ಕೊಲಂಬೋ: ಶ್ರೀಲಂಕಾ ಕ್ರಿಕೆಟಿಗ ಜಯಸೂರ್ಯ ದೇಶದಲ್ಲಿ ನಡೆಯುತ್ತಿರುವ ಆರ್ಥಿಕ ಭಿಕ್ಕಟ್ಟಿಗೆ ಭಾರತ ಸಹಾಯ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೃತಜ್ಞತಾಪೂರ್ವವಾಗಿ ‘ಬಿಗ್ ಬ್ರದರ್'(ದೊಡ್ಡ ಅಣ್ಣ) ಎಂದು ಕರೆದಿದ್ದಾರೆ.
ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ಬಳಿಕ ನಡೆಯುತ್ತಿರುವ ಶ್ರೀಲಂಕಾದ ಅತೀದೊಡ್ಡ ಆರ್ಥಿಕ ಭಿಕ್ಕಟ್ಟು ಇದೀಗ ತಲೆದೋರಿದ್ದು, ಭಾರತ ನೆರೆಯ ದೇಶಕ್ಕೆ ಸಹಾಯ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕ್ರಿಕೆಟಿಗ ಭಾರತ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ವಿಎಲ್‍ಸಿ ಮೀಡಿಯಾ ಪ್ಲೇಯರ್ ಬಳಸಿ ಚೀನಾ ಸೈಬರ್ ದಾಳಿ
ನೆರೆಯ ದೇಶವಾಗಿ ಹಾಗೂ ನಮ್ಮ ದೇಶದ ಹಿರಿಯ ಸಹೋದರನಾಗಿ, ಭಾರತ ಯಾವಾಗಲೂ ನಮಗೆ ಸಹಾಯ ಮಾಡಿದೆ. ನಾವು ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿಯವರಿಗೆ ಕೃತಜ್ಞರಾಗಿರುತ್ತೇವೆ. ಪ್ರಸ್ತುತ ಸನ್ನಿವೇಶದಲ್ಲಿ ನಮ್ಮ ಬದುಕು ಕಷ್ಟಕರವಾಗಿದೆ. ಭಾರತ ಹಾಗೂ ಇತರ ದೇಶಗಳ ಸಹಾಯದಿಂದ ನಾವು ಈ ಆರ್ಥಿಕ ಭಿಕ್ಕಟ್ಟಿನಿಂದ ಹೊರಬರಲು ಆಶಿಸುತ್ತೇವೆ ಎಂದರು.
ಪ್ರಸ್ತುತ ಶ್ರೀಲಂಕಾ ತೀವ್ರ ಗತಿಯಲ್ಲಿ ಆಹಾರ ಹಾಗೂ ಇಂಧನ ಕೊರತೆಯನ್ನು ಎದುರಿಸುತ್ತಿದೆ. ಈ ಬಿಕ್ಕಟ್ಟನ್ನು ತಗ್ಗಿಸಲು ಭಾರತ ಇದುವರೆಗೆ ಶ್ರೀಲಂಕಾಗೆ 2,70,000 ಮೆಟ್ರಿಕ್ ಟನ್(ಎಂಟಿ) ಇಂಧನವನ್ನು ಪೂರೈಸಿದೆ. ಕಳೆದ 24 ಗಂಟೆಗಳಲ್ಲಿ ಭಾರತ 36,000 ಎಂಟಿ ಪೆಟ್ರೋಲ್ ಹಾಗೂ 40,000 ಎಂಟಿ ಡೀಸೆಲ್ ರವಾನಿಸಿದೆ. ಇದರೊಂದಿಗೆ ಔಷಧ, ಧಾನ್ಯ, ಅಕ್ಕಿಯನ್ನೂ ಕಳುಹಿಸಿದೆ. ಇದನ್ನೂ ಓದಿ: ಇಮ್ರಾನ್ ಖಾನ್ ಅಧಿಕಾರಕ್ಕೆ ಕತ್ತರಿ ಬೀಳ್ತಿದ್ದಂತೇ ಆಪ್ತರಿಗೆ ಸಂಕಷ್ಟ
ಕೋವಿಡ್-19 ಹಾವಳಿ ಪ್ರಾರಂಭವಾದಾಗಿನಿಂದ ಶ್ರೀಲಂಕಾದಲ್ಲಿ ಆರ್ಥಿಕ ಭಿಕ್ಕಟ್ಟು ನಿಧಾನವಾಗಿ ಪ್ರಾರಂಭವಾಯಿತು. ಪ್ರವಾಸೋದ್ಯಮವೇ ಉಸಿರಾಗಿರುವ ದ್ವೀಪ ದೇಶದಲ್ಲಿ ಕೋವಿಡ್ ಪ್ರಾರಂಭವಾದಂತೆ ಪ್ರವಾಸೋದ್ಯಮಕ್ಕೆ ಬೇಡಿಕೆ ಕಡಿಮೆಯಾದ್ದರಿಂದ ಇದೀಗ ಶ್ರೀಲಂಕಾ ಕಷ್ಟದ ದಿನಗಳನ್ನು ಎದುರಿಸುತ್ತಿದೆ.
