ಚಿಕ್ಕೋಡಿ: ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ (Sri Ram Sena) ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕೇರಿ ಪೊಲೀಸ್ ಠಾಣೆ (Hukkeri Police Station) ಪಿಎಸ್‌ಐ ನಿಖಿಲ್ ಕಾಂಬ್ಳೆ ಅವರನ್ನು ಅಮಾನತು ಮಾಡಲಾಗಿದೆ.
ಘಟನೆಯ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರದೇ ಬೇಜವಾಬ್ದಾರಿ ತೋರಿದ್ದು ಹಾಗೂ ಗಡಿಪಾರಾದ ರೌಡಿ ಶೀಟರ್ ಶ್ರೀರಾಮ ಸೇನೆ ಕಾರ್ಯಕರ್ತ ಮಹಾವೀರ್ ಸೊಲ್ಲಾಪುರೆಯನ್ನ ಕೂಡ ಬಿಟ್ಟು ಕಳುಹಿಸಿದ ಅಂಶಗಳನ್ನು ಪರಿಗಣಿಸಿ ಅಮಾನತು ಮಾಡಲಾಗಿದೆ. ಇದನ್ನೂಓದಿ: 30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಬಂಧನ
ಜುಲೈ 3 ರಂದು ಇಂಗಳಿ ಚಲೋ ಕರೆ ಕೊಟ್ಟಿರುವ ಶ್ರೀರಾಮ ಸೇನೆ ಸಂಘಟನೆ ಪ್ರತಿಭಟನೆಗೂ ಮುನ್ನವೇ ಪಿಎಸ್‌ಐ ಅವರನ್ನು ಅಮಾನತು ಮಾಡಿ ಬೆಳಗಾವಿ ಎಸ್ ಪಿ ಆದೇಶ ಹೊರಡಿಸಿದ್ದಾರೆ.
ಬಾಗಲಕೋಟೆ: ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರದ ಹೆಸರಲ್ಲಿ ಗನ್ ಹಾಗೂ ಇತರೆ ಸಾಹಸ ತರಬೇತಿ ನೀಡಿದ್ದಕ್ಕೆ ಶ್ರೀರಾಮ ಸೇನೆ (Sri Ram Sena) ಕಾರ್ಯಕರ್ತರ ಮೇಲೆ ಎಫ್‌ಐಆರ್ (FIR) ದಾಖಲಾಗಿದೆ.
ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದ ಗುಡ್ಡದಲ್ಲಿ ಡಿ.24 ರಿಂದ ಡಿ.29 ರವರೆಗೆ ಸೇನಾ ತರಬೇತಿ ಮಾದರಿಯಲ್ಲಿ ಯುವಕರಿಗೆ ದಂಡ ಪ್ರಯೋಗ, ಗನ್ ಟ್ರೈನಿಂಗ್, ಕರಾಟೆ ಸೇರಿದಂತೆ ವಿವಿಧ ಕೌಶಲ್ಯ ತರಬೇತಿ ನೀಡಲಾಗಿತ್ತು.
ಮುಳ್ಳು ಕಂಟಿಯ ಗುಂಡಿಯಲ್ಲಿ ಹಾದುಹೋಗುವುದು, ಸಂಧಿಗ್ದ ಸ್ಥಳಗಳಲ್ಲಿ ಪಾರಾಗುವುದು, ಟಾರ್ಗೆಟ್ ಸೆಟ್ ಮಾಡಿ ಗುರಿ ಇಟ್ಟು ಹೊಡೆಯುವ ತರಬೇತಿ ನೀಡಲಾಗಿತ್ತು. ಶ್ರೀರಾಮ ಸೇನೆ ಸ್ವಸುರಕ್ಷೆಗಾಗಿ ವಿವಿಧ ರಕ್ಷಾ ತರಬೇತಿ ನೀಡಿದ್ದೇವೆ ಎಂದು ಹೇಳಿಕೊಂಡಿತ್ತು.
ಹುಬ್ಬಳ್ಳಿ: ಇಡೀ ವಿಶ್ವವೇ ಹೊಸ ವರ್ಷ ಬರಮಾಡಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ. ಆದರೆ ಈ ಸಂಭ್ರಮಕ್ಕೆ ಶ್ರೀರಾಮಸೇನೆ (Sri Ram Sena) ತ್ರೀವ ವಿರೋಧ ವ್ಯಕ್ತಪಡಿಸಿದೆ. ಪಾಶ್ಚಿಮಾತ್ಯರ ಹೊಸ ವರ್ಷವನ್ನು ಹೋಟೆಲ್ ಗಳಲ್ಲಿ ಅಸಭ್ಯವಾಗಿ ಆಚರಿಸಲು ಅವಕಾಶ ನೀಡಬಾರದು. ಹೊಸ ವರ್ಷ ಆಚರಣೆ ರದ್ದು ಮಾಡಬೇಕೆಂದು ಆಗ್ರಹಿಸಿದೆ.
