Tag: Sriki

  • ಬಿಟ್‌ ಕಾಯಿನ್‌ ಹಗರಣದ ಆರೋಪಿ ಶ್ರೀಕಿಗೆ ಗನ್‌ಮ್ಯಾನ್‌!

    ಬಿಟ್‌ ಕಾಯಿನ್‌ ಹಗರಣದ ಆರೋಪಿ ಶ್ರೀಕಿಗೆ ಗನ್‌ಮ್ಯಾನ್‌!

    ಬೆಂಗಳೂರು: ಕರ್ನಾಟಕದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಬಿಟ್ ಕಾಯಿನ್ ಪ್ರಕರಣದ (Bit Coin Scam) ಆರೋಪಿ ಶ್ರೀಕಿಗೆ (Sriki) ಈಗ ಗನ್ ಮ್ಯಾನ್ (Gunman) ನೀಡಲಾಗಿದೆ.

    ಬಿಟ್ ಕಾಯಿನ್ ಹಗರಣದ ತನಿಖೆ ನಡೆಸಲು ಸರ್ಕಾರ ವಿಶೇಷ ತನಿಖಾ ದಳ (SIT) ರಚನೆ ಮಾಡಿತ್ತು. ಎಸ್‌ಐಟಿ ಮುಂದೆ ಸ್ಫೋಟಕ ಮಾಹಿತಿ ನೀಡಿದ್ದ ಶ್ರೀಕಿಗೆ ಈಗ ಕೊಲೆ ಬೆದರಿಕೆ ಇದೆ. ಅಷ್ಟೇ ಅಲ್ಲದೇ ಶ್ರೀಕಿ ಪೊಲೀಸರ ಕೈಯಲ್ಲಿ ಸಿಗದೇ ತಪ್ಪಿಸಿಕೊಂಡು ಓಡಾಡುತ್ತಿರುತ್ತಾನೆ. ಹೀಗಾಗಿ ಎಸ್‌ಐಟಿ ಶ್ರೀಕಿಗೆ ಗನ್ ಮ್ಯಾನ್ ನೀಡಿದೆ.

     

    ವಿಧಾನಸಭಾ ಚುನಾವಣೆಯಲ್ಲಿ (Vidhan Sabha Election) ಬಿಟ್‌ ಕಾಯಿನ್‌ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದರಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂಬ ವದಂತಿ ದಟ್ಟವಾಗಿತ್ತು. ಈ ಹಗರಣದ ಸೂತ್ರಧಾರ ಎನ್ನಲಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು.  ಇದನ್ನೂ ಓದಿ: ಇಸ್ತಾಂಬುಲ್ ನೈಟ್‍ಕ್ಲಬ್‍ನಲ್ಲಿ ಅಗ್ನಿ ದುರಂತ – 29 ಮಂದಿ ದುರ್ಮರಣ

    ಶ್ರೀಕಿಯನ್ನು ಬಳಸಿಕೊಂಡು ರಾಜಕಾರಣಿಗಳು ಬಿಟ್‌ಕಾಯಿನ್ ಹಗರಣಗಳನ್ನು ಎಸಗಿದ ಆರೋಪವಿದೆ. ವಿವಿಧ ಸೈಬರ್ ಕ್ರೈಂಗಳಲ್ಲಿ ಭಾಗಿಯಾದ ಆರೋಪದಡಿ ಶ್ರೀಕಿ ಹಾಗೂ ನಾಲ್ವರು ಇತರರ ವಿರುದ್ಧ 2021ರ ಫೆಬ್ರವರಿ 22ರಂದು ಮೊದಲ ಆರೋಪಪಟ್ಟಿ ಸಲ್ಲಿಕೆಯಾಗಿತ್ತು. ಅಧಿಕಾರಕ್ಕೆ ಬಂದ ಕಾಂಗ್ರೆಸ್‌ (Congress) ಸರ್ಕಾರ ಈ ಪ್ರಕರಣದ ಮರು ತನಿಖೆಗೆ ಎಸ್‌ಐಟಿ ರಚನೆ ಮಾಡಿತ್ತು.