ನವದೆಹಲಿ: ಜನರನ್ನು ಸೆಳೆಯಲು ರಾಜ್ಯಗಳು ಉಚಿತ ಯೋಜನೆಗಳನ್ನು ಜಾರಿ ಮಾಡುತ್ತಿದ್ದರೆ ಆ ರಾಜ್ಯಗಳು ಶ್ರೀಲಂಕಾ, ಗ್ರೀಸ್ ದೇಶದಂತೆ ಆರ್ಥಿಕ ಅಧ:ಪತನ ಕಾಣಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
ಕಳೆದ ಶನಿವಾರ ಪ್ರಧಾನಿ ಮೋದಿ ತಮ್ಮ ಅಧಿಕೃತ ಕಚೇರಿಯಲ್ಲಿ ಎಲ್ಲ ಇಲಾಖೆಯ ಕಾರ್ಯದರ್ಶಿಗಳ ಜೊತೆ ಸುಮಾರು 4 ಗಂಟೆಗಳ ಕಾಲ ದೀರ್ಘ ಸಭೆಯನ್ನು ನಡೆಸಿದ್ದಾರೆ. ಈ ವೇಳೆ ಇಲಾಖೆಗೆ ಸಂಬಂಧಿಸಿದಂತೆ ಸರ್ಕಾರದ ನೀತಿಗಳಲ್ಲಿನ ಲೋಪದೋಷಗಳನ್ನು ತಿಳಿಸುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಒಂದು ಮೊಟ್ಟೆಗೆ 30 ರೂಪಾಯಿ- ಶ್ರೀಲಂಕಾದಲ್ಲಿ ದಿನಸಿ ಬೆಲೆ ಏರಿಕೆ
ಈ ಸಂದರ್ಭದಲ್ಲಿ ಅಧಿಕಾರಿಗಳು, ಇತ್ತೀಗೆ ಚುನಾವಣೆ ನಡೆದ ರಾಜ್ಯಗಳು ಸೇರಿದಂತೆ ಜನರ ಮೆಚ್ಚುಗೆಗೆ ಪಾತ್ರವಾಗಲು ರಾಜ್ಯ ಸರ್ಕಾರಗಳು ಉಚಿತ ಯೋಜನೆಗಳನ್ನು ಪ್ರಕಟಿಸುತ್ತಿವೆ. ಈ ಯೋಜನೆಗಳಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಣಕಾಸಿನ ಮೇಲೆ ದೀರ್ಘಾವಧಿಯಲ್ಲಿ ಪ್ರಮುಖ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆ ಮುಂದೆಯೇ ಹಿಂಸಾತ್ಮಕ ಪ್ರತಿಭಟನೆ – ವಾಹನಗಳು ಸುಟ್ಟು ಭಸ್ಮ
ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ಭರವಸೆ ನೀಡುವ ಜನಪರ ಯೋಜನೆಗಳ ಪ್ರವೃತ್ತಿ ಮುಂದುವರಿದರೆ ಕೆಲವು ರಾಜ್ಯಗಳು ಹಣದ ಕೊರತೆಯಿರುವ ಶ್ರೀಲಂಕಾ ಅಥವಾ ಗ್ರೀಸ್‌ನಂತೆಯೇ ದಿವಾಳಿಯಾಗಬಹುದು ಎಂದು ಎಚ್ಚರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚಿನ 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ವಿವಿಧ ಯೋಜನೆಗಳನ್ನು ಘೋಷಿಸಿವೆ. ರಾಜ್ಯಗಳು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ನೀಡಿದ ಅನುದಾನಕ್ಕಿಂತಲೂ ಹೆಚ್ಚಿನ ಅನುದಾನವನ್ನು ಉಚಿತ ಯೋಜನೆಗಳಿಗೆ ಮೀಸಲಿಡುತ್ತಿವೆ. ಹಲವಾರು ರಾಜ್ಯಗಳು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು ಅವು ಒಕ್ಕೂಟದ ಸದಸ್ಯರಾಗಿರದಿದ್ದರೆ ದಿವಾಳಿಯಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಕೊಲಂಬೊ: ಆರ್ಥಿಕ ಬಿಕ್ಕಿನಲ್ಲಿ ಸಿಲುಕಿರುವ ಶ್ರೀಲಂಕಾ ರಾಜಕೀಯದಲ್ಲಿ ಪ್ರಮುಖ ಬೆಳವಣೆಗೆಯೊಂದು ನಡೆದಿದ್ದು, ಭಾನುವಾರ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ಹೊರತುಪಡಿಸಿ ಉಳಿದ ಎಲ್ಲಾ ಸಂಸತ್ತಿನ ಸಚಿವರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.
ದೇಶದ ಆರ್ಥಿಕ ಬಿಕ್ಕಟ್ಟಿನ ನಡುವೆ ಭಾನುವಾರ ಮಹಿಂದಾ ರಾಜಪಕ್ಸೆ ಅವರು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರನ್ನು ಭೇಟಿ ಮಾಡಿದ್ದಾರೆ. ಈ ಸಭೆಯಿಂದಾಗಿ ಮಹಿಂದಾ ರಾಜಪಕ್ಸೆ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಊಹಾಪೆಪೋಹಗಳನ್ನು ಇದೀಗ ಹರಿದಾಡುತ್ತಿದೆ. ಅಲ್ಲದೇ ಈ ಸಭೆಯಲ್ಲಿ ಹಲವಾರು ಪ್ರಮುಖ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಂಡಿರಬಹುದು ಎಂದು ಹೇಳಲಾಗುತ್ತಿದೆ.
ಈ ಕುರಿತಂತೆ ಶ್ರೀಲಂಕಾದ ಶಿಕ್ಷಣ ಸಚಿವ ದಿನೇಶ್ ಗುಣವರ್ದನಾ ಅವರು, ಭಾನುವಾರ ತಡರಾತ್ರಿ ನಡೆದ ಸಭೆಯಲ್ಲಿ ಅಧ್ಯಕ್ಷ ಗೋಟಾಬಯ ಮತ್ತು ಮಹಿಂದಾ ರಾಜಪಕ್ಸೆ ಅವರನ್ನು ಹೊರತುಪಡಿಸಿ ಸಂಸ ತ್ತಿನ ಎಲ್ಲಾ ಸಚಿವರು ತಮ್ಮ ಸ್ಥಾನಗಳಿಗೆ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದ ಶ್ರೀಲಂಕಾ ಜನತೆ- ಪ್ರತಿಭಟನೆಗೆ ಪ್ರಮುಖ ಕಾರಣಗಳೇನು?
ಮತ್ತೊಂದೆಡೆ ಕ್ರೀಡಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಮಲ್ ರಾಜಪಕ್ಸೆ ಅವರು, ಎಲ್ಲ ಖಾತೆಗಳಿಗೆ ನನ್ನ ರಾಜೀನಾಮೆಯನ್ನು ತಕ್ಷಣವೇ ಜಾರಿಗೆ ಬರುವಂತೆ ಅಧ್ಯಕ್ಷರಿಗೆ ತಿಳಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
I have informed the sec. to the President of my resignation from all portfolios with immediate effect, in hope that it may assist HE & PMs decision to establish stability for the people & the govt of #LKA. I remain committed to my voters, my party & the people of #Hambanthota.
ಶ್ರೀಲಂಕಾದ ಮಾಜಿ ಸಚಿವ ವಿಮಲ್ ವೀರವಾಂಸ ಅವರು ಅಧ್ಯಕ್ಷರನ್ನು ಭೇಟಿ ಮಾಡಿ, ದೇಶದಲ್ಲಿ ಪ್ರಸ್ತುತ ಬಿಕ್ಕಟ್ಟನ್ನು ಸುಧಾರಿಸಲು ಸರ್ವಪಕ್ಷಗಳೊಂದಿಗೆ ಮಧ್ಯಂತರ ಸರ್ಕಾರವನ್ನು ನೇಮಿಸುವುದರ ಬಗ್ಗೆ ಪ್ರಸ್ತಾಪಿಸಿದರು. ಇದನ್ನೂ ಓದಿ: ಒಂದು ಮೊಟ್ಟೆಗೆ 30 ರೂಪಾಯಿ- ಶ್ರೀಲಂಕಾದಲ್ಲಿ ದಿನಸಿ ಬೆಲೆ ಏರಿಕೆ
ಹಣದುಬ್ಬರದಿಂದಾಗಿ ಶ್ರೀಲಂಕಾದಲ್ಲಿ ಸರಕುಗಳ ಬೆಲೆಗಳನ್ನು ಗಗನಕ್ಕೇರಿದೆ. ಜನರು ಇಂಧನ, ಆಹಾರ ಮತ್ತು ಔಷಧಿಗಳನ್ನು ಖರೀದಿಸಲು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಶ್ರೀಲಂಕಾದಲ್ಲಿ ತರಕಾರಿಗಳ ಬೆಲೆಗಳು ದ್ವಿಗುಣಗೊಂಡಿವೆ.