ಈ ನಿಟ್ಟಿನಲ್ಲಿ ಹೊಸ ವರ್ಷ ಸಂಭ್ರಮಕ್ಕೆ (New Year Celebration) ಡಿಜೆ ಪಾರ್ಟಿ ಆಯೋಜನೆ ಮಾಡಿರುವ ಹುಬ್ಬಳ್ಳಿ ವಿವಿಧ ಐಷಾರಾಮಿ ಹೋಟೆಲ್ ಗಳಿಗೆ ತೆರಳಿ ಯಾವುದೇ ಕಾರಣಕ್ಕೂ ಹೊಸ ವರ್ಷ ಆಚರಣೆ ನೆಪದಲ್ಲಿ ಭಾರತೀಯ ಸಂಸ್ಕೃತಿಗೆ ಅಗೌರವ ತೋರಬಾರದು. ಹೀಗಾಗಿ ಯಾವುದೇ ಪಾರ್ಟಿ ಆಯೋಜನೆ ಮಾಡಬಾರದು ಅಂತ ಶ್ರೀರಾಮಸೇನೆ ಕಾರ್ಯಕರ್ತರು, ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಸ್ಫೋಟ ಕೇಸ್; ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – ಮೃತರ ಸಂಖ್ಯೆ 5 ಕ್ಕೆ ಏರಿಕೆ
ಶ್ರೀರಾಮ ಸೇನಾ ರಾಜ್ಯಾಧ್ಯಕ್ಷ ಗಂಗಾಧರ್ ಜಿ ಕುಲಕರ್ಣಿಯವರ ನೇತೃತ್ವದಲ್ಲಿ ಅಭಿಯಾನ ಆರಂಭವಾಗಿದ್ದು, ಹುಬ್ಬಳ್ಳಿ ಪ್ರೆಸಿಡೆಂಟ್, ನವೀನ್, ರಾಯಲ್ ರಿಡ್ಜ್, ಡೆನಿಸೆನ್ಸ್, ಕ್ಯೂಬೆಕ್ಸ್, ಫಾರ್ಚೂನ್, ಹನ್ಸ್ ಹೋಟೆಲ್‌ಗೆ ತೆರಳಿ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾತನಾಡಿರುವ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಹೊಸ ವರ್ಷದ ಆಚರಣೆ ನೆಪದಲ್ಲಿ, ಕುಡಿತ, ಡ್ಯಾನ್ ಪಾರ್ಟಿ ಆಯೋಜನೆ ಮಾಡೋದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲಾ, ಇದನ್ನು ನಾವು ಒಪ್ಪೊದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ – ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು, ಸಾವಿನ ಸಂಖ್ಯೆ 6ಕ್ಕೇರಿಕೆ!
ಗದಗ: ಜಿಲ್ಲೆಯ ಲಕ್ಷ್ಮೇಶ್ವರದ (Lakshmeshwara) ಪಟ್ಟಣದ ಗೋಸಾವಿ ಸಮಾಜದವರ ಮೇಲೆ ಅನ್ಯಕೋಮಿನ ಯುವಕರಿಂದಾದ ಹಲ್ಲೆ, ಹಾಗೂ ಪಿಎಸ್‌ಐ ನಡೆ ಖಂಡಿಸಿ ಅ.19ರಂದು ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ಬಂದ್ ಕರೆ ಕೊಟ್ಟಿದ್ದಾರೆ.
ಇಂದು (ಗುರುವಾರ) ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶ್ರೀರಾಮಸೇನೆ (Sri Ram Sena), ಗೋಸಾವಿ ಸಮಾಜ (Gosavi Samaj) ಹಾಗೂ ವಿವಿಧ ಸಂಘಟನೆಯ ನೇತೃತ್ವದಲ್ಲಿ ಬಂದ್ ಕರೆ ಘೋಷಿಸಿರುವುದಾಗಿ ತಿಳಿಸಿದರು. ವಿಜಯ ದಶಮಿ ದಿನದಂದು ಲಕ್ಷ್ಮೇಶ್ವರ ಪಟ್ಟಣದಲ್ಲಿ ಗೋಸಾವಿ ಸಮಾಜದಿಂದ ದುರ್ಗಾದೇವಿ ಮೂರ್ತಿ ವಿಸರ್ಜನೆಯ ಮೆರವಣಿಗೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಭಾನು ಮಾರ್ಕೆಟ್‌ನಲ್ಲಿ ಅನ್ಯಕೋಮಿನ ಆರೇಳು ಯುವಕರು ಮೆರವಣಿಗೆಯಲ್ಲಿ ನುಗ್ಗಿ ಗೋಸಾವಿ ಯುವಕರ ಮೇಲೆ ಹಲ್ಲೆ ಮಾಡಿ, ಕೇಸರಿ ಶಾಲು ನೆಲಕ್ಕೆ ಎಸೆದು ತುಳಿದು ಹಾಕಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು – ಸಿಎಂ ಸಿದ್ದರಾಮಯ್ಯ ಘೋಷಣೆ