     

    ಶ್ರೀಕೃಷ್ಣ (ಶ್ರೀಕಿ) ಬೆಂಗಳೂರಿನ ನಿವಾಸಿಯಾಗಿದ್ದು, 2014 ರಿಂದ 2017ರವರೆಗೆ ಈತ ನೆದರ್‌ಲ್ಯಾಂಡ್‌ ಆಮ್‌ಸ್ಟರ್‌ಡ್ಯಾಮ್ ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿಎಸ್‍ಸಿ ಪದವಿ ಪಡೆದ ಬಳಿಕ ವೆಬ್‍ಸೈಟ್ ಹ್ಯಾಕ್ ಮಾಡಲು ಆರಂಭಿಸಿದ್ದ. ಆರಂಭದಲ್ಲಿ ಸಣ್ಣ ಪಟ್ಟ ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿ ಅನುಭವ ಪಡೆದ ಬಳಿಕ ದೊಡ್ಡ ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿ ಇದನ್ನೇ ಉದ್ಯೋಗ ಮಾಡಿಕೊಂಡಿದ್ದ. ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿದ ಬಳಿಕ ಆತ ಬಿಟ್‍ಕಾಯಿನ್ ಬಳಸಿ ಹಣವನ್ನು ಪಡೆಯುತ್ತಿದ್ದ. ಈ ಎಲ್ಲ ಕೆಲಸಕ್ಕೆ ಡಾರ್ಕ್ ವೆಬ್ ಬಳಕೆ ಮಾಡುತ್ತಿದ್ದ. ಡಾರ್ಕ್ ವೆಬ್ ಬಳಕೆ ಮಾಡುತ್ತಿದ್ದ ಕಾರಣ ಈತನ ಮಾಹಿತಿಗಳು ಸಿಗುತ್ತಿರಲಿಲ್ಲ. ಬಿಟ್ ಕಾಯಿನ್ ಮೂಲಕ ಡ್ರಗ್ಸ್ ತರಿಸಿಕೊಂಡು ಬೇಕಾದ ವ್ಯಕ್ತಿಗಳಿಗೆ ನೀಡುತ್ತಿದ್ದ ಆರೋಪವಿದೆ.

     

  • ಬರೋಬ್ಬರಿ 12 ಕಂಪನಿಗಳನ್ನು ಹ್ಯಾಕಿಂಗ್ ಮಾಡಿದ್ದ ಶ್ರೀಕಿ

    ಬರೋಬ್ಬರಿ 12 ಕಂಪನಿಗಳನ್ನು ಹ್ಯಾಕಿಂಗ್ ಮಾಡಿದ್ದ ಶ್ರೀಕಿ

    ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಎನ್ನಲಾದ ಶ್ರೀಕಿ ಬರೋಬ್ಬರಿ 12 ಕಂಪನಿಗಳನ್ನು ಹ್ಯಾಕಿಂಗ್ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ.

    ಶ್ರೀಕಿ 12 ಕಂಪನಿಗಳ ವೆಬ್‍ಸೈಟ್ ಹ್ಯಾಕ್ ಮಾಡಿದ್ದಾನೆ. ಆತನ ವಿರುದ್ಧ ಇಂಟರ್ ಪೋಲ್ ಇಂದ ಕ್ರಮಕೈಗೊಳ್ಳಿ ಎಂದು ನಗರ ಪೊಲೀಸ್ ಆಯುಕ್ತರಿಗೆ, ತನಿಖಾಧಿಕಾರಿ ಇನ್ಸ್‌ಪೆಕ್ಟರ್‌ ಚಂದ್ರಾದರ್ ಪತ್ರದ ಮೂಲಕ ಮನವಿಸಲ್ಲಿಸಿದ್ದಾರೆ. ಶ್ರೀಕಿ, ದೇಶ, ವಿದೇಶದಲ್ಲಿ ಸಾಕಷ್ಟು ಹ್ಯಾಕಿಂಗ್ ಮಾಡಿದ್ದಾನೆ. ದೇಶದಲ್ಲಿ ಮಾತ್ರವಲ್ಲದೇ ವಿದೇಶದಲ್ಲಿ ಕೂಡ ವಂಚನೆಮಾಡಿದ್ದು, ಈ ಬಗ್ಗೆ ತನಿಖಾ ವ್ಯಾಪ್ತಿ ಹೆಚ್ಚಿರೋದರಿಂದ ನಾವು ತನಿಖೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಇಂಟರ್ ಪೋಲ್‍ಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಕಿ ಜೊತೆ ಪ್ರಿಯಾಂಕ್ ಖರ್ಗೆಗೆ ಸಂಪರ್ಕ, 50 ಸಾವಿರ ಕೋಟಿ ಆಸ್ತಿ – ಕಾರ್ಣಿಕ್ ಆರೋಪ

