Tag: Sri Murugha Matha

  • ಮುರುಘಾ ಶ್ರೀಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು

    ಮುರುಘಾ ಶ್ರೀಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು

    ಬೆಂಗಳೂರು: ಮುರಘಾ ಮಠದ ಶ್ರೀಗಳಿಗೆ ಚಿಕಿತ್ಸೆ ನಿಡಿದ್ದ ವೈದ್ಯಾಧಿಕಾರಿ ಸೇರಿ ಮೂವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

    ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಂಗನಾಥ್, ಆಸ್ಪತ್ರೆಯ ಸರ್ಜನ್ ಡಾ.ಎಸ್.ಕೆ ಬಸವರಾಜ್, ಕಾರಾಗೃಹ ಅಧಿಕಾರಿ ಎಂ.ಎಂ ಮರಕಟ್ಟಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಈ ಮೂವರು ಜಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಕರ್ತವ್ಯಲೋಪ ಎಸಗಿದ್ದಾರೆ, ಪ್ರಭಾವಿ ಆರೋಪಿಯ ರಕ್ಷಣೆ ಮಾಡುವ ಹುನ್ನಾರವನ್ನೂ ನಡೆಸಿದ್ದಾರೆ. ಹಾಗಾಗಿ ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅರ್ಶ್‌ದೀಪ್‌ ಟೀಕಿಸುವ ಬದಲು ಧೈರ್ಯ ತುಂಬಿ – ಮುಂದಿನ ಭಾನುವಾರಕ್ಕೆ ಸಜ್ಜಾಗಿ: ಮಾಜಿ ಆಟಗಾರರ ಸಲಹೆ

    ದೂರಿನಲ್ಲಿ ಏನಿದೆ?
    ಚಿತ್ರದುರ್ಗ ಜಿಲ್ಲೆಯ ಮುರಘಾ ಮಠದಲ್ಲಿನ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮೊದಲನೇ ಆರೋಪಿ ನ್ಯಾಯಾಂಗ ಬಂಧನಲ್ಲಿದ್ದರು. ಈ ವೇಳೆ ತುಂಬಾ ಎದೆ ನೋವಿದೆ ಎಂದ ತಕ್ಷಣ ನ್ಯಾಯಾಲಯದ ಗಮನಕ್ಕೂ ತರದೆ ಚಿತ್ರದುರ್ಗ ಜಿಲ್ಲಾಸತ್ರೆಗೆ ಮುಂಜಾನೆ ದಾಖಲಿಸಿ ಚಿಕಿತ್ಸೆ ನಿಡಲು ಮುಂದಾಗಿದ್ದರು. ಚಿಕಿತ್ಸೆ ನೀಡುವ ಹಂತದಲ್ಲಿ ಅಲ್ಲಿನ ವೈದ್ಯಾಧಿಕಾರಿ ಇವರಿಗೆ ತೀವ್ರ ತರವಾದ ಹೃದಯ ಸಂಬಂಧಿ ಕಾಯಿಲೆ ಇದೆ ಎಂದು ಸುಳ್ಳು ಹೇಳಿ, ದಾಖಲೆಗಳನ್ನೂ ಸೃಷ್ಟಿಸಿ ದಾವಣಗೆರೆಯ ಖಾಸಗಿ ಹೃದಯ ತಜ್ಞರನ್ನು ಕರೆಸಿ ಆರೋಪಿಗೆ ತೀವ್ರತರವಾದ ಎದೆ ನೋವಿದೆ, ಹೃದಯಕ್ಕೆ ಘಾಸಿಯಾಗಿದೆ. ಈ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲು ಹೆಚ್ಚಿನ ವೈದ್ಯಕೀಯ ಸೌಲಭ್ಯವಿಲ್ಲ, ಇವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ವಿಶೇಷ ಚಿಕಿತ್ಸೆ ನೀಡಬೇಕೆಂದು ಹೇಳಿದ್ದಾರೆ. ತಕ್ಷಣ ಆರೋಪಿಯನ್ನು ಐಸಿಯುನಲ್ಲಿ ದಾಖಲಿಸಿ, ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಹುನ್ನಾರವನ್ನೂ ನಡೆಸಿದ್ದರು.