ಈ ಕುರಿತು ಸಮಾಜದವರೆಲ್ಲಾ ಸೇರಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಈ ವೇಳೆ ಠಾಣೆ ಪಿಎಸ್‌ಐ ಈರಣ್ಣ ರಿತ್ತಿ ಅವರು ದೂರುದಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು. ಹಲ್ಲೆ ಮಾಡಿದ ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಳ್ಳಿ ಅಂತ ಹೇಳಲು ಹೋದವರ ಮೇಲೆ ಪಿಎಸ್‌ಐ ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿದರು. ಈ ವಿಷಯವಾಗಿ ಹಲ್ಲೆಕೋರರನ್ನು ಬಂಧಿಸಿ ಶಿಕ್ಷೆ ನೀಡಬೇಕು. ಜೊತೆಗೆ ಅಮಾಯಕರ ಮೇಲೆ ಲಾಠಿ ಚಾರ್ಜ್ ಮಾಡಿದ ಪಿಎಸ್‌ಐ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಂಘಟಿಕರು ಆಗ್ರಹಿಸಿದರು. ಇದನ್ನೂ ಓದಿ: ಡಿಕೆ ಸುರೇಶ್‌ಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಸಿಗಲಿ: ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ಬೆಂಬಲಿಗರು
ಘಟನೆ ಆಗಿ ಐದು ದಿನಗಳಾದರೂ ಯಾವುದೇ ಕ್ರಮ ಆಗದೇ ಇರುವುದಕ್ಕೆ ಲಕ್ಷ್ಮೇಶ್ವರ ಪಟ್ಟಣ ಬಂದ್ ಕರೆ ನೀಡಲಾಗಿದೆ. ಗೋಸಾವಿ ಸಮಾಜ, ಶ್ರೀರಾಮಸೇನೆ ಸೇರಿದಂತೆ ಅನೇಕ ಸಂಘಟಿಕರು ಈ ಬಂದ್‌ಗೆ ಬೆಂಬಲ ಸೂಚಿಸಿರುವುದಾಗಿ ಹೇಳಿದ್ದಾರೆ. ಅ.19ರಂದು ಪಟ್ಟಣದ ಹಾವಳಿ ಆಂಜನೇಯ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಹಶಿಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು. ಬೆಳಿಗ್ಗೆ 6 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಬಂದ್‌ಗೆ ಕರೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 50:50 ಅನುಪಾತದಲ್ಲಿ ಹಂಚಿಕೆಯಾಗಿರೊ 1,400 ನಿವೇಶನಗಳನ್ನ ಜಪ್ತಿ ಮಾಡಿ; ಸಿಎಂಗೆ ಬಿಜೆಪಿ ಶಾಸಕ ಆಗ್ರಹ
ಈ ಬಂದ್‌ಗೆ ವಿರೋಧ ವ್ಯಕ್ತಪಡಿಸಿದ ಕನ್ನಡಪರ ಹೋರಾಟಗಾರ ಶರಣು ಗೋಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಂಘಟನಾಕಾರ ಶರಣು ಅವರು ಅನ್ಯಕೋಮಿನ ಯುವಕರು ಹಾಗೂ ಪಿಎಸ್‌ಐ ರಿತ್ತಿ ಅವರನ್ನು ಎತ್ತಿಕಟ್ಟಿ ಮಾತನಾಡುತ್ತಿದ್ದಾರೆ. ಮುಸ್ಲಿಂ ಓಲೈಕೆ ಸರಿಯಲ್ಲ. ಮೊದಲು ನಿಮಗೆ ಕನ್ನಡ, ನಾಡು, ನುಡಿ, ಭಾಷೆ ಬಗ್ಗೆ ಕಾಳಜಿ ಇರಲಿ. ಶ್ರೀರಾಮಸೇನೆ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದರೆ ಮುಂದೆ ನಿಮ್ಮ ಜಾತಕ ತೆಗೆದು ಇಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಸುಳ್ಳು ಆಪಾದನೆ ಮಾಡ್ತಿದ್ದಾರೆ, ನಾವು ಸಿಎಂ ಜೊತೆ ನಿಲ್ಲಬೇಕು: ಕೆಎನ್ ರಾಜಣ್ಣ
ಲಕ್ಷ್ಮೇಶ್ವರ ಪಟ್ಟಣದಲ್ಲಿ ಅನ್ಯಕೋಮಿನ ಗೂಂಡಾಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ. ಗಲಾಟೆಗೆ ಕಾರಣರಾದ ಅನ್ಯಕೋಮಿನ ಯುವಕರ ಬಂಧನವಾಗಬೇಕು. ಅಮಾಯಕರ ಮೇಲೆ ಲಾಠಿ ಚಾರ್ಜ್ ಮಾಡಿ ಅಧಿಕಾರದ ದರ್ಪದಿಂದ ಮೆರೆಯುವ ಪಿಎಸ್‌ಐ ಈರಣ್ಣ ರಿತ್ತಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಹಾಲಿನ ದರ ಏರಿಕೆ ಆಗುತ್ತಾ? – ಸಚಿವ ಕೆ.ವೆಂಕಟೇಶ್ ಹೇಳಿದ್ದೇನು?