ದೇಶದಲ್ಲಿ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜಧಾನಿ ಸೇರಿದಂತೆ ದೇಶದ ಅನೇಕ ಪ್ರದೇಶಗಳಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದು, ಅಗತ್ಯ ವಸ್ತುಗಳ ಕೊರತೆ ಮತ್ತು ದೀರ್ಘಾವಧಿಯ ವಿದ್ಯುತ್ ಕಡಿತಕ್ಕೆ ಮಹಿಂದಾ ರಾಜಪಕ್ಸೆ ಆಡಳಿತವನ್ನು ನಾಗರಿಕರು ದೂಷಿಸುತ್ತಿದ್ದಾರೆ.
ಕೊಲಂಬೊ: ಹಣದುಬ್ಬರದಿಂದಾಗಿ ಶ್ರೀಲಂಕಾದಲ್ಲಿ ಸರಕುಗಳ ಬೆಲೆಗಳನ್ನು ಗಗನಕ್ಕೇರಿದೆ. ಜನರು ಇಂಧನ, ಆಹಾರ ಮತ್ತು ಔಷಧಿಗಳನ್ನು ಖರೀದಿಸಲು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತಿದ್ದಾರೆ.
ಶ್ರೀಲಂಕಾದಲ್ಲಿ ತರಕಾರಿಗಳ ಬೆಲೆಗಳು ದ್ವಿಗುಣಗೊಂಡಿವೆ. ಆದರೆ ಅಕ್ಕಿ ಮತ್ತು ಗೋಧಿಯಂತಹ ಪ್ರಮುಖ ಪದಾರ್ಥಗಳು ಕ್ರಮವಾಗಿ ಕೆಜಿಗೆ 220 ರೂ. ಮತ್ತು ಕೆಜಿಗೆ 190 ರೂ.ಗೆ ಮಾರಾಟವಾಗುತ್ತಿವೆ. ಒಂದು ಕೆಜಿ ಸಕ್ಕರೆ ಬೆಲೆ 240 ರೂ. ಆಗಿದ್ದು 1 ಲೀಟರ್ ತೆಂಗಿನ ಎಣ್ಣೆ 850 ರೂ. ಆಗಿದೆ. ಒಂದು ಮೊಟ್ಟೆಯ ಬೆಲೆ 30 ಹಾಗೂ 1 ಕೆಜಿ ಹಾಲಿನ ಪುಡಿಯ ಪ್ಯಾಕ್ ಈಗ 1,900 ರೂ.ಗೆ ಮಾರಾಟವಾಗುತ್ತದೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದ ಶ್ರೀಲಂಕಾ ಜನತೆ- ಪ್ರತಿಭಟನೆಗೆ ಪ್ರಮುಖ ಕಾರಣಗಳೇನು?
ಫೆಬ್ರವರಿಯಲ್ಲಿಯೇ ಶ್ರೀಲಂಕಾದ ಚಿಲ್ಲರೆ ಹಣದುಬ್ಬರವು ಶೇಕಡಾ 17.5 ಕ್ಕೆ ತಲುಪಿದೆ ಮತ್ತು ಆಹಾರ ಹಣದುಬ್ಬರವು ಶೇಕಡಾ 25 ಕ್ಕಿಂತ ಹೆಚ್ಚಿದೆ. ಇದು ಆಹಾರ ಮತ್ತು ಧಾನ್ಯಗಳ ಬೆಲೆಗಳನ್ನು ಮತ್ತಷ್ಟು ಹೆಚ್ಚಿಸಿದೆ. ಔಷಧಿಗಳು ಮತ್ತು ಹಾಲಿನ ಪುಡಿಯ ದೊಡ್ಡ ಕೊರತೆಯೂ ಇದೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆ ಮುಂದೆಯೇ ಹಿಂಸಾತ್ಮಕ ಪ್ರತಿಭಟನೆ – ವಾಹನಗಳು ಸುಟ್ಟು ಭಸ್ಮ
ಅಗತ್ಯ ವಸ್ತುಗಳ ಕೊರತೆ ಮತ್ತು ದೀರ್ಘಾವಧಿಯ ವಿದ್ಯುತ್ ಕಡಿತಕ್ಕೆ ಸರ್ಕಾರ ವಿರುದ್ಧ ಸಾರ್ವಜನಿಕರ ಆಕ್ರೋಶ ಹೊರಹಾಕುತ್ತಿದ್ದಾರೆ. ಶ್ರೀಲಂಕಾ ಪ್ರಸ್ತುತ ಇತಿಹಾಸದಲ್ಲಿ ತನ್ನ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಅನುಭವಿಸುತ್ತಿದೆ.
ಕೊಲಂಬೊ: ಶ್ರೀಲಂಕಾದ ಅಧ್ಯಕ್ಷ ರಾಜಪಕ್ಸೆ ಶನಿವಾರ ದೇಶದಲ್ಲಿ ತೀವ್ರಗೊಂಡಿರುವ ಆರ್ಥಿಕ ಬಿಕ್ಕಟ್ಟು, ಪ್ರತಿಭಟನೆಗಳ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.