    ಪ್ರಭಾವಿ ಸ್ಥಾನದಲ್ಲಿರುವ ಆರೋಪಿಯ ರಕ್ಷಣೆಗೆ ನಿಂತ ಈ ಸರ್ಕಾರದ ಅಧಿಕಾರಿಗಳಾದ ಜಿಲ್ಲಾ ಕಾರಾಗೃಹ ಅಧೀಕ್ಷಕಿ ಎಂ.ಎಂ ಮರಕಟ್ಟಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಂಗನಾಥ್, ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಎಸ್.ಕೆ ಬಸವರಾಜ್ ಕರ್ತವ್ಯ ಲೋಪವೆಸಗಿ ಆರೋಪಿಯ ಜೊತೆ ಶಾಮೀಲಾಗಿ ಬೃಹತ್ ನಾಟಕ ಆಡಿರುತ್ತಾರೆ. ಇಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ಯಾರನ್ನೂ ವಿಚಾರಣೆ ಮಾಡ್ಬೇಡಿ: ಮಡಿವಾಳೇಶ್ವರ ಸ್ವಾಮೀಜಿ ಡೆತ್‍ನೋಟ್

    ಮುರುಘಾ ಶ್ರೀ ಜೈಲಿಗೆ:
    ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಶ್ರೀ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಭಾನುವಾರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಪೊಲೀಸರು ಶ್ರೀಗಳನ್ನು ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾ ಕೋಮಲಾ ವಿಚಾರಣೆ ಮುಗಿತಾ ಎಂದು ಪ್ರಶ್ನಿಸಿದರು. ಈ ವೇಳೆ ಪೊಲೀಸರು ಮತ್ತೆ ಕಸ್ಟಡಿಗೆ ತೆಗೆದುಕೊಳ್ಳದ ಕಾರಣ ನ್ಯಾಯಾಧೀಶರು ಸೆ.14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು.

    Live Tv
    [brid partner=56869869 player=32851 video=960834 autoplay=true]

  • ಮಡಿವಾಳೇಶ್ವರ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣು

    ಮಡಿವಾಳೇಶ್ವರ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣು

    ಬೆಳಗಾವಿ: ಮಡಿವಾಳೇಶ್ವರ ಮಠದಲ್ಲಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿರುವ ಘಟನೆ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ.

    ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆಗಿರುವ ಬಸವ ಸಿದ್ಧಲಿಂಗ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರ, ಶತಾಯಿಷಿ ವೆಂಕಣ್ಣ ನಾಯಕ ಇನ್ನಿಲ್ಲ

    ಮುರುಘಾ ಮಠದ ಶ್ರೀಗಳ ಲೈಂಗಿಕ ಕಿರುಕುಳ ಆರೋಪದ ಬಳಿಕ ಇಬ್ಬರು ಮಹಿಳೆಯರ ಫೋನ್‌ಕಾಲ್‌ ಆಡಿಯೋ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ಆಡಿಯೋನಲ್ಲಿ ಆತ್ಮಹತ್ಯೆಗೆ ಶರಣಾದ ಬಸವಸಿದ್ಧಲಿಂಗ ಸ್ವಾಮೀಜಿ ಹೆಸರನ್ನೂ ಉಲ್ಲೇಖಿಸಲಾಗಿತ್ತು. ಇದರಿಂದಲೇ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಮುರುಘಾ ಶ್ರೀಗಳ ಕೇಸ್ – 3ನೇ ಆರೋಪಿ ಮಠದ ಮರಿಸ್ವಾಮಿ ಪೊಲೀಸರ ವಶಕ್ಕೆ

    ಮುರುಘಾ ಶ್ರೀಗಳ ಕೇಸ್ – 3ನೇ ಆರೋಪಿ ಮಠದ ಮರಿಸ್ವಾಮಿ ಪೊಲೀಸರ ವಶಕ್ಕೆ

    ಚಿತ್ರದುರ್ಗ: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು 3ನೇ ಆರೋಪಿ ಮಠದ ಮರಿಸ್ವಾಮಿ ಬಸವಾದಿತ್ಯರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಮೂರುಘಾ ಮಠದ ಮರಿಸ್ವಾಮಿ ಬಸವಾದಿತ್ಯರನ್ನ ಪೊಲೀಸರು ಹೊಸಪೇಟೆಯಲ್ಲಿ ವಶಕ್ಕೆ ಪಡೆದಿದ್ದು, ಹೊಸಪೇಟೆಯಿಂದ ಚಿತ್ರದುರ್ಗಕ್ಕೆ ಕರೆತರಲಾಗುತ್ತಿದೆ. ಚಿತ್ರದುರ್ಗ ಗ್ರಾಮೀಣ ಠಾಣೆಗೆ ಕರೆತಂದ ನಂತರ ಬಂಧನದ ಪ್ರಕ್ರಿಯೆಯನ್ನು ಪೊಲೀಸರು ಪೂರ್ಣಗೊಳಿಸಲಿದ್ದಾರೆ. ಇದನ್ನೂ ಓದಿ: ತನಿಖೆಗೆ ಸಹಕರಿಸದೇ ಮುರುಘಾ ಶ್ರೀ ಮತ್ತೆ ಆಸ್ಪತ್ರೆ ಸುತ್ತಾಟ

    ಪೋಕ್ಸೋ ಕೇಸ್‌ನಲ್ಲಿ ಶುಕ್ರವಾರದಿಂದ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾ ಶ್ರೀಗಳನ್ನು ಇಂದು ತನಿಖಾ ತಂಡ ವಿಚಾರಣೆಗೆ ಒಳಪಡಿಸಿತ್ತು. ಆದರೆ ಶ್ರೀಗಳು ತನಿಖೆಗೆ ಸಹಕರಿಸದೇ ಮತ್ತೆ ಆಸ್ಪತ್ರೆ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಸೋಮವಾರ ಜೈಲಾ? ಬೇಲಾ?