    ಅದಲ್ಲದೆ ಬಿಟ್‍ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಎನ್ನಲಾದ ಶ್ರೀಕಿ ಜೊತೆ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆಗೆ ಸಂಪರ್ಕ ಇತ್ತು ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಆರೋಪಿಸಿದ್ದಾರೆ. ಪ್ರಿಯಾಂಕ್ ಐಟಿ ಬಿಟಿ ಮಂತ್ರಿ ಆಗಿದ್ದಾಗ ಶ್ರೀಕಿಯನ್ನು ಭೇಟಿ ಮಾಡಿ ಬಿಟ್ ಕಾಯಿನ್ ಹಗರಣದಿಂದ ಕಪ್ಪು ಹಣ ಪಡೆದಿದ್ದಾರೆ ಎಂಬ ಮಾಹಿತಿ ಇದೆ. ಪ್ರಿಯಾಂಕ್ ಖರ್ಗೆ ಬಳಿ 50 ಸಾವಿರ ಕೋಟಿ ಮೌಲ್ಯದ ಆಸ್ತಿ ಇದೆ ಎನ್ನಲಾಗಿದ್ದು, ಅವರು ತಮ್ಮ ಕಪ್ಪು ಹಣವನ್ನು ಬಿಟ್ ಕಾಯಿನ್‍ನಲ್ಲಿ ತೊಡಗಿಸಿದ್ದಾರೆ ಎಂಬ ಆರೋಪ ಇದೆ. ಇದಕ್ಕೆ ಪ್ರಿಯಾಂಕ್ ಖರ್ಗೆ ಉತ್ತರ ನೀಡಬೇಕು ಎಂದು ಗಣೇಶ್ ಕಾರ್ಣಿಕ್ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಶ್ರೀಕಿ ವ್ಯಾಲೆಟ್‌ನಿಂದ ಬಿಟ್ ಕಾಯಿನ್ ನಾಪತ್ತೆಯಾಗಿಲ್ಲ – ಬೆಂಗಳೂರು ಪೊಲೀಸರಿಂದ ಸ್ಪಷ್ಟನೆ

  • ಪೊಲೀಸರೇ ಡ್ರಗ್ಸ್ ನೀಡಿದ್ರು – ಶ್ರೀಕಿ ಆರೋಪ ಸುಳ್ಳು

    ಪೊಲೀಸರೇ ಡ್ರಗ್ಸ್ ನೀಡಿದ್ರು – ಶ್ರೀಕಿ ಆರೋಪ ಸುಳ್ಳು

    ಬೆಂಗಳೂರು: ಬಹುಕೋಟಿ ಬಿಟ್‍ಕಾಯಿನ್ ಹಗರಣ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಹ್ಯಾಕರ್ ಶ್ರೀಕಿ ಕೋರ್ಟ್‍ಗೆ ಪೊಲೀಸರ ವಿರುದ್ಧವೇ ಮಾಡಿದ್ದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎನ್ನುವುದು  ಸಾಬೀತಾಗಿದೆ.

    ನಾನು ಸಿಸಿಬಿ ಕಸ್ಟಡಿಯಲ್ಲಿ ಇದ್ದಾಗ ಪೊಲೀಸ್ ಇನ್ಸ್‌ಪೆಕ್ಟರ್‌ ಚಂದ್ರಾಧರ್ ನನಗೆ ಮಾದಕದ್ರವ್ಯ ಒದಗಿಸಿದ್ದರು ಎಂದು 20201ರ ಜನವರಿ 11ರಂದು ನ್ಯಾಯಾಧೀಶರ ಮುಂದೆ ಹ್ಯಾಕರ್ ಶ್ರೀಕಿ ಆರೋಪ ಮಾಡಿದ್ದ. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಾಧೀಶರು, ಕೂಡಲೇ ಶ್ರೀಕಿಯನ್ನು ವಿಕ್ಟೋರಿಯಾದಲ್ಲಿ ಮಾದಕದ್ರವ್ಯ ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿದ್ದರು. ಇದನ್ನೂ ಓದಿ: ಡೇವಿಡ್ ವಾರ್ನರ್ ಸಿಡಿಸಿದ ಆ ಒಂದು ಸಿಕ್ಸ್ – ಕ್ರೀಡಾಸ್ಫೂರ್ತಿಗೆ ವಿರುದ್ಧವೇ?