ಶ್ರೀಲಂಕಾದಲ್ಲಿ ಇತ್ತೀಚೆಗೆ ಆರ್ಥಿಕ ಬಿಕ್ಕಟ್ಟು ತಲೆದೂರಿದ್ದು, ಅಗತ್ಯ ಆಮದಿಗೆ ಪಾವತಿ ಮಾಡಲು ವಿದೇಶೀ ಕರೆನ್ಸಿಯ ಕೊರತೆಯನ್ನು ಎದುರಿಸುತ್ತಿದೆ. ಇದರಿಂದ ದೇಶದಲ್ಲಿ ಡೀಸೆಲ್ ಮಾರಾಟ ಹಾಗೂ ದೀರ್ಘಾವಧಿಯ ವಿದ್ಯುತ್ ಕಡಿತಗಳನ್ನು ಮಾಡಲಾಗುತ್ತಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಿಂದ ಆಕ್ರೋಶಗೊಂಡ ಜನರು ಶುಕ್ರವಾರ ವ್ಯಾಪಕ ಪ್ರತಿಭಟನೆ ನಡೆಸಿ, ಅಧ್ಯಕ್ಷ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ. ಶುಕ್ರವಾರ ಶ್ರೀಲಂಕಾ ಅಧ್ಯಕ್ಷ ಮನೆ ಮುಂದೆ 2,000ಕ್ಕೂ ಹೆಚ್ಚು ಮಂದಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ತಮ್ಮ ಭಾಷಣದಲ್ಲಿ 213 ಬಾರಿ ನಾನು, ನನ್ನ ಪದ ಬಳಸಿದ ಇಮ್ರಾನ್ ಖಾನ್- ಭಾರೀ ವೈರಲ್
ಸಹಾಯಕ್ಕೆ ಮುಂದಾದ ಭಾರತ:
ಕೊಲಂಬೋ ನವದೆಹಲಿಯಿಂದ ಕ್ರೆಡಿಟ್ ಲೈನ್ ಪಡೆದುಕೊಂಡಿದ್ದು, ಭಾರತ ತ್ವರಿತವಾಗಿ 40,000 ಟನ್ ಅಕ್ಕಿಯನ್ನು ಕಳುಹಿಸಲು ವ್ಯವಸ್ಥೆ ಆರಂಭಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಭಾರತ ಅಕ್ಕಿಯನ್ನು ರಫ್ತು ಮಾಡುವ ದೇಶಗಳಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ ತಿಂಗಳು ಭಾರತ ಶ್ರೀಲಂಕಾಗೆ ಇಂಧನ, ಆಹಾರ ಹಾಗೂ ಔಷಧ ಸೇರಿದಂತೆ ಅಗತ್ಯ ವಸ್ತುಗಳ ಕೊರತೆಯನ್ನು ನಿವಾರಿಸಲು 1 ಶತಕೋಟಿ ಸಾಲವನ್ನು ನೀಡಲು ಒಪ್ಪಿತ್ತು. ಅಕ್ಕಿ ರಫ್ತಿನಿಂದ ಶ್ರೀಲಂಕಾದಲ್ಲಿ ಅಕ್ಕಿಯ ಬೆಲೆ ಇಳಿಸಲು ಸಹಾಯವಾಗಲಿದೆ. ಇದನ್ನೂ ಓದಿ: ಇನ್ಮುಂದೆ ಪ್ರಾಣಿಗಳ ವಧೆಗೆ ಸ್ಟನ್ನಿಂಗ್ ಕಡ್ಡಾಯ
ಕೊಲಂಬೊ: ಸ್ವಾತಂತ್ರ್ಯ ನಂತರ ಅತ್ಯಂತ ಅಗತ್ಯ ಆಮದಿಗೆ ಪಾವತಿಸಲು ವಿದೇಶಿ ಕರೆನ್ಸಿ ಕೊರತೆಯಿಂದಾಗಿ ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ತೈಲ ಆಮದಿಗೆ ವಿದೇಶಿ ಕರೆನ್ಸಿ ಇಲ್ಲದೆಯೇ ದೇಶ ಸಂಕಷ್ಟ ಎದುರಿಸುತ್ತಿದೆ. ಅಲ್ಲದೇ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯಿಂದ ನೆರವಿಗೆ ಮನವಿ ಮಾಡಿದೆ.
ಶ್ರೀಲಂಕಾದಲ್ಲಿ ತಲೆದೋರಿರುವ ಆರ್ಥಿಕ ಬಿಕ್ಕಟ್ಟಿನಿಂದ ದೇಶದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಡೀಸೆಲ್ ಮಾರಾಟ ಸ್ಥಗಿತಗೊಂಡಿದೆ. ದೀರ್ಘಾವಿಧಿಗೆ ವಿದ್ಯುತ್ ಕಡಿತ ಕೂಡ ಆಗಿದೆ. ಇದರಿಂದ ಜನರು ಆಕ್ರೋಶಗೊಂಡು, ಶ್ರೀಲಂಕಾ ಅಧ್ಯಕ್ಷರ ಮನೆ ಮುಂದೆ ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ. ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆ ಮುಂದೆಯೇ ಹಿಂಸಾತ್ಮಕ ಪ್ರತಿಭಟನೆ – ವಾಹನಗಳು ಸುಟ್ಟು ಭಸ್ಮ
ಶ್ರೀಲಂಕಾದಲ್ಲಿ ಜನತೆ ಪ್ರತಿಭಟನೆ ನಡೆಸಲು ಐದು ಪ್ರಮುಖ ಕಾರಣಗಳು ಇಲ್ಲಿವೆ.
ಅಧ್ಯಕ್ಷರ ಮನೆ ಮುಂದೆ ಪ್ರತಿಭಟನೆ
ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ಮನೆ ಮುಂದೆ ಸುಮಾರು 2,000 ಕ್ಕೂ ಹೆಚ್ಚು ಮಂದಿ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರೊಂದಿಗೆ ಗಲಾಟೆ ಮಾಡಿಕೊಂಡಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. ಆದರೂ ಕದಲದ ಜನರು, ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಡೀಸೆಲ್ ಮಾರಾಟ ಸ್ಥಗಿತ- ಗ್ಯಾರೇಜ್‌ಗಳಲ್ಲಿರುವ ಬಸ್‌ಗಳಿಂದ ಇಂಧನ ತೆಗೆದು ಬಳಕೆ
ಹುಚ್ಚ ಮನೆಗೆ ಹೋಗು
ವ್ಯಕ್ತಿ ಹಾಗೂ ಮಹಿಳೆಯೊಬ್ಬರು, ʻಹುಚ್ಚ.. ಹುಚ್ಚ ಮನೆಗೆ ಹೋಗುʼ ಎಂದು ಘೋಷಣೆ ಕೂಗುತ್ತಿರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಶಕ್ತ ರಾಜಪಕ್ಸ ಕುಟುಂಬ ತಮ್ಮ ಸ್ಥಾನಗಳಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಲಾಗುತ್ತಿದೆ. ಅಧ್ಯಕ್ಷರ ಹಿರಿಯ ಸಹೋದರ ಮಹಿಂದಾ ಅವರು ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರೆ, ಕಿರಿಯ ಸಹೋದರ ಬೆಸಿಲ್ ಅವರು ಹಣಕಾಸು ಖಾತೆಯನ್ನು ಹೊಂದಿದ್ದಾರೆ. ಮತ್ತೊಬ್ಬ ಹಿರಿಯ ಸಹೋದರ ಚಮಲ್ ಕೃಷಿ ಸಚಿವರಾಗಿದ್ದರೆ, ಸೋದರಳಿಯ ನಮಲ್ ಕ್ರೀಡಾ ಖಾತೆಯನ್ನು ಹೊಂದಿದ್ದಾರೆ.