ಈ ವೇಳೆ ಶ್ರೀರಾಮಸೇನೆ ರಾಜ್ಯ ಕಾರ್ಯದರ್ಶಿ ರಾಜೂ ಖಾನಪ್ಪನವರ್, ಮಹೇಶ್ ರೋಖಡೆ, ರಾಜು ಗದ್ದಿ, ನಿಖಿಲ್ ಗೋಸಾವಿ, ಸೋಮು ಗುಡಿ, ಕಿರಣ್ ಹಿರೇಮಠ, ವೆಂಕಟೇಶ್ ದೊಡ್ಡಮನಿ, ಈರಣ್ಣ ಪೂಜಾರ, ಪ್ರಾಣೇಶ್ ವ್ಯಾಪಾರಿ, ವಾಸು ಗೋಸಾವಿ, ಮಲ್ಲಿಕಾರ್ಜುನ ಆಳತೋಟದ, ಕಿರಣ್ ಚಿಲ್ಲೂರಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: ಭಾರತೀಯ ಮೂಲದ ಸ್ವಿಸ್ ಉದ್ಯಮಿಯ ಮಗಳನ್ನು ಬಂಧಿಸಿದ ಉಗಾಂಡಾ – ಮಧ್ಯಪ್ರವೇಶಿಸಲು ವಿಶ್ವಸಂಸ್ಥೆಗೆ ಮನವಿ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದ ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮಸೇನೆ (Sri Ram Sena) ಪ್ರತಿಭಟನೆ ಮೂಲಕ ಆಕ್ರೋಶ ಹೊರಹಾಕಿದೆ. ಹಳೇ ಹುಬ್ಬಳ್ಳಿ ದಿಡ್ಡಿ ಓಣಿ ಹನುಮಾನ್ ದೇವಸ್ಥಾನದಿಂದ ಗಲಭೆ ನಡೆದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ತನಕ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಎಡಬಿಡದೆ ಸುರಿದ ಮಳೆಯಲ್ಲಿ ಪ್ರತಿಭಟನೆ ನಡೆಸಿ, ಸಿದ್ದರಾಮಯ್ಯ (CM Siddaramaiah) ಸರ್ಕಾರ ವಿರುದ್ಧ ಹರಿಹಾಯ್ದಿದ್ದಾರೆ.
ಈ ವೇಳೆ ಸಿದ್ದರಾಮಯ್ಯ ಭಾವಚಿತ್ರ ಸುಡಲು ಪ್ರತಿಭಟನಾಕಾರರು ಮುಂದಾಗಿದ್ದು, ಇದನ್ನು ತಡೆಯಲು ಪೊಲೀಸರು ಪ್ರಯತ್ನ ಮಾಡಿದರು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ಉಂಟಾಯಿತು. ಬಳಿಕ ತಹಶಿಲ್ದಾರರ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: ಮಂತ್ರಾಲಯಕ್ಕೆ ಹೊರಟಿದ್ದ ಕ್ರೂಸರ್ ಪಲ್ಟಿ: ಚಾಲಕನ ಕೈ ಮುರಿತ, ಹಲವರಿಗೆ ಗಾಯ
ಈ ಬಗ್ಗೆ ಮಾತನಾಡಿದ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಹಳೇ ಹುಬ್ಬಳ್ಳಿ ಗಲಭೆಯಲ್ಲಿ ತಮ್ಮ ಸಮಸ್ಯೆಯನ್ನು ಪೊಲೀಸರ ಜೊತೆಗೆ ಬಗೆಹರಿಸಿಕೊಳ್ಳಬಹುದಿತ್ತು. ಅದು ಬಿಟ್ಟು ಹನುಮಾನ್ ದೇವಸ್ಥಾನದ ಮೇಲೆ ಯಾಕೆ ದಾಳಿ ಮಾಡಿದರು? ಮುಸ್ಲಿಂ ಗಲಭೆಕೋರರಿಗೆ ತಾಕತ್ತು ಇದ್ದರೆ ಮತ್ತೆ ದೇವಸ್ಥಾನ ಮುಟ್ಟಿ ನೋಡಿ. ಹಿಂದೂಗಳ ತಾಕತ್ತು ನಿಮಗೆ ತೋರಿಸುತ್ತೇವೆ. ರಾಜ್ಯ ಸರ್ಕಾರ ಗಲಭೆ ಕೇಸ್ ವಾಪಸ್ ನಿರ್ಧಾರವನ್ನು ಒಂದು ವಾರದೊಳಗೆ ವಾಪಸ್ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ಹುಬ್ಬಳ್ಳಿ (Hubballi) ಬಂದ್ ಮಾಡಿ ಉಗ್ರ ಹೋರಾಟಕ್ಕೆ ರಾಜ್ಯಾದ್ಯಂತ ಕರೆ ನೀಡುತ್ತೇವೆ ಎಂದು ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಾಡೂಟ – ಬಿರಿಯಾನಿ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ಇದು ಬರೀ ಸಾಂಕೇತಿಕ ಹೋರಾಟ ಅಷ್ಟೇ. ಸಿಎಂ ರಾಜ್ಯವನ್ನು ಸಿರಿಯಾ, ಅಫ್ಘಾನಿಸ್ತಾನ ಮಾಡಲು ಹೊರಟಿದ್ದಾರೆ. ಅತಿಯಾಗಿ ಮುಸ್ಲಿಂ ತುಷ್ಟೀಕರಣ ನಡೆಯುತ್ತಿದೆ. ಇದಕ್ಕೆ ಸ್ಥಳೀಯ ಶಾಸಕ ಪ್ರಸಾದ್ ಅಬ್ಬಯ್ಯ ಸಾಥ್ ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಅಪಮಾನ ಮಾಡುತ್ತಿದೆ. ಪೊಲೀಸರ ಆತ್ಮಸ್ತೈರ್ಯ ಕುಗ್ಗಿಸುವ ಕೆಲಸ ಆಗುತ್ತಿದೆ. ಇದನ್ನು ಶ್ರೀರಾಮಸೇನೆ ಖಂಡನೆ ಮಾಡುತ್ತಿದೆ ಎಂದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ ಕ್ಷೇತ್ರದ ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ಕಾಲರ್ಶಿಪ್ ಸ್ಕೀಂ ಘೋಷಿಸಿದ ಶಾಸಕ ಪ್ರದೀಪ್ ಈಶ್ವರ್
– ರಾಹುಲ್ ಗಾಂಧಿ ನ್ಯಾಯಯಾತ್ರೆ, ಕಾಂಗ್ರೆಸ್‍ನ ಅಂತ್ಯಯಾತ್ರೆಯಾಗಲಿದೆ
ರಾಯಚೂರು: ಲೋಕಸಭಾ ಚುನಾವಣೆಯಲ್ಲಿ (General Elections 2024) ಅಪ್ಪಿತಪ್ಪಿ ಕಾಂಗ್ರೆಸ್‍ಗೆ (Congress) ಮತ ಹಾಕಿದ್ರೆ ಭಯೋತ್ಪಾದಕರಿಗೆ, ಭ್ರಷ್ಟಾಚಾರಕ್ಕೆ ಮತ ಹಾಕಿದ ಹಾಗೆ ಎಂದು ಶ್ರೀರಾಮಸೇನೆ (Sri Ram Sena) ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ (Gangadhar Kulakarni) ಹೇಳಿದ್ದಾರೆ.
ನಗರದಲ್ಲಿ ಆಯೋಜಿಸಿದ್ದ ಮೋದಿ ಗೆಲ್ಲಿಸಿ ದೇಶ ಉಳಿಸಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕಸಬ್‍ನನ್ನ ಜೈಲಿನಲ್ಲಿಟ್ಟು ಬಿರಿಯಾನಿ ತಿನ್ನಿಸಿದ್ರಿ, ಅಫ್ಜಲ್ ಗುರು ಪರ ಘೋಷಣೆ ಕೂಗಿದವರನ್ನು ಸಾಕಿದ್ರಿ, ನೀವು ಭಯೋತ್ಪಾದಕರ ಬಗ್ಗೆ ಮಾತನಾಡುತ್ತೀರಿ ಎಂದು ಅವರು ಗುಡುಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನಿಂದ ನನಗೂ, ಹೆಗಡೆಗೂ ಗಲಾಟೆಯಾಗಿತ್ತು: ಹೆಚ್‍ಡಿಡಿ
ಭ್ರಷ್ಟಾಚಾರದ ಮೂಲ ಯಾರು? ಯಾರ ಕಾಲದಲ್ಲಿ ಭ್ರಷ್ಟಾಚಾರ ಬೆಳೆಯಿತು? ಈಗ ಕಾಂಗ್ರೆಸ್‍ನವರು ಭ್ರಷ್ಟಾಚಾರದ ಬಗ್ಗೆ ಭಾಷಣ ಮಾಡುತ್ತಾರೆ. ಭ್ರಷ್ಟಾಚಾರವನ್ನ ಶಿಷ್ಟಾಚಾರ ಮಾಡಿದವರು ಕಾಂಗ್ರೆಸ್‍ನವರು. ರಾಹುಲ್ ಗಾಂಧಿಯದ್ದು ನ್ಯಾಯ ಯಾತ್ರೆಯಲ್ಲ, 2024ರಲ್ಲಿ ಕಾಂಗ್ರೆಸ್ ಪಕ್ಷದ ಅಂತ್ಯ ಯಾತ್ರೆಯಾಗಲಿದೆ. ಭಯೋತ್ಪಾದಕರು 2047ಕ್ಕೆ ಭಾರತವನ್ನ ಮುಸ್ಲಿಂ ರಾಷ್ಟ್ರ ಮಾಡಲು ಹೊರಟಿದ್ದಾರೆ. 2047ಕ್ಕೆ ಭಾರತವನ್ನ ಹಿಂದೂ ರಾಷ್ಟ್ರ ಮಾಡಬೇಕು ಎನ್ನುವ ಸಂಕಲ್ಪ ಮಾಡಬೇಕಿದೆ ಎಂದಿದ್ದಾರೆ.