     

    ಈ ವೇಳೆ ವಿಕ್ಟೋರಿಯಾ ಆಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಟ್ಟಿತ್ತು. ಹೀಗಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಶ್ರೀಕಿ ಡ್ರಗ್ಸ್ ಸೇವಿಸದೇ ಇರುವುದು ದೃಢವಾಗಿತ್ತು. ಶ್ರೀಕಿ ಆರೋಪ ಸುಳ್ಳೆಂದು ಸಾಬೀತಾಗಿತ್ತು.

    ನನ್ನ ಮಗನಿಂದ ಒತ್ತಾಯಪೂರ್ವಕವಾಗಿ ಬೇರೆ ಬೇರೆ ಕೆಲಸ ಮಾಡಿಸಲು ಪೊಲೀಸರು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಶ್ರೀಕಿ ತಂದೆ ಗೋಪಾಲ್ ರಮೇಶ್ ಸಹ ಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ವೇಳೆ ಶ್ರೀಕಿ, ಜಡ್ಜ್ ಮುಂದೆ ಪೊಲೀಸರ ವಿರುದ್ಧ ಡ್ರಗ್ಸ್ ಆರೋಪ ಮಾಡಿದ್ದ. ಇದನ್ನೂ ಓದಿ: ಪುನೀತ್‍ರಿಂದ ಪ್ರೇರಣೆ ಪಡೆದು ದೇಹದಾನಕ್ಕೆ ಮುಂದಾದ ಕಾಫಿನಾಡ ದಂಪತಿ

    ಈ ಕುರಿತಂತೆ ವಿವರ ನೀಡಿದ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ, ವಿಕ್ಟೋರಿಯಾದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಎಂದು ಕೋರ್ಟ್ ತಿಳಿಸಿದ್ರೆ, ಇವರು ಕೋವಿಡ್ ನೆಪ ಹೇಳಿ ಬಿಎಂಸಿಯಲ್ಲಿ ಶ್ರೀಕಿಯ ಹೊಟ್ಟೆ ತೊಳಿಸಿದ್ದಾರೆ ಎಂದು ಪೊಲೀಸರ ವಿರುದ್ಧ ಆಪಾದನೆ ಮಾಡಿದ್ದಾರೆ.

    ಶ್ರೀಕಿ ತಂದೆ, ನನ್ನ ಮಗನಿಗೆ ನಿಮ್ಹಾನ್ಸ್‌ನಲ್ಲಿ ಡ್ರಗ್ಸ್ ಪರೀಕ್ಷೆ ಮಾಡಿಸಿ ಎಂದು ಮತ್ತೆ ಕೋರ್ಟ್ ಮೊರೆ ಹೋಗಿದ್ದಾರೆ. ಫೆಬ್ರವರಿ 15ರಂದೇ ಸಿಸಿಬಿಗೆ ಪತ್ರ ಬರೆದಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿದ್ದಾಗ ಶ್ರೀಕಿಗೆ ಮಾದಕದ್ರವ್ಯ ಕೊಟ್ಟಿದ್ಯಾರು? ಯಾಕೆ ಕೊಡುತ್ತಿದ್ದರು? ತನಿಖೆ ಏಕೆ ಆಗಿಲ್ಲ ಎಂದು ಕಾಂಗ್ರೆಸ್ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.