ಡೀಸೆಲ್ ಮಾರಾಟ ಸ್ಥಗಿತ
ದೇಶದಲ್ಲಿ ಗುರುವಾರದಿಂದ ಡೀಸೆಲ್ ಮಾರಾಟ ಸ್ಥಗಿತಗೊಳಿಸಲಾಗಿದೆ. ಪರಿಣಾಮವಾಗಿ 2.2 ಕೋಟಿ ಜನಸಂಖ್ಯೆಯಿರುವ ದೇಶದಲ್ಲಿ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಪೆಟ್ರೋಲ್ ಮಾರಾಟವಾಗುತ್ತಿದೆ. ಶೀಘ್ರವೇ ಅದರ ಕೊರತೆ ಎದುರಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಆರ್ಥಿಕ ನೆರವು ನೀಡಿದ ಭಾರತಕ್ಕೆ ಧನ್ಯವಾದ ಸಲ್ಲಿಸಿದ ಶ್ರೀಲಂಕಾ
ಇಂಧನ ಕೊರತೆ ಬಸ್‌ಗಳ ಸಂಚಾರಕ್ಕೆ ಹೊಡೆತ
ಶ್ರೀಲಂಕಾದಲ್ಲಿ ಇಂಧನ ಕೊರತೆಯಿಂದ ಬಸ್‌ಗಳ ಸಂಚಾರಕ್ಕೆ ಪೆಟ್ಟು ಬಿದ್ದಿದೆ. ಸದ್ಯ ದಾಸ್ತಾನಿರುವ ಇಂಧನ ಬಳಸಿ ಬಸ್‌ಗಳನ್ನು ಚಲಾಯಿಸಲಾಗುತ್ತಿದೆ.
ವಿದ್ಯುತ್ ಕಡಿತ
ವಿದ್ಯುತ್ ಉಳಿತಾಯಕ್ಕಾಗಿ ಶ್ರೀಲಂಕಾದಲ್ಲಿ ಬೀದಿ ದೀಪಗಳನ್ನು ಕಡಿತಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಅಲ್ಲದೇ ಜನರೇಟರ್‌ಗಳಿಗೆ ಡೀಸೆಲ್ ಇಲ್ಲದ ಕಾರಣ ದೇಶಾದ್ಯಂತ ವಿದ್ಯುತ್ ಕಡಿತಗೊಳಿಸಲಾಗಿದೆ.
ಕೊಲಂಬೊ: ಸುಮಾರು ಒಂದು ವಾರದಿಂದಲೂ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ತೈಲ ಪೂರೈಕೆಯಲ್ಲಿ ಕೊರತೆಯುಂಟಾಗಿದ್ದು ಡೀಸೆಲ್ ಮಾರಾಟವನ್ನೇ ಸ್ಥಗಿತಗೊಳಿಸಲಾಗಿದೆ. ಇದರಿಂದ ಸಾರ್ವಜನಿಕರ ಆಕ್ರೋಶವು ಮಿತಿ ಮೀರಿದ್ದು, ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿದೆ.
ಅಗತ್ಯ ವಸ್ತುಗಳ ಬೆಲೆ ಹೆಚ್ಚಳ, ಅಡುಗೆ ಅನಿಲ, ಇಂಧನ ಸೇರಿದಂತೆ ಅಗತ್ಯ ವಸ್ತುಗಳ ಕೊರತೆಗೆ ಲಂಕಾ ಅಧ್ಯಕ್ಷ ರಾಜಪಕ್ಸೆ ಅವರ ನೀತಿಗಳೇ ಕಾರಣ ಎಂದು ಆರೋಪಿಸಿ ಗುರುವಾರ ತಡರಾತ್ರಿ 5 ಸಾವಿರಕ್ಕೂ ಹೆಚ್ಚು ಮಂದಿ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರ ನಿವಾಸದ ಮುಂದೆ ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಅವರ ರಾಜೀನಾಮೆಗೂ ಒತ್ತಾಯಿಸಿರುವ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಡೀಸೆಲ್ ಮಾರಾಟ ಸ್ಥಗಿತ- ಗ್ಯಾರೇಜ್‌ಗಳಲ್ಲಿರುವ ಬಸ್‌ಗಳಿಂದ ಇಂಧನ ತೆಗೆದು ಬಳಕೆ
ಪ್ರತಿಭಟನೆಯನ್ನು ಹತ್ತಿಕ್ಕಲು ಅರೆಸೇನಾ ಪೊಲೀಸ್ ಘಟಕ, ವಿಶೇಷ ಕಾರ್ಯಪಡೆಯನ್ನು ನಿಯೋಜಿಸಲಾಗಿತ್ತು. ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಸಿಡಿಸಲಾಗಿದೆ. ಆಕ್ರೋಶಭರಿತ ಪ್ರತಿಭಟನಾಕಾರರು ಪೊಲೀಸರ ಮೇಲೆ ಬಾಟಲಿ ಹಾಗೂ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಐವರು ಪೊಲೀಸರಿಗೆ ಗಂಭೀರ ಗಾಯಗಳಾಗಿವೆ. ಅಲ್ಲದೆ ಪೊಲೀಸ್ ಜೀಪ್, 2 ಬೈಕ್‌ಗಳು ಹಾಗೂ ವಾಟರ್ ಕೆನನ್ ಟ್ರಕ್ ಅನ್ನು ಸುಟ್ಟುಹಾಕಲಾಗಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಇದನ್ನೂ ಓದಿ: ಆರ್ಥಿಕ ನೆರವು ನೀಡಿದ ಭಾರತಕ್ಕೆ ಧನ್ಯವಾದ ಸಲ್ಲಿಸಿದ ಶ್ರೀಲಂಕಾ
1948ರ ಸ್ವಾತಂತ್ರ‍್ಯದ ಬಳಿಕ ಶ್ರೀಲಂಕಾ ಸರ್ಕಾರ ಈಗ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಹಣದುಬ್ಬರದಿಂದ ಡೀಸೆಲ್ ಬೆಲೆ ದ್ವಿಗುಣವಾಗಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ 45 ಮಂದಿಯನ್ನು ಬಂಧಿಸಲಾಗಿದ್ದು, ಓರ್ವ ಮಹಿಳೆಯೂ ಇದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸರ್ಕಾರ, ಉಗ್ರಗಾಮಿಗಳ ಗುಂಪೊಂದು ಈ ರೀತಿಯ ಹಿಂಸಾತ್ಮಕ ಪ್ರತಿಭಟನೆಗೆ ಕರೆ ಕೊಟ್ಟಿದೆ. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಹುತೇಕರನ್ನು ಬಂಧಿಸಲಾಗಿದೆ ಎಂದು ಹೇಳಿದೆ.
ಕೊಲಂಬೊ: ಶ್ರೀಲಂಕಾ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಅತ್ಯಂತ ಅಗತ್ಯ ಆಮದುಗಳಿಗೆ ಪಾವತಿಸಲು ವಿದೇಶಿ ಕರೆನ್ಸಿಯ ಕೊರತೆ ಕಾರಣದಿಂದಾಗಿ ದೇಶಾದ್ಯಂತ ಗುರುವಾರ ಡೀಸೆಲ್ ಮಾರಾಟ ಸ್ಥಗಿತಗೊಂಡಿದೆ.
