Tag: sri sri shivakumara swamiji

  • ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕೆ

    ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕೆ

    ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಮಠದಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯಕ್ಕೆ ಸ್ವಾಮಿಜಿಗಳ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿದೆ.

    ಬಿಜಿಎಸ್ ಆಸ್ಪತ್ರೆಯ ಡಾ.ರವೀಂದ್ರ ಅವರ ತಂಡ ಬಂದು ತಪಾಸಣೆ ನಡೆಸಿ ಚಿಕಿತ್ಸೆಯನ್ನು ನೀಡಿದೆ. ನಡೆದಾಡುವ ದೇವರು ಚೇತರಿಸಿಕೊಂಡಿದ್ದಾರೆ. ಸಿದ್ದಗಂಗಾ ಶ್ರೀಗಳು ಆರೋಗ್ಯರಾಗಿದ್ದಾರೆಂದು ಮಠದ ಕಿರಿಯ ಶ್ರೀಗಳು ಸ್ಪಷ್ಟಪಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳ ಆಪ್ತ ವೈದ್ಯ ಡಾ. ಪರಮೇಶ್ವರ್, ಹೃದಯ ಬಡಿತದಲ್ಲಿ ಸ್ವಲ್ಪ ಏರುಪೇರು ಕಂಡುಬಂದಿದ್ದು, ಜ್ವರದಿಂದ ಬಳಲುತ್ತಿದ್ದರು. ಬಳಿಕ ಬಿಜಿಎಸ್ ಆಸ್ಪತ್ರೆಯ ಡಾ.ರವೀಂದ್ರರವರ ತಂಡ ಬಂದು ತಪಾಸಣೆ ನಡೆಸಿ ಏನು ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ. ಇಂಜೆಕ್ಷನ್ ನೀಡಿದ ಬಳಿಕ ಸ್ವಾಮೀಜಿ ಕೂಡ ಆರಾಮಗಿದ್ದಾರೆ. ಪೂಜೆಯನ್ನು ಕೂಡ ಮಾಡಿದ್ದಾರೆ ಎಂದು ಹೇಳಿದ್ದಾರೆ.

    2018 ಜನವರಿಯಲ್ಲಿ ಶ್ರೀಗಳ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು. ಅಂದು ಅಳವಡಿಸಿದ್ದ ಸ್ಟಂಟ್ ಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಡಿಸೆಂಬರ್ 1ರಂದು ಬಿಜಿಎಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಆಸ್ಪತ್ರೆಗೆ ಆಗಮಿಸಿದ್ದ ಶ್ರೀಗಳು ವ್ಹೀಲ್ ಚೇರ್ ನಲ್ಲಿ ಕುಳಿತುಕೊಳ್ಳಲು ಒಪ್ಪದೇ ನಡೆದುಕೊಂಡು ಹೋಗುವ ಮೂಲಕ ಎಲ್ಲರನ್ನು ಅಚ್ಚರಿಸಿಗೊಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂದ್ರಜಿತ್ ಲಂಕೇಶ್ ಹುಟ್ಟುಹಬ್ಬ- ಸಿದ್ದಗಂಗಾಶ್ರೀಗಳ ಆಶೀರ್ವಾದ ಪಡೆದುಕೊಂಡ ಇಜಿಲ

    ಇಂದ್ರಜಿತ್ ಲಂಕೇಶ್ ಹುಟ್ಟುಹಬ್ಬ- ಸಿದ್ದಗಂಗಾಶ್ರೀಗಳ ಆಶೀರ್ವಾದ ಪಡೆದುಕೊಂಡ ಇಜಿಲ

    ತುಮಕೂರು: ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ತಮ್ಮ 45 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಸಿದ್ದಗಂಗಾ ಮಠಕ್ಕೆ ಭೇಟಿಕೊಟ್ಟು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

    ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಪಿ.ಲಂಕೇಶ್ ಅವರ ಕೆಲ ಪುಸ್ತಕಗಳನ್ನು ಕೊಟ್ಟು ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಅಷ್ಟೇ ಅಲ್ಲದೇ ಮಠದ ವಿದ್ಯಾರ್ಥಿಗಳಿಗೂ ಪಿ. ಲಂಕೇಶ್ ಅವರ ಸಾಹಿತ್ಯ ಕೃತಿಗಳನ್ನು ಕೊಟ್ಟು ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.

    ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ಸಹೋದರಿ ಗೌರಿಲಂಕೇಶರನ್ನು ಈ ವೇಳೆ ನೆನಪಿಸಿಕೊಂಡರು. ಅಕ್ಕ ಇಲ್ಲದೆ ಇರುವ ಎರಡನೇ ಹುಟ್ಟುಹಬ್ಬ ಇದಾಗಿದ್ದು, ಕಳೆದ ವರ್ಷ ನಾನು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿಲ್ಲ. ಗೌರಿಯನ್ನು ತುಂಬಾ ಮಿಸ್ ಮಾಡಿಕೊಳ್ಳುತಿದ್ದೇನೆ. ನಾನು ಗೌರಿಯ ಬಗ್ಗೆ ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ಗೌರಿ ಕೊಲೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮಾಡಿ ಇದೀಗ ಕೊಲೆಗಾರರನ್ನು ಬಂಧಿಸಲಾಗುತ್ತಿದೆ. ಕೋರ್ಟ್ ತೀರ್ಪು ಬಂದ ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ. ಅಲ್ಲಿವರೆಗೂ ನಾನು ಏನೂ ಹೇಳುವುದಿಲ್ಲ ಎಂದು ಇಂದ್ರಜಿತ್ ಲಂಕೇಶ್ ಅವರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv