Tag: Sri Subudhendra Teertha Swamiji

  • ರಾಜಕೀಯಕ್ಕೆ ಯಾರು ಬೇಕಾದರೂ ಬರಬಹುದು: ಮಂತ್ರಾಲಯ ಶ್ರೀಗಳು

    ರಾಜಕೀಯಕ್ಕೆ ಯಾರು ಬೇಕಾದರೂ ಬರಬಹುದು: ಮಂತ್ರಾಲಯ ಶ್ರೀಗಳು

    ರಾಯಚೂರು: ರಾಜಕೀಯಕ್ಕೆ ಇಂಥವರೆ ಬರಬೇಕು, ಬರಬಾರದರು ಅಂತೇನಿಲ್ಲ, ರಾಜಕೀಯಕ್ಕೆ ಬಂದಂತಹ ವ್ಯಕ್ತಿಗಳು ರಾಜ್ಯದ ಜನತೆ ಬಗ್ಗೆ ಕಾಳಜಿ ಉಳ್ಳವರಾಗಿರಬೇಕು ಎಂದು ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

    ಉತ್ತರ ಪ್ರದೇಶದಂತೆ ರಾಜ್ಯದಲ್ಲೂ ಬಿಜೆಪಿಯಿಂದ (BJP) ಸಂತರಿಗೆ ಸಿಎಂ ಸ್ಥಾನಮಾನದ ಆಲೋಚನೆ ವಿಚಾರಕ್ಕೆ ಮಂತ್ರಾಲಯದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮಂತ್ರಾಲಯ (Mantralayam) ಶ್ರೀಗಳು ಮುಖ್ಯವಾಗಿ ನಾನು ಮೊದಲಿನಿಂದಲೂ ಹೇಳೋದು, ಇಂಥ ವ್ಯಕ್ತಿ ಬರಬೇಕು, ಇಂಥವರೇ ಬರಬಾರದು ಎನ್ನುವುದಿಲ್ಲ. ರಾಜಕೀಯಕ್ಕೆ ಬಂದಂತ ವ್ಯಕ್ತಿಗಳು ರಾಜ್ಯದ ಜನತೆ ಬಗ್ಗೆ ಕಾಳಜಿ ಉಳ್ಳವರಾಗಿರಬೇಕು. ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುವಂತ ವ್ಯಕ್ತಿ ಆಗಬೇಕು ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಒಬ್ಬ ಸುಳ್ಳುಗಾರ, ಅವರಿಗೆ ಕಿವಿ ಕೇಳಿಸಲ್ಲ, ಕಣ್ಣು‌ ಕಾಣಲ್ಲ : ಪ್ರಭು ಚವ್ಹಾಣ್ ಟಾಂಗ್

    ಧರ್ಮದಲ್ಲಿ ರಾಜಕೀಯ ಬರಬಾರದು, ರಾಜಕೀಯದಲ್ಲಿ ಧರ್ಮ ಇರಬೇಕು. ಧರ್ಮವಿದ್ದರೆ ಅದು ಉತ್ತಮವಾದ ಗುಣಮಟ್ಟದ ಆಡಳಿತ, ವ್ಯವಸ್ಥೆಯಾಗಿ ಕಾಣುತ್ತದೆ ಅಂತ ಭಾವಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಸ್ಕೂಟರ್‌ಗೆ ಡಿಕ್ಕಿ ಹೊಡೆದು 6ರ ಬಾಲಕನನ್ನು 2 ಕಿ.ಮೀ ಎಳೆದೊಯ್ದ ಟ್ರಕ್

  • ಹತ್ಯೆಯಾದವರ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಬಾರದು: ಮಂತ್ರಾಲಯ ಶ್ರೀ

    ಹತ್ಯೆಯಾದವರ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಬಾರದು: ಮಂತ್ರಾಲಯ ಶ್ರೀ

    ರಾಯಚೂರು: ಹತ್ಯೆಯಾದವರ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರದಲ್ಲಿ ಸರ್ಕಾರ ಯಾವುದೇ ತಾರತಮ್ಯ ಮಾಡಬಾರದು. ಎಲ್ಲರೂ ಜೀವಿಗಳು, ಪ್ರಾಣ ಕಳೆದುಕೊಂಡವರೆಲ್ಲ ಸಮಾನರು. ಎಲ್ಲರಿಗೂ ಸೂಕ್ತ ರೀತಿಯ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಕೋರುತ್ತೇನೆ ಎಂದು ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಹೇಳಿದ್ದಾರೆ.