    ತಮ್ಮ ಮೇಲಿನ ಎಲ್ಲಾ ರೀತಿಯ ಆರೋಪಗಳನ್ನು ಸ್ವಾಮೀಜಿ ತಳ್ಳಿ ಹಾಕಿದ್ದು, ನನ್ನ ವಿರುದ್ಧ ಷಡ್ಯಂತ್ರ‍್ಯ ನಡೆದಿರುವುದಾಗಿ ಆರೋಪ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುರುಘಾ ಶ್ರೀ ಮೆಡಿಕಲ್ ಟೆಸ್ಟ್ ಮುಕ್ತಾಯ – ಪುರುಷತ್ವ ಪರೀಕ್ಷೆಯಲ್ಲಿ ಶ್ರೀಗಳು ಫಿಟ್

    ಮುರುಘಾ ಶ್ರೀ ಮೆಡಿಕಲ್ ಟೆಸ್ಟ್ ಮುಕ್ತಾಯ – ಪುರುಷತ್ವ ಪರೀಕ್ಷೆಯಲ್ಲಿ ಶ್ರೀಗಳು ಫಿಟ್

    ಚಿತ್ರದುರ್ಗ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶ್ರೀಗಳು ಪುರುಷತ್ವ ಪರೀಕ್ಷೆಯಲ್ಲಿ ಫಿಟ್ ಆಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ಶ್ರೀಗಳ ವೈದ್ಯಕೀಯ ವರದಿ ಬಹಿರಂಗವಾಗಿದ್ದು, ಪುರುಷತ್ವ ಪರೀಕ್ಷೆಯಲ್ಲಿ ಶ್ರೀಗಳು ಫಿಟ್ ಆಗಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಪ್ರಶ್ನೆಗೆ ಉತ್ತರಿಸಲು ತಡಪಡಿಸಿದ ಜಿಲ್ಲಾಧಿಕಾರಿಗೆ ಸೀತಾರಾಮನ್ ಕ್ಲಾಸ್ – ಕೆಟಿಆರ್ ಆಘಾತ

    ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಫಿಜಿಷಿಯನ್ ಡಾ.ಸತೀಶ್, ಮಾನಸಿಕ ತಜ್ಞೆ ಶೋಭಾ ಹಾಗೂ ವೇಣುಗೋಪಾಲ್ ಸಮ್ಮುಖದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಕೊಠಡಿ ಸಂಖ್ಯೆ 15ರಲ್ಲಿ ತಪಾಸಣೆ ನಡೆಸಲಾಗಿದ್ದು, ಶ್ರೀಗಳ ಉಗುರು, ಒಳ ಉಡುಪಿನ ತುಂಡು ಬಟ್ಟೆ, ಮರ್ಮಾಂಗದ ಬಳಿಯ ಕೂದಲನ್ನು ಪರೀಕ್ಷೆ ಮಾಡಲಾಗಿದೆ.

    ಶ್ರೀಗಳಿಗೆ ಹೃದಯ ಸಂಬಂಧಿ ತೊಂದರೆಯಿರುವುದರಿಂದ ಮತ್ತೊಮ್ಮೆ ಇಸಿಜಿ ಪರೀಕ್ಷೆ ಮಾಡಲಾಗಿದೆ. ಜಿಲ್ಲಾ ಸರ್ಜನ್ ಬಸವರಾಜ್ ನೇತೃತ್ವದಲ್ಲಿ ಶ್ರೀಗಳಿಗೆ ತಪಾಸಣೆ ಮಾಡಲಾಗಿದೆ ಇಂದು ಅಧಿಕೃತ ವರದಿ ಹೊರಬೀಳಲಿದೆ. ಸದ್ಯ ಈಗಾಗಲೇ ಶ್ರೀಗಳ ವರದಿ ಪಾಸಿಟಿವ್ ಆಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕ್ರಿಕೆಟ್ ಪ್ರಿಯರಿಗೆ ನಾಳೆ ಸೂಪರ್ ಸಂಡೇ – ಕದನ ಕುತೂಹಲ ಮೂಡಿಸಿದ ಇಂಡೋ-ಪಾಕ್ ಹೋರಾಟ

