Tag: Sri Renuka Yellamma Temple

  • ವಿಜಯೇಂದ್ರ ಏನು ಪುರೋಹಿತನಾ, ಜ್ಯೋತಿಷಿನಾ?: ಸಿಎಂ ಸಿದ್ದರಾಮಯ್ಯ

    ವಿಜಯೇಂದ್ರ ಏನು ಪುರೋಹಿತನಾ, ಜ್ಯೋತಿಷಿನಾ?: ಸಿಎಂ ಸಿದ್ದರಾಮಯ್ಯ

    ಬೆಳಗಾವಿ: ವಿಜಯೇಂದ್ರ ಏನು ಪುರೋಹಿತನಾ? ಜ್ಯೋತಿಷಿನಾ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದ್ದಾರೆ.

    ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ (Shri Renuka Yellamma Temple) ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಪ್ರಥಮ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಧಿವೇಶನಕ್ಕೆ ಹೊಸ ಸಿಎಂ ಇರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.ಇದನ್ನೂ ಓದಿ: ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನ ರಕ್ಷಣೆ

    ದಸರಾ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದಿದ್ದರು. ದಸರಾ ಮಗಿಯಿತು. ನಾನು ರಾಜೀನಾಮೆ ಕೊಟ್ಟನಾ? ವಿಜಯೇಂದ್ರಗೆ ನನ್ನ ರಾಜೀನಾಮೆ ಕೇಳುವ ನೈತಿಕತೆ ಏನಿದೆ? ಪೋಕ್ಸೋ ಕೇಸ್‌ನಲ್ಲಿ ಅವರ ತಂದೆ ಯಡಿಯೂರಪ್ಪ ಬೇಲ್ ಮೇಲೆ ಹೊರಗೆ ಇದ್ದಾರೆ. ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ರಾಜೀನಾಮೆ ಕೊಡಬೇಕು ಎಂದು ಕಿಡಿಕಾರಿದರು.

    ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ವೇಳೆ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ನಮ್ಮ ಬೇಡಿಕೆಗೆ ತಕ್ಕಷ್ಟು ತೆರಿಗೆ ಹಣ ನೀಡಿಲ್ಲ, ಬದಲಾಗಿ ಕಡಿಮೆ ನೀಡಿದೆ. ನ್ಯಾಯಯುತವಾಗಿ ಬರಬೇಕಾದ ಹಣ ಕರ್ನಾಟಕ ರಾಜ್ಯಕ್ಕೆ ಬಂದಿಲ್ಲ. ಈ ಸಂಬಂಧ ಕರ್ನಾಟಕ ಜನರು, ಧ್ವನಿ ಎತ್ತಬೇಕು. ಅನ್ಯಾಯಕ್ಕೆ ಒಳಗಾದ ರಾಜ್ಯಗಳೂ ಕೂಡ ಧ್ವನಿ ಎತ್ತಬೇಕು. ಒಕ್ಕೂಟ ವ್ಯವಸ್ಥೆ ಮೇಲೆ ನಂಬಿಕೆ ಇದೆ. ಹೀಗಾಗಿ ನ್ಯಾಯಯುತ ಪಾಲು ಕೊಟ್ಟರೆ ನಮಗೆ ಅನುಕೂಲ ಎಂದರು.

    ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನ್ಯಾಯಯುತ ತೆರಿಗೆ ಪಾಲು ವಿತರಣೆ ಪಾಲಿಸುತ್ತಿಲ್ಲ. ಈ ಬಗ್ಗೆ ರಾಜ್ಯಕ್ಕೆ ಅನ್ಯಾಯ ಆದರೂ ಬಿಜೆಪಿ ಸಂಸದರು ಕೇಂದ್ರ ಸರ್ಕಾರವನ್ನು ಕೇಳುತ್ತಿಲ್ಲ. ಕೋಮುವಾದಿ ವಿಚಾರದಲ್ಲಿ ಮಾತ್ರ ಬಿಜೆಪಿ ಸಂಸದರು ಪ್ರತಿಭಟನೆ ನಡೆಸುತ್ತಾರೆ ಎಂದು ಲೇವಡಿ ಮಾಡಿದರು.ಇದನ್ನೂ ಓದಿ: ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಸಿಎಂ – ಪತ್ನಿ ಹೆಸರಲ್ಲಿ ವಿಶೇಷ ಪೂಜೆ