Tag: Sri Nirmalananda Swamiji

  • ಆದಿಚುಂಚನಗಿರಿ ಮಠಕ್ಕೆ ರೋಮಿ ಭಾಟಿ ಭೇಟಿ

    ಆದಿಚುಂಚನಗಿರಿ ಮಠಕ್ಕೆ ರೋಮಿ ಭಾಟಿ ಭೇಟಿ

    ಬೆಂಗಳೂರು: ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಸ್ತುವಾರಿ ರೋಮಿ ಭಾಟಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

    ಬೆಂಗಳೂರಿನ ವಿಜಯನಗರದಲ್ಲಿರುವ ಮಠದಲ್ಲಿ ಸ್ವಾಮೀಜಿ ಅವರನ್ನು ಭೇಟಿಯಾದ ರೋಮಿ ಭಾಟಿ ಅವರು, ಆಮ್ ಆದ್ಮಿ ಪಾರ್ಟಿಯ ತತ್ತ್ವ ಸಿದ್ಧಾಂತಗಳನ್ನು ವಿವರಿಸಿದರು. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರವು ಶಿಕ್ಷಣ, ಆರೋಗ್ಯ, ಸಾರಿಗೆ, ಸುರಕ್ಷತೆ ಹಾಗೂ ಮೂಲ ಸೌಕರ್ಯಗಳಿಗೆ ಸಂಬಂಧಿಸಿ ಕ್ರಾಂತಿಕಾರಿ ಬದಲಾವಣೆ ತಂದಿರುವುದನ್ನು ಸ್ವಾಮೀಜಿ ಅವರಿಗೆ ಮನವರಿಕೆ ಮಾಡಿಕೊಟ್ಟರು. ಇದನ್ನೂ ಓದಿ: ಯಾವುದೇ ಅವಸರದ ನಿರ್ಧಾರವನ್ನು ನಾವು ತೆಗೆದುಕೊಳ್ಳುವುದಿಲ್ಲ: ಸಿಎಂ

    ಕರ್ನಾಟಕದಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.40 ಭ್ರಷ್ಟಾಚಾರ ನಡೆಯುತ್ತಿರುವುದರ ವಿರುದ್ಧ ಹೋರಾಡಲು ಆಮ್ ಆದ್ಮಿ ಪಾರ್ಟಿ ನಿರ್ಧರಿಸಿದ್ದು, ಈ ಸದುದ್ದೇಶದ ಹೋರಾಟದಲ್ಲಿ ಯಶಸ್ಸು ಸಿಗುವಂತೆ ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದರು.

    ರೋಮಿ ಅವರಿಗೆ ಆಶೀರ್ವಾದ ಮಾಡಿದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರು, ‘ದೆಹಲಿಯ ಅರವಿಂದ್ ಕೇಜ್ರಿವಾಲ್ ಅವರ ಆಡಳಿತದ ಬಗ್ಗೆ ಸಾಕಷ್ಟು ಕೇಳಿರುವೆ. ಅವರು ದೆಹಲಿಯಲ್ಲಿ ಜಾರಿಗೆ ತಂದಿರುವ ಜನಪರ ಯೋಜನೆಗಳು ನಮ್ಮಲ್ಲೂ ಜಾರಿಗೆ ಬರಲಿ. ಆಮ್ ಆದ್ಮಿ ಪಾರ್ಟಿಗೆ ಒಳಿತಾಗಲಿ. ರಾಜಕೀಯದಿಂದ ಭ್ರಷ್ಟಾಚಾರವನ್ನು ದೂರವಿಡುವ ನಿಮ್ಮ ಉದ್ದೇಶ ಶೀಘ್ರವೇ ಈಡೇರಲಿ ಎಂದು ತಿಳಿಸಿದರು. ಇದನ್ನೂ ಓದಿ: ಓಟದ ಮೂಲಕ ಅಪ್ಪು ಸಮಾಧಿಗೆ ಹೊರಟ ಮಹಿಳೆಯ ಆರೋಗ್ಯ ವಿಚಾರಿಸಿದ್ರು ರಾಘಣ್ಣ

    ಈ ವೇಳೆ ಒಕ್ಕಲಿಗರ ಸಂಘದ ಚುನಾವಣೆಯ ಅಭ್ಯರ್ಥಿ ಚನ್ನಪ್ಪಗೌಡ ನೆಲ್ಲೂರು, ಎಎಪಿ ಮುಖಂಡರಾದ ನಂಜಪ್ಪ ಕಾಳೇಗೌಡ, ಲಕ್ಷ್ಮೀಕಾಂತ ರಾವ್, ಡಾ.ಸತೀಶ್ ಕುಮಾರ್, ಕುಶಲ ಸ್ವಾಮಿ, ಸುಹಾಸಿನಿ, ಡಾ.ರಮೇಶ್, ಜಗದೀಶ್ ಚಂದ್ರ ಜೊತೆಗಿದ್ದರು.

  • ಆದಿಚುಂಚನಗಿರಿ ಕೇತ್ರದ ಆಮ್ಲಜನಕ ಘಟಕ ಲೋಕಾರ್ಪಣೆ

    ಆದಿಚುಂಚನಗಿರಿ ಕೇತ್ರದ ಆಮ್ಲಜನಕ ಘಟಕ ಲೋಕಾರ್ಪಣೆ

    ಮಂಡ್ಯ: ಕೊರೊನಾ ಎದುರಿಸಲು ಆದಿಚುಂಚನಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಸಾರ್ವಜನಿಕ ಹಿತದೃಷ್ಟಿಯಿಂದ ಹೆಚ್ಚಿನ ಸಾಮರ್ಥ್ಯವುಳ್ಳ ಆಮ್ಲಜನಕ ಉತ್ಪಾದನಾ ಘಟಕವನ್ನು ಇಂದು ಲೋಕಾರ್ಪಣೆಗೊಳಿಸಿದೆ.

    ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ನಿರ್ಮಾಣಗೊಂಡಿದೆ. ಅಮ್ಲಜನಕ ಘಟಕವನ್ನು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ವರ್ಚುಯಲ್ ಮೂಲಕ ಉದ್ಘಾಟಿಸಿದರು.

    ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಇರುವ ಎಐಎಂಎಸ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಈ ಘಟಕ ನಿರ್ಮಾಣಗೊಂಡಿದೆ. ಈ ಘಟಕ ಪ್ರತಿ ನಿಮಿಷಕ್ಕೆ 700 ಲೀಟರ್ ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

    ಆಮ್ಲಜನಕ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿದ ಶ್ರೀಗಳು ಕುದುರೆಮುಖ ಕಬ್ಬಿಣದ ಅದಿರು ಕಂಪನಿಯೊಂದಿಗೆ ಮಾತುಕತೆ ನಡೆಸಿದ್ದರು. ಅಲ್ಲದೇ ತಮ್ಮ ಸಂಶೋಧನಾ ಸಂಸ್ಥೆಯ ಮುಖ್ಯಸ್ಥರನ್ನು ಒಳಗೊಂಡಂತೆ ವಿಶೇಷ ಸಮಿತಿಯೊಂದನ್ನು ರಚಿಸಿದ್ದರು. ಆ ಸಮಿತಿ ಆಮ್ಲಜನಕ ಉತ್ಪಾದನಾ ಘಟಕದ ಅಗತ್ಯದ ಬಗ್ಗೆ ಶಿಫಾರಸು ಮಾಡಿತ್ತು. ಅದರನ್ವಯ ಉಪಕರಣಗಳನ್ನು ಯುರೋಪ್‍ನಿಂದ ಆಮದು ಮಾಡಿಕೊಂಡು ಘಟಕವನ್ನು ಸ್ಥಾಪನೆ ಮಾಡಲಾಗಿದೆ. ಇದನ್ನೂ ಓದಿ:ಎಲ್ಲರಿಗೂ ಉಚಿತ ವ್ಯಾಕ್ಸಿನ್ ಕೊಡಬೇಕು, ಮೂರನೇ ಅಲೆಗೂ ಮುನ್ನ ಸರ್ವ ಪಕ್ಷ ಸಭೆ ಕರೆಯಬೇಕು: ರಾಮಲಿಂಗಾ ರೆಡ್ಡಿ

    ಅತ್ಯುನ್ನತ ತಂತ್ರಜ್ಞಾನ ಹೊಂದಿರುವ ಈ ಘಟಕ ಒಂದು ನಿಮಿಷಕ್ಕೆ 700 ಲೀಟರ್ ಅನಿಲ ರೂಪದ ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, 143 ಸಿಲಿಂಡರ್ ಹೊಂದಿರುವ ಆಮ್ಲಜನಕ ಸಾಮರ್ಥ್ಯಕ್ಕೆ ಇದು ಸಮವಾಗಿದೆ. ಇದರಿಂದ ಏಕಕಾಲಕ್ಕೆ 150 ಆಮ್ಲಜನಕ ಅವಲಂಬಿತ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದ ಸ್ವಾಮೀಜಿ ಹೇಳಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಕೆಐಒಸಿ ಲಿಮಿಟೆಡ್ ಮುಖ್ಯಸ್ಥರು ಹಾಗೂ ಮಠದ ಮತ್ತಿತರರು ಭಾಗವಹಿಸಿದ್ದರು. ಇದನ್ನೂ ಓದಿ: ಸರ್ಕಾರದ ಅಕ್ರಮಗಳನ್ನು ಚರ್ಚೆ ಮಾಡಲು ಅಧಿವೇಶನ ಕರೆಯಿರಿ – ಎಚ್‍ಡಿಕೆ ಸವಾಲ್

  • ಶ್ರೀ ನಿರ್ಮಲಾನಂದ ಸ್ವಾಮೀಜಿಯ ಆಶೀರ್ವಾದ ಪಡೆದ ಸಿಎಂ ಬಿಎಸ್‍ವೈ

    ಶ್ರೀ ನಿರ್ಮಲಾನಂದ ಸ್ವಾಮೀಜಿಯ ಆಶೀರ್ವಾದ ಪಡೆದ ಸಿಎಂ ಬಿಎಸ್‍ವೈ

    ಬೆಂಗಳೂರು: ಸಿಎಂ ಯಡಿಯೂರಪ್ಪ ಅವರು ಇಂದು ಶ್ರೀ ನಿರ್ಮಲಾನಂದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

    ಇಂದು ನಗರದ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಬಿಎಸ್‍ವೈ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಸಿಎಂಗೆ ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ ಮತ್ತು ಡಾ: ಸಿ.ಎನ್.ಅಶ್ವಥನಾರಾಯಣ ಸಾಥ್ ನೀಡಿದರು.

    ಬಿಎಸ್‍ವೈ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರ ಮಾಡಿದರು ಸಚಿವ ಸಂಪುಟ ರಚನೆ ಮಾಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡದ ಕಾರಣ ಸಂಪುಟ ರಚನೆ ಆಗಿರಲಿಲ್ಲ. ಕೇಂದ್ರ ಸಚಿವ ಅಮಿತ್ ಶಾ ಅವರ ಸಂಪುಟ ರಚನೆ ಮಾಡುವಂತೆ ಸೂಚಿಸಿದ ನಂತರ ಮಂಗಳವಾರ 17 ಜನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.