    ವೈದ್ಯಕೀಯ ತಪಾಸಣೆ ಬಳಿಕ ಜಿಲ್ಲಾಸ್ಪತ್ರೆಯಿಂದ ಡಿವೈಎಸ್‌ಪಿ ಕಚೇರಿ ಶಿಫ್ಟ್ ಮಾಡಲಾಗಿದ್ದು, ಡಿವೈಎಸ್‌ಪಿ ಕಚೇರಿಯಲ್ಲಿ ವಿಚಾರಣೆ ಮುಂದುವರಿದಿದೆ. ಚಾರ್ಜ್ ಶೀಟ್ ಜೊತೆಯಲ್ಲೇ ವೈದ್ಯರ ರಿಪೋರ್ಟ್ ಸಹ ಸಲ್ಲಿಸಲಿರುವ ಪೊಲೀಸಲಿದ್ದಾರೆ. ಮುರುಘಾ ಮಠದ ಸ್ಥಳ ಮಹಜರು ಮಾಡಿಸುವ ಸಾಧ್ಯತೆ ಇದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.

    Live Tv
    [brid partner=56869869 player=32851 video=960834 autoplay=true]

  • ಕೊನೆಗೂ ಮುರುಘಾ ಶ್ರೀ ಬಂಧನ

    ಕೊನೆಗೂ ಮುರುಘಾ ಶ್ರೀ ಬಂಧನ

    ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಶ್ರೀ ಅವರನ್ನು ಪೊಲೀಸರು ಬಂಧಿಸಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಬ್ಯಾರಿಕೇಡ್‌ ಹಾಕುವ ಜೊತೆಗೆ ಎಲ್ಲ ಕಡೆಯೂ ಬಿಗಿ ಬಂದೋಬಸ್ತ್‌ ಮಾಡಲಾಗುತ್ತಿದೆ. ಹೆಚ್ಚಿನ ಭದ್ರತೆಯಾಗಿ ದಾವಣಗೆರೆಯಿಂದ ಸಿಪಿಐ ಮತ್ತು ಮೇಲಿನ ಅಧಿಕಾರಿಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ರೇಪ್‌ ಕೇಸ್‌ – ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್‌, ಪತ್ನಿಗೆ ಜಾಮೀನು

    ಇಂದು ಎರಡನೇ ಆರೋಪಿ ರಶ್ಮಿ ಅವರ ವಿಚಾರಣೆ ನಡೆದಿದ್ದು,  ಪ್ರಕರಣ ದಾಖಲಾದ 6 ದಿನದ ಬಳಿಕ  ಶ್ರೀಗಳನ್ನು ಬಂಧನ ಮಾಡಲಾಗಿದೆ. ಇದನ್ನೂ ಓದಿ: ಸ್ವಾಮೀಜಿಗಳ ಲೈಂಗಿಕ ದೌರ್ಜನ ಆರೋಪದ ಕೇಸನ್ನು ಸಿಬಿಐಗೆ ಒಪ್ಪಿಸಿ: ಹಿಂದುಸ್ತಾನ್ ಜನತಾ ಪಕ್ಷ ಒತ್ತಾಯ

    ಸದ್ಯ ಲೈಂಗಿಕ ದೌರ್ಜನ್ಯ ಆರೋಪ, ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮುರುಘಾ ಶ್ರೀಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯ ಈಗಾಗಲೇ ಶುಕ್ರವಾರಕ್ಕೆ ಮುಂದೂಡಿದೆ. ನಾಳೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್‌ ಅವಕಾಶ ನೀಡಿದೆ. ಈ ಸಂಬಂಧ ಸರ್ಕಾರಿ ಅಭಿಯೋಜಕರಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ಈ ಬೆನ್ನಲ್ಲೇ ಶ್ರೀಗಳನ್ನು ವಶಕ್ಕೆ ಪಡೆಯುವ ಸಿದ್ಧತೆಯೂ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • CBI ತನಿಖೆ ಮಾಡಿದ್ರೆ ಮುರುಘಾ ಮಠದ ಇನ್ನಷ್ಟು ಕೇಸ್ ಬೆಳಕಿಗೆ ಬರುತ್ತೆ – ಒಡನಾಡಿ ಸಂಸ್ಥೆ

