡುತ್ತಿದೆ ಎಂದು ಸುದ್ದಿ ಮಾಧ್ಯಮಗಳು ವರದಿಮಾಡಿವೆ.

    Live Tv

  • ಕೊನೆಯ 3 ಓವರ್‌ಗಳಲ್ಲಿ 59 ರನ್ ಚಚ್ಚಿ ದಾಖಲೆಯ ಚೇಸಿಂಗ್ – ಲಂಕಾ ತಂಡದ ಹೀರೋ ಆದ ಶನಕ

    ಕೊನೆಯ 3 ಓವರ್‌ಗಳಲ್ಲಿ 59 ರನ್ ಚಚ್ಚಿ ದಾಖಲೆಯ ಚೇಸಿಂಗ್ – ಲಂಕಾ ತಂಡದ ಹೀರೋ ಆದ ಶನಕ

    ಕೊಲಂಬೊ: ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ನಡುವಿನ 3 ಟಿ-20 ಸರಣಿಯ ಅಂತಿಮ ಪಂದ್ಯದಲ್ಲಿ ಶ್ರೀಲಂಕಾ ತಂಡವು ಚೇಸಿಂಗ್‍ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೆಚ್ಚೆದೆಯ ದಾಖಲೆಯ ಚೇಸಿಂಗ್ ಮೂಲಕ ಪಂದ್ಯದ ಕೊನೆಯ ಒಂದು ಬಾಲ್ ಬಾಕಿ ಇರುವಾಗಲೇ ಗೆಲ್ಲುವ ಮೂಲಕ ವೈಟ್ ವಾಶ್ ಮುಖಭಂಗವನ್ನು ತಪ್ಪಿಸಿಕೊಂಡಿದೆ.

    3 ಪಂದ್ಯಗಳ ಟಿ-20 ಸರಣಿಯಲ್ಲಿ 2-1ರಲ್ಲಿ ಕಾಂಗರೂ ಪಡೆ ಸರಣಿಯನ್ನು ವಶಪಡಿಸಿಕೊಂಡಿದೆ. ಪಲ್ಲೆಕೆಲೆಯ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ತೃತೀಯ ಟಿ-20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾಕಿ ಆತಿಥೇಯ ಶ್ರೀಲಂಕಾ ತಂಡಕ್ಕೆ 177 ರನ್‍ಗಳ ಕಠಿಣ ಗುರಿಯನ್ನು ನೀಡಿತ್ತು.

    ಇತ್ತ ಮೊದಲೆರಡು ಪಂದ್ಯಗಳಲ್ಲಿ ಹೀನಾಯವಾಗಿ ಸೋತು ವೈಟ್ ವಾಶ್ ಮುಖಭಂಗದ ಒತ್ತಡದೊಂದಿಗೆ ಕಣಕ್ಕಿಳಿದಿದ್ದ ಶ್ರೀಲಂಕಾ ತಂಡದ ನಾಯಕ ದಾಸನ್ ಶನಕ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ 19.5 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್ ಕಲೆಹಾಕಿ 4 ವಿಕೆಟ್‍ಗಳ ರೋಚಕ ಜಯ ಸಾಧಿಸಿ ಮುಖಭಂಗದಿಂದ ಪಾರಾಗಿದೆ.

    ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದಾಸನ್ ಶನಕ ಹೇಜಲ್ ವುಡ್ ಎಸೆದ 18ನೇ ಓವರ್‌ನಲ್ಲಿ 2 ಸಿಕ್ಸರ್ ಮತ್ತು 2 ಬೌಂಡರಿ ಬಾರಿಸುವದರ ಮೂಲಕ ಪಂದ್ಯದ ದಿಕ್ಕನ್ನೇ ಬದಲಿಸಿಬಿಟ್ಟರು. ಆ ಒಂದು ಓವರ್‍ನಲ್ಲಿಯೇ 22 ರನ್ ಹರಿದು ಬಂದ ಕಾರಣ ಆಸ್ಟ್ರೇಲಿಯಾ ಪರ ಇದ್ದ ಪಂದ್ಯ ತಿರುವು ಪಡೆದುಕೊಂಡಿತು.

    17 ನೇ ಓವರ್‌ಗೂ ಮುನ್ನ 18 ಎಸೆತಗಳಿಗೆ 59 ರನ್ ಅಗತ್ಯವಿತ್ತು ಆದರೆ ಓವರ್ ಮುಕ್ತಾಯದ ನಂತರ 12 ಎಸೆತಗಳಿಗೆ 37 ರನ್ ಬಾರಿಸಬೇಕಾದ ಅಗತ್ಯ ಎದುರಾಯಿತು. ನಂತರ 19ನೇ ಓವರ್‌ನಲ್ಲಿಯೂ ಅಬ್ಬರಿಸಿದ ಶನಕ ಜೇ ರಿಚರ್ಡ್ ಸನ್ ಎಸೆತಗಳಿಗೆ 1 ಸಿಕ್ಸರ್ ಮತ್ತು 1 ಬೌಂಡರಿ ಹಾಗೂ ಕರುಣರತ್ನೆ ಸಹ 1 ಬೌಂಡರಿ ಚಚ್ಚಿದ್ದರು. ಈ ಮೂಲಕ ಅಂತಿಮ 6 ಎಸೆತಗಳಲ್ಲಿ ತಂಡಕ್ಕೆ ಗೆಲ್ಲಲು 19 ರನ್ ಬೇಕಾಗಿತ್ತು.