     

  • ಶ್ರೀಕಿಗೂ, ನನ್ನ ಮಗನಿಗೂ ಯಾವುದೇ ರೀತಿಯ ಸಂಬಂಧವಿಲ್ಲ: ರುದ್ರಪ್ಪ ಲಮಾಣಿ

    ಶ್ರೀಕಿಗೂ, ನನ್ನ ಮಗನಿಗೂ ಯಾವುದೇ ರೀತಿಯ ಸಂಬಂಧವಿಲ್ಲ: ರುದ್ರಪ್ಪ ಲಮಾಣಿ

    – ಕಾನೂನು ಯಾವುದೇ ರೀತಿಯ ಕ್ರಮ ತೆಗೆದುಕೊಂಡರು ಸರಿ

    ಬೆಂಗಳೂರು: ಹ್ಯಾಕರ್ ಶ್ರೀಕಿಗೂ ನನ್ನ ಮಗ ದರ್ಶನ್ ಕುಮಾರನಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಕಾಂಗ್ರೆಸ್ ಶಾಸಕ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಹಿಂದೆ ನನ್ನ ಮಗನ ಮೇಲೆ ಕೇಸ್ ಆಗಿತ್ತು. ಆಗ ನನ್ನ ಮಗನ ಜೊತೆ ಆ ಹುಡುಗನೂ(ಶ್ರೀಕಿ) ಸಹ ಅರೆಸ್ಟ್ ಆಗಿದ್ದ. ಅದರಿಂದ ಅವನು ಈ ರೀತಿ ಹೇಳಿರಬಹುದು. ಅದು ಬಿಟ್ಟು ನಮಗೂ ಅವನಿಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಈಗ ನನ್ನ ಮಗ ಆ ರೀತಿಯ ಕೆಲಸಗಳನ್ನು ಮಾಡುತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ:  ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – ಹ್ಯಾರಿಸ್, ಲಮಾಣಿ ಪುತ್ರರ ಹೆಸರು ಹೇಳಿರೋ ಹ್ಯಾಕರ್ ಶ್ರೀಕಿ

    ಆ ಬಗ್ಗೆ ನಮಗೆ ಯಾವ ವಿಚಾರವೂ ತಿಳಿದಿಲ್ಲ. ತನಿಖೆ ಮಾಡಲಿ ನಂತರ ಏನು ಎಂದು ಅವರಿಗೂ ತಿಳಿಯುತ್ತೆ. ಒಂದು ವೇಳೆ ತನಿಖೆಯಲ್ಲಿ ತಿಳಿದರೆ ನೋಡಣ ಎಂದು ಉತ್ತರಿಸಿದರು. ಶ್ರೀಕಿ ನಿಮ್ಮ ಮಗನನ್ನು ಸ್ನೇಹಿತ ಎಂದು ಹೇಳಿರುವ ವಿಚಾರವಾಗಿ ಮಾತನಾಡಿದ ಅವರು, ಆ ರೀತಿ ಹೇಳಲು ಸಾಧ್ಯವಿಲ್ಲ. ಏಕೆಂದರೆ ಆ ಕೇಸ್ ಮುಗಿದ ಮೇಲೆ ಅವನ ಜೊತೆ ನನ್ನ ಮಗನ ಸಂಬಂಧವಿರಲಿಲ್ಲ ಎಂದು ತಿಳಿಸಿದರು.

    ಶ್ರೀಕಿ ಜೊತೆ ಅರೆಸ್ಟ್ ಆಗಿ ಈತನ ಜೊತೆ ಇದ್ದ ಎಂಬುದನ್ನು ಬಿಟ್ಟರೇ ಇವನಿಗೂ ನನ್ನ ಮಗನಿಗೂ ಯಾವುದೇ ಸಂಬಂಧವಿಲ್ಲ. ಪೊಲೀಸರು ಕೇಸ್ ಫೈಲ್ ಮಾಡಿರುವುದರಲ್ಲಿ ಅವರ ಹೆಸರು ಬಂದಿದೆ ಎಂಬುದು ಬಿಟ್ಟರೇ ಬೇರೆ ಏನೂ ಇಲ್ಲ. ಏನಾದರೂ ಇದ್ದರೆ ತನಿಖೆ ಮಾಡಲಿ. ಅದರಲ್ಲಿ ನಮಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದರು.