    CBI ತನಿಖೆ ಮಾಡಿದ್ರೆ ಮುರುಘಾ ಮಠದ ಇನ್ನಷ್ಟು ಕೇಸ್ ಬೆಳಕಿಗೆ ಬರುತ್ತೆ – ಒಡನಾಡಿ ಸಂಸ್ಥೆ

    ಮೈಸೂರು: ಮುರುಘಾ ಮಠದ ಶ್ರೀಗಳ ಮೇಲೆ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಿದ್ರೆ ಈ ಮಠದಲ್ಲಿನ ಮತ್ತಷ್ಟು ಇಂತಹ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರಲಿವೆ ಎಂದು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸ್ಟ್ಯಾನ್ಲಿ, ಈ ಪ್ರಕರಣದಲ್ಲಿ ಮಕ್ಕಳಿಗೆ ಸಾಕಷ್ಟು ಒತ್ತಡವಿದೆ. ಶೇ.90 ರಷ್ಟು ಜನ ಸ್ವಾಮೀಜಿ ಪರವಾಗಿಯೇ ಇದ್ದಾರೆ ಎನ್ನುವುದು ಅವರಿಗೆ ಗೊತ್ತಾದ್ರೆ ಮತ್ತಷ್ಟು ಆತಂಕಕ್ಕೆ ಒಳಗಾಗುತ್ತಾರೆ. ಮಕ್ಕಳು ಈಗ ನಮ್ಮ ಮುಂದೆ ಏನೂ ಹೇಳಿಕೆ ಕೊಟ್ಟಿದ್ದರೋ ಅದೇ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆಯೂ ಕೊಟ್ಟಿರುತ್ತಾರೆ ಎಂಬ ವಿಶ್ವಾಸ ನಮಗಿದೆ. ಅವರಿಗೆ ಸೂಕ್ತ ನ್ಯಾಯ ಸಿಗಬೇಕು. ಆರೋಪಿಯ ಸ್ಥಾನ-ಮಾನ ನೋಡಿಕೊಂಡು ಕ್ರಮ ಜರುಗಿಸುವುದಾದರೆ ಅಂತಹ ಕಾನೂನಿಗೆ ಮರ್ಯಾದೆ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರೇಪ್‌ ಕೇಸ್‌ – ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್‌, ಪತ್ನಿಗೆ ಜಾಮೀನು

    ಕುಟುಂಬಕ್ಕೆ ಭದ್ರತೆ ಕಲ್ಪಿಸಿ: ಈಗಾಗಲೇ ನನಗೆ ಮತ್ತು ಪರಶುರಾಮ್ ಅವರಿಗೆ ಸಂಧಾನದ ಆಫರ್‌ಗಳು, ಬೆದರಿಕೆ ಕರೆಗಳು ಬರುತ್ತಿವೆ. ಆದ್ದರಿಂದ ರಾಜ್ಯ ಸರ್ಕಾರ ನಮ್ಮ ಒಡನಾಡಿ ಸಂಸ್ಥೆ ಹಾಗೂ ನಮ್ಮ ಕುಟುಂಬಗಳಿಗೆ ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

    ಹಿಂದೂಸ್ತಾನ್ ಜನತಾ ಪಕ್ಷದಿಂದಲೂ ಒತ್ತಾಯ: ಈಗಾಗಲೇ ಮುರುಘಾ ಮಠದ ಶ್ರೀಗಳ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆ ಸೂಕ್ತ ಮಟ್ಟದಲ್ಲಿ ನಡೆಯುತ್ತಿಲ್ಲ ಎನ್ನುವುದು ಸಾರ್ವಜನಿಕರಲ್ಲಿ ಅನುಮಾನ ವ್ಯಕ್ತವಾಗುತ್ತಿದೆ. ಆದ್ದರಿಂದ ಈ ಕೇಸನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಹಿಂದೂಸ್ತಾನ್ ಜನತಾ ಪಕ್ಷದಿಂದ ಒತ್ತಾಯಿಸಿದೆ. ಇದನ್ನೂ ಓದಿ: ಮುರುಘಾ ಶ್ರೀಗೆ ಸದ್ಯಕ್ಕಿಲ್ಲ ರಿಲೀಫ್‌ – ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

    ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಹರೀಶ್, ನನಗೆ ತಿಳಿದಿರುವ ಹಾಗೆ ಯಾವುದೇ ಕೇಸ್‌ನಲ್ಲಿ ಆಪಾದನೆ ಬಂದ ಕೂಡಲೇ ಆಪಾದಿತ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಆಮೇಲೆ ವಿಚಾರಣೆಗೆ ಒಳಪಡಿಸುತ್ತಾರೆ. ಆದರೆ ಇಂದಿಗೆ 7 ದಿನ ಆದರೂ ಸ್ವಾಮೀಜಿಯ ಬಂಧನವಾಗಿಲ್ಲ, ವಿಚಾರಣೆಯೂ ನಡೆದಿಲ್ಲ. ಪ್ರತಿಷ್ಠಿತ ದೊಡ್ಡ ಸಮಾಜದ ಮಠದ ಸ್ವಾಮೀಜಿ ಎಂದು ಅಂಜಿಕೆಯೇ? ಅಥವಾ ಆ ಸಮಾಜದ ವೋಟ್ ಬ್ಯಾಂಕನ್ನು ಕಳೆದುಕೊಳ್ಳುತ್ತೇವೆ ಎನ್ನುವ ಭಯವೇ ಎಂದು ಪ್ರಶ್ನಿಸಿದ್ದಾರೆ.