ಅಯೋಗ್ಯ ಓವೈಸಿ ಮಂದಿರ ಒಡೆಯುವ ಬಗ್ಗೆ ಮಾತನಾಡುತ್ತಾನೆ. ಅಯೋಧ್ಯೆಯಲ್ಲಿ ಮಸೀದಿ ಒಡೆದು ಮಂದಿರ ಕಟ್ಟಿದ್ದಾರೆ. ಆ ಮಂದಿರ ಒಡೆದು ಮತ್ತೆ ಮಸೀದಿ ಕಟ್ಟಬೇಕು ಎಂದು ನಮ್ಮ ಮುಂದಿನ ಪೀಳಿಗೆಗೆ ಹೇಳುತ್ತ ಹೋಗುತ್ತೇವೆ ಎನ್ನುತ್ತಿದ್ದಾನೆ. ಓವೈಸಿಗೆ ಧಮ್ಮು, ತಾಕತ್ತು, ಗಂಡಸು ತನ ಇದ್ದರೆ ರಾಮಮಂದಿರದ ಒಂದೇ ಒಂದು ಇಟ್ಟಿಗೆ ಮುಟ್ಟಲಿ. ಇಡೀ ಭಾರತದಲ್ಲಿರುವ 6 ಲಕ್ಷ ಮಸೀದಿಯನ್ನು ಒಡೆದು ನಮಾಜ್ ಮಾಡಲು ನಿನಗೆ ಜಾಗ ಇಲ್ಲದ ಹಾಗೆ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ – ಇಂದು ಖರ್ಗೆ ಕೋಟೆಗೆ ನಮೋ ಎಂಟ್ರಿ
ಹುಬ್ಬಳ್ಳಿ: ಭಾರತವನ್ನು ಹಿಂದೂ ರಾಷ್ಟ್ರ ಮಾಡೇ ಮಾಡ್ತೀವಿ. 2024ರ ಚುನಾವಣೆ ಬಳಿಕ ಪ್ರಧಾನಿ ಮೋದಿ (Modi) ಗೆದ್ದ ನಂತರ ದೇಶ ಹಿಂದೂ ರಾಷ್ಟ್ರವಾಗುತ್ತೆ, ತಾಕತ್ತಿದ್ದರೆ ತಡೀರಿ ನೋಡೋಣ ಅಂತ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಸವಾಲು ಹಾಕಿದ್ದಾರೆ.
ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ಪಾಕಿಸ್ತಾನ, ಅಫ್ಘಾನಿಸ್ತಾನದ ರೀತಿತೇ ಆಗುತ್ತದೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಧರ್ಮದ ಹೆಸರಲ್ಲಿ ಸರ್ವಾಧಿಕಾರ ಮಾಡಿ ದಿವಾಳಿಯಾಗಿವೆ ಎಂಬ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಕಂಡಾಮಂಡಲವಾದರು. ಇದನ್ನೂ ಓದಿ: ಅಯೋಧ್ಯೆ ವಿವಾದಾತ್ಮಕ ಕ್ಷೇತ್ರ – ರಾಮಮಂದಿರಕ್ಕೂ, ಭಕ್ತರಿಗೂ ರಕ್ಷಣೆ ಬೇಕು: ಡಿ.ಕೆ.ಸುರೇಶ್
ಇದೇ ವೇಳೆ ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಏಕೆಂದರೆ, ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಆಗಬಹುದು ಎಂಬ ಬಿ.ಕೆ.ಹರಿಪ್ರಸಾದ್ ಪ್ರಚೋದನಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿ.ಕೆ ಹರಿಪ್ರಸಾದ್‌ರನ್ನ ಈ ಕೂಡಲೇ ಬಂಧಿಸಬೇಕು. ಅವರನ್ನ ಬಂಧಿಸಿ ಗೋದ್ರಾ ಹತ್ಯಾಕಾಂಡ ಮರುಕಳಿಸುವ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದ್ರೂ ಆಗಬಹುದು: ಬಿ.ಕೆ.ಹರಿಪ್ರಸಾದ್
ಚಿಕ್ಕಮಗಳೂರು: ಕರ್ನಾಟಕದ ಅಯೋಧ್ಯೆ ಎಂದೇ ಕರೆಸಿಕೊಳ್ಳುವ ದತ್ತಪೀಠದಲ್ಲಿ (Dattapeeta) ಉತ್ಸವದ ಹಿನ್ನೆಲೆ ನಾಗೇನಹಳ್ಳಿಯ ಸುತ್ತಮುತ್ತ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ದತ್ತಪೀಠದ ದತ್ತಾತ್ರೇಯ ಸ್ವಾಮಿಯ ಉತ್ಸವ (Datta Jayanti) ಈ ಬಾರಿ ಹೊಸ ರೂಪ ಪಡೆದುಕೊಂಡಿದೆ. ವಿ.ಎಚ್.ಪಿ, ಹಾಗೂ ಬಜರಂಗದಳ ದತ್ತಪೀಠದಲ್ಲಿ ದತ್ತಜಯಂತಿ ಮಾಡುತ್ತಿದ್ದರೆ, ಶ್ರೀರಾಮಸೇನೆ (Sri Ram Sena) ದರ್ಗಾದಲ್ಲಿ ದತ್ತಜಯಂತಿಗೆ ಮುಂದಾಗಿದೆ. ಇದೇ ಕಾರಣಕ್ಕೆ ಜಿಲ್ಲಾಡಳಿತ ದರ್ಗಾ ಸುತ್ತಮುತ್ತ ನಿಷೇಧಾಜ್ಞೆ ಹೇರಿದೆ. ಪೊಲೀಸ್ ಇಲಾಖೆಯು ಪ್ರಮೋದ್ ಮುತಾಲಿಕ್ ಹಾಗೂ ಗಂಗಾಧರ್ ಕುಲಕರ್ಣಿ ಅವರಿಗೆ ಜಿಲ್ಲೆಗೆ ಬರಲು ನಿರ್ಬಂಧ ವಿಧಿಸಿದೆ. ಈ ಮಧ್ಯೆ ಸಾವಿರಾರು ಜನರಿಂದ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಇದನ್ನೂ ಓದಿ: ಚಾರಣಕ್ಕೆ ತೆರಳಿದ್ದ ಯುವಕ ಬೆಟ್ಟದಲ್ಲೇ ಕುಸಿದು ಬಿದ್ದು ದುರ್ಮರಣ
ದರ್ಗಾ ಇರುವ ನಾಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 57ರ 200 ಮೀಟರ್ ಸುತ್ತಮುತ್ತ 4 ದಿನಗಳ ಕಾಲ ಜಿಲ್ಲಾಡಳಿತ ನಿಷೇಧಾಜ್ಞೆ ಹೇರಿದೆ. ಪೊಲೀಸ್ ಇಲಾಖೆ ಪ್ರಮೋದ್ ಮುತಾಲಿಕ್ ಹಾಗೂ ಗಂಗಾಧರ್ ಕುಲಕರ್ಣಿ ಅವರಿಗೆ ಮುಂದಿನ ಜ.5ರವರೆಗೆ ಜಿಲ್ಲೆಗೆ ಬರದಂತೆ ನಿರ್ಬಂಧ ವಿಧಿಸಿದೆ.