ದಕ್ಷಿಣ ಏಷ್ಯಾದ ರಾಷ್ಟ್ರವು ಸ್ವಾತಂತ್ರ್ಯದ ನಂತರದ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಬಸ್ ಮತ್ತು ವಾಣಿಜ್ಯ ವಾಹನಗಳಿಗೆ ಡೀಸೆಲ್ ಅತ್ಯಗತ್ಯ ಇಂಧನವಾಗಿದೆ. ಆದರೆ ಬಂಕ್‌ಗಳಲ್ಲಿ ಡೀಸೆಲ್ ಮಾರಾಟ ಸ್ಥಗಿತಗೊಳಿಸಲಾಗಿದೆ. ಪೆಟ್ರೋಲ್ ಮಾರಾಟವಾಗುತ್ತಿದೆ. ಆದರೆ ಪೂರೈಕೆ ಕಡಿಮೆಯಾಗಿದೆ. ಪರಿಣಾಮವಾಗಿ ಜನರು ತಮ್ಮ ಕಾರುಗಳನ್ನು ರಸ್ತೆಯುದ್ದಕ್ಕೂ ಸರತಿ ಸಾಲಿನಲ್ಲಿ ನಿಲ್ಲಿಸಿ ತೊಂದರೆ ಅನುಭವಿಸುವಂತಾಗಿದೆ.
ಖಾಸಗಿ ಬಸ್‌ಗಳ ಮಾಲೀಕರು ದೇಶದ ಸಾರಿಗೆ ವ್ಯವಸ್ಥೆಯಲ್ಲಿ ಮೂರನೇ ಎರಡು ಭಾಗದಷ್ಟು ಹೊಂದಿದ್ದಾರೆ. ಅವರ ಬಳಿಯೂ ಇಂಧನ ಖಾಲಿಯಾಗಿದೆ. ಶುಕ್ರವಾರದಿಂದ ಸಾರಿಗೆ ಸೇವೆ ಅಸಾಧ್ಯ ಎಂದು ಹೇಳುತ್ತಿದ್ದಾರೆ.
ನಮ್ಮ ಡೀಸೆಲ್ ದಾಸ್ತಾನನ್ನು ಬಳಸಿ ಬಸ್‌ಗಳನ್ನು ಓಡಿಸುತ್ತಿದ್ದೇವೆ. ಇಂದು ಸಂಜೆಯೊಳಗೆ ನಮಗೆ ಡೀಸೆಲ್ ಸರಬರಾಜು ಆಗದಿದ್ದರೆ ಬಸ್‌ಗಳ ಕಾರ್ಯಾಚರಣೆ ಅಸಾಧ್ಯವಾಗುತ್ತದೆ ಎಂದು ಖಾಸಗಿ ಬಸ್ ನಿರ್ವಾಹಕರ ಸಂಘದ ಅಧ್ಯಕ್ಷ ಗೆಮುನು ವಿಜೆರತ್ನೆ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಆರ್ಥಿಕ ಸ್ಥಿತಿ ಗಂಭೀರ – ದಿನ ಬಳಕೆ ವಸ್ತುಗಳ ಬೆಲೆ ಎಷ್ಟು?
ಜನರೇಟರ್‌ಗಳಿಗೆ ಡೀಸೆಲ್ ಇಲ್ಲ. ಹೀಗಾಗಿ ಗುರುವಾರದಿಂದ 13 ಗಂಟೆಗಳ ಕಾಲ ದೇಶದಲ್ಲಿ ವಿದ್ಯುತ್ ಕಡಿತ ಜಾರಿಗೊಳಿಸಬೇಕಾಯಿತು. ಡೀಸೆಲ್ ಸರಬರಾಜು ಮಾಡುವ ಭರವಸೆ ನೀಡಿದ್ದಾರೆ. ಬಳಿಕ ವಿದ್ಯುತ್ ಕಡಿತದ ಅವಧಿಯನ್ನು ಕಡಿಮೆ ಮಾಡಬಹುದಾಗಿದೆ ಎಂದು ವಿದ್ಯುತ್ ಸರಬರಾಜು ಇಲಾಖೆ ತಿಳಿಸಿದೆ.
ಶ್ರೀಲಂಕಾ ತನ್ನ 51 ಬಿಲಿಯನ್ ಡಾಲರ್ ವಿದೇಶಿ ಸಾಲವನ್ನು ತೀರಿಸಲು ಅಗತ್ಯವಾದ ವಿದೇಶಿ ಕರೆನ್ಸಿಯನ್ನು ಉಳಿಸುವ ಪ್ರಯತ್ನದಲ್ಲಿ ಮಾರ್ಚ್ 2020ರಲ್ಲಿ ವಿಶಾಲ ಆಮದು ನಿಷೇಧವನ್ನು ವಿಧಿಸಿತು. ಆದರೆ ಇದು ಅಗತ್ಯ ವಸ್ತುಗಳ ವ್ಯಾಪಕ ಕೊರತೆ ಮತ್ತು ತೀವ್ರ ಬೆಲೆ ಏರಿಕೆಗೆ ಕಾರಣವಾಗಿದೆ.
ಕೊಲೊಂಬೋ: ಆರ್ಥಿಕತೆ ಕುಸಿತವು ಜನಸಾಮಾನ್ಯರು ನಿತ್ಯ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ.
ಬೆಲೆ ಏರಿಕೆಯಾದ ವಸ್ತುಗಳ ಪಟ್ಟಿ ಶ್ರೀಲಂಕಾ ರುಪಿಯಲ್ಲಿ: ದಿನಬಳಕೆ ವಸ್ತುಗಳಾದ ಅಕ್ಕಿ, ಹಾಲಿನಪುಡಿ ಸೇರಿದಂತೆ ಅನೇಕ ವಸ್ತುಗಳ ಬೆಲೆ ಧಿಡೀರ್ ಏರಿಕೆಯಾಗಿದೆ. 400 ಗ್ರಾಂ ಹಾಲಿನಪುಡಿಯ ಬೆಲೆ 790 ರುಪಿಗೆ (ರುಪಿ ಶ್ರೀಲಂಕಾದ ಕರೆನ್ಸಿ ಹೆಸರು) ತಲುಪಿದ್ದರೆ, 1 ಕೇಜಿ ಅಕ್ಕಿಯ ಬೆಲೆ 290 ಲಂಕಾ ರುಪಿ., ಟೀ 1ಕಪ್‍ಗೆ 100 ರುಪಿ., ಗೋಧಿ ಹಿಟ್ಟು 160 ರುಪಿ., ಕಾಳುಗಳು 270 ರುಪಿ., ಪೆಟ್ರೋಲ್ 283 ರುಪಿ, ಡಿಸೇಲ್ 254 ರುಪಿ., ಎಲ್‍ಪಿಜಿ 2000 ರುಪಿ., ನಷ್ಟಾಗಿದೆ.