    ಈ ವಿಚಾರವಾಗಿ ನಿಮ್ಮ ಮಗನನ್ನು ವಿಚಾರಿಸಿದ್ದೀರಾ ಎಂಬ ಪ್ರೇಶ್ನೆಗೆ ಉತ್ತರಿಸಿದ ಅವರು, ಅಲ್ಲ. ಏಕೆಂದರೆ ಅವನಿಗೂ ಇವನಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂಬುದು ನನಗೆ ಗೊತ್ತಿತ್ತು. ಅವನು ಇವನನ್ನು ನೋಡು ಇಲ್ಲ. ಶ್ರೀಕಿ ಯಾವ ಉದ್ದೇಶದಿಂದ ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ನನ್ನ ಮಗ ಶ್ರೀಕಿಯ ಸ್ನೇಹಿತನಲ್ಲ ಎಂಬುದು ಮಾತ್ರ ನಿಜ ಎಂದು ಸ್ಪಷ್ಟಪಡಿಸಿದರು.

    ಇಬ್ಬರು ಒಂದೇ ಕೇಸ್ ನಲ್ಲಿ ಇದ್ದಿದ್ದು, ನಿಜ. ಅದು ಬಿಟ್ಟರೇ ಇವರಿಬ್ಬರಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ಆ ಕೇಸ್ ಬಿಟ್ಟ ಮೇಲೆ ಇವರಿಬ್ಬರಿಗೂ ಯಾವುದೇ ಸಂಪರ್ಕವಿಲ್ಲ. ಪ್ರಸ್ತುತ ನಮ್ಮ ಮಗ ನಮ್ಮ ಜೊತೆಯಲ್ಲಿಯೇ ಇದ್ದಾನೆ. ಬೇರೆ ಕೆಲಸ ಮಾಡಿಕೊಂಡು ಇದ್ದಾನೆ. ಅದು ಬಿಟ್ಟು ಬೇರೆ ಏನು ಇಲ್ಲ ಎಂದರು.

    ಕ್ರಮ ತೆಗೆದುಕೊಳ್ಳಲಿ!

    ಯಾರು ಬೇಕಾದರೂ ತನಿಖೆ ಮಾಡಲಿ. ಯಾವುದೇ ರೀತಿಯಲ್ಲಿ ತನಿಖೆ ಮಾಡಿದರು ನಾವು ಒಪ್ಪಿಕೊಳ್ಳುತ್ತೇವೆ. ಕಾನೂನಿಗೆ ಎಲ್ಲರೂ ಸರಿಸಮಾನರು. ಒಂದು ವೇಳೆ ನಮ್ಮ ಮಗ ಏನಾದರೂ ಈ ಕೇಸ್‍ನಲ್ಲಿ ಇದ್ದರೆ, ಕಾನೂನು ಯಾವ ರೀತಿ ಬೇಕಾದರೂ ಕ್ರಮ ತೆಗೆದುಕೊಳ್ಳಲಿ ನಾವು ಅದಕ್ಕೆ ತಲೆ ಬಾಗುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಯಾವುದೇ ಕಾಯಿನ್ ವಿಚಾರಕ್ಕೂ, ನನ್ನ ಮಗನಿಗೂ ಸಂಬಂಧ ಇಲ್ಲ: ಎನ್.ಎ.ಹ್ಯಾರಿಸ್

    ಸಿಸಿಬಿ ಈ ಕುರಿತು ಕರೆ ಮಾಡಿದ್ರ ಎಂಬುದಕ್ಕೆ ಉತ್ತರಿಸಿದ ಅವರು, ಇಲ್ಲ ಇನ್ನೂ ಅವರು ಯಾವುದೇ ರೀತಿ ಕರೆ ಮಾಡಿಲ್ಲ. ನಮ್ಮ ಮಗನನ್ನು ಅವರು ವಿಚಾರಣೆಗೆ ಕರೆದಿಲ್ಲ. ಈ ವಿಚಾರ ನಮಗೆ ತಿಳಿದಿದ್ದೆ ಮಾಧ್ಯಮಗಳನ್ನು ನೋಡಿದ ಮೇಲೆ. ಅಲ್ಲಿಯವರೆಗೂ ಈ ವಿಚಾರ ನಮಗೆ ತಿಳಿದಿರಲಿಲ್ಲ. ಈ ಕುರಿತು ನನಗೆ ಯಾವುದೇ ರೀತಿಯ ಮಾಹಿತಿ ತಿಳಿದಿಲ್ಲ ಎಂದು ಹೇಳಿದರು.