    ಕನ್ನಡಪರ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳು ಸಣ್ಣ ಪುಟ್ಟ ವಿಚಾರಕ್ಕೆ ದೊಡ್ಡ ಮಟ್ಟದ ಹೋರಾಟ ಮಾಡುತ್ತವೆ. ರಾಜ್ಯದಲ್ಲಿ ನಡೆದಿರುವಂತಹ ಇಂತಹ ದೊಡ್ಡ ದೌರ್ಜನ್ಯದ ಹಗರಣದ ವಿರುದ್ಧ ಯಾಕೆ ಗಟ್ಟಿ ಹೋರಾಟ ಮಾಡುತ್ತಿಲ್ಲ ಎನ್ನುವುದು ನಮ್ಮ ಪ್ರಶ್ನೆ. ಆದ್ದರಿಂದ ಪ್ರತಿಷ್ಠಿತ ರಾಜಕಾರಣಿಗಳು, ವಿರೋಧ ಪಕ್ಷಗಳು ಸ್ವಾಮೀಜಿಗೆ ಬೆಂಬಲ ನೀಡುತ್ತಿವೆ. ಇಂತಹ ಸಂದರ್ಭದಲ್ಲಿ ನಾವು ಅನಾಥ, ದಲಿತ ಹೆಣ್ಣು ಮಕ್ಕಳ ಪರವಾಗಿ ಧ್ವನಿ ಎತ್ತಬೇಕು ಕರೆ ನೀಡಿವೆ.

    Live Tv
    [brid partner=56869869 player=32851 video=960834 autoplay=true]

  • ಮುರುಘಾ ಶ್ರೀ ಕೇಸ್ – ಜಡ್ಜ್ ಮುಂದೆ ಹೇಳಿಕೆ ನೀಡಿದ ವಿದ್ಯಾರ್ಥಿಗಳು

    ಮುರುಘಾ ಶ್ರೀ ಕೇಸ್ – ಜಡ್ಜ್ ಮುಂದೆ ಹೇಳಿಕೆ ನೀಡಿದ ವಿದ್ಯಾರ್ಥಿಗಳು

    ಚಿತ್ರದುರ್ಗ: ಮುರುಘಾ ಶ್ರೀಗಳ ಮೇಲಿನ ಪೋಕ್ಸೋ ಕೇಸ್ ತನಿಖೆ ತೀವ್ರಗೊಂಡಿದೆ. ಪ್ರಕರಣ ವರದಿಯಾದ ಮೂರು ದಿನಗಳ ಬಳಿಕ ಸಂತ್ರಸ್ತ ಬಾಲಕಿಯರನ್ನು ಪೊಲೀಸರು ಚಿತ್ರದುರ್ಗದ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.

    CRPC 164 ಅಡಿ ಸಂತ್ರಸ್ತರು, ಮಹಿಳಾ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ. ನ್ಯಾಯಾಧೀಶರ ಸಮ್ಮುಖದಲ್ಲಿ ಸಂತ್ರಸ್ತ ಬಾಲಕಿಯರ ರಕ್ತದ ಮಾದರಿಯನ್ನು ಆರೋಗ್ಯ ಇಲಾಖೆ ಸಂಗ್ರಹಿಸಿದೆ. ಸದ್ಯ ಮುಚ್ಚಿದ ಲಕೋಟೆಯಲ್ಲಿರುವ ಸಂತ್ರಸ್ತರ ಹೇಳಿಕೆಯನ್ನು ಗೌಪ್ಯವಾಗಿ ಇರಿಸಲಾಗಿದೆ. ಸಂತ್ರಸ್ತ ಬಾಲಕಿಯರ ಈ ಹೇಳಿಕೆ ಮೇಲೆ ಮುರುಘಾ ಶರಣರ ಭವಿಷ್ಯ ನಿರ್ಧಾರವಾಗಲಿದೆ. ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಮುಂದಿನ ಪೀಳಿಗೆ ಭವಿಷ್ಯವನ್ನು ಉಜ್ವಲಗೊಳಿಸಲಿದೆ: ರಾಜ್ಯಪಾಲರು