ದತ್ತಜಯಂತಿಯ ಮೂರು ದಿನಗಳ ಕಾರ್ಯಕ್ರಮದಲ್ಲಿ ಮೊದಲ ದಿನವಾದ ಭಾನುವಾರ ಶಾಂತಿಯುತವಾಗಿ ತೆರೆಕಂಡಿದೆ. ಉಳಿದ ಎರಡು ದಿನಗಳಲ್ಲಿ ಭಕ್ತರು ಹೆಚ್ಚಾಗಿ ಬರಲಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 4,000 ಪೊಲೀಸರನ್ನು ನಿಯೋಜಿಸಲಾಗಿದೆ.
ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಯಲ್ಲಿ ಇಂದು (ಸೋಮವಾರ) ಸುಮಾರು 30 ಸಾವಿರಕ್ಕೂ ಅಧಿಕ ಭಕ್ತರು ಬೃಹತ್ ಶೋಭಾಯಾತ್ರೆ ನಡೆಸಲಿದ್ದಾರೆ. ಕಾಮಧೇನು ಗಣಪತಿ ದೇವಾಲಯದಿಂದ ಆರಂಭವಾಗುವ ಯಾತ್ರೆ ಕೆಇಬಿ ಸರ್ಕಲ್, ಬಸವನಹಳ್ಳಿ, ಹನುಮಂತಪ್ಪ ಸರ್ಕಲ್, ಎಂ.ಜಿ.ರಸ್ತೆ ಮೂಲಕ ಸಾಗಿ ಆಜಾದ್ ಪಾರ್ಕ್‍ವರೆಗೆ ಸುಮಾರು 4 ಕಿ.ಮೀ. ನಡೆಯಲಿದೆ.
ಇನ್ನೂ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ತಂತ್ರ ಹೆಣೆಯುತ್ತಿರುವ ವಿಪಕ್ಷ ನಾಯಕ ಆರ್.ಅಶೋಕ್ ಇದೇ ಮೊದಲ ಬಾರಿಗೆ ದತ್ತ ಮಾಲೆ ಧರಿಸಿ ದತ್ತಭಕ್ತರಾಗಿದ್ದಾರೆ. ಮಾಲಾಧಾರಿ ವಿಪಕ್ಷ ನಾಯಕ ಅಶೋಕ್, ದತ್ತಪೀಠ ಅತಿಕ್ರಮಣವಾಗಿದೆ. ದತ್ತಪೀಠ ದತ್ತಪೀಠವಾಗಿಯೇ ಉಳಿಯಬೇಕು ಎಂದು ಆಗ್ರಹಿಸಿದ್ದಾರೆ. ಈ ಮಧ್ಯೆ ಶಾಸಕ ಸಿ.ಟಿ.ರವಿ ದತ್ತಪೀಠ ಹಿಂದೂಗಳ ಪೀಠ, ಹಿಂದೂಗಳಿಗೆ ಸೇರಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮಿಮಿಕ್ರಿ ಮಾಡೋದು ಕಲೆ ಆಗಿದ್ದು, ಬೇಕಿದ್ರೆ ಸಾವಿರ ಬಾರಿ ಮಾಡ್ತೀನಿ: ಟಿಎಂಸಿ ಸಂಸದ
ಚಿಕ್ಕಬಳ್ಳಾಪುರ: ಅಕ್ರಮವಾಗಿ ರಾಶಿರಾಶಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಶ್ರೀರಾಮ ಸೇನೆ (Sri Ram Sena) ಕಾರ್ಯಕರ್ತರು (Activists) ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ನಗರದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ನಗರದ ಐಬಿ ವೃತ್ತದಲ್ಲಿ ಆಂಧ್ರಪ್ರದೇಶದ ಹಿಂದೂಪುರ ಕಡೆಯಿಂದ ಗೌರಿಬಿದನೂರು-ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರಿನ ಶಿವಾಜಿನಗರಕ್ಕೆ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅತಿ ವೇಗದಿಂದ ಕಾರು ತಡೆದಾಗ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕಾರು ತಡೆ ಹಿಡಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಾರಿನ ಗಾಜು ಪುಡಿಪುಡಿ ಮಾಡಿ ಕಾರಿನಲ್ಲಿದ್ದ ರಾಶಿ ರಾಶಿ ಮಾಂಸವನ್ನು ರಸ್ತೆಗೆ ಸುರಿದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಬಂದ್ ಮಾಡಿದರೆ ಬ್ರ್ಯಾಂಡ್ ಬೆಂಗಳೂರಿಗೆ ಧಕ್ಕೆ – ಡಿಕೆಶಿ ಹೇಳಿಕೆಗೆ ಆಕ್ರೋಶ