    ಮಂತ್ರಾಲಯದಲ್ಲಿ ಮಾತನಾಡಿದ ಶ್ರೀಗಳು ಮಂಗಳೂರಿನಲ್ಲಿ ಹತ್ಯೆಯಾದ ಹಿಂದೂ, ಮುಸ್ಲಿಂ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ನೀಡುವ ವಿಷಯದಲ್ಲಿ ಸರ್ಕಾರದಿಂದ ತಾರತಮ್ಯ ಆರೋಪದ ಬಗ್ಗೆ ಮಾತನಾಡಿ, ಹತ್ಯೆಯಾದ ಯಾವುದೇ ವ್ಯಕ್ತಿಗೆ ಹಣ ನೀಡುವುದು ಅಂತಿಮ ಪರ್ಯಾಯವಲ್ಲ. ಹಣಕ್ಕೆ ಮತ್ತು ಜೀವಕ್ಕೆ ತುಲನೆ ಮಾಡಲು ಬರುವುದಿಲ್ಲ. ಆದರೆ ಕುಟುಂಬದವರಿಗೆ ತೊಂದರೆಯಾಗಬಾರದು ಎಂದು ಪರಿಹಾರ ನೀಡುತ್ತಾರೆ. ಆಯಾ ರಾಜ್ಯ ಸರ್ಕಾರಗಳು ಪ್ರಾಣ ಕಳೆದುಕೊಂಡ ಎಲ್ಲರಿಗೂ ಪರಿಹಾರ ನೀಡಬೇಕು. ಪರಿಹಾರ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡಬಾರದು ಎಂದರು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ – ಡಿ.ಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

    ದೇಶ ನೆಮ್ಮದಿ, ಪ್ರಗತಿ ಹೊಂದಬೇಕು ಎಂದರೆ ಶಾಂತಿ ಸೌಹಾರ್ದತೆಯಿರಬೇಕು. ಯಾವುದೇ ಸಮುದಾಯದವರು ಇತರ ಸಮುದಾಯದ ಮೇಲೆ ಆಕ್ರಮಣ, ಬೆದರಿಕೆ, ದಬ್ಬಾಳಿಕೆ ಮಾಡಬಾರದು. ಯಾವುದೇ ಸಮುದಾಯದವರು ಮಾಡಿದರೂ ಶಾಂತಿಯುತವಾಗಿ ತೀವ್ರವಾಗಿ ವಿರೋಧಿಸುತ್ತೇವೆ. ಭದ್ರತೆ, ಶಾಂತಿ, ನೆಮ್ಮದಿ ದೇಶದ ಉದ್ದೇಶ. ಯಾವುದೇ ಸಮುದಾಯದವರ ಮೇಲೂ ದಬ್ಬಾಳಿಕೆಯಾಗಬಾರದು. ಯಾರ ಮೇಲೂ ದಬ್ಬಾಳಿಕೆಯಾಗದಂತೆ ಸರ್ಕಾರ ಗಮನಿಸಬೇಕು ಎಂದು ಮಂತ್ರಾಲಯ ಶ್ರೀಗಳು ಹೇಳಿದರು. ಇದನ್ನೂ ಓದಿ: ಆ.10 ರಿಂದ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ

    Live Tv
    [brid partner=56869869 player=32851 video=960834 autoplay=true]

  • ಆ.10 ರಿಂದ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ

    ಆ.10 ರಿಂದ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ

    ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಆಗಸ್ಟ್ 10 ರಿಂದ 16ರವರೆಗೆ ನಡೆಯಲಿದ್ದು, ಕಳೆದ ಎರಡು ವರ್ಷಕ್ಕಿಂತ ವಿಜೃಂಭಣೆಯಿಂದ ಆಚರಿಸುವುದಾಗಿ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಅವರು ಹೇಳಿದ್ದಾರೆ.

    ಮಂತ್ರಾಲಯದಲ್ಲಿ ಮಾತನಾಡಿದ ಸುಬುಧೇಂದ್ರ ತೀರ್ಥ ಶ್ರೀಗಳು, ಏಳು ದಿನ ಕಾಲ ಸಪ್ತರಾತ್ರೋತ್ಸವ ನಡೆಯಲಿದ್ದು, ಆರಾಧನಾ ಮಹೋತ್ಸವ ಹಿನ್ನೆಲೆ ಮಠದಲ್ಲಿ ಏಳು ದಿನಗಳ ಕಾಲ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮ ಜರುಗಲಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಡುಗಳ್ಳರ ಪಾಲಿಗೆ ಸಿಂಹಸ್ವಪ್ನವಾಗಿದ್ದ ಬಂಡೀಪುರದ ಹಂಟಿಂಗ್ ಸ್ಪೆಷಲಿಸ್ಟ್ ರಾಣಾ ಇನ್ನು ನೆನಪು ಮಾತ್ರ

    ಆಗಸ್ಟ್ 12 ರಂದು ಪೂರ್ವಾರಾಧನೆ ಕಾರ್ಯಕ್ರಮ ನಡೆಯಲಿದ್ದು, ಅಂದು ಸಂಜೆ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಯರ ಅನುಗ್ರಹ ಪ್ರಶಸ್ತಿ ಪ್ರಧಾನ ಹಾಗೂ ಗ್ರಂಥಗಳ ಬಿಡುಗಡೆ ನಡೆಯಲಿದೆ. ಆಗಸ್ಟ್ 13 ರಂದು ಮಧ್ಯಾರಾಧನೆ ಹಿನ್ನೆಲೆ ತಿರುಪತಿಯಿಂದ ಬರುವ ಶೇಷ ವಸ್ತ್ರವನ್ನು ರಾಯರಿಗೆ ಸಮರ್ಪಣೆ ಮಾಡಲಾಗುವುದು. ಆಗಸ್ಟ್ 14 ರಂದು ಉತ್ತರರಾಧನೆ ಹಿನ್ನೆಲೆ ಮಹಾರಥೋತ್ಸವ ನಡೆಯಲಿದೆ. ಹೆಲಿಕಾಪ್ಟರ್ ಮೂಲಕ ರಥಕ್ಕೆ ಪುಷ್ಪ ವೃಷ್ಠಿ ಮಾಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಹುಲಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಲ್ಲ – ವಿ.ಸೋಮಣ್ಣ

    ತುಂಗಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಈ ಬಾರಿ ನದಿ ಸ್ನಾನಕ್ಕೆ ಅವಕಾಶ ನೀಡಿಲ್ಲ. ಹೀಗಾಗಿ ನದಿ ತಟದಲ್ಲಿ ಸ್ನಾನ ಘಟ್ಟದ ವ್ಯವಸ್ಥೆ ಮಾಡಲಾಗಿದೆ. ಆರಾಧನಾ ಮಹೋತ್ಸವ ಹಿನ್ನೆಲೆ ವಿವಿಧ ರಾಜ್ಯಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆಯಿದ್ದು, ಮಂತ್ರಾಲಯಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ವಸತಿ, ಆರೋಗ್ಯ, ಸಾರಿಗೆ, ಕುಡಿಯುವ ನೀರು ಸೇರಿದಂತೆ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಇನ್ನೂ ಮಠಕ್ಕೆ ಕಾಣಿಕೆ, ದೇಣಿಗೆ ಸಂಗ್ರಹಿಸಲು ಯಾವುದೇ ಖಾಸಗಿ ವ್ಯಕ್ತಿಗಳನ್ನು ನೇಮಿಸಿಲ್ಲ. ಭಕ್ತರು ನೇರವಾಗಿ ಅಥವಾ ಆನ್‍ಲೈನ್ ಮೂಲಕ ಹಣ ನೀಡಿ ಅಧಿಕೃತ ರಶಿದಿ ಪಡೆಯಬೇಕು ಅಂತ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]