    ಇಂದು ಕೋರ್ಟ್ ಮುಂದೆ ಪರ-ವಿರೋಧಿ ಪ್ರತಿಭಟನೆಗಳು ನಡೆದಿದ್ದು, ಪೊಲೀಸರು ಜನರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಬೇಕಾಯ್ತು. ಈ ಮಧ್ಯೆ, ಸಂತ್ರಸ್ತ ಬಾಲಕಿಯರ ಪೈಕಿ ಒಬ್ಬರು ಪರಿಶಿಷ್ಟ ಜಾತಿಗೆ ಸೇರಿರುವ ಕಾರಣ ಶ್ರೀಗಳ ವಿರುದ್ಧ ಅಟ್ರಾಸಿಟಿ ಕೇಸ್ ಕೂಡ ದಾಖಲಾಗಿದೆ. ಈ ಮಧ್ಯೆ, 20ಕ್ಕೂ ಹೆಚ್ಚು ಸ್ವಾಮೀಜಿಗಳು ಸುದ್ದಿಗೋಷ್ಟಿ ನಡೆಸಿ, ಮುರುಘಾ ಮಠದ ಶ್ರೀಗಳಿಗೆ ಬೆಂಬಲ ಸೂಚಿಸಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ಬಂದ ಮೇಲೂ ಗಣೇಶೋತ್ಸವಕ್ಕೆ ಪರದಾಡುತ್ತಿದ್ದೇವೆ: ಮುತಾಲಿಕ್‌

    ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ವಿವಿಧ ಮಠದ ಶ್ರೀಗಳು, ಮುರುಘಾ ಶರಣರು ಮಕ್ಕಳು ದೇವರ ಸಮಾನ ಎಂದು ತಿಳಿದಿರುವವರು, ಅವರು ನಾಡಿನ ಗಮನ ಸೆಳೆದಿದ್ದಾರೆ. ಬಹಳ ಮುಂಚೂಣಿಯಲ್ಲಿದ್ದಾರೆ. ಇದು ಎಲ್ಲರಿಗೂ ಗೊತ್ತಿದೆ. ಆದರೆ ಪಟ್ಟಭದ್ರ ಹಿತಾಸಕ್ತಿಗಳು ಸ್ವಾಮೀಜಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಶ್ರೀಗಳು ಖಂಡಿತಾಗಿಯೂ ಈ ಪ್ರಕರಣದಿಂದ ಹೊರ ಬರ್ತಾರೆ, ಸತ್ಯಕ್ಕೆ ಜಯವಾಗುತ್ತದೆ ಎಂದು ಎಲ್ಲಾ ಮಠಾಧೀಶರು ಶ್ರೀಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುರುಘಾ ಶ್ರೀ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

    ಮುರುಘಾ ಶ್ರೀ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

    ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶ್ರೀ ವಿರುದ್ಧ ಅಟ್ರಾಸಿಟಿ ದೂರು ದಾಖಲಾಗಿದೆ.

    ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ನಿಗ್ರಹ ಕಾಯ್ದೆಯ ಅಡಿ ದೂರು ದಾಖಲಾಗಿದೆ. ಅಟ್ರಾಸಿಟಿ ಕೇಸ್ ದಾಖಲು ಮಾಡಲು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದಿದ್ದರು. ಇದನ್ನೂ ಓದಿ: ಮುರುಘಾ ಕೇಸ್‌ – ಮಠಕ್ಕೆ ಕರೆದೊಯ್ದು ಸ್ಥಳ ಮಹಜರು

    ನೊಂದ ಇಬ್ಬರ ಪೈಕಿ ಒಬ್ಬಳು ಪರಿಶಿಷ್ಟ ಜಾತಿಗೆ ಸೇರಿದವಳಾದ ಕಾರಣ ಈ ಕಾಯ್ದೆಯ ಅಡಿ ಈಗ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಠಕ್ಕೆ ಮುರುಘಾ ಶ್ರೀಗಳು ವಾಪಸ್- ಶಾಂತಿ, ಸಹನೆಯಿಂದ ಇರುವಂತೆ ಮನವಿ

    ಈಗಾಗಲೇ ಇಬ್ಬರು ಅಪ್ರಾಪ್ತ ಬಾಲಕಿಯರು ನೀಡಿದ ದೂರಿನ ಮೇರೆ ಶ್ರೀಳ ವಿರುದ್ಧ ಅತ್ಯಾಚಾರ, ಪೋಕ್ಸೋ ಕಾಯ್ದೆಯ ಅಡಿ ಕೇಸ್‌ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ದಶಪಥ ರಸ್ತೆಗೆ ಪ್ಲ್ಯಾನಿಂಗ್‌ ಕೊಟ್ಟವರಿಗೆ ಪದ್ಮಭೂಷಣ ಕೊಡಿ- ಸಿಎಂಗೆ ಡಿಕೆಶಿ ಟಾಂಗ್