ಇದೇ ವೇಳೆ 4 ಬೊಲೆರೋ ಪಿಕ್‌ಅಪ್ ಹಾಗೂ 1 ಮಿನಿ ಟೆಂಪೋ ಮೂಲಕ ಲೋಡ್‌ಗಟ್ಟಲೆ ಗೋಮಾಂಸ (Beef) ಸಾಗಾಟ ಮಾಡುತ್ತಿದ್ದು, ಆ ವಾಹನಗಳಿಗೆ ಮುಂದೆ ಎಸ್ಕಾರ್ಟ್ ವಾಹನವಾಗಿ ಕಾರು ಆಗಮಿಸುತ್ತಿತ್ತು ಎಂದು ತಿಳಿದುಬಂದಿದೆ. ಈ 5 ವಾಹನಗಳನ್ನು ತಡೆದ ಶ್ರೀರಾಮ ಸೇನೆ ಕಾರ್ಯಕರ್ತರು ಗೋಮಾಂಸ ಸಾಗಾಟ ಮಾಡುತ್ತಿದ್ದವರ ಚಳಿ ಬಿಡಿಸಿದ ಬಳಿಕ ಅವರ ತಲೆಯ ಮೇಲೆ ಗೋವಿನ ಕಡಿದ ತಲೆ ಹೊರಿಸಿ ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿಸಿದ್ದಾರೆ. ಘೋಷಣೆ ಕೂಗದೆ ಇದ್ದಾಗ, ತಲೆಯ ಮೇಲೆ ಗೋವು ಹೊರಲು ಹಿಂದೇಟು ಹಾಕಿದವರಿಗೆ ಕೋಲಿನಿಂದ ಬಾರಿಸಲಾಗಿದೆ. ಇದಾದ ನಂತರ ಕಾರಿಗೆ ಬೆಂಕಿ ಹಚ್ಚಲಾಗಿದೆ. ಇದನ್ನೂ ಓದಿ: ಐಫೋನ್ ನೀಡಲು ತಡ ಮಾಡಿದ್ದಕ್ಕೆ ಸಿಬ್ಬಂದಿ ಮೇಲೆ ಗ್ರಾಹಕರಿಂದ ಹಲ್ಲೆ
ವಿಷಯ ತಿಳಿದ ದೊಡ್ಡಬಳ್ಳಾಪುರ ನಗರ ಪೊಲೀಸರು ಡಿವೈಎಸ್ಪಿ ರವಿ ಘಟನಾ ಸ್ಥಳಕ್ಕೆ ಆಗಮಿಸಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತವಾರಣವಿದ್ದು, ಪೊಲೀಸರು ಭದ್ರತೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಒಂದೇ ದಿನ 19 ಮಂದಿ ಸಂಚಾರಿ ಪೊಲೀಸರ ಅಮಾನತು
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ (Expressway) ವೇಯಲ್ಲಿ ಅಕ್ರಮ ಗೋ ಸಾಗಾಟ (Cow Trafficking) ಮಾಡುತ್ತಿದ್ದ 11 ಗೋವುಗಳನ್ನು ಶ್ರೀರಾಮ ಸೇನೆ (Sri Ram Sena) ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ.
ಆರೋಪಿಗಳು 11 ಹಸುಗಳನ್ನು ಕ್ಯಾಂಟರ್ ಮೂಲಕ ಕಸಾಯಿಖಾನೆಗೆ ಸಾಗಿಸುತ್ತಿದ್ದ ವೇಳೆ ರಾಮನಗರ (Ramanagara) ತಾಲೂಕಿನ ಜಯಪುರ ಗೇಟ್ ಬಳಿ ಶ್ರೀರಾಮ ಸೇನೆ ಹಸುಗಳ ರಕ್ಷಣೆ ಮಾಡಿದೆ. ಖಚಿತ ಮಾಹಿತಿಯ ಮೇರೆಗೆ ವಾಹನ ಅಡ್ಡಗಟ್ಟಿದ್ದು, ಬಳಿಕ ರಾಮನಗರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ಸಾಕು ನಾಯಿ, ಬೀದಿ ನಾಯಿ ಕಚ್ಚಾಟಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ 2 ಕುಟುಂಬಗಳು
ಕೆಎಂ ದೊಡ್ಡಿಯಿಂದ ಚಿಂತಾಮಣಿಗೆ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಸಂದರ್ಭ ಸ್ಥಳಕ್ಕೆ ಬಂದ ಪೊಲೀಸರು ಕ್ಯಾಂಟರ್ ವಾಹನವನ್ನು ಸೀಜ್ ಮಾಡಿ ಅದರಲ್ಲಿದ್ದ 11 ಹಸುಗಳ ರಕ್ಷಣೆ ಮಾಡಿದ್ದಾರೆ. ಅಲ್ಲದೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಲಗಿದ್ದಲ್ಲೇ ಅಸುನೀಗಿದ ಲಾರಿ ಚಾಲಕ