    ಈ ಸಂದರ್ಭದಲ್ಲಿ ಶನಕ ಓವರ್‌ನ ಮೂರನೇ ಎಸೆತಕ್ಕೆ ಬೌಂಡರಿ, ನಾಲ್ಕನೇ ಎಸೆತಕ್ಕೆ ಬೌಂಡರಿ ಮತ್ತು 5ನೇ ಎಸೆತಕ್ಕೆ ಸಿಕ್ಸರ್ ಚಚ್ಚಿದರು. ಈ ಮೂಲಕ ಲಂಕಾಗೆ ಕೊನೆಯ ಎಸೆತದಲ್ಲಿ ಗೆಲ್ಲಲು 1 ರನ್ ಬೇಕಿತ್ತು ಹಾಗೂ ಕೇನ್ ರಿಚರ್ಡ್ ಸನ್ ವೈಡ್ ಎಸೆದ ಪರಿಣಾಮ ಲಂಕಾ ಜಯದ ನಗೆ ಬೀರಿತು. ಹೀಗೆ ಎಲ್ಲಿಯೂ ಎದೆಗುಂದದೆ ಮುಂದೆ ನಿಂತು ಹೋರಾಡಿದ ದಾಸನ್ ಶನಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಸರಣಿಯುದ್ದಕ್ಕೂ ಉತ್ತಮ ಆಟವಾಡಿದ ಆಸ್ಟ್ರೇಲಿಯಾದ ನಾಯಕ ಆರನ್ ಫಿಂಚ್ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

  • ಯಾವುದೇ ದೇಶ ನಮಗೆ ಹಣ ನೀಡುತ್ತಿಲ್ಲ, ಆದರೆ ಭಾರತ ನೀಡುತ್ತಿದೆ: ಲಂಕಾ ಪ್ರಧಾನಿ

    ಯಾವುದೇ ದೇಶ ನಮಗೆ ಹಣ ನೀಡುತ್ತಿಲ್ಲ, ಆದರೆ ಭಾರತ ನೀಡುತ್ತಿದೆ: ಲಂಕಾ ಪ್ರಧಾನಿ

    ಕೊಲಂಬೊ: ಯಾವುದೇ ದೇಶ ನಮಗೆ ಇಂಧನ ಹಾಗೂ ಕಲ್ಲಿದ್ದಲು ಕೊಳ್ಳಲು ಹಣ ನೀಡುತ್ತಿಲ್ಲ. ಆದರೆ ಭಾರತ ನೀಡುತ್ತಿದೆ ಎಂದು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಕೃತಜ್ಞತೆ ಸಲ್ಲಿಸಿದ್ದಾರೆ.

    ತೀವ್ರಗತಿಯ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಗೆ ಭಾರತವನ್ನು ಹೊರತುಪಡಿಸಿ ಯಾವುದೇ ದೇಶಗಳು ಹಣ ನೀಡುತ್ತಿಲ್ಲ. ಭಾರತ ನಮಗೆ ತ್ವರಿತವಾಗಿ ಸಹಾಯ ಮಾಡಲು ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಮ್‌ಎಫ್)ಗೆ ಒತ್ತಾಯಿಸುತ್ತಿದೆ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆಯ ಸಹೋದರ ಸಂಸತ್ ಸ್ಥಾನಕ್ಕೆ ರಾಜೀನಾಮೆ

    1948ರಲ್ಲಿ ದ್ವೀಪರಾಷ್ಟ್ರ ಬ್ರಿಟನ್‌ನಿಂದ ಸ್ವಾತಂತ್ರ್ಯ ಪಡೆದ ಬಳಿಕ ಇದೇ ಮೊದಲ ಬಾರಿಗೆ ಅತ್ಯಂತ ಕೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದೀಗ ಶ್ರೀಲಂಕಾ ವಾಷಿಂಗ್ಟನ್ ಮೂಲದ ಸಂಸ್ಥೆಯೊಂದಿಗೆ ಸಾಲವನ್ನು ಕೇಳಲು ಐಎಮ್‌ಎಫ್ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತುಕತೆ ನಡೆಸಿದೆ. ಇದನ್ನೂ ಓದಿ: ಭಾರತದಲ್ಲಿ ಮತ್ತೆ ಕೊರೊನಾ ಸ್ಫೋಟ- ದೈನಂದಿನ ಪ್ರಕರಣಗಳಲ್ಲಿ 39% ಜಿಗಿತ

    ತೀವ್ರ ಆರ್ಥಿಕ ಬಿಕ್ಕಟ್ಟಿನ ಸಂದರ್ಭ ಭಾರತ ಶ್ರೀಲಂಕಾಗೆ ಸಾವಿರಾರು ಟನ್‌ಗಳಷ್ಟು ಡೀಸೆಲ್ ಹಾಗೂ ಪೆಟ್ರೋಲ್ ಅನ್ನು ನೀಡಿ, ಇಂಧನ ಕೊರತೆಯನ್ನು ನಿವಾರಿಸಲು ಸಹಾಯ ಮಾಡಿದೆ. ಭಾರತದಿಂದ ಇನ್ನೂ ಹೆಚ್ಚಿನ ಸಹಾಯವನ್ನು ಕೇಳಲು ನಮ್ಮಿಂದ ಸಾಧ್ಯವಿಲ್ಲ. ಭಾರತ ನಮಗೆ ಸಹಾಯ ಮಾಡುವುದಕ್ಕೂ ಮೊದಲು ನಾವು ಅವರಿಗೆ ಏನು ಸಹಾಯ ಮಾಡಿದ್ದೇವೆ ಎಂಬ ಪ್ರಶ್ನೆ ಮೂಡುತ್ತದೆ ಎಂದು ವಿಕ್ರಮಸಿಂಘೆ ಕಷ್ಟದ ಪರಿಸ್ಥಿತಿಯಲ್ಲಿ ಭಾರತದ ಸಹಾಯಕ್ಕೆ ಪ್ರತಿಕ್ರಿಯಿಸಿದ್ದಾರೆ.