    ದಶಪಥ ರಸ್ತೆಗೆ ಪ್ಲ್ಯಾನಿಂಗ್‌ ಕೊಟ್ಟವರಿಗೆ ಪದ್ಮಭೂಷಣ ಕೊಡಿ- ಸಿಎಂಗೆ ಡಿಕೆಶಿ ಟಾಂಗ್

    ಬೆಂಗಳೂರು: ಮೈಸೂರು-ಬೆಂಗಳೂರು ದಶಪಥ ರಸ್ತೆ ಕಾಮಗಾರಿ ಆಗ್ತಿದೆ. ಅದಕ್ಕೆ ಪ್ಲ್ಯಾನಿಂಗ್‌ ಕೊಟ್ಟವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಟುಕಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೋಲ್ ಪಕ್ಕಾ ಪ್ಲ್ಯಾನ್ ಹೇಗಿರಬೇಕು ಅಂತ, ಕಾಮನ್‌ಸೆನ್ಸ್ ಇರಬೇಕು. ಯಾರು ಪ್ಲ್ಯಾನಿಂಗ್‌ ಮಾಡಿದ್ರು ಅವರಿಗೆ ಅವಾರ್ಡ್ ಕೊಡಬೇಕು. ಬರೀ ಟಾರ್ ಹಾಕಿ ದುಡ್ಡು ಇಸ್ಕೊಳ್ಳೋದಷ್ಟೇ ಕೆಲಸವೇ? ರಾಷ್ಟ್ರೀಯ ಹೆದ್ದಾರಿಯಲ್ಲೇ ಹೀಗಾದ್ರೆ ಕಥೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಒಬ್ಬಳನ್ನೇ ಮದುವೆಯಾದ ಗಂಡಂದಿರಿಬ್ಬರ ಫೈಟ್ – ಪತ್ನಿಗಾಗಿ ಆಕೆಯ ಮೊದಲನೇ ಗಂಡನ ಹತ್ಯೆಗೆ ಸ್ಕೆಚ್ ಹಾಕ್ದ

    ರಾಮನಗರ, ಚನ್ನಪಟ್ಟಣ, ಕನಕಪುರದ ಭಾಗದಲ್ಲಿ ಮಳೆಹಾನಿಯಾಗಿದೆ. ಈಗಾಗಲೇ ನಾನು ಭೇಟಿ ಮಾಡುವ ಸ್ಥಳಗಳನ್ನ ನಮ್ಮ ಮುಖಂಡರು ಗುರುತಿಸಿದ್ದಾರೆ. ಅಲ್ಲಿ ಹೋಗಿ ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದ್ದಾರೆ.

    ಮಳೆಯಿಂದಾಗಿ ಜನರ ಆಸ್ತಿಪಾಸ್ತಿ ಹಾನಿಯಾಗಿರುವುದು ನೋವಿನ ಸಂಗತಿ. ಸರ್ಕಾರ ಅವರ ನೆರವಿಗೆ ಬರಬೇಕು. ಮಳೆಗೆ ನಿಯಂತ್ರಣ ಇಲ್ಲ, ಮಳೆ ಬರಬಾರದು ಅಂತ ನಾನು ಹೇಳಲ್ಲ. ವಿದ್ಯುತ್ ಸಚಿವನಾಗಿ ಕೆಲಸ ಮಾಡಿರುವ ನನಗೆ ಮಳೆ ಎಷ್ಟು ಅವಶ್ಯಕತೆ ಇದೆ ಅಂತಾ ಗೊತ್ತಿದೆ. ಜನರಿಗೆ ಅನುಕೂಲ ಆಗಲಿ ಅಂತಲೇ ಮೇಕೆದಾಟು ಪಾದಯಾತ್ರೆ ಮಾಡಿದ್ದೇವೆ. 12 ಸಾವಿರ ಕೋಟಿ ಅನುದಾನ ಪಂಪ್ ಸೆಟ್ ವಿದ್ಯುತ್‌ಗೆ ಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ನೀವಲ್ಲವೇ? – ಸಿದ್ದು ವಿರುದ್ಧ ಶ್ರೀರಾಮುಲು ಕಿಡಿ

    ಮುರುಘಾಶ್ರೀಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುರುಘಾ ಶ್ರೀಗಳ ವಿರುದ್ಧ ಏನು ಷಡ್ಯಂತ್ರ ಆಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಹಿಂದೆಯೂ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಮುರುಘಾಶ್ರೀಗಳ ವಿರುದ್ಧ ಷಡ್ಯಂತ್ರ ಆಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ ನಮ್ಮ ಕಣ್ಣಿಗೆ ಕಂಡಿರೋದು ಅವರ ಸೇವೆ ಮಾತ್ರ. ಶ್ರೀಗಳ ಸೇವೆಯನ್ನು ತಳ್ಳಿ ಹಾಕಲು ಆಗುವುದಿಲ್ಲ. ಬೇರೆ ವಿಷಯಗಳ ಬಗ್ಗೆ ನಾನು ಗೊತ್ತಿಲ್ಲದೇ ಮಾತನಾಡುವುದಿಲ್ಲ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]