ಕೊರೊನಾ ಹೊಡೆತ : ಪ್ರವಾಸೋದ್ಯಮ ಮುಖ್ಯ ಆದಾಯವಾಗಿದೆ. ಆದರೆ ಕೊರೊನಾದಿಂದಾಗಿ ಕಳೆದ ಮೂರು ವರ್ಷಗಳಿಂದ ಈ ಉದ್ಯಮ ಪೂರ್ಣ ನೆಲಕಚ್ಚಿದೆ. ಬಹುತೇಕ ವಸ್ತುಗಳಿಗೆ ವಿದೇಶವನ್ನು ಶ್ರೀಲಂಕಾ ಅವಲಂಬಿಸಿದೆ. ಆದರೆ ವಿದೇಶಗಳಿಂದ ಅಗತ್ಯ ವಸ್ತುಗಳ ಖರೀದಿಗೂ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ವಿದೇಶಗಳಿಗೆ ವಲಸೆ: ಲಂಕಾದಲ್ಲಿ ಬದುಕು ದುಸ್ತುರವಾದ ಬೆನ್ನಲ್ಲೇ, ಅಲ್ಲಿನ ತಮಿಳು ಕುಟುಂಬಗಳು ಬೋಟ್ ಮಾಲೀಕರಿಗೆ 50000 ರೂ.ವರೆಗೂ ಹಣ ಕೊಟ್ಟು ಭಾರತಕ್ಕೆ ವಲಸೆ ಬರುತ್ತಿದ್ದಾರೆ.
ಡಾಲರ್ ಎದುರು ಲಂಕಾ ರುಪಿ ಮೌಲ್ಯ ಕುಸಿದಿರುವುದರಿಂದ ವಿದೇಶಿ ವಿನಿಮಯದಿಂದ ಶ್ರೀಲಂಕಾ ಹೆಚ್ಚಿನ ನಷ್ಟ ಅನುಭವಿಸುತ್ತಿದೆ. ಕಳೆದ ಫೆಬ್ರವರಿಯಲ್ಲಿ ಶ್ರೀಲಂಕಾದ ಹಣದುಬ್ಬರ ಶೇ.15.1ಕ್ಕೆ ಏರಿಕೆಯಾಗಿತ್ತು. ಇಡೀ ಏಷ್ಯಾ ಖಂಡದಲ್ಲೇ ಅತಿ ಹೆಚ್ಚು ಪ್ರಮಾಣದ ಹಣದುಬ್ಬರವಾಗಿತ್ತು.
ಕೊಲಂಬೊ: ರಾವಣನ ನಾಡು ಎಂಬ ಖ್ಯಾತಿಯ ಶ್ರೀಲಂಕಾ ಮಹಾ ಆರ್ಥಿಕ ಪತನದತ್ತ ಸಾಗಿದೆ. ದೇಶದಲ್ಲಿ ಜನ ಆಹಾರ ಉತ್ಪನ್ನಗಳ ಖರೀದಿಗೆ ಹಾಹಾಕಾರ ಶುರುವಾಗಿದ್ದು, ಸಕ್ಕರೆ, ಬೇಳೆ ಸೇರಿದಂತೆ ಪ್ರಮುಖ ಆಹಾರ ಉತ್ಪನ್ನಗಳಿಗೆ ಚಿನ್ನದ ಬೆಲೆ ಆಗಿದೆ.
ಶ್ರೀಲಂಕಾದಲ್ಲಿ ಜಿಡಿಪಿ ಸೊನ್ನೆ ಸುತ್ತುತ್ತಿದೆ. ಜನ ಪೆಟ್ರೋಲ್, ಸೀಮೆಎಣ್ಣೆಗೆ ಕ್ಯೂ ನಿಂತು ಸಾವನ್ನಪ್ಪುತ್ತಿದ್ದಾರೆ. ಮುದ್ರಣ ಕಾಗದಲ್ಲಿ ಕೊರತೆ ಉಂಟಾದ ಪರಿಣಾಮ ಶಾಲಾ ಮಕ್ಕಳಿಗೆ ನಡೆಯಬೇಕಾಗಿದ್ದ ಪರೀಕ್ಷೆಯನ್ನು ಸರ್ಕಾರ ಮುಂದೂಡಿದೆ. ಪೆಟ್ರೋಲ್, ಡೀಸೆಲ್‍ಗಾಗಿ ದಿನಗಟ್ಟಲೇ ಕ್ಯೂ ನಿಂತು ಇಬ್ಬರು ನಾಗರಿಕರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪೇಪರ್ ಕೊರತೆಯಿಂದ ಪರೀಕ್ಷೆ ರದ್ದುಗೊಳಿಸಿದ ಶ್ರೀಲಂಕಾ ಸರ್ಕಾರ
ರಷ್ಯಾ, ಉಕ್ರೇನ್ ನಡುವೆ ಯುದ್ಧ ಆರಂಭವಾದಗಿನಿಂದ ಶ್ರೀಲಂಕಾದಲ್ಲಿ ತೈಲ ಹಾಹಾಕಾರ ಆರಂಭವಾಗಿದೆ. ನಿನ್ನೆ ಎಪ್ಪತ್ತು ವರ್ಷ ಮೇಲ್ಪಟ್ಟ ಇಬ್ಬರು ವೃದ್ಧರು ಸೀಮೆಎಣ್ಣೆಗಾಗಿ ಕ್ಯೂ ನಿಂತಿದ್ದ ಸ್ಥಳದಲ್ಲೇ ನಿಶ್ಯಕ್ತಿಯಿಂದ ಸಾವನ್ನಪ್ಪಿದ್ದಾರೆ. ಯುದ್ಧ ಬೆನ್ನಲ್ಲೇ ಶ್ರೀಲಂಕಾದಲ್ಲಿ ಕಚ್ಚಾತೈಲ ಸಂಗ್ರಹಗಾರಗಳು ಬರಿದಾಗಿದೆ. ಇತ್ತ ಎಲ್‍ಪಿಜಿ ಬೆಲೆ ಸಿಲಿಂಡರ್ ಬೆಲೆ 1,350 ರೂಪಾಯಿಗೆ ಏರಿಕೆ ಕಂಡಿದೆ. ಬೆಲೆ ಏರಿಕೆಯಿಂದಾಗಿ ಜನ ಹೈರಾಣಾಗಿದ್ದು, ಆರ್ಥಿಕ ದಿವಾಳಿಯತ್ತ ಶ್ರೀಲಂಕಾ ಸಾಗಿದೆ. ಇದನ್ನೂ ಓದಿ: ಚುನಾವಣೆವರಗೆ ಸುಮ್ಮನಿದ್ದು, ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆ ಮಾಡಿದ್ದಾರೆ: ಡಿಕೆಶಿ
ಶ್ರೀಲಂಕಾದಲ್ಲಿ ದಿನ ಬಳಕೆಯ ವಸ್ತುಗಳೊಂದಿಗೆ ಟೀ ಬೆಲೆ ಕೂಡ ಗಗನಕ್ಕೇರಿದೆ. ಒಂದು ಕಪ್ ಟೀ ಬೆಲೆ 100 ರೂ.ಗೆ ಏರಿಕೆ ಕಂಡಿದೆ. 400 ಗ್ರಾಂನ ಹಾಲಿಗೆ ಪುಡಿಗೆ 250 ರೂಪಾಯಿ ಬೆಲೆ ನಿಗದಿಪಡಿಸಲಾಗಿದ್ದು, ಹಣದುಬ್ಬರ ಪರಿಸ್ಥಿತಿ ದಿನದಿಂದ ದಿನಕ್ಕೆ ಏರುತ್ತಿದೆ. ಒಂದೇ ತಿಂಗಳಲ್ಲಿ 10% ಹಣದುಬ್ಬರ ಏರಿಕೆ ಕಂಡಿದೆ. ಫೆಬ್ರವರಿಯಲ್ಲಿ 15.1% ರಷ್ಟಿದ್ದ ಹಣದುಬ್ಬರ ಮಾರ್ಚ್‍ನಲ್ಲಿ 25.7%ಗೆ ಏರಿಕೆ ಕಂಡಿದ್ದು, ಡಾಲರ್ ಮುಂದೆ ಶ್ರೀಲಂಕಾದ ಕರೆನ್ಸಿ ಬೆಲೆ ಮಂಕಾಗಿದ್ದು, ಪ್ರತಿ ಡಾಲರ್ ಬೆಲೆ 275 ರೂಪಾಯಿಗೆ ಏರಿಕೆ ಕಂಡಿದೆ.
ಆರ್ಥಿಕ ದಿವಾಳಿಗೆ ಕಾರಣಗಳೇನು:
ಶ್ರೀಲಂಕಾದ ಆರ್ಥಿಕ ದಿವಾಳಿಗೆ ಪ್ರಮುಖ ಕಾರಣವಾಗಿರುವುದು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಿರುವುದು ಮತ್ತು ಏಕಾಏಕಿ ರಸಗೊಬ್ಬರ ನಿಷೇಧ ಮಾಡಿರುವುದರಿಂದಾಗಿ ಶ್ರೀಲಂಕಾದ ಕೃಷಿ ವಲಯ ಕುಸಿತ ಕಂಡಿದೆ. ಅಕ್ಕಿ, ಬೆಳೆ, ಕಬ್ಬು ಸೇರಿ ಧಾನ್ಯಗಳ ಪೂರೈಕೆಯಲ್ಲಿ ಭಾರಿ ಕೊರತೆ ಕಂಡುಬಂದಿದ್ದು, ಪೂರೈಕೆ ಕೊರತೆಯಿಂದ ಆಹಾರ ಪದಾರ್ಥಗಳ ಬೆಲೆ ಗಣನೀಯ ಏರಿಕೆ ಕಂಡಿದೆ. ಇದನ್ನೂ ಓದಿ: ಬ್ರೋಕರ್ ಮೋಹನ್ ಮನೆಯಲ್ಲಿತ್ತು 5 ಕೆಜಿ ಚಿನ್ನ – ಎಸಿಬಿ ಅಧಿಕಾರಿಗಳೇ ಶಾಕ್
ಶ್ರೀಲಂಕಾಗೆ ಈ ಮೊದಲು ಕೊರೊನಾ ಬಾರಿ ಹೊಡೆತ ನೀಡಿದೆ. ಕೊರೊನಾದಿಂದ ಶ್ರೀಲಂಕಾದ ಪ್ರವಾಸೋದ್ಯಮ ಬಂದ್ ಆದ ಪರಿಣಾಮದಿಂದಾಗಿ ಸರ್ಕಾರಕ್ಕೆ ಬರುತ್ತಿದ್ದ ಆದಾಯ ಕಡಿತಗೊಂಡಿದೆ. ಶೇ.10 ಜಿಡಿಪಿ ಹೊಂದಿರುವ ಪ್ರವಾಸೋದ್ಯಮದ ಬಂದ್ ನಿಂದ ನಿರುದ್ಯೋಗ ಸೇರಿದಂತೆ ಜನರಲ್ಲಿ ಆರ್ಥಿಕ ಕೊರತೆ ಹೆಚ್ಚಳಗೊಂಡಿದೆ. ಚೀನಾ, ಜಪಾನ್ ಸೇರಿದಂತೆ ಹಲವು ದೇಶಗಳು ಮತ್ತು ಅಂತಾರಾಷ್ಟ್ರೀಯ ಬ್ಯಾಂಕ್‍ಗಳಿಂದ ಶ್ರೀಲಂಕಾ ಸಾಲ ಪಡೆದುಕೊಂಡಿದೆ. ಇದರಿಂದಾಗಿ ಶ್ರೀಲಂಕಾ ಸರ್ಕಾರ ಆದಾಯವಿಲ್ಲದೇ ಕಂತುಗಳನ್ನು ಕಟ್ಟಲು ಪರದಾಡುತ್ತಿದೆ. ಇನ್ನೊಂದೆಡೆ ವಿದೇಶಿ ವಿನಿಮಯ ಮತ್ತು ಕರೆನ್ಸಿ ಮೌಲ್ಯ ಕುಸಿತ ಕಂಡ ಪರಿಣಾಮ ಸಣ್ಣ ಪುಟ್ಟ ವಸ್ತುಗಳಿಗೂ ದುಬಾರಿ ಬೆಲೆ ತೆತ್ತು ಆಮದು ಮಾಡುವಂತಹ ಪರಿಸ್ಥಿತಿ ಶ್ರೀಲಂಕಾಗೆ ಎದುರಾಗಿದೆ.
ಶ್ರೀಲಂಕಾ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದು ಜಗತ್ತಿಗೆ ಗೊತ್ತಿದೆ. ಇತ್ತೀಚಿಗಷ್ಟೆ ಭಾರತ ಸರ್ಕಾರ ಕೋಟ್ಯಂತರ ರೂಪಾಯಿ ನೆರವನ್ನು ಶ್ರೀಲಂಕಾಗೆ ನೀಡುವುದಾಗಿ ಘೋಷಿಸಿತ್ತು. 1948ರಲ್ಲಿ ಸ್ವಾತಂತ್ರ್ಯ ಗಿಟ್ಟಿಸಿಕೊಂಡ ನಂತರ ಇದೇ ಮೊದಲ ಬಾರಿ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಹೀಗಾಗಿ ಪರಿಸ್ಥಿತಿ ಹದಗೆಡುತ್ತಿದ್ದು, ಅಗತ್ಯ ವಸ್ತುಗಳಿಗೂ ಭಾರೀ ಕೊರತೆ ಉಂಟಾಗಿದೆ.